ಬೆಂಗಳೂರು: ಬಾಗಲಕೋಟೆ, ಬೆಳಗಾವಿ ಮತ್ತು ವಿಜಯಪುರದಲ್ಲಿ ಬುಧವಾರ ರಾತ್ರಿ (ಮುಂದಿನ 3 ಗಂಟೆಗಳಲ್ಲಿ) ಗುಡುಗು ಸಹಿತ ಮಳೆಯಾಗುವ (Karnataka Weather) ಸಾಧ್ಯತೆ ಇದೆ. ಇನ್ನು ಏ. 18 ರಿಂದ 20 ಏಪ್ರಿಲ್ ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಗುಡುಗು ಸಹಿತ ಸಾಧಾರಣ ಮಳೆಯಾಗುವ (Rain fall) ಸಾಧ್ಯತೆಯಿದೆ ಎಂದು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ksndmc) ಮಾಹಿತಿ ನೀಡಿದೆ.
ಏ.25ರವರೆಗೆ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ಏ. 18 ರಿಂದ 21 ರವರೆಗೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.
ಮಳೆ ಮುನ್ಸೂಚನೆ : ಮುಂದಿನ 3 ಗಂಟೆಗಳಲ್ಲಿ ಬಾಗಲಕೋಟೆ, ಬೆಳಗಾವಿ ಮತ್ತು ವಿಜಯಪುರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
— Karnataka State Natural Disaster Monitoring Centre (@KarnatakaSNDMC) April 17, 2024
ಮೂಲ: IMD ಬೆಂಗಳೂರು
Issued by : KSDMA
IValidity Time : 17 Apr, 15:30 to 17 Apr, 18:30
Alert generated through CAP-SACHET. pic.twitter.com/LQWzQlNzBn
ನಾಳೆ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ ಸೇರಿ ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ
ಏಪ್ರಿಲ್ 18ರಂದು ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ | Karnataka Weather : ರಭಸವಾದ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆ; ಇನ್ನೊಂದು ವಾರ ಈ ಜಿಲ್ಲೆಗಳಿಗೆ ಅಲರ್ಟ್
ಇನ್ನು ಏ.19ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು & ವಿಜಯನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮತ್ತು ಬೀದರ್, ಗದಗ, ಕಲಬುರ್ಗಿ, ರಾಯಚೂರು & ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಅದೇ ರೀತಿ ಏ. 20ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಏ. 21ರಂದು ಬೆಳಗಾವಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
22ನೇ ಏಪ್ರಿಲ್ 2024 : ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಏ. 23ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರ್ಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ತಾಪಮಾನದ ಮುನ್ಸೂಚನೆ
ಏ.19 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಾದ್ಯಂತ ಗರಿಷ್ಠ ತಾಪಮಾನವು ಕ್ರಮೇಣ 2-3°C ಯಷ್ಟು ಏರುತ್ತದೆ.
ಗುಡುಗು ಮುನ್ನೆಚ್ಚರಿಕೆ
ಏಪ್ರಿಲ್ 19ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮತ್ತು ಏಪ್ರಿಲ್ 18 ರಿಂದ 21 ರವರೆಗೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಜೊತೆಗೆ ಮೇಲೆ ಮಾರುತಗಳು ಬಲವಾದ ಮತ್ತು ರಭಸದಿಂದ ಕೂಡಿರುವ ಸಾಧ್ಯತೆಯಿದೆ.
ಇದನ್ನೂ ಓದಿ | Eye Protection: ಡಿಜಿಟಲ್ ಪರದೆಗಳಿಂದ ಕಣ್ಣುಗಳನ್ನು ಕಾಪಾಡಿಕೊಳ್ಳುವುದು ಹೇಗೆ?
ಏ.19ರವರೆಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು ಭಾಗಶಃ ಮೋಡ ಕವಿದ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.
ಮುಂದಿನ 48 ಗಂಟೆಗಳು ಭಾಗಶಃ ಮೋಡ ಕವಿದ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.