ವಿಸ್ತಾರ ಸಂಪಾದಕೀಯ: Lok Sabha Election: ಜನತಂತ್ರ ಹಬ್ಬಕ್ಕೆ ನಾವೆಲ್ಲರೂ ಸಿದ್ಧರಾಗೋಣ - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: Lok Sabha Election: ಜನತಂತ್ರ ಹಬ್ಬಕ್ಕೆ ನಾವೆಲ್ಲರೂ ಸಿದ್ಧರಾಗೋಣ

ಈ ಸಲ 97 ಕೋಟಿ ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ. 10.5 ಲಕ್ಷ ಮತಗಟ್ಟೆಗಳನ್ನು ರಚಿಸಲಾಗುತ್ತದೆ. 55 ಲಕ್ಷ ಮತಯಂತ್ರಗಳನ್ನು ಚುನಾವಣೆಗಾಗಿ ಬಳಸಿಕೊಳ್ಳಲಾಗುತ್ತದೆ. ಇದುವರೆಗೆ 100ಕ್ಕೂ ಅಧಿಕ ವಿಧಾನಸಭೆ ಚುನಾವಣೆಗಳನ್ನು ಯಶಸ್ವಿಯಾಗಿ ಆಯೋಜಿಸಿದ ಕೀರ್ತಿ ಚುನಾವಣಾ ಆಯೋಗದ್ದಾಗಿದೆ.

VISTARANEWS.COM


on

LOK SABHA ELECTION 2024 Karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬಹು ನಿರೀಕ್ಷಿತ ಲೋಕಸಭೆ ಚುನಾವಣೆಯ ವೇಳಾಪಟ್ಟಿ ಇಂದು ಘೋಷಣೆಯಾಗಿದೆ. ಏಪ್ರಿಲ್‌ 19ರಿಂದ ಆರಂಭಿಸಿ ಜೂನ್‌ 1ರವರೆಗೆ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ (ಏಪ್ರಿಲ್‌ 26 ಮತ್ತು ಮೇ 7ರಂದು) ಮತದಾನ ನಡೆಯಲಿದೆ. ಇದೇ ವೇಳೆಗೆ ನಾಲ್ಕು ರಾಜ್ಯಗಳ- ಆಂಧ್ರಪ್ರದೇಶ, ಒಡಿಶಾ, ಸಿಕ್ಕಿಂ ಹಾಗೂ ಅರುಣಾಚಲ ಪ್ರದೇಶ- ವಿಧಾನಸಭೆ ಚುನಾವಣೆಗಳೂ ನೆರವೇರಲಿವೆ. ಕರ್ನಾಟಕದ ಸುರಪುರ ಸೇರಿದಂತೆ 13 ರಾಜ್ಯಗಳ 26 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯೂ ಇದೇ ಸಂದರ್ಭದಲ್ಲಿ ನಡೆಯಲಿದೆ. ಜೂನ್‌ 4ರಂದು ಇಡೀ ದೇಶದ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಈ ಘೋಷಣೆಯೊಂದಿಗೆ ಮಾದರಿ ನೀತಿ ಸಂಹಿತೆಯನ್ನು ತಕ್ಷಣವೇ ಜಾರಿಗೆ ತರಲಾಗಿದೆ. ಇದರ ಜತೆಗೆ ರಾಜಕೀಯ ಪಕ್ಷಗಳಿಗೆ ಮಾರ್ಗಸೂಚಿಯನ್ನೂ ನೀಡಲಾಗಿದೆ.

ಈ ಸಲ 97 ಕೋಟಿ ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ. 10.5 ಲಕ್ಷ ಮತಗಟ್ಟೆಗಳನ್ನು ರಚಿಸಲಾಗುತ್ತದೆ. 55 ಲಕ್ಷ ಮತಯಂತ್ರಗಳನ್ನು ಚುನಾವಣೆಗಾಗಿ ಬಳಸಿಕೊಳ್ಳಲಾಗುತ್ತದೆ. ಇದುವರೆಗೆ 100ಕ್ಕೂ ಅಧಿಕ ವಿಧಾನಸಭೆ ಚುನಾವಣೆಗಳನ್ನು ಯಶಸ್ವಿಯಾಗಿ ಆಯೋಜಿಸಿದ ಕೀರ್ತಿ ಚುನಾವಣಾ ಆಯೋಗದ್ದಾಗಿದೆ. ಈ ಬಾರಿ 18-19 ವರ್ಷದ 1.89 ಕೋಟಿ ಮತದಾರರು ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. 85 ವರ್ಷ ದಾಟಿದವರು ಮನೆಯಿಂದಲೇ ಮತದಾನ ಮಾಡಲಿದ್ದಾರೆ. ವಿಶೇಷ ಚೇತನರಿಗೂ ಕೂಡ ಮನೆಯಿಂದಲೇ ಮತದಾನ ಮಾಡಬಹುದಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಮಾಹಿತಿ ನೀಡಿದ್ದಾರೆ. ಪಾರದರ್ಶಕವಾಗಿ, ಸುಸಜ್ಜಿತವಾಗಿ ಹಾಗೂ ನ್ಯಾಯಸಮ್ಮತವಾಗಿ ಮತದಾನ ನಡೆಸಲು ಚುನಾವಣೆ ಆಯೋಗವು ಬದ್ಧವಾಗಿದ್ದು, ಇದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳು ಈಗಾಗಲೇ 543 ಲೋಕಸಭಾ ಕ್ಷೇತ್ರಗಳಿಗೆ ತಮ್ಮ ಅಭ್ಯರ್ಥಿಗಳನ್ನು ಘೋಷಿಸಲು ಪ್ರಾರಂಭಿಸಿವೆ. ಬಿಜೆಪಿ ಇದುವರೆಗೆ 267 ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದರೆ, ಕಾಂಗ್ರೆಸ್ ಎರಡು ಪಟ್ಟಿಗಳಲ್ಲಿ 82 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ.

ಯಾವ ದೃಷ್ಟಿಯಿಂದ ನೋಡಿದರೂ ಇದು ಜಗತ್ತಿನ ಮಹಾ- ಮೆಗಾ ಚುನಾವಣೆ. ಇದು ಅತಿ ದೊಡ್ಡ ಪ್ರಜಾಪ್ರಭುತ್ವ ದೇಶದ ಜನತಂತ್ರ ಹಬ್ಬ. ಬೇರೆ ಯಾವ ದೇಶದಲ್ಲಿಯೂ ಈ ಪ್ರಮಾಣದ ಚುನಾವಣೆಯೆಂಬ ಬೃಹತ್‌ ಉತ್ಸವ ನಡೆಯಲು ಸಾಧ್ಯವೇ ಇಲ್ಲ. ಇದು ʼಪ್ರಜಾಪ್ರಭುತ್ವದ ಬೃಹನ್ನಾಟ್ಯʼ (Dance of Democracy) ಎಂದೇ ಹೆಸರಾಗಿದೆ. 1950ರಿಂದ ಇಲ್ಲಿಯವರೆಗೂ ಕೋಟ್ಯಂತರ ಜನ ಭಾಗವಹಿಸಿದ ನಮ್ಮ ಚುನಾವಣೆಗಳ ಇತಿಹಾಸ ತೆಗೆದು ನೋಡಿದರೆ, ಇತರ ದೇಶಗಳಿಗೆ ಮಾದರಿಯಾಗಿ ನಾವು ಅವುಗಳನ್ನು ನಡೆಸಿದ್ದು ಕಂಡುಬರುತ್ತದೆ. ವರುಷಗಳು ಕಳೆಯುತ್ತ ಹೋದಂತೆ ನಮ್ಮ ಚುನಾವಣೆಗಳು ಹೆಚ್ಚು ಹೆಚ್ಚು ಆಧುನಿಕವಾಗುತ್ತ, ಪಾರದರ್ಶಕವಾಗುತ್ತ ನಡೆದಿವೆ. ಬ್ಯಾಲೆಟ್‌ ಪೇಪರ್‌ಗಳ ಜಾಗದಲ್ಲಿ ಇವಿಎಂಗಳು ಬಂದಿವೆ. ವಾರಗಟ್ಟಲೆ ನಡೆಯುತ್ತಿದೆ ಮತ ಎಣಿಕೆ ಒಂದೇ ದಿನಕ್ಕಿಳಿದಿದೆ. ಮತಗಟ್ಟೆ ಹಿಂಸಾಚಾರಗಳು ಶೂನ್ಯ ಪ್ರಮಾಣಕ್ಕಿಳಿದಿವೆ. ಮತದಾನದಲ್ಲಿ ಅಕ್ರಮ ಎಸಗಲು ಸಾಧ್ಯವೇ ಇಲ್ಲವೆಂಬಷ್ಟು ಪಾರದರ್ಶಕವಾದ ವ್ಯವಸ್ಥೆಯನ್ನು ಆಡಳಿತಾತ್ಮಕವಾಗಿ, ತಾಂತ್ರಿಕವಾಗಿ ರೂಪಿಸಲಾಗಿದೆ. ವಿದೇಶಗಳ ಅನೇಕ ತಜ್ಞರು ಇಲ್ಲಿನ ಚುನಾವಣೆ ವ್ಯವಸ್ಥೆಯನ್ನು ಅಧ್ಯಯನ ಮಾಡಿ ಇದರ ಮಾದರಿಯನ್ನು ಕೊಂಡಾಡಿದ್ದಾರೆ.

ಚುನಾವಣೆ ಆಯೋಗ ಈ ಬಾರಿ ಹಲವು ಹೊಸ ಉಪಕ್ರಮಗಳನ್ನು ತೆಗೆದುಕೊಂಡಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅಧಿಸೂಚನೆ ಹೊರಡಿಸುವ 10 ದಿನಗಳ ಮೊದಲಿನವರೆಗೂ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿಕೊಳ್ಳಬಹುದು. ಈ ವರ್ಷವೂ ಯೂಥ್ಸ್ ಮತ್ತು ಮಹಿಳಾ ಮತಗಟ್ಟೆ ಇರಲಿದೆ. 1808 ಥೀಮ್ ಬೇಸ್ಡ್ ಮತಗಟ್ಟೆಗಳು, 1120 ಸಖಿ ಬೂತ್​​ಗಳು ಮತ್ತು ಬುಡಕಟ್ಟುಗಳಿಗಾಗಿ ಪ್ರತ್ಯೇಕ ಬೂತ್ ರಚನೆ ಮಾಡಲಾಗುತ್ತಿದೆ. ವಾಹನಗಳು ಹೋಗದ ಕಡೆಯಲ್ಲೂ ಮತಯಂತ್ರಗಳನ್ನು ತಲೆಯಲ್ಲಿ ಹೊತ್ತು ಸಾಗಿಸಿ ಮತಗಟ್ಟೆ ಸ್ಥಾಪಿಸಿ ಮತದಾನ ಮಾಡಿಸಿಕೊಂಡು ಬರಲು ಬದ್ಧರಾದ ಅಧಿಕಾರಿಗಳಿದ್ದಾರೆ. ಶಿಕ್ಷಣ ಇಲಾಖೆಯ ಸಿಬ್ಬಂದಿಯನ್ನು ಮುಖ್ಯವಾಗಿ ಒಳಗೊಂಡಂತೆ ಸರ್ಕಾರಿ ಅಧಿಕಾರಿಗಳು ಇದಕ್ಕಾಗಿಯೇ ವಾರಗಟ್ಟಲೆ ತರಬೇತಿ ಪಡೆದು, ಆದರ್ಶವಾದ ರೀತಿಯಲ್ಲಿ ಒಟ್ಟೂ ಪ್ರಕ್ರಿಯೆಯನ್ನು ನಡೆಸಿಕೊಂಡು ಬರುತ್ತಿರುವುದು ಆನೂಚಾನವಾಗಿ ನಡೆದುಕೊಂಡು ಬಂದಿದೆ. ಅವರೂ ಎಂದಿನಂತೆ ಇದಕ್ಕೆ ಸಜ್ಜಾಗಿದ್ದಾರೆ. ಈ ಸಲ ಕರ್ತವ್ಯನಿರತ ಪತ್ರಕರ್ತರಿಗೆ ಅಂಚೆ ಮತದಾನ ಅವಕಾಶವಿದೆ. ಒಪೀನಿಯನ್‌ ಪೋಲ್‌ಗೂ ನಿರ್ಬಂಧವಿಲ್ಲ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ಇವೆಲ್ಲವೂ ಆದರೂ ಮುಖ್ಯವಾಗಿ ಚಿಂತೆ ಮೂಡಿಸುವ ಸಮಸ್ಯೆಗಳೆಂದರೆ ಮತದಾನದ ಪ್ರಮಾಣ. ಇದು ಗ್ರಾಮೀಣ ಪ್ರದೇಶದಲ್ಲಿ ತೃಪ್ತಿಕರ ಎಂಬಂತಿದ್ದರೆ, ನಗರ ಪ್ರದೇಶಗಳಲ್ಲಿ ಮಾತ್ರ ಗರಿಷ್ಠ 70ನ್ನು ದಾಟುವುದಿಲ್ಲ. ನಗರ ಪ್ರದೇಶಗಳ ಮತದಾರರು ಅಂದಿನ ರಜೆಯನ್ನು ವಿರಾಮಕ್ಕಾಗಿ, ವಿಹಾರಕ್ಕಾಗಿ ಬಳಸುವುದರಿಂದ ಈ ಸಮಸ್ಯೆ. ಹೀಗೆ ಮಾಡುವ ಮೂಲಕ, ತಮ್ಮ ಭವಿಷ್ಯದ ಐದು ವರ್ಷಗಳ ಆಡಳಿತಕ್ಕೆ ತಮ್ಮ ಪ್ರತಿನಿಧಿಗಳನ್ನು ತಾವೇ ಆರಿಸುವ ಅವಕಾಶದಿಂದ ಇವರು ತಪ್ಪಿಸಿಕೊಳ್ಳುತ್ತಾರೆ. ಒಂದೊಂದು ಮತವೂ ಅಮೂಲ್ಯ. ಪ್ರತಿ ಮತವೂ ಗಣನೀಯ. ಪ್ರತಿ ಮತವೂ ಭವಿಷ್ಯವನ್ನು ಸೃಷ್ಟಿಸುತ್ತದೆ. ಇದನ್ನು ಮತ್ತೆ ಮತ್ತೆ ಹೇಳಿ ಮನದಟ್ಟು ಮಾಡಬೇಕಿದೆ. ನೂರಕ್ಕೆ ನೂರು ಮತದಾನ ಎಂಬುದು ಆದರ್ಶ. ಆದರ್ಶದತ್ತ ನಡೆಯುವು ಅವಕಾಶ ನಮಗಿದೆ. ಪ್ರಯತ್ನ ಪಡೋಣ. ಆಗ ಉತ್ತಮರ ಆರಿಸಿ ಬಂದು ಒಳ್ಳೆಯ ಸರ್ಕಾರ ರಚನೆಯಾಗಬಹುದು. ಈ ಜವಾಬ್ದಾರಿ ಎಲ್ಲರ ಮೇಲಿದೆ.

ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ಸೆಮಿಕಂಡಕ್ಟರ್‌ ಉದ್ಯಮದ ಉಗಮದಿಂದ ಭಾರತವಾಗಲಿದೆ ʼಪವರ್‌ʼಫುಲ್

ಇನ್ನು ಗೊಂದಲಗಳು. ಕಳೆದ ಸಾಲಿನ ಲೋಕಸಭೆ ಹಾಗೂ ವಿಧಾನಸಭೆ ಮತದಾನದ ಸಂದರ್ಭಗಳಲ್ಲಿ ಹಲವು ಕಡೆ ಮತಯಂತ್ರಗಳು ಕೈಕೊಟ್ಟಿದ್ದವು. ಇಂಥ ಕೊನೆಯ ಕ್ಷಣದ ಗೊಂದಲಗಳನ್ನು ನಿವಾರಿಸಬೇಕು. ಹಲವೆಡೆ ತಮ್ಮ ಹೆಸರುಗಳೇ ಮತದಾರರ ಪಟ್ಟಿಯಲ್ಲಿ ಮಾಯವಾಗಿವೆ ಎಂದು ಬಂಡಾಯ ಎದ್ದಿದ್ದರು. ಇದು ಕೂಡ ಎಚ್ಚರಿಕೆಯಿಂದ ಅಧಿಕಾರಿಗಳು ನಿರ್ವಹಿಸಬೇಕಾದ ಸಂಗತಿ. ಇಲ್ಲಿ ಪಕ್ಷಪಾತ, ವಂಚನೆಗೆ ಅವಕಾಶವಿದೆ. ಹೀಗಾಗದಂತೆ ನಿಷ್ಪಕ್ಷಪಾತವಾಗಿ ನಡೆದುಕೊಳ್ಳುವುದು ಅಗತ್ಯ. ಇಲ್ಲವಾದರೆ ಅಂಥ ಕೃತ್ಯ ದಂಡನೀಯ. ಇನ್ನು ಚುನಾವಣೆಯ ಪ್ರಚಾರ ಕಣ ಯಾವಾಗಲೂ ಬಿಸಿಬಿಸಿಯೇ ಆಗಿರುತ್ತದೆ. ಮಾತಿನ ಕೂರಂಬುಗಳ ಎಸೆತ ಸಾಮಾನ್ಯ. ಆದರೆ ಮಾತು ಹದ ತಪ್ಪದಂತೆ, ವಿಮರ್ಶಾತ್ಮಕವಾಗಿರುವಂತೆ ನೋಡಿಕೊಳ್ಳಬೇಕಾದುದು ಎಲ್ಲ ಪ್ರಚಾರಕರ ಹೊಣೆ. ತಮ್ಮ ಸರ್ಕಾರದ ಸಾಧನೆಗಳ ಬಿತ್ತರ, ವಿಮರ್ಶೆ ಹಾಗೂ ಎದುರಾಳಿಗಳ ಟೀಕೆ ಇರಲಿ. ಆದರೆ ತೇಜೋವಧೆ ಬೇಡ.

ಇವೆಲ್ಲ ಆದರ್ಶಗಳನ್ನು ಮುಂದಿಟ್ಟುಕೊಂಡು ಇನ್ನೊಂದು ಭಾರಿ ಚುನಾವಣೆಗೆ ಸಿದ್ಧರಾಗೋಣ. ನಿಷ್ಪಕ್ಷಪಾತ, ಪಾರದರ್ಶಕ, ಮಾದರಿ, ಬೃಹತ್‌ ಚುನಾವಣಾ ಪ್ರಕ್ರಿಯೆಯಲ್ಲಿ ನಮ್ಮೆಲ್ಲರ ಪಾಲೂ ಇರಲಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

VISTARANEWS.COM


on

ರಾಜ್ಯಸಭೆ ಟಿಕೆಟ್‌

ಮೋದಿ ಅವರೊಂದಿಗಿನ ತಮ್ಮ ಬಾಂಧವ್ಯ ಕೇವಲ ರಾಜ್ಯಸಭೆ ಟಿಕೆಟ್ ಅಥವಾ ರಾಜಕೀಯ ಲಾಭಕ್ಕಾಗಿ ಅಲ್ಲ- ಹೆಚ್‌ಡಿಡಿ

ರಾಜ್ಯಸಭಾ ಟಿಕೆಟ್‌ಗಾಗಿ ಮೋದಿ ನನ್ನ ಸಂಬಂಧ ಆರಂಭವಾಗಿಲ್ಲ. ಮೋದಿಯವರು ವಿಶ್ವನಾಯಕ, ದೇವೇಗೌಡರು ಇರುವವರೆಗೂ ಎನ್‌ಡಿಎ ಜೊತೆ ಜೆಡಿಎಸ್‌ ಇರುತ್ತದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.

ರಾಜ್ಯಸಭೆ ಚುನಾವಣೆಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರಿಗೆ ಟಿಕೆಟ್‌ ಸಿಗದ ವಿಚಾರದ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಹೆಚ್‌.ಡಿ.ದೇವೇಗೌಡರು ಇಂದು ಬೆಂಗಳೂರಿನ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ರಾಜ್ಯಸಭೆ ಟಿಕೆಟ್‌ ವಿಚಾರವಾಗಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಮಾತನಾಡಿದ್ದಾರೆ. ಜೆಡಿಎಸ್‌ ಪಕ್ಷದಲ್ಲಿ 18 ಶಾಸಕರು ಇದ್ದಾರೆ. ಹಾಗಾಗಿ ನಾವು ಟಿಕೆಟ್‌ಗೆ ಬೇಡಿಕೆ ಇಟ್ಟಿಲ್ಲ ಎಂದು ಹೇಳಿದರು.

ನರೇಂದ್ರ ಮೋದಿ ಅವರೊಂದಿಗಿನ ತಮ್ಮ ಬಾಂಧವ್ಯ ಕೇವಲ ರಾಜ್ಯಸಭೆ ಟಿಕೆಟ್ ಅಥವಾ ರಾಜಕೀಯ ಲಾಭಕ್ಕಾಗಿ ಅಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ನನ್ನ ಮತ್ತು ಮೋದಿಯವರ ಸಂಬಂಧ ಒಂದು ರಾಜ್ಯಸಭೆ ಟಿಕೆಟ್‌ನಿಂದ ಆರಂಭವಾಗಿದೆ ಅಥವಾ ಅದಕ್ಕಾಗಿಯೇ ಮುಂದುವರಿಯುತ್ತಿದೆ ಎಂದು ರಾಜ್ಯದ ಜನರು ಭಾವಿಸಬಾರದು. 2014ರಲ್ಲಿ ಮೋದಿ ಅವರು ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದಾಗಿನಿಂದಲೇ ಅವರ ಕಾರ್ಯವೈಖರಿಯನ್ನು ಗಮನಿಸುತ್ತಿದ್ದೇನೆ” ಎಂದು ದೇವೇಗೌಡರು ಹೇಳಿದ್ದಾರೆ.

ಗೋಧ್ರಾ ಘಟನೆಯ ಸಂದರ್ಭದಲ್ಲಿ ತಾವು ಹಾಗೂ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮೋದಿ ಅವರನ್ನು ಟೀಕಿಸಿದ್ದ ವಿಚಾರವನ್ನೂ ಅವರು ನೆನಪಿಸಿಕೊಂಡರು. ಆದರೆ ನಂತರ ಪ್ರಧಾನಿಯಾದ ಬಳಿಕ ಮೋದಿ ಅವರನ್ನು ಹಲವು ಬಾರಿ ಭೇಟಿಯಾಗಿ ವಿವಿಧ ರಾಷ್ಟ್ರೀಯ ಹಾಗೂ ರಾಜ್ಯದ ವಿಚಾರಗಳ ಕುರಿತು ಚರ್ಚೆ ನಡೆಸಿರುವುದಾಗಿ ತಿಳಿಸಿದ್ದಾರೆ.

ಕಳೆದ ಹತ್ತು ವರ್ಷಗಳಲ್ಲಿ ದೇಶದ ಅಭಿವೃದ್ಧಿಗಾಗಿ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಗಮನಿಸಿದ್ದೇನೆ. ದೇಶದ ಆರ್ಥಿಕತೆ, ರಾಷ್ಟ್ರೀಯ ಭದ್ರತೆ, ವಿದೇಶಾಂಗ ನೀತಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದೇಶ ಗಮನಾರ್ಹ ಪ್ರಗತಿ ಸಾಧಿಸಿದೆ. ಜಾಗತಿಕ ಮಟ್ಟದಲ್ಲೂ ಮೋದಿ ಅವರಿಗೆ ವಿಶಿಷ್ಟ ಗೌರವ ಮತ್ತು ಸ್ಥಾನಮಾನ ದೊರೆತಿದೆ ಎಂದು ದೇವೇಗೌಡರು ಮೆಚ್ಚುಗೆ ವ್ಯಕ್ತಪಡಿಸಿದರು.

“ಮೋದಿಯವರಂತಹ ನಾಯಕತ್ವವನ್ನು ಬೇರೆ ಯಾರಿಂದಲೂ ಸರಿಸಾಟಿಯಾಗಿ ನಿರ್ವಹಿಸಲು ಸಾಧ್ಯವಿಲ್ಲ. ವೈಯಕ್ತಿಕವಾಗಿ ಅವರೊಂದಿಗೆ ನನಗೆ ಆತ್ಮೀಯ ಸಂಬಂಧವಿದೆ. ನಾನು ರಾಜ್ಯಸಭಾ ಸದಸ್ಯನಾಗದಿದ್ದರೂ ಆ ಸಂಬಂಧ ಮುಂದುವರಿಯುತ್ತದೆ” ಎಂದು ಹೇಳಿದರು.

ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ಯಾವುದೇ ವಿಚಾರ ಬಂದರೂ ಪ್ರಧಾನಿಯನ್ನು ಭೇಟಿ ಮಾಡುವ ಅಥವಾ ಪತ್ರ ಬರೆಯುವ ಅವಕಾಶ ನನಗಿದೆ. ನಮ್ಮ ಸಂಬಂಧ ರಾಜಕೀಯ ಹುದ್ದೆಗಳಿಗೆ ಸೀಮಿತವಲ್ಲ ಎಂದು ದೇವೇಗೌಡರು ಹೇಳಿದರು.

ಇದೇ ವೇಳೆ, ಎನ್‌ಡಿಎ ಜತೆಗಿನ ಜೆಡಿಎಸ್ ಬಾಂಧವ್ಯದ ಬಗ್ಗೆ ಮಾತನಾಡಿದ ಅವರು, “ಒಂದು ರಾಜ್ಯಸಭೆ ಸ್ಥಾನದ ಕಾರಣಕ್ಕೆ ಎನ್‌ಡಿಎ ಜೊತೆಗಿನ ಸಂಬಂಧ ಮುಕ್ತಾಯವಾಗುವುದಿಲ್ಲ. ನಾವು ರಾಜ್ಯಸಭಾ ಸ್ಥಾನವನ್ನು ಕೇಳಿಯೂ ಇಲ್ಲ ಎಂದ ಅವರು ದೇವೇಗೌಡರು ಇರುವವರೆಗೂ ಎನ್‌ಡಿಎ ಜೊತೆಗಿನ ಮೈತ್ರಿ ಮತ್ತು ಸಂಬಂಧ ಮುಂದುವರಿಯಲಿದೆ” ಎಂದು ಸ್ಪಷ್ಟಪಡಿಸಿದರು.

Also Read: ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

VISTARANEWS.COM


on

ನರೇಂದ್ರ ಮೋದಿ

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಅವರು ದೇಶದ ಮೊದಲ ಪ್ರಧಾನಿ ಜವಹರ್‌ ಲಾಲ್‌ ನೆಹರು ಅವರ ದಾಖಲೆಯನ್ನು ಹಿಂದಿಕ್ಕಿ, ಭಾರತದ ಅತ್ಯಂತ ದೀರ್ಘಾವಧಿ ನಿರಂತರವಾಗಿ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿಯಾಗಿ ಹೊರಹೊಮ್ಮಿದ್ದಾರೆ.
2014ರ ಮೇ 26ರಂದು ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಮೋದಿ, ಇಂದಿಗೆ ( ಜೂನ್ 10)ರ ವೇಳೆಗೆ ನಿರಂತರವಾಗಿ 4,399 ದಿನಗಳ ಕಾಲ ಅಧಿಕಾರದಲ್ಲಿದ್ದು, ನೆಹರೂ ಅವರ 4,398 ದಿನಗಳ ಚುನಾವಣೋತ್ತರ ಪ್ರಧಾನಮಂತ್ರಿ ಅವಧಿಯನ್ನು ಮೀರಿಸಿದ್ದಾರೆ.
ನೆಹರೂ ಅವರು 1947ರಿಂದ ಪ್ರಧಾನಿಯಾಗಿದ್ದರೂ, ಭಾರತದಲ್ಲಿ ಮೊದಲ ಸಾರ್ವತ್ರಿಕ ಚುನಾವಣೆ 1951-52ರಲ್ಲಿ ನಡೆದ ಕಾರಣ, ಚುನಾವಣೆಯ ಮೂಲಕ ಆಯ್ಕೆಯಾದ ಪ್ರಧಾನಿಯಾಗಿ ಅವರ ಅವಧಿಯನ್ನು 1952ರಿಂದ ಲೆಕ್ಕಿಸಲಾಗುತ್ತದೆ. ಇದೇ ಮಾನದಂಡದ ಪ್ರಕಾರ ಮೋದಿ ಇದೀಗ ಹೊಸ ದಾಖಲೆ ನಿರ್ಮಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕರಿಸಿ 12 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ದೇಶದ ಹಲವೆಡೆ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದ್ದಾರೆ.

Also Read: ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

VISTARANEWS.COM


on

ಮೀನಾಕ್ಷಿ ನಟರಾಜನ್

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

ರಾಜ್ಯಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ ಎದುರಾಗಿದೆ. ನಾಮಪತ್ರ ಸಲ್ಲಿಕೆ ವೇಳೆ ಕ್ರಿಮಿನಲ್ ಪ್ರಕರಣವನ್ನು ನಮೂದಿಸದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರ ರಾಜ್ಯಸಭಾ ನಾಮಪತ್ರ ತಿರಸ್ಕೃತಗೊಂಡಿದೆ.

ಹೈದರಾಬಾದ್ ನ್ಯಾಯಾಲಯದಲ್ಲಿ ಬಾಕಿ ಇರುವ ಕ್ರಿಮಿನಲ್ ಪ್ರಕರಣವನ್ನು ನಮೂದಿಸದ ಹಿನ್ನಲೆ ಕಾಂಗ್ರೆಸ್‌ನ ಹಿರಿಯ ನಾಯಕಿ ಮೀನಾಕ್ಷಿ ನಟರಾಜನ್ ರಾಜ್ಯಸಭಾ ನಾಮಪತ್ರ ತಿರಸ್ಕೃತಗೊಂಡಿದೆ. ಮೀನಾಕ್ಷಿ ನಟರಾಜನ್ ನಾಮಪತ್ರ ಪರಿಶೀಲನೆ ಪ್ರಕ್ರಿಯೆ ವೇಳೆ ಮಾಹಿತಿ ಗೊತ್ತಾಗಿದ್ದು ಇದರಿಂದ ನಾಮಪತ್ರ ತಿರಸ್ಕರಿಸಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಇದರೊಂದಿಗೆ ಮಧ್ಯಪ್ರದೇಶದ 3ನೇ ರಾಜ್ಯಸಭಾ ಸ್ಥಾನಕ್ಕೆ ಸ್ಪರ್ಧೆ ಇಲ್ಲದಂತಾಗಿದೆ.

ಬಿಜೆಪಿ ಅಭ್ಯರ್ಥಿ ಮಹೇಶ್ ಕೇವತ್ ಅವರು ಸಲ್ಲಿಸಿದ್ದ ಆಕ್ಷೇಪಣೆಯ ಆಧಾರದ ಮೇಲೆ ಚುನಾವಣಾಧಿಕಾರಿಯು ಮೀನಾಕ್ಷಿ ನಟರಾಜನ್ ಅವರಿಗೆ ನೋಟಿಸ್ ಜಾರಿ ಮಾಡಿದ್ದರು. ಎರಡೂ ಕಡೆಯ ವಾದ- ಪ್ರತಿವಾದ ಆಲಿಸಿ, ಕೂಲಂಕಷ ತನಿಖೆಯ ನಂತರ ಚುನಾವಣಾಧಿಕಾರಿ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ಅವರ ನಾಮಪತ್ರವನ್ನು ತಿರಸ್ಕರಿಸಿದ್ದಾರೆ.

ಕಾಂಗ್ರೆಸ್ ನಾಯಕರಿಂದ ಧರಣಿ :
ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡ ಬೆನ್ನಲ್ಲೇ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ನೇತೃತ್ವದ ನಿಯೋಗವು ಮನವಿ ಸಲ್ಲಿಸಲು ದೆಹಲಿಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ತೆರಳಿತ್ತು. ಆದರೆ ಕಾಂಗ್ರೆಸ್‌ ನಾಯಕರನ್ನು ಭೇಟಿ ಮಾಡಲು ಚುನಾವಣಾ ಆಯೋಗವು ನಿರಾಕರಿಸಿತು. ಇದರಿಂದ ಆಕ್ರೋಶಗೊಂಡ ಕೆ.ಸಿ. ವೇಣುಗೋಪಾಲ್, ಸಚಿನ್ ಪೈಲಟ್ ಮತ್ತು ಭೂಪೇಶ್ ಬಘೇಲ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗದ ಕಚೇರಿಯ ಹೊರಗೆ ಧರಣಿ ನಡೆಸಿದರು.

ಗೆದ್ದು ಬೀಗಿದ ಬಿಜೆಪಿ:
ಪ್ರಸ್ತುತ 230 ಸದಸ್ಯ ಬಲ ಇರುವ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಒಟ್ಟು ಮತಗಳ ಸಂಖ್ಯೆ 228. ಬಿಜೆಪಿ 164 ಶಾಸಕರನ್ನು ಹೊಂದಿದ್ದರೆ, ಕಾಂಗ್ರೆಸ್ 64 ಶಾಸಕರನ್ನು ಹೊಂದಿದೆ. 3 ರಾಜ್ಯಸಭಾ ಸ್ಥಾನಗಳನ್ನು ಗೆಲ್ಲಲು ಪ್ರತಿಯೊಬ್ಬ ಅಭ್ಯರ್ಥಿಗೆ 58 ಮತಗಳು ಬೇಕಾಗುತ್ತವೆ. ಅದರಂತೆ, ಬಿಜೆಪಿಗೆ 2 ಸ್ಥಾನಗಳನ್ನು ಗೆಲ್ಲಲು 116 ಮತಗಳು ಬೇಕಾಗುತ್ತವೆ. ಒಟ್ಟು 164 ಮತಗಳಲ್ಲಿ 116 ಮತಗಳನ್ನು ಪಡೆದ ನಂತರ, ಬಿಜೆಪಿಗೆ ಉಳಿದ 48 ಮತಗಳು ಇರುತ್ತವೆ. 3 ನೇ ಸ್ಥಾನವನ್ನು ಗೆಲ್ಲಲು 58 ಮತಗಳು ಬೇಕಾಗುತ್ತವೆ. ಅಂದರೆ ಬಿಜೆಪಿಗೆ 10 ಹೆಚ್ಚುವರಿ ಮತಗಳು ಬೇಕಾಗಿತ್ತು. ಆದರೆ ಇದೀಗ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತಗೊಂಡಿದ್ದರಿಂದ ಮಧ್ಯಪ್ರದೇಶದ 3ನೇ ರಾಜ್ಯಸಭಾ ಸ್ಥಾನಕ್ಕೆ ಸ್ಪರ್ಧೆ ಇಲ್ಲದಂತಾಗಿದೆ.

ಕಾಂಗ್ರೆಸ್‌‌‌‌‌ ಶಾಸಕರ ಶಿಫ್ಟ್ ಕ್ಯಾನ್ಸಲ್:
ರಾಜ್ಯಸಭಾ ಚುನಾವಣೆಯಲ್ಲಿ ಕ್ರಾಸ್‌ ವೋಟಿಂಗ್ ತಡೆಯಲು ಶಾಸಕರನ್ನು ಬೆಂಗಳೂರಿನ ರೆಸಾರ್ಟ್‌ಗೆ ಸ್ಥಳಾಂತರಿಸಲು ಕಾಂಗ್ರೆಸ್‌ ಮುಂದಾಗಿತ್ತು. ಆದರೆ ಮೀನಾಕ್ಷಿ ಅವರ ನಾಮಪತ್ರ ತಿರಸ್ಕೃತ ಹಿನ್ನೆಲೆ, ಭೋಪಾಲ್‌ನಿಂದ ಬೆಂಗಳೂರಿಗೆ ಬರಬೇಕಿದ್ದ ಶಾಸಕರನ್ನು ರೆಸಾರ್ಟ್‌ಗೆ ಶಿಫ್ಟ್ ಮಾಡುವುದನ್ನ ಕಾಂಗ್ರೆಸ್ ಕೈಬಿಟ್ಟಿದೆ.

Also Read: ‘ದೇವೇಗೌಡರ ಬಗ್ಗೆ ಕಾಂಗ್ರೆಸ್‌ಗೆ ಅನುಕಂಪ ಯಾಕೆ?’: ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಮೂಡಿಸುವ ಯತ್ನವಷ್ಟೇ ಎಂದ HDK

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

‘ದೇವೇಗೌಡರ ಮೇಲಿನ ಕಾಂಗ್ರೆಸ್ ಅನುಕಂಪ ಕೇವಲ ನಾಟಕ!’: ಮೈತ್ರಿ ಬಿರುಕಿನ ಯತ್ನಕ್ಕೆ HDK ತಿರುಗೇಟು

VISTARANEWS.COM


on

ಮೈತ್ರಿ ಬಿರುಕಿನ ಯತ್ನಕ್ಕೆ HDK ತಿರುಗೇಟು

ಮೈತ್ರಿ ಬಿರುಕಿನ ಯತ್ನ ನಡೆಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರ ಮೇಲಿನ ಕಾಂಗ್ರೆಸ್‌ನ ಅನುಕಂಪ ಕೇವಲ ರಾಜಕೀಯ ನಾಟಕ ಎಂದು ಮಂಡ್ಯದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, “ಕಾಂಗ್ರೆಸ್‌ನವರು ದೇವೇಗೌಡರನ್ನು ಯಾವ ರೀತಿ ನಡೆಸಿಕೊಂಡಿದ್ದಾರೆ ಎಂಬುದು ರಾಜ್ಯದ ಜನರಿಗೆ ಗೊತ್ತಿದೆ. ಈಗ ಏಕಾಏಕಿ ಅವರ ಬಗ್ಗೆ ಅನುಕಂಪ ತೋರಿಸುತ್ತಿರುವುದು ರಾಜಕೀಯ ಲಾಭಕ್ಕಾಗಿ. ಅವರ ಉದ್ದೇಶ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಮೂಡಿಸುವುದಷ್ಟೇ” ಎಂದು ಟೀಕಿಸಿದರು.

ರಾಜ್ಯಸಭೆ ಸದಸ್ಯತ್ವದ ವಿಚಾರವನ್ನು ಉಲ್ಲೇಖಿಸಿದ ಅವರು, “ನಾವು ದೇವೇಗೌಡರಿಗೆ ಟಿಕೆಟ್ ನೀಡಿ ಎಂದು ಯಾರ ಬಳಿಯೂ ಅರ್ಜಿ ಹಾಕಿಲ್ಲ. ದೇವೇಗೌಡರು ಕೂಡ ನನಗೆ ಟಿಕೆಟ್ ಕೊಡಿ ಎಂದು ಯಾರನ್ನೂ ಕೇಳಿಲ್ಲ. ಹೀಗಿರುವಾಗ ಈ ವಿಚಾರದಲ್ಲಿ ಕಾಂಗ್ರೆಸ್ ಅನಗತ್ಯ ರಾಜಕೀಯ ಮಾಡುತ್ತಿದೆ” ಎಂದು ಹೇಳಿದರು.

“ದೇವೇಗೌಡರು ರಾಜ್ಯಸಭೆಯಲ್ಲಿ ಇದ್ದಿದ್ದರೆ ಅಲ್ಲಿಯೂ ಜನರ ಪರವಾಗಿ ಧ್ವನಿ ಎತ್ತುತ್ತಿದ್ದರು ಎಂದು ಕೆಲವರು ಹೇಳುತ್ತಾರೆ. ಅದು ಬೇರೆ ವಿಷಯ. ಆದರೆ ಅವರು ಅಧಿಕಾರದಲ್ಲಿರಲಿ ಅಥವಾ ಅಧಿಕಾರದ ಹೊರಗಿರಲಿ, ಸದಾ ಜನಪರ ಧ್ವನಿಯನ್ನೇ ಎತ್ತಿದ್ದಾರೆ” ಎಂದು ಕುಮಾರಸ್ವಾಮಿ ಹೇಳಿದರು.

ದೇವೇಗೌಡರ ರಾಜಕೀಯ ಜೀವನ ಹೋರಾಟದಿಂದ ಕೂಡಿದ್ದು, ಅಧಿಕಾರಕ್ಕಾಗಿ ಅವರು ಎಂದಿಗೂ ಯಾರ ಮನೆಯ ಬಾಗಿಲಿಗೂ ಹೋಗಿಲ್ಲ ಎಂದು ಕುಮಾರಸ್ವಾಮಿ ಹೇಳಿದರು. ಕಾಂಗ್ರೆಸ್ ನಾಯಕರ ಟೀಕೆಗಳಿಗೆ ತಿರುಗೇಟು ನೀಡಿದ ಅವರು, ದೇವೇಗೌಡರ ರಾಜಕೀಯ ವ್ಯಕ್ತಿತ್ವ ಮತ್ತು ಕೊಡುಗೆಯನ್ನು ಪ್ರಶ್ನಿಸುವ ನೈತಿಕ ಹಕ್ಕು ಕಾಂಗ್ರೆಸ್‌ಗೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Also Read: ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading
Advertisement
Latest29 minutes ago

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ನರೇಂದ್ರ ಮೋದಿ
Latest4 hours ago

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

ರಾಜ್ಯಸಭೆ ಟಿಕೆಟ್‌
ಪ್ರಮುಖ ಸುದ್ದಿ1 day ago

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

ನರೇಂದ್ರ ಮೋದಿ
Latest1 day ago

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

ಆರೆಂಜ್ ಅಲರ್ಟ್‌
Latest1 day ago

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಮೀನಾಕ್ಷಿ ನಟರಾಜನ್
Latest1 day ago

ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

Latest2 days ago

‘ದೇವೇಗೌಡರ ಮೇಲಿನ ಕಾಂಗ್ರೆಸ್ ಅನುಕಂಪ ಕೇವಲ ನಾಟಕ!’: ಮೈತ್ರಿ ಬಿರುಕಿನ ಯತ್ನಕ್ಕೆ HDK ತಿರುಗೇಟು

Latest2 days ago

H-1B ವೀಸಾ ಶುಲ್ಕಕ್ಕೆ ಕೋರ್ಟ್ ಬ್ರೇಕ್: ಟ್ರಂಪ್ ಸರ್ಕಾರದ ಆದೇಶ ಅಸಿಂಧು, ಭಾರತೀಯರು ನಿರಾಳ

ಪಿಂಕ್ ಲೈನ್ ಮೆಟ್ರೋ
Latest2 days ago

ಆಗಸ್ಟ್ 15ಕ್ಕೆ ಪಿಂಕ್ ಲೈನ್ ಮೆಟ್ರೋ ಸಂಚಾರ ಆರಂಭ? ದಕ್ಷಿಣ ಬೆಂಗಳೂರಿಗೆ ಸಂಚಾರ ದಟ್ಟಣೆಯಿಂದ ಮುಕ್ತಿ ನಿರೀಕ್ಷೆ

ಮುಂದಿನ ಐದು ದಿನ ಭಾರೀ ಮಳೆ
Latest2 days ago

ಮುಂದಿನ ಐದು ದಿನ ಭಾರೀ ಮಳೆಯ ಮುನ್ಸೂಚನೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌