ಕರಾಚಿ: ಮೇ 9ರ ಗಲಭೆಗೆ ಸಂಬಂಧಿಸಿದ 12 ಪ್ರಕರಣಗಳಲ್ಲಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್(Imran Khan) ಹಾಗೂ ಮಾಜಿ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿಗೆ ಜಾಮೀನು ಸಿಕ್ಕಿದೆ. ಕಳೆದ ವರ್ಷ ಮೇಯಲ್ಲಿ ಸೇನಾ ನೆಲೆಗಳ ಮೇಲಿನ ದಾಳಿಗೆ ಸಂಬಂಧಿಸಿದ 12 ಪ್ರಕರಣಗಳಲ್ಲಿ ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ಮಾಜಿ ಪ್ರಧಾನಿ ಇಮ್ರಾನ್ ಖಾನ್(Imran Khan gets bail in 12 cases) ಮತ್ತು ಮಾಜಿ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿಗೆ ಶಿಕ್ಷೆ ವಿಧಿಸಿತ್ತು. ಇದೀಗ ಉಭಯ ನಾಯಕರಿಗೂ ಜಾಮೀನು ಮಂಜೂರು ಮಾಡಿದೆ.
ಇಮ್ರಾನ್ ಖಾನ್ ವಿರುದ್ಧ ಪಾಕಿಸ್ತಾನದಾದ್ಯಂತ ಹಲವು ಪ್ರಕರಣಗಳು ದಾಖಲಾಗಿವೆ. ಇವುಗಳ ತನಿಖೆಯೂ ನಡೆಯುತ್ತಿದೆ. ಇದೀಗ ಸೇನಾ ನೆಲೆಗಳ ಮೇಲಿನ ದಾಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾಮೀನು ದೊರೆತಿದೆ. ಆರ್ಥಿಕವಾಗಿ, ರಾಜಕೀಯವಾಗಿ ಸಂಕಷ್ಟದಲ್ಲಿರುವ ಪಾಕಿಸ್ತಾನ ಸಂಸತ್ ಚುನಾವಣೆಯ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿತ್ತು. ಜೈಲು ಸೇರಿರುವ ಮಾಜಿ ಪ್ರಧಾನಿ ಇಮ್ರಾನ್ ಬೆಂಬಲಿತ ಪಕ್ಷೇತರ ಅಭ್ಯರ್ಥಿಗಳು ಅಚ್ಚರಿಯ ರೀತಿಯಲ್ಲಿ ಮುನ್ನಡೆ ಸಾಧಿಸಿದ್ದಾರೆ. ಪ್ರಧಾನಿಯಾಗುವ ಕನಸು ಕಂಡಿದ್ದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪಿಎಂಎಲ್‌ಎನ್ ಮತ್ತು ಬಿಲಾವಲ್ ಭುಟ್ಟೋ ಅವರ ಪಿಪಿಪಿ ಭಾರೀ ಹಿನ್ನಡೆ ಸಾಧಿಸಿವೆ. ಹೀಗಾಗಿ ಅತಂತ್ರ ಪರಿಸ್ಥಿತಿಯ ಆಂತಕ ಎದುರಾಗಿದೆ.
ಇದನ್ನೂ ಓದಿ Pakistan Election Results: ಇಮ್ರಾನ್ ಖಾನ್ ಬೆಂಬಲಿತ ಅಭ್ಯರ್ಥಿಗಳಿಗೆ ಭಾರೀ ಮುನ್ನಡೆ; ಗೆದ್ದಾಯ್ತು ಎಂದ ನವಾಜ್
339 ಸ್ಥಾನಗಳ ಪೈಕಿ 338 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಶುಕ್ರವಾರ ರಾತ್ರಿ ವೇಳೆಗೆ ಇಮ್ರಾನ್ ಬೆಂಬಲಿತ ಅಭ್ಯರ್ಥಿಗಳು 90 ಕ್ಷೇತ್ರಗಳಲ್ಲಿ ಗೆಲುವಿನೊಂದಿಗೆ ಮುನ್ನಡೆ ಸಾಧಿಸಿದ್ದಾರೆ., ನವಾಜ್ ಷರೀಫ್ ಪಕ್ಷ 71, ಬಿಲಾವಲ್ ಭುಟ್ಟೋ ಅವರ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ 53 ಸ್ಥಾನಗಳಲ್ಲಿ ಗೆದ್ದಿವೆ. ಇತರ ಪಕ್ಷಗಳಿಂದ 27 ಮಂದಿ ಜಯಗಳಿಸಿದ್ದಾರೆ. ಪಾಕಿಸ್ತಾನದ ಚುನಾವಣಾ ಆಯೋಗ (ಇಸಿಪಿ) ಬಿಡುಗಡೆ ಮಾಡಿದ ಇತ್ತೀಚಿನ ಮಾಹಿತಿಯ ಪ್ರಕಾರ ಪಿಎಂಎಲ್‌ಎನ್ 71 ಸ್ಥಾನಗಳನ್ನು, ಪಿಪಿಪಿ 53 ಮತ್ತು ಇತರರು 27 ಸ್ಥಾನಗಳನ್ನು ಗೆದ್ದಿದ್ದಾರೆ.
ರಾಜತಾಂತ್ರಿಕ ಕೇಬಲ್ ಅನ್ನು ಸಾರ್ವಜನಿಕಗೊಳಿಸುವುದರ ಮೂಲಕ ರಾಷ್ಟ್ರದ ಅಧಿಕೃತ ರಹಸ್ಯ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ಪಾಕಿಸ್ತಾನದ ನ್ಯಾಯಾಲಯವು ಇಮ್ರಾನ್ಗೆ ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ವಾಷಿಂಗ್ಟನ್‌ನಲ್ಲಿರುವ ದೇಶದ ರಾಯಭಾರಿ ಕಳುಹಿಸಿದ ರಹಸ್ಯ ಕೇಬಲ್‌ನ ವಿಷಯಗಳನ್ನು ಇಮ್ರಾನ್ ಖಾನ್ ಇಸ್ಲಾಮಾಬಾದ್‌ನಲ್ಲಿರುವ ಸರ್ಕಾರಕ್ಕೆ ಹಂಚಿಕೊಂಡಿದ್ದಾರೆ ಎಂಬ ಆರೋಪ ಇವರ ಮೇಲಿದೆ.