Site icon Vistara News

Karnataka CET 2024: ಸಿಇಟಿ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ, ಈಗಲೇ ಡೌನ್‌ಲೋಡ್‌ ಮಾಡಿಕೊಳ್ಳಿ

karnataka CET Exam 2024

ಬೆಂಗಳೂರು: ಇಂಜಿನಿಯರಿಂಗ್‌ (Engineering) ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಏಪ್ರಿಲ್ 18, 19, 20ರಂದು ನಡೆಯಲಿರುವ ಸಿಇಟಿ (Karnataka CET 2024) ಪರೀಕ್ಷೆಗೆ ಪ್ರವೇಶ ಪತ್ರ (Hall ticket) ಬಿಡುಗಡೆ ಮಾಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ವತಿಯಿಂದ ಏಪ್ರಿಲ್ 18 ಮತ್ತು 19ರಂದು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ (common entrance test) ಪ್ರವೇಶ ಪತ್ರವನ್ನು ಅಭ್ಯರ್ಥಿಗಳು ಇದೀಗ ಪಡೆದುಕೊಳ್ಳಬಹುದು.

ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ https://kea.nic.in ನಲ್ಲಿ ಯುಜಿಸಿಇಟಿ- 24 ಲಿಂಕ್ ಮೇಲೆ ಕ್ಲಿಕ್ ಮಾಡಿ ತಮ್ಮ ಅರ್ಜಿಯ ಸಂಖ್ಯೆ, ಹೆಸರು, ಜನ್ಮ ದಿನಾಂಕ ನಮೂದಿಸುವ ಮೂಲಕ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದು.

ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗೆ 3.28 ಲಕ್ಷ ಅಭ್ಯರ್ಥಿಗಳು ನೊಂದಾಯಿಸಿಕೊಂಡಿದ್ದು, ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಏಪ್ರಿಲ್ 20ರಂದು ಕನ್ನಡ ಭಾಷಾ ಪರೀಕ್ಷೆಗೂ ಈ ಪ್ರವೇಶ ಪತ್ರ ಅನ್ವಯವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಕರ್ನಾಟಕದಲ್ಲಿ 2024-25ನೇ ಸಾಲಿನ ಇಂಜಿನಿಯರಿಂಗ್ ಹಾಗೂ ಇತರೆ ಹಲವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸುತ್ತದೆ. ಈ ಮೊದಲು ಕರ್ನಾಟಕ ಸಿಇಟಿಯನ್ನು ಏಪ್ರಿಲ್ 20, 21ಕ್ಕೆ ನಡೆಸುವುದಾಗಿ ಪ್ರಾಧಿಕಾರ ಘೋ‍ಷಿಸಿತ್ತು. ಗಡಿನಾಡ ಕನ್ನಡಿಗ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಏಪ್ರಿಲ್ 19ಕ್ಕೆ ನಿಗದಿ ಮಾಡಿತ್ತು. ಆದರೆ, ಏಪ್ರಿಲ್ 21ರಂದೇ ರಕ್ಷಣಾ ಇಲಾಖೆಯ ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಎನ್‌ಡಿಎ ಪರೀಕ್ಷೆಯೂ ಇರುವ ಕಾರಣ ಸಿಇಟಿ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ.

ಕೆಸಿಇಟಿ 2024ರ ವೇಳಾಪಟ್ಟಿ

ಏಪ್ರಿಲ್ 18 – ಬೆಳಿಗ್ಗೆ 10-30ರಿಂದ ಜೀವಶಾಸ್ತ್ರ , ಮಧ್ಯಾಹ್ನ 2.30ರಿಂದ ಗಣಿತ
ಏಪ್ರಿಲ್ 19 – ಬೆಳಿಗ್ಗೆ 10-30ರಿಂದ ಭೌತಶಾಸ್ತ್ರ , ಮಧ್ಯಾಹ್ನ ರಸಾಯನ ಶಾಸ್ತ್ರ
ಏಪ್ರಿಲ್ 20 – ಹೊರನಾಡು ಮತ್ತು ಗಡಿನಾಡ ಕನ್ನಡಿಗರಿಗೆ ಭಾಷಾ ಪರೀಕ್ಷೆ

ಪ್ರವೇಶ ಪತ್ರ ಡೌನ್‌ಲೋಡ್ ಹೀಗೆ ಮಾಡಿ

ಸಿಇಟಿ ವಿದ್ಯಾರ್ಥಿಗಳಿಗೆ ಪ್ರಾಧಿಕಾರದ ಸೂಚನೆ

ಪ್ರವೇಶ ಪತ್ರದ ಜೊತೆಯಲ್ಲಿ ಅಭ್ಯರ್ಥಿಗಳಿಗೆ ನೀಡಲಾಗಿರುವ ಸೂಚನೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಹಾಗು ಮಾರ್ಗದರ್ಶನಗಳನ್ನು / ಕಾರ್ಯವಿಧಾನಗಳನ್ನು ತಪ್ಪದೆ ಅನುಸರಿಸಲು ಪರೀಕ್ಷಾ ಪ್ರಾಧಿಕಾರ ಸೂಚಿಸಿದೆ. ಪ್ರವೇಶ ಪತ್ರದಲ್ಲಿ ಮುದ್ರಿಸಿರುವ ಎಲ್ಲಾ ವಿವರಗಳನ್ನು ಪರಿಶೀಲಿಸಿ, ನಿಗದಿತ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಬೇಕು ಎಂದು ಅದು ಹೇಳಿದೆ. ಹೊರನಾಡು ಮತ್ತು ಗಡಿನಾಡು, ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಪರೀಕ್ಷೆಯನ್ನು ಬೆಂಗಳೂರು, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಮಾತ್ರ ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: CET Exam: ಸಿಇಟಿ ಪರೀಕ್ಷೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್;‌ ಕೊನೇ ಅವಕಾಶ ಕೊಟ್ಟ KEA!

Exit mobile version