Site icon Vistara News

Lok Sabha Election: ಇಂದೋರ್​ ಕಾಂಗ್ರೆಸ್​ ಅಭ್ಯರ್ಥಿ ಕಣದಿಂದ ಹಿಂದಕ್ಕೆ; ಚುನಾವಣೆಗೆ ಮೊದಲೇ ಬಿಜೆಪಿಗೆ ಮತ್ತೊಂದು ಸೀಟು!

Lok Sabha Election

ಇಂದೋರ್: ಲೋಕಸಭಾ ಚುನಾವಣೆಯ (Lok Sabha Election) ನಾಲ್ಕನೇ ಹಂತದಲ್ಲಿ ಮತದಾನ ನಡೆಯಬೇಕಾಗಿದ್ದ ಮಧ್ಯಪ್ರದೇಶದ ಇಂದೋರ್​ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ (Akshay Kanti Bam) ತಮ್ಮ ಉಮೇದುವಾರಿಕೆ ವಾಪಸ್​ ಪಡೆದುಕೊಂಡಿದ್ದಾರೆ. ಆ ಬಳಿಕ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದು, ತಾವು ಚುನಾವಣಾ ಕಣದಿಂದ ಹಿಂದಕ್ಕೆ ಸರಿದು ಮೋದಿ ನೇತೃತ್ವದ ಬಿಜೆಪಿ ಸೇರಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಮೇ 13ರಂದು ಇಂದೋರ್​ನಲ್ಲಿ ಮತದಾನ ನಡೆಯಬೇಕಾಗಿತ್ತು. ಹಾಲಿ ಬಿಜೆಪಿ ಸಂಸದ ಶಂಕರ್ ಲಾಲ್ವಾನಿ ವಿರುದ್ಧ ಕಾಂಗ್ರೆಸ್ ಬಾಮ್ ಅವರಿಗೆ ಟಿಕೆಟ್​ ನೀಡಿ ಇದೀಗ ಪರಿತಪಿಸುವಂತಾಗಿದೆ. ಈ ಕ್ಷೇತ್ರದಲ್ಲಿ ಈಗ ಬಿಜೆಪಿ ಪ್ರಬಲ ಸ್ಪರ್ಧೆಯೇ ಇಲ್ಲದಂತಾಗಿದೆ. ಹಾಗಾಗಿ ಬಹುತೇಕ ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದಂತಾಗಿದೆ.

ಬಾಮ್ ಕಣದಿಂದ ತಮ್ಮ ಉಮೇದುವಾರಿಕೆ ವಾಪಸ್​​ ಸ್ವಲ್ಪ ಸಮಯದ ನಂತ, ಮಧ್ಯಪ್ರದೇಶ ಹಿರಿಯ ಬಿಜೆಪಿ ಮುಖಂಡ ಮತ್ತು ಇಂದೋರ್​​ನ ಶಾಸಕ ಕೈಲಾಶ್ ವಿಜಯವರ್ಗಿಯಾ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಮುಖ್ಯಮಂತ್ರಿ ಮೋಹನ್ ಯಾದವ್ ಮತ್ತು ರಾಜ್ಯ ಅಧ್ಯಕ್ಷ ವಿ.ಡಿ.ಶರ್ಮಾ ಅವರ ನಾಯಕತ್ವ ನೆಚ್ಚಿ ಇಂದೋರ್​​ನ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಬಿಜೆಪಿ ಸೇರಿದ್ದಾರೆ ” ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

ಈ ತಿಂಗಳ ಆರಂಭದಲ್ಲಿ, ಗುಜರಾತ್​ನ ಸೂರತ್ ನ ಕಾಂಗ್ರೆಸ್ ಅಭ್ಯರ್ಥಿ ನಿಲೇಶ್ ಕುಂಭಾನಿ ಅವರು ಇದೇ ರೀತಿ ಬಿಜೆಪಿ ಸೇರಿದ್ದರು. ಅನುಮೋದಕರ ಸಹಿಯಲ್ಲಿ ವ್ಯತ್ಯಾಸಗಳನ್ನು ಕಂಡುಕೊಂಡ ನಂತರ ಜಿಲ್ಲಾ ಚುನಾವಣಾಧಿಕಾರಿ ಅವರ ಉಮೇದುವಾರಿಕೆಯನ್ನು ತಿರಸ್ಕರಿಸಿದ್ದರು. ಅಲ್ಲದೆ ಈ ಸ್ಥಾನಕ್ಕೆ ಪಕ್ಷದ ಬದಲಿ ಅಭ್ಯರ್ಥಿ ಸುರೇಶ್ ಪಡ್ಸಾಲ ಅವರ ನಾಮಪತ್ರವನ್ನೂ ತಿರಸ್ಕರಿಸಲಾಗಿತ್ತು.

Fact Check: ಅಮಿತ್‌ ಶಾ ಎಸ್​​ಸಿ, ಎಸ್​ಟಿ ಮೀಸಲು ರದ್ದು ಮಾಡ್ತೀವಿ ಎಂದಿದ್ದು ನಿಜವೆ?​​

ನವ ದೆಹಲಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ (Fact Check) ನೀಡಲಾಗುತ್ತಿರುವ ಮಿಸಲಾತಿಯನ್ನು ತೆಗೆದು ಹಾಕಲಾಗುವುದು ಎಂದು ಅಮಿತ್ ಶಾ (Amit Shah) ಹೇಳಿದ್ದಾರೆ ಎಂದು ತಿರುಚಿದ ವಿಡಿಯೊ ಹರಿಬಿಟ್ಟ ಪ್ರಕರಣದಲ್ಲಿ ಡೆಲ್ಲಿ ಪೊಲೀಸರು (Delhi Police) ಎಫ್​ಐಆರ್​ ದಾಖಲಿಸಿದ್ದಾರೆ. ಇದೇ ವೇಳೆ ಪೊಲೀಸರು ವಿಡಿಯೊದ ಕುರಿತು ಮಾಹಿತಿ ನೀಡುವಂತೆ ಸೋಶಿಯಲ್ ಮೀಡಿಯಾ ಫ್ಲ್ಯಾಟ್​ಫಾರ್ಮ್​ ಎಕ್ಸ್​​ಗೆ (X) ಮನವಿ ಮಾಡಿದೆ. ಅದರ ಪ್ರಕಾರ ತನಿಖೆ ನಡೆಸುವುದಾಗಿ ಪೊಲೀಸರು ಹೇಳಿದ್ದಾರೆ. ಇದು ನಕಲಿ ಸೃಷ್ಟಿ ಎಂದು ಅಮಿತ್‌ ಶಾ ಸ್ಪಷ್ಪಪಡಿಸಿದ್ದಾರೆ.

ನಕಲಿ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್​​ಫಾರ್ಮ್​ಗಳಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಭಾನುವಾರ ಎಫ್ಐಆರ್ ದಾಖಲಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಗೃಹ ಸಚಿವಾಲಯ (ಎಂಎಚ್ಎ) ಈ ಸಂಬಂಧ ದೂರು ದಾಖಲಿಸಿದೆ. ಅದರ ಆಧಾರದ ಮೇಲೆ ದೆಹಲಿ ಪೊಲೀಸರ ವಿಶೇಷ ಸೆಲ್ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಭಾಗಗಳು ಮತ್ತು ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದೆ.

Exit mobile version