ಬೆಂಗಳೂರು : ಆಗಸ್ಟ್ 17 ರ ಶನಿವಾರ ಬೆಳಿಗ್ಗೆ 6 ರಿಂದ ಆಗಸ್ಟ್ 18 ರ ಭಾನುವಾರ ಬೆಳಿಗ್ಗೆ 6 ರವರೆಗೆ 24 ಗಂಟೆಗಳ ಕಾಲ ವೈದ್ಯರು ರಾಷ್ಟ್ರವ್ಯಾಪಿ ಅಗತ್ಯವಲ್ಲದ ಸೇವೆಗಳನ್ನು ನೀಡುವುದಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಘ (Indian Medical Association ) ಗುರುವಾರ ಘೋಷಿಸಿದೆ. ಕೋಲ್ಕತ್ತಾದ ವೈದ್ಯಕೀಯ ಕಾಲೇಜಿನಲ್ಲಿ ತರಬೇತಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಘಟನೆಯನ್ನು ವಿರೋಧಿಸಿ ವೈದ್ಯರ ಸಂಘ ಪ್ರತಿಭಟನೆಗೆ ಕರೆ ನೀಡಿದೆ. ಅದಕ್ಕಾಗಿ ಸಾಂಕೇತಿಕವಾಗಿ ಕೆಲವು ಸೇವೆಗಳನ್ನು ನೀಡದಿರಲು ನಿರ್ಧರಿಸಲಾಗಿದೆ ಎಂದು ಐಎಂಎ ಹೇಳಿಕೆಯಲ್ಲಿ ತಿಳಿಸಿದೆ.
ಎಲ್ಲಾ ಅಗತ್ಯ ಸೇವೆಗಳನ್ನು ನೀಡಲಾಗುವುದು. ಆದರೆ ಒಪಿಡಿಗಳು ಕಾರ್ಯನಿರ್ವಹಿಸುವುದಿಲ್ಲ. ಅದೇ ರೀತಿ ತುರ್ತು ಅಗತ್ಯವಿಲ್ಲದ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗುವುದಿಲ್ಲ. ಆಧುನಿಕ ವೈದ್ಯಕೀಯ ಸೇವೆ ಸಿಗುವುದಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಎಂದು ಐಎಂಎ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ. ವೈದ್ಯರ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ಇದೇ ವೇಳೆ ಖಂಡಿಸಲಾಗಿದೆ.
ಕಳೆದ ವಾರ ತರಬೇತಿ ವೈದ್ಯೆಯನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿದ ಕೋಲ್ಕತ್ತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದರು. ಕೆಲವೇ ಗಂಟೆಗಳ ನಂತರ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ (ಫೋರ್ಡಾ) ಗುರುವಾರ ಮುಷ್ಕರ ಆರಂಭಿಸಿತ್ತು. ವೈದ್ಯರ ಸಂಘವು ಮಂಗಳವಾರ ಮುಷ್ಕರ ಹಿಂತೆಗೆದುಕೊಳ್ಳಲು ನಿರ್ಧರಿಸಿದ ಎರಡು ದಿನಗಳ ನಂತರ ವೈದ್ಯಕೀಯ ಸಂಘದ ಪ್ರತಿಭಟನೆ ಪ್ರಕಟಗೊಂಡಿದೆ.
ಇದನ್ನೂ ಓದಿ: Physical Abuse : ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ನರ್ಸ್ ಮೇಲೆ ಅತ್ಯಾಚಾರ ನಡೆಸಿ ಕೊಲೆ
ಆರ್ಜಿ ಕಾರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಘಟನೆ ಹಿನ್ನೆಲೆಯಲ್ಲಿ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ (ಫೋರ್ಡಾ) ಮುಷ್ಕರ ಮುಂದುವರಿಸಿದೆ. ಅಪರಿಚಿತ ದುಷ್ಕರ್ಮಿಗಳು ಗುರುವಾರ ಮುಂಜಾನೆ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣಕ್ಕೆ ಪ್ರವೇಶಿಸಿ ಆಸ್ಪತ್ರೆಯಲ್ಲಿನ ಕೆಲವು ಭಾಗಗಳನ್ನು ಧ್ವಂಸಗೊಳಿಸಿದ್ದರು. ಅತ್ಯಾಚಾರ ಘಟನೆಯ ಬಳಿಕ ಮಹಿಳೆಯರು ಮಧ್ಯರಾತ್ರಿ ಪ್ರತಿಭಟನೆ ನಡೆಸಿದ ಮಧ್ಯೆ ಈ ದಾಳಿ ನಡೆದಿದೆ.