Site icon Vistara News

KEA Exams Time Table: ಪಿಎಸ್‌ಐ ಸೇರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ವಿವಿಧ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

KEA exams time table

ಬೆಂಗಳೂರು: ಪಿಎಸ್‌ಐ (PSI posts) ಹುದ್ದೆಗಳು ಸೇರಿದಂತೆ ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿರುವ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA Exams Time Table) ಪ್ರಕಟಿಸಿದೆ. ಆ ಪ್ರಕಾರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ಕೋರಲಾಗಿದೆ.

ಪೊಲೀಸ್‌ ಇಲಾಖೆಯಲ್ಲಿ ಪಿಎಸ್‌ಐ ಹುದ್ದೆಗಳಿಗೆ ಸೆ.22ರಂದು, ಬಿಎಂಟಿಸಿಯಲ್ಲಿ ಕಂಡಕ್ಟರ್‌ ಹುದ್ದೆಗಳಿಗೆ ಸೆ.1ರಂದು, ಕೆಯುಡಬ್ಲ್ಯುಎಸ್‌ಡಿಬಿಯಲ್ಲಿ ಅಸಿಸ್ಟೆಂಟ್‌ ಇಂಜಿನಿಯರ್‌ ಹುದ್ದೆಗಳಿಗೆ ಆಗಸ್ಟ್‌ 11ರಂದು, ಕಂದಾಯ ಇಲಾಖೆಯಲ್ಲಿ ವಿಲೇಜ್‌ ಅಡ್ಮಿನಿಸ್ಟ್ರೇಟಿವ್‌ ಆಫೀಸರ್‌ ಹುದ್ದೆಗಳಿಗೆ ಸೆ.29ರಂದು, ಜಿಟಿಟಿಸಿಯಲ್ಲಿ ಲೆಕ್ಟರರ್‌ ಮತ್ತಿತರ ಹುದ್ದೆಗಳಿಗೆ ಸೆ.29ರಂದು, ಕಂದಾಯ ಇಲಾಖೆಯಲ್ಲಿ ವಿಎ ಹುದ್ದೆಗಳಿಗೆ ಅಕ್ಟೋಬರ್‌ 27ರಂದು ಪರೀಕ್ಷೆಗಳು ನಡೆಯಲಿವೆ.

ಇಂದಿನಿಂದ SSLC ಪರೀಕ್ಷೆ-3 ಆರಂಭ; ಎಕ್ಸಾಮ್‌ ತೆಗೆದುಕೊಳ್ಳಲಿರುವ 97,933 ವಿದ್ಯಾರ್ಥಿಗಳು

ಬೆಂಗಳೂರುಎಸ್ಎಸ್ಎಲ್‌ಸಿ ಪರೀಕ್ಷೆ-3 (SSLC Exam- 3) ಇಂದು (ಆಗಸ್ಟ್ 2) ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ರಾಜ್ಯಾದ್ಯಂತ 97,933 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ದಿನಾಂಕ 02-08-2024ರಿಂದ ದಿನಾಂಕ:09-08-2024 ರವರೆಗೆ ನಡೆಯಲಿದೆ. ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ 97,933 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 67,716 ಬಾಲಕರು ಮತ್ತು 30,217 ಬಾಲಕಿಯರು ಸೇರಿದ್ದಾರೆ.

ಒಟ್ಟು ನೋಂದಣಿಯಲ್ಲಿ 459 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ರಾಜ್ಯದ 410 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಪ್ರಶ್ನೆ ಪತ್ರಿಕೆ ಅಭಿರಕ್ಷಕರು, ಸ್ಥಾನಿಕ ಜಾಗೃತ ದಳದವರು ಹಾಗೂ ಕೊಠಡಿ ಮೇಲ್ವಿಚಾರಕರು ಕರ್ತವ್ಯ ನಿರ್ವಹಿಸುತ್ತಾರೆ ಎಂದು ಮಾಹಿತಿ ನೀಡಿದೆ.

ಜಿಲ್ಲಾ ಮತ್ತು ತಾಲ್ಲೂಕು ಹಂತಗಳ ವಿಚಕ್ಷಣ ದಳಗಳು ಪರೀಕ್ಷಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸುತ್ತವೆ. ಜಿಲ್ಲಾಧಿಕಾರಿಗಳಿಂದ ನಿಯೋಜಿತ ಇತರೆ ಇಲಾಖೆಗಳ ಜಾಗೃತ ದಳಗಳು ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲಿವೆ. ಪ್ರತಿ ಕೇಂದ್ರದಲ್ಲಿಯೂ ಸಿ.ಸಿ.ಟಿ.ವಿ. ಗಳ ಮೂಲಕ ಪರೀಕ್ಷಾ ಅವ್ಯವಹಾರಗಳ ಬಗ್ಗೆ ನಿಗಾ ಇಡಲಾಗುವುದು ಎಂದು ಹೇಳಿದೆ.

ಯಾರ್ಯಾರಿಗೆ ಪರೀಕ್ಷೆ?

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗದವರು, ಪ್ರಸಕ್ತ ಸಾಲಿನ ಮೊದಲ ಹಾಗೂ ಎರಡನೇ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸಿದವರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (KSEEB) ಮೂರನೇ ಅವಕಾಶ ನೀಡಿದ್ದು, ಅದರಂತೆ ಆಗಸ್ಟ್‌ 2ರಿಂದ 9ರವರೆಗೆ ಪರೀಕ್ಷೆ ನಡೆಯಲಿದೆ. ಇದೀಗ ಅಭ್ಯರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಶಾಲಾ ಮುಖ್ಯೋಪಾಧ್ಯಾಯರು ಪ್ರವೇಶ ಪತ್ರಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿತರಿಸಬೇಕು. ಒಂದು ವೇಳೆ ಏನಾದರೂ ಸಮಸ್ಯೆ ಕಂಡುಬಂದಲ್ಲಿ ಕೂಡಲೇ ಸಂಬಂಧಿಸಿದ ಪರಿಶೀಲನಾ ಶಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಮ್ಮ ಶಾಲೆಯ ಮುಖಾಂತರ ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಡೌನ್‌ಲೋಡ್ ಮಾಡಿಕೊಂಡ ಪ್ರವೇಶ ಪತ್ರಗಳ ಸಂಖ್ಯೆ ಸರಿ ಹೊಂದುತ್ತಿವೆಯೇ ಎಂದು ತಪ್ಪದೇ ಪರಿಶೀಲಿಸಬೇಕು. ಒಂದು ವೇಳೆ ಯಾವುದಾದರು ವಿದ್ಯಾರ್ಥಿಯ ಪ್ರವೇಶ ಪತ್ರ ಬಂದಿಲ್ಲದಿದ್ದರೆ ಆ ವಿವರವನ್ನು ದಾಖಲೆಗಳೊಂದಿಗೆ ಮಂಡಳಿಗೆ ಕೂಡಲೇ ಕಳುಹಿಸಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ: Puja Khedkar: ನಕಲಿ ದಾಖಲೆ ಸೃಷ್ಟಿ; ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ನೇಮಕ ರದ್ದು, ಪರೀಕ್ಷೆಯಿಂದಲೇ ಯುಪಿಎಸ್‌ಸಿ ಬ್ಯಾನ್!

Exit mobile version