ವಿಸ್ತಾರ ಸಂಪಾದಕೀಯ: ಪಠ್ಯ ಪುಸ್ತಕ ಪರಿಷ್ಕರಣೆ ಆಟ, ವಿದ್ಯಾರ್ಥಿಗಳಿಗೆ ಸಂಕಟ - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಪಠ್ಯ ಪುಸ್ತಕ ಪರಿಷ್ಕರಣೆ ಆಟ, ವಿದ್ಯಾರ್ಥಿಗಳಿಗೆ ಸಂಕಟ

ಪಠ್ಯ ಪುಸ್ತಕ ಎನ್ನುವುದು ವಿದ್ಯಾರ್ಥಿಗಳ ಪಾಲಿಗೆ ಅಮೂಲ್ಯ. ಆದರೆ ಪಠ್ಯ ಪುಸ್ತಕ ಎನ್ನುವುದೀಗ ರಾಜಕೀಯ ಸಿದ್ಧಾಂತದ ಆಟಿಕೆಯಂತಾಗಿದೆ. ಈ ರೀತಿಯ ಪಠ್ಯ ಪುಸ್ತಕ ಪರಿಷ್ಕರಣೆಯ ಮೇಲಾಟ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ದುಷ್ಪರಿಣಾಮ ಬೀರುತ್ತದೆ.

VISTARANEWS.COM


on

Karnataka Textbook Row
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಳೆದ ವರ್ಷ ಪರಿಷ್ಕರಣೆಯಾಗಿದ್ದ ಪಠ್ಯವನ್ನು ಮತ್ತೆ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಸದ್ಯ ಈ ಬಗ್ಗೆ ಎರಡು ವಾದಗಳು ಕೇಳಿಬರುತ್ತಿವೆ. ಇಡೀ ಪಠ್ಯವನ್ನೇ ಶೀಘ್ರವಾಗಿ ಪರಿಷ್ಕರಿಸಿ, ಹೊಸ ಪಠ್ಯವನ್ನು ಮಕ್ಕಳಿಗೆ ನೀಡಬೇಕು ಎನ್ನುವವರೂ ಇದ್ದಾರೆ; ವಿವಾದಕ್ಕೊಳಗಾದ ಪಾಠಗಳನ್ನು ಮಾತ್ರ ಬೋಧಿಸದೆ ಇರುವಂತೆ ಶಿಕ್ಷಕರಿಗೆ ಸೂಚನೆ ನೀಡಬೇಕು; ಪರಿಷ್ಕೃತ ಪಠ್ಯವನ್ನು ಮುಂದಿನ ವರ್ಷ ನೀಡಬೇಕು ಎಂಬುದು. ಎರಡು ವಾದಗಳಿಗೂ ಅದರದೇ ಆದ ಸಮರ್ಥನೆಗಳೂ, ನ್ಯೂನತೆಗಳೂ ಇವೆ. ಏನೇ ಆದರೂ ಮಕ್ಕಳ ಮೇಲೆ ಇದರ ಪರಿಣಾಮ ಬೀರುತ್ತದೆ. ಸರ್ಕಾರ ಪ್ರತಿ ಬಾರಿ ಬದಲಾದಾಗಲೂ ಮೊದಲ ಪ್ರಹಾರ ಮಕ್ಕಳ ಪಠ್ಯದ ಮೇಲೆ ಆಗುತ್ತದೆ. ಅದಕ್ಕಿದು ಇನ್ನೊಂದು ಸಾಕ್ಷಿ.

2008ರಲ್ಲಿ ಪ್ರೊ. ಮುಡಂಬಡಿತ್ತಾಯ ಅವರ ಅಧ್ಯಕ್ಷತೆಯ ಸಮಿತಿ ರಚಿಸಿದ್ದ ಬಿಜೆಪಿ ಸರ್ಕಾರ, ಪಠ್ಯಪುಸ್ತಕ ಬದಲಾಯಿಸಿ, ವಿವಿಧ ಪಠ್ಯಗಳನ್ನು ಸೇರಿಸಿತು. ಇದಕ್ಕೆ ಕಾಂಗ್ರೆಸ್ ಹಾಗೂ ಎಡಪಂಥೀಯ ಒಲವುಳ್ಳ ಲೇಖಕರು ವಿರೋಧ ವ್ಯಕ್ತಪಡಿಸಿದರು. 2013ರಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೇಮಿಸಿದ ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆಯ ಪಠ್ಯಪುಸ್ತಕ ರಚನಾ ಸಮಿತಿ, ಕೆಲವು ಪಠ್ಯಗಳ ಸೇರ್ಪಡೆ ಮಾಡಿತು. ಇದಕ್ಕೆ ಬಿಜೆಪಿ ವಲಯದಿಂದ ವಿರೋಧ ವ್ಯಕ್ತವಾಯಿತು. 2019ರಲ್ಲಿ ಅಧಿಕಾರಕ್ಕೇರಿದ ಬಿಜೆಪಿ ಸರ್ಕಾರ ರಚಿಸಿದ ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯ ಸಮಿತಿ ಮತ್ತೊಮ್ಮೆ ಪಠ್ಯಪುಸ್ತಕವನ್ನು ತಿದ್ದಿತು. ಇದರಲ್ಲಿ ನಾರಾಯಣಗುರು, ಕುವೆಂಪು ಸೇರಿ ಅನೇಕರಿಗೆ ಅವಮಾನ ಮಾಡಲಾಗಿದೆ ಎಂದು ಕೋಲಾಹಲವೇ ಉಂಟಾಯಿತು. ಇದೀಗ ಕಾಂಗ್ರೆಸ್‌ ಸರ್ಕಾರ ಮತ್ತೊಮ್ಮೆ ಅದನ್ನು ತಿದ್ದಲು ಮುಂದಾಗಿದೆ.

ಪಠ್ಯ ಪುಸ್ತಕ ಎನ್ನುವುದು ವಿದ್ಯಾರ್ಥಿಗಳ ಪಾಲಿಗೆ ಅಮೂಲ್ಯ. ಆದರೆ ಪಠ್ಯ ಪುಸ್ತಕ ಎನ್ನುವುದೀಗ ರಾಜಕೀಯ ಸಿದ್ಧಾಂತದ ಆಟಿಕೆಯಂತಾಗಿದೆ. ಈ ರೀತಿಯ ಪಠ್ಯ ಪುಸ್ತಕ ಪರಿಷ್ಕರಣೆಯ ಮೇಲಾಟ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ದುಷ್ಪರಿಣಾಮ ಬೀರುತ್ತದೆ ಎನ್ನಲು ಹೆಚ್ಚಿನ ಸಾಕ್ಷಿಗಳು ಬೇಕಿಲ್ಲ. ಈಗಾಗಲೆ ಶಾಲೆಗಳು ಆರಂಭವಾಗಿ, ಪಠ್ಯಗಳು ಅವರ ಕೈಯಲ್ಲಿವೆ. ಶಿಕ್ಷಕರು ಹಾಗೂ ಮಕ್ಕಳು ಈ ಪಠ್ಯಗಳಿಗೆ ಮಾನಸಿಕವಾಗಿ ಸಿದ್ಧಗೊಂಡಿದ್ದಾರೆ. ಹೀಗಿದ್ದರೂ, ಪಠ್ಯ ಪರಿಷ್ಕರಣೆ ಮಾಡುವ ಮಾತುಗಳನ್ನು ಸಿಎಂ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಡಿದ್ದಾರೆ. ಈ ಪ್ರಯತ್ನದಿಂದ ವಿದ್ಯಾರ್ಥಿಗಳಿಗೆ ಹಾನಿಯಾಗುತ್ತದೆ ಎಂಬುದನ್ನು ಸರ್ಕಾರ ಮರೆತಂತಿದೆ. ಈಗಾಗಲೇ ಆರಂಭವಾಗಿರುವ ಶೈಕ್ಷಣಿಕ ವರ್ಷವನ್ನು ಹಾಗೆಯೇ ಬಿಟ್ಟು, ಮುಂದಿನ ವರ್ಷದಿಂದ ಅನ್ವಯವಾಗುವಂತೆ ಪರಿಷ್ಕರಣೆ ಮಾಡಿದರೆ ಅದನ್ನು ಅರ್ಥ ಮಾಡಿಕೊಳ್ಳಬಹುದು. ಈಗ ತಿದ್ದಲು ಹೊರಟರೆ, ಮಕ್ಕಳಿಗೂ ಶಿಕ್ಷಕರಿಗೂ ಗೊಂದಲ ಖಚಿತ.

ಇದನ್ನೂ ಓದಿ: ವಿಸ್ತಾರ ಅಂಕಣ: ಪಠ್ಯ ಪುಸ್ತಕ ಪರಿಷ್ಕರಣೆ ಎಂದರೆ ಮಕ್ಕಳ ಆಟ ಎಂದುಕೊಂಡಿದೆಯೇ ಸರ್ಕಾರ?

ಇಷ್ಟಕ್ಕೂ ಪಠ್ಯ ಪುಸ್ತಕಗಳನ್ನು ವರ್ಷಕ್ಕೊಮ್ಮೆ, ಸರ್ಕಾರ ಬದಲಾದಾಗಲೊಮ್ಮೆ ಯಾಕೆ ತಿದ್ದಬೇಕು ಎಂಬ ಮೂಲಭೂತ ಪ್ರಶ್ನೆಯನ್ನೇ ಕೇಳಿಕೊಳ್ಳಬೇಕಿದೆ. ಪಠ್ಯವೆಂಬುದು ಶೈಕ್ಷಣಿಕ ಲೋಕದ ಸಂವಿಧಾನ ಇದ್ದಂತೆ. ಅದರ ಪಾವಿತ್ರ್ಯತೆಯನ್ನು ರಾಜಕೀಯ ಕಾರಣಕ್ಕಾಗಿ ಕೆಡಿಸಬಾರದು. ಪಠ್ಯ ಪುಸ್ತಕವು ಯಾವುದೇ ಪಕ್ಷದ ವೈಯಕ್ತಿಕ ಸಿದ್ಧಾಂತಗಳನ್ನು ಮೀರಿ, ದೇಶದ ಹಿರಿಮೆ ಗರಿಮೆ, ಸಂಸ್ಕೃತಿ, ಜಾತ್ಯತೀತತೆಯನ್ನು ಎತ್ತಿ ಹಿಡಿಯುವಂತಿರಬೇಕು. ಪಠ್ಯ ಪುಸ್ತಕ ಪರಿಷ್ಕರಣೆಯ ಆಟ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಸಂಕಟವಾಗಬಾರದು. ಆದರೆ ಈಗ ಆಗುತ್ತಿರುವುದು ಅದೇ. ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ರಾಷ್ಟ್ರೀಯತೆಯನ್ನು ಪ್ರತಿಪಾದಿಸುವ ಪಠ್ಯಗಳನ್ನು ಸೇರಿಸಲು ಯತ್ನಿಸುತ್ತದೆ. ಇದು ಕೋಮುವಾದ ಎಂದು ಕಾಂಗ್ರೆಸ್‌ ಹಾಗೂ ಎಡಪಂಥೀಯರು ಬೊಬ್ಬಿಡುತ್ತಾರೆ. ಕಾಂಗ್ರೆಸ್‌ ಸರ್ಕಾರ ಬಂದಾಗ ವಾಮಪಂಥೀಯ ಚಿಂತನೆಯ ಅಂಶಗಳನ್ನು ಸೇರಿಸಲು ಯತ್ನಿಸುತ್ತದೆ. ಇದು ಸನಾತನ ಸಂಸ್ಕೃತಿಯ ಅವಹೇಳನ ಉಂಟುಮಾಡುತ್ತಿದೆ ಎಂದು ಬಿಜೆಪಿ ಕಡೆಯವರು ಬೊಬ್ಬಿಡುತ್ತಾರೆ. ಇವೆರಡನ್ನೂ ಮೀರಿದ, ದೇಶದ ಭವಿಷ್ಯದ ಪ್ರಜೆಗಳ ಹಿತದೃಷ್ಟಿಯನ್ನು ಹೊಂದಿದ ಒಂದು ಸಮನ್ವಯ ಪಠ್ಯವನ್ನು ಸಿದ್ಧ ಮಾಡಲು ಯಾಕೆ ಸಾಧ್ಯವಿಲ್ಲ? ಪಠ್ಯ ಸಿದ್ಧ ಮಾಡಬೇಕಾದವರು ಶಿಕ್ಷಣ ತಜ್ಞರೇ ಹೊರತು ರಾಜಕಾರಣಗಳಲ್ಲ. ರಾಜಕಾರಣಿಗಳ ಆಣತಿಯಂತೆ ನಡೆಯಬೇಕಾದವರು ತಜ್ಞರಲ್ಲ. ಅವರು ಚಿಂತನೆಗಳ ಪ್ರಸ್ತುತತೆಯನ್ನಷ್ಟೆ ನೋಡಬೇಕಾದವರು. ಸರ್ಕಾರ ಬದಲಾದಂತೆ ಬದಲಾಗದ ಸರ್ವಮಾನ್ಯ ಪಠ್ಯ ರಚನಾ ಸಮಿತಿಯೊಂದು ಅಗತ್ಯವಾಗಿದೆ.

ಇದನ್ನೂ ಓದಿ: Text Book: ಹಿಂದಿನ ಪಠ್ಯದಲ್ಲಿ ಹುಸಿ ದೇಶಭಕ್ತಿ; ಪಠ್ಯ ಪರಿಷ್ಕರಣೆ ಮಾಡುವುದೇ ಸರಿ ಅಂದ್ರು ಕುಂ. ವೀರಭದ್ರಪ್ಪ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಭವಿಷ್ಯ

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Dina Bhavishya: ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷದ ಚೌತಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ವೃಶ್ಚಿಕ ರಾಶಿಯಿಂದ ಶುಕ್ರವಾರ ಮಧ್ಯಾಹ್ನ 03:51ಕ್ಕೆ ಧನಸ್ಸು ರಾಶಿಯನ್ನು ಪ್ರವೇಶಿಸುತ್ತಾನೆ. ಹೀಗಾಗಿ ವೃಶ್ಚಿಕ, ಮಿಥುನ, ಕನ್ಯಾ, ವೃಶ್ಚಿಕ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ವೃಷಭ ರಾಶಿಯವರು ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ, ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ತುಲಾ ರಾಶಿಯವರು ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿಯಾಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (29-03-2024)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷ.
ತಿಥಿ: ಚೌತಿ 20:20 ವಾರ: ಶುಕ್ರವಾರ
ನಕ್ಷತ್ರ: ವಿಶಾಖ 20:34 ಯೋಗ: ವಜ್ರ 23:10
ಕರಣ: ಭವ 07:41 ಅಮೃತ ಕಾಲ: ಬೆಳಗ್ಗೆ 11:05 ರಿಂದ 12:49ರ ವರೆಗೆ
ದಿನ ವಿಶೇಷ: ಗುಡ್‌ ಫ್ಲೈಡೇ, ನಾಯಕನಹಟ್ಟಿ ಜಾತ್ರೆ, ಕಗ್ಡಾಲು ಮಹಾಲಕ್ಷ್ಮೀ ಜಾತ್ರೆ

ಸೂರ್ಯೋದಯ : 06:18   ಸೂರ್ಯಾಸ್ತ : 06:31

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬದ ಸದಸ್ಯರ ಸಕಾಲಿಕ ಬೆಂಬಲದಿಂದ ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ, ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡುವಿರಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಕುರಿತು ಜಾಗೃತಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ .ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ನಿಮ್ಮ ಕ್ರಿಯಾಶೀಲ ಕಾರ್ಯ ಯೋಜನೆ ಸಫಲತೆಯನ್ನು ತಂದು ಕೊಡಲಿದೆ. ಆಪ್ತರು ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಅದರ ಹೊರತಾಗಿಯೂ ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿ . ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ಬಿಡುವಿಲ್ಲದ ಕಾರ್ಯದಿಂದ ಆಯಾಸ, ಇದರಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಆದಷ್ಟು ವಿಶ್ರಾಂತಿ ಪಡೆಯಿರಿ.ಅನಗತ್ಯ ಖರ್ಚು.ಹಿರಿಯರಿಂದ ಮಾರ್ಗದರ್ಶನ.ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಂತೋಷ ತುಂಬಿದ ವಾತಾವರಣ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಈ ದಿನ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮಲ್ಲಿರುವ ನಾಯಕತ್ವ ಗುಣವನ್ನು ಗುರುತಿಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮ ತರುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ- ಆದರೆ ಅದೇ ಸಮಯದಲ್ಲಿ ಖರ್ಚೂ ತುಂಬಾ ಹೆಚ್ಚಾಗುತ್ತದೆ. ನಿಮ್ಮ ಬಗೆಗೆ ಕಾಳಜಿ ಮಾಡುವವರ ಬಗ್ಗೆ ಉದಾಸೀನತೆ ಬೇಡ. ದೀರ್ಘಕಾಲದ ಪ್ರಯತ್ನಕ್ಕೆ ಯಶಸ್ಸು ಕಟ್ಟಿಟ್ಟ ಬುತ್ತಿ. ಆರೋಗ್ಯ ಪರಿಪೂರ್ಣ ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ವಿನಾಕಾರಣ ವಿಚಾರ ಮಾಡಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಗತ್ಯವಾಗಿ ಹಣವನ್ನು ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಸಲಹೆ ಹಿತಕರವೆನಿಸುವುದು. ಆತ್ಮೀಯರೊಂದಿಗೆ ಕಾಲ ಕಳೆಯುವ ಸಾಧ್ಯತೆ. ದಿನದ ಮಟ್ಟಿಗೆ ಆರೋಗ್ಯ ಹದಗೆಡುವ ಸಾಧ್ಯತೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6.

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಕರ್ನಾಟಕ

KEA: ಕೆಸೆಟ್-‌2023ರ ಪರಿಷ್ಕೃತ ಕೀ ಉತ್ತರ ಪ್ರಕಟ; ಹೀಗೆ ಪರಿಶೀಲಿಸಿ

KEA: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ವರ್ಷದ ಜನವರಿ 13ರಂದು ನಡೆಸಿದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET 2023)ಯ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಿದೆ. ಅದನ್ನು ಪರಿಶೀಲಿಸುವ ವಿಧಾನ ಇಲ್ಲಿದೆ.

VISTARANEWS.COM


on

kea
Koo

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ವರ್ಷದ ಜನವರಿಯಲ್ಲಿ ನಡೆಸಿದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET 2023)ಯ ಪರಿಷ್ಕೃತ ಕೀ ಉತ್ತರಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಜನವರಿ 13ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ 42 ವಿವಿಧ ವಿಷಯಗಳ ಪರೀಕ್ಷೆ ನಡೆಸಿತ್ತು. ಇದಕ್ಕೆ ಸಂಬಂಧಿಸಿದ ಕೀ ಉತ್ತರಗಳನ್ನು ಜನವರಿ 29ರಂದು ಪ್ರಕಟಿಸಿ ಆಕ್ಷೇಪಣೆ ಸಲ್ಲಿಸಲು ಫೆಬ್ರವರಿ 7ರ ತನಕ ಅವಕಾಶ ನೀಡಿತ್ತು. ಬಳಿಕ ಕೆಲವು ಅಭ್ಯರ್ಥಿಗಳು ದಿನಾಂಕವನ್ನು ವಿಸ್ತರಿಸಬೇಕೆಂದು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಕಾಲಾವಕಾಶವನ್ನು ಫೆಬ್ರವರಿ 17ರ ತನಕ ಮುಂದೂಡಲಾಗಿತ್ತು.

ಅದರಂತೆ ಪರೀಕ್ಷಾ ಪ್ರಾಧಿಕಾರಕ್ಕೆ 23 ಪತ್ರಿಕೆಗಳ ಆಯ್ದ ಕೀ ಉತ್ತರಗಳಿಗೆ ಮಾತ್ರ ಆಕ್ಷೇಪಣೆ ಸಲ್ಲಿಕೆಯಾಗಿದ್ದವು. ಬಳಿಕ ವಿಷಯ ತಜ್ಞರು ಒಟ್ಟು 22 ಪತ್ರಿಕೆಗಳ ಕೆಲವು ಉತ್ತರಗಳಿಗೆ ಬದಲಾವಣೆ ಸೂಚಿಸಿದ್ದರು. ಇನ್ನು ಒಂದು ಪತ್ರಿಕೆಯಲ್ಲಿನ ಆಕ್ಷೇಪಣೆಗೆ ಯಾವುದೇ ಬದಲಾವಣೆ ತಂದಿಲ್ಲ. ಅಲ್ಲದೆ ಉಳಿದ 19 ಪತ್ರಿಕೆಗಳಿಗೆ ಯಾವುದೇ ಆಕ್ಷೇಪಣೆ ಕಂಡು ಬರದ ಹಿನ್ನೆಲೆಯಲ್ಲಿ ಕೀ ಉತ್ತರದಲ್ಲಿ ಯಾವುದೇ ಬದಲಾವಣೆ ಇಲ್ಲ.

”ಆಕ್ಷೇಪಣೆ ವ್ಯಕ್ತವಾದ 23 ಪತ್ರಿಕೆಗಳ ಪ್ರಶ್ನೆಗಳನ್ನು ವಿಷಯ ತಜ್ಞರು ಕೂಲಂಕುಷವಾಗಿ ಪರಿಶೀಲಿಸಿದ್ದಾರೆ. ಆ ಪೈಕಿ ಮನಃಶಾಸ್ತ್ರ ವಿಷಯವನ್ನು ಹೊರತುಪಡಿಸಿ ಉಳಿದ 22 ಪತ್ರಿಕೆಗಳ ಪರಿಷ್ಕೃತ ಕೀ ಉತ್ತರಗಳನ್ನು ಈಗ ಪಕ್ರಟಿಸಲಾಗಿದೆ” ಎಂದು ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

ಪರಿಷ್ಕೃತ ಕೀ ಉತ್ತರ ಹೀಗೆ ಪರಿಶೀಲಿಸಿ

  • ಪರಿಷ್ಕೃತ ಕೀ ಉತ್ತರ ಪರಿಶೀಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಈಗ ತೆರೆದುಕೊಳ್ಳುವ ವೆಬ್‌ಪೇಜ್‌ನ ಮೇಲ್ಭಾಗದಲ್ಲಿರುವ ‘ಪ್ರವೇಶʼ ಆಯ್ಕೆಯನ್ನು ಕ್ಲಿಕ್‌ ಮಾಡಿ.
  • ಬಳಿಕ ʼಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ 2023′ ಆಯ್ಕೆ ಮೇಲೆ ಕ್ಲಿಕ್ ಮಾಡಿ.
  • ನಂತರ ತೆರೆದ ವೆಬ್‌ಪೇಜ್‌ನಲ್ಲಿ ಕಂಡುಬರುವ ‘KSET ಪರಿಷ್ಕೃತ ಕೀ ಉತ್ತರಗಳು’ ಆಯ್ಕೆಯನ್ನು ಕ್ಲಿಕ್ ಮಾಡಿ.
  • ಆಗ ವಿಷಯವಾರು ಪರಿಷ್ಕೃತ ಕೀ ಉತ್ತರಗಳ ಲಿಂಕ್ ಕಂಡು ಬರುತ್ತದೆ.
  • ನೀವೂ ನೋಡಲು ಇಚ್ಛಿಸುವ ವಿಷಯದ ಕೀ ಉತ್ತರದ ಲಿಂಕ್‌ ಮೇಲೆ ಕ್ಲಿಕ್ ಮಾಡಿ.
  • ತೆರೆದುಕೊಳ್ಳುವ ಪಿಡಿಎಫ್‌ ಪುಟದಲ್ಲಿ ಕೀ ಉತ್ತರ ಪರಿಶೀಲಿಸಿಕೊಳ್ಳಬಹುದು.

ಬೆಂಗಳೂರು ನಗರ ಸೇರಿದಂತೆ ಧಾರವಾಡ, ಹಾವೇರಿ, ಬಳ್ಳಾರಿ, ದಾವಣಗೆರೆ, ತುಮಕೂರು, ಮೈಸೂರು, ಮಂಡ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಗೆ ಒಟ್ಟು 1,17,302 ಅಭ್ಯರ್ಥಿಗಳು ಹೆಸರು ನೋಂದಾಯಿಸಿದ್ದರು. ಈ ಪೈಕಿ ವಾಣಿಜ್ಯಶಾಸ್ತ್ರದ ಪರೀಕ್ಷೆಯನ್ನು ಅತಿ ಹೆಚ್ಚು ಅಂದರೆ 16,000 ಜನ ತೆಗೆದುಕೊಂಡಿದ್ದರು. ಕನ್ನಡ ವಿಷಯವನ್ನು 11 ಸಾವಿರ ಮಂದಿ ಆಯ್ದುಕೊಂಡಿದ್ದರು. ಅತಿ ಕಡಿಮೆ ಅಂದರೆ 25 ಜನ ಭಾಷಾಶಾಸ್ತ್ರದ ವಿಷಯದಲ್ಲಿ ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದರು. ಬಿಗಿ ಭದ್ರತೆಯಲ್ಲಿ ಪರೀಕ್ಷೆ ನಡೆಸಲಾಗಿತ್ತು.

ಪರೀಕ್ಷೆ ಬರೆದ ಒಟ್ಟು ಅಭ್ಯರ್ಥಿಗಳ ಪೈಕಿ ಅತಿ ಹೆಚ್ಚು ಅಂಕ ಪಡೆದ ಶೇ. 6 ಆಕಾಂಕ್ಷಿಗಳಿಗೆ ಅಂತಿಮವಾಗಿ ಕೆಸೆಟ್ ಪರೀಕ್ಷೆಯ ಅರ್ಹತೆ ಸಿಗಲಿದೆ. ಇದರಲ್ಲಿ ರೋಸ್ಟರ್ ನಿಯಮಗಳನ್ನು ಪಾಲಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಇದನ್ನೂ ಓದಿ: KEA Exam Scam: ಸರ್ಕಾರಿ ನೌಕರಿಗೆ ಸೇರಿ ಒಂದೇ ತಿಂಗಳಲ್ಲಿ ಜೈಲು ಸೇರಿದ ವಾರ್ಡನ್!

Continue Reading

ದೇಶ

Viral News : ವೈರಲ್​ ವಿಡಿಯೊಗಾಗಿ ಅಸಭ್ಯವಾಗಿ ವರ್ತಿಸಿದ ಡೆಲ್ಲಿ ಯುವತಿಯರು ಅರೆಸ್ಟ್​!

Viral News: ಅಶ್ಲೀಲ ವಿಡಿಯೊ ಮಾಡುವ ಜತೆಗೆ ಹೆಲ್ಮೆಟ್ ಇಲ್ಲದೆ ನೊಯ್ದಾದ ರಸ್ತೆಗಳಲ್ಲಿ ನಿರ್ಲಕ್ಷ್ಯದಿಂದ ಸ್ಕೂಟರ್ ಸವಾರಿ ಮಾಡುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದ್ದವು

VISTARANEWS.COM


on

Viral News: Holi at delhi metro
Koo

ನೋಯ್ಡಾ: ಸಾಮಾಜಿಕ ಮಾಧ್ಯಮ ವೀಡಿಯೊಗಳು ವೈರಲ್ (Viral News) ಆದ ನಂತರ ಸಾರ್ವಜನಿಕ ಸ್ಥಳದಲ್ಲಿ ತೊಂದರೆ ಮತ್ತು ಅಶ್ಲೀಲತೆಯನ್ನು ಸೃಷ್ಟಿಸಿದ ಆರೋಪದ ಮೇಲೆ ನೋಯ್ಡಾ ಪೊಲೀಸರು ಗುರುವಾರ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರು ಹೆಲ್ಮೆಟ್ ಇಲ್ಲದೆ ನಗರದ ರಸ್ತೆಯಲ್ಲಿ “ನಿರ್ಲಕ್ಷ್ಯದಿಂದ” ಸ್ಕೂಟರ್ ಸವಾರಿ ಮಾಡುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದ್ದವು. ಅದೇ ರೀತಿ ಡೆಲ್ಲಿ ಮೆಟ್ರೋದಲ್ಲಿ ರಂಗಿನ ಓಕುಳಿ ಆಡಿದವರೂ ಜೈಲು ಕಂಬಿ ಎಣಿಸುವಂತಾಗಿದೆ.

ಈ ಎರಡೂ ವಿಡಿಯೊಗಳನ್ನು ನೋಡಿರುವ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು “ಅಶ್ಲೀಲ” ಎಂದು ಟೀಕಿಸಿದರೆ, ನೋಯ್ಡಾ ಸಂಚಾರ ಪೊಲೀಸರು ರಸ್ತೆ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸ್ಕೂಟರ್ ಮಾಲೀಕರಿಗೆ ಒಟ್ಟು 80,500 ರೂ.ಗಳ ದಂಡವನ್ನು ವಿಧಿಸಿದ್ದರು.

ಐಪಿಸಿ ಸೆಕ್ಷನ್ 279 (ಮಾನವ ಜೀವಕ್ಕೆ ಅಪಾಯವನ್ನುಂಟು ಮಾಡುವ ಅತಿವೇಗದ / ನಿರ್ಲಕ್ಷ್ಯದ ಚಾಲನೆ), 290 (ಸಾರ್ವಜನಿಕ ಉಪದ್ರವ), 294 (ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲತೆ), 336 ಮತ್ತು 337 (ಇತರರ ಜೀವಕ್ಕೆ ಅಪಾಯವನ್ನುಂಟು ಮಾಡುವ ಅಥವಾ ಅದರಿಂದ ನೋವನ್ನುಂಟುಮಾಡುವ ಕೃತ್ಯಕ್ಕೆ ಸಂಬಂಧಿಸಿದ) ಅಡಿಯಲ್ಲಿ ಸೆಕ್ಟರ್ 113 ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಏನಿದು ಪ್ರಕರಣ?

ನೋಯ್ಡಾದಲ್ಲಿ ಕಳೆದ ಸೋಮವಾರ (ಮಾರ್ಚ್‌ 25) ಯುವಕನು ಸ್ಕೂಟರ್ ಚಾಲನೆ ಮಾಡುತ್ತಿದ್ದರೆ, ಹುಡುಗಿಯರು ಚಲಿಸುತ್ತಿರುವ ಸ್ಕೂಟರ್​ನಲ್ಲಿ ಪರಸ್ಪರ ಎದುರು ಬದುರಾಗಿ ಕುಳಿತು ಅಶ್ಲೀಲ ನೃತ್ಯ ಮಾಡಿದ್ದಾರೆ. ಇನ್ನೊಬ್ಬ ವ್ಯಕ್ತಿ ವಿಡಿಯೊವನ್ನು ಚಿತ್ರೀಕರಿಸಿದ್ದಾನೆ, ಆದಾಗ್ಯೂ, ವಿಡಿಯೊ ಚಿತ್ರೀಕರಿಸಿದ ವ್ಯಕ್ತಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಇದನ್ನೂ ಓದಿ : Women Slapped : ಪಿಟಿಐ ಪತ್ರಕರ್ತೆಯ ಕಪಾಳಕ್ಕೆ ಬಾರಿಸಿದ ಎಎನ್​ಐ ವರದಿಗಾರ; ಇಲ್ಲಿದೆ ಆತಂಕಕಾರಿ ವಿಡಿಯೊ

ವೈರಲ್ ಆಗಿರುವ ವೀಡಿಯೊದಲ್ಲಿ, ಇಬ್ಬರು ಹುಡುಗಿಯರು ಸ್ಕೂಟರ್​ನ ಹಿಂಭಾಗ ಕುಳಿತು ಬಾಲಿವುಡ್ ಹಾಡು “ಮೊಹೆ ರಂಗ್ ಲಗಾಡೆ” ಗೆ ನೃತ್ಯ ಮಾಡಿದ್ದಾರೆ. ಹುಡುಗಿಯರು ನೃತ್ಯ ಮಾಡುತ್ತಿದ್ದಾರೆಯೇ, ಅಶ್ಲೀಲ ಕೆಲಸದಲ್ಲಿ ತೊಡಗಿದ್ದಾರೆಯೇ ಅಥವಾ ಪ್ರಣಯದಲ್ಲಿ ತೊಡಗಿದ್ದಾರೆಯೇ ಎಂದು ವಿವರಿಸುವುದು ಅಸಾಧ್ಯ. ವಿಡಿಯೊ ನೋಡಿಯೇ ನಿರ್ಧಾರ ಮಾಡಬೇಕಾಗುತ್ತದೆ. ಆದರೆ, ಯಾರು ಕೂಡ ಈ ಯುವತಿಯರ ವರ್ತನೆಯನ್ನು ಸಮರ್ಥನೆ ಮಾಡಿಕೊಳ್ಳಲು ಸಾಧ್ಯವಿಲ್ಲ.

ದೆಹಲಿ ಮೆಟ್ರೋದಲ್ಲೂ ಯುವತಿಯರ ಹುಚ್ಚಾಟ

ದೆಹಲಿಯ ಮೆಟ್ರೋದಲ್ಲಿಯೂ ಇಬ್ಬರು ಯುವತಿಯರು ಹೋಳಿ ಆಚರಣೆ ಮಾಡುವ ನೆಪದಲ್ಲಿ ರೊಮ್ಯಾನ್ಸ್‌ ಮಾಡಿದ ವಿಡಿಯೊ ವೈರಲ್‌ ಆಗಿದೆ. ಚಲಿಸುವ ಮೆಟ್ರೋದಲ್ಲಿಯೇ ಪರಸ್ಪರ ಬಣ್ಣ ಹಚ್ಚುವ ಯುವತಿಯರು, ತಬ್ಬಿ ಮುದ್ದಾಡಿದ ವಿಡಿಯೊ ವೈರಲ್‌ ಆಗುತ್ತಲೇ ಜನ ಆಕ್ರೋಶ ವ್ಯಕ್ತಪಡಿಸಿದ್ದರು.

ಇಬ್ಬರು ಯುವತಿಯರು ದೆಹಲಿ ಮೆಟ್ರೋ ಹತ್ತಿದ್ದಾರೆ. ರೈಲು ಚಲಿಸುತ್ತಲೇ ಕೆಳಗೆ ಕುಳಿತ ಅವರು ಪರಸ್ಪರ ಬಣ್ಣ ಹಚ್ಚಿಕೊಂಡಿದ್ದಾರೆ. ಆಕೆಯ ಕೆನ್ನೆಗೆ ಈಕೆ, ಈಕೆಯ ಕೆನ್ನೆಗೆ ಆಕೆ ಬಣ್ಣ ಹಚ್ಚುವುದು, ಇಬ್ಬರೂ ಮಲಗಿ ರೊಮ್ಯಾನ್ಸ್‌ ಮಾಡುವುದು, ಮುದ್ದಾಡುವುದು, ಮುತ್ತು ಕೊಡುವುದು ಸೇರಿ ಬಹಿರಂಗವಾಗಿಯೇ ಅಸಭ್ಯವಾಗಿ ವರ್ತಿಸಿದ್ದಾರೆ. ಇವರ ಹುಚ್ಚಾಟವನ್ನು ಕಂಡ ಪ್ರಯಾಣಿಕರು, ಮನಸ್ಸಲ್ಲೇ ಹಿಡಿ ಶಾಪ ಹಾಕಿದ್ದಾರೆ. ಆದರೆ, ಪ್ರಯಾಣಿಕರು ಏನೆಂದುಕೊಳ್ಳುತ್ತಾರೋ, ಅವರಿಗೆ ತೊಂದರೆಯಾಗುತ್ತದೆಯೋ ಎಂಬುದರ ಪರಿವೇ ಇಲ್ಲದೆ ಇಬ್ಬರು ಯುವತಿಯರು ಹುಚ್ಚಾಟ ಮಾಡಿದ್ದಾರೆ.

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ನೀರಿನ ಸಮಸ್ಯೆಗೆ ಜನರೇ ಉತ್ತರ ಕಂಡುಕೊಳ್ಳಬೇಕು

ಜನ ಸ್ವಯಂಪ್ರೇರಿತರಾಗಿ ನೀರನ್ನು ಉಳಿಸಲು, ಹಿತಮಿತವಾಗಿ ಬಳಸಲು ಮುಂದಾಗುವುದೇ ನೀರಿನ ಕೊರತೆಗೆ ಸರಿಯಾದ ಪರಿಹಾರ. ವಾಹನ ತೊಳೆಯಲು ಕುಡಿಯುವ ನೀರನ್ನು ಬಳಸದಿರುವುದು, ಪಾತ್ರೆ ತೊಳೆದ ನೀರನ್ನು ಗಾರ್ಡನ್‌ಗೆ ಬಳಸುವುದು, ಮನೆ ಮತ್ತು ಕಚೇರಿಯಲ್ಲಿ ನೀರನ್ನು ದಕ್ಷವಾಗಿ ಬಳಸುವ ಸಲಕರಣೆಗಳ ಬಳಕೆ, ತ್ಯಾಜ್ಯ ನೀರಿನ ಮರುಬಳಕೆ ಹೀಗೆ ಹಲವು ಕ್ರಮಗಳ ಮೂಲಕ ಜನರೇ ಅಮೂಲ್ಯ ನೀರನ್ನು ಉಳಿಸಬೇಕಿದೆ.

VISTARANEWS.COM


on

Water Crisis
Koo

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ (Water Crisis) ಜೋರಾಗುತ್ತಿದೆ. ಇದೀಗ ಬೇಸಿಗೆಯ ಮೊದಮೊದಲ ತಿಂಗಳು ಎನ್ನಬಹುದು. ಬೇಸಿಗೆಯಲ್ಲಿ ಇನ್ನೂ ಎರಡು ತಿಂಗಳುಗಳು ಬಾಕಿ ಇವೆ, ಈಗಲೇ ಜನತೆ ಕುಡಿಯುವ ನೀರಿನ ಕೊರತೆಯಿಂದ ತತ್ತರಿಸುತ್ತಿದ್ದಾರೆ. ನಗರದಲ್ಲಿ ಕೆಲವೆಡೆ 6000 ಲೀ. ಟ್ಯಾಂಕರ್‌ನೀರನ್ನು 2500 ಕೊಟ್ಟು ಖರೀದಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ. ಬೆಂಗಳೂರಿಗೆ ಕಾವೇರಿ ನೀರು ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ ಎಂದು ಜಲಮಂಡಳಿ ಹೇಳುತ್ತಿದ್ದರೂ, ನೀರಿನ ಪೂರೈಕೆ ಸಾಕಷ್ಟು ಕಡಿಮೆಯಾಗಿದೆ ಎಂದು ನಗರವಾಸಿಗಳು ಆರೋಪಿಸುತ್ತಿದ್ದಾರೆ. ಇದರಿಂದಲೇ ಖಾಸಗಿ ಟ್ಯಾಂಕರ್‌ಗಳ ಮಾಫಿಯಾ ಶುರುವಾಗಿದೆ. ಬೆಂಗಳೂರಿನ ಆರ್‌.ಆರ್‌.ನಗರದಲ್ಲಿ 6000 ಲೀ. ಟ್ಯಾಂಕರ್‌ 2500 ರೂ., ಕೆ.ಆರ್‌.ಪುರದಲ್ಲಿ 1500 ರೂ., ನಾರಾಯಣಪುರದಲ್ಲಿ 1500 ರೂ., ಹಾಗೂ ವರ್ತೂರಿನಲ್ಲಿ 4000 ಲೀ.ಟ್ಯಾಂಕರ್ 800 ರೂ. ಇದೆ. ಟ್ಯಾಂಕರ್‌ಗಳ ನೋಂದಣಿಯನ್ನು ಜಲಮಂಡಳಿ ಕಡ್ಡಾಯ ಮಾಡಿದ್ದರೂ ಅರ್ಧದಷ್ಟೂ ನೋಂದಣಿಯಾಗಿಲ್ಲ. ಬೆಂಗಳೂರಿನ ಒಳಭಾಗಕ್ಕೇ ಹೆಚ್ಚಿನ ಕಾವೇರಿ ನೀರು ಬೇಕಾಗುವುದರಿಂದ ಹೊರಭಾಗಗಳಿಗೆ ಕಾವೇರಿ ನೀರು ಪೂರೈಸಲು ಸಾಧ್ಯವಿಲ್ಲ ಎಂದು ಜಲಮಂಡಳಿ ಹೇಳಿದೆ. ಕೆಆರ್‌ಎಸ್‍ನಲ್ಲಿ ಸಂಗ್ರಹವಾಗುವ ನೀರಿನಲ್ಲಿ ಬೆಂಗಳೂರು ನಗರ ಒಂದಕ್ಕೆ ಪ್ರತಿ ತಿಂಗಳು 1.6 ಟಿಎಂಸಿ ನೀರು ಬೇಕು. ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರಗಳಿಗೆ ಕಾವೇರಿ ನೀರೇ ಬೇಕು.

ನೀರಿನ ಪೋಲು ತಡೆಗಟ್ಟಲು ಜಲಮಂಡಳಿ ಸಾಕಷ್ಟು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಸ್ವಿಮ್ಮಿಂಗ್‌ ಪೂಲ್‌ಗಳಿಗೆ ಕುಡಿಯುವ ನೀರಿನ ಬಳಕೆಗೆ ಕಡಿವಾಣ, ಬೇಕಾಬಿಟ್ಟಿ ಹೋಳಿ ಆಚರಣೆಗೆ ನಿರ್ಬಂಧ, ಐಷಾರಾಮಿ ರೆಸಾರ್ಟ್‌ಗಳಲ್ಲಿ ರೈನ್‌ ಡ್ಯಾನ್ಸ್‌ಗಳಿಗೆ ನಿಷೇಧ, ಸಾರ್ವಜನಿಕ ಪ್ರದೇಶಗಳಲ್ಲಿ ಸ್ವಚ್ಛತೆಗಾಗಿ ಬಳಸುವ ನಲ್ಲಿಗಳಲ್ಲಿ ಕಡ್ಡಾಯವಾಗಿ ಫ್ಲೋ ರಿಸ್ಟ್ರಿಕ್ಟರ್‌ ಅಳವಡಿಕೆ, ಬೃಹತ್‌ ಸಂಸ್ಥೆಗಳಿಗೆ ನೀರಿನ ಪೂರೈಕೆಯಲ್ಲಿ ಶೇ.20 ಕಡಿತ ಮುಂತಾದ ಕ್ರಮಗಳನ್ನು ಕೈಗೊಂಡಿದೆ. ವಾಹನಗಳ ಸ್ವಚ್ಛತೆಗೆ, ಕೈದೋಟಕ್ಕೆ, ಕಟ್ಟಡ ನಿರ್ಮಾಣಕ್ಕೆ, ಮನೋರಂಜನೆಗಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ, ಸಿನಿಮಾ ಮಂದಿರ ಮತ್ತು ಮಾಲುಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ, ರಸ್ತೆ ನಿರ್ಮಾಣ ಮತ್ತು ಸ್ವಚ್ಚತೆಗೆ ಕುಡಿಯುವ ನೀರು ಬಳಸಿದರೆ ಭಾರಿ ದಂಡ ವಿಧಿಸಲಾಗುತ್ತಿದೆ. ಈಗಾಗಲೇ ಹೀಗೆ 1 ಲಕ್ಷ ರೂಪಾಯಿಗೂ ಅಧಿಕ ದಂಡವನ್ನು ಜಲಮಂಡಳಿ ವಸೂಲಿ ಮಾಡಿದೆ. ನೀರಿನ ಸಮಸ್ಯೆ ಆಲಿಸಲು ಕಂಟ್ರೋಲ್ ರೂಮ್‌ಗಳ ಸಂಖ್ಯೆ ಹೆಚ್ಚಿಸುವ ಮೂಲಕ ದೂರು‌ಗಳು ಬಂದ ತಕ್ಷಣ ಸ್ಪಂದಿಸಿ, ನೀರು ಸರಬರಾಜು ಮಾಡಲು ಸೂಚಿಸಲಾಗಿದೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಭಾರತದ ನ್ಯಾಯಪ್ರಕ್ರಿಯೆಯಲ್ಲಿ ಅಮೆರಿಕದ ಹಸ್ತಕ್ಷೇಪ ಅಧಿಕ ಪ್ರಸಂಗತನ

ಇವೆಲ್ಲವೂ ಸರ್ಕಾರದ ಕಡೆಯಿಂದ ಆಗಿರುವ ಕ್ರಮಗಳು. ಆದರೆ ಇದು ಸಾಲದು ಜನ ಸ್ವಯಂಪ್ರೇರಿತರಾಗಿ ನೀರನ್ನು ಉಳಿಸಲು, ಹಿತಮಿತವಾಗಿ ಬಳಸಲು ಮುಂದಾಗುವುದೇ ನೀರಿನ ಕೊರತೆಗೆ ಸರಿಯಾದ ಪರಿಹಾರ. ವಾಹನ ತೊಳೆಯಲು ಕುಡಿಯುವ ನೀರನ್ನು ಬಳಸದಿರುವುದು, ಪಾತ್ರೆ ತೊಳೆದ ನೀರನ್ನು ಗಾರ್ಡನ್‌ಗೆ ಬಳಸುವುದು, ಮನೆ ಮತ್ತು ಕಚೇರಿಯಲ್ಲಿ ನೀರನ್ನು ದಕ್ಷವಾಗಿ ಬಳಸುವ ಸಲಕರಣೆಗಳ ಬಳಕೆ, ತ್ಯಾಜ್ಯ ನೀರಿನ ಮರುಬಳಕೆ, ಪಾತ್ರೆಗಳನ್ನು ತೊಳೆಯುವಾಗ ನಲ್ಲಿ ನೀರು ಆಫ್‌ ಮಾಡುವುದು, ಕಡಿಮೆ ಅವಧಿಯಲ್ಲಿ ಸ್ನಾನ ಮುಗಿಸುವುದು, ಬಳಕೆ ಮಾಡದಿದ್ದಾಗ ನಲ್ಲಿ ಆಫ್‌ ಮಾಡುವುದು, ಕಡಿಮೆ ಫ್ಲಶ್ ಮಾಡುವ ಟಾಯ್ಲೆಟ್‌ಗಳನ್ನು ಬಳಸುವುದು, ಫುಲ್‌ ಲೋಡ್‌ಗಳಿಗೆ ಮಾತ್ರ ಅಟೊಮ್ಯಾಟಿಕ್ ವಾಶಿಂಗ್ ಮಶಿನ್ ಬಳಸುವುದು, ಕೈತೋಟದಲ್ಲಿ ಕಡಿಮೆ ನೀರನ್ನು ಬಳಸುವ ಸಸ್ಯಗಳನ್ನು ಬೆಳೆಸುವುದು, ಮಳೆಕೊಯ್ಲು ವಿಧಾನಗಳನ್ನು ಮನೆಯಲ್ಲಿ ಅಳವಡಿಸಿಕೊಳ್ಳುವುದು- ಇನ್ನೂ ಮುಂತಾದ ಜಾಣ್ಮೆಯ ಕ್ರಮಗಳ ಮೂಲಕ ನೀರನ್ನು ಉಳಿಸಿಕೊಳ್ಳಬೇಕು.

ಇಂದು ಪ್ರತಿಯೊಬ್ಬರೂ ನೀರಿನ ಮಿತ ಬಳಕೆಯ ಬಗ್ಗೆ ಕೆಲಸ ಮಾಡಲೇಬೇಕಾದ ಕಾಲ ಬಂದಿದೆ. ಕಾಲ ಮಿಂಚಿ ಹೋದ ಮೇಲೆ ಚಿಂತಿಸಿ ಫಲವಿಲ್ಲ. ಈಗಲೇ ಎಚ್ಚೆತ್ತುಕೊಂಡರೆ ಬೆಂಗಳೂರಿನ ಭವಿಷ್ಯದ ದಿನಗಳು ಸುಖಕರವಾದಾವು. ಇಲ್ಲವಾದರೆ ನಮ್ಮ ಮುಂದಿನ ತಲೆಮಾರು ನೀರಿಲ್ಲದೆ ನರಳುವುದನ್ನು ಕಾಣುವ ದುರ್ಭರ ಸ್ಥಿತಿ ನಮ್ಮದಾಗಲಿದೆ.

Continue Reading
Advertisement
Dina Bhavishya
ಭವಿಷ್ಯ30 mins ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

kea
ಕರ್ನಾಟಕ5 hours ago

KEA: ಕೆಸೆಟ್-‌2023ರ ಪರಿಷ್ಕೃತ ಕೀ ಉತ್ತರ ಪ್ರಕಟ; ಹೀಗೆ ಪರಿಶೀಲಿಸಿ

Viral News: Holi at delhi metro
ದೇಶ5 hours ago

Viral News : ವೈರಲ್​ ವಿಡಿಯೊಗಾಗಿ ಅಸಭ್ಯವಾಗಿ ವರ್ತಿಸಿದ ಡೆಲ್ಲಿ ಯುವತಿಯರು ಅರೆಸ್ಟ್​!

Water Crisis
ಪ್ರಮುಖ ಸುದ್ದಿ6 hours ago

ವಿಸ್ತಾರ ಸಂಪಾದಕೀಯ: ನೀರಿನ ಸಮಸ್ಯೆಗೆ ಜನರೇ ಉತ್ತರ ಕಂಡುಕೊಳ್ಳಬೇಕು

IPL 2024- Riyan Parag
ಪ್ರಮುಖ ಸುದ್ದಿ6 hours ago

IPL 2024 : ರಾಯಲ್ಸ್​ಗೆ 2ನೇ ವಿಜಯ , ಡೆಲ್ಲಿಗೆ ಸತತ ಎರಡನೇ ಸೋಲು

Dolly Chaiwala
ವೈರಲ್ ನ್ಯೂಸ್6 hours ago

Dolly Chaiwala: ಅಬ್ಬಬ್ಬಾ ಲಾಟರಿ: ಬಿಲ್ ಗೇಟ್ಸ್ ಭೇಟಿ ಆಯ್ತು; ಈಗ ಮಾಲ್ಡೀವ್ಸ್‌ನಲ್ಲಿ ಡಾಲಿ ಚಾಯ್‌ವಾಲಾ ಮಿಂಚು

Mukthar Ansari
ಪ್ರಮುಖ ಸುದ್ದಿ7 hours ago

Mukhtar Ansari : ಗ್ಯಾಂಗ್​ಸ್ಟರ್​ ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ

Former DCM Govinda Karajola pressmeet
ಬೆಂಗಳೂರು7 hours ago

Bengaluru News: ದೇಶದ ಸರ್ವಾಂಗೀಣ ಅಭಿವೃದ್ಧಿ ಆಗಿದ್ದೇ ಮೋದಿಯಿಂದ: ಗೋವಿಂದ ಕಾರಜೋಳ

crime news
ಕ್ರೈಂ7 hours ago

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಂದ ಪಾಪಿ; ಸಿನಿಮೀಯ ರೀತಿಯಲ್ಲಿ ಬಂಧಿಸಿದ ಪೊಲೀಸರು

Women Slapped
ಪ್ರಮುಖ ಸುದ್ದಿ7 hours ago

Women Slapped : ಪಿಟಿಐ ಪತ್ರಕರ್ತೆಯ ಕಪಾಳಕ್ಕೆ ಬಾರಿಸಿದ ಎಎನ್​ಐ ವರದಿಗಾರ; ಇಲ್ಲಿದೆ ಆತಂಕಕಾರಿ ವಿಡಿಯೊ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ30 mins ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 202416 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 202417 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌