Lalbagh Flower Show: ಸಸ್ಯಕಾಶಿಯಲ್ಲಿ ಇಂದಿನಿಂದ ಫಲಪುಷ್ಪ ಪ್ರದರ್ಶನ; ಏನೇನಿದೆ, ಪಾರ್ಕಿಂಗ್‌ ಎಲ್ಲಿ, ಟಿಕೆಟ್‌ ದರ ಎಷ್ಟು? - Vistara News

ಪ್ರಮುಖ ಸುದ್ದಿ

Lalbagh Flower Show: ಸಸ್ಯಕಾಶಿಯಲ್ಲಿ ಇಂದಿನಿಂದ ಫಲಪುಷ್ಪ ಪ್ರದರ್ಶನ; ಏನೇನಿದೆ, ಪಾರ್ಕಿಂಗ್‌ ಎಲ್ಲಿ, ಟಿಕೆಟ್‌ ದರ ಎಷ್ಟು?

Lalbagh Flower Show: ಈ ಬಾರಿಯ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ (Dr BR Ambedkar) ಥೀಮ್ ಆಧರಿಸಿದೆ. ಅಂಬೇಡ್ಕರ್‌ ಜೀವನದ ಮಹತ್ವದ ಸನ್ನಿವೇಶಗಳ ಕಲಾಕೃತಿಗಳ ಪ್ರದರ್ಶನವಿದೆ.

VISTARANEWS.COM


on

lalbagh flower show 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ (Independence Day) ಅಂಗವಾಗಿ ತೋಟಗಾರಿಕೆ ಇಲಾಖೆಯಿಂದ (Horticulture department) ಆಯೋಜನೆಯಾಗುವ ಫಲಪುಷ್ಪ ಪ್ರದರ್ಶನ (Lalbagh Flower Show) ಇಂದಿನಿಂದ ಲಾಲ್‌ಬಾಗ್‌ನಲ್ಲಿ ಆರಂಭವಾಗಲಿದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಬೆಳಗ್ಗೆ ಉದ್ಘಾಟಿಸಲಿದ್ದಾರೆ. ಆಗಸ್ಟ್‌ 8ರಿಂದ 19ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ.

ಈ ಬಾರಿಯ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ (Dr BR Ambedkar) ಥೀಮ್ ಆಧರಿಸಿದೆ. ಜೊತೆಗೆ ನವದೆಹಲಿಯ ಸಂಸತ್ ಭವನದ ಕಲಾಕೃತಿ ಇರಲಿದೆ. ಸಂಸತ್‌ ಭವನದ ಪ್ರತಿಕೃತಿಯು 3.6 ಲಕ್ಷ ಗುಲಾಬಿ ಹಾಗೂ 2.4 ಲಕ್ಷ ಸೇವಂತಿಗೆ ಹೂಗಳಲ್ಲಿ ಅನಾವರಣಗೊಂಡಿದೆ. ಸಂಸತ್‌ ಭವನದ ಮುಂಭಾಗದಲ್ಲಿ 12 ಅಡಿ ಎತ್ತರದ ಡಾ.ಬಿ.ಆರ್. ಅಂಬೇಡ್ಕರ್‌ ಅವರ ಪ್ರತಿಮೆ ರಾರಾಜಿಸಲಿದೆ. ಅಂಬೇಡ್ಕರ್ ಅವರ ಚೈತ್ಯಭೂಮಿ ಸ್ಮಾರಕ ಸ್ತೂಪವನ್ನು 3.4 ಲಕ್ಷ ಹೂಗಳಿಂದ ನಿರ್ಮಿಸಲಾಗಿದೆ. ಮಹಾಡ್ ಸತ್ಯಾಗ್ರಹ, ಕಲಾ ರಾಮ್‌ ದೇವಸ್ಥಾನದ ಪ್ರವೇಶ, ಕೋರೆಗಾಂವ್ ವಿಜಯೋತ್ಸವ ಮುಂತಾದ ಅಂಬೇಡ್ಕರ್‌ ಜೀವನದ ಮಹತ್ವದ ಸನ್ನಿವೇಶಗಳ ಕಲಾಕೃತಿಗಳ ಪ್ರದರ್ಶನವಿದೆ.

216ನೇ ಫಲಪುಷ್ಪ ಪ್ರದರ್ಶನಕ್ಕೆ 10:30ಕ್ಕೆ ಚಾಲನೆ. ಅಂಬೇಡ್ಕರ್ ಮೊಮ್ಮಗ ಭೀಮರಾವ್ ಯಶ್ವಂತ್ ಅಂಬೇಡ್ಕರ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿರಲಿದ್ದಾರೆ. ಹೊರರಾಜ್ಯಗಳಿಂದ 8.6 ಲಕ್ಷ ಹೂವುಗಳನ್ನು ರಾಜಧಾನಿಗೆ ತರಲಾಗಿದೆ. 12 ದಿನಗಳ ಕಾಲ ನಡೆಯಲಿರುವ ಕಲರ್‌ಫುಲ್ ಪುಷ್ಪ ಪ್ರದರ್ಶನಕ್ಕೆ ಈ ಬಾರಿ 2.80 ಕೋಟಿ ವೆಚ್ಚ ಮಾಡಲಾಗಿದೆ.

ವಾಹನ ನಿಲುಗಡೆ ನಿಷೇಧ

ಲಾಲ್‌ಬಾಗ್‌ ಸುತ್ತಮುತ್ತಲ ಹಲವು ರಸ್ತೆಗಳಲ್ಲಿ ವಾಹನ ನಿಲುಗಡೆ (Vehicle parking) ನಿಷೇಧಿಸಲಾಗಿದೆ. ನಿಷೇಧಿತ ರಸ್ತೆಗಳು ಹೀಗಿವೆ:

ಮರೀಗೌಡ ರಸ್ತೆ– ಲಾಲ್‌ಬಾಗ್‌ ಮುಖ್ಯದ್ವಾರದಿಂದ ನಿಮ್ಹಾನ್ಸ್‌ವರೆಗೆ ರಸ್ತೆಯ ಎರಡೂ ಬದಿ.
ಕೆ.ಎಚ್‌. ರಸ್ತೆ – ಕೆ.ಎಚ್‌. ವೃತ್ತದಿಂದ ಶಾಂತಿನಗರ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿ.
ಲಾಲ್‌ಬಾಗ್‌ ರಸ್ತೆ – ಸುಬ್ಬಯ್ಯ ವೃತ್ತದಿಂದ ಲಾಲ್‌ಬಾಗ್‌ ಮುಖ್ಯದ್ವಾರದವರೆಗೆ
ಸಿದ್ದಯ್ಯ ರಸ್ತೆ – ಊರ್ವಶಿ ಚಿತ್ರಮಂದಿರದ ಜಂಕ್ಷನ್‌ನಿಂದ ವಿಲ್ಸನ್‌ ಗಾರ್ಡನ್‌ 12ನೇ ಕ್ರಾಸ್‌ವರೆಗೆ
ಬಿಟಿಎಸ್ ಬಸ್ ನಿಲ್ದಾಣ – ಬಿಎಂಟಿಸಿ ಜಂಕ್ಷನ್‌ನಿಂದ ರಸ್ತೆಯ ಎರಡೂ ಬದಿ.
ಕೃಂಬಿಗಲ್‌ ರಸ್ತೆಯ ಎರಡೂ ಬದಿ
ಲಾಲ್‌ಬಾಗ್‌ ವೆಸ್ಟ್‌ಗೇಟ್‌ನಿಂದ ಆರ್‌.ವಿ. ಟೀಚರ್ಸ್‌ ಕಾಲೇಜುವರೆಗೆ.
ಆರ್‌.ವಿ. ಟೀಚರ್ಸ್‌ ಕಾಲೇಜಿನಿಂದ ಅಶೋಕ ಪಿಲ್ಲರ್‌ವರೆಗೆ.
ಅಶೋಕ ಪಿಲ್ಲರ್‌ನಿಂದ ಸಿದ್ದಾಪುರ ಜಂಕ್ಷನ್‌ವರೆಗೆ.

ವಾಹನಗಳ ನಿಲುಗಡೆಗೆ ಅವಕಾಶ ಎಲ್ಲೆಲ್ಲಿ?

  • ಮರೀಗೌಡ ರಸ್ತೆ – ಆಲ್‌ ಅಮೀನ್‌ ಕಾಲೇಜು ಆವರಣದಲ್ಲಿ ದ್ವಿಚಕ್ರ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.
  • ಕೆ.ಎಚ್‌. ರಸ್ತೆ– ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.
  • ಮರೀಗೌಡ ರಸ್ತೆ – ಹಾಪ್‌ಕಾಮ್ಸ್‌ನಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಅವಕಾಶ ಇದೆ.
  • ಜೆ.ಸಿ. ರಸ್ತೆ – ಕಾರ್ಪೊರೇಶನ್‌ ಪಾರ್ಕಿಂಗ್‌ ಸ್ಥಳಗಳಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಅವಕಾಶ

ಟಿಕೆಟ್ ದರ ಎಷ್ಟು?

ವಯಸ್ಕರಿಗೆ ಟಿಕೆಟ್ ದರ (Ticket fees) 80 ರೂ. ಮಕ್ಕಳಿಗೆ 30 ರೂ. ರಜಾ ದಿನಗಳಲ್ಲಿ ವಯಸ್ಕರಿಗೆ 100 ರೂ. ಶಾಲಾ ಮಕ್ಕಳಿಗೆ ಸಂಪೂರ್ಣ ಉಚಿತವಾಗಿದೆ.

ಇದನ್ನೂ ಓದಿ: Lalbagh Flower Show: ಈ ಬಾರಿಯ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಅರಳಲಿದೆ ಡಾ. ಅಂಬೇಡ್ಕರ್‌ ಜೀವನಗಾಥೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

VISTARANEWS.COM


on

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್‌ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್‌ ಅರ್ಲೇಕರ್‌ ಅವರು ಪ್ರಮಾಣ ವಚನ ಬೋಧಿಸಿದರು. ತಿರುವನಂತಪುರದ ಸೆಂಟ್ರಲ್‌ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ವಿ.ಡಿ. ಸತೀಶನ್‌ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

10 ವರ್ಷಗಳ ನಂತರ ಯುಡಿಎಫ್‌ ಸರ್ಕಾರ ಅಧಿಕಾರ ಸ್ವೀಕಾರದೊಂದಿಗೆ ಕೇರಳ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.

Continue Reading

ಪ್ರಮುಖ ಸುದ್ದಿ

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

VISTARANEWS.COM


on

ಚೆನ್ನೈ: ತಮಿಳು ನಟ ವಿಜಯ್‌ ಮುಖ್ಯಮಂತ್ರಿ ಆಗಿರುವುದಕ್ಕೆ ನನಗೆ ಯಾವುದೇ ಅಸೂಯೆ ಇಲ್ಲ ಎಂದು ತಮಿಳು ನಟ, ಸೂಪರ್‌ ಸ್ಟಾರ್‌ ರಜನೀಕಾಂತ್‌ ಸ್ಪಷ್ಟಪಡಿಸಿದ್ದಾರೆ.

ಚೆನ್ನೈನಲ್ಲಿ ಮಾತನಾಡಿದ ಅವರು, ಪ್ರಬಲ ಮೈತ್ರಿಕೂಟಗಳನ್ನು ಸೋಲಿಸಿ ವಿಜಯ್‌ ಸಿಎಂ ಆಗಿದ್ದಾರೆ. ಇದರಿಂದ ನನಗೆ ಯಾವುದೇ ಅಸೂಯೆ ಇಲ್ಲ. ನನಗೆ ತುಂಬಾ ಸಂತೋಷವಾಗಿದೆ ಎಂದಿದ್ದಾರೆ.

ನಾನು ರಾಜಕೀಯ ಪ್ರವೇಶಿಸಿದ್ದರೆ ಶೇ.100 ರಷ್ಟು ಯಶಸ್ಸು ಸಾಧಿಸುತ್ತಿದ್ದೆ. ಆದರೆ ನಾನು ರಾಜಕೀಯದಿಂದ ದೂರ ಸರಿದು ಬಹಳ ದಿನಗಳಾಗಿವೆ ಎಂದು ಹೇಳಿದ್ದಾರೆ.

ವಿಜಯ್‌ ಮತ್ತು ನನ್ನ ನಡುವೆ ಒಂದು ಜನರೇಶನ್‌ ಗ್ಯಾಪ್‌ ಇದೆ. ನಮ್ಮಿಬ್ಬರ ನಡುವೆ ಸುಮಾರು 25 ವರ್ಷದ ಅಂತರವಿದೆ. ಅವರ ಬಗ್ಗೆಯಾಗಲಿ, ಅವರ ಸಿಎಂ ಆಗಿರುವುದಕ್ಕಾಗಲಿ ನನಗೆ ಯಾವುದೇ ಅಸೂಯೆ ಇಲ್ಲ ಎಂದು ಸ್ಪಷ್ಟಪಡಿಸಿದರು. ವಿಜಯ್‌ ಸಿಎಂ ಆದ ತಕ್ಷಣವೇ ನಾನು ಅವರಿಗೆ ಅಭಿನಂದನೆ ಸಲ್ಲಿಸಿದ್ದೇನೆ ಎಂದು ರಜನೀಕಾಂತ್‌ ತಿಳಿಸಿದರು.

ಚುನಾವಣೆ ಬಳಿಕ ತಮ್ಮ ವಿರುದ್ಧ ಕೇಳಿಬರುತ್ತಿರುವ ಟೀಕೆಗಳ ಕುರಿತೂ ರಜನೀಕಾಂತ್‌ ಪ್ರತಿಕ್ರಿಯೆ ನೀಡಿದರು. ಚುನಾವಣೆ ನಂತರ ನನ್ನ ವಿರುದ್ಧ ಅನೇಕ ಟೀಕೆಗಳು ಬರುತ್ತಿವೆ. ನಾನು ಅವಕ್ಕೆ ಪ್ರತಿಕ್ರಿಯಿಸದಿದ್ದರೆ ಅವು ಸತ್ಯ ಎಂದು ಭಾವಿಸುವ ಸಾಧ್ಯತೆ ಇದೆ ಎಂದರು.

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿ ಮಾಡಿದ ವಿಚಾರಕ್ಕೂ ಸ್ಪಷ್ಟನೆ ನೀಡಿದ ರಜನೀಕಾಂತ್‌, ಸ್ಟಾಲಿನ್‌ ಮತ್ತು ನನ್ನ ಸ್ನೇಹ ರಾಜಕೀಯವನ್ನೂ ಮೀರಿದ್ದು, ನಮ್ಮ ಸ್ನೇಹಕ್ಕೆ ಸುಮಾರು 35 ವರ್ಷಗಳ ಇತಿಹಾಸ ಇದೆ ಎಂದು ಹೇಳಿದರು.

“ಕೊಳತ್ತೂರಿನಲ್ಲಿ ಸ್ಟಾಲಿನ್‌ ಸೋತಿದ್ದಕ್ಕೆ ನನಗೆ ಬೇಸರವಾಯಿತು. ಸ್ನೇಹಿತನಾಗಿ ಅವರನ್ನು ಭೇಟಿಯಾಗಿ ಸಮಾಧಾನ ಮಾಡಿದ್ದೇನೆ. ಆದರೆ ಆ ವಿಚಾರದಲ್ಲೂ ಕೆಲವರು ನನ್ನನ್ನು ಟೀಕಿಸುತ್ತಿದ್ದಾರೆ, ಅದಕ್ಕೆ ಈ ಸ್ಪಷ್ಟನೆ ನೀಡುತ್ತಿದ್ದೇನೆ ಎಂದು ರಜನೀಕಾಂತ್‌ ಹೇಳಿದ್ದಾರೆ.

Continue Reading

Latest

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

VISTARANEWS.COM


on

ಅಬುಧಾಬಿ: ಆರು ದಿನಗಳ ವಿದೇಶ ಪ್ರವಾಸದಲ್ಲಿ ಪ್ರಧಾನಿ ಮೊದಲು ಯುಎಇಗೆ ಭೇಟಿ ನೀಡಿದ್ದಾರೆ. ಯುರೋಪ್ ಭೇಟಿಗೂ ಮುನ್ನ ಅಬುಧಾಬಿಗೆ ಭೇಟಿ ನೀಡಿದ್ದು, ಭಾರತ-ಯುಎಇ ನಡುವಿನ ನಿಕಟ ಸಂಬಂಧಕ್ಕೆ ಸಾಕ್ಷಿ ಎನ್ನಲಾಗುತ್ತಿದೆ.
ಅಬುಧಾಬಿಯಲ್ಲಿ ಪ್ರಧಾನಿ ಮೋದಿ ಮತ್ತು ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ರಕ್ಷಣೆ, ವ್ಯಾಪಾರ, ಹೂಡಿಕೆ, ಇಂಧನ ಭದ್ರತೆ ಕುರಿತು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಮೋದಿ ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸಲು ಎಲ್ಲಾ ಅಗತ್ಯ ನೆರವು ನೀಡುವ ಭರವಸೆ ನೀಡಿದರು. ಇದೇ ವೇಳೆ ಅವರು, ಯುಎಇ ಮೇಲಿನ ಇರಾನ್ ದಾಳಿಯನ್ನು ಖಂಡಿಸಿದರು.
ಪ್ರಧಾನಿ ಮೋದಿಯವರ ಭೇಟಿಯನ್ನು ಯುಎಇ ಮುಕ್ತಕಂಠದಿಂದ ಹೊಗಳಿದೆ. ‘ಭಾರತದ ಪ್ರಧಾನಿ ನಮ್ಮ ನಿಜವಾದ ಆಸ್ತಿ’ ಎಂದು ಯುಎಇ ಅಂತಾರಾಷ್ಟ್ರೀಯ ಸಹಕಾರ ಸಚಿವೆ ರೀಮ್ ಅಲ್ ಹಶಿಮಿ ಬಣ್ಣಿಸಿದ್ದಾರೆ.
ಪ್ರಧಾನಿ ಮೋದಿ ಯುಎಇಗೆ ಆಗಮಿಸುತ್ತಿದ್ದಂತೆಯೇ ಭವ್ಯ ಸ್ವಾಗತ ನೀಡಲಾಯಿತು. ಮೋದಿ ಅವರಿದ್ದ ವಿಶೇಷ ವಿಮಾನಕ್ಕೆ ಗಗನಮಾರ್ಗದಲ್ಲೇ ಯುಎಇಯ ಎಫ್‌-16 ಯುದ್ಧ ವಿಮಾನಗಳು ಗೌರವ ರಕ್ಷೆ ನೀಡಿದ್ದವು.
ಯುಎಇ ಬಳಿಕ ಮೋದಿ ನೆದರ್‌ಲ್ಯಾಂಡ್‌, ಸ್ವೀಡನ್, ನಾರ್ವೆ ಮತ್ತು ಇಟಲಿ ದೇಶಗಳಿಗೆ ತೆರಳಲಿದ್ದಾರೆ.

Continue Reading

Latest

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

VISTARANEWS.COM


on

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ದೀದಿ ಭದ್ರಕೋಟೆಯನ್ನು ಧೂಳೀಪಟಗೈದು ಅಧಿಕಾರಕ್ಕೇರಿದ ಸುವೇಂದು ಅಧಿಕಾರಿ ಮುಖ್ಯಮಂತ್ರಿ ಪಟ್ಟಕ್ಕೇರುತ್ತಿದ್ದಂತೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಆರೋಗ್ಯವಂತ ಜಾನುವಾರುಗಳ ಹತ್ಯೆ ಮಾಡಿದರೆ ಶಿಕ್ಷೆ ನೀಡಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಪಶುವೈದ್ಯರು ನೀಡುವ ಫಿಟ್‌ನೆಸ್‌‍ ಪ್ರಮಾಣಪತ್ರವಿಲ್ಲದೆ ಹಸು, ಹೋರಿ, ಎಮ್ಮೆ ಮತ್ತು ಕರು ಸೇರಿ ಯಾವುದೇ ಪ್ರಾಣಿಯನ್ನು ಹತ್ಯೆ ಮಾಡುವಂತಿಲ್ಲ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ಹಸು 14 ವರ್ಷ ಮೇಲ್ಪಟ್ಟಿದ್ದು, ಕೆಲಸ ಮಾಡಲು ಅಥವಾ ಸಂತಾನೋತ್ಪತ್ತಿ ಮಾಡಲು ಯೋಗ್ಯವಿಲ್ಲದಿದ್ದರೆ ಅಥವಾ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿದ್ದು, ಶಾಶ್ವತವಾಗಿ ಗುಣಪಡಿಸಲು ಸಾಧ್ಯವಾಗದಿದ್ದರೆ ಮಾತ್ರ ಸ್ಥಳೀಯ ನಾಗರಿಕ ಅಧಿಕಾರಿಗಳು ಅಥವಾ ಪಶುವೈದ್ಯರು ಜಂಟಿಯಾಗಿ ಪ್ರಮಾಣ ಪತ್ರವನ್ನು ನೀಡಬಹುದಾಗಿದೆ.
ನಿಯಮಗಳನ್ನು ಜಾರಿಗೊಳಿಸಲು ಅಧಿಕಾರಿಗಳು ನಡೆಸುವ ಯಾವುದೇ ಪರಿಶೀಲನೆಯನ್ನು ವ್ಯಕ್ತಿಗಳು ತಡೆಯುವಂತಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಯಾವುದೇ ರೀತಿಯ ಕಾನೂನು ಉಲ್ಲಂಘನೆಗಳಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 1 ಸಾವಿರ ರೂಪಾಯಿವರೆಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Continue Reading
Advertisement
Latest8 hours ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest9 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest12 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest13 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ1 day ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest1 day ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest3 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest3 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest3 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest4 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌