ಬೆಂಗಳೂರು: ರಾಜ್ಯಾದ್ಯಂತ ಮಳೆಯಾರ್ಭಟ (Rain News) ಜೋರಾಗಿ ಇರಲಿದೆ.. ದಕ್ಷಿಣ ಒಳನಾಡಿನಲ್ಲಿ ಲಘುವಾಗಿ ಸಾಧಾರಣ ಮಳೆಯೊಂದಿಗೆ ವ್ಯಾಪಕವಾಗಿ ಚದುರಿದಂತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಗಾಳಿ ವೇಗದೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast ) ನೀಡಿದೆ.
ದಕ್ಷಿಣ ಒಳನಾಡಿನ ತುಮಕೂರು, ಮಂಡ್ಯ, ಚಾಮರಾಜನಗರ, ಮೈಸೂರು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ತಕ್ಕಮಟ್ಟಿಗೆ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುತ್ತದೆ. ಉತ್ತರ ಒಳನಾಡಿನಲ್ಲಿ ಸುತ್ತಮುತ್ತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡಿನ ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಚದುರಿದಂತೆ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಸುತ್ತಮುತ್ತ ಗುಡುಗು ಸಹಿತ ಲಘುವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ