Lok Sabha Election 2024: ಇಂದು ತೇಜಸ್ವಿ ಸೂರ್ಯ, ಡಾ.ಮಂಜುನಾಥ್‌, ಕೆ.ಸುಧಾಕರ್ ನಾಮಪತ್ರ ಸಲ್ಲಿಕೆ, ರೋಡ್‌ ಶೋಗಳ ಭರಾಟೆ - Vistara News

ಪ್ರಮುಖ ಸುದ್ದಿ

Lok Sabha Election 2024: ಇಂದು ತೇಜಸ್ವಿ ಸೂರ್ಯ, ಡಾ.ಮಂಜುನಾಥ್‌, ಕೆ.ಸುಧಾಕರ್ ನಾಮಪತ್ರ ಸಲ್ಲಿಕೆ, ರೋಡ್‌ ಶೋಗಳ ಭರಾಟೆ

ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರಗಳು ಇಂದು ಬಿಜೆಪಿ ಅಭ್ಯರ್ಥಿಗಳ ರೋಡ್‌ ಶೋ ಹಾಗೂ ನಾಮಪತ್ರ ಸಲ್ಲಿಕೆಗೆ ಸಾಕ್ಷಿಯಾಗಲಿವೆ.

VISTARANEWS.COM


on

K Sudhakar cn manjunath tejaswi surya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇಂದು ಲೋಕಸಭೆ ಚುನಾವಣೆ (Lok Sabha Election 2024) ಬಿಜೆಪಿ ಅಭ್ಯರ್ಥಿಗಳಾದ (BJP Candidates) ತೇಜಸ್ವಿ ಸೂರ್ಯ (Tejaswi Surya), ಡಾ. ಸಿಎನ್‌ ಮಂಜುನಾಥ್‌ (Dr CN Manjunath), ಡಾ.ಕೆ ಸುಧಾಕರ್‌ (Dr K Sudhakar) ಮುಂತಾದ ಘಟಾನುಘಟಿಗಳು ನಾಮಪತ್ರ ಸಲ್ಲಿಕೆ (Nomination) ಮಾಡಲಿದ್ದಾರೆ. ರೋಡ್‌ ಶೋಗಳನ್ನೂ (Road Show) ಏರ್ಪಡಿಸಲಾಗಿದೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಬೆಳಿಗ್ಗೆ 10ಕ್ಕೆ ಜಯನಗರ ಬಿಬಿಎಂಪಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಅವರು ಜಯನಗರ 4ನೇ ಬ್ಲಾಕ್‍ನ ಮಯ್ಯಾಸ್ ಹೋಟೆಲ್‍ನಿಂದ ರೋಡ್ ಶೋ ಆರಂಭಿಸಲಿದ್ದು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್, ಆರ್. ಅಶೋಕ್, ಅಶ್ವತ್ಥನಾರಾಯಣ್, ಪ್ರತಾಪ ಸಿಂಹ ಸೇರಿದಂತೆ ಹಲವು ಬಿಜೆಪಿ ನಾಯಕರು ಸಾಥ್ ನೀಡಲಿದ್ದಾರೆ. ರೋಡ್ ಶೋನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಜಮಾಯಿಸಲಿದ್ದಾರೆ.

ರಾಮನಗರ: ಇಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ರಣಕಣದಲ್ಲಿ ಬಿಜೆಪಿ- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಡಾ ಸಿ.ಎನ್ ಮಂಜುನಾಥ್ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ 11 ಘಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದು, ಬೃಹತ್ ಶಕ್ತಿ ಪ್ರದರ್ಶನಕ್ಕೆ ಕೂಡ ಸಜ್ಜು ಮಾಡಿಕೊಂಡಿದ್ದಾರೆ.

ಡಿಕೆ ಬ್ರದರ್ಸ್ ಭದ್ರಕೋಟೆ ಭೇಧಿಸಲು ಕೇಂದ್ರ ನಾಯಕರು ಬಿಜೆಪಿ- ಜೆಡಿಎಸ್‌ ಮುಖಂಡರಿಗೆ ಟಾಸ್ಕ್ ನೀಡಿದ್ದು, ನಾಮಪತ್ರ ಸಲ್ಲಿಕೆಗೆ ಮುನ್ನ ಬೃಹತ್ ಮೆರವಣಿಗೆಯಲ್ಲಿ ಮೈತ್ರಿ ನಾಯಕರು ಭಾಗವಹಿಸುತ್ತಾರೆ. ಬೆಳಿಗ್ಗೆ 10 ಘಂಟೆಗೆ ಚಾಮುಂಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಂತರ ಎಸ್ಪಿ ಕಚೇರಿ ಸರ್ಕಲ್‌ನಿಂದ ಡಿಸಿ ಕಚೇರಿವರೆಗೂ ಬೃಹತ್ ರ್ಯಾಲಿ ನಡೆಸಿ ನಾಮಪತ್ರ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆ ನಂತರ ಬೃಹತ್ ಸಮಾವೇಶ ನಡೆಯಲಿದ್ದು, ಸಮಾವೇಶದಲ್ಲಿ ಮಾಜಿ‌ ಪ್ರಧಾನಿ ಹೆಚ್.ಡಿ ದೇವೆಗೌಡ, ಮಾಜಿ ಸಿಎಂಗಳಾದ ಹೆಚ್.ಡಿ‌ ಕುಮಾರಸ್ವಾಮಿ, ಬಿಎಸ್‌ವೈ, ಮಾಜಿ ಸಚಿವರಾದ ಅಶ್ವಥ್ ನಾರಾಯಣ್, ಸಿಪಿವೈ, ಶಾಸಕರಾದ ಮುನಿರತ್ನ, ಎಂ. ಕೃಷ್ಣಪ್ಪ, ಜೆಡಿಎಸ್ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಮುಂತಾದವರು ಭಾಗವಹಿಸಲಿದ್ದಾರೆ.

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಡಾ.ಕೆ. ಸುಧಾಕರ್ ಇಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಹಿನ್ನೆಲೆ‌ಯಲ್ಲಿ ಸುಧಾಕರ್ ಟೆಂಪಲ್‌ರನ್ ಆರಂಭಿಸಿದ್ದು, ನಾಮಪತ್ರ ಸಲ್ಲಿಕೆಗೂ ಮುನ್ನ ಕೆಂಪೇಗೌಡ ಪುತ್ಥಳಿಗೆ ಮಾಲಾರ್ಪಣೆ ಮಾಡುತ್ತಾರೆ. ಬಳಿಕ ಆಟೋ ಚಾಲಕರು, ಪೌರ ಕಾರ್ಮಿಕರು, ರೈತರು, ಮಹಿಳೆಯರ ಆಶೀರ್ವಾದ ಪಡೆಯಲಿದ್ದಾರೆ.

ನಾಮಪತ್ರ ಸಲ್ಲಿಕೆ ಬಳಿಕ ಮಧ್ಯಾಹ್ನ 3 ಗಂಟೆಗೆ ಬೃಹತ್ ರೋಡ್ ಶೋ ನಡೆಯಲಿದ್ದು, ರೋಡ್ ಶೋನಲ್ಲಿ ರಾಜ್ಯ ಮಟ್ಟದ ಮೈತ್ರಿ ನಾಯಕರು ಭಾಗಿಯಾಗಲಿರುವರು. ಬಿವೈ ವಿಜಯೇಂದ್ರ, ಆರ್. ಅಶೋಕ್, ಎಚ್.ಡಿ ಕುಮಾರಸ್ವಾಮಿ, ಪಿ.ಸಿ ಮೋಹನ್‌, ಅರವಿಂದ ಲಿಂಬಾವಳಿ, ತಾರಾ ಅನುರಾಧ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: Congress Guarantee: ಲೋಕಸಭೆ ಚುನಾವಣೆಗೆ 25 ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌; ಇಷ್ಟೆಲ್ಲ ಫ್ರೀ ಫ್ರೀ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

SSLC Result 2024: ಕರ್ನಾಟಕದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಣೆಗೆ ದಿನ ಫಿಕ್ಸ್

SSLC Result 2024: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಸಂಪೂರ್ಣಗೊಂಡಿದ್ದು, ಫಲಿತಾಂಶದ ಕ್ರೋಢೀಕರಣದ ಕಾರ್ಯ ಅಂತಿಮ ಹಂತದಲ್ಲಿದೆ. ಮೇ 8ರಂದು ಪ್ರಕಟಿಸಲು ಮಂಡಳಿ ನಿರ್ಧರಿಸಿದೆ. ಕಂಪ್ಯೂಟರ್ ಕೆಲಸದಲ್ಲಿ ವಿಳಂಬವಾದರೆ ಮಾತ್ರವೇ ಫಲಿತಾಂಶ ಪ್ರಕಟಿಸುವ ದಿನಾಂಕ ಬದಲಾಗುವ ಸಾಧ್ಯತೆ ಇದೆ.

VISTARANEWS.COM


on

karnataka SSLC result 2024
Koo

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿರುವ ಎಸ್ಸೆಸ್ಸೆಲ್ಸಿ 2024ರ (SSLC Result 2024) ಪರೀಕ್ಷೆ- 1ರ ಫಲಿತಾಂಶದ (SSLC exam Result 2024) ಸಮಯ ಸನ್ನಿಹಿತವಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳು (Students) ಕಾತರದಿಂದ ಕಾಯುತ್ತಿರುವ ಫಲಿತಾಂಶ ಪ್ರಕಟಣೆಗೆ ಮಂಡಳಿ ಮುಹೂರ್ತ ಫಿಕ್ಸ್‌ ಮಾಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮೇ 8ರಂದು ಎಸ್ಸೆಸ್ಸೆಲ್ಸಿ ರಿಸಲ್ಟ್‌ (SSLC result) ಪ್ರಕಟಿಸುವ ಸಾಧ್ಯತೆಗಳಿವೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಸಂಪೂರ್ಣಗೊಂಡಿದ್ದು, ಫಲಿತಾಂಶದ ಕ್ರೋಢೀಕರಣದ ಕಾರ್ಯ ಅಂತಿಮ ಹಂತದಲ್ಲಿದೆ. ಮೇ 8ರಂದು ಪ್ರಕಟಿಸಲು ಮಂಡಳಿ ನಿರ್ಧರಿಸಿದೆ. ಕಂಪ್ಯೂಟರ್ ಕೆಲಸದಲ್ಲಿ ವಿಳಂಬವಾದರೆ ಮಾತ್ರವೇ ಫಲಿತಾಂಶ ಪ್ರಕಟಿಸುವ ದಿನಾಂಕ ಬದಲಾಗುವ ಸಾಧ್ಯತೆ ಇದೆ.

2023 & 2024ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಮಾ.25ರಿಂದ ಏ.6ರ ವರೆಗೆ ನಡೆದಿತ್ತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು & 4.28 ಲಕ್ಷ ಬಾಲಕಿಯರು ಸೇರಿದ್ದರು. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು & 41,375 ರೀ ಎಕ್ಸಾಮ್ ಬರೆದಿದ್ದ ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ.

ರಿಸಲ್ಟ್ ಎಲ್ಲಿ ನೋಡಬಹುದು?

ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಕರ್ನಾಟಕ ಶಾಲೆ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ವೆಬ್‌ಸೈಟ್‌ನಲ್ಲಿ ನೋಡಬಹುದು. ಮೊದಲಿಗೆ ತಮ್ಮ ರಿಜಿಸ್ಟರ್ ನಂಬರ್/ ರೋಲ್‌ ನಂಬರ್ ಹೊಂದಿರಬೇಕು. ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮೂಲಕ ಕರ್ನಾಟಕ ಶಾಲೆ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು. ಇದಕ್ಕೆ ನೀವು kseab.karnataka.gov.in ಗೆ ಭೇಟಿ ನೀಡಬಹುದು.

ಶೈಕ್ಷಣಿಕ ಗುಣಮಟ್ಟದ ವಿಚಾರದಲ್ಲಿ ಕರ್ನಾಟಕ ದೇಶದಲ್ಲಿ ದೊಡ್ಡ ಹೆಸರು ಪಡೆದಿದೆ. ಹೀಗಾಗಿ ಕರ್ನಾಟಕದ ಎಸ್‌ಎಸ್‌ಎಲ್‌ ಫಲಿತಾಂಶವು, ಇಡೀ ದೇಶದ ಗಮನವನ್ನ ಸೆಳೆಯುತ್ತಿದೆ. ಕರ್ನಾಟಕದಲ್ಲಿ ಮುಖ್ಯವಾಗಿ ಬೆಂಗಳೂರಿನಲ್ಲಿ ಬೇರೆ ಬೇರೆ ರಾಜ್ಯದ ವಿದ್ಯಾರ್ಥಿಗಳು ಕೂಡ ಓದುತ್ತಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕಿನಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಮುಖ ಹಂತವಾಗಿರುವುದರಿಂದ, ಕಾತರ ಹೆಚ್ಚಿದೆ. ಫಲಿತಾಂಶ ಬಿಡುಗಡೆಗೆ ಸಕಲ ಸಿದ್ಧತೆ ನಡೆದಿದ್ದು, ಪರೀಕ್ಷಾ ಮಂಡಳಿ ಅಧಿಕಾರಿಗಳು ಕೂಡ ರಿಸಲ್ಟ್ ರಿವೀಲ್ ಮಾಡಲು ಅಂತಿಮ ಹಂತದ ಸಿದ್ಧತೆ ನಡೆಸಿದ್ದಾರೆ.

ಮೂರು ಅವಕಾಶ

ಈ ಬಾರಿ ಮೂರು ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದೆ. ಆ ಮೂರೂ ಪರೀಕ್ಷೆ ಬರೆದವರು ಹೆಚ್ಚು ಅಂಕಗಳು ಯಾವ ಪರೀಕ್ಷೆಯಲ್ಲಿ ಬಂದಿರುತ್ತದೋ ಆ ಫಲಿತಾಂಶವನ್ನು ಉಳಿಸಿಕೊಳ್ಳುವ ಅವಕಾಶ ದೊರೆಯಲಿದೆ. ಪ್ರತಿ ವಿದ್ಯಾರ್ಥಿಗಳು ಮೂರೂ ಪರೀಕ್ಷೆ ಬರೆಯುವುದು ಕಡ್ಡಾಯವಲ್ಲ. ಮೊದಲ ಅಥವಾ ವಾರ್ಷಿಕ ಪರೀಕ್ಷೆಯಲ್ಲಿ ಬಂದ ಫಲಿತಾಂಶದಲ್ಲಿ ಸಮಾಧಾನವಿದ್ದರೆ ಎರಡನೇ ಪರೀಕ್ಷೆ ಬರೆಯುವ ಅಗತ್ಯವಿಲ್ಲ. ಸಮಾಧಾನ ಇಲ್ಲದಿದ್ದರೆ ಅಥವಾ ಕಡಿಮೆ ಅಂಕಗಳು ಬಂದಿದ್ದರೆ ಎರಡನೇ ಪರೀಕ್ಷೆ ಬರೆಯಬಹುದು. ಎರಡನೇ ಪರೀಕ್ಷೆಯ ಫಲಿತಾಂಶದಲ್ಲೂ ಸಮಾಧಾನ ಇಲ್ಲದಿದ್ದರೆ ಮೂರನೇ ಪರೀಕ್ಷೆ ಬರೆಯಬಹುದು. ಈ ರೀತಿ ಮೂರೂ ಪರೀಕ್ಷೆ ಬರೆದರೂ ಮೂರರಲ್ಲಿ ಯಾವ ಫಲಿತಾಂಶವನ್ನು ಬೇಕಾದರೂ ಅಥವಾ ಮೂರೂ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದಿರುವ ಬೇರೆ ಬೇರೆ ವಿಷಯಗಳ ಫಲಿತಾಂಶಗಳನ್ನು ಒಟ್ಟಾರೆ ಫಲಿತಾಂಶಕ್ಕೆ ಪರಿಗಣಿಸಬಹುದಾಗಿದೆ.

ಹಾಲಿ ಇರುವ ಪರೀಕ್ಷಾ ಪದ್ಧತಿಯು ವಿದ್ಯಾರ್ಥಿಗಳ ಮೇಲೆ ಹೆಚ್ಚು ಒತ್ತಡ ಮತ್ತು ಪರೀಕ್ಷಾ ಆತಂಕವನ್ನು ಸೃಷ್ಟಿಸುತ್ತಿದೆ. ಆದರಿಂದ ವಿದ್ಯಾರ್ಥಿಗಳ ಜ್ಞಾನಧಾರಣೆ, ಅರ್ಥಪೂರ್ಣ ಕಲಿಕೆ ಹಾಗೂ ಶೈಕ್ಷಣಿಕ ಪ್ರಗತಿಗಾಗಿ ಈ ಸುಧಾರಣಾ ಕ್ರಮ ಕೈಗೊಳ್ಳಲಾಗಿದೆ. ಇದುವರೆಗೆ ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಫಲಿತಾಂಶದಲ್ಲಿ ಸಮಾಧಾನವಾಗದಿದ್ದರೆ ವಿದ್ಯಾರ್ಥಿ ಅದನ್ನು ತಿರಸ್ಕರಿಸಿ ಪೂರಕ ಪರೀಕ್ಷೆ ಬರೆಯಬಹುದಿತ್ತು. ಆದರೆ, ಪೂರಕ ಪರೀಕ್ಷೆಯಲ್ಲೇನಾದರೂ ಇನ್ನೂ ಕಳಪೆ ಫಲಿತಾಂಶ ಬಂದರೆ ಅಥವಾ ಫೇಲಾದರೆ ವಾರ್ಷಿಕ ಪರೀಕ್ಷೆಯ ಫಲಿತಾಂಶ ಉಳಿಸಿಕೊಳ್ಳಲು ಅವಕಾಶವಿರಲಿಲ್ಲ. ಈಗ ಮೂರರಲ್ಲಿ ಯಾವ ಫಲಿತಾಂಶವನ್ನು ಬೇಕಾದರೂ ಉಳಿಸಿಕೊಳ್ಳಬಹುದು.

ಇದನ್ನೂ ಓದಿ: Which is best after SSLC: ಎಸ್‌ಎಸ್ಎಲ್‌ಸಿ ನಂತರ ಮುಂದೇನು? ಇಲ್ಲಿದೆ ಉಪಯುಕ್ತ ಮಾಹಿತಿ

Continue Reading

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್‌ ರೇವಣ್ಣ ವಿಡಿಯೋ ಬಿಟ್ಟ ಕಾರ್ತಿಕ್‌ನನ್ನು ಮಲೇಷ್ಯಾಕ್ಕೆ ಕಳಿಸಿದವರು ಯಾರು?

Prajwal Revanna Case: ಪ್ರಜ್ವಲ್ ರೇವಣ್ಣ ಸಂಸದ ಆಗುವ ಮೊದಲಿನಿಂದಲೂ ಸುಮಾರು 13 ವರ್ಷ ಕಾರ್ತಿಕ್‌ ಅವರ ಕಾರು ಚಾಲಕನಾಗಿದ್ದ. ಹೊಳೆನರಸೀಪುರ ತಾಲ್ಲೂಕಿನ ಕಡುವಿನಕೋಟೆ‌ ಗ್ರಾಮದ ಕಾರ್ತಿಕ್, ಎರಡು ದಿನಗಳ ಹಿಂದೆಯೇ ಎಸ್ಐಟಿ ಮುಂದೆ ಹಾಜರಾಗುವುದಾಗಿ ಹೇಳಿರುವ ವೀಡಿಯೋ ಬಿಡುಗಡೆ ಮಾಡಿದ್ದ.

VISTARANEWS.COM


on

prajawal revanna case driver karthik
Koo

ಹಾಸನ: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ (Prajwal Revanna Case) ಅಶ್ಲೀಲ ವೀಡಿಯೋ (Obscene video) ಹೊಂದಿದ ಪೆನ್ ಡ್ರೈವ್ ವೈರಲ್ (viral video) ಆಗಿರುವ ಪ್ರಕರಣದಲ್ಲಿ, ವಿಡಿಯೋ ಹೊರಬಿಟ್ಟಿರುವ ಮೂಲ ವ್ಯಕ್ತಿ ಡ್ರೈವರ್‌ ಕಾರ್ತಿಕ್‌ ಎಸ್‌ಐಟಿಯ (SIT) ದಾರಿ ತಪ್ಪಿಸಿ ಮಲೇಷ್ಯಾಕ್ಕೆ ತೆರಳಿದ್ದಾನೆ.

ಈ ನಡುವೆ ಎಸ್ಐಟಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಹೇಳಲಾಗಿದ್ದು, ದೂರುದಾರ ಸಂತ್ರಸ್ತ ಮಹಿಳೆಯರು ಹಾಗೂ ವೀಡಿಯೋಗಳಲ್ಲಿ ಇರುವ ಸಂತ್ರಸ್ತ ಮಹಿಳೆಯರ ವಿಚಾರಣೆ ಮುಂದುವರಿದಿದೆ. ಆದರೆ ದೂರುದಾರೆ ಹೊರತುಪಡಿಸಿ ಇತರ ಮಹಿಳೆಯರು, ತಮ್ಮನ್ನು ತನಿಖೆಗೆ ಬಲವಂತಪಡಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ. ತಮ್ಮ ಗುರುತು ಪರಿಚಯ ಬಹಿರಂಗಪಡಿಸಿದರೆ ತಮ್ಮ ಕುಟುಂಬಕ್ಕೆ ಸಮಸ್ಯೆಯಾಗಲಿದ್ದು, ಹೀಗಾಗಿ ತನಿಖೆಗೆ ಬರುವುದಿಲ್ಲ ಎಂದಿದ್ದಾರೆ ಎನ್ನಲಾಗಿದೆ.

ಈ ನಡುವೆ ವೈರಲ್ ವೀಡಿಯೋದ ಮೂಲ ವ್ಯಕ್ತಿ, ಡ್ರೈವರ್ ಕಾರ್ತಿಕ್ ನಾಪತ್ತೆಯಾಗಿದ್ದಾನೆ. ಪ್ರಜ್ವಲ್ ರೇವಣ್ಣ ಸಂಸದ ಆಗುವ ಮೊದಲಿನಿಂದಲೂ ಸುಮಾರು 13 ವರ್ಷ ಈತ ಅವರ ಕಾರು ಚಾಲಕನಾಗಿದ್ದ. ಹೊಳೆನರಸೀಪುರ ತಾಲ್ಲೂಕಿನ ಕಡುವಿನಕೋಟೆ‌ ಗ್ರಾಮದ ಕಾರ್ತಿಕ್, ಎರಡು ದಿನಗಳ ಹಿಂದೆಯೇ ಎಸ್ಐಟಿ ಮುಂದೆ ಹಾಜರಾಗುವುದಾಗಿ ಹೇಳಿರುವ ವೀಡಿಯೋ ಬಿಡುಗಡೆ ಮಾಡಿದ್ದ. ಹೀಗಾಗಿ ಎಸ್‌ಐಟಿ ಕೂಡ ಆತನನ್ನು ಟ್ರೇಸ್‌ ಮಾಡಲು ಮುಂದಾಗಿರಲಿಲ್ಲ.

ತಾನೇ ಖುದ್ದು ಎಸ್ಐಟಿ ಮುಂದೆ ಹಾಜರಾಗುವ ಹೇಳಿಕೆ ನೀಡಿದ ಬಳಿಕ ಕಾರ್ತಿಕ್‌ ನಾಪತ್ತೆಯಾಗಿದ್ದಾನೆ. ವೀಡಿಯೋ ಇದ್ದ ಪೆನ್ ಡ್ರೈವ್ ವಕೀಲ ದೇವರಾಜೇ ಗೌಡಗೆ ಕೊಟ್ಟಿದ್ದು ನಾನೇ ಎಂದಿದ್ದ ಕಾರ್ತಿಕ್. ವೀಡಿಯೋಗಳ ಮೂಲ ವ್ಯಕ್ತಿ ನಾನೇ ಅಂದರೂ ಇನ್ನು ಆತನನ್ನು ವಿಚಾರಣೆಗೆ ಒಳಪಡಿಸಿಲ್ಲ. ವಿಚಾರಣೆಗೆ ಹಾಜರಾಗುವಂತೆ ಕಾರ್ತಿಕ್‌ಗೆ ನೊಟೀಸ್ ಅನ್ನೂ ಎಸ್ಐಟಿ ನೀಡಿರಲಿಲ್ಲ.

ಇದೀಗ ಕಾರ್ತಿಕ್ ಮಲೇಷ್ಯಾಗೆ ತೆರಳಿದ್ದಾನೆ; ಈತನ ನಾಪತ್ತೆ ಹಿಂದೆ ಪ್ರಭಾವಿಗಳ ಕೈವಾಡ ಇದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ಅವರು ʼರಾಮನಗರ ಬ್ರದರ್ಸ್‌ʼ ಕಡೆ ಕೈತೋರಿಸಿದ್ದಾರೆ. ಎರಡನೇ ಹಂತದ ಚುನಾವಣೆ ಮುಗಿಯುವವರೆಗೂ ಪ್ರಕರಣದ ಬಿಸಿಯನ್ನು ಚಾಲ್ತಿಯಲ್ಲಿಡಲು ಪ್ರಯತ್ನಿಸಲಾಗುತ್ತಿದೆ ಎನ್ನಲಾಗುತ್ತಿದೆ. ಎಸ್ಐಟಿ ಮುಂದೆ ಹಾಜರಾಗುವುದಾಗಿ ಹೇಳಿಕೆ ನೀಡಿ ಎಸ್ಕೇಪ್ ಆಗಿರುವ ಬಗ್ಗೆ ಹಲವು ಅನುಮಾನ ಮೂಡಿದ್ದು, ಕಾರ್ತಿಕ್‌ ಇವರೆಲ್ಲರ ದಾರಿ ತಪ್ಪಿಸಿದನೇ ಅಥವಾ ಇದರ ಹಿಂದಿನ ಮಾಸ್ಟರ್‌ ಮೈಂಡ್‌ಗಳು ಬೇರೆ ಯಾರಾದರೂ ಇದ್ದಾರಾ ಎಂದು ಅನುಮಾನ ಮೂಡಿದೆ.

ಪ್ರಜ್ವಲ್‌ ರೇವಣ್ಣಗೆ 1 ವಾರ ಸಮಯ ಕೊಡಲು ಸಾಧ್ಯವಿಲ್ಲ: ಪರಮೇಶ್ವರ್‌

ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಅವರು ತನಿಖೆಗೆ ಹಾಜರಾಗಬೇಕಿದ್ದು, ಹೆಚ್ಚಿನ ಸಮಯ ನೀಡಲು ಸಾಧ್ಯವಾಗುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ. “ಪ್ರಕರಣವನ್ನು SITಗೆ ವಹಿಸಿರುವುದರಿಂದ ಹೆಚ್ಚು ಚರ್ಚೆ ಮಾಡಲು ಹೋಗಲ್ಲ. ಗೃಹ ಸಚಿವನಾಗಿ ನನ್ನ ಹೇಳಿಕೆಗಳು ಅಧಿಕೃತವಾಗ್ತವೆ. ಹೀಗಾಗಿ ಹೆಚ್ಚು ಮಾತಾಡಲ್ಲ. SITಯವರು ನೋಟಿಸ್ ನೀಡಿದ್ದಾರೆ. ರೇವಣ್ಣ ಅವ್ರು ಇವತ್ತು ತನಿಖೆಗೆ ಹೋಗುತ್ತೇನೆ ಅಂತ ಹೇಳಿಕೊಂಡಿದ್ದಾರೆ” ಎಂದಿದ್ದಾರೆ.

“ಪ್ರಜ್ವಲ್ ಒಂದು ವಾರ ಸಮಯವನ್ನು ವಕೀಲರ ಮೂಲಕ‌ ಕೇಳಿದ್ದಾರೆ. ಹಾಗೆ ಸಮಯ ತೆಗದುಕೊಳ್ಳಲು ಬರೋದಿಲ್ಲ. 41ಎ ಸೆಕ್ಷನ್‌ನಲ್ಲಿ ಸಮಯವನ್ನು ಕೊಡಲು ಬರುವುದಿಲ್ಲ. SIT ಅಧಿಕಾರಿಗಳು ಕಾನೂನು ಸಲಹೆಗಾರರ ಜೊತೆ ಲೀಗಲ್ ಒಪಿನಿಯನ್ ತಗೊಂಡು ಮುಂದುವರಿಯುತ್ತಾರೆ. ಸಿಎಂ ಕೂಡ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಘಟನೆಯ ಬಗ್ಗೆ ವಿವರಿಸಿ, ಪ್ರಜ್ವಲ್ ಅವರ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್ ರದ್ದು ಮಾಡಿಸಿ, ಆದಷ್ಟು ಬೇಗ ಕರೆದುಕೊಂಡು ಬರಲು ಸಹಕರಿಸಬೇಕೆಂದು ಪತ್ರ ಬರೆದಿದ್ದಾರೆ” ಎಂದು ಪರಮೇಶ್ವರ್‌ ನುಡಿದರು.

ಇದನ್ನೂ ಓದಿ: Prajwal Revanna: ಜರ್ಮನಿಯಲ್ಲಿ ಪ್ರಜ್ವಲ್‌ ಅಜ್ಞಾತವಾಸ, ಮಲೇಷ್ಯಾದಲ್ಲಿ ಕಾರ್ತಿಕ್‌ ಹಾಲಿಡೇಸ್?

Continue Reading

ಪ್ರಮುಖ ಸುದ್ದಿ

PM Narendra Modi: ಉಗ್ರರನ್ನು ಅವರ ತಾಯ್ನೆಲದಲ್ಲೇ ಕೊಲ್ಲುತ್ತೇವೆ: ಗುಡುಗಿದ ಪಿಎಂ ನರೇಂದ್ರ ಮೋದಿ

PM Narendra Modi: ನಮ್ಮ ಮುಸ್ಲಿಂ ಸಹೋದರಿಯರು ವೋಟ್ ಬ್ಯಾಂಕ್ ರಾಜಕಾರಣದ ಅತಿ ದೊಡ್ಡ ಬಲಿಪಶುಗಳು. ಸುಪ್ರೀಂ ಕೋರ್ಟ್ ತೀರ್ಪಿನ ನಂತರವೂ ಕಾಂಗ್ರೆಸ್ ಮುಸ್ಲಿಂ ಸಹೋದರಿಯರಿಗೆ ಭದ್ರತೆಯನ್ನು ನೀಡಲಿಲ್ಲ. ತ್ರಿವಳಿ ತಲಾಖ್ ರದ್ದತಿಯು ಮಹಿಳೆಯರಿಗೆ ಮಾತ್ರವಲ್ಲದೆ ಕುಟುಂಬಗಳಿಗೆ ಭದ್ರತೆಯನ್ನು ಒದಗಿಸಿದೆ ಎಂದಿದ್ದಾರೆ ಮೋದಿ.

VISTARANEWS.COM


on

pm Narendra Modi
Koo

ಹೊಸದಿಲ್ಲಿ: ಕೇಂದ್ರದದಲ್ಲಿದ್ದ ಹಿಂದಿನ ಕಾಂಗ್ರೆಸ್‌ ಸರ್ಕಾರಗಳ ವಿರುದ್ಧ ಕಿಡಿಕಾರಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು, ನವ ಭಾರತವು (India) ಇತರ ದೇಶಗಳಿಗೆ ಭಯೋತ್ಪಾದಕರ (terrorists) ಬಗ್ಗೆ ದಾಖಲೆಗಳನ್ನು (dossiers)‌ ಕಳುಹಿಸುವುದಿಲ್ಲ. ಬದಲಾಗಿ ಅವರಿಗೆ “ಡೋಸ್” ನೀಡಿ ಅವರ ತವರು ನೆಲದಲ್ಲೇ (Home turf) ಅವರನ್ನು ಕೊಲ್ಲುತ್ತದೆ ಎಂದು ಹೇಳಿದ್ದಾರೆ.

“ಹತ್ತು ವರ್ಷಗಳ ಹಿಂದೆ ದೇಶವು ಭಯೋತ್ಪಾದನೆಯಿಂದ ಬಳಲುತ್ತಿತ್ತು. ಆದರೆ ಕಾಂಗ್ರೆಸ್, ಭಯೋತ್ಪಾದನೆಯ ಮೂಲವನ್ನು ತಿಳಿದಿದ್ದರೂ, ಪಾಕಿಸ್ತಾನಕ್ಕೆ ದಸ್ತಾವೇಜನ್ನು ಕಳುಹಿಸುತ್ತಿತ್ತು” ಎಂದು ಗುಜರಾತ್‌ನ ಸಬರ್ಕಾಂತ ಜಿಲ್ಲೆಯ ಹಿಮತ್‌ನಗರ ನಗರದಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ಹೇಳಿದರು. “ಇಂದು, ಭಾರತವು ಭಯೋತ್ಪಾದನೆಯ ನೇತಾರರಿಗೆ ದಾಖಲೆಗಳನ್ನು ಕಳುಹಿಸುವುದಿಲ್ಲ. ಆದರೆ ಅವರಿಗೆ ಡೋಸ್ ನೀಡಿ ಅವರ ಮನೆಯ ಒಳಗೇ ಕೊಲ್ಲುತ್ತದೆ” ಎಂದಿದ್ದಾರೆ.

ತಮ್ಮ ಭಾಷಣದಲ್ಲಿ ಪ್ರಧಾನಿ ಕಾಂಗ್ರೆಸ್ ಅನ್ನು ಗುರಿಯಾಗಿಟ್ಟುಕೊಂಡು, ಭಾರತದಲ್ಲಿ ಮುಸ್ಲಿಂ ಮಹಿಳೆಯರು ವೋಟ್ ಬ್ಯಾಂಕ್ ರಾಜಕಾರಣದ ದೊಡ್ಡ ಬಲಿಪಶುಗಳು ಎಂದು ಹೇಳಿದರು. “ನಮ್ಮ ಮುಸ್ಲಿಂ ಸಹೋದರಿಯರು ವೋಟ್ ಬ್ಯಾಂಕ್ ರಾಜಕಾರಣದ ಅತಿ ದೊಡ್ಡ ಬಲಿಪಶುಗಳು. ಸುಪ್ರೀಂ ಕೋರ್ಟ್ ತೀರ್ಪಿನ ನಂತರವೂ ಕಾಂಗ್ರೆಸ್ ಮುಸ್ಲಿಂ ಸಹೋದರಿಯರಿಗೆ ಭದ್ರತೆಯನ್ನು ನೀಡಲಿಲ್ಲ. ತ್ರಿವಳಿ ತಲಾಖ್ ರದ್ದತಿಯು ಮಹಿಳೆಯರಿಗೆ ಮಾತ್ರವಲ್ಲದೆ ಕುಟುಂಬಗಳಿಗೆ ಭದ್ರತೆಯನ್ನು ಒದಗಿಸಿದೆ. ಅವರು (ಕಾಂಗ್ರೆಸ್) ವೋಟ್ ಬ್ಯಾಂಕ್‌ಗಾಗಿ ತ್ರಿವಳಿ ತಲಾಖ್ ಪದ್ಧತಿಯನ್ನು ನಿಲ್ಲಿಸಲಿಲ್ಲ…” ಎಂದು ಪ್ರಧಾನಿ ಪ್ರತಿಪಾದಿಸಿದರು.

“ನಾನು ಮತ ಬ್ಯಾಂಕ್ ಬಗ್ಗೆ ಚಿಂತಿಸುವುದಿಲ್ಲ. ನಾನು ಚುನಾವಣೆಯಲ್ಲಿ ಗೆಲ್ಲಲು ಕೆಲಸ ಮಾಡುವುದಿಲ್ಲ. ನಾವು ಮುಸ್ಲಿಂ ಮಹಿಳೆಯರ ಜೀವನವನ್ನು ಸುಲಭಗೊಳಿಸಲು ಬಯಸಿದ್ದು, ತ್ರಿವಳಿ ತಲಾಖ್ ಅನ್ನು ಕಾನೂನುಬಾಹಿರಗೊಳಿಸಿದ್ದೇವೆ…” ಎಂದು ಅವರು ಹೇಳಿದರು.

ಪ್ರಧಾನಿ ಮೋದಿ ಪುನರಾಯ್ಕೆಯಾದರೆ ದೇಶದಲ್ಲಿ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಕಾಂಗ್ರೆಸ್ ನಾಯಕರು ಎಚ್ಚರಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ (Rahul Gandhi) ವಿರುದ್ಧ ವ್ಯಂಗ್ಯವಾಡಿದರು. “ಕಾಂಗ್ರೆಸ್‌ನ ʻಶೆಹಜಾದಾʼ ಮೋದಿ ಮೂರನೇ ಬಾರಿಗೆ ಪ್ರಧಾನಿಯಾದರೆ ದೇಶದಲ್ಲಿ ಬೆಂಕಿ ಬೀಳುತ್ತದೆ ಎಂದು ಹೇಳುತ್ತಿದ್ದಾರೆ. ವಾಸ್ತವ ಏನೆಂದರೆ, ಕಾಂಗ್ರೆಸ್‌ನ ಕನಸುಗಳು ಸುಟ್ಟು ಬೂದಿಯಾಗಿವೆ…” ಎಂದು ಮೋದಿ ಹೇಳಿದರು.

“ಕಾಂಗ್ರೆಸ್ ನಾಯಕರು ಈಗ ಸಂವಿಧಾನವು ಅಪಾಯದಲ್ಲಿದೆ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲಾಗುವುದು ಎಂದು ಹೇಳುತ್ತಿದ್ದಾರೆ. ವಾಸ್ತವದಲ್ಲಿ, ಕಾಂಗ್ರೆಸ್ ತನ್ನ 70 ವರ್ಷಗಳ ಆಡಳಿತದಲ್ಲಿ ಇಡೀ ದೇಶದಲ್ಲಿ ಸಂವಿಧಾನವನ್ನು ಜಾರಿಗೆ ತರಲು ಸಾಧ್ಯವಾಗಲಿಲ್ಲ. ನಮ್ಮ ಸಂವಿಧಾನವನ್ನು ಕಾಶ್ಮೀರದಲ್ಲಿ ಜಾರಿಗೊಳಿಸಿರಲಿಲ್ಲ. ನಾನು ಸಂವಿಧಾನಕ್ಕೆ ಬದ್ಧನಾಗಿರುವ ಕಾರಣ ಅದನ್ನು ಮಾಡಿದೆ” ಎಂದು ಅವರು ಒತ್ತಿ ಹೇಳಿದರು.

ಇದನ್ನೂ ಓದಿ: Shyam Rangeela: ಮೋದಿಯನ್ನು ಮಿಮಿಕ್ರಿ ಮಾಡಿ ಖ್ಯಾತಿಯಾದ ಕಲಾವಿದ ಈಗ ಪ್ರಧಾನಿ ವಿರುದ್ಧವೇ ಕಣಕ್ಕೆ!

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಕ್ಷಿಪಣಿ ಬಲದಿಂದ ನಮ್ಮ ನೌಕಾಪಡೆ ‘ಸ್ಮಾರ್ಟ್‌’ ಜತೆಗೆ ಇನ್ನಷ್ಟು ಬಲಿಷ್ಠ

ದೇಶದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಸ್ಮಾರ್ಟ್‌ ಕ್ಷಿಪಣಿಯ ಪರೀಕ್ಷೆಯನ್ನು ಯಶಸ್ವಿಯಾಗಿ ಕೈಗೊಳ್ಳಲಾಗಿದೆ. ಜಲಾಂತರ್ಗಾಮಿ ನೌಕೆಗಳನ್ನು ನಿಗ್ರಹಿಸುವ, ವೈರಿಗಳ ಮೇಲೆ ಹದ್ದಿನ ಕಣ್ಣಿಡುವ ಇದು ಗೇಮ್‌ ಚೇಂಜರ್‌ ಎಂದೇ ಹೇಳಲಾಗುತ್ತಿದೆ.

VISTARANEWS.COM


on

SMART Missile
Koo

ಭಾರತದ ರಕ್ಷಣಾ ಕ್ಷೇತ್ರಕ್ಕೆ ಬಲ ನೀಡುವ, ಜಲಾಂತರ್ಗಾಮಿ ನೌಕೆಗಳನ್ನು ನಿಗ್ರಹಿಸುವ (Anti-Submarine Missile System) ಸಾಮರ್ಥ್ಯದ ಸೂಪರ್‌ಸಾನಿಕ್‌ ಮಿಸೈಲ್‌ ಅಸಿಸ್ಟೆಡ್‌ ರಿಲೀಸ್‌ ಆಫ್‌ ಟಾರ್ಪೆಡೊ (SMART Missile) ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿದೆ. ಇದು ಭಾರತದ ನೌಕಾಪಡೆಯ ಬಲವನ್ನು ಇನ್ನಷ್ಟು ಹೆಚ್ಚಿಸಲಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (DRDO) ದೇಶೀಯವಾಗಿ ಸ್ಮಾರ್ಟ್‌ ಕ್ಷಿಪಣಿಯನ್ನು ಅಭಿವೃದ್ಧಿಪಡಿಸಿದೆ. ಇದರಿಂದ ಸಾಗರ ಪ್ರದೇಶದಲ್ಲಿ ನೌಕಾಪಡೆಯು ವೈರಿಗಳ ಮೇಲೆ ಇನ್ನಷ್ಟು ನಿಗಾ ಇರಿಸಲು, ಕ್ಷಿಪ್ರವಾಗಿ ಕಾರ್ಯಾಚರಣೆ ಕೈಗೊಳ್ಳಲು, ಪ್ರತಿದಾಳಿ ನಡೆಸಲು ನೆರವಾಗಲಿದೆ. ಇದು ಎರಡನೇ ಪರೀಕ್ಷಾರ್ಥ ಉಡಾವಣೆ. ಇದು ಕ್ಯಾನಿಸ್ಟರ್‌ ಆಧಾರಿತ, 643 ಕಿ.ಮೀ ದೂರದ ಗುರಿಗಳನ್ನು ಹೊಡೆದುರುಳಿಸಬಲ್ಲ ಸಾಮರ್ಥ್ಯ ಹೊಂದಿದ್ದು, ಸಾಗರ ಪ್ರದೇಶದಲ್ಲಿ ಯಾವುದೇ ತುರ್ತು ಪರಿಸ್ಥಿತಿ ಎದುರಾದಾಗ ಕ್ಷಿಪ್ರ ಕಾರ್ಯಾಚರಣೆ ನಡೆಸಲಿದೆ. ಆಗಸದಲ್ಲಿಯೇ ಶತ್ರುನೌಕೆಗಳನ್ನು ಡಿಟೆಕ್ಟ್‌ ಮಾಡುವ ತಂತ್ರಜ್ಞಾನ ಹೊಂದಿದೆ.

ಭಾರತದ ವಾಯುಪಡೆ, ನೌಕಾಪಡೆ ಹಾಗೂ ಭೂಸೇನೆಗಳು ಮೂರೂ ಕಳೆದ ಒಂದು ದಶಕದಲ್ಲಿ ಸಾಕಷ್ಟು ಹೊಸ ಶಸ್ತ್ರಾಸ್ತ್ರಗಳನ್ನು ಪಡೆದಿವೆ. ಭಾರತದ ನೌಕಾಪಡೆ ಈಗ ಸಾಕಷ್ಟು ಯುದ್ಧನೌಕೆಗಳು, ಐಎನ್‌ಎಸ್‌ ವಿಕ್ರಮಾದಿತ್ಯದಂಥ ಜೆಟ್‌ಫೈಟರ್‌ ಕ್ಯಾರಿಯರ್‌ಗಳು, ಅರಿಹಂತ್‌ನಂತ ಸಬ್‌ಮರೀನ್‌ಗಳನ್ನು ಹೊಂದಿದೆ. ಪ್ರಸ್ತುತ ಇದು ಜಗತ್ತಿನ 7ನೇ ಅತಿ ಪ್ರಬಲ ನೌಕಾಪಡೆಯೆನಿಸಿದೆ. ಈ ಪ್ರಾಬಲ್ಯ ಭಾರತವನ್ನು ಸುತ್ತುವರಿದ ಸಾಗರ ಪ್ರದೇಶವನ್ನು ರಕ್ಷಿಸುವುದಷ್ಟೇ ಅಲ್ಲ, ಇಲ್ಲ ಓಡಾಡುವ ಮಿತ್ರದೇಶಗಳ ನೌಕೆಗಳ ರಕ್ಷಣೆಗೂ ನೆರವಾಗಿದೆ ಎನ್ನುವುದು ನಮ್ಮ ಹೆಮ್ಮೆ. ಇತ್ತೀಚೆಗೆ ನಮ್ಮ ನೌಕಾದಳ ಬಲ್ಗೇರಿಯಾ ಹಾಗೂ ಇರಾನ್‌ನ ಹಡಗುಗಳನ್ನು ಕಡಲ್ಗಳ್ಳರಿಂದ ರಕ್ಷಿಸಿದುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಇತ್ತೀಚೆಗೆ ಬಂಗಾಳ ಕೊಲ್ಲಿಯಲ್ಲಿ ನಮ್ಮ ಸ್ವಾಮ್ಯವನ್ನು ಇನ್ನಷ್ಟು ಗಟ್ಟಿಗೊಳಿಸುವ ನೆಲೆಯಿಂದ ಲಕ್ಷದ್ವೀಪದಲ್ಲಿ ನೌಕಾಪಡೆಯು ʼಐಎನ್‌ಎಸ್‌ಜಟಾಯುʼ ಹೆಸರಿನ ಮತ್ತೊಂದು ನೆಲೆಯನ್ನು ನಿರ್ಮಿಸುವ ವ್ಯೂಹಾತ್ಮಕ ಹಾಗೂ ರಕ್ಷಣಾತ್ಮಕ ಹೆಜ್ಜೆ ಇರಿಸಿದೆ. ಈಗಾಗಲೇ ಅಂಡಮಾನ್‌ನಲ್ಲಿ ಐಎನ್‌ಎಸ್‌ ಬಾಜ್‌ ಎಂಬ ನೌಕಾನೆಲೆ ಇದೆ. ಲಕ್ಷದ್ವೀಪದ ಕವರಟ್ಟಿಯಲ್ಲೇ ದ್ವೀಪ್ರಕಾಶಕ ಎಂಬ ನೌಕಾನೆಲೆ ಇದೆ. ಪಶ್ಚಿಮ ಅರಬ್ಬೀ ಸಮುದ್ರದಲ್ಲಿ ವೈರಿಗಳ ಮೇಲೆ ಹೆಚ್ಚಿನ ನಿಗಾ ಇರಿಸುವುದು, ಸಾಗರ ಪ್ರದೇಶದಲ್ಲಿ ಭಯೋತ್ಪಾದನೆ- ಅಪರಾಧ ತಡೆಗಟ್ಟುವುದು, ಸಮುದ್ರ ಪ್ರದೇಶದಲ್ಲಿ ಮಾದಕವಸ್ತು ಅಕ್ರಮ ಸಾಗಣೆ ನಿಯಂತ್ರಣ ಸಾಧ್ಯ. ಹೊಸ ಟಾರ್ಪೆಡೊ (SMART Missile) ಕ್ಷಿಪಣಿ ಕೂಡ ಇದಕ್ಕೆ ಪೂರಕ.

ಇತ್ತೀಚೆಗೆ ನಮ್ಮ ಕ್ಷಿಪಣಿ ಬಲ ಇನ್ನಷ್ಟು ಮೈದುಂಬಿಕೊಳ್ಳುತ್ತಿದೆ. ದೇಶೀಯವಾಗಿ ಅಭಿವೃದ್ಧಿಪಡಿಸಿದ, ಹಲವು ಪರಮಾಣು ಬಾಂಬ್‌ಗಳನ್ನು (Nuclear warhead) ಏಕಕಾಲಕ್ಕೆ ಕೊಂಡೊಯ್ಯಬಲ್ಲ ಸಾಮರ್ಥ್ಯದ ಅಗ್ನಿ-ವಿ (Agni-V) ಬಹು ಸಿಡಿತಲೆ ಕ್ಷಿಪಣಿಯ ಇತ್ತೀಚಿನ ಹಾರಾಟ ಪರೀಕ್ಷೆ ಇಲ್ಲಿ ಉಲ್ಲೇಖನೀಯ. ಇದೊಂದು ಬಹು ಸ್ವತಂತ್ರವಾಗಿ ಕಾರ್ಯಾಚರಿಸಬಲ್ಲ, ರೀ-ಎಂಟ್ರಿ ತಂತ್ರಜ್ಞಾನ ಹೊಂದಿರುವ ಕ್ಷಿಪಣಿ. ಇದರ ಸಿಡಿತಲೆಯು ಬಾಹ್ಯಾಕಾಶದಲ್ಲಿ ಬೇರ್ಪಟ್ಟು, ಬೆಂಕಿಯ ಚೆಂಡುಗಳು ವಾತಾವರಣವನ್ನು ಮರು ಪ್ರವೇಶಿಸುತ್ತವೆ. ಪ್ರತಿಯೊಂದು ಸಿಡಿತಲೆಯೂ ವಿಭಿನ್ನ ವೇಗದಲ್ಲಿ ಕೆಳಗಿಳಿದು ನೆಲಕ್ಕೆ ಅಪ್ಪಳಿಸುತ್ತದೆ. MIRVಯ ಮುಖ್ಯ ಸಾಮರ್ಥ್ಯವೇ ಮರು-ಪ್ರವೇಶ. ಪ್ರತಿ ಸಿಡಿತಲೆಯೂ ವಿಭಿನ್ನ ವೇಗಗಳು ಮತ್ತು ಪ್ರತ್ಯೇಕ ಗುರಿಗಳನ್ನು ಹೊಂದಿರುವುದರಿಂದ, ಕ್ಷಿಪಣಿ ವಿರೋಧಿ ಗುರಾಣಿಗಳಿಂದ ಅಗ್ನಿ-V ಅನ್ನು ಪ್ರತಿಬಂಧಿಸಲು ಸಾಧ್ಯವಿಲ್ಲ. ಇದನ್ನು ʼಮಿಷನ್‌ ದಿವ್ಯಾಸ್ತ್ರʼ ಎಂದು ಕರೆಯಲಾಗಿದೆ.

ಏಷ್ಯಾ ಉಪಖಂಡದಲ್ಲಿ ಆ ಮೂಲಕ ಶಸ್ತ್ರಾಸ್ತ್ರ ಪೈಪೋಟಿ ಸೃಷ್ಟಿಸುವುದು ನಮ್ಮ ಉದ್ದೇಶವಲ್ಲ. ಜಗತ್ತಿನಲ್ಲಿಯೇ ಅತಿ ದೊಡ್ಡದಾದ ಪ್ರಜಾಪ್ರಭುತ್ವ ದೇಶದ ಸಾರ್ವಭೌಮತೆಯನ್ನು ಕಾಪಾಡಿಕೊಳ್ಳುವುದು ನಮ್ಮ ಉದ್ದೇಶ. ನಾವು ಬಲಿಷ್ಟರಾದಾಗ ನಮ್‌ ಮಸುತ್ತಮುತ್ತಲಿನವರೂ ನಮ್ಮನ್ನು ಗೌರವದಿಂದ ಕಾಣುತ್ತಾರೆ. ಅಮೆರಿಕದಂಥ ಬಲಿಷ್ಠ ರಾಷ್ಟ್ರಗಳೂ ʼಭಾರತ ನಮ್ಮ ಮಿತ್ರʼ ಎಂದು ಹಾಡಿ ಹೊಗಳುತ್ತವೆ. ಇಸ್ರೇಲ್‌, ಆಸ್ಟ್ರೇಲಿಯದಂಥ ದೇಶಗಳು ನಮ್ಮೊಂದಿಗೆ ರಕ್ಷಣಾ ಕೊಡುಕೊಳ್ಳುವಿಕೆಗಳನ್ನು ನಡೆಸುತ್ತವೆ. ಫ್ರಾನ್ಸ್‌ನಂಥ ದೇಶಗಳೇ ರಫೇಲ್‌ನಂಥ ಅದ್ಭುತ ಯುದ್ಧಸಾಮರ್ಥ್ಯವನ್ನು ಹೊಂದಿರುವ ಫೈಟರ್‌ ಜೆಟ್‌ಗಳನ್ನು ನಮ್ಮೊಂದಿಗೆ ಹಂಚಿಕೊಳ್ಳುತ್ತವೆ. ʼಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಸಮಿತಿಯಲ್ಲಿ ಶಾಶ್ವತ ಸ್ಥಾನಮಾನ ನೀಡಬೇಕುʼ ಎಂದು ಬ್ರಿಟನ್‌ ಪ್ರತಿಪಾದಿಸುತ್ತದೆ. ಇದೆಲ್ಲವೂ ಸ್ವಸಾಮರ್ಥ್ಯ ಇದ್ದಾಗ ಮಾತ್ರ ಸಾಧ್ಯ. ಆ ನಿಟ್ಟಿನಲ್ಲಿ ಭಾರತ ನಡೆ ಬಲಿಷ್ಠತೆಯತ್ತ ಸಹಜವಾಗಿ ಮುಂದುವರಿದಿದೆ.

ಇದನ್ನೂ ಓದಿ: SMART Missile: ನೌಕೆಗಳನ್ನು ಧ್ವಂಸ ಮಾಡುವ ಸ್ಮಾರ್ಟ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ; ರಕ್ಷಣಾ ಕ್ಷೇತ್ರಕ್ಕೆ ಆನೆ ಬಲ

Continue Reading
Advertisement
Congress Candidate List
Lok Sabha Election 20243 mins ago

Congress Candidate List: ಅಮೇಥಿ, ರಾಯ್‌ ಬರೇಲಿಯಿಂದ ರಾಹುಲ್‌, ಪ್ರಿಯಾಂಕಾ ಸ್ಪರ್ಧಿಸುತ್ತಾರಾ? ಕುತೂಹಲಕ್ಕೆ ಇಂದು ತೆರೆ

Asaduddin Owaisi
ದೇಶ6 mins ago

Asaduddin Owaisi: ಅಸಾದುದ್ದೀನ್‌ ಓವೈಸಿಯ ಭರ್ಜರಿ ಬೈಕ್‌ ರೈಡ್‌;ವಿಡಿಯೋ ವೈರಲ್‌

IPL 2024 Points Table
ಕ್ರೀಡೆ17 mins ago

IPL 2024 Points Table: ಚೆನ್ನೈ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಪ್ರಗತಿ ಸಾಧಿಸಿದ ಪಂಜಾಬ್​

karnataka SSLC result 2024
ಪ್ರಮುಖ ಸುದ್ದಿ22 mins ago

SSLC Result 2024: ಕರ್ನಾಟಕದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಣೆಗೆ ದಿನ ಫಿಕ್ಸ್

Karthik Jayaram The first look of The Veer motion Poster
ಸ್ಯಾಂಡಲ್ ವುಡ್28 mins ago

Karthik Jayaram: ʻಅಶ್ವಿನಿ ನಕ್ಷತ್ರʼ ಖ್ಯಾತಿಯ ʻಜೆಕೆʼ ಹುಟ್ಟುಹಬ್ಬಕ್ಕೆ ಬಿಡುಗಡೆ ಆಯ್ತು ‘ದಿ ವೀರ್​’ ಫಸ್ಟ್​ ಲುಕ್​ ಪೋಸ್ಟರ್​!

prajawal revanna case driver karthik
ಪ್ರಮುಖ ಸುದ್ದಿ49 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ವಿಡಿಯೋ ಬಿಟ್ಟ ಕಾರ್ತಿಕ್‌ನನ್ನು ಮಲೇಷ್ಯಾಕ್ಕೆ ಕಳಿಸಿದವರು ಯಾರು?

Vande Bharat Metro
ದೇಶ1 hour ago

Vande Bharat Metro: ಮೊದಲ ವಂದೇ ಭಾರತ್‌ ಮೆಟ್ರೋ ಸಂಚಾರಕ್ಕೆ ಸಿದ್ಧ; ಇಲ್ಲಿದೆ ವಿಡಿಯೊ

Hindu Marriage
ದೇಶ1 hour ago

Hindu Marriage: ವಿಧಿಬದ್ಧವಾಗಿ ನಡೆಯದ ಮದುವೆಗೆ ಮಾನ್ಯತೆ ಇಲ್ಲ: ಸುಪ್ರೀಂಕೋರ್ಟ್‌

pm Narendra Modi
ಪ್ರಮುಖ ಸುದ್ದಿ2 hours ago

PM Narendra Modi: ಉಗ್ರರನ್ನು ಅವರ ತಾಯ್ನೆಲದಲ್ಲೇ ಕೊಲ್ಲುತ್ತೇವೆ: ಗುಡುಗಿದ ಪಿಎಂ ನರೇಂದ್ರ ಮೋದಿ

karnataka Weather Forecast
ಮಳೆ2 hours ago

Karnataka Weather : ಇಂದು ಮೂರು ಹೊತ್ತು ಒಂದೊಂದು ವಾತಾವರಣ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌