Site icon Vistara News

Election Results 2024: ರಾಜ್ಯದ 474 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರಕ್ಕೆ ಕೌಂಡ್ ಡೌನ್

Lok Sabha Election Results 2024

ಬೆಂಗಳೂರು: ರಾಜ್ಯದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ (Election Results 2024) ಸ್ಪರ್ಧಿಸಿದ್ದ ಒಟ್ಟು 474 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರಕ್ಕೆ ಕೌಂಡ್ ಡೌನ್ ಶುರುವಾಗಿದೆ. ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಮತ ಎಣಿಕಾ ಕೇಂದ್ರಗಳಲ್ಲಿ ಮೂರು ಹಂತದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಬೆಳಗ್ಗೆ 8ಗಂಟೆಗೆ ಮತ ಎಣಿಕೆ ಆರಂಭವಾಗಿದೆ. ಮಧ್ಯಾಹ್ನ 12 ರೊಳಗೆ ಬಹುತೇಕ ಯಾರು ಗೆಲ್ಲಲಿದ್ದಾರೆ ಎಂಬ ಚಿತ್ರಣ ಸಿಗಲಿದ್ದು, ಸಂಜೆ ಅಂತಿಮ ಫಲಿತಾಂಶ ಹೊರಬೀಳಲಿದೆ.

ಬೆಳಗ್ಗೆ 7:45 ರ ಸುಮಾರಿಗೆ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ಓಪನ್ ಮಾಡಲಾಗಿದ್ದು, ನಂತರ ಮತ ಎಣಿಕೆ ಕೊಠಡಿಗೆ ಇವಿಎಂಗಳನ್ನು ಅಧಿಕಾರಿಗಳು ಕೊಂಡೊಯ್ದರು. ಒಂದು ಕೊಠಡಿಯಲ್ಲಿ 14 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಕೊಠಡಿ ದೊಡ್ಡದಿದ್ದರೆ ಹೆಚ್ಚುವರಿ ಟೇಬಲ್ ಹಾಕಲು ಅವಕಾಶ ಮಾಡಿಕೊಡಲಾಗಿದೆ. 20-25 ಸುತ್ತಿನವರೆಗೆ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.

ಇದನ್ನೂ ಓದಿ | Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ರಾಜ್ಯದಲ್ಲಿ ಏಪ್ರಿಲ್ 26 ರಂದು ನಡೆದ ಮೊದಲ ಹಂತದಲ್ಲಿ 247 ಅಭ್ಯರ್ಥಿಗಳು ಹಾಗೂ ಮೇ 7 ರಂದು ನಡೆದ ಎರಡನೇ ಹಂತದಲ್ಲಿ 227 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. ಒಟ್ಟು 474 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ಬಹಿರಂಗವಾಗಲಿದೆ.

Exit mobile version