Site icon Vistara News

Kempegowda Jayanti: ಕೆಂಪೇಗೌಡರ ಆಡಳಿತವೇ ನಮಗೆ ಪ್ರೇರಣೆ; ಸಿಎಂ ಸಿದ್ದರಾಮಯ್ಯ

CM Siddaramaiah inaugurated the Nadaprabhu Kempegowda jayantyutsava in Bengaluru

ಬೆಂಗಳೂರು: ಬೆಂಗಳೂರು ವಿಶ್ವವಿಖ್ಯಾತವಾಗಿದ್ದರೆ ಅದಕ್ಕೆ ಕೆಂಪೇಗೌಡರು (Kempegowda Jayanti) ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಬಣ್ಣಿಸಿದರು.

ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಗುರುವಾರ ಮಾಲಾರ್ಪಣೆ ಮಾಡಿ, ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ನಾಡಪ್ರಭು ಕೆಂಪೇಗೌಡರ 515ನೇ ಜನ್ಮದಿನೋತ್ಸವವನ್ನು ಸರ್ಕಾರ ರಾಜ್ಯಾದ್ಯಂತ ಆಚರಣೆ ಮಾಡುತ್ತಿದೆ. ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಜನಾನುರಾಗಿ ಪ್ರಭುಗಳು. ಕೃಷ್ಣದೇವರಾಯನ ಕಾಲದಲ್ಲಿ ಬೆಂಗಳೂರನ್ನು ಸ್ಥಾಪಿಸಿದ್ದಲ್ಲದೆ ಅನೇಕ ಕೆರೆಗಳನ್ನು ಕಟ್ಟಿಸಿದರು. ಅವರ ಕಾಲದಲ್ಲಿಯೇ ಅತಿ ಹೆಚ್ಚು ದೇವಸ್ಥಾನ, ಕೆರೆಗಳು ನಿರ್ಮಾಣವಾಯಿತು. ವೃತ್ತಿಯಾಧಾರದ ಮೇಲೆ ಚಿಕ್ಕಪೇಟೆ, ದೊಡ್ಡಪೇಟೆ, ನಗರ್ತಪೇಟೆ , ತಿಗಳರಪೇಟೆ, ಬಳೆಪೇಟೆಗಳನ್ನು ನಿರ್ಮಿಸಿ ನಗರವನ್ನು ವ್ಯಾಪಾರ ಕೇಂದ್ರವನ್ನಾಗಿಸಲು ಪ್ರಯತ್ನಪಟ್ಟರು ಎಂದು ತಿಳಿಸಿದರು.

ಇದನ್ನೂ ಓದಿ: Vande Bharath Train: ಬೆಂಗಳೂರು-ಮಧುರೈ ʼವಂದೇ ಭಾರತ್ʼ ರೈಲು ಜುಲೈನಿಂದ ಆರಂಭ

ಸರ್ಕಾರದ ವತಿಯಿಂದ ಕೆಂಪೇಗೌಡ ಜಯಂತಿ

ಮೊದಲ ಬಾರಿಗೆ ಕೆಂಪೇಗೌಡರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ತೀರ್ಮಾನ ಮಾಡಿದ್ದು, ಕೆಂಪೇಗೌಡರ ಪ್ರಾಧಿಕಾರ ರಚನೆ ಮಾಡಿದ್ದು, ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಂದು ಸಿಎಂ ಸ್ಮರಿಸಿದರು. ಕೆಂಪೇಗೌಡ ಅವರ ಆಡಳಿತ ನಮಗೆಲ್ಲಾ ಪ್ರೇರಣೆಯಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Share Market: ಮೊದಲ ಬಾರಿಗೆ 79,000 ಅಂಕಗಳ ಗಡಿ ದಾಟಿದ ಸೆನ್ಸೆಕ್ಸ್; ಗರಿಷ್ಠ ಮಟ್ಟ ತಲುಪಿದ ನಿಫ್ಟಿ

ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವ ಸಮಾರಂಭ

ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

Exit mobile version