Site icon Vistara News

KL Rahul : ಕೊರಗಜ್ಜನ ಆದಿ ಸ್ಥಾನಕ್ಕೆಭೇಟಿ ನೀಡಿದ ಕೆ. ಎಲ್​ ರಾಹುಲ್​, ಅಥಿಯಾ ಶೆಟ್ಟಿ ದಂಪತಿ, ವಿಡಿಯೊ ವೈರಲ್

KL Rahul

ಬೆಂಗಳೂರು: ಭಾರತ ತಂಡದ ಸ್ಟಾರ್ ಬ್ಯಾಟರ್​ ಕೆ. ಎಲ್​ ರಾಹುಲ್ (KL Rahul)​ ರಾಜ್ಯದ ವಿವಿಧ ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ. ಅಂತೆಯೇ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಕೊರಗಜ್ಜ ದೈವದ ಆದಿ ಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಜಿಲ್ಲೆಯ ಕುತ್ತಾರಿನ ದೆಕ್ಕಾಡು ಎಂಬಲ್ಲಿರುವ ಆದಿಸ್ಥಾನಕ್ಕೆ ಭೇಟಿ ನೀಡಿದ ಅವರು ಅಲ್ಲಿನ ಮುಖ್ಯಸ್ಥರ ಆಶೀರ್ವಾದ ಪಡೆಕೊಂಡಿದ್ದಾರೆ. ಅವರ ಭೇಟಿ ನೀಡಿರುವ ವಿಡಿಯೊ ಇದೀಗ ವೈರಲ್ ಆಗಿದೆ.

ಕೊರಗಜ್ಜ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಅಪಾರ ಭಕ್ತರನ್ನು ಹೊಂದಿರುವ ದೈವ. ಇದೀಗ ಆ ದೈವದ ಕಾರಣಿಕ ಜಿಲ್ಲೆಯ ಗಡಿದಾಡಿದೆ. ದೇಶಾದ್ಯಂತ ನಾನಾ ಭಕ್ತರು ಅಭಯ ಕೋರಿಕೊಂಡು ಕೊರಗ್ಗಜನ ದೈವಸ್ಥಾನಕ್ಕೆ ಭೇಟಿ ನೀಡುತ್ತಾರೆ. ಅಂತೆಯೇ ಕರ್ನಾಟಕದ ನಾನಾ ಕಡೆಗೆ ಪ್ರವಾಸ ಹೊರಟಿರುವ ಕೆ. ಎಲ್​ ರಾಹುಲ್ ಅವರು ಪತ್ನಿ ಹಾಗೂ ಬಾಮೈದ ಅಹಾನ್​ ಶೆಟ್ಟಿ ಅವರೊಂದಿಗೆ ಕೊರಗಜ್ಜನ ಆದಿಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: Virat Kohli : ವಿರಾಟ್​ ಕೊಹ್ಲಿಯನ್ನು ಅವಮಾನಿಸಿದ ಅಮಿತ್​ ಮಿಶ್ರಾ ಬೆಂಡೆತ್ತಿದ ಯಶ್​ ದಯಾಳ್​

ಬಪ್ಪನಾಡು ದುರ್ಗಾಪರಮೇಶ್ವರಿ ದೇಗುಲಕ್ಕೆ ಕ್ರಿಕೆಟಿಗ ಕೆ. ಎಲ್​ ರಾಹುಲ್​ ದಂಪತಿ ಭೇಟಿ

ಮಂಗಳೂರು: ಭಾರತ ತಂಡದ ಬಲಗೈ ಬ್ಯಾಟರ್ ಹಾಗೂ ಸ್ಟಾರ್ ಆಟಗಾರ ಕೆ.ಎಲ್ ರಾಹುಲ್ (KL Rahul) ಇಲ್ಲಿನ ಐತಿಹಾಸಿಕ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಭಾನುವಾರ ಭೇಟಿ ನೀಡಿದ್ದಾರೆ. ಪತ್ನಿ ಅತಿಯಾ ಶೆಟ್ಟಿ ಅವರ ಜತೆ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದರು. ಬಪ್ಪನಾಡು ಕ್ಷೇತ್ರವು ಮಂಗಳೂರು ನಗರದ ಹೊರವಲಯದ ಮುಲ್ಕಿ ಸಮೀಪ ಇದೆ. ದೇಗುಲಕ್ಕೆ ಭೇಟಿ ನೀಡಿದ ದಂಪತಿಗೆ ದೇವಾಲಯದ ವತಿಯಿಂದ ವಿಶೇಷ ಗೌರವ ಸಲ್ಲಿಸಲಾಯಿತು.

ವಿಶ್ವ ಕಪ್​ ತಂಡದಲ್ಲಿ ಅವಕಾಶ ಪಡೆಯದೇ ಕೆ. ಎಲ್ ರಾಹುಲ್​ ಮುಂಬರುವ ಶ್ರೀಲಂಕಾ ಪ್ರವಾಸದಲ್ಲಿ ಭಾರತ ತಂಡ ಸೇರುವ ನಿರೀಕ್ಷೆಯಿದೆ. ಆದರೆ ಅದಿನ್ನೂ ಸ್ಪಷ್ಟವಾಗಿಲ್ಲ. ತಂಡವೂ ಪ್ರಕಟಗೊಂಡಿಲ್ಲ. ಅವಕಾಶದ ನಿರೀಕ್ಷೆಯಲ್ಲಿರುವ ಅವರೀಗ ಅಮೂಲ್ಯ ಸಮಯವನ್ನು ಕುಟುಂಬದ ಜತೆ ಕಳೆಯುತ್ತಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಅನಂತ್​ ಅಂಬಾನಿ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ದಂಪತಿ ಜತೆಯಾಗಿ ಭಾಗಿಯಾಗಿದ್ದ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿಕಾಣಿಸಿಕೊಂಡಿದ್ದವು.

ಶ್ರೀಲಂಕಾ ಪ್ರವಾಸದ ಏಕ ದಿನ ತಂಡಕ್ಕೆ ಕೆ. ಎಲ್ ರಾಹುಲ್ ನಾಯಕ?
ಜಿಂಬಾಬ್ವೆ ಪ್ರವಾಸದ ಬಳಿಕ ಟೀಮ್ ಇಂಡಿಯಾ ತನ್ನ ಮುಂದಿನ ಕಾರ್ಯಯೋಜನೆಗೆ ಸಜ್ಜಾಗಬೇಕಾಗಿದೆ ವೈಟ್-ಬಾಲ್ ಸರಣಿಗಾಗಿ ಭಾರತ ಬಳಗ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಹೊಸ ಕೋಚ್​ ಗೌತಮ್ ಗಂಭೀರ್ ಅಡಿಯಲ್ಲಿ ಈ ತಂಡ ದ್ವೀಪ ರಾಷ್ಟ್ರಕ್ಕೆ ಹೋಗಲಿದೆ. ಈ ಸರಣಿಯಲ್ಲಿ ಯಾರೆಲ್ಲ ಇರುತ್ತಾರೆ ಎಂಬ ಬಗ್ಗೆ ಇನ್ನೂ ಮಾಹಿತಿ ಇಲ್ಲ. ಆದರೆ, ವರದಿಗಳ ಪ್ರಕಾರ, ಸ್ಟಾರ್ ಬ್ಯಾಟರ್​ ಹಾಗೂ ಕನ್ನಡಿಗ ಕೆಎಲ್ ರಾಹುಲ್ (KL Rahul) ತಂಡಕ್ಕೆ ಮರಳಲಿದ್ದು ತಂಡವನ್ನು ಮುನ್ನಡೆಸುವ ನಿರೀಕ್ಷೆಯಿದೆ.

Exit mobile version