ಬೆಂಗಳೂರು: ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ (Hemant Nimbalkar) ಅವರನ್ನು ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಮರು ನಿಯೋಜನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಅವರು ಕಳೆದ ಮೂರು ತಿಂಗಳಿಂದ ಯಾವುದೇ ಹುದ್ದೆಯನ್ನು ಹೊಂದಿರಲಿಲ್ಲ. ಅವರ ಪತ್ನಿ ಅಂಜಲಿನಿಂಬಾಳ್ಕರ್ ಚುನಾವಣೆಗೆ ಸ್ಪರ್ಧಿಸಿದ್ದ ಕಾರಣ ಈ ನಿಯೋಜನೆ ಮಾಡಲಾಗಿತ್ತು. ಇದೀಗ ಅವರಿಗೆ ಸ್ಥಾನ ನೀಡಲಾಗಿದೆ.
ಸರ್ಕಾರದ ಆದೇಶದ ಪ್ರತಿ ಇಲ್ಲಿದೆ
ಹೇಮಂತ್ ಅವರು ಅಧಿಕಾರ ವಹಿಸಿಕೊಳ್ಳಲಿರುವ ಕಾರಣ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಶಾಖೆ ವಿಶೇಷ ಆಯುಕ್ತರನ್ನಾಗಿ ಮುಂದುವರಿಸಲಾಗಿದೆ.
ಇದನ್ನೂ ಓದಿ: Advocate G Devarajegowda: ಅತ್ಯಾಚಾರ ಕೇಸ್; ಜೈಲಿನಿಂದ ವಕೀಲ ದೇವರಾಜೇಗೌಡ ರಿಲೀಸ್
ಹೇಮಂತ್ ನಿಂಬಾಳ್ಕರ್ ಕಳೆದ ಒಂದು ವರ್ಷದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದ ಅವರನ್ನು ಪತ್ನಿ ಡಾ. ಅಂಜಲಿ ನಿಂಬಾಳ್ಕರ್ ಅವರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರಿಂದ ವರ್ಗ ಮಾಡಲಾಗಿತ್ತು. ಅವರಿಗೆ ಯಾವುದೇ ಹುದ್ದೆ ಸೂಚಿಸಿರದ ಕಾರಣ ಮೂರು ತಿಂಗಳಿನಿಂದ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿಯೇ ಇದ್ದರು. ಹೇಮಂತ್ ನಿಂಬಾಳ್ಕರ್ ಅವರು ಕಳೆದ ಜನವರಿಯಲ್ಲಿ ಬಡ್ತಿ ಹೊಂದಿದ್ದರು. ಅವರಿಗೆ ಐಜಿಪಿ ದರ್ಜೆಯಿಂದ ಎಡಿಜಿಪಿ ದರ್ಜೆಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶಿತ್ತು.
ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿದ್ದ ವಿಕಾಸ್ ಸುರಳ್ಕರ್ಗೆ ಅವರನ್ನು ಆ ಹುದ್ದೆಯಲ್ಲಿ ಮುಂದುವರಿಸಲಾಗಿದೆ.