Site icon Vistara News

Lok Sabha Election 2024: ಇಂದಿನಿಂದ ಅಂಚೆ ಮತದಾನ; ಯಾರು ಮತ ಹಾಕಬಹುದು?

lok sabha election 2024 voting

ಬೆಂಗಳೂರು: ಲೋಕಸಭೆ ಚುನಾವಣೆಯ (Lok Sabha Election 2024) ʼಅಂಚೆ ಮತದಾನʼ (Postal ballet) ಇಂದು ಆರಂಭವಾಗುತ್ತಿದೆ. 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು (Senior citizen) ಹಾಗೂ ಹಾಗೂ ವಿಶೇಷ ಚೇತನರಿಗೆ (Specially abled) ಮನೆಯಿಂದಲೇ ಅಂಚೆ ಮತದಾನ ಮಾಡುವ ಸೌಲಭ್ಯ ನೀಡಲಾಗಿದೆ.

ಇವತ್ತಿನಿಂದ ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ (Secret voting) ಅವಕಾಶವಿದೆ. ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಕ್ಷೇತ್ರದ ಮತದಾರರಿಗೆ ಮನೆಯಿಂದಲೇ ಕುಳಿತು ಅಂಚೆ ಮತದಾನ ಮಾಡುವ ಸೌಲಭ್ಯ ನೀಡಲಾಗಿದ್ದು, ನಗರದ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 85 ವರ್ಷ ಮೇಲ್ಪಟ್ಟ 95,128 ಮಂದಿ ಇದ್ದಾರೆ. 22,222 ಮಂದಿ ವಿಶೇಷ ಚೇತನರನ್ನು ಪಟ್ಟಿ ಮಾಡಲಾಗಿದೆ. ಇವರಲ್ಲಿ 85 ವರ್ಷ ಮೇಲ್ಪಟ್ಟ 6206 ಮತದಾರರು ಹಾಗೂ 201 ವಿಶೇಷ ಚೇತನ ಮತದಾರರು ಅಂಚೆ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ.

ಅಂಚೆ ಮತದಾನ ಪ್ರಕ್ರಿಯೆ

ನೋಂದಣಿ ಮಾಡಿಕೊಂಡ ಮತದಾರರ ಮನೆಗೆ ಮತಗಟ್ಟೆ ಅಧಿಕಾರಿಗಳ ತಂಡ ಭೇಟಿ ನೀಡಲಿದೆ. ಮತದಾರರ ಮನೆಗೆ ಇಬ್ಬರು ಮತಗಟ್ಟೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ವೀಡಿಯೋಗ್ರಾಫರ್ ತಂಡ ಭೇಟಿ ನೀಡಲಿದ್ದು, ಜೊತೆಗೆ ಪೊಲೀಸ್ ಸಿಬ್ಬಂದಿ ಹಾಗೂ ಒಬ್ಬ ಅಬ್ಸರ್ವರ್ ಕಡ್ಡಾಯವಿದೆ. ತಂಡವು ಮನೆಗೆ ತೆರಳಿ ಮತದಾನ ಗುರುತಿನ ಚೀಟಿ ಪರಿಶೀಲನೆ ಮಾಡಲಿದ್ದು, ಗೌಪ್ಯ ಮತದಾನಕ್ಕಾಗಿ ಅಂಚೆ ಮತಪತ್ರದಲ್ಲಿ ಮತ ಚಲಾಯಿಸಲು ಅವಕಾಶ ನೀಡುತ್ತದೆ.

ಈ ಎಲ್ಲಾ ಪ್ರಕ್ರಿಯೆ ವೀಡಿಯೋಗ್ರಫಿ ಮೂಲಕ ಕಡ್ಡಾಯ ಸೆರೆ ಹಿಡಿಯಲಾಗುತ್ತದೆ. ಪ್ರತಿ ಮತದಾರರ ಮನೆಗೆ ಎರಡು ಬಾರಿ ಟೀಮ್‌ ಭೇಟಿ ನೀಡಲಿದ್ದು, ಎರಡು ಬಾರಿಯೂ ಮತದಾನ ಪ್ರಕ್ರಿಯೆ ನಡೆಯದೇ ಇದ್ದರೆ ಮತ್ತೆ ಮತದಾನ ನಡೆಸಲು ಅವಕಾಶವಿರುವುದಿಲ್ಲ.

ಮನೆಯಿಂದ ಮತದಾನಕ್ಕೆ 12ಡಿ ನಮೂನೆಯಲ್ಲಿ ನೋಂದಣಿ ಮಾಡಿಸಿಕೊಂಡಿರುವವರಿಗೆ ಮತಗಟ್ಟೆಗೆ ಬಂದು ವಿದ್ಯುನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸುವ ಅವಕಾಶವಿರುವುದಿಲ್ಲ ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮತದಾರರ ಪಟ್ಟಿಯಲ್ಲಿ ಹೆಸರು ಇರಬೇಕು

ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಇಲ್ಲದಿದ್ದರೆ ಮತದಾನ ಮಾಡಲು ಅವಕಾಶವಿಲ್ಲ. ಆದರೆ, ವೋಟರ್ ಐಟಿ ಕಾರ್ಡ್‌ ಅಥವಾ ಮತದಾರರ ಫೋಟೋ ಸಹಿತ ಗುರುತಿನ ಚೀಟಿ ಕಾಣೆಯಾಗಿದ್ದರೆ ಮತದಾನ ಮಾಡಲು ಅವಕಾಶ ಇದೆ. ಆದರೆ ಅವರ ಹೆಸರು ಮತದಾರರ ಪಟ್ಟಿಯಲ್ಲಿ ಇರಲೇ ಬೇಕು. ಮತದಾರರು ಚುನಾವಣಾ ಆಯೋಗ ಪಟ್ಟಿ ಮಾಡಿರುವ 14 ವಿಧದ ಫೋಟೋ ಸಹಿತ ಗುರುತಿನ ಚೀಟಿಗಳ ಪೈಕಿ ಯಾವುದನ್ನಾದರೂ ತೋರಿಸಿ ಮತ ಚಲಾಯಿಸಬಹುದು. ಇದಕ್ಕಾಗಿ ಪ್ರತ್ಯೇಕವಾಗಿ ಫೋಟೋ ತೋರಿಸುವ ಅಗತ್ಯ ಇಲ್ಲ. ಆದರೆ, ಇವೆಲ್ಲವೂ ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಇದ್ದಾಗ ಮಾತ್ರ ಸಾಧ್ಯ..

ಹೊಸ ಮತದಾರರ ಗಮನಕ್ಕೆ

2024ರ ಲೋಕಸಭಾ ಚುನಾವಣೆಯಲ್ಲಿ ಯುವಕರು ದೇಶದ ಉಜ್ವಲ ಭವಿಷ್ಯಕ್ಕಾಗಿ ಹೆಚ್ಚು ಒಳ್ಳಗೊಳ್ಳಬೇಕು ಮಾತ್ರವಲ್ಲ ಮೊದಲ ಬಾರಿ ಮತದಾನ ಮಾಡುವ ಯುವ ಶಕ್ತಿ ಮತದಾನದ ಪ್ರಾಮುಖ್ಯವನ್ನು ಅರಿತು ತಿಳುವಳಿಕೆಯಿಂದ ಭಾಗವಹಿಸಬೇಕು ಎನ್ನುವ ಎನ್ನುವ ಆಶಯದೊಂದಿಗೆ ಈ ಬಾರಿ ಮೊದಲ ಬಾರಿಗೆ ಮತದಾನ ಮಾಡುವವರಿಗಾಗಿ ಕೆಲವು ಸಲಹೆಗಳು ಇಲ್ಲಿವೆ.

ಇದನ್ನೂ ಓದಿ: Hema Malini: ಪ್ರಚಾರದ ಮಧ್ಯೆಯೇ ಗದ್ದೆಗೆ ಇಳಿದು ಗೋಧಿ ಕಟಾವು ಮಾಡಿದ ಹೇಮಾಮಾಲಿನಿ!

ಮತದಾರರ ಪಟ್ಟಿಯಲ್ಲಿ ಹೆಸರು ಇದೆಯೇ?

ಮತಗಟ್ಟೆಗೆ ತೆರಳುವ ಮುನ್ನ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿದ್ದೀರಿ ಎಂಬುದನ್ನು ಖಚಿತಪಡಿಸಿಕೊಳ್ಳಿ. ಭಾರತದ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಇದರ ಸಂಪೂರ್ಣ ಮಾಹಿತಿ ಲಭ್ಯವಾಗುತ್ತದೆ. ನಿಮ್ಮ ಅರ್ಹತೆ ಮತ್ತು ನೋಂದಣಿ ಸ್ಥಿತಿಯನ್ನು ಇದರಲ್ಲಿ ತಿಳಿದುಕೊಳ್ಳಬಹುದು.


ಎಲ್ಲಿ, ಹೇಗೆ ?

ಮತದಾನ ಪ್ರಕ್ರಿಯೆ ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಿ. ಇದಕ್ಕಾಗಿ ಮತದಾನ ಕೇಂದ್ರದ ಸ್ಥಳ, ಮತದಾರರ ಗುರುತಿನ ಅವಶ್ಯಕತೆಗಳು ಮತ್ತು ನಿಮ್ಮ ಮತವನ್ನು ಹೇಗೆ ಚಲಾಯಿಸುವುದು ಸೇರಿದಂತೆ ಮತದಾನ ಪ್ರಕ್ರಿಯೆಯ ಸಂಪೂರ್ಣ ಮಾಹಿತಿಯನ್ನು ತಿಳಿದವರಿಂದ ಕೇಳಿ ಪಡೆಯಿರಿ.

ಮಾಹಿತಿ ಪರಿಶೀಲಿಸಿ

ಮತದಾನ ಮಾಡುವ ಬಗ್ಗೆ ಯಾವುದೇ ಅಭಿಪ್ರಾಯವನ್ನು ತೆಗೆದುಕೊಳ್ಳುವ ಮೊದಲು ಬಹು ವಿಶ್ವಾಸಾರ್ಹ ಮೂಲಗಳಿಂದ ಮಾಹಿತಿಯನ್ನು ಪರಿಶೀಲಿಸಿಕೊಳ್ಳಿ. ವಿಭಿನ್ನ ದೃಷ್ಟಿಕೋನಗಳಿಗೆ ತೆರೆದುಕೊಳ್ಳಿ. ಸ್ನೇಹಿತರು, ಕುಟುಂಬ ಮತ್ತು ಸಮುದಾಯದ ಸದಸ್ಯರೊಂದಿಗೆ ಗೌರವಯುತವಾಗಿ ರಾಜಕೀಯದ ಬಗ್ಗೆ ಚರ್ಚೆ ನಡೆಸಿ.

ಸುಳ್ಳು ಮಾಹಿತಿ ಬಗ್ಗೆ ಎಚ್ಚರ

ಚುನಾವಣೆ ಸಂದರ್ಭದಲ್ಲಿ ಸಾಕಷ್ಟು ಸುಳ್ಳು ಮಾಹಿತಿ ಗಳು ಪ್ರಚಾರವಾಗುತ್ತಿರುತ್ತದೆ. ಮತಗಟ್ಟೆಗಳ ಬಳಿ ಸುಳ್ಳು ಮಾಹಿತಿಗಳಿಗೆ ಅವಕಾಶ ನೀಡಬೇಡಿ. ಯಾವುದೇ ರೀತಿಯ ಸುಳ್ಳು ಮಾಹಿತಿ ಹರಡದಂತೆ ಎಚ್ಚರಿಕೆ ವಹಿಸಬೇಕು. ಅಧಿಕೃತಭಾರತೀಯ ಚುನಾವಣಾ ಆಯೋಗ ನೀಡುವ ಮಾಹಿತಿ ಮತ್ತು ಮತಗಟ್ಟೆ ಅಧಿಕಾರಿಗಳು ನೀಡುವ ಮಾಹಿತಿಯನ್ನು ಮಾತ್ರ ನಂಬಿ.


ಮತದಾರರನ್ನು ಪ್ರೋತ್ಸಾಹಿಸಿ

ವಿಶ್ವಾಸಾರ್ಹ ಮಾಹಿತಿಯನ್ನು ಹಂಚಿಕೊಂಡು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಇತರರನ್ನು ವಿಶೇಷವಾಗಿ ಮೊದಲ ಬಾರಿಗೆ ಮತದಾನ ಮಾಡುವವರಿಗೆ ಮತದಾನದ ಅಗತ್ಯವನ್ನು ತಿಳಿಸಿ, ಅವರು ಮತದಾನ ಮಾಡಿ, ಇತರರಿಗೂ ಮತದಾನ ಮಾಡಲು ಪ್ರೋತ್ಸಾಹಿಸುವಂತೆ ತಿಳಿಸಿ.

ಗುರುತು ಚೀಟಿ ಇರಲಿ

ಮತಗಟ್ಟೆಗೆ ತೆರಳುವಾಗ ನಿಮಗೆ ನೀಡಿರುವ ಮತ ಪತ್ರ, ಮತದಾರರ ಗುರುತು ಚೀಟಿ, ಆಧಾರ್ ಅಥವಾ ಡ್ರೈವಿಂಗ್ ಲೈಸೆನ್ಸ್‌ನಂತಹ ಹೆಚ್ಚುವರಿ ಗುರುತು ಚೀಟಿಯನ್ನು ಇಟ್ಟುಕೊಂಡಿರಿ. ಅವಶ್ಯಕವಿದ್ದಾಗ ಇದನ್ನು ತೋರಿಸಿ ಮತದಾನ ಮಾಡಬಹುದಾಗಿದೆ.

ಇದನ್ನೂ ಓದಿ: First Time Voters: ಮೊದಲ ಬಾರಿ ಮತದಾನ ಮಾಡುತ್ತಿದ್ದೀರಾ? ಈ ಸಂಗತಿಗಳನ್ನು ಗಮನಿಸಿ

Exit mobile version