Maldives Election: ಮಾಲ್ಡೀವ್ಸ್‌ ಚುನಾವಣೆಯಲ್ಲಿ ಭಾರತ ವಿರೋಧಿ ಮುಯಿಜುಗೆ ಬಹುಮತ, ಮತ್ತೆ ಅಧಿಕಾರಕ್ಕೆ - Vistara News

ಪ್ರಮುಖ ಸುದ್ದಿ

Maldives Election: ಮಾಲ್ಡೀವ್ಸ್‌ ಚುನಾವಣೆಯಲ್ಲಿ ಭಾರತ ವಿರೋಧಿ ಮುಯಿಜುಗೆ ಬಹುಮತ, ಮತ್ತೆ ಅಧಿಕಾರಕ್ಕೆ

Maldives Election: ಚೀನಾ ಪರವಾದ ಹೊಸ ಕಾನೂನುಗಳನ್ನು ಮಾಡಲು ಹಾಲಿ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಪಕ್ಷಕ್ಕೆ ಸಂಸತ್ತಿನ ಚುನಾವಣೆಯಲ್ಲಿ ಗೆಲ್ಲುವುದು ಅನಿವಾರ್ಯವಾಗಿತ್ತು. ಆಡಳಿತ ಪಕ್ಷವಾಗಿರುವ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ ಮಾಲ್ಡೀವ್ಸ್‌ನ 93 ಸ್ಥಾನಗಳಲ್ಲಿ 86ರಲ್ಲಿ ಸ್ಪರ್ಧಿಸಿತ್ತು.

VISTARANEWS.COM


on

Mohamed Muizzu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಾಲೆ: ಭಾರತ ವಿರೋಧಿ ಮನಸ್ಥಿತಿಯ ಅಧ್ಯಕ್ಷ ಮೊಹಮ್ಮದ್‌ ಮುಯಿಜು (Mohamed Muizzu) ಮಾಲ್ಡೀವ್ಸ್‌ನಲ್ಲಿ ನಡೆದ ಚುನಾವಣೆಯಲ್ಲಿ (Maldives Election) ಭಾರಿ ಬಹುಮತದಲ್ಲಿ ಆರಿಸಿ ಬಂದಿದ್ದಾರೆ. ಮಾಲ್ಡೀವ್ಸ್‌ನ ಸಂಸತ್ತಿಗೆ (ಮಜ್ಲಿಸ್) ನಡೆದ ಚುನಾವಣೆಯಲ್ಲಿ ಚೀನಾ ಪರ (Pro China) ಆಡಳಿತ ನೀಡುತ್ತಿರುವ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಪಕ್ಷ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ (ಪಿಎನ್‌ಸಿ) ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ.

ಆಡಳಿತ ಪಕ್ಷವಾಗಿರುವ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ ಮಾಲ್ಡೀವ್ಸ್‌ನ 93 ಸ್ಥಾನಗಳಲ್ಲಿ 86ರಲ್ಲಿ ಸ್ಪರ್ಧಿಸಿತ್ತು. ಮಾಲ್ಡೀವ್ಸ್ ಸಂಸತ್ತಿನಲ್ಲಿ PNC ಬಹುಮತವನ್ನು ಪಡೆದುಕೊಂಡಿದೆ. ಇತ್ತೀಚಿನ ಮಾಹಿತಿಯ ಪ್ರಕಾರ 86 ಸ್ಥಾನಗಳ ಪೈಕಿ ಪಿಎನ್‌ಸಿ 66 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇನ್ನು ಪ್ರಮುಖ ವಿರೋಧ ಪಕ್ಷವಾದ ಮಾಲ್ಡೀವಿಯನ್ ಡೆಮಾಕ್ರಟಿಕ್ ಪಾರ್ಟಿ (MDP) ಕೇವಲ 12 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಸ್ವತಂತ್ರ ಅಭ್ಯರ್ಥಿಗಳು 8 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದ ರೆ, ಮಾಲ್ಡೀವ್ಸ್ ಡೆವಲಪ್ಮೆಂಟ್ ಅಲಯನ್ಸ್ ಎರಡು ಸ್ಥಾನಗಳಲ್ಲಿ ಗೆಲುವು ಪಡೆದಿದೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ವಿಪಕ್ಷ ನಾಯಕ ಮೊಹಮ್ಮದ್‌ ಸೋಲಿಹ್ ಅವರನ್ನು ಸೋಲಿಸುವ ಮೂಲಕ ಮುಯಿಝು ಅಧ್ಯಕ್ಷರಾದರು. ಸೊಲಿಹ್ ಅವರ ಪಕ್ಷ ಮಾಲ್ಡೀವಿಯನ್ ಡೆಮಾಕ್ರಟಿಕ್ ಪಕ್ಷವು ಪ್ರಸ್ತುತ ಸಂಸತ್ತಿನಲ್ಲಿ ಬಹುಮತವನ್ನು ಹೊಂದಿತ್ತು. ಇದು ಮುಯಿಜುಗೆ ಹೊಸ ವಿಧೇಯಕಗಳನ್ನು ತರಲು ಅಡ್ಡಿಯುಂಟುಮಾಡಿತ್ತು. ಚೀನಾ ಪರವಾದ ಹೊಸ ಕಾನೂನುಗಳನ್ನು ಮಾಡಲು ಹಾಲಿ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಪಕ್ಷಕ್ಕೆ ಸಂಸತ್ತಿನ ಚುನಾವಣೆಯಲ್ಲಿ ಗೆಲ್ಲುವುದು ಅನಿವಾರ್ಯವಾಗಿತ್ತು.

ಸಂಸತ್ತಿನ 93 ಸ್ಥಾನಗಳಿಗೆ ಆರು ರಾಜಕೀಯ ಪಕ್ಷಗಳು ಮತ್ತು ಸ್ವತಂತ್ರ ಗುಂಪುಗಳು 368 ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಜನಸಂಖ್ಯೆಯ ಹೆಚ್ಚಳದ ನಂತರ, ಹಿಂದಿನ ಸಂಸತ್ತಿಗಿಂತ ಆರು ಹೆಚ್ಚು ಸ್ಥಾನಗಳಿವೆ. ಚುನಾವಣೆಯಲ್ಲಿ ಸುಮಾರು 2,84,000 ಜನರು ಮತ ಚಲಾಯಿಸಿದ್ದಾರೆ. ಮುಯಿಜುವಿನ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ ಮತ್ತು ಪ್ರಮುಖ ವಿರೋಧ ಪಕ್ಷವಾದ ಮಾಲ್ಡೀವಿಯನ್ ಡೆಮಾಕ್ರಟಿಕ್ ಪಾರ್ಟಿ ಮತ್ತು ಸ್ವತಂತ್ರರು ಕಣದಲ್ಲಿದ್ದಾರೆ.

ಭೂಮಧ್ಯರೇಖೆಯಾದ್ಯಂತ ಸುಮಾರು 800 ಕಿಲೋಮೀಟರ್ (500 ಮೈಲುಗಳು) ಹರಡಿರುವ ಸುಮಾರು 1,192 ಸಣ್ಣ ಹವಳ ದ್ವೀಪಗಳ ತಗ್ಗು ರಾಷ್ಟ್ರವಾದ ಮಾಲ್ಡೀವ್ಸ್, ಜಾಗತಿಕ ತಾಪಮಾನ ಏರಿಕೆಯಿಂದ ಉಂಟಾಗುವ ಸಮುದ್ರ ಮಟ್ಟ ಏರಿಕೆಗೆ ಹೆಚ್ಚು ಅಪಾಯಕ್ಕೊಳಗಾಗುವ ದೇಶಗಳಲ್ಲಿ ಒಂದಾಗಿದೆ. ಮಾಜಿ ನಿರ್ಮಾಣ ಸಚಿವರಾದ ಮುಯಿಜು ಅವರು ಮಹತ್ವಾಕಾಂಕ್ಷೆಯ ಭೂ ಸುಧಾರಣೆ ಮತ್ತು ದ್ವೀಪಗಳನ್ನು ಎತ್ತರಕ್ಕೆ ನಿರ್ಮಿಸುವ ಮೂಲಕ ಅಲೆಗಳನ್ನು ಸೋಲಿಸುವುದಾಗಿ ಭರವಸೆ ನೀಡಿದ್ದಾರೆ. ಪರಿಸರವಾದಿಗಳು ಈ ನೀತಿಯಲ್ಲಿ ಪ್ರವಾಹದ ಹೊಸ ಅಪಾಯಗಳನ್ನು ಕಂಡಿದ್ದಾರೆ.

ಮಾಲ್ಡೀವ್ಸ್ ತನ್ನ ಪ್ರಾಚೀನ ಧವಳ ಕಡಲತೀರಗಳು ಮತ್ತು ರೆಸಾರ್ಟ್‌ಗಳಿಂದ ಉನ್ನತ ಮಟ್ಟದ ಐಷಾರಾಮಿ ಹಾಲಿಡೇ ಸ್ಪಾಟ್‌ ಆಗಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಇದು ಹಿಂದೂ ಮಹಾಸಾಗರದಲ್ಲಿ ಭೂ-ರಾಜಕೀಯ ಹಾಟ್‌ಸ್ಪಾಟ್. ಇಲ್ಲಿ ಜಾಗತಿಕ ಪೂರ್ವ-ಪಶ್ಚಿಮ ಹಡಗು ಮಾರ್ಗಗಳು ದ್ವೀಪಸಮೂಹವನ್ನು ಹಾದುಹೋಗುತ್ತವೆ. ಕಳೆದ ಸೆಪ್ಟೆಂಬರ್‌ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಚೀನಾ ಪರ ಮಾಜಿ ಅಧ್ಯಕ್ಷ ಅಬ್ದುಲ್ಲಾ ಯಮೀನ್‌ಗೆ ಪ್ರಾಕ್ಸಿಯಾಗಿ ಮುಯಿಜು ಗೆದ್ದರು. ಕಳೆದ ವಾರ ನ್ಯಾಯಾಲಯ ಯಮೀನ್‌ಗೆ ಭ್ರಷ್ಟಾಚಾರಕ್ಕಾಗಿ ನೀಡಿದ್ದ 11 ವರ್ಷಗಳ ಜೈಲು ಶಿಕ್ಷೆಯಿಂದ ರಿಲೀಫ್‌ ನೀಡಿತ್ತು.

ಮಾಲ್ಡೀವ್ಸ್‌ನ ವಿಶಾಲವಾದ ಸಮುದ್ರ ಗಡಿಗಳಲ್ಲಿ ಗಸ್ತು ತಿರುಗಲು ನವದೆಹಲಿಯಿಂದ ಉಡುಗೊರೆಯಾಗಿ ನೀಡಿದ ವಿಮಾನದಳ ಹಾಗೂ 89 ಭಾರತೀಯ ಸೈನಿಕರ ಗ್ಯಾರಿಸನ್ ಅನ್ನು ವಾಪಸ್‌ ಕಳಿಸಲು ಮುಯಿಜು ಆಡಳಿತ ಡೆಡ್‌ಲೈನ್‌ ನೀಡಿದೆ.

ಇದನ್ನೂ ಓದಿ: Maldives Election: ಮಾಲ್ಡೀವ್ಸ್‌ನಲ್ಲಿ ಇಂದು ಚುನಾವಣೆ; ಭಾರತ ವಿರೋಧಿ ಮುಯಿಜುಗೆ ಸೋಲು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಪಾಕಿಸ್ತಾನ ಮೊದಲು ತನ್ನ ತಟ್ಟೆಯಲ್ಲಿ ಬಿದ್ದಿರುವ ನೊಣ ತೆಗೆಯಲಿ, ಪಾಠ ಕಲಿಯಲಿ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗಿಯಾಗಿದ್ದ ಪಾಕಿಸ್ತಾನದ ಪ್ರತಿನಿಧಿ ಮನೀರ್‌ ಅಕ್ರಮ್‌, ಕಾಶ್ಮೀರ ವಿವಾದ, ಪೌರತ್ವ ತಿದ್ದುಪಡಿ ಕಾಯ್ದೆ (CAA) ಮತ್ತು ಅಯೋಧ್ಯೆಯ ರಾಮ ಮಂದಿರ ಸೇರಿದಂತೆ ಅನೇಕ ವಿಚಾರಗಳನ್ನು ಪ್ರಸ್ತಾಪಿಸಿ ಭಾರತದ ವಿರುದ್ಧ ಗುರುತರ ಆರೋಪಗಳನ್ನು ಮಾಡಿದ್ದರು. ಆದರೆ, ಇದಕ್ಕೆ ಭಾರತವು ಸರಿಯಾಗಿಯೇ ತಿರುಗೇಟು ನೀಡಿದೆ. ಪಾಕಿಸ್ತಾನವು ಪ್ರತಿ ಬಾರಿ ಭಾರತದ ಕಡೆ ಬೆರಳು ತೋರಿಸುವ ಬದಲು ತನ್ನ ದೇಶದ ಸಮಸ್ಯೆಗಳನ್ನು ನಿವಾರಿಸಿದರೆ, ಅಲ್ಲಿನ ಜನ ನೆಮ್ಮದಿಯಿಂದ ನಿದ್ದೆ ಮಾಡಬಹುದು.

VISTARANEWS.COM


on

Pakistan PM
Koo

ಭಾರತದ ಆಂತರಿಕ ವಿಚಾರಗಳ ಬಗ್ಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ತಗಾದೆ ತೆಗೆದ ಪಾಕಿಸ್ತಾನಕ್ಕೆ ಭಾರತ ಮತ್ತೆ ತಕ್ಕ ಮಾರುತ್ತರ ನೀಡಿದೆ. ಪಾಕಿಸ್ತಾನ ಎಲ್ಲ ಆಯಾಮಗಳಲ್ಲಿ ಅತ್ಯಂತ ಸಂಶಯಾತ್ಮಕ ಚಟುವಟಿಕೆ, ದುಷ್ಕೃತ್ಯಗಳ ಟ್ರ್ಯಾಕ್‌ ರೆಕಾರ್ಡ್‌ಗಳನ್ನು ಹೊಂದಿದೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಪ್ರತಿನಿಧಿ ರುಚಿರಾ ಕಾಂಬೋಜ್‌ ಹೇಳಿದ್ದಾರೆ. ವಿಶ್ವಸಂಸ್ಥೆಯ (United Nations) ಸಾಮಾನ್ಯ ಸಭೆಯಲ್ಲಿ ಭಾಗಿಯಾಗಿದ್ದ ಪಾಕಿಸ್ತಾನದ ಪ್ರತಿನಿಧಿ ಮನೀರ್‌ ಅಕ್ರಮ್‌, ಕಾಶ್ಮೀರ ವಿವಾದ, ಪೌರತ್ವ ತಿದ್ದುಪಡಿ ಕಾಯ್ದೆ(CAA) ಮತ್ತು ಅಯೋಧ್ಯೆಯ ರಾಮ ಮಂದಿರ ಸೇರಿದಂತೆ ಅನೇಕ ವಿಚಾರಗಳನ್ನು ಪ್ರಸ್ತಾಪಿಸಿ ಭಾರತದ ವಿರುದ್ಧ ಗುರುತರ ಆರೋಪಗಳನ್ನು ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರುಚಿರಾ, ಪಾಕಿಸ್ತಾನ ಸದಾ ಕುಕೃತ್ಯಗಳ ಮೂಲಕವೇ ಕುಖ್ಯಾತಿಯನ್ನು ಪಡೆದಿದೆ ಎಂದು ತಿರುಗೇಟು ಕೊಟ್ಟರು. ಸವಾಲಿನ ಸ್ಥಿತಿಯಲ್ಲೂ ಭಾರತ ಶಾಂತಿ ಕಾಪಾಡಲು ಯತ್ನಿಸುತ್ತಿದೆ. ರಚನಾತ್ಮಕ ಮಾತುಕತೆಗೆ ಹೆಚ್ಚಿನ ಆದ್ಯತೆ ಕೊಡುತ್ತಿದ್ದೇವೆ. ಪಾಕ್‌ ಹೇಳಿಕೆ ಅವರ ವಿನಾಶಕಾರಿ ಮನೋಭಾವವನ್ನು ತೋರಿಸುತ್ತದೆ. ರಾಜತಾಂತ್ರಿಕವಾಗಿ ವಿಷಯಗಳನ್ನು ಚರ್ಚಿಸುವುದಕ್ಕೆ ಭಾರತ ಯಾವಾಗಲೂ ಬೆಂಬಲ ನೀಡುತ್ತದೆ ಎಂದಿದ್ದಾರೆ.

ಭಯೋತ್ಪಾದನೆ ಎಂಬುದು ಎಲ್ಲಾ ಧರ್ಮಗಳು ಪ್ರತಿಪಾದಿಸುವ ಶಾಂತಿ ಮತ್ತು ಸೌಹಾರ್ದತೆಗೆ ನೇರ ತದ್ವಿರುದ್ಧವಾದ ವಿಚಾರವಾಗಿದೆ. ಅದು ಒಳ್ಳೆಯ ವಿಚಾರಗಳಿಗೆ ಅಡ್ಡಿಯಾಗಿ ನಿಂತಿದ್ದು, ಹಗೆತನವನ್ನು ಹುಟ್ಟುಹಾಕುತ್ತದೆ ಮತ್ತು ವಿಶ್ವಾದ್ಯಂತ ಸಾಂಸ್ಕೃತಿಕ ಮತ್ತು ಧಾರ್ಮಿಕ ಸಂಪ್ರದಾಯಗಳ ಆಧಾರವಾಗಿರುವ ಗೌರವ ಮತ್ತು ಸಾಮರಸ್ಯದ ಸಾರ್ವತ್ರಿಕ ಮೌಲ್ಯಗಳನ್ನು ದುರ್ಬಲಗೊಳಿಸುತ್ತದೆ. ಹೀಗಾಗಿ ವಿಶ್ವಸಂಸ್ಥೆಯ ಸದಸ್ಯರು ಒಟ್ಟಾಗಿ ನಿಂತಿ ಪ್ರಪಂಚಾದ್ಯಂತ ಶಾಂತಿ ಸೌಹಾರ್ದತೆ ಕಾಪಾಡಲು ಪಣತೊಡಬೇಕಿದೆ. ಇಡೀ ಪ್ರಪಂಚವೇ ಒಂದು ಕುಟುಂಬ. ನನ್ನ ದೇಶ ಇದರಲ್ಲಿ ನಂಬಿಕೆಯನ್ನಿಟ್ಟುಕೊಂಡಿದೆ ಎಂದು ರುಚಿರಾ ಹೇಳಿದರು. ಧರ್ಮ ಅಥವಾ ನಂಬಿಕೆಯ ಆಧಾರದ ಮೇಲೆ ಹೆಚ್ಚುತ್ತಿರುವ ಅಸಹಿಷ್ಣುತೆ, ತಾರತಮ್ಯ ಮತ್ತು ಹಿಂಸಾಚಾರ ಪಾಕಿಸ್ತಾನದಲ್ಲೇ ಇದೀಗ ಹೆಚ್ಚು ಕಂಡುಬರುತ್ತಿದೆ. ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಇನ್ನಿಲ್ಲದ ದೌರ್ಜನ್ಯ ನಡೆಯುತ್ತಿದೆ. ಅಸಹಾಯಕರಾಗಿ ಅವರು ಭಾರತದತ್ತ ರಕ್ಷಣೆಗಾಗಿ ನೋಡುತ್ತಿದ್ದಾರೆ. ಇಸ್ಲಾಂ ಧರ್ಮನಿಂದನೆಯ ಹೆಸರಿನಲ್ಲಿ ಅಲ್ಲಿನ ಹಿಂದೂಗಳನ್ನು ದಮನಿಸಲಾಗುತ್ತಿದೆ. ಇದನ್ನು ವಿಶ್ವಸಂಸ್ಥೆ ಗಮನಿಸಬೇಕಿದೆ.

ಪಾಕಿಸ್ತಾನದ ಹುಳುಕುಗಳು ಲೋಕದ ಕಣ್ಣಿನ ಮುಂದೆ ಸಾಕಷ್ಟು ಸ್ಪಷ್ಟವಾಗಿಯೇ ಇವೆ. ಅದು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಜಿಹಾದಿ ಉಗ್ರರಿಗಾಗಿ ಶಿಬಿರಗಳನ್ನು ನಡೆಸುತ್ತಿದೆ. ಇದನ್ನು ಅಲ್ಲಿನ ಗುಪ್ತಚರ ಸಂಸ್ಥೆ ಐಎಸ್‌ಐ ನಿರ್ವಹಿಸುತ್ತದೆ. ಅಲ್ಲಿಂದ ಕಾಶ್ಮೀರಕ್ಕೆ ಅಕ್ರಮವಾಗಿ ನುಸುಳುವ ಈ ಉಗ್ರರು ಅಲ್ಲಿ ನರಮೇಧ ನಡೆಸುತ್ತಾರೆ. ಇತ್ತೀಚೆಗೆ ಕಾಶ್ಮೀರದಲ್ಲಿ ನಡೆದ ದೀರ್ಘಾವಧಿಯ ಎನ್‌ಕೌಂಟರ್‌ಗಳು ಹಾಗೂ ಅಲ್ಲಿ ಹುತಾತ್ಮರಾದ ಭಾರತೀಯ ಯೋಧರನ್ನು ನೆನಪಿಸಿಕೊಳ್ಳಬಹುದು. ಹಿಂದೂ, ಕ್ರೈಸ್ತ, ಸಿಖ್‌ ಧರ್ಮದ ಮಹಿಳೆಯರ ಮೇಲೆ ಪಾಕ್‌ನಲ್ಲಿ ದೌರ್ಜನ್ಯ ಎಸಗಲಾಗುತ್ತಿದೆ. ಮಾನವ ಹಕ್ಕುಗಳು ಜಗತ್ತಿನಲ್ಲೇ ಕೆಟ್ಟದಾಗಿದ್ದರೆ, ಅದು ಪಾಕಿಸ್ತಾನದಲ್ಲಿ ಮಾತ್ರ. ಪ್ರತಿ ವರ್ಷ ಪಾಕಿಸ್ತಾನದಲ್ಲಿ ಒಂದು ಸಾವಿರ ಅಲ್ಪಸಂಖ್ಯಾತ ಮಹಿಳೆಯರನ್ನು ಅಪಹರಿಸಿ, ಅವರನ್ನು ಬಲವಂತವಾಗಿ ಮತಾಂತರ ಮಾಡಲಾಗುತ್ತಿದೆ.

ಆಸ್ಟ್ರೇಲಿಯಾ ಮೂಲದ ಇನ್‌ಸ್ಟಿಟ್ಯೂಟ್ ಫಾರ್ ಎಕನಾಮಿಕ್ಸ್ ಅಂಡ್ ಪೀಸ್ ಬಿಡುಗಡೆ ಮಾಡಿರುವ ವಾರ್ಷಿಕ ಜಾಗತಿಕ ಭಯೋತ್ಪಾದನಾ ಸೂಚ್ಯಂಕ(ಜಿಟಿಐ) ವರದಿ- 2024ರ ಪ್ರಕಾರ, ಕಳೆದ ವರ್ಷದಲ್ಲಿ ಪಾಕಿಸ್ತಾನ ಮೂರು ಸ್ಥಾನ ಮೇಲಕ್ಕೇರಿ ನಾಲ್ಕನೇ ಸ್ಥಾನಕ್ಕೆ ಏರಿದೆ. ಇಲ್ಲಿ ಬೇರೆ ಯಾವುದೇ ದೇಶಕ್ಕಿಂತ ಅತಿ ಹೆಚ್ಚು ಉಗ್ರ ದಾಳಿ ಘಟನೆಗಳು ನಡೆದಿವೆ. 2023ರಲ್ಲಿ ಇಲ್ಲಿ 490 ದಾಳಿಗಳು ದಾಖಲಾಗಿವೆ. ವರ್ಷದಿಂದ ವರ್ಷಕ್ಕೆ ಇದು ಹೆಚ್ಚಳವನ್ನು ಕಾಣುತ್ತಿದೆ. ಅದರಲ್ಲೂ ಭಯೋತ್ಪಾದನೆಯಿಂದಾಗಿ ಸಾವನ್ನಪ್ಪುತ್ತಿರುವವರಲ್ಲಿ ಶೇ.55 ಮಂದಿ ಸೇನೆಯ ಸಿಬ್ಬಂದಿ. ಪಾಕಿಸ್ತಾನವು ಭಯೋತ್ಪಾದನೆಯ ರಾಜಧಾನಿ ಎನ್ನುವುದು ಸಾಬೀತಾದ ಸಂಗತಿ. ಮತಾಂಧರನ್ನು, ಪ್ರತ್ಯೇಕತಾವಾದಿಗಳನ್ನು ಸೃಷ್ಟಿಸಿ ಅವರಿಗೆ ಆಯುಧಗಳನ್ನೂ ಪೂರೈಸಿ, ಪಂಜಾಬ್‌ನಲ್ಲೂ ಖಲಿಸ್ತಾನ್‌ವಾದಿಗಳಿಗೆ ತೆರೆಮರೆಯ ಬೆಂಬಲ ನೀಡಿ ಅದು ಸೃಷ್ಟಿಸಿದ ಅನಾಹುತ, ಮಾನವ ಹಕ್ಕು ಉಲ್ಲಂಘನೆ ಅಷ್ಟಿಷ್ಟಲ್ಲ. ಇಂಥ ದೇಶಕ್ಕೆ ಭಾರತಕ್ಕೆ ಉಪದೇಶ ಮಾಡುವ ನೈತಿಕ ನೆಲೆಯಿಲ್ಲ. ಕಾಶ್ಮೀರದ ಬಗೆಗೂ ಮಾತಾಡುವ ಹಕ್ಕು ಆ ದೇಶಕ್ಕೆ ಇಲ್ಲ. ಜಮ್ಮು- ಕಾಶ್ಮೀರದಲ್ಲಿ ಆರ್ಟಿಕಲ್‌ 370 ರದ್ದಾಗಿ ಮೂರು ವರ್ಷಗಳಾದವು. ಈ ಸಮಯದಲ್ಲಿ ಅಲ್ಲಿನ ಜನಜೀವನ ಸುಧಾರಿಸಿದೆ. ಪ್ರವಾಸೋದ್ಯಮ ಚಿಗುರಿದೆ. ದೇಶೀಯ ಹಾಗೂ ವಿದೇಶೀಯ ಹೊಸ ಹೂಡಿಕೆಗಳು ಬರುತ್ತಿವೆ. ಇದು ಸಹಜವಾಗಿಯೇ ಇಲ್ಲಿ ಪ್ರತ್ಯೇಕತಾವಾದವನ್ನು ಬಿತ್ತಲು ದಶಕಗಳಿಂದ ಪ್ರಯತ್ನಿಸುತ್ತಿದ್ದ ಪಾಕಿಸ್ತಾನಕ್ಕೆ ಹಿನ್ನಡೆಯಾಗಿದೆ. ಅದಕ್ಕಾಗಿಯೇ ಆ ದೇಶ ಮೈಪರಚಿಕೊಳ್ಳುತ್ತಿದೆ. ಇನ್ನಾದರೂ ಪಾಕ್ ಆಡಳಿತಗಾರರಿಗೆ, ಸೇನಾಧಿಕಾರಿಗಳಿಗೆ ಬುದ್ಧಿ ಬರಲಿ.

ಇದನ್ನೂ ಓದಿ: United Nations: ಪಾಕಿಸ್ತಾನ ದುಷ್ಕೃತ್ಯಗಳ ಟ್ರ್ಯಾಕ್‌ ರೆಕಾರ್ಡ್‌ ಹೊಂದಿದೆ; ವಿಶ್ವಸಂಸ್ಥೆಯಲ್ಲಿ ಗುಡುಗಿದ ಭಾರತ

Continue Reading

ಭವಿಷ್ಯ

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ ಏಕಾದಶಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮೀನ ರಾಶಿಯಿಂದ ಶನಿವಾರ ಸಂಜೆ 04:40 ಗಂಟೆಗೆ ಮೇಷ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ ಹಾಗೂ ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮಿಥುನ ರಾಶಿಯವರು ಬಲವಂತವಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಪ್ರಸಂಗ ಬರಬಹುದು. ಇಂದಿನ ದಿವಸ ಗಾಬರಿಯಿಂದ ಇರುವ ಸಾಧ್ಯತೆ ಇದೆ. ಅವಘಡ ಸಂಭವ ನಿಧಾನವಾಗಿ ವಾಹನ ಚಾಲನೆ ಮಾಡಿ. ಕುಂಭ ರಾಶಿಯವರಿಗೆ ನಿಮ್ಮ ವರ್ತನೆ ಇತರರಿಗೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಯಾರೊಂದಿಗೂ ಅತಿಯಾದ ಸಲುಗೆ ಬೇಡ. ಆತುರದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (04-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
ತಿಥಿ: ಏಕಾದಶಿ 20:38 ವಾರ: ಶನಿವಾರ
ನಕ್ಷತ್ರ: ಪೂರ್ವ ಭಾದ್ರಪದ 22:06 ಯೋಗ: ಇಂದ್ರ 11:02
ಕರಣ: ಭವ 10:02 ಅಮೃತಕಾಲ: ಮಧ್ಯಾಹ್ನ 02:47 ರಿಂದ 04:15
ದಿನದ ವಿಶೇಷ: ಸರ‍್ವೇಷಾಮೇಕಾದಶೀ, ಮೈಸೂರು ಶ್ವೇತವರಾಹ ರಥ

ಸೂರ್ಯೋದಯ : 05:58   ಸೂರ್ಯಾಸ್ತ : 06:35

ರಾಹುಕಾಲ : ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ:ಆರ್ಥಿಕವಾಗಿ ಬಲಿಷ್ಠತೆ ಇರಲಿದೆ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿ ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಹಳೆಯ ಸ್ನೇಹಿತರ ಜತೆ ಕಾಲ ಕಳೆಯುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಪ್ರಯಾಣ ಮಾಡುವ ಸಾಧ್ಯತೆ ಇದೆ. ಅನಿರೀಕ್ಷಿತ ಲಾಭಗಳನ್ನು ಪಡೆಯುವಿರಿ. ಕುಟುಂಬ ಸದಸ್ಯರ ಬೆಂಬಲ ದೊರೆಯಲಿದೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಸಾಮಾಜಿಕ ಕಾರ್ಯಗಳಲ್ಲಿ ತೊಡಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ:ಬಲವಂತವಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಪ್ರಸಂಗ ಬರಬಹುದು. ಇಂದಿನ ದಿವಸ ಗಾಬರಿಯಿಂದ ಇರುವ ಸಾಧ್ಯತೆ ಇದೆ. ಅವಘಡ ಸಂಭವ ನಿಧಾನವಾಗಿ ವಾಹನ ಚಾಲನೆ ಮಾಡಿ. ಕುಟುಂಬದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುವಿರಿ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ:ಒತ್ತಡದ ಜೀವನಕ್ಕೆ ವಿಶ್ರಾಂತಿ ಸಿಗಲಿದೆ. ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ. ಅಗತ್ಯ ವಸ್ತುಗಳ ಖರೀದಿ ಮಾಡುವಿರಿ. ಸಹದ್ಯೋಗಿಗಳ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಸಿಂಹ: ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಮಾನಸಿಕ ಆರೋಗ್ಯ ಸದೃಢವಾಗಿರಲಿದೆ. ಅತಿ ಅವಶ್ಯಕ ಕೆಲಸದ ಕಾರಣ ದೈಹಿಕ ಶ್ರಮವಹಿಸಬೇಕಾಗುತ್ತೆ. ಉದ್ಯೋಗಿಗಳಿಗೆ ಸಹಕಾರ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕ ಕಲಹಗಳಿಗೆ ಧ್ವನಿ ಆಗುವುದು ಬೇಡ. ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು. ದೀರ್ಘಕಾಲದ ಪ್ರಯಾಣ ಬೆಳೆಸುವಿರಿ. ನಿರೀಕ್ಷೆಗೆ ತಕ್ಕಂತೆ ಫಲ ಸಿಗಲಿದೆ. ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವ ಅವಕಾಶವಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಕುಟುಂಬದಲ್ಲಿನ ಹಿರಿಯರೊಂದಿಗೆ ವಾದಕ್ಕೆ ಇಳಿಯುವುದು ಬೇಡ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹರಟೆಯಿಂದ ಕಾಲ ಹರಣ ಮಾಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗುವುದು. ಸಕರಾತ್ಮಕ ಆಲೋಚನೆ ಮಾಡಿ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು:ಉತ್ತಮ ಫಲಿತಾಂಶ ದೊರೆಯಲಿದೆ. ಆತ್ಮವಿಶ್ವಾಸ ಹೆಚ್ಚಲಿದೆ. ಕುಟುಂಬದ ಸದಸ್ಯರ ಮೇಲೆ ಕೋಪಗೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಉತ್ತಮ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಕರ:ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಪ್ರಮುಖ ಯೋಜನೆ ಕೈಗೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ನಿಮ್ಮ ವರ್ತನೆ ಇತರರಿಗೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಯಾರೊಂದಿಗೂ ಅತಿಯಾದ ಸಲುಗೆ ಬೇಡ. ಆತುರದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ಒತ್ತಡದ ಕೆಲಸದಿಂದ ಮುಕ್ತಿ ಸಿಗಲಿದೆ. ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವುದು. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

IPL 2024 : ಮುಂಬೈ ವಿರುದ್ಧ ಕೆಕೆಆರ್​ಗೆ 24 ರನ್​ ಗೆಲುವು; ಪಾಂಡ್ಯಾ ಬಳಗಕ್ಕೆ ಮತ್ತೊಂದು ಆಘಾತ

IPL 2024 : ಇಲ್ಲಿನ ವಾಖೆಂಡೆ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ತಂಡ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಕೆಕೆಆರ್​ 19.5 ಓವರ್​ಗಳಲ್ಲಿ 169 ರನ್​ಗೆ ಆಲ್​ಔಟ್ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬಯಿ 18.5 ಓವರ್​​ 145 ರನ್​ಗಳಿಗೆ ಆಲ್​ಔಟ್ ಆಗಿ ಸೋತಿತು.

VISTARANEWS.COM


on

Koo

ಮುಂಬಯಿ: ಐಪಿಎಲ್​ 202ನೇ ಆವೃತ್ತಿಯಲ್ಲಿ (IPL 2024) ತವರು ನೆಲದಲ್ಲಿ ಮತ್ತೊಂದು ಬಾರಿ ವಿಫಲ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್​ ತಂಡ ಕೆಕೆಆರ್​ ವಿರುದ್ಧ 24 ರನ್​ಗಳ ಸೋಲಿಗೆ ಒಳಗಾಯಿತು. ಇದು ಪಾಂಡ್ಯ ನೇತೃತ್ವದ ಮುಂಬೈಗೆ ಹಾಲಿ ಆವೃತ್ತಿಯ ಎದುರಾದ ಸತತ ನಾಲ್ಕನೇ ಹಾಗೂ ಒಟ್ಟು ಎಂಟನೇ ಸೋಲಾಗಿದೆ. ಇದರೊಂದಿಗೆ 11 ಪಂದ್ಯಗಳ ಮುಕ್ತಾಯದ ಬಳಿಕ ಒಟ್ಟು 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿ ಉಳಿದುಕೊಂಡಿದೆ. ಅತ್ತ ಕೆಕೆಆರ್ ತಂಡ 10 ಪಂದ್ಯಗಳಲ್ಲಿ 7 ಗೆಲುವಿನೊಂದಿಗೆ 14 ಅಂಕಗಳನ್ನು ಸಂಪಾದಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿತು.

ಇಲ್ಲಿನ ವಾಖೆಂಡೆ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ತಂಡ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಕೆಕೆಆರ್​ 19.5 ಓವರ್​ಗಳಲ್ಲಿ 169 ರನ್​ಗೆ ಆಲ್​ಔಟ್ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬಯಿ 18.5 ಓವರ್​​ 145 ರನ್​ಗಳಿಗೆ ಆಲ್​ಔಟ್ ಆಗಿ ಸೋತಿತು. ಕೆಕೆಅರ್​ ಪರ ಬ್ಯಾಟಿಂಗ್​ನಲ್ಲಿ ವೆಂಕಟೇಶ್​ ಅಯ್ಯರ್​ (70) ಅರ್ಧ ಶತಕ ಬಾರಿಸಿ ಮಿಂಚಿದರೆ ಬೌಲಿಂಗ್​ನಲ್ಲಿ ಮಿಚೆಲ್ ಸ್ಟಾರ್ಕ್​ 4 ವಿಕೆಟ್ ತಮ್ಮದಾಗಿಸಿಕೊಂಡರು.

ಬೌಲಿಂಗ್​ಗೆ ಪೂರಕವಾಗಿದ್ದ ಟ್ರ್ಯಾಕ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್​ 57 ರನ್​ಗಳಿಗೆ ಅಗ್ರ 5 ವಿಕೆಟ್ ನಷ್ಟ ಮಾಡಿಕೊಂಡಿತು. ಹೀಗಾಗಿ ಹಿನ್ನಡೆಗೆ ಒಳಗಾಯಿತು. ಆದರೆ, ವೆಂಕಟೇಶ್ ಅಯ್ಯರ್ ಹಾಗೂ ಹಾಲಿ ಆವೃತ್ತಿಯಲ್ಲಿ ಮೊದಲ ಅವಕಾಶ ಪಡೆದ ಮನೀಶ್ ಪಾಂಡೆ 42 ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಇವರಿಬ್ಬರ ನೆರವಿನಿಂದ ಸ್ಪರ್ಧಾತ್ಮಕ ಮೊತ್ತವನ್ನು ಪೇರಿಸಲು ಕೆಕೆಆರ್​ಗೆ ಸಾಧ್ಯವಾಯಿತು. ಅಂಗ್​ಕ್ರಿಶ್​ ರಘುವಂಶಿ 13 ರನ್ ಬಾರಿಸಿ ಕೆಕೆಆರ್​ ಪರ ಎರಡಂಕಿ ಮೊತ್ತ ದಾಟಿದ ಎರಡನೇ ಆಟಗಾರ ಎನಿಸಿಕೊಂಡರು. ಉಳಿದವರೆಲ್ಲರೂ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದರು.

ಇದನ್ನೂ ಓದಿ: Rinku Singh : ಕೊಹ್ಲಿಯ ಬ್ಯಾಟ್​ನಲ್ಲಿ ರಿಂಕು ಚೆನ್ನಾಗಿ ಆಡುತ್ತಿಲ್ಲ; ನೆಟ್ಟಿಗರಿಂದ ಟ್ರೋಲ್​!

ಮುಂಬಯಿ ಬ್ಯಾಟಿಂಗ್ ವೈಫಲ್ಯ

ರನ್ ಚೇಸ್ ಆರಂಭಿಸಿದ ಮುಂಬೈ ತಂಡದ ಪರಿಸ್ಥಿತಿಯೂ ಭಿನ್ನವಾಗಿರಲಿಲ್ಲ. 70 ರನ್​ಗೆ 5 ವಿಕೆಟ್ ನಷ್ಟ ಮಾಡಿಕೊಂಡು ಸಂಕಷ್ಟಕ್ಕೆ ಬಿತ್ತು. ಇಶಾನ್ ಕಿಶನ್​ (13), ರೋಹಿತ್ ಶರ್ಮಾ (11), ನಮನ್ ಧಿರ್​ (11), ತಿಲಕ್​ ವರ್ಮಾ (4), ನೇಹಲ್​ ವದೇರಾ (6) ಹಾಗೂ ಹಾರ್ದಿಕ್ ಪಾಂಡ್ಯ (1) ಬಂದ ವೇಗದಲ್ಲೇ ಪೆವಿಲಿಯನ್​ಗೆ ವಾಪಸಾದರು. ಆದರೆ, ಮಧ್ಯಮ ಕ್ರಮಾಂಕದದಲ್ಲಿ ತಳವೂರಿ ನಿಂತ ಸೂರ್ಯಕುಮಾರ್ ಯಾದವ್​ 35 ಎಸೆತಕ್ಕೆ 56 ರನ್ ಬಾರಿಸಿ ಗೆಲುವಿನ ಭರವಸೆ ಮೂಡಿಸಿದರು. ಕೊನೆಯಲ್ಲಿ ಟಿಮ್​ ಡೇವಿಡ್​ 24 ರನ್ ಬಾರಿಸಿ ವಿಶ್ವಾಸ ತಂದರು. ಆದರೆ, ಇನಿಂಗ್ಸ್​ನಲ್ಲಿ ಕೆಕೆಆರ್​ ಬೌಲರ್​ಗಳು ಮೇಲುಗೈ ಸಾಧಿಸಿದರು. ವರುಣ್ ಚಕ್ರವರ್ತಿ, ಸುನಿಲ್ ನರೈನ್​ ಹಾಗೂ ಆ್ಯಂಡ್ರೆ ರಸೆಲ್​ ತಲಾ 2 ವಿಕೆಟ್ ಪಡೆದರು.

Continue Reading

ವಿದೇಶ

Nijjar Killing: ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆಯ ಆರೋಪಿಗಳನ್ನು ಬಂಧಿಸಿದ ಕೆನಡಾ ಪೊಲೀಸರು; ಯಾರಿವರು?

Nijjar Killing: 2023ರ ಜೂನ್‌ 18ರಂದು ಕೆನಡಾದಲ್ಲಿ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಗೀಡಾಗಿದ್ದಾನೆ. ಇದರ ಹಿಂದೆ ಭಾರತದ ಏಜೆಂಟರ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಆರೋಪ ಕೂಡ ಮಾಡಿದ್ದಾರೆ. ಇದರ ಬೆನ್ನಲ್ಲೇ, ಹತ್ಯೆ ಮಾಡಿದ ಆರೋಪಿಗಳನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

VISTARANEWS.COM


on

Nijjar Killing
Koo

ಒಟ್ಟಾವ: ಖಲಿಸ್ತಾನಿ ಉಗ್ರರ ಪರವಾಗಿರುವ ಕೆನಡಾ ಸರ್ಕಾರವೀಗ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ (Hardeep Singh Nijjar) ಹತ್ಯೆಯ (Nijjar Killing) ಆರೋಪಿಗಳನ್ನು ಬಂಧಿಸಿದೆ ಎಂದು ಮಾಧ್ಯಮಗಳ ವರದಿಗಳು ತಿಳಿಸಿವೆ. ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ತಂಡದಲ್ಲಿದ್ದ ಕೆಲವು ಆರೋಪಿಗಳನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಆದರೆ, ಯಾರನ್ನು ಬಂಧಿಸಲಾಗಿದೆ ಎಂಬುದರ ಕುರಿತು ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ.

ಕೆನಡಾ ಸರ‍್ರೆಯಲ್ಲಿ ಹರ್ದೀಪ್‌ ಸಿಂಗ್‌ ನಿಜ್ಜರ್‌ನನ್ನು ಹತ್ಯೆ ಮಾಡಿದವರು ಭಾರತದ ಏಜೆಂಟ್‌ಗಳು ನೇಮಿಸಿದವರೇ ಆಗಿದ್ದಾರೆ ಎಂಬುದಾಗ ಕೆನಡಾ ಆರೋಪಿಸಿದೆ. ಆದರೆ, ಹತ್ಯೆ ಮಾಡಿದ ತಂಡದ ಸದಸ್ಯರನ್ನೇ ಕೆನಡಾ ಪೊಲೀಸರು ಬಂಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿರುವುದು ಪ್ರಕರಣಕ್ಕೆ ಹೊಸ ತಿರುವು ಸಿಕ್ಕಂತಾಗಿದೆ. ಹರ್ದೀಪ್‌ ಸಿಂಗ್‌ ನಿಜ್ಜರ್‌ನನ್ನು ಕೊಂದವರು ಯಾರು? ಅವರು ಭಾರತದ ಮೂಲದವರಾ? ಅವರು ನೀಡಿದ ಮಾಹಿತಿ ಏನು ಎಂಬ ಮಾಹಿತಿಯು ಕೆನಡಾ ಪೊಲೀಸರಿಂದಲೇ ಹೊರಬರಬೇಕಿದೆ. ಹತ್ಯೆ ಮಾಡಿದ ತಂಡದವರು ಎನ್ನಲಾದ ಮೂವರನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಲಾಗುತ್ತಿದೆ.

2023ರ ಜೂನ್‌ 18ರಂದು ಕೆನಡಾದಲ್ಲಿ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಗೀಡಾಗಿದ್ದಾನೆ. ಇದರ ಹಿಂದೆ ಭಾರತದ ಏಜೆಂಟರ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಆರೋಪ ಕೂಡ ಮಾಡಿದ್ದಾರೆ. ಹೀಗೆ, ಕೆನಡಾವನ್ನು ಭಾರತದ ವಿರುದ್ಧ ಎತ್ತಿಕಟ್ಟಲು ಪಾಕಿಸ್ತಾನದ ಐಎಸ್‌ಐ ಇಂತಹ ಕುತಂತ್ರ ಮಾಡಿದೆ. ಆದರೆ, ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ಆರೋಪವನ್ನು ತಿರಸ್ಕರಿಸುವ ಭಾರತ, ಆರೋಪಗಳಿಗೆ ಸಾಕ್ಷ್ಯ ಕೊಡಿ ಎಂದು ತಿರುಗೇಟು ನೀಡಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಈಗ ಭಾರತ ಹಾಗೂ ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಶುರುವಾಗಿದೆ.

“ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಕುರಿತು ನಾನು ಭಾರತದ ಜತೆ ಮಾತನಾಡಿದ್ದೇನೆ. ಆದರೆ, ಆತನ ಹತ್ಯೆಯ ಕುರಿತು ಭಾರತಕ್ಕೆ ತುಂಬ ವಾರಗಳ ಹಿಂದೆಯೇ ನಂಬಲರ್ಹ ಆರೋಪಗಳ ಕುರಿತು ಮಾಹಿತಿಯನ್ನು ಒದಗಿಸಲಾಗಿದೆ. ತುಂಬ ಗಂಭೀರವಾದ ವಿಚಾರದ ಕುರಿತು ಭಾರತ ಹಾಗೂ ಕೆನಡಾ ಒಗ್ಗೂಡಿ ಕಾರ್ಯನಿರ್ವಹಿಸುವ ಕುರಿತು ಕೂಡ ಮನವರಿಕೆ ಮಾಡಲಾಗಿದೆ. ಗಂಭೀರ ಹತ್ಯೆಯ ವಿಚಾರದಲ್ಲಿ ಭಾರತವು ನಮ್ಮ ಜತೆ ಕೈಗೂಡಿಸುತ್ತದೆ ಎಂಬ ಆಶಾಭಾವನೆಯಲ್ಲಿ ಇದ್ದೇವೆ” ಎಂದು ಜಸ್ಟಿನ್‌ ಟ್ರುಡೋ ಹೇಳಿದ್ದರು. ಆದರೆ, ಭಾರತ ಮಾತ್ರ ಸರಿಯಾದ ಸಾಕ್ಷ್ಯ ಕೊಡಿ ಎಂದು ಹೇಳಿದೆ.

ಇದನ್ನೂ ಓದಿ: Khalistan terrorist: ʼನಿಜ್ಜರ್‌ ಹತ್ಯೆಯಲ್ಲಿ ಭಾರತದ ಕೈವಾಡವಿಲ್ಲʼ ಎಂದ ನ್ಯೂಜಿಲ್ಯಾಂಡ್‌ ಉಪಪ್ರಧಾನಿಗೇ ಬೆದರಿಕೆ ಹಾಕಿದ ಪನ್ನುನ್!‌

Continue Reading
Advertisement
Pakistan PM
ಸಂಪಾದಕೀಯ11 mins ago

ವಿಸ್ತಾರ ಸಂಪಾದಕೀಯ: ಪಾಕಿಸ್ತಾನ ಮೊದಲು ತನ್ನ ತಟ್ಟೆಯಲ್ಲಿ ಬಿದ್ದಿರುವ ನೊಣ ತೆಗೆಯಲಿ, ಪಾಠ ಕಲಿಯಲಿ

Tips For Healthy Skin
ಆರೋಗ್ಯ12 mins ago

Tips For Healthy Skin: ಕಡಲೆಹಿಟ್ಟೆಂಬ ಶತಮಾನಗಳ ಹಳೆಯ ಸೌಂದರ್ಯವರ್ಧಕ!

Dina Bhavishya
ಭವಿಷ್ಯ1 hour ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Rain News
ಕರ್ನಾಟಕ6 hours ago

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ನವ ವಿವಾಹಿತ ಸಾವು, ಕಾರ್ಮಿಕನ ಸ್ಥಿತಿ ಗಂಭೀರ

ಪ್ರಮುಖ ಸುದ್ದಿ7 hours ago

IPL 2024 : ಮುಂಬೈ ವಿರುದ್ಧ ಕೆಕೆಆರ್​ಗೆ 24 ರನ್​ ಗೆಲುವು; ಪಾಂಡ್ಯಾ ಬಳಗಕ್ಕೆ ಮತ್ತೊಂದು ಆಘಾತ

Nijjar Killing
ವಿದೇಶ7 hours ago

Nijjar Killing: ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆಯ ಆರೋಪಿಗಳನ್ನು ಬಂಧಿಸಿದ ಕೆನಡಾ ಪೊಲೀಸರು; ಯಾರಿವರು?

Rohith Vemula
ದೇಶ7 hours ago

Rohith Vemula: ರೋಹಿತ್‌ ವೇಮುಲ ದಲಿತನಲ್ಲ ಎಂದ ಪೊಲೀಸರು; ಮರು ತನಿಖೆಗೆ ‘ಕೈ’ ಸರ್ಕಾರ ಆದೇಶ!

Rinku Singh
ಪ್ರಮುಖ ಸುದ್ದಿ7 hours ago

Rinku Singh : ಕೊಹ್ಲಿಯ ಬ್ಯಾಟ್​ನಲ್ಲಿ ರಿಂಕು ಚೆನ್ನಾಗಿ ಆಡುತ್ತಿಲ್ಲ; ನೆಟ್ಟಿಗರಿಂದ ಟ್ರೋಲ್​!

honour killing
ವಿಜಯಪುರ7 hours ago

Honor Killing: ಮರ್ಯಾದೆಗಾಗಿ ಗರ್ಭಿಣಿಯನ್ನು ಸುಟ್ಟು ಕೊಂದ ಇಬ್ಬರಿಗೆ ಗಲ್ಲು ಶಿಕ್ಷೆ, 6 ಮಂದಿಗೆ ಜೀವಾವಧಿ‌ ಶಿಕ್ಷೆ

Pakistan
ವಿದೇಶ7 hours ago

ಚೀನಾ ದಯೆಯಿಂದ ಮೊದಲ ಚಂದ್ರಯಾನ ಕೈಗೊಂಡ ಪಾಕಿಸ್ತಾನ; ಆದರೂ ಭಾರತಕ್ಕಿಂತ 16 ವರ್ಷ ಹಿಂದೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 hour ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ14 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 day ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌