Site icon Vistara News

IND vs SL ODI : ಲಂಕಾ ವಿರುದ್ಧ ಪಂದ್ಯದ ವೇಳೆ ಕಪ್ಪು ಪಟ್ಟಿ ಕಟ್ಟಿಕೊಂಡು ಮೈದಾನಕ್ಕೆ ಇಳಿದ ರೋಹಿತ್​ ಪಡೆ

IND vs SL ODI

ಬೆಂಗಳೂರು: ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ನಿಧನದ ಹಿನ್ನೆಲೆಯಲ್ಲಿ ಕೊಲಂಬೊದಲ್ಲಿ ನಡೆದ ಶ್ರೀಲಂಕಾ (IND vs SL ODI) ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ಆಟಗಾರರು ತೋಳಿನಲ್ಲಿ ಕಪ್ಪು ಪಟ್ಟಿ ಧರಿಸಿದ್ದರು. ರಕ್ತದ ಕ್ಯಾನ್ಸರ್​ನಿಂದ ಬಳಲುತ್ತಿದ್ದ ಭಾರತದ ಮಾಜಿ ಕ್ರಿಕೆಟಿಗ ಜುಲೈ 31 ರಂದು ತಮ್ಮ 71 ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದರು. ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಶುಕ್ರವಾರ (ಆಗಸ್ಟ್ 2) ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಕಪ್ಪು ಪಟ್ಟಿ ಧರಿಸಿ ಆಡಿದರು.

“ಬುಧವಾರ ನಿಧನರಾದ ಭಾರತದ ಮಾಜಿ ಕ್ರಿಕೆಟಿಗ ಮತ್ತು ತರಬೇತುದಾರ ಅಂಶುಮಾನ್ ಗಾಯಕ್ವಾಡ್ ಅವರ ಸ್ಮರಣಾರ್ಥ ಟೀಮ್ ಇಂಡಿಯಾ ಇಂದು ಕಪ್ಪು ತೋಳುಗಳನ್ನು ಧರಿಸಿದೆ” ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

ಅನ್ಶುಮಾನ್ ಗಾಯಕ್ವಾಡ್ 40 ಟೆಸ್ಟ್ ಮತ್ತು 15 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅವರು 2 ಶತಕ ಸಮೇತ 2254 ರನ್ ಗಳಿಸಿದ್ದಾರೆ. 1983 ರಲ್ಲಿ ಜಲಂಧರ್​ನಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ 201 ಗರಿಷ್ಠ ಸ್ಕೋರ್ ಗಳಿಸಿದ್ದಾರೆ. ಅವರು ಸಚಿನ್ ತೆಂಡೂಲ್ಕರ್ ಮತ್ತು ಸೌರವ್ ಗಂಗೂಲಿ ಅವರಂತಹ ಹಿರಿಯ ರಾಷ್ಟ್ರೀಯ ಪುರುಷರ ತಂಡಕ್ಕೆ ತರಬೇತುದಾರರಾಗಿದ್ದರು. ಮಾಜಿ ಕ್ರಿಕೆಟಿಗ ಅನ್ಶುಮಾನ್ ತಮ್ಮ ಕೊನೆಯ ದಿನಗಳನ್ನು ಆಸ್ಪತ್ರೆಯಲ್ಲಿ ಕಳೆದಾಗ ಅವರ ಚಿಕಿತ್ಸೆಗೆ ಬಿಸಿಸಿಐ 1 ಕೋಟಿ ರೂಪಾಯಿ ಆರ್ಥಿಕ ನೆರವು ಘೋಷಿಸಿತ್ತು.

ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಶ್ರೀಲಂಕಾ ತಂಡ

ಶುಕ್ರವಾರ ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಕೊಲಂಬೊದಲ್ಲಿ ನಡೆಯುತ್ತಿರುವ ಬಹುನಿರೀಕ್ಷಿತ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ಜತೆಗೂಡಿ ಗೆಲುವಿಗಾಗಿ ಯತ್ನಿಸಲಿದೆ. ಆರಂಭದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಆಡುವುದಿಲ್ಲ ಎಂದು ಹೇಳಲಾಗಿತ್ತು. ಅಂತಿಮವಾಗಿ ಭಾರತ ತಂಡಕ್ಕೆ ಅವರು ಸೇರಿಕೊಂಡಿದ್ದರು. ಭಾರತ ಮುಂದಿನ ವರ್ಷ ಫೆಬ್ರವರಿ-ಮಾರ್ಚ್​​ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ ತನ್ನ ಸಿದ್ಧತೆ ಪ್ರಾರಂಭಿಸಿದೆ.

ಇದನ್ನೂ ಓದಿ: Swapnil Kusale : ಒಲಿಂಪಿಕ್ಸ್ ಪದಕ ಹೀರೋ ಸ್ವಪ್ನಿಲ್​ಗೆ ರೈಲ್ವೆಯ ಟಿಕೆಟ್ ಕಲೆಕ್ಟರ್​ ಹುದ್ದೆಯಿಂದ ಡಬಲ್​ ಪ್ರಮೋಷನ್​!

ಏಕದಿನ ಸರಣಿಯ ಭಾಗವಾಗದ ಹಾರ್ದಿಕ್ ಪಾಂಡ್ಯ ತಂಡದಲ್ಲಿ ಇಲ್ಲ. ಇದೇ ವೇಲೆ ರಿಷಭ್ ಪಂತ್ ಅವರನ್ನು ಕೈಬಿಟ್ಟು ಕೆಎಲ್ ರಾಹುಲ್ ಅವರನ್ನು ಭಾರತ ತನ್ನ ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತವು ಶ್ರೀಲಂಕಾವನ್ನು ಟಿ 20 ಐ ಸರಣಿಯಲ್ಲಿ 3-0 ಅಂತರದಿಂದ ಸೋಲಿಸಿದ ನಂತರ ಏಕದಿನ ಸರಣಿಗೆ ಬಂದಿದೆ.

Exit mobile version