ಮಂಡ್ಯ : ಅತಿ ವೇಗದಲ್ಲಿ ಕಾರು ಚಾಲನೆ ಮಾಡಿದ್ದನ್ನು ಪ್ರಶ್ನಿಸಿದ್ದ ಅಭಿಲಾಷ್ ಎಂಬುವರ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ್ದ ಯುವಕರ ಗುಂಪೊಂದು ಹಲ್ಲೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ (Mandya News) ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ಸೋಮವಾರ ಸಂಜೆ ವೇಳೆ ನಡೆದಿದೆ. ಘಟನೆ ಬಳಿಕ ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಉಟಾಗಿದ್ದು ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಶ್ರಮ ವಹಿಸುತ್ತಿದ್ದಾರೆ. ಗಂಭೀರವಾಗಿ ಪೆಟ್ಟು ತಿಂದಿರುವ ಅಭಿಲಾಷ್ ಅವರನ್ನು ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ ಶುಕ್ರವಾರ ಮುಸ್ಲಿಂ ಯುವಕರ ಗುಂಪು ಬೆಳ್ಳೂರಿನ ಸಂತೆ ಬೀದಿಯಲ್ಇ ಅತಿ ವೇಗದಲ್ಲಿ ಪಟ್ಟಣದೊಳಗೆ ಕಾರು ಓಡಿಸಿಕೊಂಡು ಹೋಗಿದೆ. ಅಪಾಯಕಾರಿ ರೀತಿಯಲ್ಲಿ ವಾಹನ ಓಡಿಸಿದ್ದನ್ನು ಹಲ್ಲೆಗೆ ಒಳಗಾಗಿರುವ ಅಭಿಲಾಷ್ ಹಾಗೂ ಅವರ ಜತೆಗಾರ ನಾಗೇಶ್ ಎಂಬುವರು ಪ್ರಶ್ನಿಸಿದ್ದರು. ಮಿತಿ ಮೀರಿದ ವೇಗದಲ್ಲಿ ಕಾರು ಓಡಿಸದಂತೆ ಆ ಗುಂಪಿಗೆ ಬುದ್ಧಿವಾದ ಹೇಳಿದ್ದರು. ಈ ವೇಳೆ ಸಣ್ಣ ಮಟ್ಟಿನ ಮಾತಿನ ಚಕಮಕಿ ನಡೆದಿತ್ತು. ಅದೇ ದ್ವೇಷವನ್ನು ಇಟ್ಟುಕೊಂಡಿದ್ದ ಮುಸ್ಲಿಂ ಯುವಕರ ಗುಂಪಿ ಇನ್ನಷ್ಟು ದೊಡ್ಡ ಗುಂಪನ್ನು ಕಟ್ಟಿಕೊಂಡು ಬಂದು ಸೋಮವಾರ ಸಂಜೆ ಹಲ್ಲೆ ಮಾಡಿದ್ದಾರೆ.
ಇದನ್ನೂ ಓದಿ: Bomb Threat: ಮುಂಬೈ ತಾಜ್ ಹೋಟೆಲ್, ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ; 26/11 ರೀತಿ ದಾಳಿಗೆ ಸಂಚು?
ದೊಡ್ಡ ಗುಂಪಿನಿಂದ ಏಟು ತಿಂದಿರುವ ಅಭಿಲಾಷ್ ಅವರಿಗೆ ಬಹು ವಿಧದಲ್ಲಿ ಗಾಯಗಳಾಗಿವೆ ಎಂದು ಅವರ ಆಪ್ತರು ಹೇಳಿದ್ದಾರೆ. ತಕ್ಷಣ ಸ್ಥಳೀಯರು ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸುದ್ದಿಯಾದ ಬಳಿಕ ಬೆಳ್ಳೂರು ಪಟ್ಟಣದಲ್ಲಿ ಆತಂಕ ಮನೆ ಮಾಡಿದೆ. ಪಟ್ಟಣದಲ್ಲಿ ಪ್ರಕ್ಷುಬ್ದ ವಾತಾವರಣ ಉಂಟಾಗಿದ್ದು ಗಲಾಟೆ ಸಂಭವಿಸುವ ಸಾಧ್ಯತೆಗಳನ್ನು ಮನಗಂಡಿರುವ ಪೊಲೀಸರು ಬೆಳ್ಳೂರು ಪಟ್ಟಣ ಹಾಗೂ ಬಿಜಿಎಸ್ ಆಸ್ಪತ್ರೆಗೆ ಬಿಗಿ ಪೊಲೀಸ್ ಭದ್ರತೆ. ಒದಗಿಸಿದ್ದಾರೆ. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಲಾಕಪ್ ಡೆತ್ ಪ್ರಕರಣ; ಡಿವೈಎಸ್ಪಿ ಸೇರಿ ಮೂವರು ಪೊಲೀಸ್ ಅಧಿಕಾರಿಗಳ ಸಸ್ಪೆಂಡ್
ದಾವಣಗೆರೆ: ಚನ್ನಗಿರಿ ಯುವಕನ ಲಾಕಪ್ ಡೆತ್ ಪ್ರಕರಣ (Lockup Death) ಸಂಬಂಧ ಚನ್ನಗಿರಿ ಡಿವೈಎಸ್‌ಪಿ ಪ್ರಶಾಂತ್ ಮುನ್ನೊಳ್ಳಿ, ಸರ್ಕಲ್ ಇನ್‌ಸ್ಪೆಕ್ಟರ್ ನಿರಂಜನ. ಬಿ ಹಾಗೂ ಪಿಎಸ್‌ಐ ಅಕ್ತರ್ ಅಮಾನತುಗೊಂಡಿದ್ದಾರೆ. ಮೂವರು ಅಧಿಕಾರಿಗಳನ್ನ ಸೇವೆಯಿಂದ ಬಿಡುಗಡೆ ಮಾಡಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ.
ಮೇ 24 ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ಠಾಣೆಯಲ್ಲಿದ್ದ ಆದಿಲ್ ಎಂಬ ಯುವಕ ಮೃತಪಟ್ಟಿದ್ದರಿಂದ ಕುಟುಂಬಸ್ಥರು ಲಾಕಪ್ ಡೆತ್ ಆರೋಪ ಮಾಡಿ, ಪೊಲೀಸರೇ ಹೊಡೆದು ಯುವಕನನ್ನು ಕೊಂದಿದ್ದರು ಎಂದು ಹೇಳಿದ್ದರು. ನಂತರ ಸಂಬಂಧಿಕರು, ಸ್ಥಳೀಯರು ಚನ್ನಗಿರಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.
ಪ್ರತಿಭಟನೆ ವೇಳೆ ಕೆಲ ಕಿಡಿಗೇಡಿಗಳು ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಐದು ಪೊಲೀಸ್ ವಾಹನ ಜಖಂಗೊಂಡು, ಹನ್ನೊಂದು ಪೊಲೀಸರಿಗೆ ಗಾಯಗಳಾಗಿದ್ದವು. ಹೀಗಾಗಿ ಪ್ರಕರಣ ಸಂಬಂಧ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ. ತ್ಯಾಗರಾಜನ್ ಮಾಹಿತಿ ನೀಡಿದ್ದಾರೆ.