ಬೆಂಗಳೂರು : ಕೇಂದ್ರ ಸಚಿವ ಎಚ್ ಕುಮಾರಸ್ವಾಮಿ (HD Kumaraswamy) ವಿರುದ್ಧದ ಅಕ್ರಮ ಗಣಿಗಾರಿಕೆಗೆ ಅನುಮತಿ ಪ್ರಕರಣವೊಂದರ ತನಿಖೆಯ ಚಾರ್ಜ್‌ಶೀಟ್ ಸಲ್ಲಿಸಲು ಅನುಮತಿ ಕೋರಿ ಮತ್ತೆ ಎಸ್ಐಟಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ಶ್ರೀಸಾಯಿ ವೆಂಕಟೇಶ್ವರ ಕಂಪನಿಗೆ ಗಣಿಗಾರಿಕೆ ಗುತ್ತಿಗೆ ಮಂಜೂರಿನಲ್ಲಿ ಅಕ್ರಮ ಆರೋಪವನ್ನು ಕುಮಾರಸ್ವಾಮಿ ಎದುರಿಸುತ್ತಿದ್ದಾರೆ.
ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಈ ಹಿಂದೆ ರಾಜ್ಯಪಾಲರಿಗೆ ಎಸ್‌ಐಟಿ ಮನವಿ ಮಾಡಿತ್ತು. ಆದರೆ, ರಾಜ್ಯಪಾಲರ ಕಚೇರಿಯಿಂದ ಹೆಚ್ಚಿನ ಮಾಹಿತಿ ಬೇಕು ಎಂದು ಕೋರಲಾಗಿತ್ತು. ಹೀಗಾಗಿ ಮನವಿಯನ್ನು ಮತ್ತಷ್ಟು ಪರಿಷ್ಕರಿಸಿ ಎರಡನೇ ಬಾರಿಗೆ ಕಳುಹಿಸಲಾಗಿದೆ. ಆಗಸ್ಟ್ 19ರಂದು ಅಧಿಕಾರಿಗಳು ಎರಡನೇ ಬಾರಿಗೆ ಮನವಿಯನ್ನು ರಾಜ್ಯಪಾಲರ ಕಚೇರಿಗೆ ಕಳುಹಿಸಿದೆ.
2023ರ ನವೆಂಬರ್ 21ರಂದು ಚಾರ್ಜ್‌ಶೀಟ್ ಸಲ್ಲಿಸಲು ಎಸ್ಐಟಿ ಅನುಮತಿ ಕೋರಿತ್ತು. ಅಂತೆಯೇ ಜುಲೈ 29 ರಂದು ರಾಜ್ಯಪಾಲರು ಮರು ಪತ್ರ ಬರೆದಿದ್ದರು. ಅದರು ಆಗಸ್ಟ್ 8ರಂದು ಎಸ್ಐಟಿ ಕೈಸೇರಿತ್ತು. ಅದರಲ್ಲಿ ಹೆಚ್ಚುವರಿ ಮಾಹಿತಿ ನೀಡುವಂತೆ ಕೋರಲಾಗಿತ್ತು.ಈ ಸಂಬಂಧ ಸ್ಪಷ್ಟನೆ ಸಮೇತ ಎರಡನೇ ಬಾರಿ ಪತ್ರ ಬರೆಯಲಾಗಿದೆ. ಎಸ್ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ಅವರು ಮನವಿ ಸಲ್ಲಿದ್ದು, ಪ್ರಕರಣದ ತನಿಖೆ ಮುಕ್ತಾಯವಾಗಿದೆ ಎಂದು ಕೋರಿದ್ದಾರೆ.
ಏನಿದು ಪ್ರಕರಣ
2007ರಲ್ಲಿ ಎಚ್‌ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ನಿಯಮಗಳನ್ನು ಉಲ್ಲಂಘಿಸಿ ಶ್ರೀಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ ಗುತ್ತಿ ನೀಡಿರುವ ಆರೋಪ ಬಂದಿತ್ತು. ಈ ಬಗ್ಗೆ 2015ರಲ್ಲಿ ಎಸ್‌ಐಟಿ ವಿಚಾರಣೆ ನಡೆಸಿತ್ತು. ಕುಮಾರಸ್ವಾಮಿ ಅವರು ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು.
ಇದನ್ನೂ ಓದಿ: Assault Case : ಬೆಂಗಳೂರಿನಲ್ಲಿ ನಿಲ್ಲದ ರೋಡ್ ರೇಜ್ ಕಿರಿಕ್; ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಪುಂಡಾಟ
ತನಿಖಾ ತಂಡದ ಅವಧಿಯನ್ನು ವಿಸ್ತರಿಸಿ ಕಳೆದ ವರ್ಷ ನವೆಂಬರ್‌ನಲ್ಲಿ ರಾಜ್ಯ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಅಕ್ರಮ ಗಣಿಗಾರಿಕೆ ತನಿಖೆಗಾಗಿ ಲೋಕಾಯುಕ್ತದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಅದು ನಿಷ್ಕ್ರಿಯಗೊಂಡಿದೆ ಎಂಬದು ಮತ್ತೆ ಅವಧಿ ವಿಸ್ತರಣೆ ಮಾಡಲಾಗಿದೆ.