Site icon Vistara News

Exit Poll 2024 Live: ಎನ್‌ಡಿಎಗೆ 350+, ಇಂಡಿಯಾ ಒಕ್ಕೂಟಕ್ಕೆ 120+; ಪೋಲ್‌ ಆಫ್‌ ಪೋಲ್ಸ್ ಪ್ರಕಾರ ಮೋದಿ ಹ್ಯಾಟ್ರಿಕ್

Exit Poll Live 2024

Exit Poll 2024 Live Updates In Vistara News Kannada

ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ, ದೇಶದ ಭವಿಷ್ಯಕ್ಕೆ ಮುನ್ನುಡಿ ಬರೆಯುವ ಲೋಕಸಭೆ ಚುನಾವಣೆಯು (Lok Sabha Election 2024) ಮುಕ್ತಾಯಗೊಂಡಿದೆ. ಈಗ ಮತಗಟ್ಟೆ ಸಮೀಕ್ಷೆಯ ವರದಿಗಳು ಲಭ್ಯವಾಗಲಿವೆ. ಚುನಾವಣೆ ಫಲಿತಾಂಶ ಏನಾಗಬಹುದು? ಯಾವ ಪಕ್ಷಕ್ಕೆ ಹೆಚ್ಚಿನ ಕ್ಷೇತ್ರಗಳು ಸಿಗಬಹುದು? ಯಾರು ದೇಶದ ಪ್ರಧಾನಿಯಾಗಬಹುದು ಎಂಬುದಕ್ಕೆ ಮತಗಟ್ಟೆ ಸಮೀಕ್ಷೆಯು ದಿಕ್ಸೂಚಿಯಾಗಿದೆ. ಹಾಗಾಗಿ, ಚುನಾವಣೋತ್ತರ ಸಮೀಕ್ಷೆಯು ಫಲಿತಾಂಶದಷ್ಟೇ ಕುತೂಹಲ ಕೆರಳಿಸಿದೆ. ಈ ಮತಗಟ್ಟೆ ಸಮೀಕ್ಷೆಯ ಕ್ಷಣಕ್ಷಣದ (Exit Poll 2024 Live) ಮಾಹಿತಿ ಇಲ್ಲಿದೆ.

ಇದನ್ನೂ ಓದಿ: Exit Poll 2024: ಸಟ್ಟಾ ಬಜಾರ್‌, ರಾಜಕೀಯ ಪರಿಣತರ ಪ್ರಕಾರ ಈ ಬಾರಿಯೂ ಮೋದಿ; ನಿಮ್ಮ ಪ್ರಕಾರ ಯಾರಿಗೆ ಅಧಿಕಾರ? ತಿಳಿಸಿ

B Somashekhar

ಪೋಲ್‌ ಆಫ್‌ ಪೋಲ್ಸ್‌ (ಇಂಡಿಯಾ ಒಕ್ಕೂಟ)

ಕಾಂಗ್ರೆಸ್‌ ಸೇರಿ ಹಲವು ಪಕ್ಷಗಳು ಒಗ್ಗೂಡಿ ರಚಿಸಿರುವ ಇಂಡಿಯಾ ಒಕ್ಕೂಟವು ಪ್ರಸಕ್ತ ಸಾರ್ವತ್ರಿಕ ಚುನಾವಣೆಯಲ್ಲಿ 125-165 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂಬುದು ಮತಗಟ್ಟೆ ಸಮೀಕ್ಷೆಗಳ ಒಟ್ಟು ಸಾರವಾಗಿದೆ. ಇದರೊಂದಿಗೆ ಇಂಡಿಯಾ ಒಕ್ಕೂಟವು ಮ್ಯಾಜಿಕ್‌ ನಂಬರ್‌ (272) ಬಿಡಿ, 200 ಕ್ಷೇತ್ರಗಳನ್ನೂ ತಲುಪುವುದಿಲ್ಲ ಎಂದು ಸಮೀಕ್ಷೆಗಳು ತಿಳಿಸಿವೆ. ಇದರೊಂದಿಗೆ ಕಾಂಗ್ರೆಸ್‌ ಸೇರಿ ಪ್ರತಿಪಕ್ಷಗಳಿಗೆ ಸತತ ಮೂರನೇ ಬಾರಿಯೂ ಹಿನ್ನಡೆಯಾಗುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ.

B Somashekhar

ಪೋಲ್‌ ಆಫ್‌ ಪೋಲ್ಸ್‌ (ಬಿಜೆಪಿ)

ಎಲ್ಲ ಸಮೀಕ್ಷಾ ವರದಿಗಳನ್ನು ವಿಶ್ಲೇಷಿಸಿದಾಗ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಒಟ್ಟು 543 ಕ್ಷೇತ್ರಗಳ ಪೈಕಿ 355-380 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ 2019ರ ಲೋಕಸಭೆ ಚುನಾವಣೆ ಫಲಿತಾಂಶವೇ ಮರುಕಳಿಸಲಿದೆ ಎಂದು ಹೇಳಲಾಗುತ್ತಿದೆ. 2019ರಲ್ಲಿ ಎನ್‌ಡಿಎ ಮೈತ್ರಿಕೂಟವು 353 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿಯೊಂದೇ 303 ಕ್ಷೇತ್ರಗಳಲ್ಲಿ ಜಯ ಕಂಡಿತ್ತು.

B Somashekhar

ನಾವು ಎಕ್ಸಿಟ್‌ ಪೋಲ್‌ ನಂಬಲ್ಲ ಎಂದ ಎಂ.ಬಿ.ಪಾಟೀಲ್‌

ನಾವ್ಯಾರು ಎಕ್ಸಿಟ್ ಪೋಲ್ ನಂಬುವುದಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ಇದು ಗ್ರೌಂಡ್ ರಿಯಾಲಿಟಿಯಿಂದ ದೂರ ಇದೆ ಎಂದೇ ನಂಬುತ್ತೇವೆ ಎಂದು ನುಡಿದಿದ್ದಾರೆ. ಸಮೀಕ್ಷೆಗಳಲ್ಲಿ ಕೇವಲ ಐದಾರು ಸೀಟುಗಳನ್ನು ಮಾತ್ರ ಕೊಟ್ಟಿದ್ದಾರೆ. ಆದರೆ, ಜೂ 4ರಂದು ವಾಸ್ತವ ಗೊತ್ತಾಗಲಿದೆ. ಫಲಿತಾಂಶದಲ್ಲಿ ಕಾಂಗ್ರೆಸ್​ ಡಬಲ್​ ಡಿಜಿಟ್ ದಾಟಲಿದೆ ಎಂದು ಹೇಳಿದ್ದಾರೆ.

B Somashekhar

ಕೇರಳದಲ್ಲೂ ಖಾತೆ ಓಪನ್​

ಎನ್​ಡಿಎ ಕೇರಳದಲ್ಲಿ ಒಂದರಿಂದ ಮೂರು ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಖಾತೆಯನ್ನು ತೆರೆಯಲು ಸಜ್ಜಾಗಿದೆ ಎಂಬುದಾಗಿ ಸಮೀಕ್ಷೆಗಳು ಅಂದಾಜಿಸಿವೆ. ಕೇರಳದ 20 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆದಿದ್ದು, 2019ರಲ್ಲಿ ಶೇ.77.84ರಷ್ಟಿದ್ದ ಮತದಾನ ಪ್ರಮಾಣ ಈ ಬಾರಿ ಶೇ.70.35ಕ್ಕೆ ಕುಸಿದಿತ್ತು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಕೇರಳ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು. 2019 ರ ಚುನಾವಣೆಯಲ್ಲಿ, ಐಎನ್​ಸಿಎ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಗಳಿಸಿದರೆ, ಎನ್​​ಡಿಎ ಒಂದೂ ಸ್ಥಾನ ಗೆದ್ದಿರಲಿಲ್ಲ. ಇಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಸಿಪಿಐ (ಎಂ) ನೇತೃತ್ವದ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್ಡಿಎಫ್) ನಡುವೆ ನೇರ ಸ್ಪರ್ಧೆ ಇದೆ. ಸಮೀಕ್ಷೆಗಳ ಪ್ರಕಾ ಯುಡಿಎಫ್​​ಗೆ 17-19 ಸ್ಥಾನಗಳು ಮತ್ತು ಎನ್​ಡಿಎಗೆ 1-3 ಸ್ಥಾನಗಳು ಸಿಗಲಿವೆ.

B Somashekhar

ತಮಿಳುನಾಡಿನಲ್ಲಿ ಖಾತೆ ತೆರೆಯಲಿದೆ ಬಿಜೆಪಿ

ಬಹುತೇಕ ಸಮೀಕ್ಷೆಗಳು ತಮಿಳುನಾಡಿನಲ್ಲಿ ಬಿಜೆಪಿ 1-3 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಅಂದಾಜಿಸಿದೆ. ಕಾಂಗ್ರೆಸ್ 8-11, ಬಿಜೆಪಿ 36-39 ಮತ್ತು ಇತರರು 0-2 ಸ್ಥಾನಗಳನ್ನು ಪಡೆಯಲಿವೆ. ಬಹು ಕಟ್ಟರ್ ಪ್ರಾಂತೀಯವಾದಿ ಮತದಾರರು ಇರುವ ತಮಿಳುನಾಡಿನಲ್ಲಿ ಖಾತೆ ತೆರೆಯುವುದು ಬಿಜೆಪಿಗೆ ಸುಲಭ ಮಾತಲ್ಲ. ಹೀಗಾಗಿ ಈ ಸಲ ಗೆದ್ದರೆ ಅದೊಂದು ಐತಿಹಾಸಿಕ ಸಾಧನೆಯಾಗಲಿದೆ. ಇದರಲ್ಲಿ ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಅವರ ಪಾತ್ರ ದೊಡ್ಡದಿದೆ.

Exit mobile version