Site icon Vistara News

Janatha Darshan : 3 ತಿಂಗಳಲ್ಲಿ ಜನಸ್ಪಂದನ ಅರ್ಜಿಗೆ ಪರಿಹಾರ ಕೊಡಿ; ಅಧಿಕಾರಿಗಳಿಗೆ ಸಿಎಂ ಸ್ಪಷ್ಟ ಸೂಚನೆ

Could you not go to Janatha Darshan Call this number and complain to CM

ಬೆಂಗಳೂರು: 3 ತಿಂಗಳಲ್ಲಿ ಜನಸ್ಪಂದನ ಅರ್ಜಿಗಳಿಗೆ ಪರಿಹಾರ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಕಾನೂನು ಪ್ರಕಾರ ಪರಿಹಾರ ಸಾಧ್ಯವಿಲ್ಲದಿದ್ದರೆ, ಆ ರೀತಿಯ ಹಿಂಬರಹ ಕೊಡಬೇಕು. ಪ್ರತಿ ಅರ್ಜಿಗೂ ಸರ್ಕಾರದ ಸ್ಪಂದನೆ ಇರಬೇಕು ಎಂದು ತಾಕೀತು ಮಾಡಿದ್ದಾರೆ. ಸಿಎಂ ಜನತಾ ದರ್ಶನ (Janatha Darshan) ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಈ ಬಗ್ಗೆ ಸ್ಪಷ್ಟ ನಿರ್ದೇಶನವನ್ನು ನೀಡಿದ್ದಾರೆ.

ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೂರು ತಿಂಗಳೊಳಗೆ ಅರ್ಜಿಗಳು ಇತ್ಯರ್ಥವಾಗಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕಾನೂನು ರೀತಿ ಬಗೆಹರಿಸದಿದ್ದರೆ ಹಿಂಬರಹ‌ ಕೊಡುವಂತೆ ಸ್ಪಷ್ಟ ನಿರ್ದೇಶನ ಕೊಟ್ಟಿದ್ದೇನೆ. ನಮ್ಮ ಅರ್ಜಿಗೆ ಪರಿಹಾರ ಸಿಗಲಿಲ್ಲ ಎಂಬ ಭಾವನೆ ಯಾರಿಗೂ ಬೇಡ. ಎಲ್ಲ ಅರ್ಜಿಗಳನ್ನು ವಿಲೇವಾರಿ ಮಾಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

Could you not go to Janatha Darshan Call this number and complain to CM

ಇದು ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮವಾಗಿದೆ. ಕಳೆದ ಕಾರ್ಯಕ್ರಮದಲ್ಲಿ ಸುಮಾರು 5 ಸಾವಿರ ಅರ್ಜಿಗಳು ಬಂದಿದ್ದವು. ಅದರಲ್ಲಿ ಶೇಕಡಾ 89ರಷ್ಟು ಅರ್ಜಿಗಳಿಗೆ ಸ್ಪಂದಿಸುವ ಕೆಲಸ ಆಗಿದೆ. ನವಂಬರ್ 27ರಂದು ಸಲ್ಲಿಸಲಾಗಿದ್ದ ಅರ್ಜಿಗಳಿಗೆ ಬಹುತೇಕ ಪರಿಹಾರ ಸಿಕ್ಕಿದೆ. ಇಂದು ಸಹ ನಿಮ್ಮ ಬಳಿಗೆ ಬಂದು ಅರ್ಜಿಗಳನ್ನು ಸ್ವೀಕಾರ ಮಾಡುತ್ತೇನೆ. ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಜನರು ಬಂದಿದ್ದಾರೆ. ಎಲ್ಲರ ಅಹವಾಲುಗಳನ್ನೂ ಆಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಪಕ್ಷದವರ ಮಾತು ಕೇಳಬೇಡಿ

ಅಧಿಕಾರಕ್ಕೆ ಬಂದು ಇನ್ನೂ ಒಂಬತ್ತು ತಿಂಗಳಾಗಿಲ್ಲ. ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಬಿಜೆಪಿಯವರು ಗೇಲಿ ಮಾಡುತ್ತಿದ್ದರು. ಗ್ಯಾರಂಟಿ ಜಾರಿ ಆಗಲ್ಲ ಅಂತಾ ಹೇಳುತ್ತಿದ್ದರು. ಈಗ ಕೊಡುತ್ತಾರೆ, ಲೋಕಸಭಾ ಚುನಾವಣೆ ನಂತರ ನಿಲ್ಲಿಸುತ್ತಾರೆ ಎಂಬುದಾಗಿ ವಿಪಕ್ಷ ಲೀಡರ್‌ಗಳು ಸಹ ಹೇಳುತ್ತಿದ್ದಾರೆ. ಇದು ಬಡವರಿಗಾಗಿ ತಂದ ಕಾರ್ಯಕ್ರಮಗಳಾಗಿವೆ. ಅಸಮಾನತೆಯನ್ನು ಹೋಗಲಾಡಿಸಲು ತಂದ ಕಾರ್ಯಕ್ರಮವಾಗಿದೆ. ಸಮಸಮಾಜ ನಿರ್ಮಾಣದ ಮೇಲೆ ನಾವು ನಂಬಿಕೆ ಇಟ್ಟವರು. ಸಮಾಜದಲ್ಲಿ ನೆಮ್ಮದಿ, ಶಾಂತಿ ಇರಬೇಕು, ಭ್ರಾತೃತ್ವ ಬೆಳೆಯಬೇಕು. ವಿಪಕ್ಷದವರು ಸುಳ್ಳು ಹೇಳಿ ದಾರಿ ತಪ್ಪಿಸುತ್ತಾರೆ. ಅವರ ಮಾತುಗಳನ್ನು ಕೇಳಬೇಡಿ, ಸುಳ್ಳು ಹೇಳುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸಮಸ್ಯೆಗಳು ಕಾನೂನು ಬದ್ಧವಾಗಿದ್ದರೆ ಪರಿಹಾರ ಸಿಕ್ಕೇ ಸಿಗುತ್ತದೆ

ಇವತ್ತು ಎರಡನೇ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಕಳೆದ ಜನಸ್ಪಂದನಲ್ಲಿ ಐದು ಸಾವಿರದಷ್ಟು ಅರ್ಜಿಗಳು ಬಂದಿದ್ದವು. ಶೇ. 98ರಷ್ಟು ಅರ್ಜಿಗಳನ್ನೆಲ್ಲ ಅಧಿಕಾರಿಗಳು ಇತ್ಯರ್ಥ ಮಾಡಿದ್ದಾರೆ. ಹತ್ತು ಸಾವಿರಕ್ಕೂ ಹೆಚ್ಚು ಜನ ತಮ್ಮ ಸಮಸ್ಯೆ ಹೊತ್ತು ಇಲ್ಲಿಗೆ ಬಂದಿದ್ದೀರಿ. ನೀವಿರುವ ಸ್ಥಳಕ್ಕೆ ಬಂದು ಅರ್ಜಿ ಸ್ವೀಕರಿಸಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತೇನೆ. ನಮ್ಮ ಜಿಲ್ಲಾ ಮಂತ್ರಿಗಳು 108 ಜನಸ್ಪಂದನ‌ ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಆಡಳಿತ ನೇರವಾಗಿ ಜನರ ಬಳಿಗೆ ಹೋಗಿ ಸಮಸ್ಯೆಗೆ ಸ್ಪಂದಿಸುವುದು ಜನಸ್ಪಂದನದ ಉದ್ದೇಶವಾಗಿದೆ. ಸಣ್ಣಪುಟ್ಟ ಸಮಸ್ಯೆ ಹೊತ್ತು ಬೆಂಗಳೂರಿಗೆ ಬರದಂತೆ ನೋಡಿಕೊಳ್ಳಬೇಕು. ನಿಮ್ಮ ಸಮಸ್ಯೆಗಳು ಕಾನೂನು ಬದ್ಧವಾಗಿದ್ದರೆ ಪರಿಹಾರ ಸಿಕ್ಕೇ ಸಿಗುತ್ತದೆ. ನವೆಂಬರ್ 27 ರಂದು ಕೊಟ್ಟ ಅರ್ಜಿಗಳಿಗೆ ಶೇ. 98 ಪರಿಹಾರ ಸಿಕ್ಕಿದೆ ಎಂದು ಹೇಳಿದರು.

ಕಂದಾಯ ಇಲಾಖೆಗೆ ಎರಡನೇ ಕೌಂಟರ್‌

ಬುಧವಾರ ರಾತ್ರಿಯೇ ಜನ ಸ್ಪಂದನ ಕಾರ್ಯಕ್ರಮಕ್ಕಾಗಿ ದೂರದೂರುಗಳಿಂದ ಜನ ಆಗಮಿಸಿದ್ದಾರೆ. ಬೆಳಗ್ಗೆ 8.30ಕ್ಕೆ ಸಾರ್ವಜನಿಕರಿಂದ ಅರ್ಜಿ ಸ್ವೀಕಾರ, ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿತ್ತು. ಕಂದಾಯ ಇಲಾಖೆಯ ಕೌಂಟರಿನಲ್ಲಿ ನಿರೀಕ್ಷೆಗೂ ಮೀರಿ ಜನರು ಸೇರಿದ್ದನ್ನು ಕಂಡು, ಕೂಡಲೇ ಆಯೋಜಕರು ಇನ್ನೊಂದು ಕೌಂಟರ್‌ ತೆರೆದು ಜನರಿಗೆ ಆಸನ ವ್ಯವಸ್ಥೆ ಮಾಡಿದರು.

ಇದನ್ನೂ ಓದಿ: Janatha Darshan : ಜನತಾ ದರ್ಶನಕ್ಕೆ ಹೋಗಲು ಆಗುತ್ತಿಲ್ಲವೇ? ಈ ನಂಬರ್‌ಗೆ ಕರೆ ಮಾಡಿ ಸಿಎಂಗೆ ದೂರು ನೀಡಿ!

ಪೊಲೀಸ್‌ ಬಂದೋಬಸ್ತ್

ಬೆಂಗಳೂರು ಕೇಂದ್ರ ಡಿಸಿಪಿ ಶೇಖರ್‌ ಅವರ ನೇತೃತ್ವದಲ್ಲಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದ್ದು, ಒಟ್ಟು 936 ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. 8 ಎಸಿಪಿ, 23 ಇನ್ಸ್‌ಪೆಕ್ಟರ್‌, 58 ಸಬ್‌ಇನ್ಸ್‌ಪೆಕ್ಟರ್‌, 205 ಪೊಲೀಸ್‌ ಕಾನ್ಸ್‌ಟೇಬಲ್‌, 142 ಮಹಿಳಾ ಪೊಲೀಸ್‌ ಸಿಬ್ಬಂದಿ, 500 ಹೋಂ ಗಾರ್ಡ್‌ಗಳನ್ನು ಭದ್ರತಾ ವ್ಯವಸ್ಥೆಗಾಗಿ ನಿಯೋಜಿಸಲಾಗಿದೆ.

Exit mobile version