ಬೆಂಗಳೂರು: ಈ ವರ್ಷದ ಬಜೆಟ್‌ನಲ್ಲಿ ಐದು ಗ್ಯಾರಂಟಿಗಳ ಕಡೆಗೆ ಗಮನಹರಿಸಲಾಗಿದ್ದು, ಮುಂದಿನ ಬಜೆಟ್‌ನಲ್ಲಿ ಮಠಮಾನ್ಯಗಳಿಗೆ ಅನುದಾನ ನೀಡಲಾಗುತ್ತದೆ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಕೆಬಿಜೆಎನ್ಎಲ್ ಮುಳವಾಡ ಏತ ನೀರಾವರಿ ಹಂತ 3 ರಡಿಯ ಬಬಲೇಶ್ವರ ಶಾಖಾ ಕಾಲುವೆ 1 ಹಾಗೂ 2 ವಿತರಣಾ ಕಾಲುವೆ ಕಾಮಗಾರಿ ಭೂಮಿಪೂಜೆ ಕಾರ್ಯಕ್ರಮದ ನಂತರ ಮಾಧ್ಯಮಗಳ ಜತೆಗೆ ಮಾತನಾಡಿದರು.
ಸರ್ಕಾರದ ವಿರುದ್ಧ ತಿರುಗಿ ಬಿದ್ದ ಅಂಗನವಾಡಿ ಕಾರ್ಯಕರ್ತೆಯರು
ರಾಜ್ಯಾದ್ಯಂತ ನಾಳೆ (ಜು.10) ಅಂಗನವಾಡಿ ಕಾರ್ಯಕರ್ತೆಯರು (Anganawadi workers) ಬೀದಿಗಿಳಿದು ಪ್ರತಿಭಟಿಸಲಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರ ನೀಡಿದ್ದ ಮೊಬೈಲ್‌ಗಳನ್ನು ವಾಪಸ್ ಮಾಡುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಲಿದ್ದಾರೆ.
Anganawadi workers : ಸರ್ಕಾರದ ವಿರುದ್ಧ ತಿರುಗಿ ಬಿದ್ದ ಅಂಗನವಾಡಿ ಕಾರ್ಯಕರ್ತೆಯರು; ನಾಳೆ ರಾಜ್ಯಾದ್ಯಂತ ಪ್ರತಿಭಟನೆ
ರಾಜ್ಯದಲ್ಲಿ ಇನ್ನೆರಡು ದಿನ ಮುಂಗಾರು ಮಳೆಯ ಅಭಿಷೇಕ
ಕರಾವಳಿ, ಮಲೆನಾಡು ಸೇರಿ ದಕ್ಷಿಣ ಒಳನಾಡಿನಲ್ಲಿ ಮುಂಗಾರು ತೀವ್ರಗೊಂಡಿದ್ದು, ಉತ್ತರ ಒಳನಾಡಿನಲ್ಲಿ ಕುಂಟುತ್ತಾ (Weather report) ಸಾಗಿದೆ. ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು, ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗುವ (Rain alert) ಮುನ್ಸೂಚನೆಯನ್ನು ನೀಡಲಾಗಿದೆ. ಉಳಿದಂತೆ ಉತ್ತರ ಕನ್ನಡದಲ್ಲಿ ಭಾರಿ (Rain news) ಮಳೆಯಾಗಲಿದೆ.
Weather report : ರಾಜ್ಯದಲ್ಲಿ ಇನ್ನೆರಡು ದಿನ ಮುಂಗಾರು ಮಳೆಯ ಅಭಿಷೇಕ
ಇಂದಿರಾ ಕ್ಯಾಂಟೀನ್ನಲ್ಲಿ ತಿಂಡಿ ತಿಂದ ಡಿಕೆಶಿ
ಬೆಳಗ್ಗೆಯೇ ಬೆಂಗಳೂರು ಟೂರ್ಗೆ ಹೊರಟ ಉಪಮುಖ್ಯಮಂತ್ರಿ, ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ಮೊದಲು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಚೊಕ್ಕಸಂದ್ರದ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿದರು. ಅಲ್ಲಿ ಹೋಗಿ ತಿಂಡಿ ಕೇಳಿದ್ದಾರೆ. ಆದರೆ ಅಷ್ಟರಲ್ಲೇ ತಿಂಡಿ ಖಾಲಿಯಾಗಿತ್ತು. ಹೀಗಾ ದಾಸರಹಳ್ಳಿ ಮೆಟ್ರೋ ಸ್ಟೇಷನ್ ಬಳಿಯ ಇಂದಿರಾ ಕ್ಯಾಂಟೀನ್‌ಗೆ ತೆರಳಿ ಅಲ್ಲೇ ಬ್ರೇಕ್ಫಾಸ್ಟ್ ಮಾಡಿದ್ದಾರೆ. ಉಪ್ಪಿಟ್ಟು ಕೇಸರಿ ಬಾತ್ ತಿಂದಿದ್ದಾರೆ. ಹಾಗೇ, ಅಲ್ಲಿ ತಿಂಡಿ ತಿನ್ನಲು ಬಂದವರ ಬಳಿ ಮಾತುಕತೆಯನ್ನೂ ನಡೆಸಿದ್ದಾರೆ. ಎಷ್ಟು ದುಡ್ಡು ಕೊಡ್ತೀರಿ ಎಂದೂ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಇಬ್ಭಾಗ!
ಕರ್ನಾಟಕದಲ್ಲಿ 2025ರಲ್ಲಿ ಕಾಂಗ್ರೆಸ್ ಶಾಸಕರಲ್ಲಿ ಎರಡು ಬಣಗಳಾಗುತ್ತವೆ. ಅದರಲ್ಲಿ ಒಂದು ಬಣದ ಶಾಸಕರು ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಸೇರಿಕೊಂಡು ಈಗಿರುವ ಸರ್ಕಾರವನ್ನು ಕೆಡವುತ್ತಾರೆ’ ಎಂದು ಖ್ಯಾತ ಜ್ಯೋತಿಷಿ ಅನಿರುದ್ಧ ಮಿಶ್ರಾ ತಿಳಿಸಿದ್ದಾರೆ.
2025ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಇಬ್ಭಾಗ, ಬಿಜೆಪಿ ಸರ್ಕಾರ ಆಡಳಿತಕ್ಕೆ; ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ
ಬೆಳಗಾವಿ ಜೈನ ಮುನಿ ಅಂತ್ಯಕ್ರಿಯೆ ಇಂದು
ಭೀಕರವಾಗಿ ಹತ್ಯೆಗೀಡಾಗಿರುವ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಮೃತದೇಹದ ಮರಣೋತ್ತರ ಪರೀಕ್ಷೆ ಇಂದು ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ, ಬೆಳಗ್ಗೆ 9ಗಂಟೆ ಬಳಿಕ ನಡೆಯಲಿದೆ. ಬಳಿಕ ಮಠದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
Jain Muni Murder: 9 ತುಂಡುಗಳಾಗಿ ಹತ್ಯೆಯಾದ ಜೈನಮುನಿ ಮರಣೋತ್ತರ ಪರೀಕ್ಷೆ, ಅಂತ್ಯಸಂಸ್ಕಾರ ಇಂದು