ವಿಸ್ತಾರ ಸಂಪಾದಕೀಯ : ಅಧಿಕಾರಿಗಳು ಮಾದರಿಯಾಗಿರಲಿ, ಹುದ್ದೆಯ ಘನತೆ ಕಾಪಾಡಲಿ - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ : ಅಧಿಕಾರಿಗಳು ಮಾದರಿಯಾಗಿರಲಿ, ಹುದ್ದೆಯ ಘನತೆ ಕಾಪಾಡಲಿ

ಜನರ ಸಮಸ್ಯೆಗಳಿಗೆ ಸ್ಪಂದಿಸಲು, ಬಗೆಹರಿಸಲು ಐಎಎಸ್-ಐಪಿಎಸ್ ಅಧಿಕಾರಿಗಳಿಗೆ 24 ಗಂಟೆಗಳೂ ಸಾಲದು. ಹೀಗಿರುವಾಗ ಇಂಥ ತುಂಟಾಟ ನಡೆಸಲು ಇವರಿಗೆ ಸಮಯ ಸಿಗುವುದೇ ಅಚ್ಚರಿ! ಸರ್ಕಾರ ಈ ಪ್ರಕರಣದ ಬಗ್ಗೆ ತನಿಖೆ ನಡೆಸಿ, ಅಧಿಕಾರಿಗಳಿಗೆ ಶಿಸ್ತಿನ ಪಾಠ ಕಲಿಸಬೇಕು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಜ್ಯದ ಹಿರಿಯ ಮಹಿಳಾ ಅಧಿಕಾರಿಗಳಿಬ್ಬರ (senior officer) ಗುದ್ದಾಟ ಇದೀಗ ಸಾರ್ವಜನಿಕ ಚರ್ಚೆಯ ವಿಷಯವಾಗಿದೆ. ಐಎಎಸ್‌ ಅಧಿಕಾರಿಯೊಬ್ಬರ ವೈಯಕ್ತಿಕವೆನಿಸಬಹುದಾದ ವಿಷಯವನ್ನು ಇನ್ನೊಬ್ಬ ಐಪಿಎಸ್‌ ಅಧಿಕಾರಿ ಸಾಮಾಜಿಕ ಜಾಲತಾಣದಲ್ಲಿ ಹಂಚುವುದರ ಮೂಲಕ ಆರಂಭವಾದ ಈ ವಿಚಾರ, ಐಎಎಸ್‌ ಅಧಿಕಾರಿಯ ಹಿಂದಿನ ಹಲವು ಪ್ರಕರಣಗಳಿಗೆ ತಳುಕು ಹಾಕಿಕೊಂಡು ವಿಭಿನ್ನ ಆಯಾಮ ಪಡೆದಿದೆ. ಇದೀಗ ಈ ಪ್ರಕರಣ, ಅಧಿಕಾರಿಗಳ ಮೇಲಿನ ನಿಯಂತ್ರಣವನ್ನು ಹೊಂದಿರುವ ಮುಖ್ಯ ಕಾರ್ಯದರ್ಶಿಯವರೆಗೆ ತಲುಪಿದ್ದು, ಕರ್ತವ್ಯಚ್ಯುತಿ ತೋರದಂತೆ ಹಾಗೂ ಸಾರ್ವಜನಿಕ ನಡವಳಿಕೆಯ ಘನತೆ ಕಾಪಾಡಿಕೊಳ್ಳುವಂತೆ ಸಚಿವರುಗಳಿಂದಲೂ ಪಾಠ ಹೇಳಿಸಿಕೊಳ್ಳುವವರೆಗೆ ಹೋಗಿದೆ. ಇಬ್ಬರೂ ಹಿರಿಯ ಅಧಿಕಾರಿಗಳು, ತಮ್ಮ ಕರ್ತವ್ಯ, ಹೊಣೆಗಾರಿಕೆ, ಸ್ಥಾನಮಾನಗಳ ಸಂಪೂರ್ಣ ಅರಿವು ಹೊಂದಿರುವವರು. ಇಂಥವವರು ಹೀಗೆ ಜನತೆಯ ಮುಂದೆ ಕ್ಷುಲ್ಲಕವೆನಿಸುವಂತೆ ನಡೆದುಕೊಂಡಿರುವುದು ಸರಿಯಲ್ಲ.

ಇಲ್ಲಿ ಬಂದಿರುವ ಆರೋಪಗಳು, ಅವು ನಿಜವೋ ಅಲ್ಲವೋ, ಅದರಲ್ಲಿ ಸಾರ್ವಜನಿಕ ಹಿತಾಸಕ್ತಿ ಏನಾದರೂ ಇದೆಯೇ ಇಲ್ಲವೇ, ಎಂಬುದೆಲ್ಲ ಅದಕ್ಕೇ ಸೂಕ್ತವಾದ ಸಾಂವಿಧಾನಿಕ ಸಂಸ್ಥೆಯೊಳಗಡೆ ವಿಚಾರಣೆಯಾಗಬೇಕಾದುದು. ಒಂದೇ ಇಲಾಖೆಯ ಹಲವು ಅಧಿಕಾರಿಗಳ ನಡುವೆ ಸೀನಿಯಾರಿಟಿ, ಬಡ್ತಿ ಮತ್ತಿತರ ವಿಚಾರಗಳಲ್ಲಿ ತಗಾದೆಗಳಿರುವುದೂ, ಅಂಥವರು ಕೋರ್ಟ್‌ ಮೆಟ್ಟಿಲು ಹತ್ತುವುದೂ ಸಾಮಾನ್ಯ. ಆದರೆ ಇದು ಸಾರ್ವಜನಿಕರಿಗೆ ತೊಂದರೆಯಾಗುವಂತೆಯೋ, ಒಟ್ಟು ಕಾರ್ಯಾಂಗದ ಘನತೆಯನ್ನು ಹಾಳುಗೆಡವುವಂತೆಯೂ ಇದ್ದರೆ ಅಂಥದ್ದು ಆಕ್ಷೇಪಾರ್ಹ. ಐಎಎಸ್‌ ಹಾಗೂ ಐಪಿಎಸ್ ಅಧಿಕಾರಿಗಳು ಮಾದರಿಯಾಗಿರಬೇಕು, ತಮ್ಮ ಹುದ್ದೆಯ ಘನತೆಯನ್ನು ಕಾಪಾಡಿಕೊಳ್ಳಬೇಕು. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಇಡೀ ಜಿಲ್ಲೆಗೇ ಮುಖ್ಯಸ್ಥರು, ಹಿರಿಯ ಅಧಿಕಾರಿಗಳಂತೂ ಒಂದಿಡೀ ಇಲಾಖೆಗೇ ಮುಖ್ಯಸ್ಥರು. ಇವರೇ ಜನಸಾಮಾನ್ಯರ ಎದುರು ನಗೆಪಾಟಲಿಗೀಡಾಗಬಾರದು. ಇದು ಮೇಲ್ನೋಟಕ್ಕೆ ಅಧಿಕಾರಿಗಳ ವೈಯಕ್ತಿಕ ಜಗಳ ಅನಿಸಿದರೂ, ಇದರಿಂದ ಆಡಳಿತ ವ್ಯವಸ್ಥೆ ಮೇಲೂ ಪರಿಣಾಮ ಬೀರುತ್ತದೆ ಎನ್ನುವುದನ್ನು ಮರೆಯಬಾರದು.

ಹಾನರಬಲ್ ಈಸ್ಟ್ ಇಂಡಿಯಾ ಕಂಪನೀಸ್ ಸಿವಿಲ್ ಸರ್ವೀಸ್‌ನ (ಎಚ್‍ಇಐಸಿಸಿಎಸ್) ಬಳುವಳಿಯೇ ಆಗಿರುವ ಇಂದಿನ ಐಎಎಸ್ ಎಂಬ ಉನ್ನತ ಸರಕಾರಿ ಹುದ್ದೆ ಸ್ವಾತಂತ್ರ್ಯಪೂರ್ವದಿಂದಲೂ ಪ್ರತಿಭಾವಂತರನ್ನು ಆಕರ್ಷಿಸುತ್ತಿದೆ. ಈಗಲೂ ಅಂಥ ಖದರನ್ನು ಉಳಿಸಿಕೊಂಡಿದೆ. ಜೀವನದಲ್ಲಿ ಒಮ್ಮೆ ಯುಪಿಎಸ್ಸಿ ನಡೆಸುವ ಪರೀಕ್ಷೆ ಬರೆದು ಉತ್ತೀರ್ಣರಾದರೆ, ಮುಂದೆ ಮೂರು ದಶಕ ಯಾವುದೇ ಪರೀಕ್ಷೆ ಬರೆಯದೇ ಸರಕಾರದ ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸಬಹುದು; ಚುನಾಯಿತ ಸರಕಾರಗಳು, ಆಳುವ ಮಂದಿ ಐದು ವರುಷಕ್ಕೊಮ್ಮೆ ಬದಲಾದರೂ- ತಾವು ಕಾರ್ಯಾಂಗದ ಆಯಕಟ್ಟಿನಲ್ಲಿ ನಿವೃತ್ತಿವರೆಗೆ ಇರಬಹುದು ಎಂಬ ಸಂಗತಿಗಳು ಇದರ ಸೆಳೆತಕ್ಕೆ ಕಾರಣ. ಆದರೆ ಈ ಅನುಕೂಲ, ಐಷಾರಾಮಿಗಳು ಕೆಲವು ಅಧಿಕಾರಿಗಳನ್ನು ಜನರಿಂದ ದೂರ ಸರಿದು ತಮ್ಮದೇ ದಂತದ ಕೋಟೆಗಳಲ್ಲಿ ಇರುವಂತೆಯೂ, ಜನರಿಗೆ ಸ್ಪಂದಿಸದೆ ತಮ್ಮ ಕ್ಷುದ್ರ ತಿಕ್ಕಾಟಗಳನ್ನು ನಡೆಸುವುದಕ್ಕೆ ಹಾಕಿಕೊಟ್ಟ ರಹದಾರಿಯಂತೆಯೂ ಕಾಣಿಸುತ್ತವೆ. ಈ ಪ್ರಕರಣದಲ್ಲಿ ಇಂಥದೊಂದು ಆಯಾಮವೂ ಸೇರಿಕೊಂಡಂತಿದೆ. ಇದನ್ನು ಇವರಿಗಿಂತ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗಮನಿಸಿ ತಕ್ಕ ಬುದ್ಧಿ ಹೇಳಬೇಕಾಗಿದೆ.

ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ಬಾಹ್ಯಾಕಾಶ ಸೇರಿದ ಮಕ್ಕಳ ಉಪಗ್ರಹಗಳು, ಭಾರತದ ಸಾಧನೆಗೆ ಮತ್ತೊಂದು ಗರಿ

ಭಾರತೀಯ ನಾಗರಿಕ ಸೇವೆ(ಐಎಎಸ್/ಐಪಿಎಸ್) ಅಧಿಕಾರಿಗಳು ಎಂದರೆ ಕಾರ್ಯಾಂಗದ ಪ್ರಮುಖ ಭಾಗ. ಶಾಸಕಾಂಗ ರೂಪಿಸುವ ಎಲ್ಲ ಯೋಜನೆ, ಕಾನೂನು-ಕಟ್ಟಳೆಗಳನ್ನು ಜಾರಿಗೆ ತರುವ ದೊಡ್ಡ ಹೊಣೆಗಾರಿಕೆಯನ್ನು ಕಾರ್ಯಾಂಗದ ಮಂದಿ ಹೊಂದಿದ್ದಾರೆ. ಇದರಿಂದ ಇವರಿಗೆ ಸುಗಮ ಆಡಳಿತ ನಡೆಸಲು, ಜನರ ಸಮಸ್ಯೆಗೆ ಸ್ಪಂದಿಸಲು, ಅವರ ಸಮಸ್ಯೆ ಬಗೆಹರಿಸಲು ದಿನದ 24 ಗಂಟೆಯೂ ಸಾಲದು. ಹೀಗಿರುವಾಗ ಇಂಥ ತುಂಟಾಟ ನಡೆಸಲು ಹಿರಿಯ ಅಧಿಕಾರಿಗಳಿಗೆ ಸಮಯ ಸಿಗುವುದೇ ಅಚ್ಚರಿ! ಸರ್ಕಾರ ಈ ಪ್ರಕರಣದ ಬಗ್ಗೆ ತನಿಖೆ ನಡೆಸಿ, ಅಧಿಕಾರಿಗಳಿಗೆ ಶಿಸ್ತಿನ ಪಾಠ ಕಲಿಸಬೇಕು. ಯಾಕೆಂದರೆ ಐಎಎಸ್‌ ಅಧಿಕಾರಿವರ್ಗ ಅಪರಿಮಿತ ಅಧಿಕಾರ ಹೊಂದಿದೆಯಾದರೂ ಸಂಪೂರ್ಣ ಸ್ವಾಯತ್ತವೇನಲ್ಲ. ಹಾಗೆಯೇ ಅಧಿಕಾರಿಗಳು ಕರ್ತವ್ಯಭ್ರಷ್ಟತೆ ತೋರಿದರೆ, ತಮ್ಮ ಶಿಸ್ತಿನಿಂದ ವಿಚಲಿತರಾದರೆ, ಜನಪ್ರತಿನಿಧಿಗಳು ಅವರ ಮೇಲೆ ಸವಾರಿ ಮಾಡಲೂ ಸಾಧ್ಯವಾಗುತ್ತದೆ. ಅಂಥ ಬೆಳವಣಿಗೆಯೂ ಆಗಕೂಡದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Aaron Jones: 17 ವರ್ಷಗಳ ಹಿಂದಿನ ಟಿ20 ವಿಶ್ವಕಪ್​ ದಾಖಲೆ ಸರಿಗಟ್ಟಿದ ಯುಎಸ್​ಎ ಬ್ಯಾಟರ್​ ಆರೋನ್ ಜೋನ್ಸ್

Aaron Jones: 4ನೇ ಕ್ರಮಾಂಕದಲ್ಲಿ ಆಡಲಿಳಿದ ಆರೋನ್ ಜೋನ್ಸ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ ನಡೆಸಿ ಕೆನಡಾ ಬೌಲರ್​ಗಳ ಬೆವರಿಳಿಸಿದರು. ಸಿಕ್ಸರ್​ ಮತ್ತು ಬೌಂಡರಿಗಳ ಮೂಲಕ ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಬಡಿದಟ್ಟಿ ನೆರದಿದ್ದ ಸ್ಥಳೀಯ ಅಭಿಮಾನಿಗಳಿಗೆ ಭರಪೂರ ರಂಜನೆ ಒದಗಿಸಿದರು.

VISTARANEWS.COM


on

Aaron Jones
Koo

ನ್ಯೂಯಾರ್ಕ್​: ಕೆನಡಾ(CAN vs USA) ವಿರುದ್ಧ ವಿಸ್ಫೋಟಕ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಸುರಿಮಳೆ ಸುರಿಸಿದ ಅಮೆರಿಕ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ ಆರೋನ್ ಜೋನ್ಸ್(Aaron Jones) ಟಿ20 ವಿಶ್ವಕಪ್(T20 World Cup)​ ಟೂರ್ನಿಯಲ್ಲಿ ದಾಖಲೆಯೊಂದನ್ನು ಬರೆದಿದ್ದಾರೆ. ಟಿ20 ವಿಶ್ವಕಪ್​ ಪಂದ್ಯವೊಂದರಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ 2ನೇ ಬ್ಯಾಟರ್​ ಎನಿಸಿಕೊಂಡಿದ್ದಾರೆ.

ಡಲ್ಲಾಸ್​ನಲ್ಲಿ ನಡೆದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಆಡಲಿಳಿದ ಆರೋನ್ ಜೋನ್ಸ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ ನಡೆಸಿ ಕೆನಡಾ ಬೌಲರ್​ಗಳ ಬೆವರಿಳಿಸಿದರು. ಸಿಕ್ಸರ್​ ಮತ್ತು ಬೌಂಡರಿಗಳ ಮೂಲಕ ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಬಡಿದಟ್ಟಿ ನೆರದಿದ್ದ ಸ್ಥಳೀಯ ಅಭಿಮಾನಿಗಳಿಗೆ ಭರಪೂರ ರಂಜನೆ ಒದಗಿಸಿದರು.

ಒಟ್ಟು 40 ಎಸೆತ ಎದುರಿಸಿದ ಆರೋನ್ ಜೋನ್ಸ್ ಅಜೇಯ 94 ರನ್​ ಬಾರಿಸಿದರು. ಇದರಲ್ಲಿ 60 ರನ್​ ಕೇವಲ ಸಿಕ್ಸರ್​ ಮೂಲಕವೇ ದಾಖಲಾಯಿತು. ಒಟ್ಟು 10 ಸಿಕ್ಸರ್​ ಮತ್ತು 4 ಬೌಂಡರಿ ಬಾರಿಸಿದರು. 10 ಸಿಕ್ಸರ್​ ಬಾರಿಸುವ ಮೂಲಕ ವೆಸ್ಟ್​ ಇಂಡೀಸ್​ನ ಮಾಜಿ ಬ್ಯಾಟರ್​ ಕ್ರಿಸ್​ ಗೇಲ್​ ದಾಖಲೆಯನ್ನು ಸರಿಗಟ್ಟಿದರು. ಕ್ರಿಸ್​ ಗೇಲ್​ 2007ರಲ್ಲಿ ಉದ್ಘಾಟನ ಆವೃತ್ತಿಯ ಟಿ20 ವಿಶ್ವಕಪ್​ನಲ್ಲಿ ದಕ್ಷಿಣ ಆಫ್ರಿಕಾ​ ವಿರುದ್ಧ 10 ಸಿಕ್ಸರ್​ ಬಾರಿಸಿದ್ದರು. ಈ ದಾಖಲೆಯನ್ನು 17ವರ್ಷಗಳ ಬಳಿಕ ಜೋನ್ಸ್ ಸರಿಗಟ್ಟಿದ್ದಾರೆ. ಪಂದ್ಯವೊಂದರಲ್ಲಿ ಅತ್ಯಧಿಕ ಸಿಕ್ಸರ್​ ದಾಖಲೆ ಇನ್ನೂ ಕೂಡ ಕ್ರಿಸ್​ ಗೇಲ್​ ಹೆಸರಿನಲ್ಲಿದೆ. 2016ರಲ್ಲಿ ಭಾರತದಲ್ಲಿ ನಡೆದಿದ್ದ ಇಂಗ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಗೇಲ್​ 11 ಸಿಕ್ಸರ್​ ಬಾರಿಸಿದ್ದರು.

ಇದನ್ನೂ ಓದಿ CAN vs USA: ಕೆನಡಾ ಪರ ಟಿ20 ವಿಶ್ವಕಪ್​ ಪಂದ್ಯವಾಡಿದ ದಾವಣಗೆರೆಯ ಶ್ರೇಯಸ್

ಟಿ20 ವಿಶ್ವಕಪ್​ ಪಂದ್ಯವೊಂದರಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರರು

ಆಟಗಾರಸಿಕ್ಸರ್​ವಿರುದ್ಧವರ್ಷ
ಕ್ರಿಸ್​ ಗೇಲ್​11ಇಂಗ್ಲೆಂಡ್​2016
ಕ್ರಿಸ್​ ಗೇಲ್​10ದಕ್ಷಿಣ ಆಫ್ರಿಕಾ2007
ಆರೋನ್ ಜೋನ್ಸ್10ಕೆನಡಾ2024
ರೀಲಿ ರೊಸೊ8ಬಾಂಗ್ಲಾದೇಶ2022

ಭರ್ಜರಿ ಗೆಲುವು ಸಾಧಿಸಿದ ಅಮೆರಿಕ


ಇಲ್ಲಿನ ಗ್ರ್ಯಾಂಡ್ ಪ್ರೈರೀ ಸ್ಟೇಡಿಯಂ, ಡಲ್ಲಾಸ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಕೆನಡಾ ತಂಡ ನವನೀತ್ ಧಲಿವಾಲ್(61) ಮತ್ತು ನಿಕೋಲಸ್ ಕಿರ್ಟನ್(51) ಅರ್ಧಶತಕದ ಬ್ಯಾಟಿಂಗ್​ ನೆರವಿನಿಂದ 5 ವಿಕೆಟ್​ಗೆ 194 ರನ್​ ಬಾರಿಸಿತು. ಜವಾಬಿತ್ತ ಅಮೆರಿಕ ಈ ಬೃಹತ್​ ಮೊತ್ತವನ್ನು 17.4 ಓವರ್​ಗಳಲ್ಲಿ ಕೇವಲ 3 ವಿಕೆಟ್​ ಕಳೆದುಕೊಂಡು 197 ರನ್​ ಬಾರಿಸಿ ಅಮೋಘ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಯುಎಸ್​ಎ ಗರಿಷ್ಠ ಮೊತ್ತ ಚೇಸ್​ ಮಾಡಿದ ದಾಖಲೆ ಬರೆಯಿತು. ಇದಕ್ಕೂ ಮುನ್ನ 168 ರನ್​ಗಳನ್ನು ಚೇಸ್ ಮಾಡಿದ್ದು ತಂಡದ ಅತ್ಯುತ್ತಮ ಸಾಧನೆಯಾಗಿತ್ತು. ಇದೀಗ ಟಿ20 ವಿಶ್ವಕಪ್​ನ ಚೊಚ್ಚಲ ಪಂದ್ಯದಲ್ಲೇ ಐತಿಹಾಸಿಕ ಗೆಲುವು ದಾಖಲಿಸಿದೆ.

Continue Reading

ಬೆಂಗಳೂರು

Education News : ನೀಟ್ ಪರೀಕ್ಷೆ ಬಳಿಕ ಎಂಜಿನಿಯರ್ ಸೀಟು ಹಂಚಿಕೆ; 1.24 ಲಕ್ಷ ಸೀಟುಗಳು ಲಭ್ಯ, ಆನ್ ಲೈನ್ ಪ್ರಕ್ರಿಯೆ

Education News : ರಾಜ್ಯದಲ್ಲಿ 1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯವಿದ್ದು, ರ‍್ಯಾಂಕ್‌ ಆಧಾರದ ಮೇಲೆ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ. ಆದರೆ ನೀಟ್ ಪರೀಕ್ಷೆ ಬಳಿಕವೇ ಎಂಜಿನಿಯರ್ ಸೀಟು ಹಂಚಿಕೆ ಮಾಡಲಾಗುವುದು ಎಂದು ಕೆಇಎ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

VISTARANEWS.COM


on

By

education News
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೀಟ್‌ ಪರೀಕ್ಷೆ ಬಳಿಕವೇ ಎಂಜಿನಿಯರ್‌ ಸೀಟು ಹಂಚಿಕೆ ಮಾಡಲಾಗುವುದು ಎಂದು ಕೆಇಎ ಕಾರ್ಯ ನಿವಾರ್ಹಕ ನಿರ್ದೇಶಕ ಪ್ರಸನ್ನ (Education News) ತಿಳಿಸಿದ್ದಾರೆ. ನೀಟ್ ಫಲಿತಾಂಶಕ್ಕೂ ಮುನ್ನವೇ ಎಂಜಿನಿಯರಿಂಗ್ ಸೀಟ್ ಹಂಚಿಕೆ ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಹೀಗಾಗಿ ಮೊದಲು ಮೆಡಿಕಲ್ ಸೀಟ್ ಹಂಚಿಕೆ ಮಾಡಿ ನಂತರ ಎಂಜಿನಿಯರಿಂಗ್ ಸೀಟ್ ಹಂಚಿಕೆ ಮಾಡಲಾಗುವುದು ಎಂದರು.

ಬೇರೆ ಬೇರೆ ಕಾಲೇಜಿನಲ್ಲಿ ಈಗಾಗಲೇ ದಾಖಲಾತಿ ಪ್ರಕ್ರಿಯೆ ಆರಂಭವಾಗಿದೆ ಎಂಬ ದೂರಿನ ಕುರಿತು ಪ್ರತಿಕ್ರಿಯಿಸಿದ ಅವರು, ಸಿಇಟಿ ಪರೀಕ್ಷೆಯಲ್ಲಿ ಒಳ್ಳೆಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸೀಟ್ ಸಿಗುತ್ತದೆ. ಸೀಟ್ ಸಿಗುವುದಿಲ್ಲ ಎಂಬ ಆತಂಕದಲ್ಲಿ ಡೋನೇಷನ್ ಕೊಟ್ಟು ಅಡ್ಮಿಶನ್ ಮಾಡಿಸಬೇಡಿ. ಒಳ್ಳೆಯ ರ‍್ಯಾಂಕ್‌ ಪಡೆದವರಿಗೆ ಒಳ್ಳೆಯ ಕಾಲೇಜು ಸಿಗುತ್ತದೆ ಎಂದರು.

ಇದನ್ನೂ ಓದಿ: KCET Result 2024: ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಲಿಂಕ್‌ ಇಲ್ಲಿದೆ

1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯ

ಇನ್ನೂ ರಾಜ್ಯದಲ್ಲಿ 1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯವಿದೆ. ರ‍್ಯಾಂಕ್‌ ಆಧಾರದ ಮೇಲೆ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ. ಇನ್ನೂ ಕಾಲೇಜು ಶುಲ್ಕವನ್ನು ನಿಗದಿ ಮಾಡಿಲ್ಲ. ಕಳೆದ ವರ್ಷ 40,110 ರೂಪಾಯಿ ಶುಲ್ಕ ಸರ್ಕಾರಿ ಕಾಲೇಜುಗಳಿಗೆ ಇತ್ತು. ಈ ಬಾರಿ ಎಷ್ಟೆಂದು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಮಾಹಿತಿ ನೀಡಿದರು.

ಆನ್‌ಲೈನ್‌ನಲ್ಲೇ ವೆರಿಫಿಕೇಶನ್‌

ಎಲ್ಲ ಪ್ರಕ್ರಿಯೆಗಳು ಆನ್ ಲೈನ್‌ನಲ್ಲೆ ನಡೆಯಲಿದೆ. ಶೇ.100 ರಷ್ಟು ಡಾಕ್ಯುಮೆಂಟ್ ಪರಿಶೀಲನೆ ಆನ್‌ಲೈನ್‌ನಲ್ಲಿ ಮಾಡಲಾಗುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳು ಕೆಇಎ ಮುಂದೆ ಬಂದು ಕ್ಯೂ ನಿಲ್ಲುವ ಅವಶ್ಯಕತೆ ಇಲ್ಲ. ಎಲ್ಲಾ ದಾಖಲಾತಿಗಳನ್ನು ಆನ್‌ಲೈನ್‌ನಲ್ಲೇ ಪರಿಶೀಲನೆ ನಡೆಯಲಿದೆ ಎಂದರು. ನಿನ್ನೆ ಶನಿವಾರ (ಜೂ.1) ಸಂಜೆ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಹಠಾತ್ ಪ್ರಕಟಿಸಿದ ಬೆನ್ನಲ್ಲೇ ಭಾನುವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನ ಸುದ್ದಿಗೋಷ್ಠಿ ನಡೆಸಿ ಎಲ್ಲ ಮಾಹಿತಿಯನ್ನು ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೀಡೆ

CAN vs USA: ಕೆನಡಾ ಪರ ಟಿ20 ವಿಶ್ವಕಪ್​ ಪಂದ್ಯವಾಡಿದ ದಾವಣಗೆರೆಯ ಶ್ರೇಯಸ್

CAN vs USA: ಇಂದು ನಡೆದ ಅಮೆರಿಕ ವಿರುದ್ಧದ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ನಡೆಸಿದ ಶ್ರೇಯಸ್ ಆಕ್ರಮಣಕಾರಿ ಬ್ಯಾಟಿಂಗ್​ ಮೂಲಕ 16 ಎಸೆತಗಳಿಂದ ಅಜೇಯ 32 ರನ್​ ಬಾರಿಸಿದರು. ಅವರ ಈ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ ತಲಾ 2 ಬೌಂಡರಿ ಮತ್ತು ಸಿಕ್ಸರ್​ ಸಿಡಿಯಿತು. 20 ರನ್​ಗಳು ಬೌಂಡರಿ ಮತ್ತು ಸಿಕ್ಸರ್​ ಮೂಲಕವೇ ದಾಖಲಾಯಿತು.

VISTARANEWS.COM


on

CAN vs USA
Koo

ನ್ಯೂಯಾರ್ಕ್​: 9ನೇ ಆವೃತ್ತಿಯ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಗೆ ಅಧಿಕೃತ ಚಾಲನೆ ಸಿಕ್ಕಿದೆ. ಇಂದು(ಭಾನುವಾರ) ನಡೆದ ಉದ್ಘಾಟನ ಪಂದ್ಯದಲ್ಲಿ ಆತಿಥೇಯ ಅಮೆರಿಕ(CAN vs USA) ತಂಡ ಕೆನಡಾ ವಿರುದ್ಧ ಭರ್ಜರಿ 7 ವಿಕೆಟ್​ಗಳ ಗೆಲುವು ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಕಂಡಿದೆ. ಕೆನಡಾ ಪರ ಕರ್ನಾಟಕದ, ದಾವಣಗೆರೆ ಮೂಲದ ಆಟಗಾರ ಶ್ರೇಯಸ್ ಮೋವಾ(Shreyas Movva) ಕೂಡ ಕಣಕ್ಕಿಳಿದು ಚೊಚ್ಚಲ ಟಿ20 ವಿಶ್ವಕಪ್​ ಪಂದ್ಯವನ್ನಾಡಿದ ಹಿರಿಮೆಗೆ ಪಾತ್ರರಾದರು.

ಕರ್ನಾಟಕ ಪರವೂ ಆಡಿದ್ದರು


ಹೌದು, 30 ವರ್ಷದ ವಿಕೆಟ್​ ಕೀಪರ್​ ಕಮ್​ ಬ್ಯಾಟರ್​ ಆಗಿರುವ ಶ್ರೇಯಸ್ ಮೋವಾ ದಾವಣಗೆರೆಯವರಾಗಿದ್ದಾರೆ. ಬಾಲ್ಯದ ದಿನದಲ್ಲಿ ಅಂದರೆ, 2006ರಲ್ಲಿ ದಾವಣಗೆರೆ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆದು, ಬಳಿಕ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ನಡೆಸುವ ಅಂತಾರಾಜ್ಯ ವಯೋಮಿತಿ ಒಳಗೊಂಡ 19 ವರ್ಷದೊಳಗಿನ, 16 ವರ್ಷದೊಳಗಿನ ಪಂದ್ಯಾವಳಿಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು.

ಕೆನಡಾ ಪೌರತ್ವ


ದಾವಣಗೆರೆಯ ಬಾಪೂಜಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ಪದವಿ ಪಡೆದ ಶ್ರೇಯಸ್, ಹೆಚ್ಚಿನ ವಿದ್ಯಾಭ್ಯಾಸಕ್ಕೆ ಕೆನಡಾಕ್ಕೆ ತರೆಳಿದರು. ಇಲ್ಲಿಯೂ ಕೂಡ ಕ್ರಿಕೆಟ್​ ನಂಟು ಬಿಡದ ಇವರು ಅಲ್ಲಿನ ಸ್ಥಳೀಯ ಕ್ರಿಕೆಟ್​ ಟೂರ್ನಿಗಳಲ್ಲಿ ಆಡುವ ಮೂಲಕ ಗಮನಸೆಳೆದಿದ್ದರು. ಬಳಿಕ ಕೆನಡಾ ದೇಶದ ಪೌರತ್ವ ಪಡೆದು ಇದೀಗ ಕೆನಡಾ ರಾಷ್ಟ್ರೀಯ ತಂಡದ ಪರ ಆಡುತ್ತಿದ್ದಾರೆ. ಇದುವರೆಗೆ 6 ಟಿ20 ಮತ್ತು 7 ಏಕದಿನ ಪಂದ್ಯಗಳನ್ನಾಡಿ ಒಟ್ಟು 171 ರನ್​ ಬಾರಿಸಿದ್ದಾರೆ. ವಿಕೆಟ್​ ಕೀಪರ್​ ಆಗಿರುವ ಇವರು ಇದೇ ವರ್ಷ ನಡೆದಿದ್ದ ನೇಪಾಳ ವಿರುದ್ಧದ ಏಕದಿನ ಸರಣಿಯ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು.

ಇದನ್ನೂ ಓದಿ USA vs CAN: ಆರನ್ ಜೋನ್ಸ್ ಪ್ರಚಂಡ ಬ್ಯಾಟಿಂಗ್​; ಗೆಲುವಿನ ಶುಭಾರಂಭ ಕಂಡ ಅಮೆರಿಕ

ಇಂದು ನಡೆದ ಅಮೆರಿಕ ವಿರುದ್ಧದ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ನಡೆಸಿದ ಶ್ರೇಯಸ್ ಆಕ್ರಮಣಕಾರಿ ಬ್ಯಾಟಿಂಗ್​ ಮೂಲಕ 16 ಎಸೆತಗಳಿಂದ ಅಜೇಯ 32 ರನ್​ ಬಾರಿಸಿದರು. ಅವರ ಈ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ ತಲಾ 2 ಬೌಂಡರಿ ಮತ್ತು ಸಿಕ್ಸರ್​ ಸಿಡಿಯಿತು. 20 ರನ್​ಗಳು ಬೌಂಡರಿ ಮತ್ತು ಸಿಕ್ಸರ್​ ಮೂಲಕವೇ ದಾಖಲಾಯಿತು. ಆದರೆ ಪಂದ್ಯ ಸೋತ ಕಾರಣ ಇವರ ಈ ಬ್ಯಾಟಿಂಗ್​ ಪ್ರದರ್ಶನ ವ್ಯರ್ಥವಾಯಿತು.

ಪಂದ್ಯ ಸೋತ ಕೆನಡಾ


ಇಲ್ಲಿನ ಗ್ರ್ಯಾಂಡ್ ಪ್ರೈರೀ ಸ್ಟೇಡಿಯಂ, ಡಲ್ಲಾಸ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಕೆನಡಾ ತಂಡ ನವನೀತ್ ಧಲಿವಾಲ್(61) ಮತ್ತು ನಿಕೋಲಸ್ ಕಿರ್ಟನ್(51) ಅರ್ಧಶತಕದ ಬ್ಯಾಟಿಂಗ್​ ನೆರವಿನಿಂದ 5 ವಿಕೆಟ್​ಗೆ 194 ರನ್​ ಬಾರಿಸಿತು. ಜವಾಬಿತ್ತ ಅಮೆರಿಕ ಈ ಬೃಹತ್​ ಮೊತ್ತವನ್ನು 17.4 ಓವರ್​ಗಳಲ್ಲಿ ಕೇವಲ 3 ವಿಕೆಟ್​ ಕಳೆದುಕೊಂಡು 197 ರನ್​ ಬಾರಿಸಿ ಅಮೋಘ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಯುಎಸ್​ಎ ಗರಿಷ್ಠ ಮೊತ್ತ ಚೇಸ್​ ಮಾಡಿದ ದಾಖಲೆ ಬರೆಯಿತು. ಇದಕ್ಕೂ ಮುನ್ನ 168 ರನ್​ಗಳನ್ನು ಚೇಸ್ ಮಾಡಿದ್ದು ತಂಡದ ಅತ್ಯುತ್ತಮ ಸಾಧನೆಯಾಗಿತ್ತು. ಇದೀಗ ಟಿ20 ವಿಶ್ವಕಪ್​ನ ಚೊಚ್ಚಲ ಪಂದ್ಯದಲ್ಲೇ ಐತಿಹಾಸಿಕ ಗೆಲುವು ದಾಖಲಿಸಿದೆ.

Continue Reading

ಕ್ರೀಡೆ

USA vs CAN: ಆರನ್ ಜೋನ್ಸ್ ಪ್ರಚಂಡ ಬ್ಯಾಟಿಂಗ್​; ಗೆಲುವಿನ ಶುಭಾರಂಭ ಕಂಡ ಅಮೆರಿಕ

USA vs CAN: ಭಾನುವಾರ ನಡೆದ ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಉದ್ಘಾಟನ ಪಂದ್ಯದಲ್ಲಿಕೆನಡಾ ವಿರುದ್ಧ ಅಮೆರಿಕ(USA vs CAN) 7 ವಿಕೆಟ್​ಗಳ ಗೆಲುವು ಸಾಧಿಸಿತು.

VISTARANEWS.COM


on

USA vs CAN
Koo

ನ್ಯೂಯಾರ್ಕ್​: ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಉದ್ಘಾಟನ ಪಂದ್ಯದಲ್ಲಿ ಆತಿಥೇಯ ಅಮೆರಿಕ(USA vs CAN) ಗೆಲುವಿನ ಖಾತೆ ತೆರೆದಿದೆ. ಭಾನುವಾರ ನಡೆದ ಬೃಹತ್​ ಮೊತ್ತದ ಮೇಲಾಟದಲ್ಲಿ ಕೆನಡಾ ವಿರುದ್ಧ 7 ವಿಕೆಟ್​ಗಳ ಗೆಲುವು ಸಾಧಿಸಿ ಮೆರೆದಾಡಿದೆ. ಜತೆಗೆ ‘ಎ’ ಗುಂಪಿನಲ್ಲಿ ಅಂಕದ ಖಾತೆ ತೆರೆದಿದೆ.

ಇಲ್ಲಿನ ಗ್ರ್ಯಾಂಡ್ ಪ್ರೈರೀ ಸ್ಟೇಡಿಯಂ, ಡಲ್ಲಾಸ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಕೆನಡಾ ತಂಡ ನವನೀತ್ ಧಲಿವಾಲ್(61) ಮತ್ತು ನಿಕೋಲಸ್ ಕಿರ್ಟನ್(51) ಅರ್ಧಶತಕದ ಬ್ಯಾಟಿಂಗ್​ ನೆರವಿನಿಂದ 5 ವಿಕೆಟ್​ಗೆ 194 ರನ್​ ಬಾರಿಸಿತು. ಜವಾಬಿತ್ತ ಅಮೆರಿಕ ಈ ಬೃಹತ್​ ಮೊತ್ತವನ್ನು 17.4 ಓವರ್​ಗಳಲ್ಲಿ ಕೇವಲ 3 ವಿಕೆಟ್​ ಕಳೆದುಕೊಂಡು 197 ರನ್​ ಬಾರಿಸಿ ಅಮೋಘ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಯುಎಸ್​ಎ ಗರಿಷ್ಠ ಮೊತ್ತ ಚೇಸ್​ ಮಾಡಿದ ದಾಖಲೆ ಬರೆಯಿತು. ಇದಕ್ಕೂ ಮುನ್ನ 168 ರನ್​ಗಳನ್ನು ಚೇಸ್ ಮಾಡಿದ್ದು ತಂಡದ ಅತ್ಯುತ್ತಮ ಸಾಧನೆಯಾಗಿತ್ತು. ಇದೀಗ ಟಿ20 ವಿಶ್ವಕಪ್​ನ ಚೊಚ್ಚಲ ಪಂದ್ಯದಲ್ಲೇ ಐತಿಹಾಸಿಕ ಗೆಲುವು ದಾಖಲಿಸಿದೆ.

ಚೇಸಿಂಗ್​ ವೇಳೆ ಅಮೆರಿಕ ಆರಂಭಿಕ ಆಘಾತ ಎದುರಿಸಿತು. ತಂಡ ಖಾತೆ ತೆರೆಯುವ ಮುನ್ನವೇ ಸ್ಟೀವನ್ ಟೇಲರ್(0) ಶೂನ್ಯಕ್ಕೆ ವಿಕೆಟ್​ ಕೈಚೆಲ್ಲಿದರು. 42 ರನ್​ ಒಟ್ಟುಗೂಡುವಷ್ಟರಲ್ಲಿ ಮೊನಾಂಕ್ ಪಟೇಲ್(16) ವಿಕೆಟ್​ ಕೂಡ ಬಿತ್ತು. ಈ ವೇಳೆ ಜತೆಗೂಡಿದ ಆಂಡ್ರೀಸ್ ಗೌಸ್ ಮತ್ತು ಆರನ್ ಜೋನ್ಸ್ ಬಿರುಸಿನ ಬ್ಯಾಟಿಂಗ್​ ಮೂಲಕ ಅರ್ಧಶತಕ ಬಾರಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಉತ್ತಮ ಹಿಡಿತ ಸಾಧಿಸಿದ್ದ ಕೆನಡಾ ಬೌಲರ್​ಗಳು ಗೌಸ್ ಮತ್ತು ಜೋನ್ಸ್ ಬ್ಯಾಟಿಂಗ್​ ಆರ್ಭಟದ ಮುಂದೆ ಸಂಪೂರ್ಣ ಲಯ ಕಳೆದುಕೊಂಡರು.

ಉಭಯ ಆಟಗಾರರು ಸೇರಿಕೊಂಡು ಸಿಕ್ಸರ್​ ಮತ್ತು ಬೌಂಡರಿಗಳ ಸುರಿಮಳೆಗೈದರು. ಕಿಕ್ಕಿರಿದು ನೆರೆದ ತವರಿನ ವೀಕ್ಷಕರಿಗೆ ಭರಪೂರ ರಂಜನೆ ಲಭಿಸಿತು. ಈ ಜೋಡಿ ಮೂರನೇ ವಿಕೆಟ್​ಗೆ ಬರೋಬ್ಬರಿ 131 ರನ್​ಗಳ ಅಮೂಲ್ಯ ಜತೆಯಾಟ ನಡೆಸಿತು. ಆಂಡ್ರೀಸ್ ಗೌಸ್ 46 ಎಸೆತಗಳಿಂದ 7 ಬೌಂಡರಿ ಮತ್ತು 3 ಸಿಕ್ಸರ್​ ನೆರವಿನಿಂದ 65 ರನ್​ ಬಾರಿಸಿದರು. ವಿಸ್ಫೋಟಕ ಬ್ಯಾಟಿಂಗ್​ ನಡೆಸಿದ ಆರನ್ ಜೋನ್ಸ್ 40 ಎಸೆತಗಳಿಂದ ಬರೋಬ್ಬರಿ 10 ಸಿಕ್ಸರ್​ ಮತ್ತು 4 ಬೌಂಡರಿ ಸಿಡಿಸಿ ಅಜೇಯ 94 ರನ್​ ಬಾರಿಸಿದರು. ಗೆಲುವಿಗೆ ನಾಲ್ಕು ರನ್​ ಬೇಕಿದ್ದಾಗ ಸಿಕ್ಸರ್​ ಬಡಿದಟ್ಟಿ ತಂಡಕ್ಕೆ ಗೆಲುವು ತಂದುಕೊಟ್ಟುರು. ನ್ಯೂಜಿಲ್ಯಾಂಡ್​ ತಂಡ ತೊರೆದು ಅಮೆರಿಕ ಪರ ಆಡುತ್ತಿರುವ ಕೋರಿ ಆ್ಯಂಡರ್ಸನ್​ ಅಜೇಯ 3 ರನ್​ ಬಾರಿಸಿದರು. ಬೌಲಿಂಗ್​ನಲ್ಲಿ ಒಂದು ವಿಕೆಟ್​ ಪಡೆದರು.

ಇದಕ್ಕೂ ಮುನ್ನ ಬ್ಯಾಟಿಂಗ್​ ನಡೆಸಿದ ಕೆನಡಾ ಪರ ನವನೀತ್ ಧಲಿವಾಲ್(61) ಮತ್ತು ನಿಕೋಲಸ್ ಕಿರ್ಟನ್(51) ಅರ್ಧಶತಕ ಬಾರಿಸಿ ಮಿಂಚಿದರು. ಉಳಿದಂತೆ ಶ್ರೇಯಸ್ ಮೊವ್ವ(32) ಆರಂಭಿಕ ಆಟಗಾರ ಆರನ್ ಜಾನ್ಸನ್(23) ರನ್​ ಬಾರಿಸಿದರು. ಬೃಹತ್​ ಮೊತ್ತ ಪೇರಿಸಿದರು ಕೂಡ ಬೌಲರ್​ಗಳಿಂದ ಸಂಘಟಿತ ಪ್ರದರ್ಶನ ಕಂಡು ಬಾರದ ಕಾರಣ ಪಂದ್ಯವನ್ನು ಕಳೆದುಕೊಂಡರು.

Continue Reading
Advertisement
Aaron Jones
ಕ್ರಿಕೆಟ್5 mins ago

Aaron Jones: 17 ವರ್ಷಗಳ ಹಿಂದಿನ ಟಿ20 ವಿಶ್ವಕಪ್​ ದಾಖಲೆ ಸರಿಗಟ್ಟಿದ ಯುಎಸ್​ಎ ಬ್ಯಾಟರ್​ ಆರೋನ್ ಜೋನ್ಸ್

Indian 2 Audio Launch Kamal Haasan Simbu Kajal Aggarwal
ಕಾಲಿವುಡ್10 mins ago

Indian 2 Audio Launch: ಅದ್ಧೂರಿಯಾಗಿ ನೆರವೇರಿತು ʼಇಂಡಿಯನ್‌ 2ʼ ಸಿನಿಮಾದ ಆಡಿಯೊ ಲಾಂಚ್‌!

Traffic Advisory
Lok Sabha Election 202417 mins ago

Traffic Advisory : ಲೋಕಸಭೆ ಎಲೆಕ್ಷನ್‌ ಕೌಂಟಿಂಗ್‌; ಬೆಂಗಳೂರಲ್ಲಿ ಎಲ್ಲೆಲ್ಲಿ ವಾಹನ ನಿರ್ಬಂಧ, ಮಾರ್ಗ ಬದಲು?

education News
ಬೆಂಗಳೂರು29 mins ago

Education News : ನೀಟ್ ಪರೀಕ್ಷೆ ಬಳಿಕ ಎಂಜಿನಿಯರ್ ಸೀಟು ಹಂಚಿಕೆ; 1.24 ಲಕ್ಷ ಸೀಟುಗಳು ಲಭ್ಯ, ಆನ್ ಲೈನ್ ಪ್ರಕ್ರಿಯೆ

Sushant Singh Rajput's sister cries as she visits Kedarnath
ಬಾಲಿವುಡ್34 mins ago

Sushant Singh: ಕೇದಾರನಾಥಕ್ಕೆ ಭೇಟಿ ಕೊಟ್ಟಾಗ ಸುಶಾಂತ್ ಸಿಂಗ್ ನೆನೆದು ಕಣ್ಣೀರಿಟ್ಟ ಸಹೋದರಿ!

PM Narendra Modi
ದೇಶ38 mins ago

PM Narendra Modi: ಎಕ್ಸಿಟ್‌ ಪೋಲ್‌ ರಿಸಲ್ಟ್‌ ಬೆನ್ನಲ್ಲೇ ಪ್ರಧಾನಿ ಮೋದಿ ಬ್ಯಾಕ್‌ ಟು ಬ್ಯಾಕ್‌ ಮೀಟಿಂಗ್‌

Muthyala Maduvu Waterfalls
ಪ್ರವಾಸ54 mins ago

Muthyala Maduvu Waterfalls: ಜಲರಾಶಿಯಿಂದ ತುಂಬಿಕೊಂಡು ಕಣ್ಮನ ಸೆಳೆಯುತ್ತಿರುವ ಮುತ್ಯಾಲಮಡುವು ಜಲಪಾತ

CAN vs USA
ಕ್ರೀಡೆ59 mins ago

CAN vs USA: ಕೆನಡಾ ಪರ ಟಿ20 ವಿಶ್ವಕಪ್​ ಪಂದ್ಯವಾಡಿದ ದಾವಣಗೆರೆಯ ಶ್ರೇಯಸ್

Raveena Tandon attacked In Mumbai After Being Accused Of Rash Driving
ಬಾಲಿವುಡ್1 hour ago

Raveena Tandon: ರವೀನಾ ಟಂಡನ್ ಕಾರು ಅಪಘಾತ; ನಟಿ ಹೊಡೆಯಬೇಡಿ ಪ್ಲೀಸ್ ಎನ್ನುತ್ತಿರುವ ವಿಡಿಯೊ ನೋಡಿ!

gold rate today
ಕರ್ನಾಟಕ1 hour ago

Gold Rate Today: ಬಂಗಾರ ಪ್ರಿಯರಿಗೆ ಶುಭ ಸುದ್ದಿ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು20 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌