ಬೆಂಗಳೂರು: ಖಾಸಗಿ ಉದ್ಯಮದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು (Karnataka Jobs Reservation) ಒದಗಿಸುವ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ (Karnataka Congress government) ಕನ್ನಡಿಗರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BJP President BY Vijayendra) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡಿಗರಿಗೆ ಖಾಸಗಿ ಸಂಸ್ಥೆಗಳಲ್ಲಿ (jobs for kannadigas) ಉದ್ಯೋಗ ಮೀಸಲು (jobs reservation in private sector) ಬಗ್ಗೆ ವಿಧೇಯಕ (karnataka jobs for locals bill) ತಡೆಹಿಡಿದ ಸರಕಾರದ ಕ್ರಮವನ್ನು ಅವರು ಟೀಕಿಸಿದ್ದಾರೆ. ಈ ಬಗ್ಗೆ ಅವರು ʼಎಕ್ಸ್ʼನಲ್ಲಿ ಪೋಸ್ಟ್ ಮಾಡಿದ್ದಾರೆ.
“ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ?” ಎಂದು ಅವರು ಪ್ರಶ್ನಿಸಿದ್ದಾರೆ. “ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ದಿಢೀರ್ ತಡೆಹಿಡಿದು ಕನ್ನಡ-ಕನ್ನಡಿಗ-ಕರ್ನಾಟಕವನ್ನು ಅಪಮಾನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುವೆ” ಎಂದಿದ್ದಾರೆ.
“ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ?
— Vijayendra Yediyurappa (@BYVijayendra) July 18, 2024
ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ?
ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ?”
ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ದಿಢೀರ್ ತಡೆಹಿಡಿದು ಕನ್ನಡ-ಕನ್ನಡಿಗ-ಕರ್ನಾಟಕವನ್ನು ಅಪಮಾನಿಸಿರುವ ಮುಖ್ಯಮಂತ್ರಿ @siddaramaiah ನವರ ನೇತೃತ್ವದ @INCKarnataka… pic.twitter.com/9hVm9ubH2W
“ಈ ನೆಲದಲ್ಲಿ ಬದುಕು ಮಾಡುತ್ತ ಕನ್ನಡ ಕಲಿತವರೆಲ್ಲ ಕನ್ನಡಿಗರೇ ಎಂದು ಪರಿಗಣಿಸಿ ಈ ನೆಲದ ಮಕ್ಕಳ ಉದ್ಯೋಗದ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಕನ್ನಡಪರ ಹೋರಾಟಗಾರರ ಬಹುದಿನಗಳ ಹೋರಾಟದ ಬೇಡಿಕೆಗೆ ನಿನ್ನೆಯಷ್ಟೇ ‘ಅಸ್ತು ‘ಎಂದು ಹೆಜ್ಜೆ ಇಟ್ಟಿದ್ದ ಸರ್ಕಾರ ದಿನ ಕಳೆಯುವುದರೊಳಗೇ ‘ಸುಸ್ತು’ ಹೊಡೆದಿರುವುದೇಕೆ? ಮುಖ್ಯಮಂತ್ರಿಗಳು ಈ ಕುರಿತು ತಮ್ಮ X ಖಾತೆಯಲ್ಲಿ ಮೂರು ಬಾರಿ ‘ಯೂ ಟರ್ನ್ ಹೊಡೆದು’ ಕೊನೆಗೂ ವಿಧೇಯಕ ಸದ್ಯಕ್ಕೆ ಮಂಡಿಸುತ್ತಿಲ್ಲ ಎನ್ನುವ ಅಂಜುಬುರುಕ ನಿರ್ಧಾರದ ಹಿಂದೆ ನಾಡಿನ ಆತ್ಮ ಗೌರವ, ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡತನವನ್ನು ಹಿಮ್ಮೆಟ್ಟಿಸುವ ಕರ್ನಾಟಕ ವಿರೋಧಿ ಶಕ್ತಿಗಳ ಲಾಬಿ ಮೇಲುಗೈ ಸಾಧಿಸಿರುವಂತಿದೆ”
“ಇಂಡಿ ಕೂಟದಲ್ಲಿ ಯಾವಾಗ ಬಿರುಕು ಮೂಡುತ್ತದೋ ಎಂಬ ಭೀತಿಯಲ್ಲಿರುವ ದೆಹಲಿಯ ದೊಡ್ಡ ‘ಕೈ’ ಮುಖ್ಯಮಂತ್ರಿಗಳ ಕೈ ಕಟ್ಟಿಹಾಕಿರಲೇಬೇಕು, ಇಲ್ಲದಿದ್ದರೇ ಕನ್ನಡಿಗರ ಬದುಕು ಹಸನಾಗಿಸುವ ವಿಧೇಯಕವನ್ನು ಬದಿಗೆ ಸರಿಸುವ ಪಲಾಯನವಾದಿ ನಿರ್ಧಾರ ಕೈಗೊಳ್ಳಲು ಹೇಗೆ ಸಾಧ್ಯ? ಸದ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳನ್ನು ಮುತ್ತಿರುವ ಮಹರ್ಷಿ ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣಗಳಿಂದ ತತ್ತರಿಸಿರುವ ಕಾಂಗ್ರೆಸ್ ತನ್ನ ಮುಖ ಮುಚ್ಚಿಕೊಳ್ಳಲು ಹಗರಣದ ಚರ್ಚೆ ಹಾಗೂ ತನಿಖೆಯನ್ನು ದಿಕ್ಕು ತಪ್ಪಿಸಲು ಹಾಗೂ ಜನರ ಗಮನ ವಿಚಲಿತಗೊಳಿಸುವ ಕುತಂತ್ರದಿಂದ ಕನ್ನಡ ಪರ ವಿಧೇಯಕವನ್ನು ತಡೆಹಿಡಿದು ಗುರಾಣಿ ಮಾಡಿಕೊಳ್ಳುವ ಹುನ್ನಾರ ನಡೆಸಿದ್ದರೆ ರಾಜ್ಯದ ಜನತೆ ಕಾಂಗ್ರೆಸ್ಸಿಗರನ್ನು ಎಂದಿಗೂ ಕ್ಷಮಿಸರು.”
“ವಿಧೇಯಕದ ಕುರಿತು ಮಾಧ್ಯಮಗಳಲ್ಲಿ ಹೆಮ್ಮೆಯಿಂದ ಬೀಗಿದ್ದ ಸಚಿವರುಗಳು ಹಾಗೂ ಕಾಂಗ್ರೆಸ್ ಮುಖಂಡರು ಕೆಲವೇ ಸಮಯದ ಅಂತರದಲ್ಲಿ ನಾಡ ಜನರ ಬಗೆಗಿನ ಐತಿಹಾಸಿಕ ವಿಧೇಯಕ ಹಿಂತೆಗೆದುಕೊಂಡ ಬಗ್ಗೆ ಸಮಸ್ತ ಕನ್ನಡ ಜನತೆಯ ಮುಂದೆ ತಲೆ ಎತ್ತಿ ಮಾತನಾಡುವ ನೈತಿಕತೆ ಕಳೆದುಕೊಂಡಿದ್ದಾರೆ. ಅರ್ಹತೆ ಇದ್ದರೂ ಉದ್ಯೋಗಾವಕಾಶಗಳಿಂದ ವಂಚಿತರಾಗಿ ಹತಾಶೆಗೊಳಗಾಗಿದ್ದ ಗ್ರಾಮೀಣ ಭಾಗದ ಲಕ್ಷಾಂತರ ನಿರುದ್ಯೋಗಿಗಳಿಗೆ ಭರವಸೆಯ ಬೆಳಕು ಮೂಡಿಸಿದ್ದ ಕನ್ನಡಿಗರ ಉದ್ಯೋಗ ಮೀಸಲಾತಿಯ ವಿಧೇಯಕ ಪ್ರಸಕ್ತ ಅಧಿವೇಶನದಲ್ಲೇ ಸರ್ಕಾರ ಮಂಡಿಸಲಿ, ಇಲ್ಲವೇ ಕನ್ನಡಿಗರ ಆಕ್ರೋಶ ಎದುರಿಸಲು ಸಿದ್ದವಾಗಲಿ” ಎಂದು ಅವರು ಬರೆದಿದ್ದಾರೆ.
Uಯೂ ಟರ್ನ್ ಹೊಡೆದ ಸರಕಾರ
ಕರ್ನಾಟಕದಲ್ಲಿರುವ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳ ಆಡಳಿತಾತ್ಮಕ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ.75 ಮೀಸಲಾತಿ (Karnataka Jobs Reservation) ನಿಗದಿಪಡಿಸುವ ಕರಡು ಮಸೂದೆಗೆ ಸರ್ಕಾರ ನಿನ್ನೆ ತಾತ್ಕಾಲಿಕ ತಡೆ ನೀಡಿದೆ. ಸಂಪುಟ ಅನುಮೋದನೆ ನೀಡಲಾಗಿದ್ದ ಮಸೂದೆ ಕುರಿತು ಮುಂದಿನ ದಿನಗಳಲ್ಲಿ ಮತ್ತೊಂದು ಬಾರಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕಚೇರಿಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.
ಕನ್ನಡಿಗರಿಗೆ ಉದ್ಯೋಗ ಮೀಸಲಾತಿಯ ಕರಡು ಮಸೂದೆ ಜಾರಿಗೆ ತರುವುದಾಗಿ ಘೋಷಿಸಿದ ತಕ್ಷಣವೇ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತಗೊಂಡಿತ್ತು. ಪ್ರಮುಖ ಉದ್ಯಮಿಗಳಾದ ಮೋಹನ್ ದಾಸ್ ಪೈ,ಕಿರಣ್ ಮಜುಂದಾರ್ ಅವರು ಈ ಬಗ್ಗೆ ಆಕ್ಷೇಪ ಎತ್ತಿದ್ದರು. ನೆರೆ ರಾಜ್ಯದ ಸರ್ಕಾರಗಳೂ ಇದರ ಬಗ್ಗೆ ತಕರಾರು ಎತ್ತಿದ್ದವು. ಈ ಒತ್ತಡಕ್ಕೆ ಬಗ್ಗಿರುವ ಸರ್ಕಾರ ಮಸೂದಗೆ ತಾತ್ಕಾಲಿಕ ತಡೆಯನ್ನು ನೀಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Karnataka Jobs Reservation: ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲು ಸಾಧ್ಯವೆ? ತೊಡಕುಗಳು ಏನೇನು?