Pakistan Election: 'ಬ್ಯಾಟ್' ವಂಚಿತ ಇಮ್ರಾನ್ ಖಾನ್ ಪಕ್ಷ! ಸುಪ್ರೀಂ ಕೋರ್ಟ್ ಹೇಳಿದ್ದೇನು? - Vistara News

ಪ್ರಮುಖ ಸುದ್ದಿ

Pakistan Election: ‘ಬ್ಯಾಟ್’ ವಂಚಿತ ಇಮ್ರಾನ್ ಖಾನ್ ಪಕ್ಷ! ಸುಪ್ರೀಂ ಕೋರ್ಟ್ ಹೇಳಿದ್ದೇನು?

Pakistan Election: ಕ್ರಿಕೆಟಿಗ ಹಾಗೂ ಮಾಜಿ ಪ್ರಧಾನಿ ಇಮ್ರಾನ್ ಅವರ ನೇತೃತ್ವದ ಪಿಟಿಐ ಪಕ್ಷವು ತನ್ನ ಬ್ಯಾಟ್ ಚಿಹ್ನೆಯನ್ನು ಕಳೆದುಕೊಂಡಿದೆ. ಪಾಕಿಸ್ತಾನದ ಚುನಾವಣಾ ಆಯೋಗ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

VISTARANEWS.COM


on

Imran khan party loses bat symbol for pakistan election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ (Former PM Imran Khan) ಅವರ ತೆಹ್ರೀಕ್-ಇ-ಇನ್ಸಾಫ್(Tehreek-E-Insaf) ಪಕ್ಷವು ತನ್ನ ಬ್ಯಾಟ್ ಚಿಹ್ನೆಯನ್ನು ಕಳೆದುಕೊಂಡಿದೆ(Bat Symbol). ಪಕ್ಷದ ಚಿಹ್ನೆ ಕುರಿತು ಪಾಕಿಸ್ತಾನ ಚುನಾವಣಾ ಆಯೋಗವು (Election commission of Pakistan) ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ (Supreme Court of Pakistan) ಎತ್ತಿ ಹಿಡಿದೆ. ಆಕ್ರೋಶ ವ್ಯಕ್ತಪಡಿಸಿರುವ ಪಿಟಿಐ, ಇದು ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆಗೆ ನೀಡಿದ ಗಲ್ಲು ಶಿಕ್ಷೆಯಾಗಿದೆ ಎಂದು ಹೇಳಿದೆ. ಫೆಬ್ರವರಿ 9ರಂದು ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ (Pakistan Election) ನಡೆಯಲಿದೆ. ಪಿಟಿಐ ನಾಯಕ ಹಾಗೂ ಕ್ರಿಕೆಟಿಗ, ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಜೈಲಿನಲ್ಲಿದ್ದಾರೆ.

ಪಿಟಿಐ ಪಕ್ಷದ ಚುನಾವಣಾ ಚಿಹ್ನೆಯಾಗಿ ಕ್ರಿಕೆಟ್ ಬ್ಯಾಟ್ ಅನ್ನು ದಯಾಪಾಲಿಸಲು ಒಪ್ಪಿಗೆ ನೀಡಿದ್ದ ಪೇಶಾವರ ಹೈಕೋರ್ಟ್‌ನ ದ್ವಿಸದಸ್ಯ ಪೀಠದ ತೀರ್ಪನ್ನು ಪಾಕಿಸ್ತಾನದ ಚುನಾವಣಾ ಆಯೋಗ (ECP) ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ಪ್ರಶ್ನಿಸಿತ್ತು. ಮುಖ್ಯ ನ್ಯಾಯಮೂರ್ತಿ ಖಾಜಿ ಫೈಜ್ ಇಸಾ ನೇತೃತ್ವದ ತ್ರಿಸದಸ್ಯ ಪೀಠವು ಇಸಿಪಿಯ ಅರ್ಜಿಯನ್ನು ಆಲಿಸಿತು ಮತ್ತು ವಿಚಾರಣೆಯ ನಂತರ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಶನಿವಾರ ತಡರಾತ್ರಿ ತೀರ್ಪು ಪ್ರಕಟಿಸಲಾಗಿದೆ.

ಪಿಟಿಐ ಪಕ್ಷದ ಚಿಹ್ನೆ ಸಂಬಂಧಿಸಿದ ಪೇಶಾವರ ಹೈಕೋರ್ಟ್ ನೀಡಿದ್ದ ತೀರ್ಪನ್ನು ಅನೂರ್ಜಿತಗೊಳಿಸಿದ ಪಾಕಿಸ್ತಾನದ ಸುಪ್ರೀಂ ಕೋರ್ಟ್, ಈ ಸಂಬಂಧ ಪಾಕಿಸ್ತಾನ ಚುನಾವಣಾ ಆಯೋಗ ನಿರ್ಧಾರವನ್ನು ಎತ್ತಿ ಹಿಡಿಯಿತು. ಪಿಟಿಐ ಪಕ್ಷದ ಆಂತರಿಕ ಚುನಾವಣೆಯನ್ನು ಅಮಾನ್ಯಗೊಳಿಸಿದ್ದ ಚುನಾವಣಾ ಆಯೋಗವು ಪಕ್ಷದ ಸಾಮಾನ್ಯ ಸಿಂಬಲ್ ಆಗಿದ್ದ ಬ್ಯಾಟ್ ಅನ್ನು ರದ್ದುಗೊಳಿಸಿತ್ತು.

ಪಕ್ಷದ ಚಿಹ್ನೆಯನ್ನು ರದ್ದುಗೊಳಿಸಿದ ಚುನಾವಣಾ ಆಯೋಗದ ನಿರ್ಧಾರವನ್ನು ಪಿಟಿಐ ಪೇಶಾವರ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಈ ಕುರಿತು ವಿಚಾರಣೆ ನಡೆಸಿದಿ ಹೈಕೋರ್ಟ್, ಆಯೋಗದ ಆದೇಶವನ್ನು ರದ್ದುಗೊಳಿಸಿ ಪಿಟಿಐ ಬ್ಯಾಂಟ್ ಚಿಹ್ನೆ ಬಳಸಲು ಒಪ್ಪಿಗೆ ನೀಡಿತ್ತು. ಆದರೆ, ಆಯೋಗವು ಪೇಶಾವರ ಹೈಕೋರ್ಟ್ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಅಂತಿಮ ಸುಪ್ರೀಂ ಕೋರ್ಟ್‌, ಚುನಾವಣಾ ಆಯೋಗದ ನಿರ್ಧಾರವನ್ನು ಎತ್ತಿ ಹಿಡಿದಿದೆ.

ಸುಪ್ರೀಂ ಕೋರ್ಟ್‌ನ ಈ ಆದೇಶವನ್ನು ಪಿಟಿಐ ಟೀಕಿಸಿದೆ. ಸುಪ್ರೀಂ ಕೋರ್ಟ್‌ನ ಈ ಆದೇಶವನ್ನು ಇತಿಹಾಸವು ಪರಾಮರ್ಶಿಸಲಿದೆ ಎಂದು ಪಿಟಿಐ ಅಲಿ ಝಪರ್ ಹೇಳಿದ್ದಾರೆ. ಪಕ್ಷದ ಸಾಮಾನ್ಯ ಚಿಹ್ನೆಯನ್ನು ರದ್ದು ಮಾಡಿದ್ದರಿಂದ ಪಕ್ಷದ ಬೆಂಬಲಿಗರು ಮತ್ತು ಮತದಾರಲ್ಲಿ ಗೊಂದಲ ಉಂಟು ಮಾಡಿದೆ. ಕೋರ್ಟ್, ಅಭ್ಯರ್ಥಿಗಳು ಪ್ರತ್ಯೇಕ ಚಿಹ್ನೆಗಳ ಮೂಲಕ ಸ್ಪರ್ಧಿಸಬಹುದು ಎಂದು ಹೇಳಿದೆ. ಇದು ಖಂಡಿತವಾಗಿಯೂ ಮುಂಬರುವ ಚುನಾವಣೆಯಲ್ಲಿ ಪಿಟಿಐ ಪಕ್ಷಕ್ಕೆ ಹಿನ್ನಡೆಯುಂಟು ಮಾಡಲಿದೆ ಎಂದು ಅವರ ಹೇಳಿದ್ದಾರೆ.

ಪಿಟಿಐ ಈಗಲೂ ನೋಂದಣಿಯಾಗಿರುವ ಪಕ್ಷವಾಗಿದೆ. ಚುನಾವಣಾ ಆಯೋಗವು ಬ್ಯಾಟ್ ಚಿಹ್ನೆಯನ್ನು ರದ್ದು ಮಾಡಿರುವುದು ತಪ್ಪು. ಬ್ಯಾಟ್ ಚಿಹ್ನೆ ಇಲ್ಲದಿದ್ದರೆ ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಮತದಾರರಿಗೆ ಗೊಂದಲ ಉಂಟಾಗಲಿದೆ ಎಂದು ಪಿಟಿಐ ಹೇಳಿದೆ. ಫೆಬ್ರವರಿ 9ರಂದು ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ.

ಈ ಸುದ್ದಿಯನ್ನೂ ಓದಿ: Imran Khan: ಇಮ್ರಾನ್ ಖಾನ್ ವಿರುದ್ಧ 121 ಕೇಸ್​ !; ಅಲ್​ ಖಾದಿರ್​ ಟ್ರಸ್ಟ್​ ಪ್ರಕರಣದಲ್ಲಿ ಜಾಮೀನು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಭವಿಷ್ಯ

Dina Bhavishya : ಅತ್ಯಂತ ಪ್ರೀತಿಯ ಕನಸು ನನಸಾಗುವ ದಿನವಿದು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಕೃಷ್ಣ ಪಕ್ಷದ ಏಕಾದಶಿ ಅಹೋರಾತ್ರಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಭಾನುವಾರವೂ ಕನ್ಯಾರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರಿಗೆ ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುವ ದಿನವಿದು. ಕೆಲಸ-ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಕಾಣಲಿದ್ದಿರಿ. ಉತ್ಸಾಹದ ಭರದಲ್ಲಿ ಆಶ್ವಾಸನೆ ನೀಡುವುದು ಅಪಾಯ ತರುವ ಸಾಧ್ಯತೆಗಳು ಹೆಚ್ಚು, ಎಚ್ಚರಿಕೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (27-10-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಕೃಷ್ಣ ಪಕ್ಷ.
ತಿಥಿ: ಏಕಾದಶಿ ಅಹೋರಾತ್ರಿ ವಾರ: ಭಾನುವಾರ
ನಕ್ಷತ್ರ: ಮಘಾ 12:23 ಯೋಗ: ಬ್ರಹ್ಮ 30:46
ಕರಣ: ಭವ 18:34 ಅಮೃತಕಾಲ: ಬೆಳಗ್ಗೆ 09:44 ರಿಂದ 11:31

ಸೂರ್ಯೋದಯ : 06:12   ಸೂರ್ಯಾಸ್ತ : 05:55

ರಾಹುಕಾಲ: ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ
3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುವ ದಿನವಿದು. ಕೆಲಸ-ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಕಾಣಲಿದ್ದಿರಿ. ಉತ್ಸಾಹದ ಭರದಲ್ಲಿ ಆಶ್ವಾಸನೆ ನೀಡುವುದು ಅಪಾಯ ತರುವ ಸಾಧ್ಯತೆಗಳು ಹೆಚ್ಚು, ಎಚ್ಚರಿಕೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಧ್ಯಮ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ನಿಮ್ಮ ಆಕರ್ಷಣೆ ಹಾಗೂ ವ್ಯಕ್ತಿತ್ವ ನೀವು ಹೊಸ ಸ್ನೇಹಿತರನ್ನು ಗಳಿಸಲು ಸಹಾಯ ಮಾಡುತ್ತದೆ. ಹೂಡಿಕೆ ವ್ಯವಹಾರದ ಕುರಿತು ಆಲೋಚನೆ ಮಾಡುವಿರಿ. ವ್ಯಾಪಾರ ವ್ಯವಹಾರದ ಕುರಿತಾಗಿ ಬೆಳೆಸಿದ ಪ್ರಯಾಣ ಲಾಭ ತಂದುಕೊಡಲಿದೆ. ಉದ್ಯೋಗಿಗಳಿಗೆ ಮೆಚ್ಚುಗೆ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಹತಾಶೆಯ ಭಾವನೆಯಿಂದ ಮನಸ್ಸಿನ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಲಾಭ ಸಿಗುವ ಸಾಧ್ಯತೆ ಇದೆ. ಪ್ರೀತಿ-ಪಾತ್ರರ ಜತೆ ವಾದಗಳಿಗೆ ಕಾರಣವಾಗಬಹುದಾದ ವಿವಾದಾತ್ಮಕ ವಿಷಯಗಳನ್ನು ತಪ್ಪಿಸಿ, ಎಚ್ಚರಿಕೆಯಿಂದ ಮಾತನಾಡಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಸದೃಢವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ ಅದೃಷ್ಟ ಸಂಖ್ಯೆ: 4

Horoscope Today

ಕಟಕ: ಮಾನಸಿಕವಾಗಿ ದೈಹಿಕವಾಗಿ ಆರೋಗ್ಯ ಪರಿಪೂರ್ಣವಾಗಿರಲಿದೆ. ಹರ್ಷ ತುಂಬಿದ ಮನಸ್ಸು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಹಳೆಯ ಬಾಕಿ ಮರುಪಾವತಿ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯಮಿಗಳಿಗೆ ಒಳ್ಳೆಯ ದಿನ. ವ್ಯಾಪಾರದ ಉದ್ದೇಶಕ್ಕಾಗಿ ಕೈಗೊಂಡ ಪ್ರವಾಸ ಸಕಾರಾತ್ಮಕ ಫಲಿತಾಂಶವನ್ನು ನೀಡುತ್ತದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಬಹಳ ದಿನಗಳಿಂದ ಕಾಡುತ್ತಿರುವ ಸಮಸ್ಯಗೆ ಪರಿಹಾರ ಸಿಗಲಿದೆ. ಭವಿಷ್ಯದ ಹೂಡಿಕೆ ವ್ಯವಹಾರದ ಕುರಿತಾಗಿ ಆಲೋಚನೆ ಮಾಡುವಿರಿ. ನಿಮ್ಮ ಹಿಂದೆ ನಿಮಗೆ ಆಗದವರು ಪಿತೂರಿ ನಡೆಸುವ ಸಾಧ್ಯತೆ ಇದೆ ಅಂತವರಿಂದ ಎಚ್ಚರಿಕೆ ಇರಲಿ. ದಿಢೀರ್‌ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ಸೃಜನಾತ್ಮಕ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಯಶಸ್ವಿ ದಿನ. ಭೂಮಿ ಸಂಬಂಧಿ ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ದಿನಕ್ಕಿಂತ ಹೆಚ್ಚಿನ ಸಂತೋಷ ಇರಲಿದೆ. ಆರ್ಥಿಕ ಚಟುವಟಿಕೆಗೆ ಗರಿಗೆದರಲಿದೆ. ದಿನದ ಕೊನೆಯಲ್ಲಿ ಕೌಟುಂಬಿಕ ಕಲಹಗಳು ನಡೆಯುವ ಸಾಧ್ಯತೆ ಇದೆ, ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಒತ್ತಡ ತುಂಬಿದ ವಾತಾವರಣ ಇರಲಿದೆ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರದಲ್ಲಿ ತೊಡಗಿರುವವರಿಗೆ ದಿನದ ಮಟ್ಟಿಗೆ ಹೆಚ್ಚಿನ ಲಾಭ ಸಿಗಲಿದೆ. ಕುಟುಂಬ ಸಹಿತರಾಗಿ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ವ್ಯಾಪಾರಿಗಳಿಗೆ ಹೆಚ್ಚಿನ ಲಾಭವಾಗಲಿದೆ. ನಿಮ್ಮ ಸಂತೋಷದ ಸಂಗತಿಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಆರ್ಥಿಕವಾಗಿ ಸಾಧಾರಣ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ.ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಧನಸ್ಸು: ಕೆಲವು ಪ್ರಮುಖ ನಿರ್ಧಾರಗಳು ನಿಮ್ಮ ಮೇಲೆ ಪರಿಣಾಮ ಬೀರಬಹುದು. ಅದರ ಹೊರತಾಗಿ ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ಕುಟುಂಬ ಸದಸ್ಯರ ಮಾತುಗಳು ನಿಮ್ಮನ್ನು ಘಾಸಿಗೊಳಿಸಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ.ಉದ್ಯೋಗಿಗಳಿಗೆ ಮಿಶ್ರ ಫಲ.ಆರ್ಥಿಕ ಪ್ರಗತಿ ಸಾಧಾರಣ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ಮಕರ: ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಅದರಲ್ಲಿಯೂ ಗರ್ಭಿಣಿಯರು ಹೆಚ್ಚಿನ ಮುತುವರ್ಜಿ ವಹಿಸಬೇಕು. ಅನಾವಶ್ಯಕ ಖರ್ಚುಗಳಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಸಂಬಂಧ ಪಡದೆ ಇರುವ ವಿಷಯದ ಕುರಿತು ಮೂಗು ತೂರಿಸುವುದು ಬೇಡ. ಟೀಕೆಗಳನ್ನು ಎದಿರಿಸಬೇಕಾದಿತು,ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕುಂಭ: ವಿವಾದಾತ್ಮಕ ವಿಷಯಗಳಿಂದ ದೂರ ಇರಿ. ಮಾತಿನಲ್ಲಿ ಹಿಡಿತವಿರಲಿ. ತಮ್ಮ ಬಳಿ ಯಾರಾದರೂ ಹಣದ ಸಹಾಯ ಬೇಡುವ ಸಾಧ್ಯತೆ ಇದೆ, ಆಲೋಚಿಸಿ ಹೆಜ್ಜೆ ಇಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಧ್ಯಮ ಫಲ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಮೀನ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಸಾಧನೆ ಮಾರ್ಗಸೂಚಿಯಾಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಸದೃಢತೆ ಇರಲಿದೆ. ಉದ್ಯೋಗಿಗಳಿಗೆ ಅಭದ್ರತೆಯ ಭಾವನೆ ಕಾಡಲಿದೆ. ನಿಮ್ಮ ಸಹನೆಯನ್ನು ಪರೀಕ್ಷಿಸು ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಬೆಂಗಳೂರು

Belekeri Port Scam : ಬೇಲಿಕೇರಿ ಅದಿರು ನಾಪತ್ತೆ ಪ್ರಕರಣ; ಕಾಂಗ್ರೆಸ್‌ ಶಾಸಕ ಸತೀಶ್‌ಗೆ 7 ವರ್ಷ ಜೈಲು

Belekeri Port Scam : ಬೇಲಿಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಕಾಂಗ್ರೆಸ್‌ ಶಾಸಕ ಸತೀಶ್‌ಗೆ 7 ವರ್ಷ ಜೈಲು ಶಿಕ್ಷೆ ಪ್ರಕಟಗೊಂಡಿದೆ.

VISTARANEWS.COM


on

By

Belekeri Port Scam Congress MLA Satish sentenced to 7 years in jail
Koo

ಬೆಂಗಳೂರು: ಬೇಲೆಕೇರಿ ಬಂದರು ಮೂಲಕ ಅಕ್ರಮ ಅದಿರು ನಾಪತ್ತೆ (Belekeri Port Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಐದು ವರ್ಷ ಜೈಲು ಶಿಕ್ಷೆ ಪ್ರಕಟಗೊಂಡಿದೆ. ಶಾಸಕ ಸತೀಶ್ ಸೈಲ್‌ಗೆ 7 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿ ಕೋರ್ಟ್‌ ಆದೇಶಿಸಿದೆ. ವಂಚನೆ ಪ್ರಕರಣದಲ್ಲಿ 7 ವರ್ಷ, ಕಳ್ಳತನ ಪ್ರಕರಣದಲ್ಲಿ ಮೂರು ವರ್ಷ ಹಾಗೂ ಒಂಬತ್ತು ಕೋಟಿ 60 ಲಕ್ಷ ರೂ. ದಂಡ ವಿಧಿಸಲಾಗಿದೆ. ಮೊದಲ ಕೇಸ್‌ನಲ್ಲಿ 6 ಕೋಟಿ ರೂ. ದಂಡ, 2ನೇ ಕೇಸ್‌ನಲ್ಲಿ 9.6 ಕೋಟಿ ರೂ., 3ನೇ ಕೇಸ್‌ನಲ್ಲಿ 9.36 ಕೋಟಿ ರೂ. 4 ಕೇಸ್‌ನಲ್ಲಿ 9.54 ಕೋಟಿ, 5ನೇ ಕೇಸ್‌ನಲ್ಲಿ 9.25 ಕೋಟಿ, 6ನೇ ಕೇಸ್‌ನಲ್ಲಿ 90 ಲಕ್ಷ ರೂ. ದಂಡವನ್ನು ಕೋರ್ಟ್‌ ವಿಧಿಸಿದೆ.

ಸಿಬಿಐ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಎಸ್.ಹೇಮಾ ವಾದ ಮಂಡಿಸಿದ್ದರು. 3100 ಮೆಟ್ರಿಕ್ ಟನ್ ಅದಿರು ಕಳ್ಳಸಾಗಣಿಕೆ ಮಾಡಿದ್ದಾರೆ. ಆರೋಪಿಗಳಿಗೆ ಜೈಲು ಶಿಕ್ಷೆಯ ಜತೆಗೆ ದಂಡ ವಿಧಿಸುವಂತೆ ಮನವಿ ಮಾಡಿದ್ದರು. ಶಾಸಕ ಸತೀಶ್ ಸೈಲ್ ಪರವಾಗಿ ಹಿರಿಯ ವಕೀಲ ಡಿ ಮೂರ್ತಿ ವಾದಿಸಿದ್ದರು. ಮೆಡಿಕಲ್ ರೆಕಾರ್ಡ್‌ಗಳನ್ನು ಕೋರ್ಟ್‌ಗೆ ಸಲ್ಲಿಸಿ, ಕನಿಷ್ಠ ಶಿಕ್ಷೆ ನೀಡುವಂತೆ ವಿನಂತಿಸಿದ್ದರು. ಸುದೀರ್ಘ ವಾದ-ವಿವಾದ ಆಲಿಸಿದ್ದ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ.

ಬಂಧಿತ ಆರೋಪಿಗಳು

1) ಸತೀಶ್ ಸೈಲ್‌ ಕಾರವಾರ ಕಾಂಗ್ರೆಸ್‌ ಶಾಸಕ
2) ಮಹೇಶ್ ಬಿಳಿಯ ಡೆಪ್ಯೂಟಿ ಪೋರ್ಟ್ ಕನ್ಸರ್ವೇಟರ್ ಅಧಿಕಾರಿ
3) ಪ್ರೇಮಚಂದ್ ಗರ್ಗ್ ಲಾಲ್ವುಹಲ್ ಕಂಪೆನಿಯ ಮಾಲೀಕ
4) ಖಾರದಪುಡಿ ಮಹೇಶ್ ಶ್ರೀಲಕ್ಷ್ಮಿ ವೆಂಕಟೇಶ್ವರ ಟ್ರೇಡರ್ಸ್ ಮಾಲೀಕ
5) ಕೆ ವಿ ನಾಗರಾಜ್ ಮತ್ತು ಗೋವಿಂದರಾಜು – ಸ್ವಸ್ತಿಕ್ ಕಂಪೆನಿಯ ಮಾಲೀಕ
6) ಚೇತನ್ ಆಶಾಪುರ ಕಂಪೆನಿಯ ಮಾಲೀಕ

Continue Reading

ಕೊಡಗು

Murder case : ಆಸ್ತಿಗಾಗಿ ಪ್ರಿಯಕರನ ಜತೆ ಸೇರಿ ಗಂಡನನ್ನೇ ಕೊಂದು ಬಿಟ್ಟಳು ಪಾಪಿ

Murder case : ಮಹಿಳೆಯೊಬ್ಬಳು ಆಸ್ತಿಗಾಗಿ ಪ್ರಿಯಕರನ ಜತೆ ಸೇರಿ ತನ್ನ ಪತಿಯನ್ನೇ ಕೊಂದು ಸುಟ್ಟುಹಾಕಿದ್ದಳು. ಪ್ರಕರಣವನ್ನು ಭೇದಿಸಿದ ಪೊಲೀಸರು ಆರೋಪಿಗಳನ್ನು ಜೈಲಿಗಟ್ಟಿದ್ದಾರೆ.

VISTARANEWS.COM


on

By

Murder Case
ಕೊಲೆಯಾದ ರಮೇಶ್
Koo

ಕೊಡಗು: ಅಕ್ಟೋಬರ್ 8ರಂದು ಕೊಡಗಿನ ಸುಂಟಿಕೊಪ್ಪ ಸಮೀಪ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ (Murder case) ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಪ್ರಕರಣವನ್ನು ಬೇಧಿಸಿದ್ದು, ತೆಲಂಗಾಣ ಮೂಲದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ ನಿಹಾರಿಕ (29), ಪಶು ವೈದ್ಯ ನಿಖಿಲ್ ಹಾಗೂ ಹರಿಯಾಣದ ಅಂಕುರ್ ಎಂಬುವವರು ಬಂಧಿತರು.

ಈ ಮೂವರು ರಿಯಲ್ ಎಸ್ಟೇಟ್ ಉದ್ಯಮಿ ರಮೇಶ್ (54) ಎಂಬಾತನನ್ನು ತೆಲಂಗಾಣದಲ್ಲಿ ಕೊಲೆ ಮಾಡಿ, ಕೊಡಗಿನಲ್ಲಿ ಸುಟ್ಟು ಹಾಕಿ ಕಾಲ್ಕಿತ್ತಿದ್ದರು. ಆಸ್ತಿಗಾಗಿ ನಿಹಾರಿಕ ಪ್ರಿಯಕರರ ಜತೆ ಸೇರಿ ತನ್ನ ಪತಿಯನ್ನೇ ಹತ್ಯೆ ಮಾಡಿದ್ದಳು. ಹತ್ಯೆ ಮಾಡಿ ನಂತರ ಕೊಡಗಿನ ಸುಂಟಿಕೊಪ್ಪದಲ್ಲಿ ಸುಟ್ಟು ಹಾಕಿದ್ದರು. ಪ್ರಕರಣ ಸಂಬಂಧ ಪೊಲೀಸರು ಸಿಸಿ ಕ್ಯಾಮೆರಾ ಸುಳಿವು ಆಧಾರಿಸಿ, ರೆಡ್ ಕಲರ್ ಬೆಂಜ್ ಕಾರಿನ ಹಿಂದೆ ಬಿದ್ದಿದ್ದರು. ಕಾರುಪತ್ತೆ ಮಾಡಿ ಆರೋಪಿಯನ್ನು ಬಂಧಿಸಲಾಗಿದೆ.

Murder Case
Murder Case

ನಿಹಾರಿಕ ತಾನು10ನೇ ತರಗತಿಯಲ್ಲಿಇರುವಾಗಲೇ ಮದುವೆಯಾಗಿದ್ದಳು. ಎರಡು ಮಕ್ಕಳಾದ ಮೇಲೆ ಪತಿಗೆ ಡಿವೋಸ್‌ ಕೊಟ್ಟು ದೂರವಾಗಿದ್ದಳು. ಬಳಿಕ ಜೈಲಿನಲ್ಲಿದ್ದ ಅಂಕುರ್ ಎಂಬಾತನ ಪರಿಚಯವಾಗಿತ್ತು.ಈ ಅಂಕುರ್‌ ಮೂಲಕ ರಮೇಶ್‌ನ ಪರಿಚಯವಾಗಿ ಮದುವೆಯಾಗಿದ್ದಳು. ರಮೇಶ್‌ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಿದ್ದರು. ಈ ನಡುವೆ ನಿಹಾರಿಕ ನಿಖಿಲ್‌ ಜತೆಗೂ ಲಿವಿಂಗ್ ರಿಲೇಶನ್ ಶಿಪ್‌ನಲ್ಲಿ ಇದ್ದಳು.

ನಿಹಾರಿಕ ಅಂಕುರ್‌ನೊಂದಿಗೆ ಸೇರಿ ಆಸ್ತಿ ನೀಡುವಂತೆ ರಮೇಶ್‌ನಿಗೆ ಕಿರುಕುಳ ನೀಡುತ್ತಿದ್ದರು. ಆಸ್ತಿ ನೀಡದೇ ಇದ್ದದ್ದಕ್ಕೆ ಹೈದರಾಬಾದ್ ಸಮೀಪ ಹಗ್ಗದಿಂದ ಬಿಗಿದು ರಮೇಶ್‌ನ ಕೊಲೆ ಮಾಡಿದ್ದರು. ಕೊಲೆ ಮಾಡಿ ಬಳಿಕ ರಮೇಶ್‌ನ ಕಾರಿನಲ್ಲೇ ಆತನ ಅಪಾರ್ಟ್ಮೆಂಟ್‌ಗೆ ಹೋಗಿ ಹಣ, ಆಸ್ತಿ ದಾಖಲೆ ದೋಚಿದ್ದರು. ನಂತರ ಬೆಂಗಳೂರಿಗೆ ಬಂದು ಪೆಟ್ರೋಲ್ ಖರೀದಿಸಿ, ಕೊಡಗಿಗೆ ತಂದು ರಮೇಶ್‌ ಬಾಡಿಯನ್ನು ಸುಟ್ಟು ಹಾಕಿದ್ದರು. ಕೊಲೆ ಬಳಿಕ ಅಂಕುರ್ ದೆಹಲಿ, ಹರಿಯಾಣ ಅಂತ ಸುತ್ತಾಡಿದ್ದ.

Continue Reading

ಬೆಂಗಳೂರು

Rajakaluve Encroachment : ರಾಜಕಾಲುವೆ ಒತ್ತುವರಿ ತೆರವಿಗೆ ಮುಹೂರ್ತ ಫಿಕ್ಸ್; ಮತ್ತೆ ಗರ್ಜಿಸಲಿದೆ ಬುಲ್ಡೋಜರ್

Rajakaluve Encroachment: ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಸಂಬಂಧ ಬಿಬಿಎಂಪಿ ಡೆಮಾಲಿಷನ್ ಡ್ರೈವ್ ಮತ್ತೆ ಶುರು ಮಾಡಲು ಮುಂದಾಗಿದೆ. ಹಿಂದೊಮ್ಮೆ ಸ್ಟೇ ಆರ್ಡರ್‌ ಬರುತ್ತಿದ್ದಂತೆ, ಅಧಿಕಾರಿಗಳು ಠುಸ್‌ ಪಟಾಕಿ ಆಗಿದ್ದರು. ಇದೀಗ ಮತ್ತೆ ಡೆಮಾಲಿಷನ್‌ ಕೆಲಸಕ್ಕೆ ಕೈಹಾಕಿದೆ.

VISTARANEWS.COM


on

By

Rajakaluve Encroachment
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬೃಹತ್‌ ಬೆಂಗಳೂರು ಪಾಲಿಕೆ ವ್ಯಾಪ್ತಿಯ ರಾಜಕಾಲುವೆ, ಕೆರೆಗಳನ್ನು ಒತ್ತುವರಿ ಮಾಡಿದ ಕಟ್ಟಡ ಮಾಲೀಕರಿಗೆ (Rajakaluve Encroachment) ಅಧಿಕಾರಿಗಳು ಶಾಕ್ ಕೊಡಲಿದ್ದಾರೆ. ಕಳೆದ ವಾರ ಸುರಿದ ಭಾರಿ ಮಳೆಗೆ ರಾಜಕಾಲುವೆಗಳ ನೀರು ರಸ್ತೆಗೆ ಹರಿದಿತ್ತು. ಇದರಿಂದ ಸರ್ಕಾರಕ್ಕೆ ಹಾಗೂ ಬಿಬಿಎಂಪಿಗೆ ಜನ ಇಡಿ ಶಾಪ ಹಾಕಿದ್ದರು, ಇದು ಸರ್ಕಾರಕ್ಕೆ ಮುಜುಗರ ಉಂಟಾಗಿತ್ತು. ಇತ್ತ ಖುದ್ದು ಡಿಸಿಎಂ ಶಿವಕುಮಾರ್‌ ಕೂಡ ಒತ್ತುವರಿ ತೆರವಿಗೆ ಆದೇಶ ನೀಡಿದ್ದರು.

ಈ ಹಿನ್ನೆಲೆಯಲ್ಲಿ ರಾಜಕಾಲುವೆ, ಕೆರೆ ಒತ್ತುವರಿ ಮಾಡಿದ ಕಟ್ಟಡ ಮಾಲೀಕರಿಗೆ ಬಿಸಿ ಮುಟ್ಟಿಸಲು ಬಿಬಿಎಂಪಿ ಮುಂದಾಗಿದೆ. ಈಗಾಗಲೇ 1,712 ಕಟ್ಟಡಗಳು ರಾಜಕಾಲುವೆ ಒತ್ತುವರಿ ಮಾಡಿರುವ ವರದಿ ಸಿದ್ದವಾಗಿದೆ. ಅದರಲ್ಲಿ 196 ಕಟ್ಟಡಗಳ ಕೇಸ್ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿ ಇದೆ. ಉಳಿದಂತೆ 167 ಕಟ್ಟಡಗಳ ಸರ್ವೆ ಕಾರ್ಯ ಮುಗಿದಿದೆ. ತಹಸೀಲ್ದಾರರು ಆದೇಶ ನೀಡಿದ್ರೆ ಒತ್ತುವರಿ ತೆರವಿಗೆ ಬಿಬಿಎಂಪಿ ಮುಂದಾಗಲಿದೆ.

ಸದ್ಯ 1712 ಒತ್ತುವರಿ ಪ್ರಕರಣಗಳಲ್ಲಿ 300 ಕಡೆ ಖಾಲಿ ನಿವೇಶನ ಇದ್ದು, ಈಗಾಗಲೇ ಒತ್ತುವರಿ ತೆರವು ಮಾಡಲಾಗಿದೆ. ಉಳಿದ 800 ಕಡೆ ಒತ್ತುವರಿ ತೆರವು ಬಾಕಿ ಇದೆ. ಯಾವ್ಯಾವ ವಲಯಗಳಲ್ಲಿ ಒತ್ತುವರಿ ಆಗಿದೆ ಎಂದು ನೋಡುವುದಾದರೆ, ಪೂರ್ವ ವಲಯದಲ್ಲಿ 123, ಪಶ್ಚಿಮ 46, ದಕ್ಷಿಣ 46, ಕೋರಮಂಗಲ ಕಣೆವೆ 104, ಹಾಗೂ ಯಲಹಂಕ 359, ಮಹಾದೇವಪುರ 492, ಬೊಮ್ಮನಹಳ್ಳಿ 201, ಆರ್ ಆರ್ ನಗರ 104 ಸೇರಿದಂತೆ ದಾಸರಹಳ್ಳಿ 207

Continue Reading
Advertisement
Dina Bhavishya
ಭವಿಷ್ಯ3 ಗಂಟೆಗಳು ago

Dina Bhavishya : ಅತ್ಯಂತ ಪ್ರೀತಿಯ ಕನಸು ನನಸಾಗುವ ದಿನವಿದು

Belekeri Port Scam Congress MLA Satish sentenced to 7 years in jail
ಬೆಂಗಳೂರು13 ಗಂಟೆಗಳು ago

Belekeri Port Scam : ಬೇಲಿಕೇರಿ ಅದಿರು ನಾಪತ್ತೆ ಪ್ರಕರಣ; ಕಾಂಗ್ರೆಸ್‌ ಶಾಸಕ ಸತೀಶ್‌ಗೆ 7 ವರ್ಷ ಜೈಲು

Murder Case
ಕೊಡಗು17 ಗಂಟೆಗಳು ago

Murder case : ಆಸ್ತಿಗಾಗಿ ಪ್ರಿಯಕರನ ಜತೆ ಸೇರಿ ಗಂಡನನ್ನೇ ಕೊಂದು ಬಿಟ್ಟಳು ಪಾಪಿ

Rajakaluve Encroachment
ಬೆಂಗಳೂರು22 ಗಂಟೆಗಳು ago

Rajakaluve Encroachment : ರಾಜಕಾಲುವೆ ಒತ್ತುವರಿ ತೆರವಿಗೆ ಮುಹೂರ್ತ ಫಿಕ್ಸ್; ಮತ್ತೆ ಗರ್ಜಿಸಲಿದೆ ಬುಲ್ಡೋಜರ್

karnataka Weather Forecast
ಮಳೆ1 ದಿನ ago

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

dina bhavishya
ಭವಿಷ್ಯ1 ದಿನ ago

Dina Bhavishya: ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನಾಡಿ ಅಪಾಯ ತಂದುಕೊಳ್ಳಬೇಡಿ

kea
ಬೆಂಗಳೂರು2 ದಿನಗಳು ago

KEA: ನಾಳೆ ಕನ್ನಡ ಕಡ್ಡಾಯ ಪರೀಕ್ಷೆ; ಅ.27ಕ್ಕೆ ಬಿಗಿ ಬಂದೋಬಸ್ತ್ ನಡೆಯಲಿದೆ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

assault Case
ಕೊಡಗು2 ದಿನಗಳು ago

Assault case: ಟ್ರಾಫಿಕ್‌ ಪೊಲೀಸ್‌ ಮೇಲೆಯೇ ಕಾರು ಹರಿಸಿ ಪರಾರಿ ಆಗಿದ್ದ ಚಾಲಕ ಅರೆಸ್ಟ್‌

actor darshan
ಪ್ರಮುಖ ಸುದ್ದಿ2 ದಿನಗಳು ago

Actor Darshan : ದರ್ಶನ್‌ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌; ನ.8ರಂದು ನವಗ್ರಹ ಸಿನಿಮಾ ರೀ-ರಿಲೀಸ್‌

Bengaluru News
ಬೆಂಗಳೂರು2 ದಿನಗಳು ago

Bengaluru News : ಪ್ರಿಯಕರನ ಕಣ್ಮುಂದೆಯೇ ಯುವತಿ ಮೇಲೆ ಎರಗಿದ್ದ ಕಾಮುಕರಿಗೆ ಜೀವಾವಧಿ ಶಿಕ್ಷೆ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ11 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ3 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌