Site icon Vistara News

IPL 2024 : ಬದಲಿ ಆಟಗಾರರನ್ನು ಘೋಷಿಸಿದ ರಾಜಸ್ಥಾನ್​ ರಾಯಲ್ಸ್​, ಕೆಕೆಆರ್​​

Rajasthan Royals

ಬೆಂಗಳೂರು: ಕೋಲ್ಕತಾ ನೈಟ್ ರೈಡರ್ಸ್ (KKR) ಮತ್ತು ರಾಜಸ್ಥಾನ್ ರಾಯಲ್ಸ್ (Rajasathan Royals) ಕ್ರಮವಾಗಿ ಮುಜೀಬ್ ಉರ್ ರೆಹಮಾನ್ ಮತ್ತು ಪ್ರಸಿದ್ಧ್ ಕೃಷ್ಣ ಅವರ ಬದಲಿಗೆ ಹೊಸ ಆಟಗಾರರನ್ನು ಘೋಷಿಸಿವೆ. ಇಬ್ಬರೂ ಆಟಗಾರರು ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024) ನಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ. ಫೆಬ್ರವರಿ 23, 2024 ರಂದು ಎಡ ಪ್ರಾಕ್ಸಿಮಲ್ ಕ್ವಾಡ್ರಿಸೆಪ್ಸ್ ಸ್ನಾಯುವಿನ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಪ್ರಸಿದ್ಧ್ ಕೃಷ್ಣ ಐಪಿಎಲ್ 2024 ರಲ್ಲಿ ಭಾಗವಹಿಸುವುದಿಲ್ಲ ಎಂದು ಬಿಸಿಸಿಐ ಈ ತಿಂಗಳ ಆರಂಭದಲ್ಲಿ ದೃಢಪಡಿಸಿತ್ತು.

ಬೌಲರ್ ಶೀಘ್ರದಲ್ಲೇ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತನ್ನ ಪುನಶ್ಚೇತನವನ್ನು ಪುನರಾರಂಭಿಸಲಿದ್ದಾರೆ ಎಂದು ಮಂಡಳಿ ತಿಳಿಸಿತ್ತು. ಗಾಯದಿಂದಾಗಿ ಪ್ರಸಿದ್ಧ್ ಕೃಷ್ಣ ಸತತ ಎರಡನೇ (IPL 2024) ಐಪಿಎಲ್ ಋತುವಿನಿಂದ ಹೊರಗುಳಿಯುವಂತಾಗಿದೆ. ಅವರು ಇಡೀ ಐಪಿಎಲ್ 2023 ರಿಂದ ಹೊರಗುಳಿದಿದ್ದರು. ಐಪಿಎಲ್ 2022 ರಲ್ಲಿ, ಅವರು 19 ವಿಕೆಟ್​​ಗಳನ್ನು ಪಡೆಯುವ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 2008 ರ ನಂತರ ಮೊದಲ ಬಾರಿಗೆ ಫೈನಲ್ಸ್​ಗೆ ಅರ್ಹತೆ ಪಡೆಯಲು ಸಹಾಯ ಮಾಡಿದ್ದರು.

ಪ್ರಸಿದ್ಧ್ ಕೃಷ್ಣ ಅವರನ್ನು ಕೈಬಿಟ್ಟಿರುವುದರಿಂದ ಆರ್​ಆರ್​​ ದಕ್ಷಿಣ ಆಫ್ರಿಕಾದ ಸ್ಪಿನ್ನರ್ ಕೇಶವ್ ಮಹಾರಾಜ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಅನುಭವಿ ಸ್ಪಿನ್ನರ್ ಆಗಿರುವ ಮಹಾರಾಜ್ ಇನ್ನೂ ಐಪಿಎಲ್​​ನಲ್ಲಿ ಆಡಿಲ್ಲ. 27 ಟಿ20, 44 ಏಕದಿನ ಹಾಗೂ 50 ಟೆಸ್ಟ್ ಪಂದ್ಯಗಳನ್ನಾಡಿರುವ ಅವರು 237 ವಿಕೆಟ್ ಕಬಳಿಸಿದ್ದಾರೆ. 130 ಟಿ20 ಪಂದ್ಯಗಳಲ್ಲಿ 130 ವಿಕೆಟ್ ಪಡೆದಿದ್ದಾರೆ. ಆರ್​ಆರ್​​ ಅವರನ್ನು ಮೂಲ ಬೆಲೆ 50 ಲಕ್ಷ ರೂ.ಗೆ ಖರೀದಿಸಿದೆ.

ಇದನ್ನೂ ಓದಿ: Rishabh Pant : ಡೆಲ್ಲಿ ಪರ 100ನೇ ಪಂದ್ಯವಾಡಿದ ರಿಷಭ್ ಪಂತ್​!

ಮತ್ತೊಂದೆಡೆ, ಕೆಕೆಆರ್ ಮುಜೀಬ್ ಉರ್ ರೆಹಮಾನ್ ಬದಲಿಗೆ ಅವರ ಸಹ ಆಟಗಾರ ಅಲ್ಲಾ ಘಜನ್ಫರ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಮುಜೀಬ್ ಅವರ ಬಲ ಫಲಾಂಕ್ಸ್ ನಲ್ಲಿ ಉಳುಕು ಆಗಿದ್ದು ಅವರೂ ಆಡುತ್ತಿಲ್ಲ. ಕಳೆದ ಹರಾಜಿನಲ್ಲಿ ಕೆಕೆಆರ್ ಅವರನ್ನು ಮೂಲ ಬೆಲೆ 2 ಕೋಟಿ ರೂ.ಗೆ ಖರೀದಿಸಿತ್ತು.

ವಿಶ್ವದ ಪ್ರಮುಖ ಟಿ 20 ಸ್ಪಿನ್ನರ್​ಗಳಲ್ಲಿ ಒಬ್ಬರಾಗಿರುವ ಮುಜೀಬ್ 2021 ರಿಂದ ಐಪಿಎಲ್​ನಲ್ಲಿ ಆಡಿಲ್ಲ. ಅವರು 2018 ರಲ್ಲಿ ಪಂಜಾಬ್ ಕಿಂಗ್ಸ್ ಪರ ಐಪಿಎಲ್​​​ಗೆ ಪಾದಾರ್ಪಣೆ ಮಾಡಿದ್ದರು. ತಮ್ಮ ಚೊಚ್ಚಲ ಐಪಿಎಲ್ ಋತುವಿನಲ್ಲಿ, ಅವರು 11 ಪಂದ್ಯಗಳಲ್ಲಿ 14 ವಿಕೆಟ್​ ಉರುಳಿಸಿದ್ದರು. 7 ಕ್ಕಿಂತ ಕಡಿಮೆ ಎಕಾನಮಿ ರೇಟ್ ಅನ್ನು ಕಾಯ್ದುಕೊಂಡಿದ್ದರು.

ಅಲ್ಲಾ ಘಜನ್ಫರ್ ಕೆಕೆಆರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಘಝಾನ್ಫರ್ ಈವರೆಗೆ 3 ಟಿ 20 ಮತ್ತು 6 ಲಿಸ್ಟ್ ಎ ಪಂದ್ಯಗಳನ್ನು ಆಡಿದ್ದಾರೆ. ಕೆಕೆಆರ್ ಅವರನ್ನು ಅವರ ಮೂಲ ಬೆಲೆ 20 ಲಕ್ಷ ರೂ.ಗೆ ಖರೀದಿಸಿದೆ.

Exit mobile version