ವಿಸ್ತಾರ ಸಂಪಾದಕೀಯ | ಉಗ್ರ ಮುಕ್ತವಾಗುವತ್ತ ಜಮ್ಮು-ಕಾಶ್ಮೀರ! - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ | ಉಗ್ರ ಮುಕ್ತವಾಗುವತ್ತ ಜಮ್ಮು-ಕಾಶ್ಮೀರ!

ಉಗ್ರವಾದದ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿ ಅಳವಡಿಸಿಕೊಂಡಿರುವ ಫಲವಾಗಿ ಮುಂದಿನ ಎರಡು ಮೂರು ವರ್ಷಗಳಲ್ಲಿ ಕಾಶ್ಮೀರ ಕಣಿವೆಯು ಉಗ್ರ ಮುಕ್ತವಾಗುವತ್ತ ಹೆಜ್ಜೆ ಇಟ್ಟಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತದ ಭದ್ರತೆಯ ವಿಷಯದಲ್ಲಿ 2022 ತುಂಬ ಯಶಸ್ಸು ತಂದು ಕೊಟ್ಟ ವರ್ಷವಾಗಿದೆ. ಬಾಹ್ಯ ಮತ್ತು ಆಂತರಿಕ ವಿಚ್ಛಿದ್ರಕಾರಿ ಶಕ್ತಿಗಳನ್ನು ಮಟ್ಟಹಾಕುವಲ್ಲಿ ಭಾರತ ಯಶಸ್ವಿಯಾಗಿದೆ. ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಬಹುತೇಕ ನಿಯಂತ್ರಣಕ್ಕೆ ಬಂದಿದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅಳವಡಿಸಿಕೊಂಡಿರುವ ಉಗ್ರ ನಿರೋಧಿ ನೀತಿಗಳ ಫಲ ಈಗ ದೊರೆಯುತ್ತಿದೆ. ಭವ್ಯ ಭಾರತದ ಭವಿಷ್ಯದ ದೃಷ್ಟಿಯಿಂದ ಉಗ್ರ ವಿರೋಧಿ ನೀತಿ ಮಹತ್ವದ ಹೆಜ್ಜೆಯಾಗಿದೆ. ಪರಿಸ್ಥಿತಿಯು ಸುಧಾರಿಸಿದಂತೆ ವೈಭವದ ಕಾಶ್ಮೀರವನ್ನು ನೋಡುವ ದಿನಗಳು ದೂರ ಇಲ್ಲವೇನೊ.

ಜಮ್ಮು-ಕಾಶ್ಮೀರದಾದ್ಯಂತ 2022ರಲ್ಲಿ ಭದ್ರತಾ ಸಿಬ್ಬಂದಿಯು 93 ಯಶಸ್ವಿ ಕಾರ್ಯಾಚರಣೆಗಳನ್ನು ಕೈಗೊಂಡು 172 ಉಗ್ರರನ್ನು ಎನ್‌ಕೌಂಟರ್‌ ಮಾಡಿದೆ. ಇವರಲ್ಲಿ 42 ಉಗ್ರರು ವಿದೇಶದವರಾಗಿದ್ದಾರೆ. ಲಷ್ಕರೆ ತಯ್ಬಾ, ಇದರ ಅಂಗಸಂಸ್ಥೆ ದಿ ರೆಸಿಸ್ಟಂಟ್‌ ಫ್ರಂಟ್‌ನ 108, ಜೈಶೆ ಮೊಹಮ್ಮದ್‌ ನ 35, ಹಿಜ್ಬುಲ್‌ ಮುಜಾಹಿದ್ದೀನ್‌ ನ 22, ಅಲ್‌-ಬದ್ರ್‌ ಉಗ್ರ ಸಂಘಟನೆಯ ನಾಲ್ವರು ಉಗ್ರರು ಸೇರಿದಂತೆ 172 ಉಗ್ರರನ್ನು ಹತ್ಯೆಗೈಯಲಾಗಿದೆ. ಹೊಸದಾಗಿ ಉಗ್ರ ಸಂಘಟನೆಗಳಿಗೆ ಸೇರುವವರ ಜೀವಿತಾವಧಿಯನ್ನೇ ಭದ್ರತಾ ಸಿಬ್ಬಂದಿ ಇಳಿಕೆ ಮಾಡಿದ್ದಾರೆ! ಉಗ್ರ ಸಂಘಟನೆಗೆ ಸೇರಿದ ಒಂದೇ ತಿಂಗಳಲ್ಲಿ ಹತ್ಯೆಗೀಡಾದ ಉಗ್ರರ ಪ್ರಮಾಣ ಶೇ.89ರಷ್ಟಿದೆ. ಒಂದು ವರ್ಷದಲ್ಲಿ 100 ಯುವಕರು ಉಗ್ರ ಸಂಘಟನೆ ಸೇರಿದ್ದು, 2021ಕ್ಕೆ ಹೋಲಿಸಿದರೆ ಇದರ ಪ್ರಮಾಣ ಶೇ.37ರಷ್ಟು ಕುಸಿತವಾಗಿದೆ ಎಂಬ ಮಾಹಿತಿಯನ್ನು ಅಲ್ಲಿಯ ಪೊಲೀಸರು ನೀಡಿದ್ದಾರೆ. ಉಗ್ರರರನ್ನು ಹುಡುಕಿ, ಹುಡುಕಿ ನಿರ್ಮೂಲನೆ ಮಾಡಲಾಗುತ್ತಿದೆ.

ಸದ್ಯ ಕಾಶ್ಮೀರ ಕಣಿವೆಯಲ್ಲಿ 81 ಉಗ್ರರು ಸಕ್ರಿಯರಾಗಿದ್ದಾರೆ. ಅದರಲ್ಲಿ ಸ್ಥಳೀಯ ಉಗ್ರರು 29 ಮಂದಿ ಮತ್ತು ವಿದೇಶಿ ಉಗ್ರರು 52 ಇದ್ದಾರೆ. ಹಾಗೆಯೇ ಕಣಿವೆ ರಾಜ್ಯದಲ್ಲೀಗ ಸ್ಥಳೀಯ ಉಗ್ರರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿದೆ. ಸ್ಥಳೀಯ ಭಯೋತ್ಪಾದಕರ ಸಂಖ್ಯೆ 2018ರಲ್ಲಿ 109 ಇತ್ತು. ಅದೀಗ 29ಕ್ಕೆ ಇಳಿದಿದೆ. 2018ರಿಂದ ಇಲ್ಲಿಯವರೆಗೆ ಸ್ಥಳೀಯ ಉಗ್ರರ ಸಂಖ್ಯೆಯಲ್ಲಿ ಶೇ.73ರಷ್ಟು ಕಡಿಮೆಯಾಗಿದೆ. ಇತ್ತೀಚೆಗೆಷ್ಟೇ ಸಂಸತ್ತಿನಲ್ಲಿ ಮಾಹಿತಿ ನೀಡಿದ್ದ ಕೇಂದ್ರ ಸರ್ಕಾರವು ಜಮ್ಮು-ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳು ಶೇ.168ರಷ್ಟು ಇಳಿಕೆಯಾಗಿದೆ ಎಂದು ಹೇಳಿದೆ. ಈ ಭಯೋತ್ಪಾದನಾ ನಿಗ್ರಹ ಟ್ರೆಂಡ್ ಹೀಗೆಯೇ ಮುಂದುವರಿದರೆ ಇನ್ನೆರಡು ವರ್ಷದಲ್ಲಿ ಕಣಿವೆಯು ಸಂಪೂರ್ಣವಾಗಿ ಉಗ್ರ ಮುಕ್ತವಾಗುವುದರಲ್ಲಿ ಅನುಮಾನಗಳೇ ಇಲ್ಲ.

ಕಾಶ್ಮೀರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಹೆಚ್ಚಿಸಲಾಗಿದೆ. ಸದಾ ಕಣ್ಗಾವಲು ಇರುತ್ತದೆ. ಮೊದಲಿನಂತೆ ಮನೆ ಮಾಲೀಕರು ಉಗ್ರರಿಗೆ ಮನೆ ನೀಡುತ್ತಿಲ್ಲ. ಹಾಗೊಮ್ಮೆ ಉಗ್ರರಿಗೆ, ಉಗ್ರ ಕೃತ್ಯಗಳಿಗೆ ನೆರವು ನೀಡಿದ್ದು ಗೊತ್ತಾದರೆ ಆ ಮನೆ ಮಾಲೀಕನ ಆಸ್ತಿ ಮುಟ್ಟುಗೋಲು ಹಾಕಲಾಗುತ್ತಿದೆ. ಅವರ ಮನೆಯನ್ನೇ ನೆಲಸಮ ಮಾಡಲಾಗುತ್ತದೆ. ಇದೇ ಭಯಕ್ಕೆ ಮನೆ ಮಾಲೀಕರು ಎಚ್ಚೆತ್ತುಕೊಂಡಿದ್ದಾರೆ. ಇದೂ ಕೂಡ ಸ್ಥಳೀಯ ಭಯೋತ್ಪಾದಕರ ಸಂಖ್ಯೆ ಕಡಿಮೆಯಾಗಲು ಕಾರಣವಾಗಿದೆ. ಇಷ್ಟಾಗಿಯೂ, ನೆರೆಯ ಪಾಕಿಸ್ತಾನ ನಮ್ಮ ನೆಲದಲ್ಲಿ ಉಗ್ರ ಚಟುವಟಿಕೆಯನ್ನು ಹೆಚ್ಚಿಸುವ ಪ್ರಯತ್ನವನ್ನು ಬಿಟ್ಟಿಲ್ಲ. ಆದರೆ, ಭದ್ರತಾ ಪಡೆಗಳು ಆ ಪ್ರಯತ್ನಗಳನ್ನು ವಿಫಲಗೊಳಿಸುತ್ತಿವೆ.

ರಾಜಕೀಯ ಇಚ್ಛಾಶಕ್ತಿಯೊಂದಿದ್ದರೆ ಬೆಟ್ಟದಂಥ ಸವಾಲನ್ನೂ ಗೆಲ್ಲಬಹುದು ಎಂಬುದಕ್ಕೆ ಕಣಿವೆಯು ಇಂದು ನಿಧಾನವಾಗಿ ಉಗ್ರ ಮುಕ್ತರಾಗುತ್ತಿರುವುದು ಕಣ್ಣ ಮುಂದಿನ ಉದಾಹರಣೆಯಾಗಿದೆ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅಗತ್ಯವಿರುವ ಕಠಿಣ ಕಾನೂನುಗಳನ್ನು ಜಾರಿ ಮಾಡುವ ಮೂಲಕ ಯಾವುದೇ ವ್ಯವಸ್ಥೆಯನ್ನು ಸರಿದಾರಿಗೆ ತರಬಹುದು. ಈಗ ಕೇಂದ್ರ ಸರ್ಕಾರ ಕೂಡ ಅದೇ ಮಾರ್ಗದಲ್ಲಿ ಕೆಲಸವನ್ನು ಮಾಡುತ್ತಿದೆ. ಟೆರರಿಸಂನಿಂದ ತತ್ತರಿಸಿರುವ ಕಾಶ್ಮೀರದಲ್ಲಿ ಮತ್ತೆ ಟೂರಿಸಂ ವೈಭವ ಮರುಕಳಿಸುವಂತಾಗಲಿ.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ | ಪಾಕ್ ಸರ್ಕಾರ ಹಿಂದುಗಳಿಗೆ ರಕ್ಷಣೆ ಒದಗಿಸಬೇಕು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Valmiki Corporation Scam: ಸಚಿವ ನಾಗೇಂದ್ರ ಇಂದೇ ರಾಜೀನಾಮೆ: ಖಚಿತಪಡಿಸಿದ ಡಿಸಿಎಂ ಡಿಕೆಶಿ

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದಲ್ಲಿ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ಸ್ವಯಂಪ್ರೇರಿತವಾಗಿ ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆಶಿ ತಿಳಿಸಿದ್ದಾರೆ.

VISTARANEWS.COM


on

Valmiki corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದಲ್ಲಿ (Valmiki Corporation Scam) ಹೆಸರು ಕೇಳಿಬಂದಿರುವ ಸಚಿವ ನಾಗೇಂದ್ರ (Minister B Nagendra) ಇಂದೇ ತಮ್ಮ ರಾಜೀನಾಮೆಯನ್ನು ಸಿಎಂಗೆ ತಲುಪಿಸಲಿದ್ದಾರೆ. ಈ ವಿಚಾರವನ್ನು ಡಿಸಿಎಂ ಡಿಕೆ ಶಿವಕುಮಾರ್‌ ಖಚಿತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಡಿಕೆಶಿ ಅವರು, “ನಾಗೇಂದ್ರ ಸ್ವಯಂಪ್ರೇರಿತವಾಗಿ ರಾಜೀನಾಮೆಗೆ ಮುಂದಾಗಿದ್ದಾರೆ”. ಹಗರಣದಿಂದಾಗಿ ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಆಗಬಾರದೆಂದು ನಾಗೇಂದ್ರ ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಹೇಳಿದ್ದಾರೆ.

ನಾನು, ಗೃಹ ಸಚಿವರು, ಸಚಿವ ನಾಗೇಂದ್ರ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರು ಈ ಅಕ್ರಮದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ. ಆದರೆ, ಪಕ್ಷದ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂದು ಸ್ವತಃ ನಾಗೇಂದ್ರ ಅವರೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂದೇ ಅವರು ರಾಜೀನಾಮೆ ನೀಡಬಹುದು ಎಂದು ತಿಳಿಸಿದ್ದಾರೆ.

ಸರ್ಕಾರ ರಾಜೀನಾಮೆ ಸ್ವೀಕರಿಸಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ ಮುಖ್ಯಮಂತ್ರಿಗಳು ಪಕ್ಷದ ಹೈಕಮಾಂಡ್ ಜತೆ ಚರ್ಚೆ ಮಾಡಿ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ನಾಗೇಂದ್ರ ಬೆಂಬಲಕ್ಕೆ ನಿಂತ ಸಿಎಂ ಸಿದ್ದರಾಮಯ್ಯ!

ವಾಲ್ಮೀಕಿ ನಿಗಮ ಹಗರಣದ ಹಿನ್ನೆಲೆಯಲ್ಲಿ (Valmiki Corporation Scam) ಸಚಿವ ಬಿ. ನಾಗೇಂದ್ರ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿದ್ದಾರೆ.

ಸಚಿವ ನಾಗೇಂದ್ರ ರಾಜೀನಾಮೆಗೆ ಸೂಚನೆ ಕೊಟ್ಟೀದ್ದೀರಾ ಎಂಬ ವಿಧಾನಸೌಧದಲ್ಲಿ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಪ್ರತಿಭಟನೆ, ಪಾದಯಾತ್ರೆ ಮಾಡುವವರು ಮಾಡಲಿ,. ಕರೆದು ಮಾತನಾಡಿದ ತಕ್ಷಣ ರಾಜೀನಾಮೆ ಕೊಡಿ ಎಂದರ್ಥವಲ್ಲ. ಪ್ರಕರಣದ ತನಿಖೆ ಆಗಲಿ, ವರದಿ ಬರಲಿ ಎಂದು ಹೇಳಿದ್ದಾರೆ.

ಬಿಜೆಪಿಯವರು ರಾಜಭವನಕ್ಕೆ ಹೋದರೆ ಹೋಗಲಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಕುರಿತ ತನಿಖೆಗೆ ಎಸ್ಐಟಿ ರಚನೆ ಆಗಿದೆ. ಎಸ್ಐಟಿಯವರು ತನಿಖೆ ಮಾಡುತ್ತಿದ್ದಾರೆ. ತನಿಖೆ ಮುಗಿಯಲಿ ಎಂದು ಸಿಎಂ ಹೇಳಿದರು.

ನಾಗೇಂದ್ರರನ್ನು ಕರೆದು ಮಾತನಾಡಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ನಾನು ಎಲ್ಲ ಸಚಿವರನ್ನು ಕರೆದು ಮಾತನಾಡುತ್ತೇನೆ. ಅದರಂತೆ ನಾಗೇಂದ್ರ ಜತೆಗೂ ಮಾತನಾಡಿದ್ದೇನೆ ಎಂದರು. ಹಾಗಿದ್ದರೆ‌ ರಾಜೀನಾಮೆಗೆ ಸೂಚನೆ ನೀಡಿದ್ದೀರಾ ಎಂಬ ಪ್ರಶ್ನೆಗೆ, ಸಿಎಂ ಉತ್ತರಿಸದೇ ಮೌನಕ್ಕೆ ಶರಣಾದರು.

Continue Reading

ಕರ್ನಾಟಕ

Valmiki Corporation Scam: ಸಚಿವ ನಾಗೇಂದ್ರ ರಾಜೀನಾಮೆ ಪಡೆಯುವುದು ಉತ್ತಮ; ಸರ್ಕಾರಕ್ಕೆ ಅಭಿಪ್ರಾಯ ತಿಳಿಸಿದ ಎಸ್‌ಐಟಿ?

Valmiki Corporation Scam: ವಾಲ್ಮೀಕಿ ನಿಗಮ ಹಗರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ನಿಷ್ಪಕ್ಷಪಾತ ತನಿಖೆ ನಡೆಯಬೇಕಾದರೆ ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯುವುದು ಉತ್ತಮ ಎಂದು ರಾಜ್ಯ ಸರ್ಕಾರಕ್ಕೆ ಎಸ್‌ಐಟಿ ಅಭಿಪ್ರಾಯ ತಿಳಿಸಿದೆ.

VISTARANEWS.COM


on

SIT feels it would be better for Minister Nagendra to resign
Koo

ಬೆಂಗಳೂರು: ವಾಲ್ಮೀಕಿ ನಿಗಮ ಹಗರಣದ ತನಿಖೆ ಸ್ಥಿತಿಗತಿ ಬಗ್ಗೆ ಎಸ್‌ಐಟಿ ಅಧಿಕಾರಿಗಳಿಂದ ರಾಜ್ಯ ಸರ್ಕಾರಕ್ಕೆ ಅಭಿಪ್ರಾಯ ಸಲ್ಲಿಕೆ ಮಾಡಲಾಗಿದೆ. ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ಅವ್ಯವಹಾರದಲ್ಲಿ ಭಾಗಿಯಾಗಿದ್ದ ಸಚಿವ ನಾಗೇಂದ್ರ ಅವರ ಆಪ್ತರು ಬಂಧನವಾಗಿದ್ದಾರೆ. ಹೀಗಾಗಿ ಮುಂದಿನ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕಾದರೆ ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯುವುದು ಉತ್ತಮ ಎಂಬ ಅಭಿಪ್ರಾಯವನ್ನು ಎಸ್‌ಐಟಿ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಚಿವ ನಾಗೇಂದ್ರ ಅವರು ಪ್ರಕರಣದಲ್ಲಿ ಭಾಗಿಯಾಗಿದ್ದಾರೋ, ಇಲ್ಲವೋ ಎಂಬುವುದು ಗೊತ್ತಿಲ್ಲ. ಆದರೆ, ಸತ್ಯ ಹೊರಬರಬೇಕಾದರೆ, ತನಿಖೆ ಸರಿಯಾಗಿ ನಡೆಯಬೇಕಾದ್ರೆ ಸಚಿವರ ರಾಜೀನಾಮೆ ಪಡೆಯುವುದು ಉತ್ತಮ ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಸಚಿವರ ರಾಜೀನಾಮೆ ಪಡೆಯಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂದು ವಿಸ್ತಾರ ನ್ಯೂಸ್‌ಗೆ ಉನ್ನತ ಮೂಲಗಳಿಂದ ಮಾಹಿತಿ ಲಭಿಸಿದೆ.

ಇದನ್ನೂ ಓದಿ | Pradeep Eshwar: ಪ್ರದೀಪ್‌ ಈಶ್ವರ್‌ ರಾಜೀನಾಮೆಗೆ ಒತ್ತಾಯಿಸಿದ ಕಾಂಗ್ರೆಸ್‌ ನಾಯಕ ಪಕ್ಷದಿಂದಲೇ ಉಚ್ಚಾಟನೆ!

ರಾಜೀನಾಮೆ ನೀಡುತ್ತಾರಾ ನಾಗೇಂದ್ರ?

ವಾಲ್ಮೀಕಿ ನಿಗಮದ (Valmiki Corporation Scam) ಹಗರಣಕ್ಕೆ ಸಂಬಂಧಿಸಿ ನಿನ್ನೆ ಸಚಿವ ನಾಗೇಂದ್ರ (Minister B Nagendra) ಜೊತೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಮಾತುಕತೆ ನಡೆಸಿದ್ದು, ರಾಜೀನಾಮೆ (Resignation) ಕೊಡಲು ಸಜ್ಜಾಗಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆ ರಾತ್ರಿ ಭೇಟಿ ವೇಳೆ, ನಾಳೆ ಈ ಕುರಿತು ಇನ್ನಷ್ಟು ಮಾತನಾಡಲು ಬರುವಂತೆ ಸಿಎಂ ತಿಳಿಸಿದ್ದು, ಇಂದು ಬಹುತೇಕ ರಾಜೀನಾಮೆಗೆ ಸೂಚನೆ ನೀಡಲಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ನಿನ್ನೆಯೇ ಸಿಎಂ ರಾಜೀನಾಮೆಗೆ ಸಿಎಂ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ ನಾಗೇಂದ್ರ, ಸಿಎಂ ಇಂದು ಬರೋದಕ್ಕೆ ತಿಳಿಸಿದ್ದಾರೆ ಅನ್ನುತ್ತಿದ್ದಾರೆ. ಬಹುತೇಕ ಇಂದು ಸ್ಪಷ್ಟ ಚಿತ್ರಣ ಸಿಗಲಿದೆ. ಒಂದು ವೇಳೆ ಸಿಎಂ ಸೂಚನೆ ಮೇರೆಗೆ ಇಂದು ರಾಜೀನಾಮೆ ಕೊಟ್ಟರೆ ಸರ್ಕಾರದ ಮೊದಲ ವಿಕೆಟ್ ಪತನವಾಗಲಿದೆ.

ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಆತ್ಮಹತ್ಯೆ ಹಾಗೂ ಅವರ ಡೆತ್‌ನೋಟ್‌ ಬಯಲಾದ ಬಳಿಕ ಬೆಳಕಿಗೆ ಬಂದ ಹಗರಣದ ಬಳಿಕ ಇಷ್ಟು ದಿನ ನಾಗೇಂದ್ರ ಯಾರ ಕೈಗೂ ಸಿಕ್ಕಿರಲಿಲ್ಲ, ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ನಿನ್ನೆ ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ನಾಗೇಂದ್ರ ಭೇಟಿ ಮಾಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ವಾಲ್ಮೀಕಿ ನಿಗಮ ಆಕ್ರಮ ಹಣ ವರ್ಗಾವಣೆ ವಿಚಾರ ಕುರಿತು ಸಿಎಂ ಚರ್ಚಿಸಿದ್ದಾರೆ.

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಅನ್ನು ಸಚಿವ ನಾಗೇಂದ್ರ ಭೇಟಿಯಾಗಿದ್ದು, ಈ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಸಚಿವ ಜಮೀರ್ ಸಹ ಉಪಸ್ಥಿತರಿದ್ದರು. ವಾಲ್ಮೀಕಿ ನಿಗಮದ 185 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪ್ರತಿಪಕ್ಷಗಳು ಬಿಗಿ ಪಟ್ಟು ಹಿಡಿದಿವೆ. ಬಿಜೆಪಿ ನಾಗೇಂದ್ರ ವಿರುದ್ಧ ರಣಕಹಳೆ ಮೊಳಗಿಸಿದೆ. ಈಗಾಗಲೇ ಈ ಪ್ರಕರಣಕ್ಕೆ ಸಿಬಿಐ ಎಂಟ್ರಿಯಾಗಿದೆ. ಹೀಗಾಗಿ ಏನಾದರೂ ಒಂದು ಕ್ರಮ ತೆಗೆದುಕೊಳ್ಳುವುದು ಸಿಎಂಗೆ ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ನಾಗೇಂದ್ರರನ್ನು ಕರೆಸಿ ಚರ್ಚೆ ಮಾಡಿರುವುದು ಸಾಕಷ್ಟು ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ | Chandrababu Naidu: ಆಂಧ್ರ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ಮುಂದೂಡಿಕೆ

ಈಗಾಗಲೇ ನೈತಿಕ ಹೊಣೆ ಹೊತ್ತು ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಬೇಕಾಗಿತ್ತು ಎಂದು ಕಾಂಗ್ರೆಸ್‌ನ ಹಲವು ಹಿರಿಯ ನಾಯಕರು ಸೂಚಿಸಿದ್ದಾರೆ. ಸಂಪುಟದ ಸಹೋದ್ಯೋಗಿಗಳೇ ಮುಗುಂ ಆಗಿದ್ದಾರೆ. ಹೀಗಾಗಿ, ಸಿಬಿಐಯಲ್ಲಿ ಎಫ್ಐಆರ್ ದಾಖಲು ಆಗುತ್ತಿದ್ದಂತೆ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.

Continue Reading

ಪ್ರಮುಖ ಸುದ್ದಿ

Pradeep Eshwar: ಪ್ರದೀಪ್‌ ಈಶ್ವರ್‌ ರಾಜೀನಾಮೆಗೆ ಒತ್ತಾಯಿಸಿದ ಕಾಂಗ್ರೆಸ್‌ ನಾಯಕ ಪಕ್ಷದಿಂದಲೇ ಉಚ್ಚಾಟನೆ!

Pradeep Eshwar: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು (Congress candidate) ಬೆಂಬಲಿಸದೆ, ಅನ್ಯ ಪಕ್ಷದ ಅಭ್ಯರ್ಥಿಯೊಂದಿಗೆ ಪ್ರಚಾರದಲ್ಲಿ ಭಾಗಿಯಾಗಿದ್ದಾನೆಂದು ಕಾರಣ ನೀಡಿ ಉಚ್ಚಾಟನೆ ಮಾಡಲಾಗಿದೆ. ಈ ಜಗದೀಶ್‌ ಅವರು ಚಿಕ್ಕಬಳ್ಳಾಪುರ ಮಾಜಿ ಶಾಸಕ ಎಸ್. ಮುನಿಯಪ್ಪ ಪುತ್ರನಾಗಿದ್ದಾರೆ.

VISTARANEWS.COM


on

Pradeep Eshwar
Koo

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶದ (Election Results 2024) ಬಳಿಕ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ರಾಜೀನಾಮೆಗೆ ಒತ್ತಾಯಿಸಿದ ಕಾಂಗ್ರೆಸ್ (congress) ಮುಖಂಡನೊಬ್ಬನನ್ನು ಪಕ್ಷದ ಯುವ ಕಾರ್ಯದರ್ಶಿ ಹುದ್ದೆಯಿಂದ ಹಾಗೂ ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಎಸ್.ಎಂ ಜಗದೀಶ್ ಎಂಬವರನ್ನು ರಾಜ್ಯ ಪ್ರದೇಶ ಯುವ ಕಾಂಗ್ರೆಸ್ (Youth congress) ಕಾರ್ಯದರ್ಶಿ ಹುದ್ದೆಯಿಂದ ಉಚ್ಚಾಟನೆ ಮಾಡಲಾಗಿದೆ.

ಇವರು, ಶಾಸಕ ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಿದ್ದರು. ರಾಜೀನಾಮೆಗೆ ಒತ್ತಾಯಿಸಿದ್ದರ ಕುರಿತು ವಿಸ್ತಾರ ನ್ಯೂಸ್ ವರದಿ ಮಾಡಿತ್ತು. ವಿಸ್ತಾರ ನ್ಯೂಸ್ ವರದಿ ವೀಕ್ಷಣೆ ಬಳಿಕ, ಜಗದೀಶ್ ಅವರನ್ನು ಹುದ್ದೆಯಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಉಚ್ಛಾಟಿಸಿದೆ. ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೂ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು (Congress candidate) ಬೆಂಬಲಿಸದೆ, ಅನ್ಯ ಪಕ್ಷದ ಅಭ್ಯರ್ಥಿಯೊಂದಿಗೆ ಪ್ರಚಾರದಲ್ಲಿ ಭಾಗಿಯಾಗಿದ್ದಾನೆಂದು ಕಾರಣ ನೀಡಿ ಉಚ್ಚಾಟನೆ ಮಾಡಲಾಗಿದೆ. ಈ ಜಗದೀಶ್‌ ಅವರು ಚಿಕ್ಕಬಳ್ಳಾಪುರ ಮಾಜಿ ಶಾಸಕ ಎಸ್. ಮುನಿಯಪ್ಪ ಪುತ್ರನಾಗಿದ್ದಾರೆ. ಈ ಹಿಂದೆ ವಿಧಾನಸಭೆ ಚುನಾವಣೆ ಪ್ರಚಾರ ಕಣದಲ್ಲಿ ಇವರು ಪ್ರದೀಪ್‌ ಈಶ್ವರ ಜತೆಗಿದ್ದರು.

ಇತ್ತೀಚೆಗೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಲ್ಬಣಿಸಿತ್ತು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಕೆ. ಸುಧಾಕರ್‌‌ (K Sudhakar) ಅವರು ಸ್ಪರ್ಧಿಸಿದ್ದು, ಈ ಬಗ್ಗೆ ಪ್ರದೇಶ್‌ ಈಶ್ವರ್‌ ವ್ಯಂಗ್ಯವಾಡಿದ್ದರು. ಕಾಂಗ್ರೆಸ್‌ ಅಭ್ಯರ್ಥಿಗಿಂತ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಒಂದು ಮತ ಲೀಡ್‌ ಪಡೆದರೂ (election results 2024) ರಾಜೀನಾಮೆ ನೀಡುವುದಾಗಿ ಘೋಷಿಸಿದ್ದ ಶಾಸಕ ಪ್ರದೀಪ್‌ ಈಶ್ವರ್‌ (Pradeep Eshwar) ರಾಜೀನಾಮೆಗೆ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದರು. ಈ ಸುದ್ದಿ ವೈರಲ್‌ ಆದ ಬೆನ್ನಲ್ಲೇ ಸ್ವಪಕ್ಷದ ಶಾಸಕನ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಕೂಡ ತಿರುಗಿಬಿದ್ದಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ದರು.

ಈ ಹಿಂದೆ ನಡೆದಿದ್ದ ಕಾಂಗ್ರೆಸ್‌ ಸಭೆಯಲ್ಲಿ “ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸುಧಾಕರ್‌ ಅವರಿಗೆ ಒಂದೇ ಒಂದು ಮತದ ಲೀಡ್‌ ಸಿಕ್ಕರೂ ರಾಜಕೀಯ ನಿವೃತ್ತಿ ಪಡೆಯುವೆ” ಎಂದು ಶಾಸಕ ಪ್ರದೀಪ್‌ ಈಶ್ವರ್‌ ಸವಾಲು ಹಾಕಿದ್ದರು. ಇದೀಗ ಆ ಹೇಳಿಕೆಯೇ ಅವರಿಗೆ ತಲೆನೋವು ತಂದಿದೆ.

ಅಣಕು ರಾಜೀನಾಮೆ ಪತ್ರ ವೈರಲ್‌, ಟ್ರೋಲ್‌

ಶಾಸಕ ಪ್ರದೀಪ್‌ ಈಶ್ವರ್‌ ರಾಜೀನಾಮೆ ಘೋಷಣೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಪೋಸ್ಟರ್. ‌

“ನನ್ನ ಮಾತಿಗೆ ನಾನು ಬದ್ಧ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಿಂತ ಬಿಜೆಪಿ ಅಭ್ಯರ್ಥಿ ಹೆಚ್ಚು ಮತಗಳನ್ನು ಪಡೆದಿರುವುದರಿಂದ ನಾನು ನೈತಿಕ ಹೊಣೆ ಹೊತ್ತು, ಶಾಸಕ ಸ್ಥಾನಕ್ಕೆ ಜೂನ್‌ 5ರಂದು ಬೆಳಗ್ಗೆ 5ಗಂಟೆಗೆ ರಾಜೀನಾಮೆ ನೀಡಲಿದ್ದೇನೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಿನ್ನಡೆಗೆ ನಾನೇ ನೇರ ಹೊಣೆ ಎಂದು” ಶಾಸಕ ಪ್ರದೀಪ್‌ ಈಶ್ವರ್‌ ಅವರು ಹೇಳಿದಂತಿರುವ ಪೋಸ್ಟರ್‌ ವೈರಲ್‌ ಮಾಡಲಾಗಿದೆ. ಆದರೆ, ಇದು ಶಾಸಕ ಪ್ರದೀಪ್‌ ಈಶ್ವರ್‌ ಅವರ ಅಧಿಕೃತ ಪೋಸ್ಟರ್‌ ಅಲ್ಲ. ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಟ್ರೋಲ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ | Chikballapur Election Result 2024 : ಚಿಕ್ಕಬಳ್ಳಾಪುರದಲ್ಲಿ ಡಾ. ಸುಧಾಕರ್​ಗೆ ಭರ್ಜರಿ ಗೆಲುವು

Continue Reading

ಪ್ರಮುಖ ಸುದ್ದಿ

Trekking Tragedy: ಸಾವಿನ ಕಣಿವೆಯಾದ ಸಹಸ್ತ್ರತಾಲ್; ಬೆಂಗಳೂರಿನ 9 ಚಾರಣಿಗರು ಬಲಿಯಾದದ್ದು ಹೇಗೆ?

Trekking Tragedy: “ಮಧ್ಯಾಹ್ನ 3.30ರ ಸುಮಾರಿಗೆ ಹಿಮ ಬಿರುಗಾಳಿ ಬೀಸಲಾರಂಭಿಸಿತು. ಗೋಚರತೆ ತಪ್ಪಿಹೋಯಿತು. ಅಲ್ಲಿಯವರೆಗೆ ಚಾರಣಕ್ಕೆ ಏನೂ ಕಷ್ಟವಾಗಿರಲಿಲ್ಲ. ಹಿಮಗಾಳಿ ನಾಲ್ಕು ಗಂಟೆಗಳ ಕಾಲ ಬೀಸಿತು. ನಮಗಿಂತ ಒಂದು ಅಡಿ ಮುಂದಿರುವುದೂ ಕಾಣುತ್ತಿರಲಿಲ್ಲ.”

VISTARANEWS.COM


on

uttarakhand Trekking Tragedy
Koo

ಬೆಂಗಳೂರು: ಉತ್ತರಾಖಂಡದ (Uttarakhand) ಸಹಸ್ತ್ರತಾಲ್‌ ಶಿಖರ (Sahstra Tal Summit) ಏರಲು ಹೋಗಿದ್ದ ಬೆಂಗಳೂರಿನ 22 ಮಂದಿಯ ಚಾರಣಿಗರ (Trekkers) ತಂಡದಲ್ಲಿ 13 ಮಂದಿ ಮಾತ್ರ ಪಾರಾಗಿದ್ದಾರೆ. 9 ಮಂದಿ ಮೃತಪಟ್ಟಿದ್ದಾರೆ. ವಿಪರೀತ ಹಿಮಗಾಳಿ (blizzard), ಪ್ರತಿಕೂಲ ಹವಾಮಾನದಿಂದಾಗಿ ಈ ದುರ್ಘಟನೆ (Trekking Tragedy) ಸಂಭವಿಸಿದೆ. ಚಾರಣಿಗರಲ್ಲಿ ಬದುಕುಳಿದವರು ಅಲ್ಲಿ ಏನು ನಡೆಯಿತು ಎಂಬ ಚಿತ್ರಣವನ್ನು ಕೊಟ್ಟಿದ್ದಾರೆ.

ಕರ್ನಾಟಕ ಮೌಂಟನೀರಿಂಗ್ ಇನ್ಸ್ಟಿಟ್ಯೂಟ್ ಮುಖಾಂತರ ಉತ್ತರಾಖಂಡದ ಸಹಸ್ತ್ರತಾಲ್‌ಗೆ ಮೇ 29ರಂದು ಕರ್ನಾಟಕದ 22 ಜನರ ಗುಂಪು ಚಾರಣಕ್ಕೆ ತೆರಳಿತ್ತು. 21 ಚಾರಣಿಗರು ಮತ್ತು ಒಬ್ಬರು ಗೈಡ್ ಅನ್ನೊಳಗೊಂಡ ಟೀಂ ಇದಾಗಿತ್ತು. ಅಲ್ಲಿನ ಕುಫ್ರಿ ಟಾಪ್‌ ಎಂಬ ಶಿಖರಕ್ಕೆ ಹತ್ತಿ ಮರಳುತ್ತಿದ್ದಾಗ ಹವಾಮಾನ ಕೆಟ್ಟು ವಿಪರೀತ ಹಿಮಗಾಳಿ ಬೀಸಲಾರಂಭಿಸಿದೆ. ಇಳಿಯುವ ದಾರಿ ಮುಚ್ಚಿಹೋಗಿದ್ದು, ಹಿಂದಿರುಗಲು ಗೊತ್ತಾಗಿಲ್ಲ. ಎಲ್ಲರೂ ಅಲ್ಲೇ ಬಂಡೆಗಳನ್ನು ಆಶ್ರಯಿಸಿ ಪಾರಾಗಲು ಯತ್ನಿಸಿದ್ದಾರೆ. ಆದರೆ 9 ಜನ ಮೃತಪಟ್ಟಿದ್ದಾರೆ. ನಿನ್ನೆ 5 ಜನರ ಮೃತದೇಹ ಪತ್ತೆಯಾಗಿದ್ದು, ಇಂದು ಬೆಳಗ್ಗೆ 4 ಮೃತದೇಹಗಳನ್ನು ಪತ್ತೆ ಹಚ್ಚಲಾಗಿದೆ. ಇಂದು ಸಂಜೆ ಬೆಂಗಳೂರಿಗೆ ಮೃತದೇಹಗಳನ್ನು ತರುವ ಸಾಧ್ಯತೆ ಇದೆ. ವಿಶೇಷ ವಿಮಾನದಲ್ಲಿ ಮೃತ ದೇಹಗಳು ರವಾನೆಯಾಗಲಿವೆ. ಸಚಿವ ಕೃಷ್ಣಬೈರೇಗೌಡ ಡೆಹ್ರಾಡೂನ್‌ಗೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯ ಮಾಹಿತಿ ಪಡೆಯುತ್ತಿದ್ದಾರೆ.

ಬದುಕುಳಿದ ಚಾರಣಿಗ, 52 ವರ್ಷದ ಮಧು ಕಿರಣ್ ರೆಡ್ಡಿ ಎಂಬವರು ಘಟನೆಯನ್ನು ವಿವರಿಸಿದ್ದಾರೆ: “ನಮ್ಮಲ್ಲಿ ಹೆಚ್ಚಿನವರು ಅನುಭವಿ ಚಾರಣಿಗರು. 25ರಿಂದ 30 ಚಾರಣ ಮಾಡಿದ್ದೇನೆ. ಜೂನ್ 3ರ ಮಧ್ಯಾಹ್ನ ಸಹಸ್ತ್ರ ತಾಲ್ ಶಿಖರದಲ್ಲಿ ಸಂತೋಷದಿಂದ ಸಮಯ ಕಳೆದ ನಂತರ ನಮ್ಮ ಗುಂಪು ಬೇಸ್ ಕ್ಯಾಂಪ್‌ಗೆ ಹಿಂತಿರುಗುತ್ತಿತ್ತು. ಇಬ್ಬರು ಸದಸ್ಯರು ಮುಖ್ಯ ಗುಂಪಿನ ಮುಂದೆ ಇದ್ದರು. ಅವರಿಗೆ ಏನೂ ಆಗಲಿಲ್ಲ. ಮಧ್ಯಾಹ್ನ 3.30ರ ಸುಮಾರಿಗೆ ಹಿಮ ಬಿರುಗಾಳಿ ಬೀಸಲಾರಂಭಿಸಿತು. ಗೋಚರತೆ ತಪ್ಪಿಹೋಯಿತು. ಅಲ್ಲಿಯವರೆಗೆ ಚಾರಣಕ್ಕೆ ಏನೂ ಕಷ್ಟವಾಗಿರಲಿಲ್ಲ. ಹಿಮಗಾಳಿ ನಾಲ್ಕು ಗಂಟೆಗಳ ಕಾಲ ಬೀಸಿತು. ನಮಗಿಂತ ಒಂದು ಅಡಿ ಮುಂದಿರುವುದೂ ಕಾಣುತ್ತಿರಲಿಲ್ಲ.”

“ಹಿಂತಿರುಗುವ ದಾರಿ ಕಾಣುವವರೆಗೆ ಅಲ್ಲಿಯೇ ಇರಲು ನಿರ್ಧರಿಸಿದೆವು. ನಾವೆಲ್ಲ ದೊಡ್ಡ ಬಂಡೆಯ ಕೆಳಗೆ ಆಶ್ರಯ ಪಡೆದೆವು. ಆ ರಾತ್ರಿಯಲ್ಲಿ ಚಳಿಯಿಂದಾಗಿ ನಮ್ಮ ಮುಂದೆಯೇ ಇಬ್ಬರು ಸತ್ತರು. ಬೆಳಗಿನ ವೇಳೆಗೆ ಇತರ ಇಬ್ಬರು ಸಾವನ್ನಪ್ಪಿದರು. ಮರುದಿನ ಇನ್ನೂ ಐದು ಮಂದಿ ಸಾವನ್ನಪ್ಪಿದರು. ಅಂತಿಮವಾಗಿ ನಮ್ಮ ದಾರಿ ಕಾಣಲಾರಂಭಿಸಿದಾಗ ಹಿಂದಿರುಗಿದೆವು. ನಮ್ಮ ಮೂಲ ಶಿಬಿರದಿಂದ ಕೇವಲ ಒಂದು ಗಂಟೆ ದೂರದಲ್ಲಿದ್ದೆವು ಎಂಬುದು ನಂತರ ಗೊತ್ತಾಯಿತು” ಎಂದು ಅವರು ಹೇಳಿದ್ದಾರೆ.

ಎಲ್ಲಾ ಒಂಬತ್ತು ಮಂದಿ ಹೈಪೋಥರ್ಮಿಯಾದಿಂದ ಸಾವನ್ನಪ್ಪಿದ್ದಾರೆ. ಗುಂಪಿನ ಎಲ್ಲಾ ಸದಸ್ಯರ ಬಳಿಯೂ ಸಾಕಷ್ಟು ಥರ್ಮಲ್‌ಗಳು, ರಕ್‌ಸಾಕ್‌ಗಳು ಮತ್ತು ಪೊಂಚೋಗಳನ್ನು ಒಳಗೊಂಡಂತೆ ಅಗತ್ಯ ಸಿದ್ಧತೆಗಳಿದ್ದರೂ ಹೀಗಾಗಿದೆ.

ಬದುಕುಳಿದ ಚಾರಣಿಗರ ತಂಡದೊಂದಿಗೆ ಡೆಹ್ರಾಡೂನ್‌ನಲ್ಲಿ ಸಚಿವ ಕೃಷ್ಣಬೈರೇಗೌಡ ಮುಖಾಮುಖಿಯಾಗಿದ್ದು, ಅಲ್ಲಿ ನಡೆದದ್ದೇನು ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.

“ಜೂನ್ 3ರಂದು ಇಬ್ಬರು ಚಾರಣಿಗರು ಮುಖ್ಯ ತಂಡದಿಂದ ಬೇರ್ಪಟ್ಟು ಚಾರಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರು ಅಪಾಯದಿಂದ ಪಾರಾಗಿದ್ದಾರೆ. ಆದರೆ, ಅದೇ ದಿನ ಬೆಳಿಗ್ಗೆ 20 ಚಾರಣಿಗರು ಮತ್ತು ಆ ತಂಡದ ಮಾರ್ಗದರ್ಶಿಯನ್ನೊಳಗೊಂಡ ತಂಡ ಲ್ಯಾಂಬ್ಟಾಲ್ ಕ್ಯಾಂಪ್ ಸೈಟ್‌ನಿಂದ ಸಹಸ್ರತಾಲ್‌ಗೆ ತೆರಳಿದೆ.

ಚಾರಣದ ಗಮ್ಯ ತಲುಪಿ ವಾಪಸ್‌ ಶಿಬಿರಕ್ಕೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ, ಅವರು ಶಿಬಿರದಿಂದ ಸುಮಾರು ಒಂದೂವರೆ ಅಥವಾ ಎರಡು ಗಂಟೆಗಳ ದೂರದಲ್ಲಿದ್ದಾಗ, ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಹಿಮಪಾತವು ಪ್ರಾರಂಭವಾಗಿದೆ. ಸಂಜೆ 4 ಗಂಟೆಯ ಹೊತ್ತಿಗೆ ಹಿಮಪಾತವು ತೀವ್ರಗೊಂಡಿದೆ. ಸಂಜೆ 6 ಗಂಟೆ ವೇಳೆಗೆ ಇಬ್ಬರು ಚಾರಣಿಗರು ಹವಾಮಾನ ವೈಪರೀತ್ಯಕ್ಕೆ ಬಲಿಯಾಗಿದ್ದಾರೆ. ಹಿಮ ಮತ್ತು ಹಿಮಗಾಳಿಯು ಚಾರಣಿಗರು ವಾಪಸ್‌ ಶಿಬಿರಕ್ಕೆ ಹಿಂದಿರುಗುವುದನ್ನು ಅಸಾಧ್ಯಗೊಳಿಸಿದೆ. ಗೋಚರತೆಯೂ ಶೂನ್ಯಕ್ಕೆ ಇಳಿದಿದೆ.

ಆ ರಾತ್ರಿ ಎಲ್ಲರೂ ಒಟ್ಟಿಗೆ ಕಳೆದಿದ್ದಾರೆ. ಆದರೆ, ಈ ವೇಳೆ ಹಿಮಗಾಳಿಯ ತೀವ್ರತೆಗೆ ಕೆಲವರು ಅದೇ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಜೂನ್ 4 ರ ಬೆಳಿಗ್ಗೆ, ಮೊಬೈಲ್ ಸಂಪರ್ಕ ಸಿಗಬಹುದಾದ ಸ್ಥಳಕ್ಕೆ ತಂಡದ ಮಾರ್ಗದರ್ಶಕ ತಲುಪಿದ್ದಾನೆ. ಈ ನಡುವೆ ಶಿಬಿರಕ್ಕೆ ಹಿಂತಿರುಗುವ ಸ್ಥಿತಿಯಲ್ಲಿದ್ದ ಕೆಲವು ಚಾರಣಿಗರು ಬೆಳಗ್ಗೆ 11 ಗಂಟೆ ಸುಮಾರಿಗೆ ಶಿಬಿರದ ಕಡೆಗೆ ಹೊರಟಿದ್ದಾರೆ. ಮಾರ್ಗದರ್ಶಕ ಶಿಬಿರಕ್ಕೆ ಬಂದು ಸಿಕ್ಕಿಬಿದ್ದ ಚಾರಣಿಗರನ್ನು ಕಾಪಾಡಲು ಬೇಕಾದ ಸಾಮಗ್ರಿಗಳೊಂದಿಗೆ ಮತ್ತೆ ಹಿಂತಿರುಗಿದ್ದಾರೆ.

ಜೂನ್ 4ರ ಸಂಜೆ ವೇಳೆಗೆ ಮಾರ್ಗದರ್ಶಿಯು ಫೋನ್ ಸಿಗ್ನಲ್ ಲಭ್ಯವಿರುವ ಸ್ಥಳವನ್ನು ತಲುಪಿಕೊಂಡಿದ್ದು, ಪರಿಸ್ಥಿತಿಯ ಬಗ್ಗೆ ಕರ್ನಾಟಕ ಪರ್ವತಾರೋಹಣ ಸಂಸ್ಥೆ ಮತ್ತು ಭಾರತೀಯ ಪರ್ವತಾರೋಹಣ ಒಕ್ಕೂಟ ಸಂಸ್ಥೆಗಳಿಗೆ ದುರ್ಘಟನೆಯ ಬಗ್ಗೆ ಮಾಹಿತಿ ನೀಡಿ ಎಚ್ಚರಿಸಿದ್ದಾರೆ.

ಕರ್ನಾಟಕ ಮತ್ತು ಉತ್ತರಾಖಂಡ ಸರ್ಕಾರಗಳು ಜೂನ್ 4 ರ ರಾತ್ರಿ ವೇಳೆಗೆ ರಕ್ಷಣಾ ಕಾರ್ಯಾಚರಣೆಗಳ ಸಿದ್ಧತೆಗಳನ್ನು ಪ್ರಾರಂಭಿಸಿತ್ತು. ಭೂ ಸೇನೆ, ವಾಯುಪಡೆ, ಎಸ್‌ಡಿಆರ್‌ಎಫ್ ಮತ್ತು ವಿವಿಧ ಸರ್ಕಾರಿ-ಸರ್ಕಾರೇತರ ಸಂಸ್ಥೆಗಳು ಜೂನ್ 5 ರ ಬೆಳಿಗ್ಗೆ 5 ಗಂಟೆ ವೇಳೆಗೆ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.”

ಮೃತಪಟ್ಟವರು:

1) ಸುಜಾತ, ಬೆಂಗಳೂರು -52 ವರ್ಷ
2) ಸಿಂಧು , ಪ್ರಾಯ-47 ವರ್ಷ
3) ಚಿತ್ರಾ, ಪ್ರಾಯ-48 ವರ್ಷ
4) ಪದ್ಮಿನಿ ವಯಸ್ಸು 45 ವರ್ಷ
5) ವೆಂಕಟೇಶ್‌ ಪ್ರಸಾದ್‌ 52 ವರ್ಷ
6) ಅನಿತಾ, ಪ್ರಾಯ 61 ವರ್ಷ
7) ಆಶಾ ಸುಧಾಕರ, ಪ್ರಾಯ 72 ವರ್ಷ
8) ಪದ್ಮನಾಭನ್ ಕೆಪಿಎಸ್‌, ವಯಸ್ಸು 50 ವರ್ಷ
9) ವಿನಾಯಕ್

ರಕ್ಷಣೆಗೊಳಗಾದವರು:

1) ಸೌಮ್ಯಾ, 36 ವರ್ಷ
2) ವಿನಯ್, 49 ವರ್ಷ
3) ಶಿವಜ್ಯೋತಿ- 46 ವರ್ಷ
4) ಸುಧಾಕರ್‌, 64 ವರ್ಷ
5) ಸ್ಮೃತಿ, 41 ವರ್ಷ
6) ಸೀನಾ, 48 ವರ್ಷ
7) ಮಧುರೆಡ್ಡಿ- 52 ವರ್ಷ
8) ಜಯಪ್ರಕಾಶ್- 61 ವರ್ಷ
9) ಭರತ್- 53 ವರ್ಷ
10) ಅನಿಲ್ ಭಟ್- 52 ವರ್ಷ
11)‌ ವಿವೇಕ್ ಶ್ರೀಧರ್
12) ರಿತಿಕಾ ಜಿಂದಾಲ್
13) ನವೀನ್ ಎ.

ಇದನ್ನೂ ಓದಿ: Uttarakhand Trekking Tragedy: ಉತ್ತರಾಖಂಡದಿಂದ ರಾಜ್ಯದ ಚಾರಣಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ: ಸಿಎಂ

Continue Reading
Advertisement
Valmiki corporation Scam
ಕರ್ನಾಟಕ17 mins ago

Valmiki Corporation Scam: ಸಚಿವ ನಾಗೇಂದ್ರ ಇಂದೇ ರಾಜೀನಾಮೆ: ಖಚಿತಪಡಿಸಿದ ಡಿಸಿಎಂ ಡಿಕೆಶಿ

Protest demanding adequate bus facility at govinakovi village
ದಾವಣಗೆರೆ21 mins ago

Davanagere News: ಸಮರ್ಪಕ ಬಸ್‌ ಸೌಲಭ್ಯಕ್ಕೆ ಆಗ್ರಹಿಸಿ ಹೊನ್ನಾಳಿಯ ಗೋವಿನಕೋವಿ ಗ್ರಾಮಸ್ಥರ ಪ್ರತಿಭಟನೆ

Food Poisoning
ಬೆಂಗಳೂರು ಗ್ರಾಮಾಂತರ23 mins ago

Food Poisoning : ಇಲಿ ಬಿದ್ದ ಪಲ್ಯ ಸೇವಿಸಿದ ಎಸ್‌ ವ್ಯಾಸ ಕಾಲೇಜು ವಿದ್ಯಾರ್ಥಿಗಳಿಗೆ ವಾಂತಿ

Narendra Modi
ದೇಶ37 mins ago

Narendra Modi: ನರೇಂದ್ರ ಮೋದಿ ಪ್ರಮಾಣವಚನ ಕಾರ್ಯಕ್ರಮ ದಿಢೀರ್‌ ಮುಂದೂಡಿಕೆ?

Kannada New Movie sahara movie release tomorrow
ಸ್ಯಾಂಡಲ್ ವುಡ್42 mins ago

Kannada New Movie: ನಾಳೆಯಿಂದ ʻಸಹಾರಾʼ ಆಟ ಶುರು; ಕನ್ನಡದ ಮೊದಲ ಮಹಿಳಾ ಕ್ರಿಕೆಟ್ ಕಥೆಯಾಧಾರಿತ ಸಿನಿಮಾ!

Physical Abuse in Gadaga
ಕ್ರೈಂ46 mins ago

Physical Abuse : ಕಾಂಪೌಂಡ್‌ ಹಾರಿ ಬಂದ ಪುರಸಭೆ ಮಾಜಿ ಅಧ್ಯಕ್ಷೆಯ ಗಂಡನಿಗೆ ಚಳಿ ಬಿಡಿಸಿದ ಮಹಿಳೆಯರು

Environment awareness programme by NCC team in Bengaluru
ಬೆಂಗಳೂರು55 mins ago

World Environment Day: ಬೆಂಗಳೂರಿನಲ್ಲಿ ಎನ್‌ಸಿಸಿ ತಂಡದಿಂದ ವಿಶೇಷ ಪರಿಸರ ಜಾಗೃತಿ ಕಾರ್ಯಕ್ರಮ

SIT feels it would be better for Minister Nagendra to resign
ಕರ್ನಾಟಕ59 mins ago

Valmiki Corporation Scam: ಸಚಿವ ನಾಗೇಂದ್ರ ರಾಜೀನಾಮೆ ಪಡೆಯುವುದು ಉತ್ತಮ; ಸರ್ಕಾರಕ್ಕೆ ಅಭಿಪ್ರಾಯ ತಿಳಿಸಿದ ಎಸ್‌ಐಟಿ?

Encounter in UP
ದೇಶ1 hour ago

Encounter in UP: ಮೋಸ್ಟ್‌ ವಾಂಟೆಡ್‌ ಗ್ಯಾಂಗ್‌ಸ್ಟರ್‌ ಎನ್‌ಕೌಂಟರ್‌ಗೆ ಬಲಿ! ಯೋಗಿ ನಾಡಿನಲ್ಲಿ ಮತ್ತೆ ಗುಂಡಿನ ಸದ್ದು

Pradeep Eshwar
ಪ್ರಮುಖ ಸುದ್ದಿ1 hour ago

Pradeep Eshwar: ಪ್ರದೀಪ್‌ ಈಶ್ವರ್‌ ರಾಜೀನಾಮೆಗೆ ಒತ್ತಾಯಿಸಿದ ಕಾಂಗ್ರೆಸ್‌ ನಾಯಕ ಪಕ್ಷದಿಂದಲೇ ಉಚ್ಚಾಟನೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌