Lok Sabha Election : ಚುನಾವಣಾ ಆಯೋಗದಿಂದ ಸಸ್ಪೆಂಡ್ ಆಗಿದ್ದ ವಿವೇಕ್ ಸಹಾಯ್ ಪ. ಬಂಗಾಳದ ಡಿಜಿಪಿ! - Vistara News

ಪ್ರಮುಖ ಸುದ್ದಿ

Lok Sabha Election : ಚುನಾವಣಾ ಆಯೋಗದಿಂದ ಸಸ್ಪೆಂಡ್ ಆಗಿದ್ದ ವಿವೇಕ್ ಸಹಾಯ್ ಪ. ಬಂಗಾಳದ ಡಿಜಿಪಿ!

Lok Sabha Election: ರಾಜೀವ್​ ಕುಮಾರ್​ ಅವರನ್ನು ಡಿಜಿಪಿ ಹುದ್ದೆಯಿಂದ ತೆರವುಗೊಳಿಸಿದ ಬಳಿಕ ವಿವೇಕ್​ ಅವರನ್ನು ಅಲ್ಲಿಗೆ ನೇಮಿಸಲಾಗಿದೆ.

VISTARANEWS.COM


on

Vivek Shahay
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನವದೆಹಲಿ: ಪಶ್ಚಿಮ ಬಂಗಾಳದ ಹೊಸ ಪೊಲೀಸ್ ಮಹಾನಿರ್ದೇಶಕ (DGP) ಆಗಿ ಐಪಿಎಸ್ ಅಧಿಕಾರಿ ವಿವೇಕ್ ಸಹಾಯ್ (IPL Vivek Sahay) ಅವರನ್ನು ಸೋಮವಾರ ನೇಮಿಸಲಾಗಿದೆ. ಕುಮಾರ್ ಅವರ ಸ್ಥಾನಕ್ಕೆ ಮೂವರು ಅರ್ಹ ಅಧಿಕಾರಿಗಳ ಪಟ್ಟಿಯನ್ನು ಇಂದು ಸಂಜೆ 5 ಗಂಟೆಯೊಳಗೆ ನೀಡುವಂತೆ ಚುನಾವಣಾ ಆಯೋಗವು (Lok Sabha Election) ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿತ್ತು. ಅದರಂತೆ ಅವರ ನೇಮಕವಾಗಿದೆ. ರಾಜೀವ್​ ಕುಮಾರ್​ (Rajeev Kumar) ಅವರನ್ನು ಕೇಂದ್ರ ಚುನಾವಣಾ ಆಯೋಗ ಆ ಹುದ್ದೆಯಿಂದ ತೆರವುಗೊಳಿಸಿದ ಬಳಿಕ ಹೊಸ ನೇಮಕ ಮಾಡಲಾಗಿದೆ.

“ಪಶ್ಚಿಮ ಬಂಗಾಳದ ಗೃಹರಕ್ಷಕ ದಳದ ಮಹಾನಿರ್ದೇಶಕ ಮತ್ತು ಕಮಾಂಡೆಂಟ್ ಜನರಲ್ ಶ್ರೀ ವಿವೇಕ್ ಸಹಾಯ್ ಅವರನ್ನು ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಪಶ್ಚಿಮ ಬಂಗಾಳದ ಪೊಲೀಸ್ ಮಹಾನಿರ್ದೇಶಕ ಮತ್ತು ಪೊಲೀಸ್ ಇನ್​ಸ್ಪೆಕ್ಟರ್ಹು ದ್ದೆಗೆ ನೇಮಕ ಮಾಡಲು ರಾಜ್ಯಪಾಲರು ಸಂತೋಷಪಡುತ್ತಾರೆ. ಸಾರ್ವಜನಿಕ ಸೇವೆಯ ಹಿತದೃಷ್ಟಿಯಿಂದ ಈ ನೇಮಕಾತಿಯನ್ನು ಮಾಡಲಾಗಿದೆ” ಎಂದು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ನೋಟಿಸ್​​ನಲ್ಲಿ ತಿಳಿಸಿದ್ದಾರೆ.

ಲೋಕಸಭಾ ಚುನಾವಣಾ ದಿನಾಂಕಗಳನ್ನು ಘೋಷಿಸಿದ ಕೆಲವೇ ದಿನಗಳಲ್ಲಿ ರಾಜೀವ್ ಕುಮಾರ್ ಅವರನ್ನು ರಾಜ್ಯ ಡಿಜಿಪಿ ಹುದ್ದೆಯಿಂದ ತೆಗೆದುಹಾಕಲಾಗಿದೆ. ಈ ಕ್ರಮವನ್ನು ಚುನಾವಣಾ ಪ್ರಕ್ರಿಯೆಯ ಸಮಗ್ರತೆ ಕಾಪಾಡಿಕೊಳ್ಳುವಲ್ಲಿ ಆಯೋಗದ ಪ್ರಯತ್ನಗಳ ಒಂದು ಭಾಗವೆಂದು ಪರಿಗಣಿಸಲಾಗಿದೆ.

ಇದನ್ನೂ ಓದಿ : Lok Sabha Election : ಬಿಹಾರದಲ್ಲಿ ಬಿಜೆಪಿ, ಜೆಡಿಯು ಸೀಟು ಹಂಚಿಕೆ ಅಂತಿಮ; ಯಾರಿಗೆ ಎಷ್ಟು ಸೀಟು?

ವಿವೇಕ್ ಸಹಾಯ್ ಯಾರು?

ವಿವೇಕ್ ಸಹಾಯ್ ಅವರು ಪಶ್ಚಿಮ ಬಂಗಾಳ ಕೇಡರ್​​ನ 1988 ರ ಬ್ಯಾಚ್​​ನ ಐಪಿಎಸ್ ಅಧಿಕಾರಿ. ಅವರು ಈ ಹಿಂದೆ ಡೈರೆಕ್ಟರ್ ಜನರಲ್ (ಡಿಜಿ), ಪ್ರೊವಿಷನಿಂಗ್ ಮತ್ತು ಗೃಹರಕ್ಷಕ ದಳದ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಸಹಾಯ್ ಅವರು 2021ರ ಚುನಾವಣೆ ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಭದ್ರತೆಯ ಉಸ್ತುವಾರಿ ವಹಿಸಿದ್ದರು. ಆದರೆ ಸಿಎಂ ಆ ವೇಳೆ ದಾಳಿ ನಡೆದು ಅವರ ಕಾಲಿಗೆ ಗಾಯವಾಗಿತ್ತು. ಬಳಿಕ ಚುನಾವಣಾ ಆಯೋಗವು ಮಾರ್ಚ್ 2021 ರಲ್ಲಿ ಅವರನ್ನು ಅಮಾನತುಗೊಳಿಸಿತ್ತು. ಇದೀಗ ಅವರನ್ನು ಭದ್ರತಾ ನಿರ್ದೇಶಕರ ಹುದ್ದೆಗೆ ಪುನಃ ನೇಮಿಸಲಾಗಿದೆ.

ಹಲವು ಅಧಿಕಾರಿಗಳ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ

ಪಶ್ಚಿಮ ಬಂಗಾಳದ ಮಾಜಿ ಡಿಜಿಪಿಯನ್ನು ತೆಗೆದುಹಾಕುವುದರ ಹೊರತಾಗಿ, ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಆರು ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ತೆಗೆದುಹಾಕಲು ಮತ್ತು ಮುಂಬಯಿ ಮುನ್ಸಿಪಲ್ ಕಮಿಷನರ್ ಇಕ್ಬಾಲ್ ಸಿಂಗ್ ಚಾಹಲ್ ಮತ್ತು ಹೆಚ್ಚುವರಿ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳನ್ನು ತೆರವು ಮಾಡಲು ಚುನಾವಣಾ ಆಯೋಗ ಆದೇಶಿಸಿದೆ. ಇದರೊಂದಿಗೆ, ಮಿಜೋರಾಂ ಮತ್ತು ಹಿಮಾಚಲ ಪ್ರದೇಶದ ಸಾಮಾನ್ಯ ಆಡಳಿತ ಇಲಾಖೆಗಳ ಕಾರ್ಯದರ್ಶಿಗಳನ್ನು ಸಹ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ರಾಮಲಿಂಗಾರೆಡ್ಡಿ ಜೊತೆ ಮಾತನಾಡುತ್ತೇನೆ – ಡಿಕೆಶಿ

VISTARANEWS.COM


on

ಖಾತೆ ಹಂಚಿಕೆಯಿಂದ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಮಲಿಂಗಾರೆಡ್ಡಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಮಾತನಾಡುತ್ತೇನೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಸಚಿವ ಖಾತೆ ಹಂಚಿಕೆಯ ನಂತರ ರಾಮಲಿಂಗಾರೆಡ್ಡಿ ರಾಜೀನಾಮೆ, ಮುನಿಯಪ್ಪ ಅಸಮಾಧಾನ ಬಹಿರಂಗಗೊಂಡಿದ್ದು, ಈ ಕುರಿತು ಮೊದಲ ಬಾರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಮಲಿಂಗಾ ರೆಡ್ಡಿ ಅವರಿಗೆ ನಾವು ಮಾತು ಕೊಟ್ಟಿದ್ದು ನಿಜ. ಅವರು ಹಿರಿಯ ನಾಯಕರು. ಬೆಂಗಳೂರಿನ ಅಭಿವೃದ್ಧಿ ಜವಾಬ್ದಾರಿ ನೀಡುವ ಕುರಿತು ಚರ್ಚೆ ನಡೆದಿತ್ತು. ಆದರೆ ಹೈಕಮಾಂಡ್ ತೀರ್ಮಾನ ಮಾಡಿದೆ. ಅದನ್ನು ಮೀರಿ ನಾವು ಏನೂ ಮಾಡಲು ಸಾಧ್ಯವಿಲ್ಲ” ಎಂದು ಹೇಳಿದರು.

“ರಾಮಲಿಂಗಾ ರೆಡ್ಡಿ ಅವರು ಸದ್ಯ ಹೊರಗಡೆ ಇದ್ದಾರೆ. ಅವರು ಬಂದ ಬಳಿಕ ಖುದ್ದಾಗಿ ನಾನೇ ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ. ಈ ವಿಚಾರವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಪ್ರಯತ್ನಿಸುತ್ತೇನೆ” ಎಂದರು.

ಇನ್ನು ಕೆ.ಹೆಚ್‌. ಮುನಿಯಪ್ಪ ಅವರ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿ, ಅವರ ಜೊತೆಯೂ ಮಾತಾಡಿದ್ದೇನೆ. ಪಕ್ಷ ಏನೇ ಜವಾಬ್ದಾರಿ ಕೊಟ್ಟರೂ ಅದನ್ನು ನಿರ್ವಹಿಸುತ್ತೇನೆಂದು ಅವರು ಹೇಳಿದ್ದಾರೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು.

Continue Reading

Latest

ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

VISTARANEWS.COM


on

ರಾಜ್ಯದಲ್ಲಿ ರಾಜ್ಯಸಭಾ ಚುನಾವಣೆಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರು ರಾಹುಲ್‌ ಗಾಂಧಿ ಅವರೊಂದಿಗೆ ವಿಧಾನಸೌಧಕ್ಕೆ ಆಗಮಿಸಿ, ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಹಲವು ಹಿರಿಯ ನಾಯಕರು ಉಪಸ್ಥಿತರಿದ್ದರು.

ಜೂನ್ 18ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಮೊದಲ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಿದ್ದಾರೆ.

ಎರಡನೇ ಅಭ್ಯರ್ಥಿಯಾಗಿ ಪವನ್‌ ಖೇರಾ ಹಾಗೂ ಮೂರನೇ ಅಭ್ಯರ್ಥಿಯಾಗಿ ಮನ್ಸೂರ್‌ ಆಲಿ ಖಾನ್‌ ನಾಳೆ ಜೂನ್‌ 6 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

Continue Reading

Latest

ಖಾತೆ ಹಂಚಿಕೆ ಬಗ್ಗೆ ಮುನಿಯಪ್ಪ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಜೀನಾಮೆ ಚಿಂತನೆ?

VISTARANEWS.COM


on

ಖಾತೆ ಹಂಚಿಕೆ ಬೆನ್ನಲ್ಲೇ ಭುಗಿಲೆದ್ದಿರುವ ಅಸಮಾಧಾನ ಸರ್ಕಾರಕ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡಿದ ಬೆನ್ನಲ್ಲೇ ಹಿರಿಯ ನಾಯಕ ಹಾಗೂ ಸಚಿವ ಕೆ.ಹೆಚ್‌.ಮುನಿಯಪ್ಪ ಅವರ ಅಸಮಾಧಾನವೂ ಬಹಿರಂಗವಾಗಿದೆ.

ತಮಗೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ನೀಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಕೆ.ಹೆಚ್‌.ಮುನಿಯಪ್ಪ ಖಾತೆ ಬದಲಾವಣೆ ಕುರಿತು ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ರಾಜ್ಯ ಕಾಂಗ್ರೆಸ್‌ನಲ್ಲಿ ಖಾತೆ ಹಂಚಿಕೆ ಕುರಿತ ಅಸಮಾಧಾನ ಮುಂದುವರಿದಿರುವ ಸೂಚನೆ ನೀಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮುನಿಯಪ್ಪ, “ನಾನು ಎಂಟು ಬಾರಿ ಚುನಾವಣೆಯಲ್ಲಿ ಗೆದ್ದಿದ್ದೇನೆ. ಆದರೆ ಖಾತೆ ಹಂಚಿಕೆ ವೇಳೆ ನನ್ನ ಸೀನಿಯಾರಿಟಿಯನ್ನು ಪರಿಗಣಿಸಲಾಗಿಲ್ಲ. ಎಲ್ಲರನ್ನೂ ಸಮಾನವಾಗಿ ನೋಡಬೇಕು” ಎಂದು ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲರನ್ನೂ ಒಂದೇ ರೀತಿಯಲ್ಲಿ ನೋಡಬೇಕು. ಖಾತೆ ಹಂಚಿಕೆ ಸಮತೋಲನದಿಂದ ಆಗಬೇಕಿತ್ತು. ಈ ರೀತಿಯ ನಿರ್ಧಾರಗಳು ಮುಂದುವರಿದರೆ 2028ರ ಚುನಾವಣೆಯಲ್ಲಿ ಪಕ್ಷಕ್ಕೆ ಕಷ್ಟವಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

ನಾನು ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ನನ್ನ ಅಸಮಾಧಾನವನ್ನು ತಿಳಿಸಿದ್ದೇನೆ. ನನ್ನ ಖಾತೆಯನ್ನು ಬದಲಾಯಿಸುವಂತೆ ಮನವಿ ಮಾಡುತ್ತೇನೆ ಎಂದು ಮುನಿಯಪ್ಪ ಹೇಳಿದ್ದಾರೆ.

ಇದರಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ಖಾತೆ ಹಂಚಿಕೆ ವಿವಾದ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಕಂಡುಬರುತ್ತಿದೆ.

Continue Reading

Latest

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

VISTARANEWS.COM


on

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್‌ ನೇತೃತ್ವದ ಸರ್ಕಾರ ರಚನೆಯಾದ ಎರಡೇ ದಿನದಲ್ಲಿ ಸಚಿವರು ರಾಜೀನಾಮೆ ನೀಡಿರುವುದು ಕಾಂಗ್ರೆಸ್‌ ಪಕ್ಷ ಹಾಗೂ ಸರ್ಕಾರವನ್ನು ಭಾರಿ ಮುಜುಗರಕ್ಕೀಡು ಮಾಡಿದೆ.

ಸಚಿವರಿಗೆ ಖಾತೆ ಹಂಚಿಕೆಯಾದ ಕೇವಲ 12 ಗಂಟೆಯೊಳಗೆ ತಮ್ಮ ಸ್ಥಾನಕ್ಕೆ ಜಲಸಂಪನ್ಮೂಲ ಖಾತೆ ಸಚಿವ ರಾಮಲಿಂಗಾರೆಡ್ಡಿ ರಾಜೀನಾಮೆ ಘೋಷಿಸಿದ್ದಾರೆ. ಬೆಂಗಳೂರು ನಗರಾಭಿವದ್ಧಿ ಖಾತೆಯ ಮೇಲೆ ಕಣ್ಣಿಟ್ಟಿದ್ದ ರಾಮಲಿಂಗಾರೆಡ್ಡಿ ಅವರು ತಮಗೆ ಜಲಸಂಪನ್ಮೂಲ ಅಭಿವೃದ್ಧಿ ಖಾತೆ ನೀಡಿದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ್ದರು.

ಇಂದು ಬೆಳಗ್ಗೆ ತಮ್ಮ ಕೋರಮಂಗಲದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಮಲಿಂಗಾರೆಡ್ಡಿ ತಮಗೆ ಬೆಂಗಳೂರು ಅಭಿವೃದ್ದಿ ಖಾತೆ(ಜಿಬಿಎ) ಖಾತೆ ಸಿಗದೆ ಇರುವುದಕ್ಕೆ ತಮಗಾದ ಬೇಸರವನ್ನು ಹಂಚಿಕೊಂಡರು. ಈ ಹಿಂದೆ ಸಿದ್ದರಾಮಯ್ಯನವರ ಸರ್ಕಾರದಲ್ಲೇ ತಮಗೆ ಬೆಂಗಳೂರು ಅಭಿವೃದ್ದಿ ಖಾತೆ ಸಿಗಬೇಕಿತ್ತು. ಬೈರತಿ ಸುರೇಶ್‌ ತಮಗೆ ಆ ವಿಚಾರವನ್ನು ಖುದ್ದಾಗಿ ಹೇಳಿದ್ದರು. ಆದರೆ ಆಗ ಅದು ಡಿ.ಕೆ.ಶಿವಕುಮಾರ್‌ ಅವರ ಪಾಲಾಯಿತು. ಆ ನಂತರ ಡಿ.ಕೆ.ಶಿವಕುಮಾರ್‌ ತಮ್ಮನ್ನು ಭೇಟಿಯಾಗಿ ತಾನು ಮುಖ್ಯಮಂತ್ರಿಯಾದಾಗ ಬೆಂಗಳೂರು ಅಭಿವೃದ್ದಿ ಖಾತೆ ನಿಮಗೇ ಕೊಡುತ್ತೇನೆ ಎಂದು ಹೇಳಿದ್ದರು. ಇದೀಗ ಡಿಕೆಶಿ ಸಿಎಂ ಆಗಿದ್ದಾರೆ. ತಾನು ಮಂತ್ರಿ ಸ್ಥಾನ ಕೇಳಿರಲಿಲ್ಲ. ಆದರೆ ತನ್ನನ್ನು ಸಚಿವರನ್ನಾಗಿ ಮಾಡಿ ಬೆಂಗಳೂರು ಅಭಿವೃದ್ದಿ ಖಾತೆ ನೀಡದೆ ಜಲಸಂಪನ್ಮೂಲ ಖಾತೆ ನೀಡಿರುವುದು ಬೇಸರ ತರಿಸಿದೆ. ಆತ್ಮಸಾಕ್ಷಿಗನುಣವಾಗಿ ತಾನು ಕೆಲಸ ಮಾಡುತ್ತೇನೆ. ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದು, ಕಾಂಗ್ರೆಸ್‌ ಶಾಸಕನಾಗಿಯೇ ಮುಂದುವರೆಯುತ್ತೇನೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

ಇನ್ನು ನಿನ್ನೆ (ಜೂನ್‌.4)ಯಷ್ಟೇ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಖಾತೆಗಳ ವಿವರ ಹೀಗಿದೆ.

ಡಿ.ಕೆ.ಶಿವಕುಮಾರ್‌ – ಮುಖ್ಯಮಂತ್ರಿ, ಹಣಕಾಸು, (ಹಂಚಿಕೆಯಾಗದ ಉಳಿದ ಖಾತೆಗಳು)

ಡಾ.ಜಿ.ಪರಮೇಶ್ವರ್ – ಉಪ ಮುಖ್ಯಮಂತ್ರಿ, ಕಂದಾಯ, ಕ್ರೀಡೆ ಮತ್ತು ಯುವ ಸಬಲೀಕರಣ.

ಪ್ರಿಯಾಂಕ್‌ ಖರ್ಗೆ – ಗೃಹ ಮತ್ತು ಐಟಿ-ಬಿಟಿ .

ಯತೀಂದ್ರ ಸಿದ್ದರಾಮಯ್ಯಗೆ – ನಗರಾಭಿವೃದ್ಧಿ

ಎಂ.ಬಿ ಪಾಟೀಲ್ – ಬೃಹತ್ ಮತ್ತು ಮಧ್ಯಮ ಕೈಗಾರಿಕೆ

ಬೈರತಿ ಸುರೇಶ್ – ಸಾರಿಗೆ

ಯು.ಟಿ ಖಾದರ್ – ಆರೋಗ್ಯ

ಮುನಿಯಪ್ಪ – ಆಹಾರ ಮತ್ತು ನಾಗರೀಕ ಸರಬರಾಜು

ರಾಮಲಿಂಗಾರೆಡ್ಡಿ – ಜಲಸಂಪನ್ಮೂಲ

ಈಶ್ವರ್ ಖಂಡ್ರೆ – ಗ್ರಾಮೀಣಾಭಿವೃದ್ಧಿ

ಸತೀಶ್ ಜಾರಕಿಹೊಳಿ – ಲೋಕೋಪಯೋಗಿ

ಕೃಷ್ಣಬೈರೇಗೌಡ – ಬೆಂಗಳೂರು ನಗರಾಭಿವೃದ್ಧಿ (GBA)

ಕೆ.ಜೆ ಜಾರ್ಜ್, ಇಂಧನ, ಪ್ರವಾಸೋದ್ಯಮ

ಶರಣ ಪ್ರಕಾಶ್ ಪಾಟೀಲ್ – ವೈದ್ಯಕೀಯ ಶಿಕ್ಷಣ ಇಲಾಖೆ

Continue Reading
Advertisement
Latest19 hours ago

ಟೀಮ್‌ ಇಂಡಿಯಾಗೆ ವೈಭವ್‌ ಸೂರ್ಯವಂಶಿ ಎಂಟ್ರಿ

Latest21 hours ago

ಸಿಇಟಿ ಫಲಿತಾಂಶ ಪ್ರಕಟ

ಅವಿಭಾಗೀಕೃತ23 hours ago

ರಾಮಲಿಂಗಾರೆಡ್ಡಿ ರಾಜೀನಾಮೆ ಕಗ್ಗಂಟಿಗೆ ತೆರೆ? ಸುರ್ಜೇವಾಲಾ ಮಾತುಕತೆ ಯಶಸ್ವಿ?

Latest2 days ago

ರಾಮಲಿಂಗಾರೆಡ್ಡಿ ಜೊತೆ ಮಾತನಾಡುತ್ತೇನೆ – ಡಿಕೆಶಿ

Latest2 days ago

ಬಿಜೆಪಿಗೆ ರಾಜೀನಾಮೆ ಬಳಿಕ ಹೊಸ ರಾಜಕೀಯ ಚಳವಳಿ ಘೋಷಿಸಿದ ಅಣ್ಣಾಮಲೈ; ತಮಿಳುನಾಡಿನಲ್ಲಿ ಏಕಾಂಗಿ ಹೋರಾಟದ ನಿರ್ಧಾರ

Latest2 days ago

ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

Latest2 days ago

ಖಾತೆ ಹಂಚಿಕೆ ಬಗ್ಗೆ ಮುನಿಯಪ್ಪ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಜೀನಾಮೆ ಚಿಂತನೆ?

Latest2 days ago

ರಾಮಲಿಂಗಾ ರೆಡ್ಡಿ ರಾಜೀನಾಮೆ ಕಾಂಗ್ರೆಸ್ ಒಳಜಗಳದ ಪರಿಣಾಮ: ವಿಜಯೇಂದ್ರ ವಾಗ್ದಾಳಿ

Latest2 days ago

ಅಣ್ಣಾಮಲೈ ರಾಜೀನಾಮೆ ಸ್ವೀಕಾರ : ಹೊಸ ಪಕ್ಷ ಘೋಷಣೆ ಕುರಿತು ಇಂದು ಮಹತ್ವದ ಸುದ್ದಿಗೋಷ್ಠಿ

Latest2 days ago

ರಾಜ್ಯಸಭಾ ಚುನಾವಣೆಗೆ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಲಿರುವ ಮಲ್ಲಿಕಾರ್ಜುನ ಖರ್ಗೆ

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌