PM Narendra Modi: "ಅಮೆರಿಕಕ್ಕೆ ಮೋದಿಯಂಥ ನಾಯಕ ಬೇಕು" ಜೆಪಿ ಮೋರ್ಗನ್‌ ಸಂಸ್ಥೆ ಸಿಇಒ ಜೇಮಿ ಶ್ಲಾಘನೆ - Vistara News

ಪ್ರಮುಖ ಸುದ್ದಿ

PM Narendra Modi: “ಅಮೆರಿಕಕ್ಕೆ ಮೋದಿಯಂಥ ನಾಯಕ ಬೇಕು” ಜೆಪಿ ಮೋರ್ಗನ್‌ ಸಂಸ್ಥೆ ಸಿಇಒ ಜೇಮಿ ಶ್ಲಾಘನೆ

“ನರೇಂದ್ರ ಮೋದಿ (PM Narendra Modi) 40.0 ಕೋಟಿ ಜನರನ್ನು ಬಡತನದಿಂದ ಹೊರತಂದಿದ್ದಾರೆ. ಅಲ್ಲಿ ಶೌಚಾಲಯಗಳಿಲ್ಲದ 40 ಕೋಟಿ ಜನರು ಇದ್ದಾರೆ. ನಾವಿಲ್ಲಿ ಕೆಲಸಗಳನ್ನು ಹೇಗೆ ಮಾಡಬೇಕು ಎಂದು ಮೋದಿಯವರಿಗೆ ಈ ಬಗ್ಗೆ ಉಪನ್ಯಾಸ ನೀಡುತ್ತೇವೆ” ಎಂದು ಜೇಮಿ ಡೀಮನ್ ಹೇಳಿದ್ದಾರೆ.

VISTARANEWS.COM


on

pm narendra modi jp morgan jamie dimon
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಅಮೆರಿಕಕ್ಕೆ (US) ನರೇಂದ್ರ ಮೋದಿ (PM Narendra Modi) ಅವರಂಥ ದೃಢ ನಾಯಕತ್ವದ (Leadership) ಅಗತ್ಯವಿದೆ. ಅವರು ಭಾರತದಲ್ಲಿ (India) ನಾವು ಊಹಿಸಲಸಾಧ್ಯವಾದಷ್ಟು ಕೆಲಸಗಳನ್ನು ಮಾಡಿದ್ದಾರೆ” ಎಂದು ಖ್ಯಾತ ಬಹುರಾಷ್ಟ್ರೀಯ ಸಂಸ್ಥೆ ಜೆಪಿ ಮೋರ್ಗನ್‌ನ ಸಿಇಒ ಜೇಮಿ ಡೀಮನ್‌ (JPMorgan CEO Jamie Dimon) ಹೇಳಿದ್ದಾರೆ.

ಐಜೆಪಿ ಮೋರ್ಗಾನ್ ಚೇಸ್ ಸಿಇಒ ಜೇಮಿ ಡಿಮೊನ್ ಅವರು ಮಂಗಳವಾರ ನ್ಯೂಯಾರ್ಕ್‌ನ ಎಕನಾಮಿಕ್ ಕ್ಲಬ್‌ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, “ಮೋದಿ 40.0 ಕೋಟಿ ಜನರನ್ನು ಬಡತನದಿಂದ ಹೊರತಂದಿದ್ದಾರೆ. ಅಲ್ಲಿ ಶೌಚಾಲಯಗಳಿಲ್ಲದ 40 ಕೋಟಿ ಜನರು ಇದ್ದಾರೆ. ನಾವಿಲ್ಲಿ ಕೆಲಸಗಳನ್ನು ಹೇಗೆ ಮಾಡಬೇಕು ಎಂದು ಮೋದಿಯವರಿಗೆ ಈ ಬಗ್ಗೆ ಉಪನ್ಯಾಸ ನೀಡುತ್ತೇವೆ” ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಕಾರ್ಯಕ್ಷಮತೆಯನ್ನು ಜೇಮಿ ಶ್ಲಾಘಿಸಿದ್ದಾರೆ. “ಮೋದಿಯವರು ಭಾರತದಲ್ಲಿ ನಂಬಲಾಗದಂಥ ಶಿಕ್ಷಣ ವ್ಯವಸ್ಥೆ ಮತ್ತು ಮೂಲಸೌಕರ್ಯವನ್ನು ನೀಡುವ ಕೆಲಸ ಮಾಡುತ್ತಿದ್ದಾರೆ” ಎಂದಿದ್ದಾರೆ. “ಭಾರತದಲ್ಲಿ 70 ಕೋಟಿ ಜನರು ಬ್ಯಾಂಕ್ ಖಾತೆಗಳನ್ನು ತೆರೆದಿದ್ದಾರೆ. ಅವರಿಗೆ ಪಾವತಿ ವರ್ಗಾವಣೆಗಳು ನಡೆಯುತ್ತಿವೆ. ಅವರು ಭಾರತದಲ್ಲಿ ಊಹಾತೀತ ಶಿಕ್ಷಣ ವ್ಯವಸ್ಥೆ, ಮೂಲಸೌಕರ್ಯಗಳನ್ನು ಮಾಡಿದ್ದಾರೆ. ಪಿಎಂ ಮೋದಿ ಕಠಿಣ ವ್ಯಕ್ತಿತ್ವದರಾಗಿರುವುದರಿಂದ ಹಳೆಯ ಅಧಿಕಾರಶಾಹಿ ವ್ಯವಸ್ಥೆಯನ್ನು ಮುರಿದು ಅವರು ತಮ್ಮ ಇಡೀ ದೇಶವನ್ನು ಮೇಲೆತ್ತುತ್ತಿದ್ದಾರೆ. ಅಮೆರಿಕದಲ್ಲಿ ಅಂಥವರು ಸ್ವಲ್ಪ ಬೇಕಿದೆ,” ಎಂದಿದ್ದಾರೆ ಜೇಮಿ.

“ಅಲ್ಲಿ ಪ್ರತಿಯೊಬ್ಬ ನಾಗರಿಕನನ್ನು ಬೆರಳಚ್ಚು ಅಥವಾ ಕಣ್ಣುಗುಡ್ಡೆಯಿಂದ ಗುರುತಿಸಲಾಗುತ್ತದೆ” ಎಂದು 18 ವರ್ಷಗಳಿಂದ ಯುಎಸ್‌ನ ಅತಿ ದೊಡ್ಡ ಸಾಲದಾತ ಸಂಸ್ಥೆಯ ಮುಖ್ಯಸ್ಥ ಡಿಮನ್ ಹೇಳಿದರು. ಯುಎಸ್‌ನಲ್ಲಿ ರಾಷ್ಟ್ರೀಯ ಸಾಲ, ಹಣದುಬ್ಬರ ಮತ್ತು ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ಭೌಗೋಳಿಕ ರಾಜಕೀಯ ಸಂಘರ್ಷಗಳ ಬಗ್ಗೆ ಡಿಮನ್‌ ಎಚ್ಚರಿಕೆ ನೀಡಿದರು. ಹಣದುಬ್ಬರ ಮತ್ತು ಅದರ ಜೊತೆಗೆ ಹೆಚ್ಚಿನ ಬಡ್ಡಿದರಗಳು ನಿರೀಕ್ಷೆಗಿಂತ ಹೆಚ್ಚು ಕಾಲ ಉಳಿಯಬಹುದು ಎಂದು ತಿಳಿಸಿದರು.

ಸಾಲದಾತರು ಮತ್ತು ನಿಯಂತ್ರಕರ ನಡುವೆ ಹೆಚ್ಚು ಸಾಮರಸ್ಯದ ಸಂಬಂಧಕ್ಕೆ ಅವರು ಕರೆ ನೀಡಿದ್ದು, ಹೆಚ್ಚು ಅಂತರ್ಗತ ಆರ್ಥಿಕ ಬೆಳವಣಿಗೆಯ ಅವಶ್ಯಕತೆಯಿದೆ ಎಂದರು. ಇತರ ದೇಶಗಳಿಗೆ ಹೋಲಿಸಿದರೆ US ಮಿಲಿಟರಿ ಶಕ್ತಿ, ರಾಜಕೀಯ ಧ್ರುವೀಕರಣ ಮತ್ತು ರಾಷ್ಟ್ರದ ಆರ್ಥಿಕ ಕಾರ್ಯಕ್ಷಮತೆ ಉತ್ತಮವಾಗಿವೆ ಎಂದಿದ್ದಾರೆ.

ಇದನ್ನೂ ಓದಿ: PM Narendra Modi: ಮಕ್ಕಳಾಗಿ ವಿಶ್ವನಾಯಕರು! ಎಐ ಮೋಡಿಯಲ್ಲಿ ನರೇಂದ್ರ ಮೋದಿ ನೋಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ED Raid: ಇಡಿ ಭರ್ಜರಿ ಬೇಟೆ; ಕಾಂಗ್ರೆಸ್‌ ಮುಖಂಡನ ಆಪ್ತ ಕಾರ್ಯದರ್ಶಿ ಮನೆಯಿಂದ 25 ಕೋಟಿ ರೂ. ವಶ

ED Raid: ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋಮವಾರ ಜಾರ್ಖಂಡ್‌ನ ರಾಜಧಾನಿ ರಾಂಚಿಯ ಅನೇಕ ಸ್ಥಳಗಳಲ್ಲಿ ಸರಣಿ ದಾಳಿ ನಡೆಸಿ ಭರ್ಜರಿ ಬೇಟೆಯಾಡಿದ್ದಾರೆ. ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್‌ ಮುಖಂಡ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯಲ್ಲಿ ಲೆಕ್ಕವಿಲ್ಲದ 25 ಕೋಟಿ ರೂ.ಗಿಂತ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿದೆ. ದಾಳಿ ವೇಳೆ ನಕಲಿ ಪ್ಯಾನ್ ಕಾರ್ಡ್‌ಗಳ ಮೂಲಕ ಶೆಲ್ ಕಂಪನಿಗಳನ್ನು ರಚಿಸುವುದರಿಂದ ಹಿಡಿದು ಚರ ಮತ್ತು ಸ್ಥಿರಾಸ್ತಿಗಳ ಖರೀದಿಗಾಗಿ ಕೋಟಿ ರೂ.ಗಳ ನಗದು ವಿನಿಮಯ ನಡೆಸಿದ ಮಾಹಿತಿಯೂ ಸಿಕ್ಕಿದೆ ಎಂದು ಇಡಿ ಮೂಲಗಳು ತಿಳಿಸಿವೆ.

VISTARANEWS.COM


on

ED Raid
Koo

ರಾಂಚಿ: ಜಾರಿ ನಿರ್ದೇಶನಾಲಯ (Enforcement Directorate)ದ ಅಧಿಕಾರಿಗಳು ಸೋಮವಾರ ಜಾರ್ಖಂಡ್‌ನ ರಾಜಧಾನಿ ರಾಂಚಿಯ ಅನೇಕ ಸ್ಥಳಗಳಲ್ಲಿ ಸರಣಿ ದಾಳಿ ನಡೆಸಿ ಭರ್ಜರಿ ಬೇಟೆಯಾಡಿದ್ದಾರೆ (ED Raid). ಈ ವೇಳೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್‌ ಮುಖಂಡ ಅಲಂಗೀರ್ ಆಲಂ (Alamgir Alam) ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ (Sanjiv Lal) ಮನೆಯಲ್ಲಿ ಲೆಕ್ಕವಿಲ್ಲದ 25 ಕೋಟಿ ರೂ.ಗಿಂತ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿದೆ.

2023ರಲ್ಲಿ ಕೆಲವು ಯೋಜನೆಗಳ ಅನುಷ್ಠಾನಕ್ಕಾಗಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪದಲ್ಲಿ ಇಡಿ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಎಂಜಿನಿಯರ್ ವೀರೇಂದ್ರ ರಾಮ್ ಎಂಬವರು ಬಂಧಿಸಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿಯ ಮನೆಯ ಮೇಲೆಯೂ ದಾಳಿ ಮಾಡಿದೆ. ಸದ್ಯ ನೋಟಿನ ಕಂತೆ ನೋಡಿ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ. ದಾಳಿ ವೇಳೆ ನಕಲಿ ಪ್ಯಾನ್ ಕಾರ್ಡ್‌ಗಳ ಮೂಲಕ ಶೆಲ್ ಕಂಪನಿಗಳನ್ನು ರಚಿಸುವುದರಿಂದ ಹಿಡಿದು ಚರ ಮತ್ತು ಸ್ಥಿರಾಸ್ತಿಗಳ ಖರೀದಿಗಾಗಿ ಕೋಟಿ ರೂ.ಗಳ ನಗದು ವಿನಿಮಯ ನಡೆಸಿದ ಮಾಹಿತಿಯೂ ಸಿಕ್ಕಿದೆ ಎಂದು ಇಡಿ ಮೂಲಗಳು ತಿಳಿಸಿವೆ.

ಸದ್ಯ ನೋಟಿನ ರಾಶಿಯನ್ನು ತೋರಿಸುವ ವಿಡಿಯೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ವೈರಲ್‌ ಆಗಿದೆ. ಈ ದಾಳಿಯ ಬಗ್ಗೆ ಮಾತನಾಡಿದ ಜಾರ್ಖಂಡ್ ಬಿಜೆಪಿ ವಕ್ತಾರ ಪ್ರತುಲ್ ಶಾಹದೇವ್, ”ಜಾರ್ಖಂಡ್‌ನಲ್ಲಿ ಭ್ರಷ್ಟಾಚಾರ ಕೊನೆಗೊಳ್ಳುತ್ತಿಲ್ಲ. ಈ ಹಣಗಳನ್ನು ಇವರು (ಕಾಂಗ್ರೆಸ್‌) ಚುನಾವಣೆಗಾಗಿ ಬಳಸಿಕೊಳ್ಳುತ್ತಿದ್ದಾರೆ. ಚುನಾವಣಾ ಆಯೋಗ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕುʼʼ ಎಂದು ಆಗ್ರಹಿಸಿದ್ದಾರೆ.

ಜಾರ್ಖಂಡ್‌ನ ಮತ್ತೋರ್ವ ಬಿಜೆಪಿ ಸಂಸದ ದೀಪಕ್ ಪ್ರಕಾಶ್ ಮಾತನಾಡಿ, “ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಕಾಂಗ್ರೆಸ್ ಮತ್ತು ಆರ್‌ಜೆಡಿ ಜಾರ್ಖಂಡ್ ಅನ್ನು ‘ಲೂಟ್‌ಖಂಡ್‌ʼ ಆಗಿ ಪರಿವರ್ತಿಸುವ ಕೆಲಸವನ್ನು ಮಾಡುತ್ತಿವೆ. ಇಂದು ಮತ್ತೆ 25 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತವನ್ನು ವಶಪಡಿಸಿಕೊಳ್ಳಲಾಗಿದ್ದು, ಅದು ಆಡಳಿತ ಪಕ್ಷದ ಸಚಿವರಿಗೆ ಸೇರಿದೆ. ಇದು ಜಾರ್ಖಂಡ್‌ನ ಜನರಿಗೆ ಮಾಡಿದ ಅವಮಾನ” ಎಂದು ವಾಗ್ದಾಳಿ ನಡೆಸಿದ್ದಾರೆ.

ವಿವಿಧ ಕಡೆ ದಾಳಿ

ರಾಂಚಿಯ ಸೈಲ್ ಸಿಟಿ ಸೇರಿದಂತೆ ಒಂಬತ್ತು ಸ್ಥಳಗಳಲ್ಲಿ ತನಿಖಾ ಸಂಸ್ಥೆ ಏಕಕಾಲದಲ್ಲಿ ದಾಳಿ ಕೈಗೊಂಡಿದೆ. ಇಡಿಯ ಒಂದು ತಂಡ ಸೋಮವಾರ ಬೆಳಗ್ಗೆ, ರಸ್ತೆ ನಿರ್ಮಾಣ ವಿಭಾಗದ ಇಂಜಿನಿಯರ್ ವಿಕಾಸ್ ಕುಮಾರ್ ಅವರ ಮನೆ ಮೇಲೂ ದಾಳಿ ನಡೆಸಿತ್ತು. ಇನ್ನೊಂದು ತಂಡ ಬರಿಯಾತು, ಮೊರಬದಿ ಮತ್ತು ಬೋಡಿಯಾ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದೆ.

ಇದನ್ನೂ ಓದಿ: Shiv Sena : ಇಡಿ ದಾಳಿಗೆ ಒಳಗಾಗಿದ್ದ ಉದ್ಧವ್​ ಬಣದ ಶಾಸಕ, ಶಿಂಧೆ ಬಣಕ್ಕೆ ಸೇರ್ಪಡೆ

ಕಳೆದ ವರ್ಷ ಬಂಧಿತರಾದ ವೀರೇಂದ್ರ ರಾಮ್‌ ಅಕ್ಮವಾಗಿ 100 ಕೋಟಿ ರೂ. ಮೌಲ್ಯದ ಆಸ್ತಿ ಗಳಿಸಿದ ಆರೋಪ ಹೊತ್ತಿದ್ದಾರೆ. ಜತೆಗೆ ಜಾರ್ಖಂಡ್‌ನ ಕೆಲವು ರಾಜಕಾರಣಿಗಳೊಂದಿಗಿನ ವಹಿವಾಟಿನ ವಿವರಗಳನ್ನು ಅವರಿಂದ ವಶಕ್ಕೆ ಪಡೆದುಕೊಳ್ಳಲಾಗಿದೆ.

Continue Reading

ಕ್ರೀಡೆ

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ​ಭಾರತದ ಪುರುಷರ & ಮಹಿಳೆಯರ ರಿಲೇ ತಂಡ

Paris Olympics: ಟ್ರ್ಯಾಕ್ ಮತ್ತು ಫೀಲ್ಡ್(track & field gold medallists) ವಿಭಾಗದಲ್ಲಿ ಚಿನ್ನ ಜಯಿಸುವ ಅಥ್ಲೀಟ್‌ಗಳಿಗೆ 41.60 ಲಕ್ಷ ನಗದು ಪ್ರಶಸ್ತಿ ನೀಡಲು ವಿಶ್ವ ಅಥ್ಲೆಟಿಕ್ (ಡಬ್ಲ್ಯುಎ) ಸಂಸ್ಥೆ ತೀರ್ಮಾನಿಸಿದೆ. 2028ರಲ್ಲಿ ಲಾಸ್‌ ಏಂಜಲಿಸ್​ನಲ್ಲಿ ನಡೆಯುವ ಒಲಿಂಪಿಕ್ ಕೂಟದಲ್ಲಿ ಮೊದಲ ಮೂರು ಸ್ಥಾನ ಪಡೆಯುವ ಎಲ್ಲರಿಗೂ ನಗದು ಪ್ರಶಸ್ತಿ ನೀಡುವುದಾಗಿಯೂ ಸಂಸ್ಥೆ ಘೋಷಿಸಿದೆ. ಇದೇ ಮೊದಲ ಬಾರಿಗೆ ಒಲಿಂಪಿಕ್ ಕೂಟದಲ್ಲಿ ನಗದು ಪ್ರಶಸ್ತಿ ನೀಡಲಾಗುತ್ತಿದೆ.

VISTARANEWS.COM


on

Paris Olympics
Koo

ನವದೆಹಲಿ: ಭಾರತದ ಪುರುಷರ ಮತ್ತು ಮಹಿಳೆಯರ 4×400 ಮೀಟರ್ ರಿಲೇ ತಂಡಗಳು ಬಹುನಿರೀಕ್ಷಿತ ಪ್ಯಾರಿಸ್​ ಒಲಿಂಪಿಕ್ಸ್(Paris Olympics)​​ ಟೂರ್ನಿಗೆ ಅರ್ಹತೆ ಸಂಪಾದಿಸಿದೆ. ಮಹಿಳೆಯರ(India Women’s 4x400m Relay Teams) ಸ್ಪರ್ಧೆಯಲ್ಲಿ ರೂಪಲ್ ಚೌಧರಿ, ಎಂ ಆರ್ ಪೂವಮ್ಮ, ಜ್ಯೋತಿಕಾ ಶ್ರೀ ದಂಡಿ ಮತ್ತು ಶುಭಾ ವೆಂಕಟೇಶನ್ ಸ್ಪರ್ಧಿಸಿಲಿದ್ದಾರೆ. ಸೋಮವಾರ ನಡೆದ ವಿಶ್ವ ಅಥ್ಲೆಟಿಕ್ಸ್ ರಿಲೇ ಟೂರ್ನಿಯಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಈ ಮಹಿಳಾ ತಂಡ ಅರ್ಹತೆ ಪಡೆಯಿತು. 3 ನಿಮಿಷ 29.35 ಸೆಕೆಂಡ್‌ಗಳಲ್ಲಿ ಗುರಿ ತಲುಪಿದರು. ಮೊದಲ ಸ್ಥಾನಿ ಜಮೈಕಾ (3:28.54) ಮೊದಲ ಸ್ಥಾನಿಯಾಯಿತು.

ಪುರುಷರ ತಂಡದಲ್ಲಿ(India Men’s 4x400m Relay Teams) ಮುಹಮ್ಮದ್ ಅನಾಸ್, ಮುಹಮ್ಮದ್ ಅಜ್ಮಲ್, ಅರೋಕಿಯಾ ರಾಜೀವ್ ಮತ್ತು ಅಮೋಜ್ ಜೇಕಬ್ ಅವರ ತಂಡವು 3 ನಿಮಿಷ ಮತ್ತು 3.23 ಸೆಕೆಂಡುಗಳಲ್ಲಿ ಗುರಿ ತಲುಪಿ ಒಲಿಂಪಿಕ್ಸ್​ ಟಿಕೆಟ್​ ಪಡೆದುಕೊಂಡಿತು. ಎರಡನೇ ಸುತ್ತಿನ ಮೂರು ಹೀಟ್ಸ್‌ಗಳಲ್ಲಿ ಅಗ್ರ ಎರಡು ತಂಡಗಳು ಜುಲೈ 26 ರಿಂದ ಆಗಸ್ಟ್ 11 ರವರೆಗೆ ನಡೆಯಲಿರುವ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಬೇಕಿತ್ತು. ಎರಡನೇ ಲೆಗ್ ಓಟಗಾರ ರಾಜೇಶ್ ರಮೇಶ್ ಸೆಳೆತದ ಕಾರಣ ಮಧ್ಯಂತರದಲ್ಲಿ ಹಿಂದೆ ಸರಿದ ನಂತರ ಪುರುಷರ ತಂಡವು ಮೊದಲ ಸುತ್ತಿನ ಅರ್ಹತಾ ಹೀಟ್‌ನಲ್ಲಿ ಮುಗಿಸಲು ವಿಫಲವಾಯಿತು. ಇದರೊಂದಿಗೆ, ಭಾರತವು ಈಗ 19 ಮಂದಿ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್‌ಗಳೊಂದಿಗೆ ಪ್ಯಾರಿಸ್​ಗೆ ಹೋಗಲಿದೆ. ಈ ಪಟ್ಟಿಯಲ್ಲಿ ಹಾಲಿ ಜಾವೆಲಿನ್ ಥ್ರೋ ಚಾಂಪಿಯನ್ ನೀರಜ್ ಚೋಪ್ರಾ ಇತರರು ಕೂಡ ಸೇರಿದ್ದಾರೆ.

ಟ್ರ್ಯಾಕ್ ಮತ್ತು ಫೀಲ್ಡ್(track & field gold medallists) ವಿಭಾಗದಲ್ಲಿ ಚಿನ್ನ ಜಯಿಸುವ ಅಥ್ಲೀಟ್‌ಗಳಿಗೆ 41.60 ಲಕ್ಷ ನಗದು ಪ್ರಶಸ್ತಿ ನೀಡಲು ವಿಶ್ವ ಅಥ್ಲೆಟಿಕ್ (ಡಬ್ಲ್ಯುಎ) ಸಂಸ್ಥೆ ತೀರ್ಮಾನಿಸಿದೆ. 2028ರಲ್ಲಿ ಲಾಸ್‌ ಏಂಜಲಿಸ್​ನಲ್ಲಿ ನಡೆಯುವ ಒಲಿಂಪಿಕ್ ಕೂಟದಲ್ಲಿ ಮೊದಲ ಮೂರು ಸ್ಥಾನ ಪಡೆಯುವ ಎಲ್ಲರಿಗೂ ನಗದು ಪ್ರಶಸ್ತಿ ನೀಡುವುದಾಗಿಯೂ ಸಂಸ್ಥೆ ಘೋಷಿಸಿದೆ. ಇದೇ ಮೊದಲ ಬಾರಿಗೆ ಒಲಿಂಪಿಕ್ ಕೂಟದಲ್ಲಿ ನಗದು ಪ್ರಶಸ್ತಿ ನೀಡಲಾಗುತ್ತಿದೆ.

ಇದನ್ನೂ ಓದಿ Paris Olympics: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಭಾರತದ 7 ಶಟ್ಲರ್​ಗಳು; ಕನ್ನಡತಿ ಅಶ್ವಿನಿ ಪೊನ್ನಪ್ಪಗೂ ಅವಕಾಶ

ಟೋಕಿಯೊ ಒಲಿಂಪಿಕ್ ಕೂಟದ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಜಯಿಸಿದ್ದ ನೀರಜ್​ ಚೋಪ್ರಾ ಅವರು ಈ ಬಾರಿ ಚೆನ್ನ ಗೆದ್ದರೆ ಅವರಿಗೆ 50,000 ಅಮೆರಿಕನ್‌ ಡಾಲರ್‌ ಬಹುಮಾನ ದೊರೆಯಲಿದೆ. ನೀರಜ್​ ಅವರು ಟ್ರ್ಯಾಕ್‌ ಮತ್ತು ಫೀಲ್ಡ್ ವಿಭಾಗದಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ಪ್ಯಾರಿಸ್‌ನಲ್ಲಿಯೂ ಅವರ ಮೇಲೆ ಚಿನ್ನದ ನಿರೀಕ್ಷೆ ಮಾಡಲಾಗಿದೆ.

ಉದ್ಘಾಟನಾ ಸಮಾರಂಭ(paris olympics 2024 opening ceremony) ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮದೊಂದಿಗೆ ನೆರವೇರಲಿದೆ. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಈಗಾಗಲೇ ಕ್ರೀಡಾಕೂಟದ ಆಯೋಜಕರು ಮಾಡಿದ್ದಾರೆ. ಗೇಮ್ಸ್‌ಗಾಗಿಯೇ ಇಲ್ಲಿನ ಸೀನ್‌ ನದಿಯನ್ನು ಸಾರ್ವಜನಿಕ ನಿಧಿಯಿಂದ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿ ಈ ನದಿಯನ್ನು ಸ್ನಾನಮಾಡಲು ಯೋಗ್ಯವೆನಿಸುವ ರೀತಿಯಲ್ಲಿ ಸ್ವಚ್ಛ ಮಾಡಲಾಗಿದೆ.

Continue Reading

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ಗೆ ಪಾಕ್​ ಉಗ್ರರಿಂದ ಭಯೋತ್ಪಾದಕ ದಾಳಿಯ ಎಚ್ಚರಿಕೆ

T20 World Cup 2024: ಪ್ರೊ-ಇಸ್ಲಾಮಿಕ್ ಸ್ಟೇಟ್ (ಐಎಸ್) ಮಾಧ್ಯಮ ಮೂಲಗಳು ಕ್ರೀಡಾಕೂಟಗಳ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಅಭಿಯಾನಗಳನ್ನು ಪ್ರಾರಂಭಿಸಿದ್ದು ವೆಸ್ಟ್​ ಇಂಡೀಸ್​ನಲ್ಲಿ ನಡೆಯುವ ಟಿ20 ವಿಶ್ವಕಪ್​ ಪಂದ್ಯಗಳಿಗೆ ಭಯೋತ್ಪಾದಕ ದಾಳಿಯ ಎಚ್ಚರಿಕೆ ಬಂದಿರುವುದಾಗಿ ವರದಿಯಾಗಿದೆ.

VISTARANEWS.COM


on

T20 World Cup 2024
Koo

ಬಾರ್ಬಡಾಸ್​: ಇದೇ ಜೂನ್​ 1ರಿಂದ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್​ ಪಂದ್ಯಾವಳಿಗೆ(T20 World Cup 2024) ಪಾಕಿಸ್ತಾನದ ಉಗ್ರರಿಂದ ದಾಳಿಯ ಬೆದರಿಕೆಯೊಂದು(Terror Threat to T20 World Cup) ಬಂದಿರುವುದಾಗಿ ವರದಿಯಾಗಿದೆ. ಕೆರಿಬಿಯನ್ ದ್ವೀಪಗಳ ಮಾಧ್ಯಮ ವರದಿಗಳ ಪ್ರಕಾರ ಟೂರ್ನಿಯ ಮೊದಲ ಪಂದ್ಯ ನಡೆಯುವ ಪ್ರದೇಶದಲ್ಲಿ ಭಯೋತ್ಪಾದಕ ಎಚ್ಚರಿಕೆಗಳನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿದೆ. ಕ್ರಿಕ್‌ಬಜ್‌ನ ವರದಿಯ ಪ್ರಕಾರ, ಈ ಬೆದರಿಕೆ ಉತ್ತರ ಪಾಕಿಸ್ತಾನದಿಂದ ಬಂದಿದೆ ಎಂದು ತಿಳಿಸಿದೆ.

ಪ್ರೊ-ಇಸ್ಲಾಮಿಕ್ ಸ್ಟೇಟ್ (ಐಎಸ್) ಮಾಧ್ಯಮ ಮೂಲಗಳು ಕ್ರೀಡಾಕೂಟಗಳ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಅಭಿಯಾನಗಳನ್ನು ಪ್ರಾರಂಭಿಸಿವೆ, ಇದರಲ್ಲಿ ಅಫ್ಘಾನಿಸ್ತಾನ-ಪಾಕಿಸ್ತಾನ ಉಗ್ರರ ಅಡಗು ತಾಣಗಳಿಂದ ವೀಡಿಯೊ ಸಂದೇಶಗಳ ಮೂಲಕ ಹಲವಾರು ದೇಶಗಳಲ್ಲಿ ದಾಳಿ ನಡೆಸುವ ಮತ್ತು ಈ ಉಗ್ರ ಸಂಚಿನಲ್ಲಿ ಬೆಂಬಲ ನೀಡಲು ಒತ್ತಾಯಿಸಿರುವುದಾಗಿ ಕ್ರಿಕ್‌ಬಜ್‌ ತನ್ನ​ ವರದಿಯಲ್ಲಿ ತಿಳಿಸಿದೆ.

“ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ ಪ್ರತಿಯೊಬ್ಬರ ಸುರಕ್ಷತೆ ನಮ್ಮ ಮೊದಲ ಆದ್ಯತೆಯಾಗಿದೆ ಮತ್ತು ನಾವು ಸಮಗ್ರ ಮತ್ತು ದೃಢವಾದ ಭದ್ರತಾ ಯೋಜನೆಯನ್ನು ಹೊಂದಿದ್ದೇವೆ ಎಂದು ನಾವು ಎಲ್ಲ ಪಾಲುದಾರರಿಗೆ ಭರವಸೆ ನೀಡಲು ಬಯಸುತ್ತೇವೆ” ಎಂದು ವೆಸ್ಟ್​ ಇಂಡೀಸ್​ ಕ್ರಿಕೆಟ್​ ಬೋರ್ಡ್​ ಅಧ್ಯಕ್ಷ ಜಾನಿ ಗ್ರೇವ್ಸ್ ಹೇಳಿದರು.

“ನಾವು ಆತಿಥೇಯ ದೇಶಗಳು ಮತ್ತು ನಗರಗಳಲ್ಲಿನ ಅಧಿಕಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತೇವೆ ಮತ್ತು ನಮ್ಮ ದೇಶದಲ್ಲಿ ನಿಗದಿಯಾದ ಪಂದ್ಯಾವಳಿಗೆ ಯಾವುದೇ ಅಪಾಯವಾಗದಂತೆ ಸೂಕ್ತವಾದ ಯೋಜನೆಗಳು ಜಾರಿಯಲ್ಲಿವೆ” ಎಂದು ಗ್ರೇವ್ಸ್ ಹೇಳಿರುವುದಾಗಿ ಕ್ರಿಕ್‌ಬಜ್‌ ವರದಿ ಮಾಡಿದೆ. ವೆಸ್ಟ್ ಇಂಡೀಸ್‌ನಲ್ಲಿ ಆಂಟಿಗುವಾ ಬಾರ್ಬುಡಾ, ಬಾರ್ಬಡೋಸ್, ಗಯಾನಾ, ಸೇಂಟ್ ಲೂಸಿಯಾ, ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್, ಟ್ರಿನಿಡಾಡ್ ಮತ್ತು ಟೊಬಾಗೊ ಸೇರಿದಂತೆ ಆರು ಸ್ಥಳಗಳಲ್ಲಿ ಟಿ20 ವಿಶ್ವಕಪ್ ಪಂದ್ಯಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ ICC Women’s T20 World Cup: ಮಹಿಳಾ ಟಿ20 ವಿಶ್ವಕಪ್​ ವೇಳಾಪಟ್ಟಿ ಪ್ರಕಟ; ಒಂದೇ ಗುಂಪಿನಲ್ಲಿ ಭಾರತ-ಪಾಕ್​

ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ.
ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ತಲಾ 2 ಅಭ್ಯಾಸ ಪಂದ್ಯ


ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ ಎಂದು ಐಸಿಸಿ ತಿಳಿಸಿದೆ. ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್​ ಫೈನಲ್​ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.

Continue Reading

ಭವಿಷ್ಯ

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ ತ್ರಯೋದಶಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina bhavishya
Koo

ಚಂದ್ರನು ಮೇಷ ರಾಶಿಯಿಂದ ಸೋಮವಾರ ಸಂಜೆ 05:42ಕ್ಕೆ ವೃಷಭ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ, ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ. ಆಪ್ತ ವ್ಯಕ್ತಿಗಳಿಗೆ ಸಹಾಯ ಮಾಡುವಿರಿ. ಮನೆಯಲ್ಲಿ ಕಲಹಗಳಿಗೆ ಆಸ್ಪದ ಕೊಡಬೇಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ವೃಷಭ ರಾಶಿಯವರು ಅತಿರೇಕದಲ್ಲಿ ಮಾತನಾಡುವ ಮುನ್ನ ಯೋಚಿಸಿ. ತಿಳಿಯದೆ ನಿಮ್ಮ ಅಭಿಪ್ರಾಯಗಳು ಬೇರೊಬ್ಬರ ಭಾವನೆಗಳಿಗೆ ಧಕ್ಕೆಯುಂಟು ಮಾಡಬಹುದು. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (06-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
ತಿಥಿ: ತ್ರಯೋದಶಿ 14:39 ವಾರ: ಸೋಮವಾರ
ನಕ್ಷತ್ರ: ರೇವತಿ 17:42 ಯೋಗ: ಪ್ರೀತಿ 24:27
ಕರಣ: ವಣಿಜ 14:39 ಅಮೃತಕಾಲ: ಮಧ್ಯಾಹ್ನ 03:32 ರಿಂದ 04:59

ಸೂರ್ಯೋದಯ : 05:57   ಸೂರ್ಯಾಸ್ತ : 06:36

ರಾಹುಕಾಲ : ಬೆಳಗ್ಗೆ 07:32 ರಿಂದ 09:07
ಗುಳಿಕಕಾಲ: ಮಧ್ಯಾಹ್ನ 01:51
ರಿಂದ 03:26
ಯಮಗಂಡಕಾಲ: ಬೆಳಗ್ಗೆ 10:41 ರಿಂದ 12:16

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ:ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ. ಆಪ್ತ ವ್ಯಕ್ತಿಗಳಿಗೆ ಸಹಾಯ ಮಾಡುವಿರಿ. ಮನೆಯಲ್ಲಿ ಕಲಹಗಳಿಗೆ ಆಸ್ಪದ ಕೊಡಬೇಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಷಭ:ಅತಿರೇಕದಲ್ಲಿ ಮಾತನಾಡುವ ಮುನ್ನ ಯೋಚಿಸಿ. ತಿಳಿಯದೆ ನಿಮ್ಮ ಅಭಿಪ್ರಾಯಗಳು ಬೇರೊಬ್ಬರ ಭಾವನೆಗಳಿಗೆ ಧಕ್ಕೆಯುಂಟು ಮಾಡಬಹುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕುಟುಂಬದಲ್ಲಿ ನೆಮ್ಮದಿ. ಅದೃಷ್ಟ ಸಂಖ್ಯೆ: 3

Horoscope Today

ಮಿಥುನ:ಆರೋಗ್ಯ ಪರಿಪೂರ್ಣವಾಗಿರಲಿದೆ. ಸ್ನೇಹಿತರಿಗೆ ಸಹಾಯ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸಕರಾತ್ಮಕ ಆಲೋಚನೆಗಳು ಪುಷ್ಟಿ ನೀಡುತ್ತದೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕಟಕ: ಕೆಲಸ ಕಾರ್ಯಗಳಲ್ಲಿ ಒತ್ತಡ ಉಂಟುಮಾಡುವ ವಿಚಾರಗಳಿಂದ ದೂರ ಇರಿ. ತಾಳ್ಮೆ ಇರಲಿ. ಅಗತ್ಯಕ್ಕಾಗಿ ಯಾರದಾದರೂ ಹಣದ ಸಹಾಯ ಬೇಡುವ ಸಾಧ್ಯತೆ ಇದೆ ಆಲೋಚಿಸಿ ಮುಂದುವರಿಯಿರಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಸಿಂಹ:ಇತರರು ನಿಮ್ಮ ಕಾರ್ಯಗಳಿಗೆ ಪ್ರಶಂಸೆ ವ್ಯಕ್ತಪಡಿಸಲಿದ್ದಾರೆ. ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗ, ಆರೋಗ್ಯ, ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ:ನಿಮ್ಮ ಒತ್ತಡವನ್ನು ಇತರರ ಮೇಲೆ ಹಾಕಿ ಕೋಪಗೊಳ್ಳುವುದು ಬೇಡ. ಸಮಾಧಾನದಿಂದ ವರ್ತಿಸಿ.ಆರ್ಥಿಕವಾಗಿ ಸಾಧಾರಣವಾಗಿರಲಿದೆ. ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆಪ್ತರೊಂದಿಗೆ ಬಾಲ್ಯದ ನೆನಪು ಹಂಚಿಕೊಳ್ಳುವಿರಿ ಈ ಮೂಲಕ ಮನಸ್ಸಿನ ಒತ್ತಡ ಹೊರಹಾಕುವಿರಿ. ಆರೋಗ್ಯ ಮಧ್ಯಮವಾಗಿರಲಿದೆ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಫಲಿತಾಂಶ ಇರಲಿದೆ. ಕಾರ್ಯದಲ್ಲಿ ನಿಧಾನಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಪ್ರತಿಫಲ ಸಿಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಈ ಹಿಂದೆ ನಿಮ್ಮನ್ನು ದ್ವೇಷಿಸುತ್ತಿದ್ದ ಜನರು ನಿಮ್ಮೊಂದಿಗೆ ಪ್ರೀತಿಯಿಂದ ವರ್ತಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ಚುರುಕುತನದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಲಾಭ ಇರಲಿದೆ. ಹೊಸ ಸ್ನೇಹಿತರ ಪರಿಚಯ ಆಗಲಿದೆ.ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಮಕರ: ಸಮಯ ವ್ಯರ್ಥಮಾಡಿ ಕೊರಗುವುದು ಬೇಡ. ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಉತ್ತಮ ಆಲೋಚನೆಗಳು ಇರಲಿ. ಹಳೆಯ ನೆನಪುಗಳು ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ದೈಹಿಕ ಆರೋಗ್ಯ ಉತ್ತಮವಾಗಿರಲಿದೆ. ವಿನಾಕಾರಣ ಕುಟುಂಬದ ಸದಸ್ಯರೊಂದಿಗೆ ಕಲಹಗಳು ಸೃಷ್ಟಿ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕುಂಭ: ಅಧಿಕ ಶ್ರಮದಿಂದ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ ಇದೆ, ಕಾಳಜಿ ಇರಲಿ. ಸಾಂಕ್ರಮಿಕ ರೋಗದ ಭಾದ್ಯತೆ, ಆದಷ್ಟು ಮುಂಜಾಗ್ರತೆ ವಹಿಸುವುದು ಒಳ್ಳೆಯದು. ಸ್ನೇಹಿತರ ಸಹಕಾರ ಸಿಗಲಿದೆ. ಸಂಗಾತಿಯೊಂದಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮೀನ: ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ಮಾಡಿಕೊಡಬೇಡಿ. ಉದ್ಯೋಗದಲ್ಲಿ ಹೊಸ ಭರವಸೆ ಇದೆ. ಮನಸ್ಸಿನ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಸಾಧನೆಯಿಂದ ತಂದುಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
ED Raid
ದೇಶ11 mins ago

ED Raid: ಇಡಿ ಭರ್ಜರಿ ಬೇಟೆ; ಕಾಂಗ್ರೆಸ್‌ ಮುಖಂಡನ ಆಪ್ತ ಕಾರ್ಯದರ್ಶಿ ಮನೆಯಿಂದ 25 ಕೋಟಿ ರೂ. ವಶ

Mahanati Show Gagana Comedy About Rishi actor
ಕಿರುತೆರೆ21 mins ago

Mahanati Show: ‘ಮಹಾನಟಿʼ ವೇದಿಕೆಯಲ್ಲಿ ನಟ ರಿಷಿ ಫೋನ್‌ ನಂಬರ್‌ ಕೇಳಿದ ಚಿತ್ರದುರ್ಗದ ಗಗನಾ!

amethi unrest
ದೇಶ35 mins ago

Amethi Unrest: ಕಾಂಗ್ರೆಸ್‌ ಕಚೇರಿ ಮೇಲೆ ಕಿಡಿಗೇಡಿಗಳಿಂದ ಅಟ್ಯಾಕ್‌; ಬಿಜೆಪಿಯ ದುಷ್ಕೃತ್ಯ ಎಂದು ಆರೋಪ

Paris Olympics
ಕ್ರೀಡೆ1 hour ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ​ಭಾರತದ ಪುರುಷರ & ಮಹಿಳೆಯರ ರಿಲೇ ತಂಡ

Prajwal Revanna Case
ಕರ್ನಾಟಕ1 hour ago

Prajwal Revanna Case: ಗಂಡ, ಮಗನ ಕೇಸ್‌ನಿಂದ ಭವಾನಿ ರೇವಣ್ಣಗೂ ಕಾನೂನು ಕಂಟಕ?

Boat Capsize
ವೈರಲ್ ನ್ಯೂಸ್2 hours ago

Boat Capsizes: ಜಲಾವೃತ ಸೇತುವೆಗೆ ದೋಣಿ ಡಿಕ್ಕಿ; ಶಾಕಿಂಗ್‌ ವಿಡಿಯೋ ವೈರಲ್‌

T20 World Cup 2024
ಕ್ರೀಡೆ2 hours ago

T20 World Cup 2024: ಟಿ20 ವಿಶ್ವಕಪ್​ಗೆ ಪಾಕ್​ ಉಗ್ರರಿಂದ ಭಯೋತ್ಪಾದಕ ದಾಳಿಯ ಎಚ್ಚರಿಕೆ

Megha Dhade bigg boss marathi winner crptic post about rahul gandhi
ಸಿನಿಮಾ2 hours ago

Megha Dhade: ನಮ್ಮ ದೇಶ ಬಿಟ್ಟು ನರಕಕ್ಕೆ ಹೋಗಿ ಎಂದು ರಾಹುಲ್‌ ಗಾಂಧಿ ವಿರುದ್ಧ ʻಬಿಗ್‌ ಬಾಸ್‌ʼ ವಿಜೇತೆ ಆಕ್ರೋಶ!

Prajwal Revanna Case
ಕರ್ನಾಟಕ2 hours ago

Prajwal Revanna Case: ಎಚ್‌.ಡಿ.ರೇವಣ್ಣರಿಗೆ ಇಂದು ಜಾಮೀನು ಸಿಗುತ್ತಾ?

Sunil Narine
ಕ್ರೀಡೆ2 hours ago

Sunil Narine: ಅತ್ಯಧಿಕ ಸಿಕ್ಸರ್​ ಸಾಧಕರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಸುನೀಲ್​ ನರೈನ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ6 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ16 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ17 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ17 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌