ಬೆಂಗಳೂರು: ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ ಅವರಿಗೆ ಮುಂಬಡ್ತಿ ನೀಡಲಾಗಿದ್ದು, ಮಾಲಿನಿ ಕೃಷ್ಣಮೂರ್ತಿ ಅವರಿಗೆ ಡಿಜಿಪಿ ಹಾಗೂ ಅಗ್ನಿ ಶಾಮಕದಳ, ತುರ್ತು ಸೇವೆಗಳ ಡಿಜಿಯಾಗಿ ಹೆಚ್ಚುವರಿ ಹುದ್ದೆ (IPS officers promoted) ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ ಅವರು ಎಡಿಜಿಪಿಯಿಂದ ಡಿಜಿಪಿಯಾಗಿ ಮುಂಬಡ್ತಿ ಪಡೆದಿದ್ದು, ಕಂಪ್ಯೂಟರ್ ವಿಂಗ್ ಡಿಜಿಪಿಯಾಗಿ ಮುಂದುವರಿಯಲಿದ್ದಾರೆ. ಇನ್ನು ಮಾಲಿನಿ ಕೃಷ್ಣಮೂರ್ತಿ ಅವರಿಗೆ ಡಿಜಿಪಿ ಹಾಗೂ ಅಗ್ನಿ ಶಾಮಕದಳ, ತುರ್ತು ಸೇವೆಗಳ ಹೆಚ್ಚುವರಿ ಹುದ್ದೆ ನೀಡಲಾಗಿದೆ. ನಾಳೆ ಡಿಜಿಪಿ ಕಮಲ್ ಪಂತ್ ಅವರು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಮಾಲಿನಿ ಕೃಷ್ಣಮೂರ್ತಿ ಅವರಿಗೆ ಹೆಚ್ಚುವರಿ ಹುದ್ದೆ ನೀಡಲಾಗಿದೆ.
ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದ್ದು, ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಮಹಾನಿರ್ದೇಶಕರಾದ (ಡಿಜಿ) ಮಾಲಿನಿ ಕೃಷ್ಣಮೂರ್ತಿ ಅವರನ್ನು ಡಿಜಿಪಿ ಮತ್ತು ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಡಿಜಿ, ಹೋಮ್ ಗಾರ್ಡ್ಸ್ ಕಮಾಂಡೆಂಟ್ ಜನರಲ್, ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಡಿಜಿ, ನಾಗರಿಕ ರಕ್ಷಣೆ ನಿರ್ದೇಶಕರಾಗಿ ಮುಂದಿನ ಆದೇಶದವರೆಗೆ ನೇಮಕ ಮಾಡಲಾಗಿದೆ.
ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ ಅವರು ಪೊಲೀಸ್ ಮಹಾನಿರ್ದೇಶಕರ ದರ್ಜೆಗೆ (ಡಿಜಿಪಿ) ಬಡ್ತಿ ಪಡೆದಿದ್ದು, ಅವರು ಸೈಬರ್ ಅಪರಾಧ ಮತ್ತು ಮಾದಕ ದ್ರವ್ಯಗಳ ಉನ್ನತೀಕರಿಸಿದ ಡಿಜಿಪಿ ಹುದ್ದೆಯ ಸಮಕಾಲೀನ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.
ಇದನ್ನೂ ಓದಿ | Maya Neelakantan: ಅಮೆರಿಕವನ್ನು ಹುಚ್ಚೆಬ್ಬಿಸಿದ 10 ವರ್ಷದ ಭಾರತೀಯ ಗಿಟಾರ್ ಬಾಲೆ ಮಾಯಾ ನೀಲಕಂಠನ್, ಯಾರೀಕೆ?