Site icon Vistara News

Kannada Nameplates: ಸರ್ಕಾರಿ ಇಲಾಖೆಗಳ ನಾಮಫಲಕ ಕನ್ನಡ ಕಡ್ಡಾಯ

kannada nameplates vidhana soudha

ಬೆಂಗಳೂರು: ರಾಜ್ಯ ಸರ್ಕಾರದ (Karnataka Govt) ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳನ್ನು (Kannada Nameplates) ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವ ಕುರಿತು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಈ ಕುರಿತು ಅಗತ್ಯ ಕ್ರಮ ವಹಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ (Shalini Rajanish) ತಿಳಿಸಿದ್ದಾರೆ. ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕಡ್ಡಾಯವಾಗಿ ಕನ್ನಡ ಭಾಷೆಯ ಶೇಕಡ 60 ರಷ್ಟು ನಾಮಫಲಕದ ಮೇಲ್ಬಾಗದಲ್ಲಿರುವಂತೆ ಹಾಗೂ ಶೇಕಡ 40 ರಷ್ಟು ಆಂಗ್ಲಭಾಷೆಯಲ್ಲಿ ಪ್ರದರ್ಶಿಸಲು ಅಗತ್ಯ ಕ್ರಮ ವಹಿಸುವಂತೆ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ, 2024 ಜಾರಿಗೆ ಬಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ರನ್ವಯ ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಿದೆ.

ಆದುದರಿಂದ, ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಇಲಾಖೆಗಳ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಇಲಾಖೆಗಳಲ್ಲಿ, ಆಯುಕ್ತಾಲಯ, ನಿರ್ದೇಶನಾಲಯ, ನಿಗಮ, ಮಂಡಳಿ, ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು, ಇನ್ನಿತರೆ ಯಾವುದೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವಂತೆ ಸೂಚನೆ ನೀಡಲಾಗಿದೆ.

ಎಷ್ಟೇ ವಿರೋಧ ಬಂದರೂ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಖಚಿತ; ಡಿ.ಕೆ.ಶಿವಕುಮಾರ್

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ 12-13 ವರ್ಷಗಳಿಂದ ನೀರಿನ ದರ ಹೆಚ್ಚಳ ಮಾಡಿಲ್ಲ. ಆದರೂ ಬಿಡಬ್ಲ್ಯೂ ಎಸ್‌ಎಸ್‌ಬಿ ಕಷ್ಟಪಟ್ಟು ನಿರ್ವಹಣೆ ಮಾಡುತ್ತಿದೆ. ಯಾರೇ ಆಕ್ಷೇಪ ವ್ಯಕ್ತಪಡಿಸಿದರೂ ನೀರಿನ ದರ ಏರಿಕೆ (Water Price Hike) ಅನಿವಾರ್ಯ. ಅದನ್ನು ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ವಿಧಾನಸೌಧದ ಆವರಣದಲ್ಲಿ ಗುರುವಾರ ನಡೆದ “ಬಾಗಿಲಿಗೆ ಬರಲಿದೆ ಕಾವೇರಿ ಸಂಪರ್ಕ, 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ” ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜಧಾನಿಯ 1.40 ಕೋಟಿ ಜನಸಂಖ್ಯೆಗೆ ನೀರನ್ನು ಒದಗಿಸಲೇ ಬೇಕು. ಇದಕ್ಕಾಗಿ ಸಾಲ ಮಾಡಿ, ಸಂಪರ್ಕ ಜಾಲವನ್ನು ಹೆಚ್ಚಿಸದ ಹೊರತು ನೀರು ಕೊಡಲು ಕಷ್ಟವಾಗುತ್ತದೆ. ದರ ಹೆಚ್ಚಳ ಮಾಡದಿದ್ದರೇ ನೀರು ಸರಬರಾಜು ಕಂಪನಿ ಉಳಿಯುವುದಿಲ್ಲ, ನೌಕರರು ಬದುಕಲು ಆಗುವುದಿಲ್ಲ. ಸಂಸ್ಥೆಗೆ ವಿದ್ಯುತ್ ಬಿಲ್ ಕಟ್ಟಲು ಆಗುತ್ತಿಲ್ಲ. ಎಲ್ಲರಿಗೂ ನೀರಿನ ದರ ಹೆಚ್ಚಳ ಮಾಡುವುದಿಲ್ಲ. ಎಷ್ಟು ಏರಿಕೆ ಮಾಡಬೇಕು ಎಂದು ಇನ್ನೂ ನಿರ್ಧರಿಸಿಲ್ಲ. ಚರ್ಚೆ ಮಾಡಲಿ. ಧರಣಿ ಮಾಡಲಿ ನಾನು ಇದಕ್ಕೆ ಬದ್ಧವಾಗಿದ್ದೇನೆ ಎಂದು ಹೇಳಿದರು.

ಇಲಾಖೆಗೆ ಪ್ರತ್ಯೇಕ ವಿದ್ಯುತ್ ತಯಾರಿಕಾ ಕಂಪನಿ

14 ವರ್ಷಗಳಲ್ಲಿ ಸಾಕಷ್ಟು ಬಾರಿ ವಿದ್ಯುತ್ ಬಿಲ್ ಹೆಚ್ಚಳವಾಗಿದೆ. ಇದಕ್ಕಾಗಿ ಇಲಾಖೆಯದ್ದೇ ಪ್ರತ್ಯೇಕ ಕಂಪನಿ ಸ್ಥಾಪಿಸಿ ನೀವೇ ಸೋಲಾರ್ ಸೇರಿದಂತೆ ಇತರೇ ಮೂಲಗಳಿಂದ ವಿದ್ಯುತ್ ತಯಾರಿಸಿದರೆ ಹಣ ಉಳಿತಾಯವಾಗುತ್ತದೆ. ಬೆಂಗಳೂರಿಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಜಂಟಿಯಾಗಿ ಈ ಕಾರ್ಯಕ್ರಮ ರೂಪಿಸಬಹುದು. ದೂರಾಲೋಚನೆ ಇಟ್ಟುಕೊಂಡು ಈಗಾಗಲೇ ಕಂಪನಿ ಸಿದ್ಧಪಡಿಸಲಾಗಿದೆ. ಪಾವಗಡದಲ್ಲಿ ಸೋಲಾರ್ ಪಾರ್ಕ್ ಮಾಡಿದ ಕಾರಣಕ್ಕೆ ಮೂರುವರೆ ರೂಪಾಯಿಗೆ ವಿದ್ಯುತ್ ಸಿಗುತ್ತಿದೆ. ಆಗ ಹಲವರು ತಲೆಕೆಟ್ಟಿದೆಯಾ ಎಂದು ಆಡಿಕೊಂಡರು. ಇದರಿಂದ ಸರಬರಾಜು ಮಾಡುವ ಖರ್ಚು ಉಳಿತಾಯವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Water Price Hike: ಬೆಂಗಳೂರಿನಲ್ಲಿ ನೀರಿನ ದರ ಏರಿಕೆಗೆ ವೇಗ; ನಿಮಗೆ ಎಷ್ಟಾಗುತ್ತೆ ಚೆಕ್‌ ಮಾಡಿ

Exit mobile version