ಧರ್ಮಶಾಲಾ: ಇಲ್ಲಿ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ (IPL 2024) ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) 28 ರನ್ಗಳ ನಿರ್ಣಾಯಕ ಗೆಲುವು ಸಾಧಿಸಿದೆ. ಚೆಪಾಕ್ನಲ್ಲಿ ಸಿಎಸ್ಕೆ ವಿರುದ್ಧದ ಗೆಲುವು ಸೇರಿದಂತೆ ಸತತ ಎರಡು ಪಂದ್ಯಗಳನ್ನು ಗೆದ್ದರೂ, ಪಿಬಿಕೆಎಸ್ ತನ್ನ ಆವೇಗವನ್ನು ಉಳಿಸಿಕೊಳ್ಳಲು ವಿಫಲವಾಯಿತು ಮತ್ತು 169/9 ಗುರಿಯನ್ನು ಬೆನ್ನಟ್ಟುವಾಗ 139/9 ಕ್ಕೆ ಸೀಮಿತಗೊಂಡಿತು.
Full highlight of MS DHONI's greatest knock, 0(1). pic.twitter.com/FrlDKHKE5H
— bitch (@TheJinxyyy) May 5, 2024
ಪಂದ್ಯದಲ್ಲಿ ಎಂಎಸ್ ಧೋನಿ, ಪಿಬಿಕೆಎಸ್ ವಿರುದ್ಧದ 19 ನೇ ಓವರ್ನಲ್ಲಿ 9 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಪ್ರವೇಶಿಸಿದರು. ಆದರೆ, ಹರ್ಷಲ್ ಪಟೇಲ್ ಅವರನ್ನು ಗೋಲ್ಡನ್ ಡಕ್ಗೆ ಔಟ್ ಮಾಡಿದರು. ಹರ್ಷಲ್ ಪಟೇಲ್ ಅವರ ನಿಧಾನಗತಿಯ ಯಾರ್ಕರ್ ಎಸೆತಕ್ಕೆ ಧೋನಿ ಮೋಸಹೋದರು. ಅವರಿಗೆ ಪ್ರತಿಕ್ರಿಯಿಸಲು ಸಾಧ್ಯವಾಗಲಿಲ್ಲ. ಚೆಂಡು ಅವನ ಆಫ್-ಸ್ಟಂಪ್ ಗೆ ಅಪ್ಪಳಿಸಿತು.
ಎಂ.ಎಸ್.ಧೋನಿ ಗೋಲ್ಡನ್ ಡಕ್ ಔಟ್ ಆದ ನಂತರ, ಧರ್ಮಶಾಲಾದಲ್ಲಿ ಪ್ರೇಕ್ಷಕರು ಮೌನವಾದರು. ಆದಾಗ್ಯೂ, ಪಿಬಿಕೆಎಸ್ ಸಹ ಮಾಲೀಕರಾದ ಪ್ರೀತಿ ಜಿಂಟಾ ಸ್ಟ್ಯಾಂಡ್ಗಳಲ್ಲಿ ಕುಳಿತು ಸಂಭ್ರಮಿಸುತ್ತಿರುವುದು ಕಂಡುಬಂದಿದೆ. ತನ್ನ ಭಾವನೆಗಳನ್ನು ನಿಯಂತ್ರಿಸಲು ಸಾಧ್ಯವಾಗದೆ, ಅವರು ಮುಗುಳ್ನಕ್ಕು ಹರ್ಷಲ್ ಅವರ ಪ್ರಯತ್ನಗಳಿಗೆ ಚಪ್ಪಾಳೆ ತಟ್ಟಿದರು.
ಧೋನಿಯ ಕ್ಲೀನ್ ಬೌಲ್ಡ್ ಕಂಡು ಬೇಸರಗೊಂಡ ಅಭಿಮಾನಿಗಳು; ವಿಡಿಯೊ ವೈರಲ್
ಧರ್ಮಶಾಲಾ: ಹಿಮಾಲಯದ ತಪ್ಪಲಿನ ರಮಣೀಯ ತಾಣವಾದ ಧರ್ಮಶಾಲಾದಲ್ಲಿ ಭಾನುವಾರ ನಡೆದ ಪಂಜಾಬ್ ಕಿಂಗ್ಸ್(Punjab Kings) ವಿರುದ್ಧದ ಐಪಿಎಲ್(IPL 2024) ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್(Chennai Super Kings) 28 ರನ್ಗಳ ಗೆಲುವು ಸಾಧಿಸಿತು. ಆದರೆ, ಈ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ(MS Dhoni) ಮೊದಲ ಎಸೆತದಲ್ಲೇ ಕ್ಲೀನ್ ಬೌಲ್ಡ್ ಆಗಿ ಗೋಲ್ಡನ್ ಡಕ್(Dhoni golden duck) ಸಂಕಟಕ್ಕೆ ಸಿಲುಕಿದರು. ಇದನ್ನು ಕಂಡು ಅವರ ಅಭಿಮಾನಿಗಳು ಭಾರೀ ನಿರಾಸೆಗೊಂಡರು. ಇದರ ವಿಡಿಯೊ ವೈರಲ್ ಆಗಿದೆ.
ಇದನ್ನೂ ಓದಿ: Jasprit Bumrah : ಪತ್ನಿ ಸಂಜನಾಗೆ ರೊಮ್ಯಾಂಟಿಕ್ ಬರ್ತ್ಡೇ ವಿಶಸ್ ಹೇಳಿದ ಜಸ್ಪ್ರಿತ್ ಬುಮ್ರಾ
ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಳೆದ ವರ್ಷವೇ ಧೋನಿ ಅವರು ಐಪಿಎಲ್ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್ಗೂ ಗುಡ್ಬೈ ಹೇಳಲಿದ್ದಾರೆ. ಹೀಗಾಗಿ ಧೋನಿ ಅವರ ಬ್ಯಾಟಿಂಗ್ ಕುಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಪ್ರತಿ ಪಂದ್ಯದ ವೇಳೆಯೂ ಬಹಳ ನಿರೀಕ್ಷೆಯಿಂದ ಕಾಯುತ್ತಿರುತ್ತಾರೆ. ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಧೋನಿ ಬ್ಯಾಟಿಂಗ್ ನೋಡಲು ಅಭಿಮಾನಿಗಳು ಕಾಯುತ್ತಿದ್ದರು. ಆದರೆ ಶೂನ್ಯಕ್ಕೆ ಔಟ್ ಆಗುವ ಮೂಲಕ ತಮ್ಮ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು. ಧೋನಿ ಔಟಾಗುತ್ತಿದ್ದಂತೆ ಅವರ ಅಭಿಮಾನಿಗಳು ಬೇಸರದಲ್ಲಿ ತಲೆ ಮೇಲೆ ಕೈ ಹೊತ್ತು ಕುಳಿತರ. ಈ ವಿಡಿಯೊ ವೈರಲ್ ಆಗುತ್ತಿದೆ.
ಚೆನ್ನೈ ಬ್ಯಾಟಿಂಗ್ ಇನಿಂಗ್ಸ್ನ 19ನೇ ಓವರ್ನಲ್ಲಿ ಧೋನಿ ಅವರು ಹರ್ಷಲ್ ಪಟೇಲ್ ಎಸೆದ ಎಸೆತಕ್ಕೆ ಕ್ಲೀನ್ ಬೌಲ್ಡ್ ಆದರು. ಆದರೆ ಕೀಪಿಂಗ್ನಲ್ಲಿ ಧೋನಿ ಒಂದು ಸೊಗಸಾದ ಕ್ಯಾಚ್ ಹಿಡಿದು ಮಿಂಚಿದರು. ಜಿತೇಶ್ ಶರ್ಮ ಅವರ ಕ್ಯಾಚ್ ಇದಾಗಿತ್ತು.