Site icon Vistara News

Dengue Fever : ಡೆಂಗ್ಯೂ ಜ್ವರಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ಬಲಿ

Dengue Fever

ಶಿವಮೊಗ್ಗ : ಡೆಂಗ್ಯೂ ಜ್ವರದಿಂದ (Dengue Fever) ಬಳಲುತ್ತಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸಾಗರ ತಾಲ್ಲೂಕು ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಿಬ್ಬಂದಿ ನಾಗರಾಜ್ (35) ಮೃತಪಟ್ಟವರು. ಈ ಮೂಲಕ ತಾಲೂಕಿನಲ್ಲಿ ಹೊಸ ಡೆಂಗ್ಯೂ ಜ್ವರಗಳ ಪ್ರಕರಣಕ್ಕೆ ಒಂದು ಬಲಿಯಾಗಿದೆ.

ನಾಗರಾಜ್ ಅವರು ಕೆಲವು ದಿನಗಳಿಂದ ಡೆಂಗ್ಯೂನಿಂದ ಬಳಲುತ್ತಿದ್ದರು. ಅವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ನಾಗರಾಜ್ ಅವರು ಸಕ್ಕರೆ ಕಾಯಿಲೆ ಸಮಸ್ಯೆಯೂ ಇತ್ತು. ಜತೆಗೆ ಅವರ ರಕ್ತದಲ್ಲಿನ ಪ್ಲೇಟ್​ಲೆಟ್​ ಸಂಖ್ಯೆ 26,000ಕ್ಕೂ ಕಡಿಮೆಯಾಗಿತ್ತು. ನಾಗರಾಜ್​ ಅವರು ಮೃತಪಟ್ಟ ಸುದ್ದಿಯನ್ನು ಸಾಗರ ತಾಲ್ಲೂಕು ವೈದ್ಯಾಧಿಕಾರಿ ಡಾ.ಪರಪ್ಪ ಅವರು ದೃಢಪಡಿಸಿದ್ದಾರೆ.

ಕಲುಷಿತ ನೀರು ಕುಡಿದು ಒಂದೇ ಗ್ರಾಮದ ನಾಲ್ವರ ಸಾವು, ಇಬ್ಬರ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ : ಕಲುಷಿತ ನೀರು (Polluted Water ) ಸೇವಿಸಿದ್ದರಿಂದ ಉಂಟಾದ ಅಸ್ವಸ್ಥೆಯಿಂದ ಒಂದೇ ಗ್ರಾಮದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಇಲ್ಲಿನ ವೀರಪ್ಪಲ್ಲಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆ ಪ್ರಕರಣದಿಂದ ಈ ನಾಲ್ವರು ಮೃತಪಟ್ಟಿದ್ದಾರೆ. ಅದೇ ರೀತಿ ವೀರಾಪುರ ಗ್ರಾಮದಲ್ಲಿಯೂ ‌ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಗ್ರಾಮದಲ್ಲಿ ಗಂಗಮ್ಮ (70) ಮುನಿನಾರಾಯಣಮ್ಮ (74), ಲಕ್ಷ್ಮಮ್ಮ (70). ನರಸಿಂಹಪ್ಪ (75) ಎಂಬುವರು ಮೃತಪಟ್ಟಿದ್ದರು.

ಇದನ್ನೂ ಓದಿ: Prajwal Revanna Case : ಭವಾನಿ ರೇವಣ್ಣ ಕಾರಿನ ಚಾಲಕ ಅಜಿತ್ ಸಂಬಂಧಿಕನಿಗೆ ಮನೆಗೆ ನುಗ್ಗಿ ಹಲ್ಲೆ

ಕಲುಷಿತ ನೀರು ಸೇವನೆಯಿಂದ ಅಸ್ವಸ್ಥಗೊಂಡಿರುವ ವರಲಕ್ಷ್ಮೀ ಎಂಬುವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೇ ರಿತಿ ವಾಂತಿ, ಭೇದಿಯಿಂದ ಇಬ್ಬರು ಗ್ರಾಮಸ್ಥರು. ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವರಲಕ್ಷ್ಮಿ ಲಕ್ಷ್ಮೀದೇವಮ್ಮ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಗ್ರಾಮ ಪಂಚಾಯ್ತಿ ವತಿಯಿಂದ ಪೂರೈಸಿದ್ದ ನೀರು ಕಲುಷಿತ ಗೊಂಡಿದ್ದ ಕಾರಣ ಆರೋಗ್ಯ ಸಮಸ್ಯೆ ಉಂಟಾಗಿದೆ. ನೀರು ಸರಬರಾಜು ಮಾಡಿರುವ ಕೋಟಗಲ್ ಗ್ರಾಮಪಂಚಾಯಿತಿ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದೇ ವಾರದಲ್ಲಿ ಗ್ರಾಮದಲ್ಲಿ ನಾಲ್ಕು ಸರಣಿ ಸಾವಾದರೂ ಎಚ್ಚೆತ್ತುಕೊಳ್ಳದ ಪಿಡಿಒ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮದಲ್ಲಿ ಚರಂಡಿಗಳು ಕಟ್ಟಿಕೊಂಡು ವಾಸನೆ ಬರುತ್ತಿವೆ. ಅದನ್ನೆಲ್ಲ ರಿಪೇರಿ ಮಾಡದ ಕಾರಣ ಕುಡಿಯುವ ನೀರಿನೊಂದಿಗೆ ಮಿಶ್ರಣಗೊಳ್ಳುತ್ತಿದೆ. ಅದರಿಂದಾಗಿಯೇ ಸಮಸ್ಯೆ ಎದುರಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ

Exit mobile version