Site icon Vistara News

ಪಶು ಸಂಗೋಪನಾ ಇಲಾಖೆ ಆಸ್ತಿ ಅಲ್ಪಸಂಖ್ಯಾತ ಇಲಾಖೆಗೆ ವರ್ಗಾವಣೆ; ಸಿದ್ದರಾಮಯ್ಯ ಆದೇಶ

Siddaramaiah

karnataka government transfers animal husbandry department Land To Department of Minority Welfare

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು (Karnataka Government) ಹಿಂದು ವಿರೋಧಿಯಾಗಿ ಕೆಲಸ ಮಾಡುತ್ತಿದೆ. ದೇವಸ್ಥಾನಗಳ ಹಣವನ್ನು ಚರ್ಚ್‌, ಮಸೀದಿಗಳಿಗೆ ನೀಡುತ್ತಿದೆ. ಸಿದ್ದರಾಮಯ್ಯ (Siddaramaiah) ಅವರು ಮುಸ್ಲಿಮರ ಓಲೈಕೆಯಲ್ಲಿ ತೊಡಗಿದ್ದಾರೆ ಎಂಬುದಾಗಿ ಬಿಜೆಪಿ ನಾಯಕರು ಆರೋಪಿಸುತ್ತಿರುವ ಬೆನ್ನಲ್ಲೇ, ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ಪಶು ಸಂಗೋಪನಾ ಇಲಾಖೆಗೆ (Department of Animal Husbandry) ಸೇರಿದ ಎರಡು ಎಕರೆ ಜಾಗವನ್ನು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ (Department of Minority Welfare) ವರ್ಗಾವಣೆ ಮಾಡಿದೆ. ಇದು ಮತ್ತೊಂದು ವಿವಾದಕ್ಕೂ ಕಾರಣವಾಗಿದೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಪಶು ಚಿಕಿತ್ಸಾಲಯದ ಎರಡು ಎಕರೆ ಜಾಗವನ್ನು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಲ್ಪಸಂಖ್ಯಾತರ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಜಾಗವನ್ನು ವರ್ಗಾವಣೆ ಮಾಡಲಾಗದೆ. ಚಾಮರಾಜಪೇಟೆಯ ಗೂಡ್‌ಶೆಡ್‌ ರಸ್ತೆಯಲ್ಲಿರುವ ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಾಗವನ್ನು ಈಗ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ವರ್ಗಾಯಿಸಲಾಗಿದೆ.

ಸರ್ಕಾರದ ನಡೆ ಖಂಡಿಸಿದ ಬಸನಗೌಡ ಪಾಟೀಲ್‌ ಯತ್ನಾಳ್

ಜಾನುವಾರುಗಳ ಸಾಕಣೆ ಕಡಿಮೆಯಾಗಿದ್ದು, ಸಾರ್ವಜನಿಕರ ಉಪಯೋಗಕ್ಕೆ ಬರುತ್ತಿಲ್ಲ ಎಂಬ ಕಾರಣ ನೀಡಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ಜಾಗವನ್ನು ವರ್ಗಾವಣೆ ಮಾಡಲಾಗಿದೆ. ಸಚಿವರೂ ಆಗಿರುವ ಚಾಮರಾಜಪೇಟೆ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಅವರ ಮನವಿಯ ಮೇರೆಗೆ ರಾಜ್ಯ ಸರ್ಕಾರವು ಜಾಗವನ್ನು ವರ್ಗಾಯಿಸಿದೆ. ವಕ್ಫ್‌ ಆಸ್ತಿ ಇದ್ದರೂ ಪಶು ಸಂಗೋಪನೆ ಇಲಾಖೆ ಜಾಗದ ಮೇಲೆ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಕಣ್ಣು ಹಾಕಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ಇದನ್ನೂ ಓದಿ: Sedition Case : ಪಾಕೈಸ್ತಾನ್‌ ಟ್ವೀಟ್‌ಗೆ ಸಿಟ್ಟಿಗೆದ್ದ ಕಾಂಗ್ರೆಸ್‌, ಪಾಕಿಸ್ತಾನದಲ್ಲೇ ಕೇಸ್‌ ಹಾಕಿ ಎಂದ ಬಿಜೆಪಿ!

ಎರಡು ಎಕರೆ ಜಾಗದಲ್ಲಿ ಅಲ್ಪಸಂಖ್ಯಾತ ಮಕ್ಕಳಿಗೆ ಶಾಲೆ, ವಸತಿ ಶಾಲೆ, ಮೌಲಾನಾ ಆಜಾದ್ ಮಾದರಿ ಶಾಲೆ, ಕಾಲೇಜು, ಮೆಡಿಕಲ್ ಕಾಲೇಜು ನಿರ್ಮಿಸುವುದಾಗಿ ಸರ್ಕಾರ ತಿಳಿಸಿದೆ. ಹಾಗಾಗಿ, ಸುಮಾರು 120 ಕೋಟಿ ರೂಪಾಯಿ ಬೆಲೆ ಬಾಳುವ ಜಾಗವನ್ನು ಪಶುಸಂಗೋಪನಾ ಇಲಾಖೆಯಿಂದ‌, ಅಲ್ಪಸಂಖ್ಯಾತ ಇಲಾಖೆಗೆ ಈಗಾಗಲೇ ಜಾಗ ನೀಡಿ ಆದೇಶ ಹೊರಡಿಸಲಾಗಿದೆ. ಚಾಮರಾಜಪೇಟೆಯಲ್ಲಿ 1.25 ಲಕ್ಷ ಅಲ್ಪಸಂಖ್ಯಾತರು ಇರುವ ಕಾರಣ ಜಮೀರ್‌ ಅಹ್ಮದ್‌ ಖಾನ್‌ ಇಂತಹ ನಡೆ ಅನುಸರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version