ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(Karnataka Public Service Commission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿನ ಸುಮಾರು 364 ಗ್ರೂಪ್ ಸಿ ಭೂ ಮಾಪಕರ ಹುದ್ದೆ ಇದಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು (KPSC Land Surveyor Recruitment 2024). ಮಾರ್ಚ್ 11ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಏಪ್ರಿಲ್ 10ರ ವರೆಗೆ ಅವಕಾಶವಿದೆ (Job Alert).
ವಿದ್ಯಾರ್ಹತೆ
ಈ ಪೈಕಿ ಉಳಿಕೆ ಮೂಲ ವೃಂದದಲ್ಲಿ 264 ಮತ್ತು ಹೈದರಾಬಾದ್-ಕರ್ನಾಟಕ ವೃಂದದಲ್ಲಿ 100 ಹುದ್ದೆಗಳಿವೆ. ಯಾವುದೇ ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಬಿ.ಇ. (ಸಿವಿಲ್) / ಬಿ.ಟೆಕ್ (ಸಿವಿಲ್) ಅಥವಾ ಡಿಪ್ಲೋಮಾ (ಸಿವಿಲ್ ಎಂಜಿನಿಯರಿಂಗ್) ಉತ್ತೀರ್ಣರಾಗಿರಬೇಕು ಅಥವಾ ಪಿಯುಸಿ ಅಥವಾ ಸಿಬಿಎಸ್‌ಇ ಅಥವಾ ಐಸಿಎಸ್‌ಇಯ 12ನೇ ತರಗತಿ ಉತ್ತೀರ್ಣರಾಗಿರಬೇಕು (ಗಣಿತ ವಿಷಯದಲ್ಲಿ 60% ಅಂಕ ಪಡೆದಿರಬೇಕು) ಅಥವಾ ಕರ್ನಾಟಕ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ಲ್ಯಾಂಡ್ & ಸಿಟಿ ಸರ್ವೆಯ ಪದವಿ ಪೂರ್ವ ಡಿಪ್ಲೋಮಾ ಉತ್ತೀರ್ಣವಾಗಿರಬೇಕು ಇಲ್ಲವೇ ಕರ್ನಾಟಕ ಸರ್ಕಾರದ ಉದ್ಯೋಗ ಮತ್ತು ತರಬೇತಿ ಇಲಾಖೆ ನಡೆಸುವ ಐಟಿಐ ಇನ್ ಸರ್ವೆ ಟ್ರೇಡ್‌ನಲ್ಲಿ ತೇರ್ಗಡೆಯಾಗಿರಬೇಕು.
ವಯೋಮಿತಿ
ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಲಭ್ಯ.
ಅರ್ಜಿ ಶುಲ್ಕ
ಸಾಮಾನ್ಯ ಮತ್ತು ಇತರ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು 600 ರೂ., ಪ್ರವರ್ಗ 2 (ಎ), 2 (ಬಿ), 3 (ಎ), 3 (ಬಿ) ಅಭ್ಯರ್ಥಿಗಳು 300 ರೂ., ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಮತ್ತು ಅರ್ಜಿ ಶುಲ್ಕ ಪಾವತಿಸಬೇಕು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ವಿಶೇಷ ಚೇತನ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸ ಬೇಕಾಗಿಲ್ಲ.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಸ್ಪರ್ಧಾತ್ಮಕ ಪರೀಕ್ಷೆ, ಡಾಕ್ಯುಮಂಎಟ್ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾಗುವವರಿಗೆ 23,500 ರೂ.-47,650 ರೂ. ಮಾಸಿಕ ವೇತನ ದೊರೆಯಲಿದೆ.
ಇದನ್ನು ಗಮನಿಸಿ
ಈ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಒಂದು ಬಾರಿಯ ನೋಂದಣಿ (OTR-One Time Registration)ಯನ್ನು ಒಳಗೊಂಡಿದ್ದು, ಅಭ್ಯರ್ಥಿಗಳು ನೀಡಿರುವ ಮಾಹಿತಿಗಳನ್ನು ಮುಂದಿನ ಎಲ್ಲ ಅಧಿಸೂಚನೆಗಳಿಗೂ ಪರಿಗಣಿಸುವುದರಿಂದ, ಜಾಗರೂಕತೆಯಿಂದ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ.
ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ: https://kpsc.kar.nic.in/
ಅಧಿಸೂಚನೆಗಾಗಿ ಇಲ್ಲಿ ಇಲ್ಲಿ ಕ್ಲಿಕ್ ಮಾಡಿ (HK)
ಅಧಿಸೂಚನೆಗಾಗಿ ಇಲ್ಲಿ ಇಲ್ಲಿ ಕ್ಲಿಕ್ ಮಾಡಿ (RPC)
ಹೆಚ್ಚಿನ ಮಾಹಿತಿಗೆ 080-30574957 / 30574901 / 22343137 ಸಂಖ್ಯೆಗೆ ಕರೆ ಮಾಡಬಹುದು.
ಇದನ್ನೂ ಓದಿ: Job Alert: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ವೇಳಾಪಟ್ಟಿ