Lok sabha Election 2024 : ಟಿಕೆಟ್‌ ಕೈತಪ್ಪಿದ ಆಕ್ರೋಶ; ಬಿಜೆಪಿ ಕಚೇರಿಗೇ ಸಂಗಣ್ಣ ಕರಡಿ ಬೆಂಬಲಿಗರ ದಾಳಿ - Vistara News

ಪ್ರಮುಖ ಸುದ್ದಿ

Lok sabha Election 2024 : ಟಿಕೆಟ್‌ ಕೈತಪ್ಪಿದ ಆಕ್ರೋಶ; ಬಿಜೆಪಿ ಕಚೇರಿಗೇ ಸಂಗಣ್ಣ ಕರಡಿ ಬೆಂಬಲಿಗರ ದಾಳಿ

Lok sabha Election 2024 : ಕೊಪ್ಪಳದಲ್ಲಿ ಟಿಕೆಟ್‌ ಮಿಸ್‌ ಆಗಿರುವ ಸಂಗಣ್ಣ ಕರಡಿ ಅವರ ಬೆಂಬಲಿಗರು ಆಕ್ರೋಶಿತರಾಗಿ ಬಿಜೆಪಿ ಕಚೇರಿಗೇ ಮುತ್ತಿಗೆ ಹಾಕಿ ದಾಂಧಲೆ ನಡೆಸಿದ್ದಾರೆ. ಅಭ್ಯರ್ಥಿ ಬಸವರಾಜ ಅವರಿಗೂ ಮುತ್ತಿಗೆ ಹಾಕಿದ್ದಾರೆ.

VISTARANEWS.COM


on

Karadi Sanganna Fans
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಪ್ಪಳ: ಕೊಪ್ಪಳ ಸಂಸದರಾಗಿರುವ ಕರಡಿ ಸಂಗಣ್ಣ (Koppala MP Sanganna Karadi) ಅವರಿಗೆ ಬಿಜೆಪಿ ಟಿಕೆಟ್‌ ಮಿಸ್‌ ಆಗಿರುವುದು ಅವರ ಬೆಂಬಲಿಗರನ್ನು ಕೆರಳಿಸಿದೆ. ಅವರು ಎಷ್ಟರ ಮಟ್ಟಿಗೆ ಆಕ್ರೋಶಿತರಾಗಿದ್ದಾರೆ ಎಂದು ಜಿಲ್ಲಾ ಬಿಜೆಪಿ ಕಚೇರಿಗೇ ನುಗ್ಗಿ ದಾಂಧಲೆ ನಡೆಸುತ್ತಿದ್ದಾರೆ. ಲೋಕಸಭಾ ಚುನಾವಣೆಗೆ (Lok sabha Election 2024) ಸಂಗಣ್ಣ ಕರಡಿ ಬದಲು ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್‌ ಪಡೆದಿರುವ ಡಾ. ಕೆ. ಬಸವರಾಜ (BJP Candidate Dr. K Basavaraja) ಹಾಗೂ ದೊಡ್ಡನಗೌಡ ಪಾಟೀಲ್ ಮಾಧ್ಯಮಗೋಷ್ಠಿ ನಡೆಯುತ್ತಿದ್ದಾಗಲೇ ಲಗ್ಗೆ ಇಟ್ಟ ಅಭಿಮಾನಿಗಳು ಕಲ್ಲು ತೂರಾಟ ನಡೆಸಿ ಕಿಟಕಿಗಳನ್ನು ಒಡೆದು ಹಾಕಿದ್ದಾರೆ. ಭಾರತ ಮಾತೆಯ ಫೋಟೊವನ್ನೂ ಪುಡಿಗಟ್ಟಿದ್ದಾರೆ.

ಸಂಗಣ್ಣ ಕರಡಿ ಮನೆಗೆ ಬಂದ ಅಭ್ಯರ್ಥಿ ಬಸವರಾಜ ಘೇರಾವ್‌

ಈ ನಡುವೆ, ನೂತನ ಅಭ್ಯರ್ಥಿ ಡಾ. ಕೆ. ಬಸವರಾಜ ಅವರು ಹಾಲಿ ಸಂಸದ ಸಂಗಣ್ಣ ಕರಡಿ ಅವರನ್ನು ಭೇಟಿಯಾಗಲು ಮನೆಗೆ ಬಂದಾಗಲೂ ಬೆಂಬಲಿಗರ ಆಕ್ರೋಶ ಜೋರಾಗಿತ್ತು. ಅಭ್ಯರ್ಥಿ ಡಾ. ಕೆ. ಬಸವರಾಜ ಅವರು ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಜೊತೆಗೆ ಆಗಮಿಸಿದಾಗ ಅವರನ್ನು ತಡೆದ ಸಂಗಣ್ಣ ಬೆಂಬಲಿಗರು ಆಕ್ರೋ ವ್ಯಕ್ತಪಡಿಸಿದರು.

ʻʻಯಾರನ್ನು ಕೇಳಿ ಟಿಕೆಟ್ ಪಡೆದಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ ಸಂಗಣ್ಣ ಬೆಂಬಲಿಗರು, ಮಾನ ಮರ್ಯಾದೆ ಇದ್ದರೆ ಬರಬಾರದಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಂಗಣ್ಣ ಕರಡಿ ಪರ ಜೈಘೋಷ ಕೂಗಿದ ಅಭಿಮಾನಿಗಳು, ಬಿಜೆಪಿ, ವಿಜಯೇಂದ್ರ ವಿರುದ್ಧ ಘೋಷಣೆ ಕೂಗಿದರು. ನೀವು ಸೋಲುತ್ತಿರಿ ಎಂದು ಡಾ. ಕೆ. ಬಸವರಾಜ್‌ ಅವರಿಗೆ ಎಚ್ಚರಿಕೆ ನೀಡಿದರು.

Karadi Sanganna Fans1
ಕಲ್ಲು ತೂರಾಟದಿಂದ ಬಿಜೆಪಿ ಕಚೇರಿ ಗಾಜು ಒಡೆದಿರುವುದು.

ಬೇರೆ ಪಕ್ಷ ಸೇರುವ ಯೋಚನೆ ಮಾಡಿಲ್ಲ ಎಂದ ಕರಡಿ ಸಂಗಣ್ಣ

ಬಿಜೆಪಿ ಟಿಕೆಟ್‌ ಮಿಸ್‌ ಆಗಿರುವ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು ಗುರುವಾರ ತಮ್ಮ ಮನೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬೇರೆ ಪಕ್ಷ ಸೇರುವ ಚರ್ಚೆ ಮಾಡಿಲ್ಲ ಎಂದರು.

ʻʻನನಗೆ ಟಿಕೇಟ್‌ ಮಿಸ್‌ ಆಗಿದ್ದರಿಂದ ಬೇರೆ ಬೇರೆ ಪಕ್ಷದವರು ಸೌಜನ್ಯಕ್ಕಾಗಿ ಕರೆ ಮಾಡಿ ಮಾತನಾಡಿದ್ದಾರೆ. ಆದರೆ ಪಕ್ಷಕ್ಕೆ ಸೇರುವ ಕುರಿತು ಯಾವುದೇ ರೀತಿ ಚರ್ಚೆ ಮಾಡಿಲ್ಲ. ಹಿರಿತನ, ಕೆಲಸ ಮಾಡಿರುವ ನನಗೆ ಟಿಕೇಟ್‌ ಮಿಸ್‌ ಆಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತೇವೆ ಎಂದಿದ್ದಾರೆ. ಕಾಂಗ್ರೆಸ್‌ ಅಥವಾ ಕೆಆರ್‌ಪಿಪಿ ಗೆ ಹೋಗುವ ಯೋಚನೆ ಇಲ್ಲ. ಬಿಜೆಪಿಯಲ್ಲಿಯೇ ಇರುತ್ತೇನೆ. ಕಾರ್ಯಕರ್ತರಿಗೆ ನೋವಾಗಿರುತ್ತದೆ. ಅವರನ್ನು ಸಮಾಧಾನ ಮಾಡಬೇಕುʼʼ ಎಂದು ಹೇಳಿದರು.

ಮೋದಿ ಅವರನ್ನು ಇಡೀ ಜಗತ್ತೇ ಮೆಚ್ಚಿದೆ. ನಾನೂ ಅವರನ್ನು ಬೆಂಬಲಿಸುತ್ತೇನೆ. ಘೋಷಿತ ಅಭ್ಯರ್ಥಿ ಡಾ. ಕೆ. ಬಸವರಾಜ ಅವರನ್ನು ಬೆಂಬಲಿಸುವಂತೆ ಕಾರ್ಯಕರ್ತರಿಗೆ ನಾನು ಮನವಿ ಮಾಡುತ್ತೇನೆ ಎಂದು ಸಂಗಣ್ಣ ಕರಡಿ ಹೇಳಿದರು.

ಕೊಪ್ಪಳದಲ್ಲಿ ಎಂಎಲ್ಸಿ ಹೇಮಲತಾ ನಾಯಕ್ ಪೌರುಷ

ಈ ನಡುವೆ, ಟಿಕೇಟ್ ಮಿಸ್ ಆದ ಹಿನ್ನೆಲೆಯಲ್ಲಿ ಸಂಸದ ಸಂಗಣ್ಣ ಕರಡಿ ತಮ್ಮ ನಿವಾಸದಲ್ಲಿ ಪ್ರೆಸ್ ಮೀಟ್ ಮಾಡುತ್ತಿದ್ದ ವೇಳೆ ಎಂಎಲ್‌ಸಿ ಹೇಮಲತಾ ಸಿಟ್ಟಿಗೆದ್ದ ಘಟನೆಯೂ ನಡೆಯುತು.

ಪ್ರೆಸ್ ಮೀಟ್ ನಲ್ಲಿ ಎಂಎಲ್ಸಿ ಹೇಮಲತಾ ನಾಯಕ್ ಸಹ ಕುಳಿತಿದ್ದರು. ಸಂಗಣ್ಣ ಕರಡಿಗೆ ಟಿಕೆಟ್ ಮಿಸ್ ಆದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕಾರ್ಯಕರ್ತ ʻʻನೀವೇಕೆ ಇಲ್ಲಿ ಕುಳಿತಿದ್ದೀರಿʼʼ ಎಂದು ಆಕ್ರೋಶದಿಂದ ಹೇಮಲತಾ ಅವರನ್ನು ಪ್ರಶ್ನಿಸಿದ. ಇದರಿಂದ ರೊಚ್ಚಿಗೆದ್ದ ಎಂಎಲ್ಸಿ ಹೇಮಲತಾ ನಾಯಕ್, ಯಾಕೋ ಬದ್ಮಾಷ್… ಬೂಟು ತೆಗೆದುಕೊಂಡೇನುʼ ಎಂದು ರೋಷಾವೇಶದಿಂದ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Valmiki Corporation Scam: ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ; ಎಂಡಿ, ಲೆಕ್ಕಾಧಿಕಾರಿ ಅಮಾನತು

Valmiki Corporation Scam: 88 ಕೋಟಿ ರೂ. ದುರುಪಯೋಗ ಪ್ರಕರಣದಲ್ಲಿ ವಾಲ್ಮೀಕಿ ನಿಗಮದ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತು ಮಾಡಿದ್ದು, ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಕ ಮಾಡಲಾಗಿದೆ.

VISTARANEWS.COM


on

Valmiki corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ (Valmiki Corporation Scam) ವಾಲ್ಮೀಕಿ ನಿಗಮದ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತು ಗೊಳಿಸಿದೆ. ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದ ರಾಜ್ಯ ಸರ್ಕಾರ, ಇದೀಗ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ, ವಾಲ್ಮೀಕಿ ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ನೇಮಿಸಿದೆ.

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ.

ಇನ್ನು 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆಯುತ್ತಿದ್ದಾರೆ. ಶಿವಮೊಗ್ಗ ಮತ್ತು ಬೆಂಗಳೂರಿನ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ | ವಾಲ್ಮೀಕಿ ನಿಗಮ ಅಧೀಕ್ಷಕ ಆತ್ಮಹತ್ಯೆ ಪ್ರಕರಣ: ಮೂವರ ಮೇಲೆ ಎಫ್‌ಐಆರ್; ಡೆತ್‌ ನೋಟ್‌ನಲ್ಲಿರುವ ಸಚಿವ ಯಾರು?

ವಾಲ್ಮೀಕಿ ನಿಗಮದ ಪ್ರಭಾರ ಎಂಡಿಯಾಗಿ ಡಾ. ಕೆ. ಆರ್. ರಾಜ್ ಕುಮಾರ್ ನೇಮಕ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 88 ಕೋಟಿ ಹಣ ದುರುಪಯೋಗ ಪ್ರಕರಣದಲ್ಲಿ MD ಜೆ. ಜೆ. ಪದ್ಮನಾಭ ಅವರನ್ನು ರಾಜ್ಯ ಸರ್ಕಾರ ಅಮಾನತು ಗೊಳಿಸಿದ ಬೆನ್ನಲ್ಲೇ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ವ್ಯವಸ್ಥಾಪಕ ನಿರ್ದೇಶಕರ ಸ್ಥಾನಕ್ಕೆ ಪ್ರಭಾರರಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Continue Reading

ಕ್ರೀಡೆ

Team India Coach: ಅಭಿಮಾನಿಗಳು ಬಯಸಿದರೂ ಕೋಚ್​ ಹುದ್ದೆಗೆ ಧೋನಿ ಅನರ್ಹ; ಕಾರಣವೇನು?

Team India Coach: ಬಿಸಿಸಿಐ(BCCI) ನಿಯಮಗಳ ಪ್ರಕಾರ ಭಾರತ ತಂಡದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿರಬೇಕು. ಧೋನಿ ಇನ್ನೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿ ಅವರು ಅರ್ಜಿ ಸಲ್ಲಿಸಿದರೂ ಕೂಡ ಅದು ಅನರ್ಹಗೊಳ್ಳಲಿದೆ.

VISTARANEWS.COM


on

Team India Coach
Koo

ಮುಂಬಯಿ: ಗೌತಮ್ ಗಂಭೀರ್(Gautam Gambhir)​ ಅವರು ಟೀಮ್​ ಇಂಡಿಯಾದ ಮುಂದಿನ ಕೋಚ್(Team India Coach)​ ಆಗುವುದು ಬಹುತೇಖ ಖಚಿತ ಎನ್ನಲಾಗಿದೆ. ಅಧಿಕೃತ ಘೋಷಣೆಯೊಂದು ಮಾತ್ರ ಬಾಕಿ ಉಳಿದಿದೆ. ಈ ಮಧ್ಯೆ ಭಾರತಕ್ಕೆ 2 ವಿಶ್ವಕಪ್​ ಗೆದ್ದ ಮಹೇಂದ್ರ ಸಿಂಗ್​ ಧೋನಿ(MS Dhoni) ಕೋಚ್​ ಆದರೆ ಉತ್ತಮ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಧೋನಿ ಕೋಚ್ ಹುದ್ದೆಗೆ ಅನರ್ಹರು ಎಂದು ತಿಳಿದುಬಂದಿದೆ.

ಹೌದು, ಬಿಸಿಸಿಐ(BCCI) ನಿಯಮಗಳ ಪ್ರಕಾರ ಭಾರತ ತಂಡದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿರಬೇಕು. ಧೋನಿ ಇನ್ನೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿ ಅವರು ಅರ್ಜಿ ಸಲ್ಲಿಸಿದರೂ ಕೂಡ ಅದು ಅನರ್ಹಗೊಳ್ಳಲಿದೆ. ಧೋನಿ ಎಲ್ಲ ಕ್ರಿಕೆಟ್​ ವಿದಾಯ ಹೇಳಿದರೆ ಅವರು ಕೂಡ ಕೋಚ್​ ಹುದ್ದೆಗೆ ಅರ್ಹರಾಗಿತ್ತಾರೆ. 2021 ರಲ್ಲಿ ಭಾರತದ ಆತಿಥ್ಯದಲ್ಲಿ ಯುಎಇಯಲ್ಲಿ ನಡೆದಿದ್ದ ಟಿ 20 ವಿಶ್ವಕಪ್‌ನಲ್ಲಿ ಎಂಎಸ್ ಧೋನಿ ಭಾರತ ತಂಡಕ್ಕೆ ಮೆಂಟರ್ ಆಗಿ ಕಾರ್ಯನಿರ್ವಹಿಸಿದ್ದರು.

ಇದನ್ನೂ ಓದಿ Team India Coach: ಟೀಮ್​ ಇಂಡಿಯಾದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ ಪ್ರಧಾನಿ ಮೋದಿ, ಅಮಿತ್ ಶಾ!

ಈ ಬಾರಿಯ ಐಪಿಎಲ್​ ಬಳಿಕ ಧೋನಿ ನಿವೃತ್ತಿ ಹೊಂದುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಮೂಲಗಳ ಪ್ರಕಾರ ಧೋನಿ ಮುಂದಿನ ಆವೃತ್ತಿಯ ಐಪಿಎಲ್​ನಲ್ಲಿಯೂ ಆಡುತ್ತಾರೆ ಎನ್ನಲಾಗಿದ್ದು ಇದೇ ಕಾರಣಕ್ಕೆ ಅವರು ನಿವೃತ್ತಿ ಘೋಷಿಸಿಲ್ಲ ಎನ್ನಲಾಗಿದೆ.

2011ರಲ್ಲಿ ಗ್ಯಾರಿ ಕಸ್ಟನ್ ಮಾರ್ಗದರ್ಶನದಲ್ಲಿ ಭಾರತ 2ನೇ ಬಾರಿಗೆ ವಿಶ್ವಕಪ್​ ಗೆದ್ದಿತ್ತು. ಬಳಿಕ 2013ರಲ್ಲಿ ಡಂಕನ್​ ಪ್ಲೆಚರ್​ ಮಾರ್ಗದರ್ಶನದಲ್ಲಿ ಭಾರತ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಜಯಿಸಿತ್ತು. ಇದಾದ ಬಳಿಕ ಭಾರತ ಇದುವರೆಗೂ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ರವಿಶಾಸ್ತ್ರಿ ಮತ್ತು ರಾಹುಲ್​ ದ್ರಾವಿಡ್​ ಮಾರ್ಗದರ್ಶನಲ್ಲಿ 2 ಏಕದಿನ ವಿಶ್ವಕಪ್​ ಆಡಿದರೂ ಭಾರತ ಕಪ್​ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ವಿದೇಶಿ ಕೋಚ್​ ಆಯ್ಕೆಯೇ ಉತ್ತಮ ಎಂದು ಬಿಸಿಸಿಐ ಆರಂಭಿಕ ಹಂತದಲ್ಲಿ ಯೋಚಿಸಿತ್ತು. ಆದರೆ ಅನೇಕ ವಿದೇಶಿ ಆಟಗಾರರು ಕೋಚ್​ ಆಗಲಿ ಆಸಕ್ತಿ ಹೊಂದಿಲ್ಲ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಹೀಗಾಗಿ ಬಿಸಿಸಿಐ ದೇಶೀಯ ಆಟಗಾರರ ಮೊರೆ ಹೋದಂತಿದೆ.

ಮೂಲಗಳ ಪ್ರಕಾರ ಗೌತಮ್​ ಗಂಭೀರ್​ ಅವರು ಭಾರತ ತಂಡದ ಕೋಚ್ ಆಗುವ ಸಾಧ್ಯತೆ ಕಂಡುಬಂದಿದೆ. ಭಾನುವಾರ ಮುಕ್ತಾಯ ಕಂಡ 17ನೇ ಆವೃತ್ತಿಯ ಐಪಿಎಲ್​ ಟೂರ್ನಿಯಲ್ಲಿ ಕೆಕೆಆರ್​ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ಗೌತಮ್​ ಗಂಭೀರ್​ ತಂಡದ ಮೆಂಟರ್​ ಆಗಿದ್ದರು. ಪಂದ್ಯದ ಮುಕ್ತಾಯದ ಬಳಿಕ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅವರು ಗಂಭೀರ್​ ಜತೆ ಅತ್ಯಂತ ಆತ್ಮೀಯವಾಗಿ ಸುರ್ದೀಘ ಚರ್ಚೆ ಕೂಡ ನಡೆಸಿದ್ದರು. ಇದನ್ನೆಲ್ಲ ನೋಡುವಾಗ ಗಂಭೀರ್​ ಕೋಚ್​ ಆಗುವುದು ಬಹುತೇಖ ಖಚಿತವಾದಂತಿದೆ. ಐಪಿಎಲ್‌ ಫ್ರಾಂಚೈಸಿಯೊಂದರ ಅತಿ ಪ್ರಭಾವಿ ಮಾಲಕರೊಬ್ಬರು ಗೌತಮ್‌ ಗಂಭೀರ್‌ ಕೋಚ್‌ ಆಗುವ ಒಪ್ಪಂದ ನಡೆದಾಗಿದೆ ಎಂದು ಹೇಳಿದ್ದಾರೆ. ಜತೆಗೆ ಸದ್ಯದಲ್ಲೇ ಈ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ ಎಂದಿದ್ದಾರೆ.

Continue Reading

ಕರ್ನಾಟಕ

Sudha Murty: ಡಾ.ಮಂಜುನಾಥ್‌ ಗೆಲುವಿಗಾಗಿ ರಾಯರಿಗೆ ವಿಶೇಷ ಹರಕೆ ಹೊತ್ತ ಸುಧಾಮೂರ್ತಿ; ಏನದು?

Sudha Murty: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಡಿ.ಕೆ.ಸುರೇಶ್‌ ಅವರ ವಿರುದ್ಧ ಕಣಕ್ಕಿಳಿದಿರುವ ಹೃದಯವಂತ ಡಾ.ಸಿ.ಎನ್.ಮಂಜುನಾಥ್‌ ಅವರ ಗೆಲುವಿಗಾಗಿ ರಾಜ್ಯಸಭೆ ಸದಸ್ಯೆ ಸುಧಾ ಮೂರ್ತಿ ಅವರು ವಿಶೇಷ ಹರಕೆಯೊಂದನ್ನು ಹೊತ್ತುಕೊಂಡಿದ್ದಾರೆ. ಹರಕೆ ಕುರಿತು ಅವರೇ ಮಾತನಾಡಿದ್ದಾರೆ. ಹಾಗಾದರೆ, ಸುಧಾ ಮೂರ್ತಿ ಅವರ ವಿಶೇಷ ಹರಕೆ ಏನು? ಇಲ್ಲಿದೆ ಮಾಹಿತಿ.

VISTARANEWS.COM


on

Sudha Murty
Koo

ಬೆಂಗಳೂರು: ಇನ್ಫೋಸಿಸ್‌ ಪ್ರತಿಷ್ಠಾನದ ಸಂಸ್ಥಾಪಕಿ, ರಾಜ್ಯಸಭೆ ಸದಸ್ಯೆ, ಲೇಖಕಿ ಹಾಗೂ ಸಮಾಜ ಸೇವೆಯಿಂದಲೂ ಗುರುತಿಸಿಕೊಂಡಿರುವ ಸುಧಾ ಮೂರ್ತಿ (Sudha Murty) ಅವರು ವಿಶೇಷ ಹರಕೆ ಹೊತ್ತಿದ್ದಾರೆ. ಹಾಗಂತ, ಸುಧಾ ಮೂರ್ತಿ ಅವರು ತಮಗಾಗಿ, ತಮ್ಮ ಕುಟುಂಬಸ್ಥರ ಏಳಿಗೆಗಾಗಿ ಹರಕೆ ಹೊತ್ತಿಲ್ಲ. ಬದಲಾಗಿ, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಾ.ಸಿ.ಎನ್‌.ಮಂಜುನಾಥ್‌ (Dr C N Manjunath) ಅವರ ಗೆಲುವಿಗಾಗಿ ಮಂತ್ರಾಲಯದ ರಾಯರ ಬಳಿ ಸುಧಾ ಮೂರ್ತಿ ಅವರು ಹರಕೆ ಹೊತ್ತಿದ್ದಾರೆ.

ಡಾ.ಮಂಜುನಾಥ್ ಅವರೇ ಕಾರ್ಯಕ್ರಮವೊಂದರಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ಡಾ.ಸಿ.ಎನ್‌. ಮಂಜುನಾಥ್‌ ಅವರು ಗೆಲುವು ಸಾಧಿಸಿದರೆ ಮಂತ್ರಾಲಯದಿಂದ 6 ಕಿಲೋಮೀಟರ್‌ ದೂರದ ಜಾಗದಿಂದ ಕಾಲ್ನಡಿಗೆಯಲ್ಲಿ ತೆರಳಿ ರಾಯರ ಪೂಜೆ ಮಾಡುತ್ತೇನೆ ಎಂಬುದಾಗಿ ಸುಧಾ ಮೂರ್ತಿ ಅವರು ಹೇಳಿದ್ದಾರೆ. ಲೋಕಸಭೆ ಚುನಾವಣೆ ಮುಗಿದ ಬಳಿಕ ನಾನು ಸುಧಾ ಮೂರ್ತಿ ಅವರ ನಿವಾಸಕ್ಕೆ ಭೇಟಿ ನೀಡಿದ್ದೆ. ಇದೇ ವೇಳೆ ಸುಧಾ ಮೂರ್ತಿ ಅವರು ತಮ್ಮ ಹರಕೆ ಕುರಿತು ಹೇಳಿದ್ದಾರೆ” ಎಂದು ಮಂಜುನಾಥ್‌ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ. ಡಾ.ಮಂಜುನಾಥ್‌ ಅವರ ಭಾಷಣದ ವಿಡಿಯೊವನ್ನು ‘ಬೆಂಗಳೂರು ಮೀಡಿಯಾ ವರ್ಲ್ಡ್‌ ಬಿಎಂಡಬ್ಲ್ಯೂ’ ಯುಟ್ಯೂಬ್‌ನಲ್ಲಿ ಹಂಚಿಕೊಂಡಿದೆ.

ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಲೋಕಸಭೆ ಚುನಾವಣೆ ಮುಕ್ತಾಯಗೊಂಡಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದ್ದು, ಎಲ್ಲ 28 ಕ್ಷೇತ್ರಗಳ ನೂರಾರು ಅಭ್ಯರ್ಥಿಗಳಲ್ಲಿ ಕುತೂಹಲ ನೂರ್ಮಡಿಯಾಗಿದೆ. ಹಾಗಾಗಿ, ಆಯಾ ಅಭ್ಯರ್ಥಿಗಳ ಕುಟುಂಬಸ್ಥರು ದೇವರಿಗೆ ಹತ್ತಾರು ಹರಕೆ ಹೊತ್ತುಕೊಂಡಿದ್ದಾರೆ. ಆದರೆ, ಸುಧಾ ಮೂರ್ತಿ ಅವರು ಜಯದೇವ ಆಸ್ಪತ್ರೆ ನಿರ್ದೇಶಕರೂ ಆಗಿದ್ದ ಡಾ.ಸಿ.ಎನ್.ಮಂಜುನಾಥ್‌ ಅವರ ಗೆಲುವಿಗಾಗಿ ಹರಕೆ ಹೊತ್ತುಕೊಂಡಿರುವುದು ವಿಶೇಷವಾಗಿದೆ.

ಕಳೆದ ಮಾರ್ಚ್‌ನಲ್ಲಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಸುಧಾ ಮೂರ್ತಿ ಅವರು ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸಿ ಮೆಚ್ಚುಗೆಗೆ ಪಾತ್ರರಾಗಿದ್ದರು. ರಾಜ್ಯಸಭೆಯ ಅಧ್ಯಕ್ಷರಾಗಿರುವ ಜಗದೀಪ್‌ ಧನಕರ್‌ ಅವರು ಪ್ರತಿಜ್ಞಾ ವಿಧಿ ಬೋಧಿಸಿದ್ದರು. ರಾಜ್ಯಸಭೆಯಲ್ಲಿ ಬಿಜೆಪಿ ನಾಯಕರಾಗಿರುವ ಪಿಯೂಷ್‌ ಗೋಯಲ್‌ ಅವರು ಉಪಸ್ಥಿತರಿದ್ದರು. ಸುಧಾಮೂರ್ತಿ ಅವರ ಜೀವನ ಸಂಗಾತಿ ಎನ್‌.ಆರ್‌. ನಾರಾಯಣ ಮೂರ್ತಿ ಅವರು ಕೂಡ ಇದ್ದರು.

ಇದನ್ನೂ ಓದಿ: Sudha Murthy : ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲೇ ಪ್ರತಿಜ್ಞೆ ಸ್ವೀಕರಿಸಿದ ಸುಧಾ ಮೂರ್ತಿ; ನಾರಾಯಣಮೂರ್ತಿ ಸಾಥ್‌

Continue Reading

ದೇಶ

Monsoon 2024: ಮುಂದಿನ 24 ಗಂಟೆಗಳಲ್ಲೇ ಮುಂಗಾರು ಪ್ರವೇಶ; ಕರ್ನಾಟಕ ಸೇರಿ ಎಲ್ಲೆಲ್ಲಿ ಮಳೆ?

Monsoon 2024: ಜೂನ್‌ 1ರಂದು ಮುಂಗಾರು ಮಳೆಯು ಕೇರಳವನ್ನು ಪ್ರವೇಶಿಸಿ, ಜುಲೈ 15ರ ವೇಳೆಗೆ ದೇಶಾದ್ಯಂತ ವ್ಯಾಪಿಸುತ್ತದೆ. ಆದರೆ, ಈ ಬಾರಿ ಒಂದು ದಿನ ಮೊದಲೇ ಅಂದರೆ, ಮೇ 31ರಂದು ಮುಂಗಾರು ಪ್ರವೇಶಿಸುತ್ತದೆ ಎಂಬುದಾಗಿ ಹವಾಮಾನ ಇಲಾಖೆ ತಿಳಿಸಿತ್ತು. ಬುಧವಾರ ಹವಾಮಾನ ಇಲಾಖೆ ನೀಡಿರುವ ಮಾಹಿತಿ ನೋಡಿದರೆ, ಮೇ 30ರಂದೇ ಮುಂಗಾರು ಪ್ರವೇಶಿಸಲಿದೆ.

VISTARANEWS.COM


on

Monsoon 2024
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಸೇರಿ ಉತ್ತರ ಭಾರತದ ಕೆಲ ರಾಜ್ಯಗಳನ್ನು ಹೊರತುಪಡಿಸಿ ದೇಶಾದ್ಯಂತ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ಕರ್ನಾಟಕದಲ್ಲೂ (Karnataka) ವರುಣ ಕೃಪೆ ತೋರಿದ ಕಾರಣ (Rain News) ಬಿಸಿಲಿನಿಂದ ಕಂಗೆಟ್ಟಿದ್ದ ಜನ ನಿಟ್ಟುಸಿರು ಬಿಟ್ಟಿದ್ದಾರೆ. ಜನ-ಜಾನುವಾರುಗಳಿಗೆ ನೀರು ಸಿಗುವಂತಾಗಿದೆ. ಇದರ ಬೆನ್ನಲ್ಲೇ, ಹವಾಮಾನ ಇಲಾಖೆಯು ಮಹತ್ವದ ಮಾಹಿತಿ ಹಂಚಿಕೊಂಡಿದೆ. ಮುಂದಿನ 24 ಗಂಟೆಗಳಲ್ಲಿಯೇ ಮುಂಗಾರು ಮಳೆಯು (Monsoon 2024) ಕೇರಳ ಪ್ರವೇಶಿಸಲಿದ್ದು, ದೇಶದ ಹಲವೆಡೆ ಮಳೆಯಾಗಲಿದೆ ಎಂಬುದಾಗಿ ಮಾಹಿತಿ ನೀಡಿದೆ. 

“ಮುಂದಿನ 24 ಗಂಟೆಗಳಲ್ಲಿ ಮುಂಗಾರು ಪ್ರವೇಶಿಸಲಿದೆ. ಮುಂಗಾರು ಪ್ರವೇಶದಿಂದಾಗಿ ಕೇರಳದಲ್ಲಿ ಮಳೆಯಾಗಲಿದೆ. ನಂತರ ಈಶಾನ್ಯ ಭಾರತದ ಕೆಲ ರಾಜ್ಯಗಳಲ್ಲಿ ಮಳೆಯಾಗಲಿದೆ. ಉಷ್ಣ ಗಾಳಿಯಿಂದ ಕಂಗೆಟ್ಟಿದ್ದ ಜನರಿಗೆ ಮುಂಗಾರು ಪ್ರವೇಶವು ತುಸು ರಿಲೀಫ್‌ ನೀಡಲಿದೆ. ಭಾರತದ ವಾಯವ್ಯ ಹಾಗೂ ಕೇಂದ್ರ ಭಾಗದಲ್ಲಿ ಉತ್ತಮ ಮಳೆಯಾಗುವ ಕಾರಣ ಕೃಷಿ ಚಟುವಟಿಕೆಗಳ ಆರಂಭಕ್ಕೆ ಮುನ್ನುಡಿ ಬರೆಯಲಿದೆ. ಸುಮಾರು 3-4 ಡಿಗ್ರಿ ಸೆಲ್ಸಿಯಸ್‌ ತಾಪಮಾನವು ಇಳಿಕೆಯಾಗಲಿದೆ” ಎಂಬುದಾಗಿ ಹವಾಮಾನ ಇಲಾಖೆ ತಿಳಿಸಿದೆ.

ಜೂನ್‌ 1ರಂದು ಮುಂಗಾರು ಮಳೆಯು ಕೇರಳವನ್ನು ಪ್ರವೇಶಿಸಿ, ಜುಲೈ 15ರ ವೇಳೆಗೆ ದೇಶಾದ್ಯಂತ ವ್ಯಾಪಿಸುತ್ತದೆ. ಆದರೆ, ಈ ಬಾರಿ ಒಂದು ದಿನ ಮೊದಲೇ ಅಂದರೆ, ಮೇ 31ರಂದು ಮುಂಗಾರು ಪ್ರವೇಶಿಸುತ್ತದೆ ಎಂಬುದಾಗಿ ಹವಾಮಾನ ಇಲಾಖೆ ತಿಳಿಸಿತ್ತು. ಬುಧವಾರ ಹವಾಮಾನ ಇಲಾಖೆ ನೀಡಿರುವ ಮಾಹಿತಿ ನೋಡಿದರೆ, ಮೇ 30ರಂದೇ ಮುಂಗಾರು ಪ್ರವೇಶಿಸಲಿದೆ. ಕೇರಳದಲ್ಲಿ ಮಳೆಯಾದರೆ, ದಕ್ಷಿಣ ಕನ್ನಡ, ಕೊಡಗು ಸೇರಿ ಹಲವೆಡೆ ಮಳೆಯಾಗುವುದು ನಿಶ್ಚಿತ ಎಂದೇ ಹೇಳಲಾಗುತ್ತಿದೆ. ಕೇರಳದಲ್ಲಿ ಈಗಾಗಲೇ ಒಂದು ವಾರದಿಂದ ಭಾರಿ ಮಳೆಯಾಗಿದೆ. ಮುಂಗಾರು ಪ್ರವೇಶದಿಂದ ಲಕ್ಷದ್ವೀಪ ಸೇರಿ ಹಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಮುಂಗಾರು ಮಳೆಯು ದೇಶದ ಕೃಷಿಯ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ, ಈ ಬಾರಿ ವಾಡಿಕೆಗಿಂತ ಒಂದು ದಿನ ಮೊದಲೇ ಅಂದರೆ, ಮೇ 30 ದೇಶವನ್ನು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿರುವುದು ರೈತರ ಪಾಲಿಗೆ ಸಿಹಿ ಸುದ್ದಿಯೇ ಆಗಿದೆ. ಮೇ 27ರಿಂದ ಜೂನ್‌ 4ರ ಅವಧಿಯಲ್ಲಿ ಯಾವಾಗ ಬೇಕಾದರೂ ನೈಋತ್ಯ ಮುಂಗಾರು ಪ್ರವೇಶಿಸಬಹುದು ಎಂದು ಹವಾಮಾನ ಇಲಾಖೆ ಇದಕ್ಕೂ ಮೊದಲು ತಿಳಿಸಿತ್ತು. ಪ್ರತಿ ವರ್ಷ ಜೂನ್‌ 1ರಂದು ಮುಂಗಾರು ಮಳೆಯು ಕೇರಳವನ್ನು ಪ್ರವೇಶಿಸಿ, ದೇಶಾದ್ಯಂತ ವ್ಯಾಪಿಸುವುದು ವಾಡಿಕೆಯಾಗಿದೆ. ಆದರೆ, ಹವಾಮಾನ ಇಲಾಖೆಯು ಈ ಬಾರಿ 2 ದಿನ ಮೊದಲೇ ಪ್ರವೇಶಿಸಲಿದೆ ಎಂದು ತಿಳಿಸಿದೆ. ಸೆಪ್ಟೆಂಬರ್‌ನಲ್ಲಿ ಮುಂಗಾರು ಮಳೆ ಅಂತ್ಯವಾಗಲಿದೆ.

ಇದನ್ನೂ ಓದಿ: Delhi Temperature: ದೆಹಲಿಯಲ್ಲಿ 52 ಡಿಗ್ರಿ ಸೆಲ್ಸಿಯಸ್‌ ತಾಪಮಾನ; ದೇಶದಲ್ಲೇ ಇದುವರೆಗಿನ ಗರಿಷ್ಠ ಟೆಂಪರೇಚರ್!

Continue Reading
Advertisement
Valmiki corporation Scam
ಕರ್ನಾಟಕ23 seconds ago

Valmiki Corporation Scam: ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ; ಎಂಡಿ, ಲೆಕ್ಕಾಧಿಕಾರಿ ಅಮಾನತು

PM Kisan Samman
ಕೃಷಿ19 mins ago

PM Kisan Samman: ಪಿಎಂ ಕಿಸಾನ್ ಸಮ್ಮಾನ್ 17ನೇ ಕಂತಿನ ಹಣ ಬಿಡುಗಡೆ ಯಾವಾಗ? ಪರಿಶೀಲಿಸುವುದು ಹೇಗೆ?

Nita Ambani
ವಾಣಿಜ್ಯ25 mins ago

Nita Ambani: ನೀತಾ ಅಂಬಾನಿ ಕುಡಿಯುವ ನೀರಿನ ಬಾಟಲಿಯ ಬೆಲೆ 49 ಲಕ್ಷ ರೂಪಾಯಿ!

Team India Coach
ಕ್ರೀಡೆ32 mins ago

Team India Coach: ಅಭಿಮಾನಿಗಳು ಬಯಸಿದರೂ ಕೋಚ್​ ಹುದ್ದೆಗೆ ಧೋನಿ ಅನರ್ಹ; ಕಾರಣವೇನು?

Sudha Murty
ಕರ್ನಾಟಕ36 mins ago

Sudha Murty: ಡಾ.ಮಂಜುನಾಥ್‌ ಗೆಲುವಿಗಾಗಿ ರಾಯರಿಗೆ ವಿಶೇಷ ಹರಕೆ ಹೊತ್ತ ಸುಧಾಮೂರ್ತಿ; ಏನದು?

Headless Chicken
ವಿಜ್ಞಾನ48 mins ago

Headless Chicken: ತಲೆ ಕತ್ತರಿಸಿದರೂ ಈ ಕೋಳಿ 18 ತಿಂಗಳು ಬದುಕಿತ್ತು! ಸಾಯುವ ಮೊದಲು ಮಾಲೀಕನನ್ನು ಶ್ರೀಮಂತಗೊಳಿಸಿತು!

Monsoon 2024
ದೇಶ1 hour ago

Monsoon 2024: ಮುಂದಿನ 24 ಗಂಟೆಗಳಲ್ಲೇ ಮುಂಗಾರು ಪ್ರವೇಶ; ಕರ್ನಾಟಕ ಸೇರಿ ಎಲ್ಲೆಲ್ಲಿ ಮಳೆ?

Belagavi Tour
ಪ್ರವಾಸ2 hours ago

Belagavi Tour: ಬೆಳಗಾವಿಗೆ ಭೇಟಿ ನೀಡಿದಾಗ ಈ ಸ್ಥಳಗಳನ್ನು ನೋಡಲು ಮರೆಯಬೇಡಿ

AUS vs NAM
ಕ್ರೀಡೆ2 hours ago

AUS vs NAM: ನಮೀಬಿಯಾ ವಿರುದ್ಧ ಅಭ್ಯಾಸ ಪಂದ್ಯವಾಡಿದ ಆಸೀಸ್​ ತಂಡದ ಕೋಚಿಂಗ್​ ಸಿಬ್ಬಂದಿ

Dream Of Retired Couple
ಪ್ರವಾಸ2 hours ago

Dream Of Retired Couple: ನಿರಂತರ ಮೂರೂವರೆ ವರ್ಷಗಳ ನೌಕಾಯಾನಕ್ಕಾಗಿ ತಮ್ಮದೆಲ್ಲವನ್ನೂ ಮಾರಿದ ದಂಪತಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ7 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌