Site icon Vistara News

VISTARA TOP 10 NEWS : ಸದನದಲ್ಲಿ ರಾಮನಗರ ಗದ್ದಲ, ಕಾಂಗ್ರೆಸ್‌ನ ಪುಟ್ಟಣ್ಣಗೆ ಗೆಲುವು ಇತ್ಯಾದಿ ಪ್ರಮುಖ ಸುದ್ದಿಗಳು

Kannada Top10 news

1. ಸದನದಲ್ಲಿ ರಾಮನಗರ ಗದ್ದಲ; ಪಿಎಸ್‌ಐ ಸಸ್ಪೆಂಡ್‌ಗೆ ಬಿಜೆಪಿ – ಜೆಡಿಎಸ್‌ ಪಟ್ಟು!
ಬೆಂಗಳೂರು: ವಿಧಾನ ಮಂಡಲ ಅಧಿವೇಶನದ (Karnataka Budget Session 2024) ಶೂನ್ಯ ವೇಳೆಯಲ್ಲಿ ರಾಮನಗರ ವಿಚಾರ ಪ್ರಸ್ತಾಪವಾಗಿದೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್ (R Ashok) ಅವರು ಈ ವಿಷಯವನ್ನು ಪ್ರಸ್ತಾಪ ಮಾಡಿ, ರಾಮನಗರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಸೂಕ್ಷ್ಮ ಪ್ರದೇಶವಾಗಿದೆ. ಈ ವಿಚಾರವಾಗಿ ಚಾಂದ್‌ ಪಾಶ ಎಂಬ ವ್ಯಕ್ತಿ ಸೋಷಿಯಲ್‌ ಮೀಡಿಯಾದಲ್ಲಿ ಜಡ್ಜ್‌ ಬಗ್ಗೆಯೇ ಅವಹೇಳನಕಾರಿಯಾಗಿ ಬರೆದಿದ್ದರಿಂದ ದೂರು ಕೊಡಲಾಗಿತ್ತು. ಆದರೆ, ಲಾಯರ್‌ಗಳ ಚೇಂಬರ್‌ಗೆ ಕೆಲವರು ನುಗ್ಗಿ ಗಲಾಟೆ ಮಾಡಿದ್ದಾರೆ. ಈ ಬಗ್ಗೆ ದೂರು ದಾಖಲು ಮಾಡದ ಪೊಲೀಸರು, ವಕೀಲರ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿದ್ದಾರೆ. ಹೀಗಾಗಿ ಸರಿಯಾಗಿ ಕಾರ್ಯನಿರ್ವಹಣೆ ಮಾಡದ ಪಿಎಸ್‌ಐಯನ್ನು ವಜಾ ಮಾಡಿ ಎಂದು ಆಗ್ರಹಿಸಿದರು. ಇದಕ್ಕೆ ಗೃಹ ಸಚಿವರಿಂದ ಸಮರ್ಪಕ ಉತ್ತರ ಸಿಕ್ಕಿಲ್ಲ ಎಂದು ಆಕ್ರೋಶಗೊಂಡು ಸದನದ ಬಾವಿಗಿಳಿದು ಪ್ರತಿಭಟನೆಯನ್ನು ನಡೆಸಲಾಗಿದೆ. ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.

2. ನಮ್ಮ ಪಾಲು ಕೇಳೋದು ತಪ್ಪಾ, ಮೋದಿ ಸಿಎಂ ಆಗಿದ್ದಾಗ ಕೇಳಿಲ್ವಾ?; ಸಿದ್ದರಾಮಯ್ಯ
ಬೆಂಗಳೂರು: ನಮ್ಮ ರಾಜ್ಯಕ್ಕೆ ಬರಬೇಕಾಗಿರುವ ಪಾಲನ್ನು ಕೇಳುವುದು ತಪ್ಪಾ? (Is Asking for Share is wrong?) ನರೇಂದ್ರ ಮೋದಿ (PM Narendra Modi) ಅವರು ಮುಖ್ಯಮಂತ್ರಿಯಾಗಿದ್ದಾಗ ಶೇ. 50ರಷ್ಟು ತೆರಿಗೆ ಪಾಲು ರಾಜ್ಯಕ್ಕೆ ವಾಪಾಸ್ ಕೊಡಿ ಎಂದು ಕೇಂದ್ರವನ್ನು ಕೇಳಿರಲಿಲ್ಲವೇ? ಈ ನಾವು ಕೇಳಿದರೆ ತಪ್ಪು ಹೇಗಾಗುತ್ತದೆ? – ಹೀಗೊಂದು ನೇರ ಪ್ರಶ್ನೆ ಕೇಳಿದ್ದಾರೆ ಸಿಎಂ ಸಿದ್ದರಾಮಯ್ಯ (CM Siddaramaiah). ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ: ಕೇಂದ್ರದಿಂದ ಅನ್ಯಾಯ ಆಗಿದೆಯೇ? ಬಹಿರಂಗ ಚರ್ಚೆಗೆ ಬನ್ನಿ: ಸಿಎಂಗೆ ಎಚ್‌ಡಿಕೆ ಸವಾಲು

3. ಬೆಂಗಳೂರು ಶಿಕ್ಷಕರ ಕ್ಷೇತ್ರ; ಕಾಂಗ್ರೆಸ್‌ನ ಪುಟ್ಟಣ್ಣ ಗೆಲುವು; ಮೈತ್ರಿ ಅಭ್ಯರ್ಥಿಗೆ ಸೋಲು
ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲಿ ರಾಜ್ಯದಲ್ಲಿ ನಡೆದಿರುವ ವಿಧಾನ ಪರಿಷತ್‍ನ (MLC Election) ಬೆಂಗಳೂರು ಶಿಕ್ಷಕರ ಕ್ಷೇತ್ರದ (Bangalore Teachers Constituency) ಉಪ ಚುನಾವಣೆಯ ಫಲಿತಾಂಶ (By election results) ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ (Congress candidate Puttanna) ಜಯಶಾಲಿಯಾಗಿದ್ದಾರೆ. ಈ ಮೂಲಕ ಬಿಜೆಪಿ – ಜೆಡಿಎಸ್ ಮೈತ್ರಿ (BJP JDS Alliance) ಅಭ್ಯರ್ಥಿಗೆ ಸೋಲಾಗಿದೆ. 1507 ಅಂತರದಲ್ಲಿ ಪುಟ್ಟಣ್ಣ ಗೆಲುವು ಕಂಡಿದ್ದಾರೆ. ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.

4. ಕೇರಳದಲ್ಲಿ ಆನೆ ದಾಳಿಗೆ ಬಲಿಯಾದ ವ್ಯಕ್ತಿಗೆ ಕರ್ನಾಟಕದಿಂದ 15 ಲಕ್ಷ ರೂ. ಪರಿಹಾರ!
ಬೆಂಗಳೂರು: ರಾಜ್ಯದಲ್ಲಿ ಹಲವಾರು ಕಡೆ ಆನೆ ದಾಳಿಗೆ ನಿತ್ಯ ಎಂಬಂತೆ ಸಾವುಗಳು ಸಂಭವಿಸುತ್ತಿವೆ. ರಾಜ್ಯ ಸರ್ಕಾರ ಇದರ ಬಗ್ಗೆ ಸರಿಯಾದ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂಬ ಆಕ್ರೋಶ ಎಲ್ಲೆಡೆ ಇದೆ. ಇದರ ನಡುವೆ ರಾಜ್ಯ ಸರ್ಕಾರ ಕೇರಳದಲ್ಲಿ ಕಾಡಾನೆ ದಾಳಿಗೆ (Elephant Attack) ಒಳಗಾದ ವ್ಯಕ್ತಿಯ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ (15 Lakh rupees Compensation) ನೀಡಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ ನಾಯಕ (Congress Politics) ರಾಹುಲ್‌ ಗಾಂಧಿ (Congress leader Rahul Gandhi) ಅವರು ಪ್ರತಿನಿಧಿಸುತ್ತಿರುವ ವಯನಾಡ್‌ ಕ್ಷೇತ್ರದಲ್ಲಿ ನಡೆದ ದುರಂತಕ್ಕೆ ರಾಜ್ಯ ಸರ್ಕಾರ ಮಿಡಿದಿರುವುದನ್ನು ಬಿಜೆಪಿ ತೀವ್ರವಾಗಿ ಆಕ್ಷೇಪಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra), ಹಿರಿಯ ನಾಯಕ ಸಿ.ಟಿ. ರವಿ ಸೇರಿದಂತೆ ಹಿರಿಯ ನಾಯಕರು ಇದನ್ನು ಪ್ರಶ್ನೆ ಮಾಡಿದ್ದಾರೆ. ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ: ಕೇರಳದ ವ್ಯಕ್ತಿಗೆ ಪರಿಹಾರ ಕೊಟ್ಟಿದ್ದು ಯಾಕೆಂದರೆ, ಕೊಂದಿದ್ದು ಕರ್ನಾಟಕದ ಆನೆ!

5. ಆಪ್ ಅಭ್ಯರ್ಥಿ ಚಂಡೀಗಢ ಮೇಯರ್! ಘೋಷಣೆ ಮಾಡಿದ ಸುಪ್ರೀಂ ಕೋರ್ಟ್
ನವದೆಹಲಿ: ಚಂಡೀಗಢ ಮೇಯರ್ ಚುನಾವಣೆಯಲ್ಲಿ (Chandigarh Mayor Election) ಆಪ್ ಅಭ್ಯರ್ಥಿ ಅಧಿಕೃತವಾಗಿ ಗೆದ್ದ ಅಭ್ಯರ್ಥಿ (AAP Candidate Winner) ಎಂದು ಸುಪ್ರೀಂ ಕೋರ್ಟ್ (Supreme Court) ಘೋಷಿಸಿದೆ. ಈ ಮೂಲಕ ಭಾರತೀಯ ಜನತಾ ಪಾರ್ಟಿ (BJP Party) ಭಾರೀ ಮುಖಭಂಗ ಎದುರಿಸಿದೆ. ಕಳೆದ ತಿಂಗಳು ನಡೆದ ಮೇಯರ್ ಚುನಾವಣೆಯಲ್ಲಿ ಚುನಾವಣಾಧಿಕಾರಿಯಾಗಿದ್ದ ಬಿಜೆಪಿಯ ಪದಾಧಿಕಾರಿ ಅನಿಲ್ ಮಸಿಹ್ (Anil Maish) ಅವರು, ಆಪ್ ಅಭ್ಯರ್ಥಿ ಪರವಾಗಿ ಚಲಾವಣೆಯಾಗಿದ್ದ 8 ಮತಗಳನ್ನು ವಿರೂಪಗೊಳಿಸಿ, ಅಸಿಂಧು ಘೋಷಿಸಿದ್ದರು. ಪರಿಣಾಮ ಬಿಜೆಪಿ ಅಭ್ಯರ್ಥಿ ಗೆಲವು ಸಾಧಿಸಿದ್ದರು. ಈ ಚುನಾವಣಾ ಫಲಿತಾಂಶವನ್ನು ಪ್ರಶ್ನಿಸಿ ಆಪ್ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಈ ಮಧ್ಯೆ, ಚುನಾವಣಾಧಿಕಾರಿಯಾಗಿ ಅನಿಲ್ ಮಸಿಹ್ ನ್ಯಾಯಾಂಗ ನಿಂದನೆಯ ಪ್ರಕರಣ ಎದುರಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಶೋಕಾಸ್ ನೋಟಿಸ್ ಕೂಡ ಜಾರಿ ಮಾಡಲಾಗಿದೆ. ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.

6. ಕಣದಿಂದ ಹಿಂದೆ ಸರಿಯದ ಕುಪೇಂದ್ರ ರೆಡ್ಡಿ, 4 ಸ್ಥಾನಕ್ಕೆ ಐವರ ಫೈಟ್‌, ಗೆಲ್ಲೋರು ಯಾರು?
ಬೆಂಗಳೂರು: ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಉದ್ಯಮಿ ಕುಪೇಂದ್ರ ರೆಡ್ಡಿ (Kupendra Reddy) ಅವರು ನಾಮಪತ್ರ ಹಿಂದೆಗೆದುಕೊಳ್ಳದ ಹಿನ್ನೆಲೆಯಲ್ಲಿ ಫೆಬ್ರವರಿ 27ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯ (Rajyasabha Election) ಕಣದಲ್ಲಿ ಪ್ರಬಲ ಪೈಪೋಟಿ ನಡೆಯುವುದು ಖಚಿತವಾಗಿದೆ. ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ : Rajya Sabha Election: ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಸೋನಿಯಾ ಗಾಂಧಿ

7. ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; ಎಲ್‌ಐಸಿ ಸ್ಕಾಲರ್‌ಶಿಪ್‌ಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ
ಬೆಂಗಳೂರು: ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಣ ಎನ್ನುವುದು ಬಹಳ ಮುಖ್ಯ ಪಾತ್ರವಹಿಸುತ್ತದೆ. ಇದಕ್ಕೆಂದೇ ಸರ್ಕಾರಗಳು ಶಿಕ್ಷಣಕ್ಕೆ ಒತ್ತು ನೀಡುತ್ತವೆ. ಉಚಿತ ವಿದ್ಯಾಭ್ಯಾಸ, ಉನ್ನತ ಶಿಕ್ಷಣಕ್ಕೆ ಸಾಲ ಸೌಲಭ್ಯ, ಸ್ಕಾಲರ್‌ಶಿಪ್‌ (Scholarships) ಮುಂತಾದ ಯೋಜನೆಗಳನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ನೆರವಿಗೆ ಧಾವಿಸುತ್ತವೆ. ಸರ್ಕಾರದ ಜತೆಗೆ ಕೆಲವು ಸಂಸ್ಥೆಗಳು ಕೂಡ ವಿದ್ಯಾರ್ಥಿವೇತನ ನೀಡುತ್ತವೆ. ಭಾರತದ ನಂಬರ್ ಒನ್ ಇನ್ಷೂರೆನ್ಸ್ ಕಂಪೆನಿ ಎನಿಸಿಕೊಂಡಿರುವ ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (LIC) ಕೂಡ ಇದಕ್ಕೆ ಹೊರತಲ್ಲ. ನೀವೂ ಕೂಡ ಎಲ್‌ಐಸಿಯ ಈ ಯೋಜನೆಯ ಲಾಭ ಪಡೆಯಬಹುದು. ಆ ಕುರಿತಾದ ವಿವರ ಇಲ್ಲಿದೆ (LIC Golden Jubilee Scholarship Scheme 2023). ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.

8. ರಾಹುಲ್‌ ಗಾಂಧಿಗೆ ಮುಕ್ಕಾಲು ಗಂಟೆ ಕಸ್ಟಡಿ, ಜಾಮೀನು; ಯಾವುದೀ ಪ್ರಕರಣ?
ಹೊಸದಿಲ್ಲಿ: ಮಾನನಷ್ಟ ಮೊಕದ್ದಮೆಯೊಂದಕ್ಕೆ (Defamation Case) ಸಂಬಂಧಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರಿಗೆ ಸುಲ್ತಾನ್‌ಪುರ ಜಿಲ್ಲಾ ಸಿವಿಲ್‌ ನ್ಯಾಯಾಲಯ ಮಂಗಳವಾರ ಜಾಮೀನು (Bail) ನೀಡಿದೆ. ಇದಕ್ಕೂ ಮುನ್ನ ನ್ಯಾಯಾಲಯ ರಾಹುಲ್‌ ಅವರನ್ನು 30-45 ನಿಮಿಷಗಳ ಕಾಲ ಕಸ್ಟಡಿಗೆ ತೆಗೆದುಕೊಂಡಿತು ಎಂದು ಅವರ ವಕೀಲರು ಹೇಳಿದರು. ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.

9. ಅಯ್ಯೋ ತಗಡೇ, ಯಾಕಪ್ಪ ಗುಮ್ಮಿಸ್ಕೋತಿಯಾ: ಉಮಾಪತಿಗೆ ದರ್ಶನ್‌ ವಾರ್ನಿಂಗ್‌!
ಬೆಂಗಳೂರು: ಇಂದು (ಫೆ.20) ಪ್ರಸನ್ನ ಚಿತ್ರಮಂದಿರದಲ್ಲಿ ʻಕಾಟೇರʼ ಸಿನಿಮಾದ 50ನೇ ದಿನದ ಸಂಭ್ರಮಾಚರಣೆ ನಡೆಯುತ್ತಿದೆ. ಈ ಸಮಾರಂಭದಲ್ಲಿ ದರ್ಶನ್‌ ಕೂಡ ಭಾಗಿಯಾಗಿದ್ದಾರೆ. ಇದೇ ವೇಳೆ ದರ್ಶನ್‌ ರಾಬರ್ಟ್ ಸಿನಿಮಾದ ನಿರ್ಮಾಪಕ ಉಮಾಪತಿಗೆ ತಿರುಗೇಟು ಕೊಟ್ಟಿದ್ದಾರೆ. ಈ ಹಿಂದೆ ಉಮಾಪತಿ ಅವರು ಕಾಟೇರ ಟೈಟಲ್‌ ನಾನೇ ಕೊಟ್ಟಿದ್ದು ಎಂದು ಹಲವಾರು ಸಂದರ್ಶನಗಳಲ್ಲಿ ಹೇಳಿದ್ದರು. ಇದೀಗ ಕಾರ್ಯಕ್ರಮದಲ್ಲಿ ದರ್ಶನ್‌ ಮಾತನಾಡಿ ʻಅಯ್ಯೋ ತಗಡೇ, ರಾಬರ್ಟ್‌ ಕಥೆ ನಿನಗೆ ಕೊಟ್ಟಿದ್ದು ನಾವು. ಇಂಥ ಒಳ್ಳೆ ಕಥೆ ಮತ್ತೆ ಯಾಕ್‌ ಬಿಟ್ಟೆ ನೀನು?ʼʼ ಎಂದು ವೇದಿಕೆ ಮೇಲೆಯೇ ಪ್ರಶ್ನೆ ಮಾಡಿದ್ದಾರೆ. ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.
ಇದನ್ನೂ ಓದಿ : Actor Darshan: ಹೌದು ನಾವು ತಗಡುಗಳು, ಉತ್ತರ ಕೊಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ: ಸೈಲೆಂಟ್‌ ಆದ ಉಮಾಪತಿ ಶ್ರೀನಿವಾಸ್!

10. ಜಯಲಲಿತಾ ಆಭರಣ ಒಯ್ಯಲು ಆರು ಟ್ರಂಕ್‌ ತನ್ನಿ ಎಂದ ಕೋರ್ಟ್‌!
ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ (Jayalalitha Jewellery) ಅವರನ್ನು 2014ರಲ್ಲಿ ಅಕ್ರಮ ಆಸ್ತಿ ಪ್ರಕರಣದಡಿ (Illegal asset) ಬಂಧಿಸುವ ವೇಳೆ ವಶಪಡಿಸಿಕೊಳ್ಳಲಾದ ಆಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ (Tamilnadu Government) ಮರಳಿಸಲು ರಾಜ್ಯದ ವಿಶೇಷ ಸಿಬಿಐ ಕೋರ್ಟ್‌ (Special CBI Court) ದಿನ ನಿಗದಿ ಮಾಡಿದೆ. ಈ ಆಭರಣಗಳನ್ನು ಕೊಂಡೊಯ್ಯಲು ಆರು ದೊಡ್ಡ ಟ್ರಂಕ್‌ ಮತ್ತು ಅಗತ್ಯ ಭದ್ರತೆಯೊಂದಿಗೆ ಬರುವಂತೆ ಸೂಚಿಸಲಾಗಿದೆ. ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.
ಮತ್ತಷ್ಟು ವೈರಲ್‌ ಸುದ್ದಿಗಳಿಗಾಗಿ ಕ್ಲಿಕ್‌ ಮಾಡಿ

Exit mobile version