Site icon Vistara News

Independence day 2024: ವಿಕಸಿತ ಭಾರತ @2047 ಎಂಬುದು ಕೇವಲ ಪದಗಳಲ್ಲ..140 ಕೋಟಿ ಜನರ ಸಂಕಲ್ಪ-ಪ್ರಧಾನಿ ಮೋದಿ

Independence Day 2024

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ಇಂದು ದಿಲ್ಲಿಯ ಕೆಂಪುಕೋಟೆಯ (Red Fort) ಮೇಲೆ 78ನೇ ಸ್ವಾತಂತ್ರ್ಯೋತ್ಸವದ(Independence day 2024)ದ ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಸಂಖ್ಯಾತ ಸ್ವಾತಂತ್ರ್ಯ ಪ್ರೇಮಿಗಳ ಬಲಿದಾನಕ್ಕೊಂದು ದೊಡ್ಡ ಪ್ರಣಾಮ. ವಿಕಸಿತ ಭಾರತ @ 2047 ಕೇವಲ ಪದಗಳಲ್ಲ. 140 ಕೋಟಿ ಜನರ ಸಂಕಲ್ಪ ಎಂದು ಹೇಳಿದರು.

ಪ್ರಕೃತಿ ವಿಕೋಪದಿಂದ ಹಲವಾರು ಮಂದಿ ತಮ್ಮ ಕುಟುಂಬ, ಆಸ್ತಿಯನ್ನು ಕಳೆದುಕೊಂಡಿದ್ದಾರೆ. ಹೊರ ರಾಷ್ಟ್ರವೂ ನಷ್ಟ ಅನುಭವಿಸಿದೆ. ಇಂದು, ನಾನು ಅವರೆಲ್ಲರಿಗೂ ನನ್ನ ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇನೆ ಮತ್ತು ಈ ಬಿಕ್ಕಟ್ಟಿನ ಸಮಯದಲ್ಲಿ ಈ ರಾಷ್ಟ್ರವು ಅವರೊಂದಿಗೆ ನಿಲ್ಲುತ್ತದೆ ಎಂದು ನಾನು ಅವರಿಗೆ ಭರವಸೆ ನೀಡುತ್ತೇನೆ. ಇಂದು ನಾವು 140 ಕೋಟಿ ಜನರಿದ್ದೇವೆ, ನಾವು ಸಂಕಲ್ಪ ಮಾಡಿ ಒಂದು ದಿಕ್ಕಿನಲ್ಲಿ ಒಟ್ಟಾಗಿ ಸಾಗಿದರೆ, 2047 ರ ವೇಳೆಗೆ ನಾವು ಎಲ್ಲಾ ಅಡೆತಡೆಗಳನ್ನು ನಿವಾರಿಸಿ ‘ವಿಕಸಿತ ಭಾರತ್’ ಕನಸು ನನಸಾಗುವುದರಲ್ಲಿ ಸಂಶಯವಿಲ್ಲ ಎಂದರು.

ಕೋಲ್ಕತಾ ವೈದ್ಯೆ ಕೊಲೆ ಬಗ್ಗೆ ಪ್ರಸ್ತಾಪ

ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಕೋಲ್ಕತ್ತಾದಲ್ಲಿ ನಡೆದಿರುವ ಟ್ರೈನಿ ವೈದ್ಯೆ ಅತ್ಯಾಚಾರ ಕೊಲೆ ಪ್ರಕರಣದ ಬಗ್ಗೆ ಪ್ರಸ್ತಾಪಿಸಿ ಆಕ್ರೋಶ ಹೊರಹಾಕಿದ್ದಾರೆ. ನಮ್ಮ ಮಾತೆ ಸಹೋದರಿಯರ ಮೇಲೆ ಅತ್ಯಾಚಾರ ನಡೆಯುತ್ತಿದೆ. ಪಾಪಿಗಳನ್ನು ಗಲ್ಲಿಗೇರಿಸಬೇಕು. ಆಗ ಮಾತ್ರ ಜನರಲ್ಲಿ ಅಪರಾಧಗಳ ಬಗ್ಗೆ ಭಯ ಮೂಡಲು ಸಾಧ್ಯ. ದೇಶದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಬಹಳ ಉಗ್ರವಾಗಿ ಧ್ವನಿ ಎತ್ತಬೇಕಿದೆ. ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳ ತನಿಖೆ ನಡೆಸಿ ತಪ್ಪಿತಸ್ಥರನ್ನು ವಿಳಂಬ ಮಾಡದೆ ಶಿಕ್ಷಿಸಬೇಕು ಎಂದರು.

ಪ್ರಧಾನಿ ಭಾಷಣದ ಪ್ರಮುಖಾಂಶಗಳು

ಕಾರ್ಯಕ್ರಮದಲ್ಲಿ ಬುಡಕಟ್ಟು ಸಮುದಾಯಗಳು, ರೈತರು, ಮಹಿಳೆಯರು, ಆಶಾ ಕಾರ್ಯಕರ್ತರು, ನರ್ಸ್ ಶುಶ್ರೂಷಕಿಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಒಲಿಂಪಿಕ್‌ ಕ್ರೀಡಾಪಟುಗಳು ಸೇರಿ ಬರೋಬ್ಬರಿ 6,000 ವಿಶೇಷ ಅತಿಥಿಗಳು ಭಾಗವಹಿಸಿದ್ದಾರೆ. ಇನ್ನು ಧ್ವಜಾರೋಹಣದ ಬಳಿಕ ಸತತ 11ನೇ ಬಾರಿ ಭಾಷಣ ಮಾಡುವ ಮೂಲಕ ಮಾಜಿ ಪ್ರಧಾನಿಗಳಾದ ಜವಾಹರಲಾಲ್‌ ನೆಹರೂ ಮತ್ತು ಇಂದಿರಾ ಗಾಂಧಿ ಅವರ ದಾಖಲೆಯನ್ನು ಪ್ರಧಾನಿ ಮೋದಿ ಸರಿಗಟ್ಟಿದ್ದಾರೆ.

ಇದನ್ನೂ ಓದಿ: PM Narendra Modi: ಕೆಂಪುಕೋಟೆಯ ಕಾರ್ಯಕ್ರಮಕ್ಕೆ ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ

Exit mobile version