ಮೈಸೂರು: ಯೋಗ ನಗರಿ ಖ್ಯಾತಿಯ ಮೈಸೂರಿನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಧಾನ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ನಿಗದಿತ ಸಮಯಕ್ಕೆ ಅವರು ವೇದಿಕೆಗೆ ಆಗಮಿಸಿದ್ದು, ಸಾಂಸ್ಕೃತಿಕ ನಗರಿಯಲ್ಲಿ ಯೋಗದ ಸಂಭ್ರಮ ಮುಗಿಲು ಮುಟ್ಟಿದೆ.
ಪ್ರಧಾನಿ ಮೋದಿ ನಿರೀಕ್ಷೆಯಂತೆ ನಿಗದಿತ ಸಮಯಕ್ಕೆ ಸರಿಯಾಗಿ ತಾವು ಉಳಿದುಕೊಂಡಿದ್ದು, ಹೋಟೇಲ್‌ನಿಂದ ಅವರು ಹೊರ ಬರುತ್ತಿದ್ದಂತೆಯೇ ಅಭಿಮಾನಿಗಳು ಜೈಕಾರದ ಘೋಷಣೆಯೊಂದಿಗೆ ಅವರನ್ನು ಸ್ವಾಗತಿಸಿದರು. ಒಂದಕ್ಷಣ ನಿಂತ ಮೋದಿ ಅಭಿಮಾನಿಗಳತ್ತ ಕೈ ಬೀಸಿದರು.
ಎಂದಿನ ಉತ್ಸಾಹದಿಂದಲೇ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ತಾವು ಪ್ರತಿನಿತ್ಯ ಮಾಡುವ ಯೋಗವನ್ನು ಇಂದು ಸಾರ್ವಜನಿಕವಾಗಿ ಪ್ರದರ್ಶಿಸಲಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನದ ಲೋಗೊ ಹೊಂದಿದ ಬಿಳಿ ಟೀ ಶರ್ಟ್ ಅನ್ನು ಅವರು ಧರಿಸಿದ್ದಾರೆ.
ಅರಮನೆ ಆವರಣದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ವೇದಿಕೆಯಲ್ಲಿ ಪ್ರಧಾನಿ ಆಗಮಿಸುವುದಕ್ಕಿಂತ ಮೊದಲೇ ಸಂಸದ ಪ್ರತಾಪ್ ಸಿಂಗ್ ಮೈಸೂರು ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಪ್ರಮೋದಾದೇವಿ ಒಡೆಯರ್ ಉಪಸ್ಥಿತರಿದ್ದರು.
ಎಲ್ಲರೂ ಪ್ರಧಾನಿ ಆಗಮಿಸುತ್ತಿದ್ದಂತೆಯೇ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಆಯುಷ್ ಸಚಿವ ಸರ್ವಾನಂದ್ ಸೋನುವಾಲ್, ಆರೋಗ್ಯ ಸಚಿವ ಡಾ.ಸುಧಾಕರ್, ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ ಕಾರ್ಯಕ್ರಮದಲ್ಲಿ ಭಾಗಿಯಾದರು.
ಕೇಂದ್ರ ಆಯುಷ್ ಇಲಾಖೆ ಸಚಿವ ಸರ್ಬಾನಂದ ಸೋನಾವಾಲ್ ಅವರು ಪ್ರಸ್ತಾವಿಕವಾಗಿ ಮಾತನಾಡಿದರು. ನಂತರ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು. ಮೋದಿಯವರ ಯೋಗದಿನಾಚರಣೆಯ ಸಂದೇಶದೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಆರಂಭವಾಯಿತು.…
ಇದನ್ನೂ ಓದಿ | Yoga Day 2022 | ಯೋಗ ಜೀವನದ ಭಾಗವಲ್ಲ, ಜೀವನ ಮಾರ್ಗ ಎಂದ ಮೋದಿ