Land Grabbing: ಭೂ ಕಬಳಿಕೆ; ರೋಹಿಣಿ ಸಿಂಧೂರಿ ಸೇರಿ 6 ಮಂದಿ ವಿರುದ್ಧ ಬಾಲಿವುಡ್‌ ಖ್ಯಾತ ಗಾಯಕ ದೂರು - Vistara News

ಪ್ರಮುಖ ಸುದ್ದಿ

Land Grabbing: ಭೂ ಕಬಳಿಕೆ; ರೋಹಿಣಿ ಸಿಂಧೂರಿ ಸೇರಿ 6 ಮಂದಿ ವಿರುದ್ಧ ಬಾಲಿವುಡ್‌ ಖ್ಯಾತ ಗಾಯಕ ದೂರು

Land Grabbing: ಯಲಹಂಕ ನ್ಯೂ ಟೌನ್‌ನಲ್ಲಿ ಟ್ರಸ್ಟ್‌ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಸೂಧನ್ ರೆಡ್ಡಿ ಎಂಬುವವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ. ಇದಕ್ಕೆ ರೋಹಿಣಿ ಸಿಂಧೂರಿ ಸಹಕಾರ ಕೊಟ್ಟಿದ್ದಾರೆ ಎಂದು ಗಾಯಕ ಲಕ್ಕಿ ಅಲಿ ಆರೋಪಿಸಿದ್ದಾರೆ.

VISTARANEWS.COM


on

Land Grabbing
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭೂ ಕಬಳಿಕೆ (Land Grabbing) ಮಾಡಿದ್ದಾರೆ ಎಂದು ಆರೋಪಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಸೇರಿ 6 ಮಂದಿ ವಿರುದ್ಧ ಬಾಲಿವುಡ್‌ನ ಖ್ಯಾತ ಗಾಯಕ ಲಕ್ಕಿ ಅಲಿ(Lucky Ali), ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಯಲಹಂಕ ನ್ಯೂ ಟೌನ್ ಬಳಿ, ಟ್ರಸ್ಟ್‌ಗೆ ಸೇರಿರುವ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಲಕ್ಕಿ ಅಲಿ ಆರೋಪಿಸಿದ್ದು, ಈ ಬಗ್ಗೆ ದೂರಿನ ಪ್ರತಿಯನ್ನು ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ, ಸಹಾಯಕ ಪೊಲೀಸ್‌ ಕಮಿಷನರ್‌ ಮಂಜುನಾಥ್‌, ಯಲಹಂಕ ನ್ಯೂ ಟೌನ್‌ ಪಿಎಸ್‌ಐ, ತಾಲೂಕು ಸರ್ವೇಯರ್‌ ಮನೋಹರ್‌, ಸುಧೀರ್‌ ರೆಡ್ಡಿ ಹಾಗೂ ಮಧಸೂಧನ್‌ ರೆಡ್ಡಿ ಸೇರಿ ಮಂದಿ ವಿರುದ್ಧ ದೂರು ದಾಖಲಾಗಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ 2022ರಲ್ಲಿಯೂ ಲಕ್ಕಿ ಅಲಿ ದೂರು ಸಲ್ಲಿಸಿದ್ದರು. ತಮ್ಮ ಟ್ರಸ್ಟ್‌ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಸೂಧನ್ ರೆಡ್ಡಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ. ಇದಕ್ಕೆ ರೋಹಿಣಿ ಸಿಂಧೂರಿ ಸಹಕಾರ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಯಲಹಂಕ ನ್ಯೂಟೌನ್ ಬಳಿ ಲಕ್ಕಿ ಅಲಿ ಟ್ರಸ್ಟ್ ಇದ್ದು, ಭೂ ಕಬಳಿಕೆಯಲ್ಲಿ ಯಲಹಂಕ ನ್ಯೂ ಟೌನ್ ಠಾಣೆಯ ಎಸಿಪಿ ಮಂಜುನಾಥ್, ತಾಲೂಕು ಸರ್ವೇ ಅಧಿಕಾರಿ ಮನೋಹನ್ ಶಾಮೀಲಾಗಿದ್ದಾರೆ ಎಂದು ದೂರು ನೀಡಿದ್ದಾರೆ. ರೋಹಿಣಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಲೋಕಾಯುಕ್ತಕ್ಕೆ ಗಾಯಕ ಮನವಿ ಮಾಡಿದ್ದಾರೆ.

ಇದನ್ನೂ ಓದಿ | ಚಿನ್ನದಂಗಡಿ ಮಾಲೀಕನಿಗೆ ಚಾಕು ಇರಿದು ಕಳ್ಳತನ ಮಾಡಿದ ಬುರ್ಖಾಧಾರಿ ವ್ಯಕ್ತಿ; ಅಂಗಡಿ ಮಾಲೀಕರೇ ಎಚ್ಚರ!

ಹಲಸಿನ ಮರ ತೆರವಿಗೂ ಕೊಡಬೇಕು ಗರಿ ಗರಿ ನೋಟು; ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ದ

ಲಂಚಕೋರರು

Lokayukta raids in Davangere and Udupi Three arrested

ದಾವಣಗೆರೆ: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ ನೀಡಿತ್ತು. ಪ್ರತ್ಯೇಕ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು (Lokayukta Raid) ದಾಳಿ ನಡೆಸಿ, ಲಂಚಕೋರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದಾವಣಗೆರೆ ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿ ಹಾಗೂ ಎಸ್‌ಡಿಎ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿ ಬಿ.‌ಅನ್ನಪೂರ್ಣ ಹಾಗೂ ಎಸ್‌ಡಿಎ ಲಕ್ಕಪ್ಪ ವೈ ಇವರಿಬ್ಬರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ದಾವಣಗೆರೆ ನಗರದ ಬೇತೂರು ರಸ್ತೆಯ ನಿವಾಸಿ ಚಂದ್ರಶೇಖರ್ ಎಂಬುವರಿಂದ‌‌ ‌ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ. ಹಿಟ್ಟಿನ ಗಿರಣಿ ಮನೆಗೆ ಇ- ಸ್ವತ್ತು ಮಾಡಿ ಕೊಡಲು ಚಂದ್ರಶೇಖರ್‌ ಬಳಿ 15 ಸಾವಿರ ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಸ್ವೀಕರಿಸುವಾಗಲೇ ದಾವಣಗೆರೆ ಲೋಕಾಯುಕ್ತ ಎಸ್‌ಪಿ ಎಂಎಸ್ ಕೌಲಾಪೂರೆ ನೇತೃತ್ವದ ತಂಡ ದಾಳಿ ಮಾಡಿದೆ.

ಇತ್ತ ಉಡುಪಿಯಲ್ಲಿ ಅರಣ್ಯಾಧಿಕಾರಿ ಮತ್ತು ಅರಣ್ಯ ವೀಕ್ಷಕನೊಬ್ಬ ಹಲಸಿನ ಮರ ತೆರವುಗೊಳಿಸಲು ಲಂಚ ಕೇಳಿದ ಆರೋಪ ಕೇಳಿ ಬಂದಿದೆ. ಮಹಮ್ಮದ್ ಅನ್ವರ್ ಹಸನ್ ಎಂಬುವವರು ಹಲಸಿನ ಮರ ತೆರವು ಮಾಡಲು ಅರ್ಜಿ ಸಲ್ಲಿಸಿದ್ದರು. ಆದರೆ ತೆರವಿಗೆ ಅನುಮತಿಸಲು ಬೈಂದೂರು ವಲಯದ ಉಪವಲಯ ಅರಣ್ಯ ಅಧಿಕಾರಿ ಬಂಗಾರಪ್ಪ ಮತ್ತು ಅರಣ್ಯ ವೀಕ್ಷಕ ವಿನಾಯಕ 4000 ರೂ. ಲಂಚ ಕೇಳಿದ್ದರು.

ಇದನ್ನೂ ಓದಿ: Actor Darshan: ಎಚ್‌ಡಿಕೆಗೆ ಅವಾಚ್ಯ ಶಬ್ದಗಳಿಂದ ನಿಂದನೆ; ದರ್ಶನ್‌ ಮಹಿಳಾ ಅಭಿಮಾನಿ ವಿರುದ್ಧ 2 ದೂರು

ಲಂಚ ಸ್ವೀಕರಿಸುವಾಗಲೇ ಆರೋಪಿಗಳು ರೆಡ್‌ ಹ್ಯಾಂಡ್‌ ಸಿಕ್ಕಿ ಬಿದ್ದಿದ್ದಾರೆ. ಆರೋಪಿಗಳ ಪೈಕಿ ಬಂಗಾರಪ್ಪನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದರೆ, ಮತ್ತೋರ್ವ ಆರೋಪಿ ವಿನಾಯಕ ಪರಾರಿ ಆಗಿದ್ದಾನೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ನಟರಾಜ್ ಎಂ.ಎ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಡಿವೈಎಸ್ಪಿ ಪ್ರಕಾಶ್ ಕೆ ಸಿ, ಪೊಲೀಸ್ ನಿರೀಕ್ಷಕ ಮಂಜುನಾಥ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

NEET Aspirant: ನೀಟ್‌ ಅಕ್ರಮ ಬಯಲಾದ ಬೆನ್ನಲ್ಲೇ 17 ವರ್ಷದ NEET ಅಭ್ಯರ್ಥಿ ಆತ್ಮಹತ್ಯೆ; ಸಾವಿಗೆ ಯಾರು ಹೊಣೆ?

NEET Aspirant: 17 ವರ್ಷದ ಬಾಲಕನು ಕೋಟಾದಲ್ಲಿ ನೀಟ್‌ಗೆ ತಯಾರಿ ನಡೆಸುತ್ತಿದ್ದ. ಆತನು ಇತ್ತೀಚೆಗೆ ಒತ್ತಡಕ್ಕೆ ಸಿಲುಕಿದ್ದು, ತನ್ನ ಕೋಣೆಯಲ್ಲಿರುವ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮೃತನನ್ನು ಹರ್ಷಿತ್‌ ಕುಮಾರ್‌ ಅಗರ್ವಾಲ್‌ ಎಂಬುದಾಗಿ ಗುರುತಿಸಲಾಗಿದೆ. ಈತನು ಬಿಹಾರದವನಾಗಿದ್ದು, 12ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ.

VISTARANEWS.COM


on

NEET Aspirant
Koo

ಜೈಪುರ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ಕಳೆದ ಮೇ ತಿಂಗಳಲ್ಲಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG 2024) ಅಕ್ರಮ ನಡೆದಿರುವ, ಪ್ರಶ್ನೆ ಪತ್ರಿಕೆ ಸೋರಿಕೆಯಾದ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದೆ. ಪ್ರಕರಣದ ಕುರಿತು ತನಿಖೆ ನಡೆಸಲು ಸಿಬಿಐಗೆ ಹೊಣೆ ನೀಡಿದರೂ ಕೆಲ ರಾಜ್ಯಗಳು ನೀಟ್‌ ಪರೀಕ್ಷೆಯೇ ಬೇಡ ಎಂದು ಹೇಳುತ್ತಿವೆ. ಇದರ ಮಧ್ಯೆಯೇ, ರಾಜಸ್ಥಾನದ ಕೋಟಾದಲ್ಲಿ (Kota) ನೀಟ್‌ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 17 ವರ್ಷದ ಅಭ್ಯರ್ಥಿಯೊಬ್ಬ (NEET Aspirant) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

17 ವರ್ಷದ ಬಾಲಕನು ಕೋಟಾದಲ್ಲಿ ನೀಟ್‌ಗೆ ತಯಾರಿ ನಡೆಸುತ್ತಿದ್ದ. ಆತನು ಇತ್ತೀಚೆಗೆ ಒತ್ತಡಕ್ಕೆ ಸಿಲುಕಿದ್ದು, ತನ್ನ ಕೋಣೆಯಲ್ಲಿರುವ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮೃತನನ್ನು ಹರ್ಷಿತ್‌ ಕುಮಾರ್‌ ಅಗರ್ವಾಲ್‌ ಎಂಬುದಾಗಿ ಗುರುತಿಸಲಾಗಿದೆ. ಈತನು ಬಿಹಾರದವನಾಗಿದ್ದು, 12ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಛೋಟಾ ಚೌರಾಹಿನ್‌ ಡಬಾಬರಿ ಪ್ರದೇಶದಲ್ಲಿ ಈತನು ವಾಸಿಸುತ್ತಿದ್ದ. ಗುರುವಾರ (ಜೂನ್‌ 27) ಮಧ್ಯಾಹ್ನ 1 ಗಂಟೆ ಸುಮಾರಿಗೆ ಹಲವು ಸಹಪಾಠಿಗಳು ಬಾಗಿಲು ಬಡಿದಿದ್ದಾರೆ. ತುಂಬ ಹೊತ್ತಾದರೂ ಬಾಗಿಲು ತೆಗೆಯದ ಕಾರಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Kota Coaching Centre Room

ಪೊಲೀಸರು ಬಂದು ಬಾಗಿಲು ಮುರಿದು ಒಳಗೆ ತೆರಳಿದಾಗ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಆದಾಗ್ಯೂ, ಯಾವುದೇ ಡೆತ್‌ನೋಟ್‌ ಪತ್ತೆಯಾಗಿಲ್ಲ. ಕೋಟಾದ ಕೋಚಿಂಗ್‌ ಸೆಂಟರ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ, ಜೆಇಇ, ನೀಟ್‌ಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಪ್ರತಿ ವರ್ಷ ಸುದ್ದಿಯಾಗುತ್ತಲೇ ಇರುತ್ತವೆ. ಪ್ರಸಕ್ತ ವರ್ಷದಲ್ಲಿಯೇ 12 ಅಭ್ಯರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2023ರಲ್ಲಿ 26 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದರಲ್ಲೂ, ಈಗ ನೀಟ್‌ ಅಕ್ರಮದ ಬಳಿಕ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ಕುರಿತ ವರದಿಗಳು ಪೋಷಕರು, ರಾಜ್ಯ ಸರ್ಕಾರಗಳನ್ನು ಆತಂಕಕ್ಕೆ ದೂಡಿವೆ.

ನೀಟ್‌ ಅಕ್ರಮ; ಇಬ್ಬರ ಬಂಧನ

ಕಳೆದ ಮೇ ತಿಂಗಳಲ್ಲಿ ನಡೆದ ನೀಟ್‌ ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ. ಬಿಹಾರದ ಪಟನಾದವರಾದ ಮನೀಶ್‌ ಕುಮಾರ್‌ ಹಾಗೂ ಆಶುತೋಷ್‌ ಎಂಬುವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಮೊದಲು ಇಬ್ಬರೂ ಆರೋಪಿಗಳನ್ನು ವಿಚಾರಣೆಗೆ ಕರೆದ ಅಧಿಕಾರಿಗಳು, ನಂತರ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಮನೀಶ್‌ ಕುಮಾರ್‌ ಹಾಗೂ ಆಶುತೋಷ್‌ ಅವರು ವಿದ್ಯಾರ್ಥಿಗಳಿಗೆ ಖಾಲಿ ಇರುವ ಶಾಲೆಯೊಂದಕ್ಕೆ ತೆರಳಲು ವಾಹನದ ವ್ಯವಸ್ಥೆ ಮಾಡಿದ್ದರು. ಖಾಲಿ ಇರುವ ಶಾಲೆಯಲ್ಲಿ ಹಲವು ವಿದ್ಯಾರ್ಥಿಗಳಿಗೆ ಇವರು ಸೋರಿಕೆಯಾದ ಪ್ರಶ್ನೆಪತ್ರಿಕೆಯನ್ನು ಹಂಚಿದ್ದರು ಎಂದು ತಿಳಿದುಬಂದಿದೆ. ಕೆಲ ವಿದ್ಯಾರ್ಥಿಗಳಿಗೆ ಇವರೇ ತಮ್ಮ ಮನೆಯಲ್ಲಿ ಆಶ್ರಯ ಕೂಡ ನೀಡಿದ್ದರು ಎನ್ನಲಾಗಿದೆ.

ಇಬ್ಬರೂ ದುರುಳರು ಪಟನಾದಲ್ಲಿರುವ ಬಾಯ್ಸ್‌ ಹಾಸ್ಟೆಲ್‌ನಲ್ಲಿ ನೀಟ್‌ ಬರೆಯುವ ಅಭ್ಯರ್ಥಿಗಳು ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದರು. ಮೇ 5ರಂದು ನೀಟ್‌ ಪರೀಕ್ಷೆ ನಡೆದಿದ್ದು, ಮೇ 4ರಂದು ಅಭ್ಯರ್ಥಿಗಳು ಹಾಸ್ಟೆಲ್‌ನಲ್ಲಿದ್ದು ಸೋರಿಕೆಯಾಗಿದ್ದ ಪ್ರಶ್ನೆಗಳನ್ನು ಓದಿಕೊಂಡು, ಉತ್ತರ ಬರೆದು, ಅದನ್ನು ನೆನಪಿನಲ್ಲಿಟ್ಟುಕೊಳ್ಳಲು ಇವರು ಅನುಕೂಲ ಮಾಡಿಕೊಟ್ಟಿದ್ದರು ಎಂದು ತಿಳಿದುಬಂದಿದೆ. ಹಾಗಾಗಿ, ಇಬ್ಬರನ್ನೂ ಅಧಿಕಾರಿಗಳು ಬಂಧಿಸಿದ್ದಾರೆ.

ಇದನ್ನೂ ಓದಿ: NEET UG Retest: ನೀಟ್‌ ಮರುಪರೀಕ್ಷೆಗೆ ಅರ್ಧದಷ್ಟು ಅಭ್ಯರ್ಥಿಗಳು ಗೈರು; ಇವರ ಭವಿಷ್ಯದ ಗತಿ ಏನು?

Continue Reading

ಕ್ರೀಡೆ

Rohit Sharma: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್

Rohit Sharma:ಇಂಗ್ಲೆಂಡ್​(IND vs ENG semifinal) ವಿರುದ್ಧದ ಸೆಮಿ ಫೈನಲ್​ ಪಂದ್ಯದಲ್ಲಿ ರೋಹಿತ್​ 4 ಬೌಂಡರಿ ಬಾರಿಸುತ್ತಿದ್ದಂತೆ ಟಿ20 ವಿಶ್ವಕಪ್​ ಕ್ರಿಕೆಟ್​ನಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ಆಟಗಾರ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಮಾಜಿ ನಾಯಕ ಮಹೇಲ ಜಯವರ್ಧನೆ ಹೆಸರಿನಲ್ಲಿತ್ತು.

VISTARANEWS.COM


on

Rohit Sharma
Koo

ಪ್ರೊವಿಡೆನ್ಸ್‌: ಟೀಮ್​ ಇಂಡಿಯಾದ ನಾಯಕ, ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್​ ಶರ್ಮ(Rohit Sharma) ಅವರು ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup) ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಈ ಮೂಲಕ ಶ್ರೀಲಂಕಾದ ಮಾಜಿ ನಾಯಕ ಹಾಗೂ ಆಟಗಾರ ಮಹೇಲ ಜಯವರ್ಧನೆ(Mahela Jayawardene) ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ.

ಇಲ್ಲಿನ ಪ್ರೊವಿಡೆನ್ಸ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್​(IND vs ENG semifinal) ವಿರುದ್ಧದ ಸೆಮಿ ಫೈನಲ್​ ಪಂದ್ಯದಲ್ಲಿ ರೋಹಿತ್​ 4 ಬೌಂಡರಿ ಬಾರಿಸುತ್ತಿದ್ದಂತೆ ಟಿ20 ವಿಶ್ವಕಪ್​ ಕ್ರಿಕೆಟ್​ನಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ಆಟಗಾರ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಮಾಜಿ ನಾಯಕ ಮಹೇಲ ಜಯವರ್ಧನೆ ಹೆಸರಿನಲ್ಲಿತ್ತು. ಜಯವರ್ಧನೆ 111 ಬೌಂಡರಿ ಬಾರಿಸಿದ್ದರು. ಈ ದಾಖಲೆಯನ್ನು ರೋಹಿತ್​ ಹಿಂದಿಕ್ಕಿದ್ದಾರೆ. ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ರೋಹಿತ್​ ಅವರ ಬೌಂಡರಿಗಳ ಸಂಖ್ಯೆ 91 ಇತ್ತು. ಸದ್ಯ ರೋಹಿತ್​ 26 ಎಸೆತಗಳಿಂದ 37 ರನ್​ ಗಳಿಸಿ ಬ್ಯಾಟಿಂಗ್​ ಕಾಯ್ದುಕೊಂಡಿದ್ದಾರೆ. ಮಳೆಯಿಂದಾಗಿ ಪಂದ್ಯ ಸದ್ಯಕ್ಕೆ ಸ್ಥಗಿತಗೊಂಡಿದೆ.

ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ಬ್ಯಾಟರ್​ಗಳು

ಆಟಗಾರದೇಶಇನಿಂಗ್ಸ್​ಬೌಂಡರಿ
ರೋಹಿತ್​ ಶರ್ಮಭಾರತ46113*
ಮಹೇಲಾ ಜಯವರ್ಧನೆಶ್ರೀಲಂಕಾ31111
ವಿರಾಟ್​​ ಕೊಹ್ಲಿಭಾರತ33105
ಡೇವಿಡ್​ ವಾರ್ನರ್​ಆಸ್ಟ್ರೇಲಿಯಾ41101
ತಿಲಕರತ್ನೆ ದಿಲ್ಶನ್ಶ್ರೀಲಂಕಾ35101
ಜಾಸ್​ ಬಟ್ಲರ್​ಇಂಗ್ಲೆಂಡ್3487*
ಕ್ರಿಸ್​ ಗೇಲ್​​ವೆಸ್ಟ್​ ಇಂಡೀಸ್​3178
ಶಕೀಬ್​ ಅಲ್​ ಹಸನ್​ಬಾಂಗ್ಲಾದೇಶ​4374*
ಕೇನ್​ ವಿಲಿಯಮ್ಸನ್​ನ್ಯೂಜಿಲ್ಯಾಂಡ್2971*
ಬ್ರೆಂಡನ್​ ಮೆಕಲಮ್​ನ್ಯೂಜಿಲ್ಯಾಂಡ್2567

ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಭಾರತ ಸದ್ಯ 8 ಓವರ್​ಗೆ 2 ವಿಕೆಟ್​ ಕಳೆದುಕೊಂಡು 65 ರನ್​ ಗಳಿಸಿದೆ. ರೋಹಿತ್​ ಮತ್ತು ಸೂರ್ಯಕುಮಾರ್​ ಬ್ಯಾಟಿಂಗ್​ ಕಾಯ್ದುಕೊಂಡಿದ್ದಾರೆ. ವಿರಾಟ್​ ಕೊಹ್ಲಿ 9 ರನ್​ಗೆ ವಿಕೆಟ್​ ಕಳೆದುಕೊಂಡು ಈ ಪಂದ್ಯದಲ್ಲಿಯೂ ಘೋರ ಬ್ಯಾಟಿಂಗ್​ ವೈಫಲ್ಯ ಎದುರಿಸಿದರು. ಪಂತ್​ ಆಟ 4 ರನ್​ಗೆ ಕೊನೆಗೊಂಡಿತು.

ಇದನ್ನೂ ಓದಿ IND vs ENG: ಸೆಮಿ ಪಂದ್ಯಕ್ಕೂ ಮುನ್ನ ಬಿಸಿಸಿಐ ವಿರುದ್ಧ ಗಂಭೀರ ಆರೋಪ ಮಾಡಿದ ಮಾಜಿ ನಾಯಕ

2014, 2016, 2022ರಲ್ಲಿ ಭಾರತ ಆಡಿದ ಎಲ್ಲ ಟಿ20 ವಿಶ್ವಕಪ್​ ಸೆಮಿಫೈನಲ್​ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅರ್ಥಶತಕ ಬಾರಿಸಿ ಮಿಂಚಿದ್ದರು. ಆದರೆ, ಈ ಬಾರಿ ಒಂದಂಕಿಗೆ ಸೀಮಿತರಾದರು. ಜತೆಗೆ ಈ ಬಾರಿ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಕೊಹ್ಲಿ ಬ್ಯಾಟಿಂಗ್​ ವೈಫಲ್ಯ ಕಂಡಂತಾಯಿತು. ಇಂಗ್ಲೆಂಡ್​ ವಿರುದ್ಧ 9 ಎಸೆತಗಳಲ್ಲಿ 9 ರನ್​ ಬಾರಿಸಿ ಟಾಪ್ಲಿ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ವಿಕೆಟ್​ ಕಳೆದುಕೊಂಡು ಡಗೌಟ್​ನಲ್ಲಿ​ ಹತಾಶರಾಗಿ ಕುಳಿತಿದ್ದ ವಿರಾಟ್​ ಕೊಹ್ಲಿಯನ್ನು ಕೋಚ್​ ರಾಹುಲ್​ ದ್ರಾವಿಡ್​ ಬಂದು ಸಮಾಧಾನ ಪಡಿಸಿದರು. ಈ ವಿಡಿಯೊವೊಂದು ವೈರಲ್​ ಆಗಿದೆ.

Continue Reading

ಪ್ರಮುಖ ಸುದ್ದಿ

DK Shivakumar: ಸಿಎಂ ಬದಲಾವಣೆ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಡಿ.ಕೆ. ಶಿವಕುಮಾರ್

DK Shivakumar: ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂಬ ಚಂದ್ರಶೇಖರನಾಥ ಸ್ವಾಮೀಜಿಯವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಉತ್ಸಾಹದಲ್ಲಿ ಕೆಲವರು ಹೀಗೆ ಮಾತನಾಡುತ್ತಾರೆ. ರಾಜಕಾರಣದಲ್ಲಿ ಅಭಿಮಾನಪೂರ್ವಕವಾಗಿ ಇಂತಹ ಹೇಳಿಕೆಗಳನ್ನು ಮಧ್ಯೆ ಮಧ್ಯೆ ನೀಡುವುದು ಸಹಜ ಎಂದಿದ್ದಾರೆ.

VISTARANEWS.COM


on

DCM DK Shivakumar latest statement about CM change issue
Koo

ನವದೆಹಲಿ: ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ದೆಹಲಿಯಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂಬ ಚಂದ್ರಶೇಖರನಾಥ ಸ್ವಾಮೀಜಿಯವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಉತ್ಸಾಹದಲ್ಲಿ ಕೆಲವರು ಹೀಗೆ ಮಾತನಾಡುತ್ತಾರೆ. ರಾಜಕಾರಣದಲ್ಲಿ ಅಭಿಮಾನಪೂರ್ವಕವಾಗಿ ಇಂತಹ ಹೇಳಿಕೆಗಳನ್ನು ಮಧ್ಯೆ ಮಧ್ಯೆ ನೀಡುವುದು ಸಹಜ. ಅವರ ಮಾತಿಗೆ ಹೆಚ್ಚು ಗಮನ ಕೊಡಬಾರದು. ಪಕ್ಷದ ತೀರ್ಮಾನವೇ ಅಂತಿಮ ಎಂದು ತಿಳಿಸಿದರು.

ಇದನ್ನೂ ಓದಿ: DK Shivakumar: ಹೆಚ್ಚುವರಿ ಡಿಸಿಎಂ ಹುದ್ದೆಗೆ ಹೈಕಮಾಂಡ್ ಬಳಿ ಹೋಗಲಿ; ಡಿ.ಕೆ. ಶಿವಕುಮಾರ್

ಸಚಿವ ಸ್ಥಾನ ಬಿಡಲು ಸಿದ್ಧ, ತಮ್ಮನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿ ಎಂಬ ರಾಜಣ್ಣ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಅದಕ್ಕೆ ಉತ್ತರ ಕೊಡುತ್ತೇವೆ ಎಂದರು.

ನೆಲ, ಜಲ, ಭಾಷೆ ಉಳಿವಿಗಾಗಿ ಸಂಸದರ ಜತೆ ಚರ್ಚೆ

ದೆಹಲಿ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌, ಕರ್ನಾಟಕ ರಾಜ್ಯದಿಂದ ನೂತನವಾಗಿ ಆಯ್ಕೆಯಾಗಿರುವ ಸಂಸದರು ಹಾಗೂ ರಾಜ್ಯಸಭಾ ಸದಸ್ಯರನ್ನು ಭೇಟಿ ಮಾಡಿ, ನಮ್ಮ ರಾಜ್ಯದಲ್ಲಿ ಬಾಕಿ ಉಳಿದಿರುವ ಕೇಂದ್ರದ ಯೋಜನೆಗಳು, ಅನುದಾನ ಬಾಕಿ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯದ ಹಿತಕ್ಕಾಗಿ ಸಂಸತ್ ಕಲಾಪದಲ್ಲಿ ಹೋರಾಟ ಮಾಡುವಂತೆ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: Lakshmi Hebbalkar: ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ: ಹೆಬ್ಬಾಳಕರ್

ಇಷ್ಟು ದಿನ ರಾಜಕಾರಣವಾಯಿತು. ಈಗ ರಾಜ್ಯದ ಅಭಿವೃದ್ಧಿಗಾಗಿ, ನೆಲ, ಜಲ, ಭಾಷೆ, ಸಂಸ್ಕೃತಿಯ ಉಳಿವಿಗಾಗಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು. ಈ ವಿಚಾರವನ್ನು ಸಂಸದರ ಗಮನಕ್ಕೆ ತರಲಾಗುವುದು. ಒಗ್ಗಟ್ಟಿನಿಂದ ರಾಜ್ಯದ ಹಿತಕ್ಕಾಗಿ ದುಡಿಯುತ್ತಾರೆ ಎನ್ನುವ ನಂಬಿಕೆಯಿದೆ ಎಂದು ಹೇಳಿದರು.

Continue Reading

ಪ್ರಮುಖ ಸುದ್ದಿ

Hosur Airport: ಬೆಂಗಳೂರಿನಿಂದ ಕೇವಲ 40 ಕಿ.ಮೀ ದೂರದ ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌!

Hosur Airport: ಹೂಸೂರು, ಕೃಷ್ಣಗಿರಿ ಹಾಗೂ ಧರ್ಮಪುರಿಯಲ್ಲಿ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಕೈಗೊಳ್ಳಲು ಹೊಸೂರಿನಲ್ಲಿ ವಿಮಾನ ನಿಲ್ದಾಣದ ನಿರ್ಮಾಣವು ಅತ್ಯವಶ್ಯಕವಾಗಿದೆ ಎಂಬುದಾಗಿ ತಮಿಳುನಾಡು ವಿಧಾನಸಭೆಯಲ್ಲಿ ಎಂ.ಕೆ.ಸ್ಟಾಲಿನ್‌ ಘೋಷಣೆ ಮಾಡಿದ್ದಾರೆ. ಸುಮಾರು 2 ಸಾವಿರ ಎಕರೆಯಲ್ಲಿ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಗುರಿ ಹೊಂದಲಾಗಿದೆ.

VISTARANEWS.COM


on

Hosur Airport
Koo

ಚೆನ್ನೈ: ಕರ್ನಾಟಕದ ಬೆಂಗಳೂರಿನಿಂದ (Bengaluru) ಕೇವಲ 4೦ ಕಿಲೋಮೀಟರ್‌ ದೂರದಲ್ಲಿರುವ, ತಮಿಳುನಾಡಿನ (Tamil Nadu) ಹೊಸೂರಿನಲ್ಲಿ ನೂತನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Hosur Airport) ನಿರ್ಮಿಸಲಾಗುವುದು ಎಂಬುದಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ (MK Stalin) ಘೋಷಣೆ ಮಾಡಿದ್ದಾರೆ. ಇದರಿಂದ ಬೆಂಗಳೂರಿನ ಜನತೆಗೂ ಅನುಕೂಲವಾಗಲಿದೆ ಎಂಬುದು ಗಮನಾರ್ಹ ಸಂಗತಿಯಾಗಿದೆ. ಬೆಂಗಳೂರಿನಲ್ಲಿಯೇ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸುವ ಕುರಿತು ಸಚಿವ ಎಂ.ಬಿ.ಪಾಟೀಲ್‌ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬೆನ್ನಲ್ಲೇ ಎಂ.ಕೆ.ಸ್ಟಾಲಿನ್‌ ಅವರು ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌ ನಿರ್ಮಿಸಲಾಗುವುದು ಎಂಬುದಾಗಿ ಘೋಷಣೆ ಮಾಡಿದ್ದಾರೆ.

“ಇತ್ತೀಚಿನ ವರ್ಷಗಳಲ್ಲಿ ಹೊಸೂರು ಹೆಚ್ಚಿನ ಪ್ರಮಾಣದ ಹೂಡಿಕೆಯನ್ನು ಆಕರ್ಷಿಸುತ್ತಿದೆ. ಹಾಗಾಗಿ, ಹೊಸೂರಿನಲ್ಲಿ ಹಲವು ಆಧುನಿಕ ಮೂಲ ಸೌಕರ್ಯ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅದನ್ನು ಆರ್ಥಿಕ ಕೇಂದ್ರವನ್ನಾಗಿ ರೂಪಿಸುವ ಗುರಿ ಇದೆ. ಹೊಸೂರಿಗಾಗಿ ಹೊಸ ಮಾಸ್ಟರ್‌ ಪ್ಲಾನ್‌ ಕೂಡ ಅಂತಿಮ ಹಂತಕ್ಕೆ ಬಂದಿದೆ. ಹೂಸೂರು, ಕೃಷ್ಣಗಿರಿ ಹಾಗೂ ಧರ್ಮಪುರಿಯಲ್ಲಿ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಕೈಗೊಳ್ಳಲು ಹೊಸೂರಿನಲ್ಲಿ ವಿಮಾನ ನಿಲ್ದಾಣದ ನಿರ್ಮಾಣವು ಅತ್ಯವಶ್ಯಕವಾಗಿದೆ” ಎಂಬುದಾಗಿ ವಿಧಾನಸಭೆಯಲ್ಲಿ ಎಂ.ಕೆ.ಸ್ಟಾಲಿನ್‌ ತಿಳಿಸಿದರು.

MK Stalin

ಹೊಸೂರಿನಲ್ಲಿ ಸುಮಾರು 2 ಸಾವಿರ ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ವಿಮಾನ ನಿಲ್ದಾಣ ನಿರ್ಮಿಸಲಾಗುವುದು. ವರ್ಷಕ್ಕೆ ಸುಮಾರು 3 ಕೋಟಿ ಪ್ರಯಾಣಿಕರನ್ನು ನಿರ್ವಹಿಸುವ ರೀತಿಯಲ್ಲಿ ಏರ್‌ಪೋರ್ಟ್‌ ನಿರ್ಮಿಸಲಾಗುತ್ತದೆ ಎಂಬುದಾಗಿ ಅವರು ಹೇಳಿದ್ದಾರೆ. ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌ ನಿರ್ಮಾಣವಾದರೆ ಬೆಂಗಳೂರಿನ ಕೋರಮಂಗಲ, ಎಲೆಕ್ಟ್ರಾನಿಕ್‌ ಸಿಟಿ ಸೇರಿ ಹಲವು ನಗರಗಳ ನಾಗರಿಕರಿಗೆ ಭಾರಿ ಅನುಕೂಲವಾಗಲಿದೆ. ಹಾಗಾಗಿ, ಹೊಸೂರು ವಿಮಾನ ನಿಲ್ದಾಣದ ನಿರ್ಮಾಣವು ಪ್ರಮುಖ ಸಂಗತಿಯಾಗಿದೆ.

2033ರ ನಂತರವೇ ಚಾಲನೆ?

ಹೊಸೂರಿನಲ್ಲಿ ಈಗಾಗಲೇ ತನೇಜಾ ಏರೋಸ್ಪೇಸ್‌ ಮತ್ತು ಏವಿಯೇಷನ್‌ ಲಿಮಿಟೆಡ್‌ (TAAL) ಕಂಪನಿಯು ಥಾಲಿ ವಿಮಾನ ನಿಲ್ದಾಣವನ್ನು ನಿರ್ವಹಿಸುತ್ತಿದೆ. ಆದರೆ, ಕೇಂದ್ರ ಸರ್ಕಾರ ಹಾಗೂ ಬೆಂಗಳೂರು ವಿಮಾನ ನಿಲ್ದಾಣದ ನಡುವೆ ಒಪ್ಪಂದ ಮಾಡಿಕೊಂಡ ಕಾರಣ ಥಾಲಿ ವಿಮಾನ ನಿಲ್ದಾಣದಿಂದ ವಾಣಿಜ್ಯಿಕ ವಿಮಾನಗಳ ಹಾರಾಟ ಸಾಧ್ಯವಾಗಿಲ್ಲ. ಬೆಂಗಳೂರು ವಿಮಾನ ನಿಲ್ದಾಣದಿಂದ 150 ಕಿಲೋಮೀಟರ್‌ ವೈಮಾನಿಕ ಮಾರ್ಗದ ಅಂತರದಲ್ಲಿ 25 ವರ್ಷ ಯಾವುದೇ ಹೊಸ ಏರ್‌ಪೋರ್ಟ್‌ ನಿರ್ಮಾಣ ಮಾಡುವಂತಿಲ್ಲ ಎಂಬುದು ಒಪ್ಪಂದವಾಗಿದೆ. ಹಾಗಾಗಿ ಒಪ್ಪಂದದ ಪ್ರಕಾರ, ಹೊಸೂರಿನಲ್ಲಿ 2033ರ ನಂತರವೇ ವಿಮಾನ ಹಾರಾಟವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. 2008ರಲ್ಲಿ ಬೆಂಗಳೂರು ವಿಮಾನ ನಿಲ್ದಾಣದ ಕಾರ್ಯಾಚರಣೆ ಆರಂಭವಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊಸೂರಿಗೆ 86 ಕಿಲೋಮೀಟರ್‌ ಅಂತರ ಇದೆ.

ಇದನ್ನೂ ಓದಿ: Electric Airport Taxi : ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇನ್ಮುಂದೆ ಮಹಿಳೆಯರಿಗಾಗಿ ಗುಲಾಬಿ ಟ್ಯಾಕ್ಸಿ

Continue Reading
Advertisement
NEET Aspirant
ದೇಶ32 mins ago

NEET Aspirant: ನೀಟ್‌ ಅಕ್ರಮ ಬಯಲಾದ ಬೆನ್ನಲ್ಲೇ 17 ವರ್ಷದ NEET ಅಭ್ಯರ್ಥಿ ಆತ್ಮಹತ್ಯೆ; ಸಾವಿಗೆ ಯಾರು ಹೊಣೆ?

Tata Motors has taken the lead in the SUV market with Nexon Punch
ಕರ್ನಾಟಕ57 mins ago

Tata Motors: ನೆಕ್ಸಾನ್, ಪಂಚ್‌ ಮೂಲಕ ಎಸ್‌ಯುವಿ ಮಾರುಕಟ್ಟೆಯಲ್ಲಿ ಮುನ್ನಡೆ ಸಾಧಿಸಿದ ಟಾಟಾ ಮೋಟಾರ್ಸ್

Rohit Sharma
ಕ್ರೀಡೆ59 mins ago

Rohit Sharma: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್

virat kohli
ಕ್ರೀಡೆ1 hour ago

Virat Kohli: ಮೊದಲ ಬಾರಿಗೆ ಸೆಮಿಫೈನಲ್​ನಲ್ಲಿ ಸಿಂಗಲ್​ ಡಿಜಿಟ್​ಗೆ ಔಟ್​ ಆದ​ ಕೊಹ್ಲಿ; ಸಮಾಧಾನಪಡಿಸಿದ ಕೋಚ್​

DCM DK Shivakumar latest statement about CM change issue
ಪ್ರಮುಖ ಸುದ್ದಿ2 hours ago

DK Shivakumar: ಸಿಎಂ ಬದಲಾವಣೆ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಡಿ.ಕೆ. ಶಿವಕುಮಾರ್

roopantara Movie First Look Poster released
ಕರ್ನಾಟಕ2 hours ago

Kannada New Movie: ‘ರೂಪಾಂತರ’ಗೊಂಡ ರಾಜ್ ಬಿ. ಶೆಟ್ಟಿ! ಮತ್ತೊಂದು ವಿಭಿನ್ನ ಚಿತ್ರ

Hosur Airport
ಪ್ರಮುಖ ಸುದ್ದಿ2 hours ago

Hosur Airport: ಬೆಂಗಳೂರಿನಿಂದ ಕೇವಲ 40 ಕಿ.ಮೀ ದೂರದ ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌!

Sudipa Chatterjee
ದೇಶ2 hours ago

Sudipa Chatterjee: ಗೋಮಾಂಸ ಸೇವನೆಗೆ ಪ್ರಚಾರ- TMC ನಾಯಕ ಬಬೂಲ್‌ ಸುಪ್ರಿಯೋ ಆಪ್ತೆ, ಬೆಂಗಾಳಿ ನಟಿಗೆ ಜೀವ ಬೆದರಿಕೆ

Kalki 2898AD
ಸಿನಿಮಾ2 hours ago

Kalki 2898AD: ಕಲಿಯುಗದಲ್ಲಿ ʼಕಲ್ಕಿʼಯ ಆಗಮನದ ಚರ್ಚೆ ಹುಟ್ಟು ಹಾಕಿದ ‘ಕಲ್ಕಿ 2898ಎಡಿ’ ಸಿನಿಮಾ!

Agumbe Ghats
ಕರ್ನಾಟಕ3 hours ago

Agumbe Ghat: ಭಾರಿ ಮಳೆ; ಸೆ.15ರವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ4 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು7 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ11 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌