Swine Fever: ಹಂದಿ ಜ್ವರಕ್ಕೆ ಭಾರತದ ಮೊದಲ ಲಸಿಕೆ ಅಭಿವೃದ್ಧಿಪಡಿಸಿದ ಐಐಟಿ ಗುವಾಹಟಿ - Vistara News

ಪ್ರಮುಖ ಸುದ್ದಿ

Swine Fever: ಹಂದಿ ಜ್ವರಕ್ಕೆ ಭಾರತದ ಮೊದಲ ಲಸಿಕೆ ಅಭಿವೃದ್ಧಿಪಡಿಸಿದ ಐಐಟಿ ಗುವಾಹಟಿ

Swine Fever : ಭಾರತದಲ್ಲಿ ಇತ್ತೀಚಿನ ದಿನಗಳಲ್ಲಿ ಹಂದಿ ಜಸ್ವರ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ

VISTARANEWS.COM


on

Swine Fever
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಂದಿಗಳಿಗೆ ಬರುವ ಜ್ವರಕ್ಕೆ (Swine Fever) ಭಾರತದ ಮೊದಲ ಮರುಸಂಯೋಜಕ ಲಸಿಕೆಯನ್ನು ಐಐಟಿ ಗುವಾಹಟಿ (IIT Guwahati) ಅಭಿವೃದ್ಧಿ ಮಾಡಿದೆ. ಅಸ್ಸಾಂ ಕೃಷಿ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಲಸಿಕೆಯನ್ನು ತಯಾರಿಸಲಾಗಿದೆ. ಸಾಂಕ್ರಾಮಿಕ ಹಂದಿ ಜ್ವರವು ರಾಷ್ಟ್ರಾದ್ಯಂತ, ವಿಶೇಷವಾಗಿ ಈಶಾನ್ಯ ಮತ್ತು ಬಿಹಾರ, ಕೇರಳ, ಪಂಜಾಬ್, ಹರಿಯಾಣ ಮತ್ತು ಗುಜರಾತ್​ನಲ್ಲಿ ಹೆಚ್ಚಾಗಿವೆ. ಹೀಗಾಗಿ ಲಸಿಕೆಯನ್ನು ಕಂಡುಕೊಳ್ಳಲಾಗಿದೆ.

ಐಐಟಿ ಗುವಾಹಟಿ ಅಸ್ಸಾಂ ಕೃಷಿ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಲಸಿಕೆ ಅಭಿವೃದ್ಧಿಪಡಿಸಲಾಗಿದೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಲಸಿಕೆಯು ಹೊಸ ಮಾದರಿಯ ರಿವರ್ಸ್ ಜೆನೆಟಿಕ್ಸ್ ಮೂಲಕ ತಯಾರಿಸಲಾಗಿದೆ ಎಂದು ಅದು ಹೇಳಿದೆ, “ಈ ವಿಧಾನವು ತ್ವರಿತ ಮತ್ತು ಕಡಿಮೆ ವೆಚ್ಚದ ಪರಿಣಾಮಕಾರಿ ರೋಗನಿರೋಧಕ ಲಸಿಕೆಯ ಅಭಿವೃದ್ದಿಗೆ ಪೂರಕವಾಗಿದೆ.
ಈ ತಂತ್ರಜ್ಞಾನ ಪ್ರಸ್ತುತ ಲಸಿಕೆಯ ಕೊರತೆಯಿರುವ ಭಾರತಕ್ಕೆ ಈ ರೋಗದ ವಿರುದ್ಧದ ಹೋರಾಟದಲ್ಲಿ ವಿನೂತನ ಮೈಲುಗಲ್ಲಾಗಿದೆ ಎಂದು ಐಐಟಿ ಗುವಾಹಟಿ ಹೇಳಿದೆ.

2019ರಲ್ಲಿ ಆರಂಭಗೊಂಡ ಯೋಜನೆ

ಐಐಟಿ ಗುವಾಹಟಿಯ ಜೈವಿಕ ವಿಜ್ಞಾನ ಮತ್ತು ಜೈವಿಕ ಎಂಜಿನಿಯರಿಂಗ್ ವಿಭಾಗದ ಸಂಶೋಧಕರು ಮತ್ತು ಗುವಾಹಟಿಯ ಅಸ್ಸಾಂ ಕೃಷಿ ವಿಶ್ವವಿದ್ಯಾಲಯದ ಸಂಶೋಧಕರ ನಡುವಿನ ಸಹಯೋಗದ ಪ್ರಯತ್ನಗಳ ಮೂಲಕ ಲಸಿಕೆ ಕೆಲಸವನ್ನು 2018-2019 ರಲ್ಲಿ ಪ್ರಾರಂಭಿಸಲಾಯಿತು. ಅವರ ಸಂಶೋಧನೆಗಳನ್ನು ಎರಡು ಪ್ರಬಂಧಗಳಲ್ಲಿ ಪ್ರಕಟಿಸಲಾಗಿದೆ. ಇದು ಪ್ರೊಸೆಸ್ ಬಯೋಕೆಮಿಸ್ಟ್ರಿ ಮತ್ತು ಆರ್ಕೈವ್ಸ್ ಆಫ್ ವೈರಾಲಜಿ ಜರ್ನಲ್​ನಲ್ಲಿ ಪ್ರಕಟವಾಗಿದೆ.

ಈ ರೋಗವು ಭಾರತದ ಹಂದಿ ಉದ್ಯಮಕ್ಕೆ ಗಮನಾರ್ಹ ಅಪಾಯವನ್ನುಂಟುಮಾಡುತ್ತದೆ ಹಾಗೂ ಅದಕ್ಕೆ ಪ್ರಸ್ತುತ, ಯಾವುದೇ ಲಸಿಕೆ ಲಭ್ಯವಿಲ್ಲ.

ರಿವರ್ಸ್ ಜೆನೆಟಿಕ್ಸ್ ಪ್ರಾಣಿ ಮತ್ತು ಮಾನವ ರೋಗಗಳ ಲಸಿಕೆಗಳ ಅಭಿವೃದ್ಧಿಗೆ ಪ್ರಬಲ ವಿಧಾನವಾಗಿದೆ. ಪ್ರಸ್ತುತ, ಲಸಿಕೆ ಪರೀಕ್ಷೆ ಮತ್ತು ವಿಶ್ಲೇಷಣೆ ಪರವಾನಗಿ ಸಲ್ಲಿಸುವ ಪ್ರಕ್ರಿಯೆಯಲ್ಲಿದೆ. ಭಾರತದಲ್ಲಿ, ವಿಶೇಷವಾಗಿ ಈಶಾನ್ಯ ರಾಜ್ಯಗಳ ಹಂದಿಗಳ ಸಂತಾನೋತ್ಪತ್ತಿ ಕೇಂದ್ರಗಳಲ್ಲಿ ಕಾಣಿಸಿಕೊಂಡಿರುವ ಗುಣಪಡಿಸಲಾಗದ ರೋಗದ ಹರಡುವಿಕೆಯನ್ನು ತಡೆಯುವಲ್ಲಿ ಈ ಪ್ರಗತಿ ನಿರ್ಣಾಯಕವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ; ಇಲ್ಲಿದೆ ಪ್ರತಿಕ್ಷಣದ ಮಾಹಿತಿ

Lok Sabha Election Result 2024 Live: ಮಂಗಳವಾರ ಬೆಳಗ್ಗೆ 8 ಗಂಟೆಯಿಂದಲೇ ಮತಎಣಿಕೆ ಆರಂಭವಾಗಲಿದೆ. ಮತಎಣಿಕೆ ಕೇಂದ್ರಗಳಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. ಒಟ್ಟು 543 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, 272 ಮ್ಯಾಜಿಕ್‌ ನಂಬರ್‌ ಆಗಿದೆ. ನರೇಂದ್ರ ಮೋದಿ ಹ್ಯಾಟ್ರಿಕ್‌ ಬಾರಿಸುವರೋ ಇಲ್ಲವೇ ಇಂಡಿಯಾ ಒಕ್ಕೂಟ ಮುನ್ನಡೆ ಪಡೆಯುವುದೋ ಎಂಬ ಚರ್ಚೆ, ನಿರೀಕ್ಷೆ, ಕುತೂಹಲ ಹೆಚ್ಚಾಗಿದೆ. ಚುನಾವಣೆ ಫಲಿತಾಂಶದ ಕ್ಷಣಕ್ಷಣದ ಮಾಹಿತಿ ಇಲ್ಲಿ ಲಭ್ಯವಾಗಲಿದೆ.

VISTARANEWS.COM


on

Lok Sabha Election Result 2024 Live
Koo

ನವದೆಹಲಿ: ದೇಶಕ್ಕೆ ದೇಶವೇ ಕುತೂಹಲದಿಂದ ಕಾಯುತ್ತಿರುವ ಲೋಕಸಭೆ ಚುನಾವಣೆ ಫಲಿತಾಂಶಕ್ಕೆ (Lok Sabha Election Result 2024 Live) ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ (ಜೂನ್‌ 4) ಬೆಳಗ್ಗೆ 8 ಗಂಟೆಯಿಂದಲೇ ಮತಎಣಿಕೆ ಆರಂಭವಾಗಲಿದ್ದು, ಇದಕ್ಕಾಗಿ ಚುನಾವಣೆ ಆಯೋಗವು (Election Commission) ಸಕಲ ಸಿದ್ಧತೆ ಮಾಡಿಕೊಂಡಿದೆ. ಲೋಕಸಭೆ ಚುನಾವಣೆ ಫಲಿತಾಂಶದ ಪ್ರತಿಕ್ಷಣದ ಮಾಹಿತಿಯು ಇಲ್ಲಿ ಲಭ್ಯವಾಗಲಿದೆ.

ಇದನ್ನೂ ಓದಿ: Stock Market: ಮತ್ತೊಮ್ಮೆ ಮೋದಿ ಸರ್ಕಾರದ ನಿರೀಕ್ಷೆ; ಸೆನ್ಸೆಕ್ಸ್ 2,600 ಪಾಯಿಂಟ್ಸ್‌ ಏರಿಕೆ

Continue Reading

ಉದ್ಯೋಗ

Job Alert: ಭಾರತೀಯ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ; ದ್ವಿತೀಯ ಪಿಯು ಪಾಸಾದವರೂ ಅರ್ಜಿ ಸಲ್ಲಿಸಿ

Job Alert: 304 ಹುದ್ದೆಗಳನ್ನು ಭರ್ತಿ ಮಾಡಲು ಇಂಡಿಯನ್‌ ಏರ್‌ ಫೋರ್ಸ್‌ ಅರ್ಜಿ ಆಹ್ವಾನಿಸಿದೆ (Indian Air Force Recruitment 2024). ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್‌ 28.

VISTARANEWS.COM


on

Job Alert
Koo

ನವದೆಹಲಿ: ಭಾರತೀಯ ವಾಯುಪಡೆ (Indian Air Force)ಯಲ್ಲಿ ಕಾರ್ಯ ನಿರ್ವಹಿಸಬೇಕು ಎನ್ನುವ ಕನಸು ಬಹುತೇಕರಲ್ಲಿರುತ್ತದೆ. ಇದೀಗ ಅಂತಹ ಕನಸು ನನಸಾಗುವ ಸಮಯ ಬಂದಿದೆ. 304 ಹುದ್ದೆಗಳನ್ನು ಭರ್ತಿ ಮಾಡಲು ಇಂಡಿಯನ್‌ ಏರ್‌ ಫೋರ್ಸ್‌ ಅರ್ಜಿ ಆಹ್ವಾನಿಸಿದೆ (Indian Air Force Recruitment 2024). ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್‌ 28 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಫ್ಲೈಯಿಂಗ್: 29, ಗ್ರೌಂಡ್ ಡ್ಯೂಟಿ (ಟೆಕ್ನಿಕಲ್): 156, ಗ್ರೌಂಡ್ ಡ್ಯೂಟಿ (ನಾನ್‌ ಟೆಕ್ನಿಕಲ್): 119 ಮತ್ತು ಫ್ಲೈಯಿಂಗ್: ಎನ್‌ಸಿಸಿ ಸ್ಪೆಷಲ್‌ ಎಂಟ್ರಿ ಸ್ಕೀಮ್‌ ಅಡಿಯಲ್ಲಿ ಶೇ. 10ರಷ್ಟು ಹುದ್ದೆಗಳಿವೆ.
ಫ್ಲೈಯಿಂಗ್ ಬ್ರ್ಯಾಂಚ್ ಹುದ್ದೆಗಳಿಗೆ: ಭೌತಶಾಸ್ತ್ರ, ಗಣಿತ ವಿಷಯಗಳೊಂದಿಗೆ 12ನೇ ಕ್ಲಾಸ್ ತೇರ್ಡೆಯಾಗಿರಬೇಕು.
ಗ್ರೌಂಡ್ ಡ್ಯೂಟಿ (ನಾನ್‌ ಟೆಕ್ನಿಕಲ್) ಹುದ್ದೆಗಳಿಗೆ: ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
ಗ್ರೌಂಡ್ ಡ್ಯೂಟಿ (ಟೆಕ್ನಿಕಲ್) ಬ್ರ್ಯಾಂಚ್ ಹುದ್ದೆಗಳಿಗೆ: ಭೌತಶಾಸ್ತ್ರ, ಗಣಿತ ವಿಷಯಗಳೊಂದಿಗೆ 12ನೇ ಕ್ಲಾಸ್ ಓದಿ, ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.

ವಯೋಮಿತಿ

ಏರ್‌ ಫೋರ್ಸ್‌ ಕಾಮನ್ ಅಡ್ಮಿಷನ್ ಟೆಸ್ಟ್‌ (Air Force Common Admission Test)ಗೆ ಅರ್ಜಿ ಸಲ್ಲಿಸುವ ಮುನ್ನ ವಯೋಮಿತಿಯನ್ನು ಗಮನಿಸಿ. ಫ್ಲೈಯಿಂಗ್‌ ಬ್ರ್ಯಾಂಚ್‌ಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 24 ವರ್ಷ. ಗ್ರೌಂಡ್‌ ಡ್ಯೂಟಿ (ಟೆಕ್ನಿಕಲ್‌ / ನಾನ್‌ ಟೆಕ್ನಿಕಲ್‌) ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವರ್ಷ 20 ವರ್ಷ ಮತ್ತು ಗರಿಷ್ಠ ವಯಸ್ಸು 26 ವರ್ಷ.

ಅರ್ಜಿ ಶುಲ್ಕ

ಎಎಫ್‌ಸಿಎಟಿ ಪ್ರವೇಶ ಶುಲ್ಕ 550 ರೂ. ಇನ್ನು ಎನ್‌ಸಿಸಿ ಸ್ಪೆಷಲ್‌ ಎಂಟ್ರಿ ಅಭ್ಯರ್ಥಿಗಳು ಶುಲ್ಕ ಪಾವತಿಸಬೇಕಾಗಿಲ್ಲ.
ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಇದಕ್ಕಾಗಿ ಕ್ರೆಡಿಟ್ ಕಾರ್ಡ್‌, ಡೆಬಿಟ್ ಕಾರ್ಡ್‌, ನೆಟ್‌ ಬ್ಯಾಂಕಿಂಗ್, ಇ-ಚಲನ್‌ ಬಳಸಬಹುದು.

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ, ಸಂದರ್ಶನ, ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆ ಒಟ್ಟು 300 ಅಂಕಗಳಿಗೆ ನಡೆಯಲಿದೆ. 100 ಪ್ರಶ್ನೆಗಳು ಇರಲಿದ್ದು, ಎರಡು ಗಂಟೆ ಅವಧಿಯನ್ನು ಹೊಂದಿದೆ. ಲಿಖಿತ ಪರೀಕ್ಷೆ ಜನರಲ್‌ ಅವರ್ನೆಸ್‌, ವರ್ಬಲ್‌ ಎಬಿಲಿಟಿ, ನ್ಯುಮೆರಿಕಲ್‌ ಎಬಿಲಿಟಿ ಮತ್ತು ರೀಸನಿಂಗ್‌ & ಮಿಲಿಟರಿ ಅಪ್ಟಿಟ್ಯೂಡ್‌ ಟೆಸ್ಟ್‌ ಅನ್ನು ಒಳಗೊಂಡಿದೆ.

Indian Air Force Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಹೆಸರು, ಅಗತ್ಯ ಮಾಹಿತಿಗಳನ್ನು ನೀಡಿ ಹೆಸರು ನೋಂದಾಯಿಸಿ.
  • ನಂತರ ತೆರೆದುಕೊಳ್ಳುವ ಹೊಸ ಪುಟದಲ್ಲಿರುವ ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ Sumbit ಬಟನ್‌ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಯುಪಿಎಸ್‌ಸಿಯಿಂದ 312 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Continue Reading

ಕ್ರೀಡೆ

T20 World Cup 2024 Prize Money: ದಾಖಲೆಯ ಬಹುಮಾನ ಮೊತ್ತ ಘೋಷಿಸಿದ ಐಸಿಸಿ

T20 World Cup 2024 Prize Money: ಕಳೆದ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿದ್ದ ಇಂಗ್ಲೆಂಡ್‌ ತಂಡವು 13.84 ಕೋಟಿ ನಗದು ಬಹುಮಾನ ‍ಪಡೆದುಕೊಂಡಿತ್ತು. ರನ್ನರ್‌ ಅಪ್‌ ಪಾಕಿಸ್ತಾನ ತಂಡವು 7.4 ಕೋಟಿ ಪಡೆ‌ದಿತ್ತು. ಸೆಮಿಫೈನಲ್‌ನಲ್ಲಿ ಇಂ‌ಗ್ಲೆಂಡ್ ವಿರುದ್ಧ ಸೋಲನುಭವಿಸಿದ ಭಾರತ 4.5 ಕೋಟಿ ರೂ., ‌ಪಾಕಿಸ್ತಾನ ವಿರುದ್ಧ ಸೋತ ನ್ಯೂಜಿಲ್ಯಾಂಡ್​ 4.19 ಕೋಟಿ ರೂ. ಬಹುಮಾನ ಪಡೆದಿತ್ತು.

VISTARANEWS.COM


on

T20 World Cup 2024 Prize Money
Koo

ದುಬೈ: ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯ ಬಹುಮಾನ ಮೊತ್ತವನ್ನು ಐಸಿಸಿ ಸೋಮವಾರ ಪ್ರಕಟಿಸಿದೆ. ಗೆದ್ದ ತಂಡಕ್ಕೆ ಭರ್ಜರಿ ನಗುದು ಬಹುಮಾನ ಸಿಗಲಿದೆ. ಚಾಂಪಿಯನ್​ ತಂಡಕ್ಕೆ 20 ಕೋಟಿ ರೂ. ಸಿಗಲಿದೆ. ಇದು ಈ ವರೆಗಿನ ಐಸಿಸಿ ಪುರುಷರ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲೇ ಅತ್ಯಧಿಕ ಮೊತ್ತದ ಬಹುಮಾನವಾಗಿದೆ. ಒಟ್ಟು ನಗದು ಬಹುಮಾನ ಮೊತ್ತ 93.50 ಕೋಟಿ ರೂ. ಆಗಿದೆ.

ಈಗಾಗಲೇ ಟೂರ್ನಿಯಲ್ಲಿ ಮೂರು ಪಂದ್ಯಗಳು ನಡೆದಿವೆ. ಟೂರ್ನಿಯ ಜಂಟಿ ಆತಿಥ್ಯವಹಿಸಿಕೊಂಡಿರುವ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಆಡಿದ ಮೊದಲ ಪಂದ್ಯದಲ್ಲೇ ಗೆದ್ದು ಶುಭಾರಂಭ ಕಂಡಿದೆ. ಒಟ್ಟು ಈ ಬಾರಿ 20 ತಂಡಗಳು ಕಣಕ್ಕಿಳಿಯುತ್ತಿವೆ. ಇದೀಗ ಚಾಂಪಿಯನ್​ ತಂಡಕ್ಕೆ ಸಿಗುವ ಮೊತ್ತವನ್ನು ಐಸಿಸಿ ಪ್ರಕಟಿಸಿದೆ.

ಈ ಬಾರಿಯ ವಿಶ್ವಕಪ್ ಬಹುಮಾನದ ಗಾತ್ರ 11.25 ಮಿಲಿಯನ್ ಯುಎಸ್ ಡಾಲರ್ ಆಗಿದೆ. ಇದು ಭಾರತೀಯ ರೂಪಾರಿಯಲ್ಲಿ ಸುಮಾರು ರೂ 93.50 ಕೋಟಿ ರೂ. ಆಗಿದೆ. ಚಾಂಪಿಯನ್ ತಂಡಕ್ಕೆ 2.45 ಮಿಲಿಯನ್ ಡಾಲರ್ (ಸುಮಾರು 20 ಕೋಟಿ ರೂ.) ಬಹುಮಾನ ಸಿಗಲಿದೆ. 1.28 ಮಿಲಿಯನ್ ಡಾಲರ್ ಅಂದರೆ ಭಾರತೀಯ ರೂಪಾಯಿಯಲ್ಲಿ 10.64 ಕೋಟಿ ರೂ. ಬಹುಮಾನ ಸಿಗಲಿದೆ.

ಕಳೆದ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿದ್ದ ಇಂಗ್ಲೆಂಡ್‌ ತಂಡವು 13.84 ಕೋಟಿ ನಗದು ಬಹುಮಾನ ‍ಪಡೆದುಕೊಂಡಿತ್ತು. ರನ್ನರ್‌ ಅಪ್‌ ಪಾಕಿಸ್ತಾನ ತಂಡವು 7.4 ಕೋಟಿ ಪಡೆ‌ದಿತ್ತು. ಸೆಮಿಫೈನಲ್‌ನಲ್ಲಿ ಇಂ‌ಗ್ಲೆಂಡ್ ವಿರುದ್ಧ ಸೋಲನುಭವಿಸಿದ ಭಾರತ 4.5 ಕೋಟಿ ರೂ., ‌ಪಾಕಿಸ್ತಾನ ವಿರುದ್ಧ ಸೋತ ನ್ಯೂಜಿಲ್ಯಾಂಡ್​ 4.19 ಕೋಟಿ ರೂ. ಬಹುಮಾನ ಪಡೆದಿತ್ತು.

ಇದನ್ನೂ ಓದಿ T20 World Cup 2024 : ಒಮಾನ್ ವಿರುದ್ಧ ಹೊಸ ದಾಖಲೆ ಬರೆದ ನಮೀಬಿಯಾ ತಂಡದ ರುಬೆನ್ ಟ್ರಂಪೆಲ್ಮನ್

ಸೋತ ತಂಡಗಳಿಗೂ ನಗದು ಬಹುಮಾನ

ಸೆಮಿಫೈನಲ್​ನಲ್ಲಿ ಸೋತ ತಂಡಗಳಿಗೂ ಈ ಬಾರಿ ಭರ್ಜರಿ ಬಹುಮಾನ ಸಿಗಲಿದೆ. ಅದರಂತೆ ಸೆಮಿಫೈನಲ್​ನಲ್ಲಿ ಸೋತ ತಂಡಗಳಿಗೆ ತಲಾ 6.55 ಕೋಟಿ ರೂ. ಸಿಗಲಿದೆ. ಸೂಪರ್ 8 ಹಂತದಲ್ಲಿ ಸೋತು ಲೀಗ್​ನಿಂದ ಹೊರಬಿಳುವ ಪ್ರತಿಯೊಂದು ತಂಡಗಳಿಗೆ 3.18 ಕೋಟಿ ರೂ., ಹಾಗೆಯೇ ಪ್ರತಿ ಗುಂಪಿನಲ್ಲಿ ಮೂರನೇ ಸ್ಥಾನ ಪಡೆಯುವ ತಂಡಗಳಿಗೆ 2.06 ಕೋಟಿ ರೂ., ಉಳಿದ ತಂಡಗಳಿಗೆ 1.87 ಕೋಟಿ ರೂ. ಪ್ರೋತ್ಸಾಹಕ ಬಹುಮಾನ ಸಿಗಲಿದೆ. ಇದು ಮಾತ್ರವಲ್ಲದೆ, ಸೂಪರ್ 8 ಹಂತದವರೆಗೆ ಪ್ರತಿ ಪಂದ್ಯವನ್ನು ಗೆಲ್ಲುವ ತಂಡಗಳಿಗೆ 25.9 ಲಕ್ಷ ರೂಗಳನ್ನು ಬಹುಮಾನ ಮೊತ್ತ ಸಿಗಲಿದೆ.

Continue Reading

ಪ್ರಮುಖ ಸುದ್ದಿ

Bagalkot Lok Sabha Constituency: ಬಿಜೆಪಿಯ ಭದ್ರಕೋಟೆ ಭೇದಿಸುವರೇ ಸಂಯುಕ್ತಾ ಪಾಟೀಲ್?

Bagalkot Lok Sabha Constituency: ಬಿಜೆಪಿಯ ಪಿ.ಸಿ. ಗದ್ದಿಗೌಡರ್‌ ಅವರು 2004ರಿಂದಲೂ ಬಾಗಲಕೋಟೆಯ ಸಂಸದರಾಗಿದ್ದಾರೆ. ಇವರು ಈಗ ಸತತ ಐದನೇ ಬಾರಿಗೆ ಗೆಲುವು ಸಾಧಿಸುವ ಉತ್ಸಾಹದಲ್ಲಿದ್ದಾರೆ. ಇನ್ನು, ಸಂಯುಕ್ತಾ ಪಾಟೀಲ್‌ ಅವರು ಯುವ ನಾಯಕಿಯಾಗಿದ್ದು, ತಂದೆ ಶಿವಾನಂದ್‌ ಪಾಟೀಲ್‌ ಅವರ ಬಲದಿಂದ ಗೆಲುವು ಸಾಧಿಸುವ ಛಲದೊಂದಿಗೆ ಮುನ್ನುಗ್ಗಿದ್ದಾರೆ. ಇಲ್ಲಿ ಅನುಭವ ವರ್ಸಸ್‌ ಉತ್ಸಾಹ ಎಂಬಂತಾಗಿದೆ.

VISTARANEWS.COM


on

Bagalkot Lok Sabha Constituency
Koo

ಬಾಗಲಕೋಟೆ: 2004ರಿಂದಲೂ ಬಾಗಲಕೋಟೆ ಲೋಕಸಭೇ ಕ್ಷೇತ್ರವು (Bagalkot Lok Sabha Constituency) ಬಿಜೆಪಿಯ ಭದ್ರಕೋಟೆಯಾಗಿದ್ದು, ಸತತ ಐದನೇ ಬಾರಿಗೆ ಗೆಲ್ಲುವ ಉತ್ಸಾಹದೊಂದಿಗೆ ಬಿಜೆಪಿಯ ಪಿ.ಸಿ.ಗದ್ದಿಗೌಡರ್‌ (PC Gaddigoudar) ಕಣಕ್ಕಿಳಿದಿದ್ದಾರೆ. ಇನ್ನು, ಕಾಂಗ್ರೆಸ್‌ನಿಂದ ಯುವ ನಾಯಕಿ, ಸಚಿವ ಶಿವಾನಂದ್‌ ಪಾಟೀಲ್‌ ಅವರ ಪುತ್ರಿ ಸಂಯುಕ್ತಾ ಪಾಟೀಲ್‌ (Samyukta Patil) ಅವರು ಸ್ಪರ್ಧಿಸಿದ್ದು, ಅನುಭವಿ ವರ್ಸಸ್‌ ಯುವ ನಾಯಕಿ ನಡುವಿನ ಸಮರಕ್ಕೆ ಕ್ಷೇತ್ರ ಸಾಕ್ಷಿಯಾಗಿದೆ. ಹಾಗಾಗಿ, ಸಹಜವಾಗಿಯೇ ಫಲಿತಾಂಶದ ಮೇಲೆ ಎಲ್ಲರ ಗಮನವಿದೆ.

ಪಿ.ಸಿ.ಗದ್ದಿಗೌಡರ್‌ ಅವರು 2004ರಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿಯ ಪತಾಕೆ ಹಾರಿಸಿದ್ದು, ಅದಾದ ನಂತರ ಅವರು ತಿರುಗಿ ನೋಡಿಲ್ಲ. ಕ್ಷೇತ್ರದ ಜನರ ಜತೆ ಒಡನಾಟ, ಅಭಿವೃದ್ಧಿ ಯೋಜನೆಗಳು, ಸರಳತೆಯಿಂದ ಮನೆಮಾತಾಗಿರುವ ಇವರಿಗೆ ನರೇಂದ್ರ ಮೋದಿ ಅವರ ಅಲೆಯ ಕೃಪಾಕಟಾಕ್ಷವೂ ಇದೆ. ಅದರಲ್ಲೂ, ಸಂಯುಕ್ತಾ ಪಾಟೀಲ್‌ ಅವರು ಹೊರಗಿನವರು ಎಂಬ ಭಾವನೆ ಜನರಲ್ಲಿರುವುದು ಕೂಡ ಗದ್ದಿಗೌಡರ್‌ ಅವರಿಗೆ ನೆರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಮತ್ತೊಂದೆಡೆ, ಸಂಯುಕ್ತಾ ಪಾಟೀಲ್‌ ಅವರು ಬಾಗಲಕೋಟೆ ಕ್ಷೇತ್ರದ ಆಡಳಿತ ವಿರೋಧಿ ಅಲೆ, ತಂದೆ ಶಿವಾನಂದ್‌ ಪಾಟೀಲರ ಬಲವಿದೆ. ಪ್ರಚಾರದ ವೇಳೆ ಯುವಕರು, ಅದರಲ್ಲೂ, ಯುವತಿಯರನ್ನು ಸೆಳೆಯುವಲ್ಲಿ ಸಂಯುಕ್ತಾ ಪಾಟೀಲ್‌ ಅವರು ಯಶಸ್ವಿಯಾಗಿದ್ದಾರೆ. ಹೊರಗಿನವಳು ಎಂಬ ಮನೋಭಾವವನ್ನು ತೊಡೆದುಹಾಕಿ, ನಾನೂ ನಿಮ್ಮ ಮನೆಮಗಳು ಎಂಬ ಭಾವನೆಯು ಜನರಲ್ಲಿ ಮೂಡುವಂತೆ ಮಾಡಿದ್ದಾರೆ. ಆ ಮೂಲಕ, ಬಾಗಲಕೋಟೆಯಲ್ಲಿ ಸಂಯುಕ್ತಾ ಪಾಟೀಲ್‌ ಅವರು ಪಿ.ಸಿ.ಗದ್ದಿಗೌಡರ್‌ ಅವರಿಗೆ ತೀವ್ರ ಪೈಪೋಟಿ ನೀಡಿದ್ದಾರೆ.

2019, 2014ರ ಫಲಿತಾಂಶ ಏನಾಗಿತ್ತು?

2019ರ ಲೋಕಸಭೆ ಚುನಾವಣೆಯಲ್ಲಿ ಪಿ.ಸಿ.ಗದ್ದಿಗೌಡರ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ವೀಣಾ ಕಾಶಪ್ಪನವರ್‌ ಅವರ ವಿರುದ್ಧ 1.68 ಲಕ್ಷ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದರು. 2014ರ ಲೋಕಸಭೆ ಚುನಾವಣೆಯಲ್ಲೂ ನರೇಂದ್ರ ಮೋದಿ ಅವರ ಅಲೆಯನ್ನು ಸದ್ಬಳಕೆ ಮಾಡಿಕೊಂಡಿದ್ದ ಪಿ.ಸಿ.ಗದ್ದಿಗೌಡರ್‌ ಅವರು ಕಾಂಗ್ರೆಸ್‌ನ ಅಜಯ್‌ ಕುಮಾರ್‌ ಸರನಾಯ್ಕ ಅವರ ವಿರುದ್ಧ 1 ಲಕ್ಷಕ್ಕೂ ಅಧಿಕ ಮತಗಳಿಂದ ಜಯಭೇರಿ ಬಾರಿಸಿದ್ದರು.

ಇದನ್ನೂ ಓದಿ: Dakshina Kannada Lok Sabha Constituency : ದಕ್ಷಿಣ ಕನ್ನಡದಲ್ಲಿ ವಿಜಯ ಅಭಿಯಾನ ಮುಂದುವರಿಸಲು ಬಿಜೆಪಿ ಕಾತರ

Continue Reading
Advertisement
Lok Sabha Election Result 2024 Live
ದೇಶ24 mins ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ; ಇಲ್ಲಿದೆ ಪ್ರತಿಕ್ಷಣದ ಮಾಹಿತಿ

Job Alert
ಉದ್ಯೋಗ32 mins ago

Job Alert: ಭಾರತೀಯ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ; ದ್ವಿತೀಯ ಪಿಯು ಪಾಸಾದವರೂ ಅರ್ಜಿ ಸಲ್ಲಿಸಿ

Viral News
ವೈರಲ್ ನ್ಯೂಸ್33 mins ago

Viral News: ಕದಿಯಲು ಬಂದ ಮನೆಯಲ್ಲೇ ನಿದ್ದೆಹೋದ ಕಳ್ಳ; ಪೊಲೀಸರೇ ಎಬ್ಬಿಸಬೇಕಾಯಿತು!

Grantha Lokarpane and award ceremony on June 5 in Bengaluru
ಬೆಂಗಳೂರು37 mins ago

Book Release: ಬೆಂಗಳೂರಿನಲ್ಲಿ ಜೂ. 5ರಂದು ಗ್ರಂಥ ಲೋಕಾರ್ಪಣೆ, ಪ್ರಶಸ್ತಿ ಪ್ರದಾನ

Valmiki Corporation Scam
ಕರ್ನಾಟಕ48 mins ago

Valmiki Corporation Scam: ವಾಲ್ಮೀಕಿ ನಿಗಮದ ಅಕ್ರಮಕ್ಕೆ ಸಿಎಂ ಸಿದ್ದರಾಮಯಯ್ಯ ನೇರ ಹೊಣೆ ಎಂದ ಎಚ್‌ಡಿಕೆ

T20 World Cup 2024 Prize Money
ಕ್ರೀಡೆ1 hour ago

T20 World Cup 2024 Prize Money: ದಾಖಲೆಯ ಬಹುಮಾನ ಮೊತ್ತ ಘೋಷಿಸಿದ ಐಸಿಸಿ

Bagalkot Lok Sabha Constituency
ಪ್ರಮುಖ ಸುದ್ದಿ1 hour ago

Bagalkot Lok Sabha Constituency: ಬಿಜೆಪಿಯ ಭದ್ರಕೋಟೆ ಭೇದಿಸುವರೇ ಸಂಯುಕ್ತಾ ಪಾಟೀಲ್?

karnataka weather Forecast Putur rain
ಮಳೆ2 hours ago

Karnataka Weather : ತೊಯ್ದು ತೊಪ್ಪೆಯಾದ ಪುತ್ತೂರು; ನಾಳೆ ಮಳೆ ಅಬ್ಬರ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

IND vs PAK
ಕ್ರಿಕೆಟ್2 hours ago

IND vs PAK: ಭಾರತ ವಿರುದ್ಧ ಶಾಂತ ಚಿತ್ತರಾಗಿ ಆಡುವ ಉಪಾಯ ಮಾಡಿದ ಕುತಂತ್ರಿ ಪಾಕ್​

Bangalore Rain
ಪ್ರಮುಖ ಸುದ್ದಿ2 hours ago

Bangalore Rain: ರಾಜಕಾಲುವೆ ಒತ್ತುವರಿ; ಮುಲಾಜಿಲ್ಲದೆ ತೆರವು ಮಾಡಲು ಡಿಕೆಶಿ ಸೂಚನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌