ಬೆಂಗಳೂರು: ಕೋಲ್ಕತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಸ್ನಾತಕೋತ್ತರ ತರಬೇತಿ ವೈದ್ಯೆಯ ತಂದೆ ಸರ್ಕಾರ ನೀಡಲು ಮುಂದಾಗಿರುವ ಪರಿಹಾರದ ಮೊತ್ತವನ್ನು ನಿರಾಕರಿಸಿದ್ದಾರೆ. ದುಡ್ಡು ಪಡೆದರೆ ಮೃತಪಟ್ಟ ಆಕೆಗೆ ಅಗೌರವ ಎಂದ ಅವರು ಹೇಳಿದ್ದಾರೆ. ಇದೇ ವೇಳೆ ಅವರು ಸಿಬಿಐ ಜೊತೆಗಿನ ಸಂಭಾಷಣೆಯ ಬಗ್ಗೆ ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗ ಮಾಡಲು ನಿರಾಕರಿಸಿದ್ದಾರೆ.
ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲಾಗುವುದು ಎಂದು ಭರವಸೆ ಸಿಕ್ಕಿದೆ. ನಮ್ಮ ಹೇಳಿಕೆ ಆಧರಿಸಿ ಆಧಾರದ ಮೇಲೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಸಿಬಿಐ ನಮಗೆ ಭರವಸೆ ನೀಡಿದೆ. ನಾನು ಪರಿಹಾರವನ್ನು ತಿರಸ್ಕರಿಸಿದ್ದೇನೆ. ನನ್ನ ಮಗಳ ಸಾವಿಗೆ ಪರಿಹಾರವಾಗಿ ನಾನು ಹಣವನ್ನು ಸ್ವೀಕರಿಸಿದರೆ ಅದು ನನ್ನ ಮಗಳಿಗೆ ನೋವುಂಟು ಮಾಡುತ್ತದೆ. ನನಗೆ ನ್ಯಾಯ ಬೇಕು” ಎಂದು ಅವರು ಹೇಳಿದ್ದಾರೆ.
ಸಿಬಿಐ ಜೊತೆಗಿನ ನಮ್ಮ ಸಂಭಾಷಣೆಯ ವಿವರಗಳನ್ನು ಬಹಿರಂಗ ಮಾಡುವುದು ಕಾನೂನುಬದ್ಧವಾಗಿ ಸೂಕ್ತವಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಿದ ವಿಚಾರಣೆಯ ವಿವರಗಳನ್ನು ನಾನು ನಿಮಗೆ ನೀಡಲು ಸಾಧ್ಯವಿಲ್ಲ. ಅವರು ನಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ ” ಎಂದು ಅವರು ತಿಳಿಸಿದ್ದಾರೆ.
ಎಲ್ಲರಿಗೂ ಆಭಾರಿ
ದೇಶ ಮತ್ತು ಪ್ರಪಂಚದಾದ್ಯಂತ ನಡೆಯುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ನಾನು ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ನಮ್ಮೊಂದಿಗೆ ನಿಂತಿರುವ ಪ್ರತಿಯೊಬ್ಬರನ್ನೂ ನಾನು ನನ್ನ ಪುತ್ರರು ಮತ್ತು ಪುತ್ರಿಯರೆಂದು ಪರಿಗಣಿಸುತ್ತೇನೆ ಎಂದು ಆಕೆಯ ತಂದೆ ಹೇಳಿದ್ದಾರೆ.
ಕೋಲ್ಕತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಲ್ ಹಾಲ್ನಲ್ಲಿ ಆಗಸ್ಟ್ 9 ರಂದು ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ. ಕೋಲ್ಕತಾ ಅತ್ಯಾಚಾರ ಪ್ರಕರಣವು ವೈದ್ಯಕೀಯ ಸೇವೆಗಳನ್ನು ಅಡಚಣೆ ಉಂಟು ಮಾಡಿದೆ. ವಿದ್ಯಾರ್ಥಿಗಳು ಮತ್ತು ವೈದ್ಯರು ನಿವಾಸಿ ಪಿಜಿ ವೈದ್ಯರಿಗೆ ನ್ಯಾಯಕ್ಕಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ನಡುಎ ಆರ್ಜಿ ಕಾರ್ ಆಸ್ಪತ್ರೆಯ ತುರ್ತು ವಾರ್ಡ್ನಲ್ಲಿ ಡಜನ್ಗಟ್ಟಲೆ ಜನರ ಗುಂಪು ನುಗ್ಗಿ ಕುರ್ಚಿಗಳನ್ನು ಧ್ವಂಸಗೊಳಿಸುತ್ತಿರುವುದನ್ನು ವೀಡಿಯೊಗಳು ವೈರಲ್ ಆಗಿವೆ. ಕೆಲವರು ಆಸ್ಪತ್ರೆಯನ್ನು ಧ್ವಂಸಗೊಳಿಸುತ್ತಿರುವುದು ಸಹ ಕಂಡುಬಂದಿದೆ. ಕೋಲ್ಕತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ. ತರಬೇತಿ ವೈದ್ಯರ ಸಾವಿನ ವಿರುದ್ಧ ಪ್ರತಿಭಟಿಸಲು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಶುಕ್ರವಾರ ರಾಷ್ಟ್ರವ್ಯಾಪಿ 24 ಗಂಟೆಗಳ ಕಾಲ ವೈದ್ಯಕೀಯ ಸೇವೆಯನ್ನು ಸ್ಥಗಿತಗೊಳಿಸಿದೆ.