Site icon Vistara News

IISc Bangalore: ರಾಷ್ಟ್ರೀಯ ರ‍್ಯಾಂಕಿಂಗ್‌ನಲ್ಲಿ ಬೆಂಗಳೂರಿನ ಐಐಎಸ್‌ಸಿ; ರಾಜ್ಯದ ಹಲವು ಸಂಸ್ಥೆಗಳಿಗೆ ಗರಿ

IISc Bangalore

IISc Bangalore tops 91 Indian universities in Times World Rankings 2024

ಹೊಸದಿಲ್ಲಿ: ಕೇಂದ್ರ ಪ್ರಕಟಿಸಿರುವ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (Indian Institute of Science, IISC Bangalore) ದೇಶದ ಅತ್ಯುತ್ತಮ ಯೂನಿವರ್ಸಿಟಿ (Best University) ಎಂಬ ಹೆಗ್ಗಳಿಕೆಯನ್ನು ಪಡೆದಿದೆ. ಇಂದು ಕೇಂದ್ರ ಶಿಕ್ಷಣ ಸಚಿವಾಲಯ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಚೌಕಟ್ಟು (NIRF) 2024 ಅನ್ನು ಪ್ರಕಟಿಸಿದ್ದು, ಇದರಲ್ಲಿನ ವಿವಿಧ ವಿಭಾಗಗಳಲ್ಲಿ ಬೆಂಗಳೂರಿನ ಹಲವು ಸಂಸ್ಥೆಗಳು ಸ್ಥಾನ ಪಡೆದಿವೆ.

ರ‍್ಯಾಂಕಿಂಗ್‌ಗಳ ಒಂಬತ್ತನೇ ಆವೃತ್ತಿಯನ್ನು ಪ್ರಕಟಿಸಲಾಗಿದ್ದು, ಇದನ್ನು ಅಧಿಕೃತ NIRF ವೆಬ್‌ಸೈಟ್ nirfindia.orgನಲ್ಲಿ ನೋಡಬಹುದು. NIRF ಶ್ರೇಯಾಂಕವು ವಿಶ್ವವಿದ್ಯಾಲಯಗಳು, ಕಾಲೇಜುಗಳು, ಸಂಶೋಧನಾ ಸಂಸ್ಥೆಗಳು ಮತ್ತು ಎಂಜಿನಿಯರಿಂಗ್, ನಿರ್ವಹಣೆ ಮತ್ತು ವೈದ್ಯಕೀಯ ಶಿಕ್ಷಣದಂತಹ ವಿವಿಧ ವಿಶೇಷ ಕ್ಷೇತ್ರಗಳನ್ನು ಒಳಗೊಂಡಂತೆ 13 ವಿಭಾಗಗಳನ್ನು ಒಳಗೊಂಡಿದೆ.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಬೆಂಗಳೂರು) ದೇಶದ ಅತ್ಯುತ್ತಮ ವಿಶ್ವವಿದ್ಯಾನಿಲಯ ಎಂದು ಶ್ರೇಯಾಂಕ ಪಡೆದಿದೆ. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ದೆಹಲಿ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ನಂತರದ ಸ್ಥಾನಗಳಲ್ಲಿವೆ. ದೇಶದ ಟಾಪ್‌ ಐದು ರಿಸರ್ಚ್‌ ಇನ್‌ಸ್ಟಿಟ್ಯೂಟ್‌ಗಳಲ್ಲಿ ಐಐಎಸ್‌ಸಿ ಅಗ್ರಸ್ಥಾನದಲ್ಲಿದೆ. ಟಾಪ್‌ ಟೆನ್‌ ಸಂಸ್ಥೆಗಳ ಪಟ್ಟಿಯಲ್ಲಿಯೂ ಐಐಟಿ ಮದ್ರಾಸ್‌ ನಂತರ ಐಐಎಸ್‌ಸಿ ಬೆಂಗಳೂರು 2ನೇ ಸ್ಥಾನದಲ್ಲಿದೆ. ನಾವೀನ್ಯತೆಯ ವಿಭಾಗದಲ್ಲಿಯೂ ಐಐಎಸ್‌ಸಿ 4ನೇ ಸ್ಥಾನದಲ್ಲಿದೆ.

ಮ್ಯಾನೇಜ್‌ಮೆಂಟ್‌ ರ‍್ಯಾಂಕಿಂಗ್‌ನಲ್ಲಿ ಐಐಎಂ ಬೆಂಗಳೂರು 2ನೇ ಸ್ಥಾನದಲ್ಲಿದೆ. ದೇಶದ ಟಾಪ್‌ 5 ಮೆಡಿಕಲ್‌ ಕಾಲೇಜುಗಳಲ್ಲಿ ಬೆಂಗಳೂರಿನ ನಿಮ್ಹಾನ್ಸ್‌ 4ನೇ ಸ್ಥಾನದಲ್ಲಿದೆ. ಟಾಪ್‌ ಕಾನೂನು ಕಾಲೇಜುಗಳಲ್ಲಿ ಬೆಂಗಳೂರಿನ ನ್ಯಾಷನಲ್‌ ಲಾ ಸ್ಕೂಲ್‌ ಆಫ್‌ ಇಂಡಿಯಾ ಯೂನಿವರ್ಸಿಟಿ ಮೊದಲ ಸ್ಥಾನದಲ್ಲಿದೆ.

ಮೈಸೂರು ಅರಸರ ಅಧಿಕಾರ ಮೊಟಕು ಮಾಡಲು ಮುಂದಾದ ಕಾಯಿದೆಗೆ ಹೈಕೋರ್ಟ್‌ ಮಧ್ಯಂತರ ತಡೆ

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟ (Mysore Chamundi Hill) ಹಾಗೂ ಚಾಮುಂಡೇಶ್ವರಿ ದೇವಾಲಯದ (Chamundeshwari Temple) ದೇವಸ್ಥಾನದ ಅಭಿವೃದ್ಧಿ ಹಾಗೂ ನಿರ್ವಹಣೆಯಲ್ಲಿ ರಾಜಮನೆತನದವರ (Mysore dynasty) ಅಧಿಕಾರ ಮೊಟಕುಗೊಳಿಸುವ ‘ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯಿದೆ-2024’ ಜಾರಿಗೊಳಿಸದಂತೆ ರಾಜ್ಯ ಸರ್ಕಾರಕ್ಕೆ (Karnataka Govt) ನಿರ್ದೇಶಿಸಿ ಹೈಕೋರ್ಟ್‌ (Karnataka High Court) ಮಧ್ಯಂತರ ಆದೇಶ ನೀಡಿದೆ.

ರಾಜ್ಯ ಸರ್ಕಾರ ಜಾರಿ ಮಾಡಿರುವ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ-2024ರ ಹಲವು ಸೆಕ್ಷನ್‌ಗಳನ್ನು ಪ್ರಶ್ನಿಸಿ ಮೈಸೂರು ಒಡೆಯರ್‌ ವಂಶಸ್ಥೆ ಪ್ರಮೋದಾದೇವಿ ಒಡೆಯರ್‌ (Pramodadevi wadiyer) ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಪೀಠ, ಕಾಯಿದೆಯನ್ನು ಆ.22ರವರೆಗೆ ಜಾರಿಗೊಳಿಸದಂತೆ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಮೈಸೂರು ಅರಮನೆ ಮುಜರಾಯಿ ಸಂಸ್ಥೆಯ ಮುಖ್ಯಸ್ಥರೂ ಆದ ಜಿಲ್ಲಾಧಿಕಾರಿಗೆ ನೋಟಿಸ್‌ ಜಾರಿ ಮಾಡಿದೆ.

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯಿದೆಯ ಪ್ರಕಾರ, ಚಾಮುಂಡೇಶ್ವರಿ ಬೆಟ್ಟದ ಅಭಿವೃದ್ಧಿ, ದೇವಸ್ಥಾನದ ಆಡಳಿತ ನಿರ್ವಹಣೆ, ಪೂಜಾ ಕೈಂಕರ್ಯ ನಡೆಸಲು ಪ್ರಾಧಿಕಾರದ ರಚನೆ ಮಾಡಲಾಗುತ್ತದೆ. ಆ ಪ್ರಾಧಿಕಾರದ ರಚನೆಯ ಸಂಪೂರ್ಣ ಅಧಿಕಾರ ಸರ್ಕಾರಕ್ಕೆ ಸೇರಿರುತ್ತದೆ. ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಲಿದ್ದಾರೆ. ಪದಾಧಿಕಾರಿಗಳಾಗಿ ಸ್ಥಳೀಯ ಶಾಸಕರು, ಸಚಿವರು, ಸಂಸದರು ಹಾಗೂ ಅಧಿಕಾರಿಗಳು ಇರಲಿದ್ದಾರೆ.

ಇದನ್ನೂ ಓದಿ: NIRF 2024 Rank: ದೇಶದಲ್ಲೇ ಮದ್ರಾಸ್ ಐಐಟಿ ಬೆಸ್ಟ್; ಬೆಂಗಳೂರಿನ ಐಐಎಸ್‌ಸಿ ನೆಕ್ಸ್ಟ್;‌ ಇಲ್ಲಿದೆ ಪೂರ್ಣ ಪಟ್ಟಿ

Exit mobile version