Lok Sabha Election 2024: ಮೊದಲ ಹಂತದ ಮತದಾನ; ಪಶ್ಚಿಮ ಬಂಗಾಲ, ಮಣಿಪುರ, ಛತ್ತೀಸ್‌ಗಢದಲ್ಲಿ ಹಿಂಸಾಚಾರ - Vistara News

ಪ್ರಮುಖ ಸುದ್ದಿ

Lok Sabha Election 2024: ಮೊದಲ ಹಂತದ ಮತದಾನ; ಪಶ್ಚಿಮ ಬಂಗಾಲ, ಮಣಿಪುರ, ಛತ್ತೀಸ್‌ಗಢದಲ್ಲಿ ಹಿಂಸಾಚಾರ

lok sabha election 2024: ಹಲವು ಕಡೆ ಹಿಂಸಾಚಾರದ ಘಟನೆಗಳ ನಡುವೆಯೂ ಪಶ್ಚಿಮ ಬಂಗಾಳ ಇದುವರೆಗೆ ಚುರುಕಾದ ಮತದಾನ ಪ್ರಮಾಣವನ್ನು ದಾಖಲಿಸಿದೆ. ಇದುವರೆಗೆ 50.96% ಮತದಾನ ದಾಖಲಾದೆ. ಸಂಜೆ 6 ಗಂಟೆಯವರೆಗೆ ಮತದಾನ ಮುಂದುವರಿಯಲಿದೆ.

VISTARANEWS.COM


on

lok sabha election 2024 1st phase voting
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಹೊಸದಿಲ್ಲಿ: ಲೋಕಸಭೆ ಚುನಾವಣೆ (Lok Sabha Election 2024) ಮೊದಲ ಹಂತದ ಮತದಾನ (1st phase voting) 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಸ್ಥಾನಗಳಲ್ಲಿ ನಡೆಯುತ್ತಿದ್ದು, ಪಶ್ಚಿಮ ಬಂಗಾಲ (West bengal) ಮತ್ತು ಮಣಿಪುರದಲ್ಲಿ (Manipur) ಹಿಂಸಾಚಾರ (poll violence) ವರದಿಯಾಗಿದೆ. ಮತದಾನದ ಪ್ರಮಾಣ ಇಲ್ಲಿಯವರೆಗೆ ಚುರುಕಾಗಿದೆ.

ಪಶ್ಚಿಮ ಬಂಗಾಲದ ಚಾಂದಮಾರಿಯಲ್ಲಿ ಜನರು ಮತದಾನ ಮಾಡದಂತೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದರೆ, ಬೇಗರ್ಕತದ ಜನರು ತಮ್ಮ ಮತ ಚಲಾಯಿಸದಂತೆ ಬಿಜೆಪಿ ಸದಸ್ಯರು ಅವರಿಗೆ ಬೆದರಿಕೆ ಒಡ್ಡಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ. ಬೆಳಗ್ಗೆ 10 ಗಂಟೆಯ ವೇಳೆಗೆ ಟಿಎಂಸಿ ಮತ್ತು ಬಿಜೆಪಿ ಎರಡೂ ಪಕ್ಷಗಳು ಹಿಂಸಾಚಾರದ ಕುರಿತು ಚುನಾವಣಾ ಆಯೋಗಕ್ಕೆ ಹತ್ತಾರು ದೂರುಗಳನ್ನು ದಾಖಲಿಸಿದ್ದು, ಈ ಪೈಕಿ ಬಹುತೇಕ ದೂರುಗಳು ಕೂಚ್ ಬೆಹಾರ್ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿವೆ. ಕೂಚ್ ಬೆಹಾರ್ ಜಿಲ್ಲೆಯ ಸಿತಾಲ್ಕುಚಿಯಲ್ಲಿ ಬಿಜೆಪಿ ಬೆಂಬಲಿಗರು ತಮ್ಮ ಪಕ್ಷದ ಕಾರ್ಯಕರ್ತರನ್ನು ಥಳಿಸಿದ್ದಾರೆ ಮತ್ತು ಮತದಾರರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಆರೋಪಿಸಿದೆ. ಇದೇ ವೇಳೆ ಅಪರಿಚಿತ ದುಷ್ಕರ್ಮಿಗಳು ಥಮನ್‌ಪೋಕ್ಪಿಯ ಮತದಾನ ಕೇಂದ್ರದ ಬಳಿ ಗುಂಡಿನ ದಾಳಿ ನಡೆಸಿದ್ದಾರೆ.

ಕಳೆದ ಕೆಲ ತಿಂಗಳ ಹಿಂದೆ ಭಾರೀ ಗಲಭೆಗಳಿಗೆ ಸಾಕ್ಷಿಯಾಗಿದ್ದ ಮಣಿಪುರದಲ್ಲಿ ಇಂದು ಮತ್ತೆ ಹಿಂಸಾಚಾರ ಘಟನೆ ಸಂಭವಿಸಿದೆ. ಮತದಾನ ನಡೆಯುವ ವೇಳೆ ಗುಂಡಿನ ದಾಳಿ ನಡೆದಿದೆ. ಪೂರ್ವ ಇಂಫಾಲ್‌ನ ಮತಗಟ್ಟೆಯೊಂದರಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿತ್ತು. ಈ ವೇಳೆ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಆಗ ರಕ್ಷಣಾ ಸಿಬ್ಬಂದಿ ಸಹ ಪ್ರತಿದಾಳಿ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಘಟನೆಯಿಂದ ಆತಂಕಗೊಂಡ ಮತದಾರರು ಸ್ಥಳದಿಂದ ಪಾರಾಗಲು ಓಡಿದ್ದಾರೆ.

ನಕ್ಸಲ್‌ಪೀಡಿತ ಛತ್ತೀಸ್‌ಗಢದ ಬಸ್ತಾರ್ ಪ್ರಾಂತ್ಯದಲ್ಲಿನ ಬಿಜಾಪುರ್ ಮತಗಟ್ಟೆಯಿಂದ 500 ಮೀಟರ್ ದೂರದಲ್ಲಿ ಶುಕ್ರವಾರ ಬೆಳಗ್ಗೆ ಗ್ರನೇಡ್ ಸ್ಫೋಟ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಯಿಂದ ಈ ಪ್ರದೇಶದ ಸುಪರ್ದಿ ತೆಗೆದುಕೊಳ್ಳುತ್ತಿದ್ದ ಭದ್ರತಾ ತಂಡದ ಭದ್ರತಾ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಗಲ್ಗಾಮ್ ಪ್ರದೇಶದ ಮತಗಟ್ಟೆಯಿಂದ 500 ಮೀಟರ್ ದೂರದಲ್ಲಿ ಗ್ರೆನೇಡ್ ಲಾಂಚರ್ (UBGL) ಸೆಲ್ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ.

ಹಿಂಸಾಚಾರದ ಹೊರತಾಗಿಯೂ, ಪಶ್ಚಿಮ ಬಂಗಾಲದಲ್ಲಿ ಇದುವರೆಗೆ 50.96% ಮತದಾನ ದಾಖಲಾದೆ. ಸಂಜೆ 6 ಗಂಟೆಯವರೆಗೆ ಮತದಾನ ಮುಂದುವರಿಯಲಿದೆ.

ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ, ಅವರ ಪುತ್ರ ಹಾಗೂ ಶಿವಗಂಗಾ ಅಭ್ಯರ್ಥಿ ಕಾರ್ತಿ ಚಿದಂಬರಂ, ಖ್ಯಾತ ನಟ ರಜನಿಕಾಂತ್, ಕಮಲಹಾಸನ್‌, ವಿಜಯ್‌ ಸೇತುಪತಿ, ಅಣ್ಣಾಮಲೈ, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಸೇರಿದಂತೆ ಹಲವಾರು ಪ್ರಮುಖ ನಾಯಕರು ಮತ್ತು ವ್ಯಕ್ತಿಗಳು ಮತ ಚಲಾಯಿಸಿದ್ದಾರೆ. ಯೋಗ ಗುರು ಬಾಬಾ ರಾಮದೇವ್ ಮತ್ತು ಪತಂಜಲಿ ಆಯುರ್ವೇದದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಉತ್ತರಾಖಂಡದ ಹರಿದ್ವಾರದ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಇದನ್ನೂ ಓದಿ: Lok Sabha Election 2024: ಲೋಕಸಭೆ ಚುನಾವಣೆ ಮೊದಲ ಹಂತದಲ್ಲಿ ಪ್ರಬಲ ಪೈಪೋಟಿಯ ಟಾಪ್ 10 ಕ್ಷೇತ್ರಗಳಿವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

VISTARANEWS.COM


on

ಅಬುಧಾಬಿ: ಆರು ದಿನಗಳ ವಿದೇಶ ಪ್ರವಾಸದಲ್ಲಿ ಪ್ರಧಾನಿ ಮೊದಲು ಯುಎಇಗೆ ಭೇಟಿ ನೀಡಿದ್ದಾರೆ. ಯುರೋಪ್ ಭೇಟಿಗೂ ಮುನ್ನ ಅಬುಧಾಬಿಗೆ ಭೇಟಿ ನೀಡಿದ್ದು, ಭಾರತ-ಯುಎಇ ನಡುವಿನ ನಿಕಟ ಸಂಬಂಧಕ್ಕೆ ಸಾಕ್ಷಿ ಎನ್ನಲಾಗುತ್ತಿದೆ.
ಅಬುಧಾಬಿಯಲ್ಲಿ ಪ್ರಧಾನಿ ಮೋದಿ ಮತ್ತು ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ರಕ್ಷಣೆ, ವ್ಯಾಪಾರ, ಹೂಡಿಕೆ, ಇಂಧನ ಭದ್ರತೆ ಕುರಿತು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಮೋದಿ ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸಲು ಎಲ್ಲಾ ಅಗತ್ಯ ನೆರವು ನೀಡುವ ಭರವಸೆ ನೀಡಿದರು. ಇದೇ ವೇಳೆ ಅವರು, ಯುಎಇ ಮೇಲಿನ ಇರಾನ್ ದಾಳಿಯನ್ನು ಖಂಡಿಸಿದರು.
ಪ್ರಧಾನಿ ಮೋದಿಯವರ ಭೇಟಿಯನ್ನು ಯುಎಇ ಮುಕ್ತಕಂಠದಿಂದ ಹೊಗಳಿದೆ. ‘ಭಾರತದ ಪ್ರಧಾನಿ ನಮ್ಮ ನಿಜವಾದ ಆಸ್ತಿ’ ಎಂದು ಯುಎಇ ಅಂತಾರಾಷ್ಟ್ರೀಯ ಸಹಕಾರ ಸಚಿವೆ ರೀಮ್ ಅಲ್ ಹಶಿಮಿ ಬಣ್ಣಿಸಿದ್ದಾರೆ.
ಪ್ರಧಾನಿ ಮೋದಿ ಯುಎಇಗೆ ಆಗಮಿಸುತ್ತಿದ್ದಂತೆಯೇ ಭವ್ಯ ಸ್ವಾಗತ ನೀಡಲಾಯಿತು. ಮೋದಿ ಅವರಿದ್ದ ವಿಶೇಷ ವಿಮಾನಕ್ಕೆ ಗಗನಮಾರ್ಗದಲ್ಲೇ ಯುಎಇಯ ಎಫ್‌-16 ಯುದ್ಧ ವಿಮಾನಗಳು ಗೌರವ ರಕ್ಷೆ ನೀಡಿದ್ದವು.
ಯುಎಇ ಬಳಿಕ ಮೋದಿ ನೆದರ್‌ಲ್ಯಾಂಡ್‌, ಸ್ವೀಡನ್, ನಾರ್ವೆ ಮತ್ತು ಇಟಲಿ ದೇಶಗಳಿಗೆ ತೆರಳಲಿದ್ದಾರೆ.

Continue Reading

Latest

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

VISTARANEWS.COM


on

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ದೀದಿ ಭದ್ರಕೋಟೆಯನ್ನು ಧೂಳೀಪಟಗೈದು ಅಧಿಕಾರಕ್ಕೇರಿದ ಸುವೇಂದು ಅಧಿಕಾರಿ ಮುಖ್ಯಮಂತ್ರಿ ಪಟ್ಟಕ್ಕೇರುತ್ತಿದ್ದಂತೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಆರೋಗ್ಯವಂತ ಜಾನುವಾರುಗಳ ಹತ್ಯೆ ಮಾಡಿದರೆ ಶಿಕ್ಷೆ ನೀಡಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಪಶುವೈದ್ಯರು ನೀಡುವ ಫಿಟ್‌ನೆಸ್‌‍ ಪ್ರಮಾಣಪತ್ರವಿಲ್ಲದೆ ಹಸು, ಹೋರಿ, ಎಮ್ಮೆ ಮತ್ತು ಕರು ಸೇರಿ ಯಾವುದೇ ಪ್ರಾಣಿಯನ್ನು ಹತ್ಯೆ ಮಾಡುವಂತಿಲ್ಲ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ಹಸು 14 ವರ್ಷ ಮೇಲ್ಪಟ್ಟಿದ್ದು, ಕೆಲಸ ಮಾಡಲು ಅಥವಾ ಸಂತಾನೋತ್ಪತ್ತಿ ಮಾಡಲು ಯೋಗ್ಯವಿಲ್ಲದಿದ್ದರೆ ಅಥವಾ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿದ್ದು, ಶಾಶ್ವತವಾಗಿ ಗುಣಪಡಿಸಲು ಸಾಧ್ಯವಾಗದಿದ್ದರೆ ಮಾತ್ರ ಸ್ಥಳೀಯ ನಾಗರಿಕ ಅಧಿಕಾರಿಗಳು ಅಥವಾ ಪಶುವೈದ್ಯರು ಜಂಟಿಯಾಗಿ ಪ್ರಮಾಣ ಪತ್ರವನ್ನು ನೀಡಬಹುದಾಗಿದೆ.
ನಿಯಮಗಳನ್ನು ಜಾರಿಗೊಳಿಸಲು ಅಧಿಕಾರಿಗಳು ನಡೆಸುವ ಯಾವುದೇ ಪರಿಶೀಲನೆಯನ್ನು ವ್ಯಕ್ತಿಗಳು ತಡೆಯುವಂತಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಯಾವುದೇ ರೀತಿಯ ಕಾನೂನು ಉಲ್ಲಂಘನೆಗಳಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 1 ಸಾವಿರ ರೂಪಾಯಿವರೆಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Continue Reading

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading

Latest

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

VISTARANEWS.COM


on

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್‌ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಇಂದು ಈ ಕುರಿತು ಅಧಿಕೃತ ಘೋಷಣೆ ಮಾಡಿದೆ. ವಿ.ಡಿ. ಸತೀಶನ್‌ ಜೊತೆಗೆ ಕೆ.ಸಿ.ವೇಣುಗೋಪಾಲ್‌, ರಮೇಶ್‌ ಚೆನ್ನಿತಲ ಅವರು ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿದ್ದರು.
ಮೇ 4 ರಂದು ಕೇರಳಂ ವಿಧಾನಸಭಾ ಚುನಾವಣಾ ಫಲಿತಾಂಶ ಘೋಷಣೆಯಾದ್ರೂ ಸಿಎಂ ಸ್ಥಾನಕ್ಕೆ ಭಾರಿ ಪೈಪೋಟಿ ಇದ್ದ ಕಾರಣ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿತ್ತು.
ಇದೀಗ ಕೇರಳ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರ ಹೆಸರು ಘೋಷಣೆಯಾಗ್ತಿದ್ದಂತೆ ಅವರ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ವಿ.ಡಿ.ಸತೀಶನ್‌ ಪರವೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದೇ ಪರವೂರು ವಿಧಾನಸಭಾ ಕ್ಷೇತ್ರದಿಂದ ಸತೀಶನ್‌ 6 ಬಾರಿ ಗೆಲುವು ಸಾಧಿಸಿದ್ದಾರೆ. 2021 ರಲ್ಲಿ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ಕೇರಳ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.

Continue Reading
Advertisement
Latest15 hours ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest19 hours ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest19 hours ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest2 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest2 days ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ2 days ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest2 days ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest2 days ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest2 days ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest3 days ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌