Karnataka Job Reservation: ಕನ್ನಡಿಗರಿಗೆ ಮೀಸಲಾತಿ ನೀಡಲು ಕರವೇ ಆಗ್ರಹ; ʼಫೋನ್ ಪೇʼ ಬಾಯ್ಕಾಟ್ ಅಭಿಯಾನ ಶುರು! - Vistara News

ಪ್ರಮುಖ ಸುದ್ದಿ

Karnataka Job Reservation: ಕನ್ನಡಿಗರಿಗೆ ಮೀಸಲಾತಿ ನೀಡಲು ಕರವೇ ಆಗ್ರಹ; ʼಫೋನ್ ಪೇʼ ಬಾಯ್ಕಾಟ್ ಅಭಿಯಾನ ಶುರು!

Karnataka Job Reservation: ಕನ್ನಡಿಗರಿಗೆ ಮೀಸಲಾತಿ ಕಾಯ್ದೆಗೆ ಫೋನ್‌ ಪೇ ಸಿಇಒ ಸಮೀರ್ ನಿಗಮ್ ಅಸಮಾಧಾನ ಹೊರಹಾಕಿದ ಹಿನ್ನೆಲೆಯಲ್ಲಿ ಫೋನ್ ಪೇ ಕಂಪನಿಗೆ ಬಿಸಿ ತಟ್ಟಿದೆ. ಸಾಮಾಜಿಕ ಜಾಲತಾಣದಲ್ಲಿ ʼಫೋನ್ ಪೇʼ ಬಾಯ್ಕಾಟ್ ಅಭಿಯಾನ ಶುರುವಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಾಯ್ದೆ (Karnataka Job Reservation) ಜಾರಿಗೆ ಆಗ್ರಹಿಸಿ ನಗರದ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಕನ್ನಡ ಪರ ಸಂಘಟನೆಗಳಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಕಾಯ್ದೆ ಜಾರಿ ಮಾಡುವುದಾಗಿ ಹೇಳಿದ ಬೆನ್ನಲ್ಲೇ ನಿರ್ಧಾರ ಹಿಂಪಡೆದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಮತ್ತೊಂದೆಡೆ ಕನ್ನಡಿಗರಿಗೆ ಮೀಸಲಾತಿ ಕಾಯ್ದೆಗೆ ಫೋನ್ ಪೇ ಸಿಇಒ ಸಮೀರ್ ನಿಗಮ್ ಅಸಮಾಧಾನ ಹೊರಹಾಕಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ʼಫೋನ್ ಪೇʼ ಬಾಯ್ಕಾಟ್ ಅಭಿಯಾನ (‘PhonePe’ boycott campaign) ಶುರುವಾಗಿದೆ.

ಖಾಸಗಿ ಕಂಪನಿಗಳ ಒತ್ತಡಕ್ಕೆ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಮಣಿಯಬಾರದು. ಶೀಘ್ರವೇ ಮಸೂದೆ ಜಾರಿಗೊಳಿಸಬೇಕೆಂದು ಕನ್ನಡಪರ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಪ್ರತಿಭಟನೆ ನಡೆದಿದೆ. ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈಗೆ ಕನ್ನಡದ ನೆಲ, ಜಲ ಬೇಕು. ಆದರೆ, ಕನ್ನಡಿಗರಿಗೆ ನೌಕರಿ ಕೊಡಿ ಎಂದರೆ ಇವರಿಗೆ ತೊಂದರೆ. ನಾವು ಮುಂದಿನ ದಿನಗಳಲ್ಲಿ ಅವರ ಕಂಪನಿಗಳಿಗೆ ಮುತ್ತಿಗೆ ಹಾಕುತ್ತೇವೆ. ಸಿಎಂ ಮಸೂದೆ ಜಾರಿಗೆ ತರದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ಕರವೇ ಪ್ರವೀಣ್ ಶೆಟ್ಟಿ ಹೇಳಿದರು.

ಈ ವೇಳೆ ಕಿರಣ್ ಮಜುಂದಾರ್ ಶಾ, ಮೋಹನ್‌ ದಾಸ್‌ ಪೈ ಭಾವಚಿತ್ರ ಹಿಡಿದು ಕಾರ್ಯಕರ್ತರು ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ಫೋನ್ ಪೇ ಬಾಯ್ಕಾಟ್ ಮಾಡುವಂತೆ ಅಭಿಯಾನ ಆರಂಭ

ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರಕ್ಕೆ ಫೋನ್ ಪೇ ಸಿಇಒ ಸಮೀರ್ ನಿಗಮ್ ಅಸಮಾಧಾನ ಹೊರಹಾಕಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ಕನ್ನಡಿಗರ ವಿಷಯದಲ್ಲಿ ಫೋನ್ ಪೇ ಸಿಇಒ ಸಮೀರ್ ನಿಗಮ್ ಉದ್ಧಟತನ ತೋರಿದ್ದಾರೆ. ಹೀಗಾಗಿ ಫೋನ್‌ ಪೇ ಆ್ಯಪ್ ಅನ್ನು ಯಾರೂ ಬಳಸಬೇಡಿ. 1 ರೇಟಿಂಗ್ ನೀಡಿದ ಬಳಿಕ ಆ್ಯಪ್ ಡಿಲಿಟ್ ಮಾಡುವಂತೆ ಅಭಿಯಾನ ಶುರು ಮಾಡಲಾಗಿದೆ.

ಇನ್ನು ಕೆಲ ನೆಟ್ಟಿಗರು, ಯಾರಾದರೂ ನನ್ನ ಹೆಸರಲ್ಲಿ ಫೋನ್ ಪೇ ಮಾಡಿ ಎಂದರೆ ಯಾರು ಮಾಡಬೇಡಿ. ಯಾಕೆಂದರೆ ನನ್ನ ಹತ್ತಿರ ಫೋನ್ ಪೇ ಇಲ್ಲ. ಕನ್ನಡಿಗರಿಗೆ ಕೆಲಸದಲ್ಲಿ ಮೀಸಲಾತಿ ಕೊಡುವುದಕ್ಕೆ ಎದುರು ಮಾಡಿರುವ ಫೋನ್‌ಪೇ ಸಿಇಒಗೆ ಬುದ್ಧಿ ಕಲಿಸಲು ಫೋನ್‌ಪೇ ಅನ್‌ಇನ್ಸ್ಟಾಲ್ ಮಾಡಿ. ಕನ್ನಡಿಗರ ಬಲ ತೋರಿಸಿ ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

25,000 ಜನರಿಗೆ ಉದ್ಯೋಗ ಕೊಟ್ಟಿದ್ದೇನೆ, ನನ್ನ ಮಕ್ಕಳು ರಾಜ್ಯದಲ್ಲಿ ಕೆಲಸ ಮಾಡಬಾರದಾ?: ಫೋನ್‌ಪೇ ಸಿಇಒ

Sameer Nigam

ಬೆಂಗಳೂರು: ಕರ್ನಾಟಕದಲ್ಲಿರುವ ಖಾಸಗಿ ಕೈಗಾರಿಕೆಗಳು ಹಾಗೂ ಇತರ ಸಂಸ್ಥೆಗಳ ಆಡಳಿತಾತ್ಮಕ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ. 50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 75 ಮೀಸಲಾತಿ (Karnataka Jobs Reservation) ನಿಗದಿಪಡಿಸುವ ಕರಡು ಮಸೂದೆಗೆ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ. ಸದ್ಯ ಈ ಬಗ್ಗೆ ಪರ-ವಿರೋಧ ಅಬಿಪ್ರಾಯ ವ್ಯಕ್ತವಾಗುತ್ತಿದೆ. ಈ ಮಧ್ಯೆ ಫೋನ್‌ಪೇ (PhonePe) ಸಿಇಒ ಮತ್ತು ಸಹ ಸಂಸ್ಥಾಪಕ ಸಮೀರ್ ನಿಗಮ್ (Sameer Nigam) ಅವರು ಕರ್ನಾಟಕ ಸರ್ಕಾರದ ಖಾಸಗಿ ಉದ್ಯೋಗ ಕೋಟಾ ಮಸೂದೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Karnataka Jobs Reservation: ಉರಿವ ಮನೆಯಿಂದ ಗಳ ಹಿರಿದ ಆಂಧ್ರಪ್ರದೇಶ; ʼನಮ್ಮಲ್ಲಿಗೇ ಬನ್ನಿʼ ಎಂದು ಖಾಸಗಿ ಉದ್ಯಮಗಳಿಗೆ ಭಿಕ್ಷಾಪಾತ್ರೆ ಒಡ್ಡಿದ ಸಚಿವ

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ನನಗೆ 46 ವರ್ಷ ವಯಸ್ಸು. ನಾನು ಯಾವುದೇ ರಾಜ್ಯದಲ್ಲಿ 15 ವರ್ಷಕ್ಕೂ ಹೆಚ್ಚು ಕಾಲ ವಾಸಿಸಿಲ್ಲ. ನನ್ನ ತಂದೆ ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ದೇಶಾದ್ಯಂತ ಕಾರ್ಯ ನಿರ್ವಹಿಸಿದ್ದಾರೆ. ಅವರ ಮಕ್ಕಳು ಕರ್ನಾಟಕದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ? ನಾನು ಕಂಪನಿಗಳನ್ನು ಸ್ಥಾಪಿಸಿ ಭಾರತದಾದ್ಯಂತ 25,000+ ಉದ್ಯೋಗಗಳನ್ನು ಸೃಷ್ಟಿಸಿದ್ದೇನೆ. ಹಾಗಾದರೆ ನನ್ನ ಮಕ್ಕಳು ತಮ್ಮ ತವರು ನಗರದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ?ʼʼ ಎಂದು ಪ್ರಶ್ನಿಸಿದ್ದಾರೆ. ಸರ್ಕಾರ ಈ ಮಸೂದೆಯನ್ನು ತಡೆಹಿಡಿಯುವ ಮೊದಲ ಅವರು ಈ ಅಭಿಪ್ರಾಯ ಹಂಚಿಕೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Lokayukta Raid: ಲೋಕಾಯುಕ್ತ ದಾಳಿಯ ವೇಳೆ ಚಿನ್ನಾಭರಣ ಪಕ್ಕದ ಮನೆಗೆಸೆದ ಅಖ್ತರ್‌ ಅಲಿ!

Lokayukta Raid: ಪಕ್ಕದ ಮನೆಯ ಕಿಟಕಿಗೆ ಅಖ್ತರ್ ಆಲಿ ಮನೆ ಗೋಡೆ ಕನೆಕ್ಟ್‌ ಆಗಿದ್ದು, ಅಧಿಕಾರಿಗಳು ಮನೆಗೆ ಎಂಟ್ರಿ ನೀಡುತ್ತಿದ್ದಂತೆ ಪಕ್ಕದ ಮನೆಯ ಕಿಟಕಿಯೊಳಗೆ ಚಿನ್ನ ಇದ್ದ ಬ್ಯಾಗ್ ಎಸೆದಿದ್ದ ಅಖ್ತರ್ ಆಲಿ. ಪಕ್ಕದ ಮನೆಯ ಕಿಟಕಿಗೆ ಹತ್ತಿರದಲ್ಲೇ ಅಖ್ತರ್ ಆಲಿ ಮನೆಯ ಮೊದಲ ಅಂತಸ್ತು ಇದೆ. ಅಲ್ಲಿಂದ ಪಕ್ಕದ ಮನೆ ಕಿಟಕಿ ಒಳಗೆ ಬ್ಯಾಗ್‌ಗೆ ಚಿನ್ನ ತುಂಬಿ ಅಖ್ತರ್ ಆಲಿ ಎಸೆದಿದ್ದ.

VISTARANEWS.COM


on

lokayukta raid akhtar ali
ಅಖ್ತರ್‌ ಅಲಿ ಮನೆಯಿಂದ ವಶಪಡಿಸಿಕೊಂಡ ಚಿನ್ನಾಭರಣ ಮತ್ತು ನಗದು
Koo

ಬೆಂಗಳೂರು: ಇಂದು ಬೆಳಗ್ಗೆ ರಾಜ್ಯದ 54 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ನಡೆಸಿದ್ದು, ಈ ಸಂದರ್ಭ ಬೆಂಗಳೂರಿನಲ್ಲಿ ಅಖ್ತರ್‌ ಅಲಿ ಎಂಬ ಅಧಿಕಾರಿಯ ಮನೆಗೆ ಅಧಿಕಾರಿಗಳು ದಾಳಿ ನಡೆಸಿದಾಗ ಆತ ಚಿನ್ನಾಭರಣಗಳನ್ನು (Gold Jewelry) ಪಕ್ಕದ ಮನೆಗೆ (neighbour house) ಎಸೆದು ಪಾರಾಗಲು ನೋಡಿದ್ದಾರೆ! ಇದನ್ನೂ ಲೋಕಾಯುಕ್ತ ಅಧಿಕಾರಿಗಳು (Lokayukta Officers) ವಶಪಡಿಸಿಕೊಂಡಿದ್ದಾರೆ.

ಭೂಮಾಪನ ಇಲಾಖೆ ಡೆಪ್ಯೂಟಿ ಕಂಟ್ರೋಲರ್ ಅಖ್ತರ್ ಅಲಿ ಮನೆಗೆ ದಾಳಿ ನಡೆಸಿದಾಗ ಈ ಘಟನೆ ನಡೆಯಿತು. ಪಕ್ಕದ ಮನೆಯ ಕಿಟಕಿಗೆ ಅಖ್ತರ್ ಆಲಿ ಮನೆ ಗೋಡೆ ಕನೆಕ್ಟ್‌ ಆಗಿದ್ದು, ಅಧಿಕಾರಿಗಳು ಮನೆಗೆ ಎಂಟ್ರಿ ನೀಡುತ್ತಿದ್ದಂತೆ ಪಕ್ಕದ ಮನೆಯ ಕಿಟಕಿಯೊಳಗೆ ಚಿನ್ನ ಇದ್ದ ಬ್ಯಾಗ್ ಎಸೆದಿದ್ದ ಅಖ್ತರ್ ಆಲಿ. ಪಕ್ಕದ ಮನೆಯ ಕಿಟಕಿಗೆ ಹತ್ತಿರದಲ್ಲೇ ಅಖ್ತರ್ ಆಲಿ ಮನೆಯ ಮೊದಲ ಅಂತಸ್ತು ಇದೆ. ಅಲ್ಲಿಂದ ಪಕ್ಕದ ಮನೆ ಕಿಟಕಿ ಒಳಗೆ ಬ್ಯಾಗ್‌ಗೆ ಚಿನ್ನ ತುಂಬಿ ಅಖ್ತರ್ ಆಲಿ ಎಸೆದಿದ್ದ.

ಬ್ಯಾಗ್ ಎಸೆದದ್ದನ್ನು ನೋಡಿ ನೆರೆ ಮನೆ ನಿವಾಸಿ ಖುದ್ದು ಅಧಿಕಾರಿಗಳನ್ನು ಕರೆದು ತೋರಿಸಿದ್ದಾರೆ. ಕೂಡಲೇ ಹೋಗಿ ಪರಿಶೀಲನೆ ಮಾಡಿದಾಗ ಬ್ಯಾಗ್‌ನಲ್ಲಿ ಚಿನ್ನ ಇರುವುದು ಪತ್ತೆಯಾಗಿದೆ. ಕೂಡಲೇ ಬ್ಯಾಗನ್ನು ಲೋಕಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಬ್ಯಾಗನ್ನು ಅಖ್ತರ್ ಆಲಿ ಮನೆಗೆ ತಂದು ಪರಿಶೀಲನೆ ಮಾಡಿದಾಗ, ಒಂದು ಬ್ಯಾಗ್ ತುಂಬಾ ಚಿನ್ನದ ಒಡವೆಗಳು ಇರುವುದು ಪತ್ತೆಯಾಗಿದೆ. ಸದ್ಯ ಸಿಕ್ಕಿರುವ ಚಿನ್ನ ತೂಕ ಹಾಕಲು ಸಿಬ್ಬಂದಿಯನ್ನು ಕರೆಸಲಾಗಿದೆ. ಅಖ್ತರ್‌ ಅಲಿ ಅಕ್ಕಪಕ್ಕದ ಮನೆಯಲ್ಲೂ ಅಧಿಕಾರಿಗಳ ತಂಡ ತಲಾಶ್ ಮಾಡಿದೆ.

ದಾಳಿ ವೇಳೆ ಮನೆಯಲ್ಲೇ ಇದ್ದ ಅಖ್ತರ್ ಆಲಿಯ ಬಳಿಯಿಂದ ಸದ್ಯ ಕೆಲವು ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆದು ತಂಡ ಪರಿಶೀಲನೆ ಮಾಡುತ್ತಿದೆ. ಕೆಲವು ದಾಖಲೆಗಳನ್ನೂ ಪಕ್ಕದ ಮನೆಯ ಕಿಟಕಿಯ ಮೂಲಕ ಅಲಿ ತಳ್ಳಿರುವ ಶಂಕೆ ಇದೆ. ಹೀಗಾಗಿ ಪಕ್ಕದ ಮನೆಯನ್ನೂ ಶೋಧ ನಡೆಸಲಾಗಿದೆ. ಇದುವರೆಗೆ ಅಖ್ತರ್ ಅಲಿ ಮನೆಯಲ್ಲಿ 25 ಲಕ್ಷ ರೂ. ನಗದು, 2.20 ಕೆಜಿ ಚಿನ್ನಾಭರಣ, 2 ಕೆಜಿ ಬೆಳ್ಳಿ ವಸ್ತುಗಳು, ಐವತ್ತಕ್ಕೂ ಹೆಚ್ಚು ದುಬಾರಿ ವಾಚ್‌ಗಳು, ಲಕ್ಷಾಂತರ ಮೌಲ್ಯದ ಡೈಮಂಡ್ ಆಭರಣಗಳು ಪತ್ತೆಯಾಗಿವೆ.

ಲೋಕಾಯುಕ್ತ ಎಸ್‌ಪಿ ವಂಶಿಕೃಷ್ಣ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ʼಇವತ್ತು ಬೆಂಗಳೂರು ಸಿಟಿ ಘಟಕದಿಂದ ಮೂರು ಆಫೀಸರ್ಸ್ ಮನೆ ದಾಳಿ ಮಾಡಲಾಗಿದೆ. ಅಖ್ತರ್ ಅವರ ಮನೆಯಲ್ಲೂ ಚಿನ್ನಾಭರಣ ಸಿಕ್ಕಿದೆ. ಈಗಾಗಲೇ 2.2 ಕೆಜಿ ಚಿನ್ನಾಭರಣ, 25 ಲಕ್ಷ ಹಣ ಸಿಕ್ಕಿದೆ. ಅವರು ಚಿನ್ನದ ಬ್ಯಾಗನ್ನು ಪಕ್ಕದ ಮನೆಗೆ ಎಸೆದಿದ್ದಾರೆ. ಅದನ್ನು ಕೂಡ ನಮ್ಮ ಟೀಂ ರಿಕವರಿ ಮಾಡಿದೆ. ಸದ್ಯ ಇನ್ನೂ ಪರಿಶೀಲನೆ ಮುಂದುವರೆದಿದೆ. ಬಿ.ಕೆ ರಾಜ ಹಾಗೂ ರಮೇಶ್ ಕುಮಾರ್ ಅವರ ಮನೆಯಲ್ಲಿ ಪರಿಶೀಲನೆ ಮುಂದುವರೆದಿದೆʼ ಎಂದಿದ್ದಾರೆ.

ಯಾವ ಅಧಿಕಾರಿಗಳ ಮೇಲೆ ದಾಳಿ?

ತುಮಕೂರು – ಮುದ್ದುಕುಮಾರ್ ಅಡಿಷನಲ್ ಡೈರೆಕ್ಟರ್ ಇಂಡಸ್ಟ್ರಿ ಆ್ಯಂಡ್ ಕಾಮರ್ಸ್ ಡಿಪಾರ್ಟ್ಮೆಂಟ್
ಯಾದಗಿರಿ – ಬಲವಂತ್ ಯೋಜನ ನಿರ್ದೇಶಕ , ಯಾದಗಿರಿ ಜಿಲ್ಲಾ ಪಂಚಾಯತ್
ಬೆಂಗಳೂರು ಗ್ರಾಮಾಂತರ – ಸಿದ್ದಪ್ಪ ಹಿರಿಯ ಪಶು ವೈದ್ಯ ದೊಡ್ಡಬಳ್ಳಾಪುರ
ಬೆಂಗಳೂರು ಗ್ರಾಮಾಂತರ ನರಸಿಂಹ ಮೂರ್ತಿ ಕೆ – ಮುನ್ಸಿಪಲ್ ಅಡ್ಮಿನಿಸ್ಟ್ರೇಷನ್ ಸರ್ವಿಸ್ ಕಮೀಷನರ್ ಹೆಬ್ಬಗೋಡಿ
ಬೆಂಗಳೂರು ಸಿಟಿ – ಬಿವಿ ರಾಜ ಎಫ್‌ಡಿಎ ಕೆಐಎಡಿಬಿ
ಬೆಂಗಳೂರು ಸಿಟಿ – ರಮೇಶ್ ಕುಮಾರ್ ಜಂಟಿ ಆಯುಕ್ತ ವಾಣಿಜ್ಯ ತೆರಿಗೆ ಇಲಾಖೆ
ಬೆಂಗಳೂರು ಸಿಟಿ- ಅಕ್ತರ್ ಅಲಿ – ಡೆಪ್ಯೂಟಿ ಕಂಟ್ರೋಲರ್ ಮಾಪನಾ ಇಲಾಖೆ
ಶಿವಮೊಗ್ಗ – ಸಿ ನಾಗೇಶ್ – ಅಂತರಗಂಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಭದ್ರಾವತಿ
ಶಿವಮೊಗ್ಗ ಪ್ರಕಾಶ್ – ಡೆಪ್ಯೂಟಿ ಡೈರೆಕ್ಟರ್ – ತೋಟಗಾರಿಕಾ ಇಲಾಖೆ
ಬೆಂಗಳೂರು ಸಿಟಿ – ಚೇತನ್ ಕುಮಾರ್ – ಕಾರ್ಮಿಕ‌ ಇಲಾಖೆ ಅಧಿಕಾರಿ ಮಂಡ್ಯ ವಿಭಾಗ
ಬೆಂಗಳೂರು ಸಿಟಿ – ಆನಂದ್ ಸಿ ಎಲ್ – ಕಮೀಷನರ್ ಮಂಗಳೂರು ಮಹಾನಗರ ಪಾಲಿಕೆ
ಬೆಂಗಳೂರು ಸಿಟಿ – ಮಂಜುನಾಥ್ ಟಿ ಆರ್ – ಎಫ್ ಡಿಎ ಬೆಂಗಳೂರು‌ ನಾರ್ತ್ ಸಬ್ ಡಿವಿಷನ್ ಆಫೀಸರ್

ಇದನ್ನೂ ಓದಿ: Lokayukta Raid: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್‌, ರಾಜ್ಯಾದ್ಯಂತ ಲೋಕಾಯುಕ್ತ ದಾಳಿ

Continue Reading

ಕರ್ನಾಟಕ

DK Shivakumar: ಬಿಎಸ್‌ವೈ, ಬೊಮ್ಮಾಯಿ ಕಾಲದಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ: ಡಿಕೆಶಿ ಆರೋಪ

DK Shivakumar: ಬಿಜೆಪಿಯ ಅಕ್ರಮಗಳನ್ನು ತನಿಖೆ ಮಾಡುತ್ತೇವೆ. ಅಕ್ರಮಗಳ ಹಿಂದೆ ಇದ್ದ ಮಂತ್ರಿ, ಅಧ್ಯಕ್ಷರು, ಮುಖ್ಯಮಂತ್ರಿಗಳ ಬಗ್ಗೆ ಜನರಿಗೆ ತಿಳಿಸುತ್ತೇವೆ ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: “ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು 300 ಕೋಟಿ ರೂ.ಗಳಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು.

ವಿಧಾನಸೌಧದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು “ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ 87 ಕೋಟಿ ರೂ., ಎಪಿಎಂಸಿಯ 47 ಕೋಟಿ ರೂ., 2019ರಲ್ಲಿ ಅಂಗವಿಕಲ ಕಲ್ಯಾಣ ಇಲಾಖೆಯ 22 ಕೋಟಿ ರೂ., ಅಂಬೇಡ್ಕರ್ ನಿಗಮದ ಕೆನರಾ ಬ್ಯಾಂಕ್ ಅಲ್ಲಿನ ಹಣ ಜೂನ್ 2018 ರಲ್ಲಿ 5 ಕೋಟಿ ರೂ., ದೇವರಾಜ್ ಅರಸು ನಿಗಮದ 47 ಕೋಟಿ ರೂ., ಮಾಲಿನ್ಯ ನಿಯಂತ್ರಣ ಮಂಡಲಿಯ 10 ಕೋಟಿ ರೂ. ಹಾಗೂ ಕೆಐಡಿಬಿಯ ಹಣ ಸೇಲಂಗೆ ಅಕ್ರಮವಾಗಿ ವರ್ಗಾವಣೆಯಾಗಿದೆ” ಎಂದು ಆರೋಪಿಸಿದರು.

ಬಿಜೆಪಿಯ ಅಕ್ರಮಗಳನ್ನು ತನಿಖೆ ನಡೆಸುವಿರಾ ಎಂದು ಪ್ರಶ್ನಿಸಿದಾಗ “ಖಂಡಿತವಾಗಿಯೂ ತನಿಖೆ ನಡೆಸುತ್ತೇವೆ. ಆದರೆ ಎಲ್ಲವೂ ದಾಖಲೆಯಲ್ಲಿ ಇರಬೇಕು ಎನ್ನುವ ಕಾರಣಕ್ಕೆ ಸದನದಲ್ಲಿ ಎಲ್ಲಾ ದಾಖಲೆಗಳನ್ನು ಬಯಲು ಮಾಡುತ್ತೇವೆ. ಅಕ್ರಮಗಳ ಹಿಂದೆ ಇರುವ ಯಾವ ಮಂತ್ರಿ, ಅಧ್ಯಕ್ಷರು, ಮುಖ್ಯಮಂತ್ರಿಗಳು ಇದ್ದರು ಎಂದು ಜನರಿಗೆ ತಿಳಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ | Karnataka Assembly Live: ವಿಧಾನಸಭೆಯಲ್ಲಿ ಶಾಸಕರಿಗೆ ಮಧ್ಯಾಹ್ನ ಮಲಗಲು ವ್ಯವಸ್ಥೆ ಮಾಡಿಸಿದ ಸ್ಪೀಕರ್!

“ಮುಖ್ಯಮಂತ್ರಿ ಹುದ್ದೆಗೆ 2500 ಕೋಟಿ ರೂ., ಮಂತ್ರಿ ಸ್ಥಾನಕ್ಕೆ 100 ಕೋಟಿ ರೂ. ನೀಡಬೇಕು ಎನ್ನುವ ಬಸನಗೌಡ ಪಾಟೀಲ ಯತ್ನಾಳ ಅವರ ಆರೋಪ ಹಾಗೂ ಭೋವಿ ನಿಗಮದ ಅಕ್ರಮದ ಬಗ್ಗೆ ಗೂಳಿಹಟ್ಟಿ ಶೇಖರ್ ಮಾಡಿದ ಆರೋಪಗಳ ಮೇಲೆ ಏಕೆ ಬಿಜೆಪಿ ತನಿಖೆ ನಡೆಸಲಿಲ್ಲ” ಎಂದು ಮರುಪ್ರಶ್ನಿಸಿದರು.

“ಯಾವುದೇ ಭ್ರಷ್ಟಾಚಾರದ ಮೇಲೆ ತನಿಖೆ ನಡೆಯುತ್ತಿದ್ದರೆ ಆ ವಿಚಾರದಲ್ಲಿ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಅವಕಾಶವಿಲ್ಲ. ಆದರೆ ನಾವು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಬೆಲೆಕೊಟ್ಟು ಸದನದಲ್ಲಿ ಚರ್ಚೆ ಅವಕಾಶ ಮಾಡಿಕೊಟ್ಟಿದ್ದೇವೆ. ಅಕ್ರಮ ಎಸಗಿದ್ದರೆ ಯಾವುದೇ ಅಧಿಕಾರಿ, ಮಂತ್ರಿ, ಶಾಸಕ, ಯಾರೇ ಆಗಿರಲಿ ಅವರನ್ನು ರಕ್ಷಿಸುವ ಉದ್ದೇಶ ನಮಗಿಲ್ಲ” ಎಂದು ಹೇಳಿದರು.

ಇದನ್ನೂ ಓದಿ | Sameer Nigam: 25,000 ಜನರಿಗೆ ಉದ್ಯೋಗ ಕೊಟ್ಟಿದ್ದೇನೆ, ನನ್ನ ಮಕ್ಕಳು ರಾಜ್ಯದಲ್ಲಿ ಕೆಲಸ ಮಾಡಬಾರದಾ?: ಫೋನ್‌ಪೇ ಸಿಇಒ ಆಕ್ರೋಶ

“ವಾಲ್ಮೀಕಿ ನಿಗಮದ 86 ಕೋಟಿ ರೂ. ಹಣ ತೆಲಂಗಾಣಕ್ಕೆ ಅಕ್ರಮವಾಗಿ ವರ್ಗಾವಣೆಯಾದ ತನಿಖೆ ನಡೆಸಲು ಎಸ್‌ಐಟಿ ರಚನೆ ಮಾಡಿದ್ದೇವೆ. ತನಿಖಾ ತಂಡವು ಸುಮಾರು 36 ಕೋಟಿ ರೂ.ಗಳಷ್ಟು ಹಣವನ್ನು ವಶಕ್ಕೆ ಪಡೆದುಕೊಂಡಿದೆ. ಬ್ಯಾಂಕ್ ಅಧಿಕಾರಿ ಒಂದೇ ದಿನದಲ್ಲಿ ಕೋಟ್ಯಂತರ ರೂಪಾಯಿ ಸಾಲ ಮಂಜೂರು ಮಾಡಿದ್ದಾನೆ. ಇದಕ್ಕೆ ಕೇಂದ್ರ ಹಣಕಾಸು ಸಚಿವರನ್ನು ಹೊಣೆಗಾರರನ್ನಾಗಿ ಮಾಡಲು ಆಗುತ್ತದೆಯೇ? ನಾವು ಪ್ರತಿಪಕ್ಷಗಳಿಗೆ ಈ ವಿಚಾರವಾಗಿ ಉತ್ತರ ಕೊಡಬೇಕಾಗಿದೆ” ಎಂದು ಖಾರವಾಗಿ ತಿಳಿಸಿದರು.

Continue Reading

ದೇಶ

Kanwar Yatra: ಕನ್ವರ್‌ ಯಾತ್ರೆಯ ಮಾರ್ಗದಲ್ಲಿರುವ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ: ಯೋಗಿ ಆದಿತ್ಯನಾಥ್

Kanwar Yatra: ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿನ ಹೋಟೆಲ್‌, ರೆಸ್ಟೋರೆಂಟ್‌ ಮತ್ತು ತಿನಿಸು ಮಾರಾಟಗಾರರು ತಮ್ಮ ಮಾಲೀಕರ ಹೆಸರನ್ನು ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿರುವ ಹೋಟೆಲ್, ಢಾಬಾಗಳು ಮತ್ತು ಇತರ ವ್ಯಾಪಾರಿಗಳು ಮಾಲೀಕರು ಮತ್ತು ಸಿಬ್ಬಂದಿಯ ಹೆಸರನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಪೊಲೀಸರು ಹೊರಡಿಸಿದ್ದ ಆದೇಶಕ್ಕೆ ಪ್ರತಿಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ.

VISTARANEWS.COM


on

Kanwar Yatra
Koo

ಲಖನೌ: ಕನ್ವರ್ ಯಾತ್ರೆ (Kanwar Yatra) ಸಾಗುವ ಮಾರ್ಗದಲ್ಲಿನ ಹೋಟೆಲ್‌, ರೆಸ್ಟೋರೆಂಟ್‌ ಮತ್ತು ತಿನಿಸು ಮಾರಾಟಗಾರರು ತಮ್ಮ ಮಾಲೀಕರ ಹೆಸರನ್ನು ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಶ್ರಾವಣ ಮಾಸದಲ್ಲಿ ಈ ಯಾತ್ರೆ ನಡೆಯುತ್ತದೆ. ಈ ಯಾತ್ರೆಯ ಮೂಲಕ ಶಿವಭಕ್ತರು ಹರಿದ್ವಾರದಿಂದ ಪುಣ್ಯ ತೀರ್ಥ ತಂದು ಉತ್ತರ ಪ್ರದೇಶದ ಮುಜಾಫರ್‌ನಗರದ ಮಾರ್ಗವಾಗಿ ತೆರಳುತ್ತಾರೆ. ಈ ವರ್ಷದ ಕನ್ವರ್ ಯಾತ್ರೆಯು ಜುಲೈ 22ರಂದು ಪ್ರಾರಂಭವಾಗಿ ಆಗಸ್ಟ್ 2ರವರೆಗೆ ನಡೆಯಲಿದೆ.

ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿರುವ ಹೋಟೆಲ್, ಢಾಬಾಗಳು ಮತ್ತು ಇತರ ವ್ಯಾಪಾರಿಗಳು ಮಾಲೀಕರು ಮತ್ತು ಸಿಬ್ಬಂದಿಯ ಹೆಸರನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಪೊಲೀಸರು ಹೊರಡಿಸಿದ್ದ ಆದೇಶಕ್ಕೆ ಪ್ರತಿಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ.

ಕನ್ವರ್ ಯಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತರ ಗೊಂದಲವನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಜಾಫರ್‌ನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಸಿಂಗ್ ಗುರುವಾರ ತಿಳಿಸಿದ್ದರು. ಅದಾಗ್ಯೂ ಪ್ರತಿಪಕ್ಷಗಳು ಈ ನಡೆಯನ್ನು ಖಂಡಿಸಿದ್ದವು. ಇದೀಗ ಸ್ವತಃ ಮುಖ್ಯಮಂತ್ರಿಯೇ ಈ ಆದೇಶ ಹೊರಡಿಸಿರುವುದು ಕುತೂಹಲ ಮೂಡಿಸಿದೆ.

ʼʼಧಾರ್ಮಿಕ ಯಾತ್ರಾರ್ಥಿಗಳ ಪಾವಿತ್ರ್ಯವನ್ನು ಕಾಪಾಡುವ ಉದ್ದೇಶದ ಹಿನ್ನೆಲೆಯಲ್ಲಿ ಮುಜಾಫರ್‌ನಗರ ಪೊಲೀಸರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವುದನ್ನು ಸಿಎಂ ಯೋಗಿ ಆದಿತ್ಯನಾಥ್‌ ಗಮನಿಸಿದರು. ಹೀಗಾಗಿ ಅವರು ರೆಸ್ಟೋರೆಂಟ್, ಹೋಟೆಲ್‌, ರಸ್ತೆಬದಿಯ ಢಾಬಾ ಅಥವಾ ಆಹಾರದ ಗಾಡಿ ಸೇರಿದಂತೆ ಪ್ರತಿಯೊಂದು ಕಡೆ ಮಾಲೀಕರ ಹೆಸರು ಮತ್ತು ವಿವರಗಳನ್ನು ಪ್ರದರ್ಶಿಸುವಂತೆ ಸೂಚಿಸಿದ್ದಾರೆʼʼ ಎಂದು ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ಉತ್ತರ ಪ್ರದೇಶದ ಸಚಿವ ಕಪಿಲ್ ದೇವ್ ಅಗರ್ವಾಲ್ ಅವರು ಮಾತನಾಡಿ, ಮುಸ್ಲಿಂ ಮಾರಾಟಗಾರರು ಹಿಂದುಗಳಂತೆ ನಟಿಸಿ ಯಾತ್ರಾರ್ಥಿಗಳಿಗೆ ಮಾಂಸಾಹಾರವನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. “ಅವರು ವೈಷ್ಣೋ ಡಾಬಾ ಭಂಡಾರ್, ಶಕುಂಭರಿ ದೇವಿ ಹೋಟೆಲ್‌ ಮತ್ತು ಶುದ್ಧ ಸಸ್ಯಾಹಾರಿ ಎಂದು ಬೋರ್ಡ್‌ ಸ್ಥಾಪಿಸಿ ಮಾಂಸಾಹಾರ ಮಾರಾಟ ಮಾಡುತ್ತಾರೆ” ಎಂದು ಅವರು ತಿಳಿಸಿದ್ದರು.

ಮುಜಾಫರ್‌ನಗರ ಪೊಲೀಸರ ಆದೇಶಕ್ಕೆ ಕಿಡಿ ಕಾರಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, “ಕನ್ವರ್ ಯಾತ್ರೆಯ ಉದ್ದಕ್ಕೂ ಇರುವ ಹೊಟೇಲ್‌ಗಳಲ್ಲಿ ಮಾಲೀಕರು ಮತ್ತು ಸಿಬ್ಬಂದಿಯ ಹೆಸರನ್ನು ಪ್ರದರ್ಶಿಸಬೇಕೆಂಬ ಉತ್ತರ ಪ್ರದೇಶ ಪೊಲೀಸರು ನೀಡಿರುವ ಆದೇಶವು ‘ಸಾಮಾಜಿಕ ಅಪರಾಧ’. ಜನರ ನಡುವಿನ ಸಾಮರಸ್ಯವನ್ನು ಕೆಡಿಸಲು ಇಂತಹ ಆದೇಶಗಳನ್ನು ತಹೊರಡಿಲಾಗುತ್ತಿದೆʼʼ ಎಂದು ಅವರು ಕಿಡಿಕಾರಿದ್ದಾರೆ.

“ಉತ್ತರ ಪ್ರದೇಶ ಪೊಲೀಸರ ಈ ಆದೇಶವು ವರ್ಣಭೇದ ಹಾಗೂ ಹಿಟ್ಲರ್‌ ನೀತಿಗೆ ಸಮವಾಗಿದೆ. ಕನ್ವರ್‌ ಯಾತ್ರಿಗಳು ಮುಸ್ಲಿಮರ ಬಳಿ ವ್ಯಾಪಾರ ಮಾಡಬಾರದು ಎನ್ನುವುದು ಇದರ ಉದ್ದೇಶ” ಎಂದು ಎಐಎಂಐಎಂ ಪಕ್ಷದ ಅಧ್ಯಕ್ಷ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅಭಿಪ್ರಾಯಪಟ್ಟಿದ್ದಾರೆ. ಒಟ್ಟಿನಲ್ಲಿ ಈ ಆದೇಶ ಇನ್ನೊಂದು ಸುತ್ತಿನ ಧರ್ಮ ದಂಗಲ್‌ಗೆ ಕಾರಣವಾಗುವ ಲಕ್ಷಣಗಳಿವೆ.

ಇದನ್ನೂ ಓದಿ: Doda Attack: ಯೋಧನ ಶಿರಚ್ಛೇದಕ್ಕೆ ಯತ್ನಿಸಿದ ವಿಡಿಯೊ ಬಿಡುಗಡೆ ಮಾಡಿದ ಭಯೋತ್ಪಾದಕರು

Continue Reading

ಪ್ರಮುಖ ಸುದ್ದಿ

Olympic Games: ಒಲಿಂಪಿಕ್ಸ್​ನಲ್ಲಿ ಮಹಿಳೆಯರು ಮೊದಲ ಬಾರಿಗೆ ಸ್ಪರ್ಧಿಸಿದ್ದು ಯಾವಾಗ?

Olympic Games:2012ರ ಲಂಡನ್‌ ಒಲಿಂಪಿಕ್ಸ್​ನಲ್ಲಿ ಪುರುಷರಂತೆ ಎಲ್ಲ ಸ್ಪರ್ಧೆಗಳಲ್ಲೂ ಮಹಿಳೆಯರು ಪಾಲ್ಗೊಂಡ ಸಮಾನತೆಯ ಮೊದಲ ಒಲಿಂಪಿಕ್ಸ್‌ ಎನಿಸಿತ್ತು. ಅಲ್ಲದೆ ಎಲ್ಲ ದೇಶಗಳಿಂದ ಮಹಿಳಾ ಸ್ಪರ್ಧಿಗಳೂ ಭಾಗವಹಿಸಿದ್ದರು.

VISTARANEWS.COM


on

Koo

ಬೆಂಗಳೂರು: ಬರೋಬ್ಬರಿ 100 ವರ್ಷಗಳ ಬಳಿಕ ಒಲಿಂಪಿಕ್ಸ್​ ಕ್ರೀಡಾಕೂಡವನ್ನು(Olympic Games) ನಡೆಸುತ್ತಿರುವ ಪ್ಯಾರಿಸ್​ ನಗರಿಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಸರ್ವ ರೀತಿಯಲ್ಲಿಯೂ ಫ್ರಾನ್ಸ್(paris olympics 2024)​ ಸಿಂಗರಿಸಿ ನಿಂತಿದೆ. ಪ್ಯಾರಿಸ್‌ ಆತಿಥ್ಯದಲ್ಲಿ ನಡೆಯಲಿರುವ 3ನೇ ಒಲಿಂಪಿಕ್ಸ್‌ ಕೀಡಾಕೂಟ ಇದಾಗಿದೆ. ಸಾವಿರಾರು(Olympic Games History) ವರ್ಷಗಳ ಇತಿಹಾಸ ಹೊಂದಿರುವ ಪ್ರತಿಷ್ಠಿತ ಒಲಿಂಪಿಕ್ಸ್​ ಕ್ರೀಡಾಕೂಟದಲ್ಲಿ ಮೊತ್ತ ಮೊದಲ ಬಾರಿಗೆ ಮಹಿಳಾ ಕ್ರೀಡಾಳುಗಳು ಸ್ಪರ್ಧಿಸಿದ್ದು ಕೂಡ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿಯೇ.

ಹೌದು, 1896ರಲ್ಲಿ ಗ್ರೀಸ್‌ನ ಅಥೆನ್ಸ್‌ನಲ್ಲಿ ನಡೆದ ಮೊದಲ ಒಲಿಂಪಿಕ್ಸ್‌ನಲ್ಲಿ ಮಹಿಳಾ ಸ್ಪರ್ಧಿಗಳಿರಲಿಲ್ಲ. ಎಲ್ಲ 241 ಸ್ಪರ್ಧಿಗಳು ಪುರುಷರೇ ಆಗಿದ್ದರು. 1900ರ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ(1900 Olympics) ಮೊದಲ ಬಾರಿ 22 ಮಹಿಳೆಯರು ಪಾಲ್ಗೊಂಡಿದ್ದರು. ಆ ಬಳಿಕದ ಒಲಿಂಪಿಕ್ಸ್​ನಲ್ಲಿ ಮಹಿಳಾ ಸ್ಪರ್ಧಿಗಳ ಸಂಖ್ಯೆ ಹೆಚ್ಚುತ್ತಾ ಸಾಗಿತು.

2012ರ ಲಂಡನ್‌ ಒಲಿಂಪಿಕ್ಸ್​ನಲ್ಲಿ ಪುರುಷರಂತೆ ಎಲ್ಲ ಸ್ಪರ್ಧೆಗಳಲ್ಲೂ ಮಹಿಳೆಯರು ಪಾಲ್ಗೊಂಡ ಸಮಾನತೆಯ ಮೊದಲ ಒಲಿಂಪಿಕ್ಸ್‌ ಎನಿಸಿತ್ತು. ಅಲ್ಲದೆ ಎಲ್ಲ ದೇಶಗಳಿಂದ ಮಹಿಳಾ ಸ್ಪರ್ಧಿಗಳೂ ಭಾಗವಹಿಸಿದ್ದರು. ಈ ಬಾರಿಯ ಉದ್ಘಾಟನಾ ಸಮಾರಂಭದ ಕ್ರೀಡಾಪಟುಗಳ ಪಥಸಂಚಲನದಲ್ಲಿ ಎಲ್ಲ ತಂಡಗಳಿಗೆ ತಲಾ ಇಬ್ಬರು ಧ್ವಜಧಾರಿಗಳನ್ನು ಹೊಂದಲು ಅವಕಾಶ ನೀಡುವ ಮೂಲಕ ಲಿಂಗ ಸಮಾನತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.

ಈ ಬಾರಿಯ ಒಲಿಂಪಿಕ್ಸ್​ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಒಲಿಂಪಿಕ್ಸ್​ ಇತಿಹಾಸದಲ್ಲೇ ವಿಶೇಷ ಮಹತ್ವ ಪಡೆದಿದೆ. ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

ಒಲಿಂಪಿಕ್ಸ್‌ 5 ರಿಂಗ್​ಗಳ ಮಹತ್ವವೇನು?

5 ಖಂಡಗಳನ್ನು ಪ್ರತಿನಿಧಿಸುವ 5 ರಿಂಗ್‌ಗಳುಳ್ಳ ಒಲಿಂಪಿಕ್ಸ್‌ ಧ್ವಜವನ್ನು 1913ರಲ್ಲಿ ಆಧುನಿಕ ಒಲಿಂಪಿಕ್ಸ್‌ ಪಿತಾಮಹ ಫ್ರಾನ್ಸ್‌ನ ಪಿಯರ್‌ ಡಿ ಕೌಬರ್ಟಿನ್‌ ವಿನ್ಯಾಸಗೊಳಿಸಿದರು. ಈ ಬಾರಿಯ ಒಲಿಂಪಿಕ್ಸ್​ ಕೂಡ ಫ್ರಾನ್ಸ್​ನಲ್ಲಿಯೇ ನಡೆಯುತ್ತಿರುವುದು ವಿಶೇಷ. ಈ ಒಲಿಂಪಿಕ್ಸ್‌ ಧ್ವಜ 1920ರ ಬೆಲ್ಜಿಯಂನ ಅಂಟ್ವೆರ್ಪ್​ನಲ್ಲಿ ಮೊದಲ ಬಾರಿ ಅಧಿಕೃತವಾಗಿ ಹಾರಾಡಿಸಲಾಯಿತು. ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವ ಪ್ರತಿ ದೇಶದ ರಾಷ್ಟ್ರಧ್ವಜವೂ ಈ ರಿಂಗ್‌ಗಳ ಒಂದಾದರೂ ಬಣ್ಣವನ್ನು ಒಳಗೊಂಡಿರುವುದು ಈ ರಿಂಗ್​ನ ವಿಶೇಷತೆ.

ವೈವಿಧ್ಯಮಯ ಭಾಷೆ, ಸಂಸ್ಕೃತಿ, ಹವಾಮಾನ, ಆರ್ಥಿಕತೆ, ಆಹಾರ ಪದ್ಧತಿ ಮತ್ತು ಮೈಬಣ್ಣದ ಜನರೆಲ್ಲ ಒಂದಾಗಿ ಸೇರುವ ವಿಶ್ವದ ಅತಿದೊಡ್ಡ ವೇದಿಕೆ ಒಲಿಂಪಿಕ್ಸ್ ಕ್ರೀಡಾಕೂಟವಾಗಿದೆ. ಹಲವು ವೈವಿಧ್ಯಗಳ ನಡುವೆಯೂ ಒಲಿಂಪಿಕ್ಸ್ ಏಕತೆಯನ್ನು ಸಾರುವುದು ಈ ಕ್ರೀಡಾಕೂಟದ ವಿಶೇಷತೆ.

Continue Reading
Advertisement
Martin' movie delayed even after 3 years
ಸ್ಯಾಂಡಲ್ ವುಡ್6 mins ago

Dhruva Sarja: 3 ವರ್ಷವಾದರೂ ʻಮಾರ್ಟಿನ್‌ʼ ಸಿನಿಮಾ ರಿಲೀಸ್‌ ಆಗಲು ತಡವಾಗಿದ್ದೇಕೆ? ನಿರ್ಮಾಪಕರಿಗೆ ಮೋಸ ಮಾಡಿದ್ಯಾರು?

lokayukta raid akhtar ali
ಪ್ರಮುಖ ಸುದ್ದಿ30 mins ago

Lokayukta Raid: ಲೋಕಾಯುಕ್ತ ದಾಳಿಯ ವೇಳೆ ಚಿನ್ನಾಭರಣ ಪಕ್ಕದ ಮನೆಗೆಸೆದ ಅಖ್ತರ್‌ ಅಲಿ!

Microsoft Global Outage
ದೇಶ51 mins ago

Microsoft Global Outage: ವಿಶ್ವಾದ್ಯಂತ ನೆಲಕಚ್ಚಿದ ಮೈಕ್ರೋಸಾಫ್ಟ್‌; ವಿಂಡೋಸ್‌ನಲ್ಲಿ ತಾಂತ್ರಿಕ ದೋಷ

Electric Shock
ದಕ್ಷಿಣ ಕನ್ನಡ56 mins ago

Electric shock : ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿನಿ, ವೃದ್ಧ ಸೇರಿ ಶ್ವಾನಗಳು ಸಾವು

DK Shivakumar
ಕರ್ನಾಟಕ58 mins ago

DK Shivakumar: ಬಿಎಸ್‌ವೈ, ಬೊಮ್ಮಾಯಿ ಕಾಲದಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ: ಡಿಕೆಶಿ ಆರೋಪ

Virat Kohli
ಕ್ರೀಡೆ1 hour ago

Virat Kohli: ಬಿಸಿಸಿಐ ಅಧಿಕಾರಿಗಳನ್ನು ಸಂಪರ್ಕಿಸಿ ಕೋಚ್​ ಗಂಭೀರ್​ ವಿಚಾರದಲ್ಲಿ ಕೊಹ್ಲಿ ಕೊಟ್ಟ ಆಶ್ವಾಸನೆ ಏನು?

karnataka Rain
ಮಳೆ1 hour ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

ಪ್ರಮುಖ ಸುದ್ದಿ2 hours ago

Karnataka Job Reservation: ಕನ್ನಡಿಗರಿಗೆ ಮೀಸಲಾತಿ ನೀಡಲು ಕರವೇ ಆಗ್ರಹ; ʼಫೋನ್ ಪೇʼ ಬಾಯ್ಕಾಟ್ ಅಭಿಯಾನ ಶುರು!

Kanwar Yatra
ದೇಶ2 hours ago

Kanwar Yatra: ಕನ್ವರ್‌ ಯಾತ್ರೆಯ ಮಾರ್ಗದಲ್ಲಿರುವ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ: ಯೋಗಿ ಆದಿತ್ಯನಾಥ್

Uttara kannada landslide 3
ಉತ್ತರ ಕನ್ನಡ2 hours ago

Uttara Kannada Landslide: 6 ಜನರ ಶವ ಪತ್ತೆ, ಇನ್ನೂ ನಾಲ್ವರಿಗಾಗಿ ಶೋಧ; ಭಾರಿ ಮಳೆ ನಡುವೆ ಮಣ್ಣು ತೆರವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 hour ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ22 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ23 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌