Site icon Vistara News

Karnataka Budget Session 2024: ಮಹಿಳೆಯರಿಗೆ ಗೃಹಲಕ್ಷ್ಮಿಯೇ ಹೈಲೈಟ್‌; ಮಾಜಿ ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರ ಮಾಸಾಶನ ಹೆಚ್ಚಳ

Karnataka Budget Session 2024 for women Monthly pension hike for ex Devadasis

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ತಮ್ಮ 15ನೇ ಬಜೆಟ್‌ (Karnataka Budget Session 2024) ಅನ್ನು ಮಂಡಿಸಿದ್ದು, ಈ ಬಾರಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯೇ (Gruha Lakshmi Scheme) ಹೈಲೈಟ್‌ ಆಗಿದೆ. ಆದರೆ, ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಪ್ರಕಟಿಸಿರುವ ಸಿಎಂ, ಪ್ರಸ್ತುತ ನೀಡುತ್ತಿರುವ ಮಾಸಾಶನವನ್ನು 1500 ರೂ.ಗಳಿಂದ 2000 ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಘೋಷಿಸಿದ್ದಾರೆ.

ಬಜೆಟ್‌ ಮಂಡನೆ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುವ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ. ಕುಟುಂಬ ದತ್ತಾಂಶದನ್ವಯ 1.33 ಕೋಟಿ ಎಪಿಎಲ್‌, ಬಿಪಿಎಲ್‌, ಎಎವೈ (APL, BPL, AAY) ಪಡಿತರ ಚೀಟಿ ಹೊಂದಿರುವ ಯಜಮಾನಿ ಮಹಿಳೆಯರನ್ನು ಅರ್ಹ ಫಲಾನುಭವಿಗಳೆಂದು ಗುರುತಿಸಲಾಗಿದೆ. ಜನವರಿ ಅಂತ್ಯದವರೆಗೆ 1.17 ಕೋಟಿ ಮಹಿಳೆಯರು ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಈವರೆಗೆ 11,726 ಕೋಟಿ ರೂ.ಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ ಎಂದು ಹೇಳಿದರು.

2024-25ನೇ ಸಾಲಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜತೆಗೆ ಆದಾಯೋತ್ಪನ್ನ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ತರಬೇತಿಗೆ 10 ಕೋಟಿ ರೂ.

    ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

    ಮಹಿಳೆಯರಿಗೆ ವಿವಿಧ ಕೊಡುಗೆ

    1. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು.
    2. Cerebral Palsy, Muscular Dystrophy, Parkinsons ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ 1,000 ರೂ. ಪ್ರೋತ್ಸಾಹಧನವನ್ನು ನೀಡಲಾಗುವುದು.

    ಇದನ್ನೂ ಓದಿ: Karnataka Budget Session 2024: ಪತ್ರಕರ್ತರಿಗೆ ಉಚಿತ ಬಸ್ ಪಾಸ್; ಕೆಯುಡಬ್ಲ್ಯುಜೆ ಹೋರಾಟಕ್ಕೆ ಸಂದ ಫಲ

    Exit mobile version