Site icon Vistara News

Kailash Vijayvargiya: 30 ವರ್ಷದಲ್ಲಿ ದೇಶದೊಳಗೆ ಅಂತರ್ಯುದ್ಧ, ಹಿಂದೂಗಳು ಬದುಕುವುದೇ ಕಷ್ಟ: ಕೈಲಾಶ್‌ ವಿಜಯ್‌ವರ್ಗೀಯ

Kailash Vijayvargiya

ಇಂದೋರ್: 30 ವರ್ಷಗಳ ನಂತರ ದೇಶದಲ್ಲಿ ಅಂತರ್ಯುದ್ಧ (Civil War) ಪ್ರಾರಂಭವಾಗಲಿದೆ. 30 ವರ್ಷಗಳ ನಂತರ ಹಿಂದೂಗಳು (Hindus) ಈ ರೀತಿ ಬದುಕಲು ಸಾಧ್ಯವಿಲ್ಲ ಎಂದು ಮಧ್ಯಪ್ರದೇಶದ ಬಿಜೆಪಿ ಸಚಿವ (Madhya Pradesh BJP minister) ಕೈಲಾಶ್‌ ವಿಜಯ್‌ವರ್ಗೀಯ (Kailash Vijayvargiya) ವಿವಾದಾಸ್ಪದ ಹೇಳಿಕೆ ನೀಡಿದ್ದಾರೆ.

ಇಂದಿನ ಕಾಲದಲ್ಲಿ ಸಾಮಾಜಿಕ ಸಾಮರಸ್ಯ ಅತಿಮುಖ್ಯವಾಗಿದೆ. ನಿನ್ನೆ ನಾನು ನಿವೃತ್ತ ಸೇನಾ ಅಧಿಕಾರಿಯೊಬ್ಬರನ್ನು ಭೇಟಿಯಾಗಿದ್ದೆ. ಅವರು ಸಾಮಾಜಿಕ ಕಾರ್ಯಗಳಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. 30 ವರ್ಷಗಳ ನಂತರ ದೇಶದಲ್ಲಿ ಅಂತರ್ಯುದ್ಧ ಪ್ರಾರಂಭವಾಗಲಿದೆ. 30 ವರ್ಷಗಳ ನಂತರ ಹಿಂದೂಗಳು ಈ ರೀತಿ ಬದುಕಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ನಾವು ಈ ವಿಷಯದ ಬಗ್ಗೆ ಚಿಂತನ ಮನನ ಮಾಡಬೇಕು ಎಂದು ವಿಜಯ್‌ವರ್ಗೀಯ ಹೇಳಿದರು.

ಹಿಂದೂ ಪದವನ್ನು ಬಲಪಡಿಸುವ ಕೆಲಸ ಮಾಡಬೇಕು ಎಂದವರು ನುಡಿದರು. ʼಸಾಮಾಜಿಕ ಸಾಮರಸ್ಯ ರಕ್ಷಾಬಂಧನ ಉತ್ಸವ’ ಎಂಬ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಬ್ರಿಟಿಷರ ಒಡೆದು ಆಳುವ ನೀತಿಯಂತೆ ಕೆಲವರು ಹಿಂದೂ ಸಮಾಜವನ್ನು ಜಾತಿ ಆಧಾರದ ಮೇಲೆ ವಿಭಜಿಸಲು ಬಯಸುತ್ತಿದ್ದಾರೆ ಎಂದು ಹೇಳಿದರು.

ವಿಜಯವರ್ಗೀಯ ಅವರ ಹೇಳಿಕೆ ಬೇಜವಾಬ್ದಾರಿತನದ್ದಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ಮಧ್ಯಪ್ರದೇಶ ಕಾಂಗ್ರೆಸ್ ವಕ್ತಾರ ನೀಲಭ್ ಶುಕ್ಲಾ ಅವರು ವಿಜಯವರ್ಗೀಯ ಅವರ ಹೇಳಿಕೆ ಸಂಪೂರ್ಣ ಬೇಜವಾಬ್ದಾರಿಯಿಂದ ಕೂಡಿದೆ ಎಂದು ಟೀಕಿಸಿದ್ದಾರೆ. ಈ ಹೇಳಿಕೆಯು ದೇಶದಲ್ಲಿ ಅಸ್ಥಿರತೆ ಮತ್ತು ಭಯದ ವಾತಾವರಣವನ್ನು ಸೃಷ್ಟಿಸುತ್ತದೆ. ಶಾಂತಿ ಮತ್ತು ಸಹೋದರತ್ವದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಇದಕ್ಕೆ ವಿಜಯವರ್ಗೀಯ ಅವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು. 30 ವರ್ಷಗಳ ನಂತರ ದೇಶದಲ್ಲಿ ಅಂತರ್ಯುದ್ಧದ ಭೀತಿಯನ್ನು ಯಾವ ನಿವೃತ್ತ ಸೇನಾಧಿಕಾರಿ ವ್ಯಕ್ತಪಡಿಸಿದ್ದಾರೆ ಮತ್ತು ಅದಕ್ಕೆ ಆಧಾರವೇನು ಎಂಬುದನ್ನು ವಿಜಯವರ್ಗೀಯ ಅವರು ಸ್ಪಷ್ಟಪಡಿಸಬೇಕು ಎಂದು ಅವರು ಹೇಳಿದರು.

ಒತ್ತಡಕ್ಕೆ ಒಳಗಾಗಬೇಡಿ; ಭಾರತದ ಕ್ರೀಡಾಳುಗಳಿಗೆ ಪ್ರಧಾನಿ ಮೋದಿ ಸಲಹೆ

ನವದೆಹಲಿ: ಇದೇ ತಿಂಗಳು ಆಗಸ್ಟ್​ 28ರಿಂದ ಪ್ಯಾರಿಸ್​ನಲ್ಲಿ(Paralympic 2024) ಆರಂಭಗೊಳ್ಳಲಿರುವ ಪ್ಯಾರಾಲಿಂಪಿಕ್ಸ್(Paris Paralympics)​ ಕ್ರೀಡಾಕೂಟದಲ್ಲಿ ಈ ಬಾರಿ ಭಾರತದಿಂದ ದಾಖಲೆಯ 84 ಮಂದಿ ಪ್ಯಾರಾ ಕ್ರೀಡಾಪಟುಗಳು ಸ್ಪರ್ಧಿಸಲಿದ್ದಾರೆ. ಕಳೆದ ಶುಕ್ರವಾರ ಭಾರತ ಪ್ಯಾರಾಲಿಂಪಿಕ್‌ ಸಮಿತಿ (ಪಿಸಿಐ) ಮತ್ತು ಭಾರತ ಕ್ರೀಡಾ ಪ್ರಾಧಿಕಾರ (ಎಸ್‌ಎಐ) ಎಲ್ಲ ಕ್ರೀಡಾಪಟುಗಳಿಗೆ ಅದ್ಧೂರಿ ಬೀಳ್ಕೊಡುಗೆ ನೀಡಿತ್ತು. ಇದೀಗ ಪ್ರಧಾನಿ ನರೇಂದ್ರ ಮೋದಿ(PM Modi) ಅವರು ಭಾರತದ ಕ್ರೀಡಾಪಟುಗಳಿಗೆ ಶುಭ ಹಾರೈಸಿದ್ದಾರೆ. ಜತೆಗೆ ಆತ್ಮ ವಿಶ್ವಾಸ ತುಂಬಿದ್ದಾರೆ.

ಸೋಮವಾರ ರಾತ್ರಿ ನಡೆದಿದ್ದ ವರ್ಚುವಲ್‌ ಸಂವಾದದಲ್ಲಿ ಮೋದಿ ಅವರು ಅಥ್ಲೀಟ್​ಗಳ ಜತೆ ಸಂವಾದ ನಡೆಸಿದ್ದರು. ಇದೇ ವೇಳೆ ಹಲವು ಕ್ರೀಡಾಪಟುಗಳು ತಮ್ಮ ತಯಾರಿಯ ಬಗ್ಗೆ ಮತ್ತು ಈ ಬಾರಿ ಪದಕ ಗೆಲ್ಲುವ ವಿಶ್ವಾಸವನ್ನು ಮೋದಿ ಜತೆ ಹಂಚಿಕೊಂಡರು. ಕಳೆದ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಜಾವೆಲಿನ್‌ ತ್ರೋವರ್‌ ಸುಮಿತ್‌ ಅಂಟಿಲ್‌ ಈ ಬಾರಿಯೂ ಚಿನ್ನ ಗೆಲ್ಲುವುದಾಗಿ ಮೋದಿಗೆ ಭರವಸೆ ನೀಡಿದರು. ಸುಮಿತ್‌ ಅಂಟಿಲ್‌ ಪ್ಯಾರಾಲಿಂಪಿಕ್ಸ್‌ ಉದ್ಘಾಟನ ಸಮಾರಂಭದಲ್ಲಿ ಶಾಟ್‌ಪುಟರ್‌ ಭಾಗ್ಯಶ್ರೀ ಜಾಧವ್‌ ಅವರೊಂದಿಗೆ ಭಾರತದ ಧ್ವಜಧಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: PM Narendra Modi : ಆಗಸ್ಟ್​ 23ರಂದು ಉಕ್ರೇನ್​ ಪ್ರವಾಸಕ್ಕೆ ತೆರಳಲಿದ್ದಾರೆ ಪ್ರಧಾನಿ ಮೋದಿ

Exit mobile version