Site icon Vistara News

Karnataka Budget 2024: ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಮೇಲ್ದರ್ಜೆಗೆ, ಕಾಲೇಜುಗಳಿಗೆ 400 ಕೋಟಿ ಅನುದಾನ

siddaramaiah budget medical education

ಬೆಂಗಳೂರು: ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರವು (Medical Education) ಸರ್ಕಾರಿ ವಲಯದಲ್ಲಿಯೂ ವ್ಯಾಪಕ ಬೆಳವಣಿಗೆ ಹೊಂದಿರುವುದರಿಂದ ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಇನ್ನಷ್ಟು ದಕ್ಷತೆ ತರುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು (directorate) ಆಯುಕ್ತಾಲಯವನ್ನಾಗಿ ಉನ್ನತೀಕರಿಸುವ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ (Karnataka Budget 2024) ಪ್ರಕಟಿಸಿದ್ದಾರೆ.

ಇದರ ಜೊತೆಗೆ, 2024-25ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ರೂ.ಗಳ ಅನುದಾನವನ್ನು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 130 ಕೋಟಿ ರೂ.ಗಳ ಅನುದಾನವನ್ನು ಕೂಡ ಸಿಎಂ ಒದಗಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ವಲಯಕ್ಕಾಗಿ ಈ ಸಾಲಿನ ಬಜೆಟ್‌ನಲ್ಲಿ ಸಿಎಂ ನೀಡಿದ ಕೊಡುಗೆಗಳು ಇಂತಿವೆ:

1) ಮೈಸೂರಿನಲ್ಲಿರುವ 40 ಹಾಸಿಗೆ ಸಾಮರ್ಥ್ಯದ Nephro-Urology ಆಸ್ಪತ್ರೆಯನ್ನು 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲಾಗುವುದು.

2) ಕಲಬುರಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕವನ್ನು ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯ ತಾಂತ್ರಿಕ ನೆರವಿನೊಂದಿಗೆ ಸ್ಥಾಪಿಸಲಾಗುವುದು.

3) ಗದಗ, ಕೊಪ್ಪಳ ಮತ್ತು ಚಾಮರಾಜನಗರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳು ನಿರ್ಮಾಣವಾಗಿದ್ದು, ಈ ಆಸ್ಪತ್ರೆಗಳಿಗೆ ಅವಶ್ಯವಿರುವ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳ ಖರೀದಿಗಾಗಿ 150 ಕೋಟಿ ರೂ.ಗಳನ್ನು ಒದಗಿಸಲಾಗುವುದು.

4) ಬೆಂಗಳೂರಿನ ನೆಫ್ರೋ-ಯುರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ 20 ಕೋಟಿ ರೂ.ಗಳ ವೆಚ್ಚದಲ್ಲಿ ರೋಬೋಟಿಕ್ ಯಂತ್ರದ ಮೂಲಕ ಉತ್ತಮ ಶಸ್ತ್ರಚಿಕಿತ್ಸೆಯನ್ನು ನೀಡಲು ಕ್ರಮವಹಿಸಲಾಗುವುದು.

5) ವೈದ್ಯಕೀಯ ಕಾಲೇಜುಗಳಲ್ಲಿನ ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ 114 Modular OT ಗಳನ್ನು 177 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.

6) ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ Cathlab ಸೌಲಭ್ಯದೊಂದಿಗೆ Super Speciality Cardiac Unit ಅನ್ನು 10 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಿಪಿಪಿ ಮಾದರಿಯಲ್ಲಿ Cardiac Unit ಪ್ರಾರಂಭಿಸಲಾಗುವುದು.

7) ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ವೈದ್ಯಕೀಯ ಸಂಸ್ಥೆಗಳಲ್ಲಿ 64 Anaesthesia Workstation ಗಳನ್ನು 34 ಕೋಟಿ ರೂ. ವೆಚ್ಚದಲ್ಲಿ ಖರೀದಿಸಿ ಅಳವಡಿಸಲಾಗುವುದು.

8) ರಾಜ್ಯದಲ್ಲಿ ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ Human Milk Bank ಘಟಕಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ರಾಯಚೂರು, ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಹೊಸ ಘಟಕಗಳನ್ನು ಸ್ಥಾಪಿಸಲಾಗುವುದು.

9) ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅಪಾಯಕಾರಿ ಸಾಂಕ್ರಾಮಿಕ ರೋಗಗಳು ಮತ್ತು ವೈರಲ್ ಸೋಂಕುಗಳನ್ನು ಪತ್ತೆ ಹಚ್ಚಲು Viral Research & Diagnostic Laboratory (VRDL) ಅನ್ನು ಸ್ಥಾಪಿಸಲಾಗುವುದು.

10) ಸಾರ್ವಜನಿಕರ ಎಲ್ಲಾ ಆರೋಗ್ಯ ಮಾಹಿತಿಯನ್ನು ಡಿಜಿಟಲೀಕರಣಗೊಳಿಸುವ ಸಂಬಂಧ ಡಿಜಿಟಲ್ ಹೆಲ್ತ್ ಸೊಸೈಟಿಯನ್ನು ಆರಂಭಿಸಲು ಈಗಾಗಲೇ ಕ್ರಮವಹಿಸಲಾಗಿರುತ್ತದೆ. ಇದರಡಿಯಲ್ಲಿ ಒಂದು Health Repository ಯನ್ನು ಸೃಜಿಸಿ ಸಾರ್ವಜನಿಕರ ಚಿಕಿತ್ಸಾ ಮಾಹಿತಿಯು ಒಂದೇ ಮೂಲದಿಂದ ಎಲ್ಲಾ ಆಸ್ಪತ್ರೆಗಳು ಮತ್ತು ವೈದ್ಯರಿಗೆ ಲಭ್ಯವಾಗುವಂತೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡುವುದನ್ನು ಮತ್ತು ಚಿಕಿತ್ಸಾ ಸಮಯವನ್ನು ಸ್ವಯಂಚಾಲಿತವಾಗಿ ನಿಗದಿಪಡಿಸುವ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು.

11) ಚಿತ್ರದುರ್ಗ ಜಿಲ್ಲೆಯಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು 500 ಕೋಟಿ ರೂ.ಗಳ ವೆಚ್ಚದಲ್ಲಿ 2023-24ನೇ ಸಾಲಿನಿಂದ 150 ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳ ದಾಖಲಾತಿಯೊಂದಿಗೆ ಪ್ರಾರಂಭಿಸಲಾಗಿರುತ್ತದೆ. ವೈದ್ಯಕೀಯ ಕಾಲೇಜಿನ ಕಟ್ಟಡ, ವಿದ್ಯಾರ್ಥಿ ವಸತಿ ನಿಲಯ, ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.

12) ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಮೈಸೂರು ವೈದ್ಯಕೀಯ ಮಹಾವಿದ್ಯಾಲಯದ ಶತಮಾನೋತ್ಸವದ ನೆನಪಿಗಾಗಿ ಕೆ.ಆರ್. ಆಸ್ಪತ್ರೆ ಆವರಣದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರ ರೋಗಿ ವಿಭಾಗದ ಕಟ್ಟಡವನ್ನು ನಿರ್ಮಿಸಲಾಗುವುದು.

ಇದನ್ನೂ ಓದಿ: Karnataka Budget 2024 : ಸಿದ್ದು ಬಜೆಟ್‌ನ ಘೋಷಣೆಗಳ ಸಂಪೂರ್ಣ ಪಟ್ಟಿ; ಇದನ್ನು ಓದಿದ್ರೆ ಸಾಕು!

Exit mobile version