Site icon Vistara News

Jobs Alert: ಪ್ರೌಢಶಾಲೆ, ಪಿಯು ಕಾಲೇಜುಗಳ ಬೋಧಕ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

teacher jobs alert

ಬೆಂಗಳೂರು: ಖಾಸಗಿ ಅನುದಾನಿತ ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ (Teacher) ಹುದ್ದೆಗಳನ್ನು ಭರ್ತಿ ಮಾಡಲು (Jobs Alert) ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ. ಶಿಕ್ಷಕ, ಉಪನ್ಯಾಸಕ ಹುದ್ದೆಗಳ ಶೋಧದಲ್ಲಿರುವವರಿಗೆ ಇದು ಗುಡ್ ನ್ಯೂಸ್ (Good news) ಆಗಿದೆ.

ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ. 1987ರಿಂದ 1994-95ರ ಶೈಕ್ಷಣಿಕ ಅವಧಿಯಲ್ಲಿ ಪ್ರಾರಂಭಗೊಂಡು ಈಗಾಗಲೇ ವೇತನಾನುದಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಪದವಿ ಕಾಲೇಜುಗಳಲ್ಲಿ ದಿನಾಂಕ:01-01-2016ರಿಂದ ದಿನಾಂಕ:31-12-2020ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಮತ್ತಿತರ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಭರ್ತಿಮಾಡಿಕೊಳ್ಳಲು ಆರ್ಥಿಕ ಇಲಾಖೆಯು ಸಹಮತಿಸಿದೆ.

ಷರತ್ತುಗಳು:

ಹುದ್ದೆಗಳನ್ನು ಭರ್ತಿ ಮಾಡಿಕೊಂಡ ನಂತರ ನೇಮಕಾತಿ ಅನುಮೋದನೆಗಾಗಿ ಆರ್ಥಿಕ ಇಲಾಖೆಯ ಅನಧಿಕೃತ ಟಿಪ್ಪಣಿ ಸಂಖ್ಯೆ:ಆಇ 384 ವೆಚ್ಚ-8/2013, ದಿನಾಂಕ:09-04- 2013ರಲ್ಲಿನ ಚೆಕ್‌ಲಿಸ್ಟ್ ಅನುಬಂಧ-3ರನ್ವಯ ಸಂಪೂರ್ಣ ಮಾಹಿತಿ/ದಾಖಲೆಗಳೊಂದಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವುದು. ಮೇಲ್ಕಂಡಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಜಾರಿಯಲ್ಲಿರುವ ಅನುದಾನ ಸಂಹಿತೆ ಮತ್ತು ಸರ್ಕಾರದ ಆದೇಶ ಮತ್ತು ಸುತ್ತೋಲೆಗಳ ನಿಯಮಗಳನ್ನು ಪಾಲಿಸಿರುವುದನ್ನು ಖಚಿತಪಡಿಸಿಕೊಳ್ಳುವುದು.

ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಾಗ ನಿಯಮಾನುಸಾರ ರೋಸ್ಟರ್ ಬಿಂದು ಮತ್ತು ಕಲ್ಯಾಣ ಕರ್ನಾಟಕದ ಮೀಸಲಾತಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. 2016-2017 ರಿಂದ 2023-24ನೇ ಸಾಲಿನವರೆಗೆ ವಿದ್ಯಾರ್ಥಿಗಳ ದಾಖಲಾತಿ, ಪರೀಕ್ಷಾ ಫಲಿತಾಂಶ ಮತ್ತು ಖಚಿತಪಡಿಸಿಕೊಳ್ಳುವುದು. ಮೂಲಭೂತ ಸೌಕರ್ಯಗಳು ಉತ್ತಮವಾಗಿರುವುದನ್ನು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಶಾಲಾ/ಕಾಲೇಜುಗಳು ಪ್ರಾರಂಭವಾದಾಗಿನಿಂದ ಅವಿಚ್ಛಿನ್ನವಾಗಿ ನಡೆಯುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು.

ಅನುದಾನಿತ ಶಾಲೆಗಳು ಮತ್ತು ಕಾಲೇಜುಗಳು ಆನ್‌ಲೈನ್ ಮೂಲಕ ವಿವರಗಳು ಮತ್ತು ದಾಖಲೆಗಳನ್ನು ಸಲ್ಲಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸುವುದು. ಈ ತಂತ್ರಾಂಶದ ಮೂಲಕ ಪ್ರಸ್ತಾವನೆಗಳನ್ನು ವ್ಯವಹರಿಸುವುದು. ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿನ ಹುದ್ದೆಗಳನ್ನು ಅನುಮೋದಿಸಲು ಪ್ರತ್ಯಾಯೋಜಿಸಲಾದ ಆದೇಶ ಸಂಖ್ಯೆ: ಇಡಿ 16 ಟಿಪಿಯು 2011. ದಿನಾಂಕ:30-09-2011 ಅನ್ನು ಹಿಂಪಡೆದು, ಹುದ್ದೆಗಳ ಅನುಮೋದನೆಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆಗಳನ್ನು ಸಲ್ಲಿಸುವುದು.

ಕನ್ನಡಿಗರಿಗೆ ಉದ್ಯೋಗ ಕಡ್ಡಾಯಕ್ಕೆ ಕಾನೂನು ಸಮಸ್ಯೆ

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಖಾಸಗಿ ಉದ್ಯಮಗಳಲ್ಲಿ ಮೀಸಲು (Karnataka Jobs Reservation) ಕಡ್ಡಾಯ ಮಾಡುವ ಕುರಿತು ರಾಜ್ಯ ಸರ್ಕಾರದ (Karnataka Government) ನಿಲುವಿನಿಂದಾಗಿ ಸೃಷ್ಟಿಯಾದ ಗೊಂದಲದ ನಡುವೆ, ನಾಲ್ವರು ಸಚಿವರು ಇಂದು ವಿಧಾನಸಭೆಯಲ್ಲಿ (Vidhan sabha) ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು. ಈ ವಿಚಾರದಲ್ಲಿ ಕಾನೂನಾತ್ಮಕ ಸಮಸ್ಯೆ ಇದ್ದು, ಇದರ ಬಗ್ಗೆ ಇನ್ನಷ್ಟು ಚರ್ಚೆ ನಡೆಯಬೇಕಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಹೇಳಿದ್ದಾರೆ.

ಖಾಸಗಿ ಕ್ಷೇತ್ರದ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಮಂಗಳವಾರ (ಜು.16) ಅನುಮೋದನೆ ನೀಡಿತ್ತು. ಇದಕ್ಕೆ ಉದ್ಯಮಿ ಕಿರಣ್‌ ಮಜುಂದಾರ್‌ ಶಾ, ಮೋಹನ್​ ದಾಸ್​ ಪೈ ಸೇರಿದಂತೆ ಇನ್ನೂ ಅನೇಕ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಮಸೂದೆಗೆ ಉದ್ಯಮಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ಮುಜುಗರಕ್ಕೆ ಒಳಗಾದ ಸರಕಾರ, ವಿಧೇಯಕ ಜಾರಿಗೆ ಹಿಂದೇಟು ಹಾಕಿದೆ. ಈ ಹಿನ್ನೆಲೆಯಲ್ಲಿ ಇಂದು (ಜು.18) ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಾಲ್ವರು ಸಚಿವರು ಜಂಟಿ ಸುದ್ದಿಗೋಷ್ಠಿ ನಡೆಸಿದರು. ಸಚಿವರಾದ ದಿನೇಶ್‌ ಗುಂಡೂರಾವ್​, ಕೃಷ್ಣ ಭೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್‌ ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡರು.

ಇದನ್ನೂ ಓದಿ: Karnataka Jobs Reservation: ಉದ್ಯೋಗ ವಿಚಾರದಲ್ಲಿ ಕನ್ನಡಿಗರೊಂದಿಗೆ ಸರ್ಕಾರ ಚೆಲ್ಲಾಟ: ವಿಜಯೇಂದ್ರ ಆಕ್ರೋಶ

Exit mobile version